Subscribe to Updates
Get the latest creative news from FooBar about art, design and business.
- ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
- ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
- ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
- ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
- ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
- ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
- ತುಮಕೂರು: ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
- ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
Author: admin
ಬೀದರ್: ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಧನ್ನೂರಾ ಪೊಲೀಸರು 9 ಲಕ್ಷಕ್ಕೂ ಅಧಿಕ ಮೌಲ್ಯದ ದ್ವಿಚಕ್ರ ವಾಹನ ಸಹಿತ 3 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಮೇಲಾಧಿಕಾರಿಗಳ ಮಾರ್ಗದರ್ಶನದಂತೆ, ಭಾಲ್ಕಿ ಉಪ ವಿಭಾಗದ ಶಿವಾನಂದ್ ಪವಾಡ ಶೆಟ್ಟಿ, ಡಿವೈಎಸ್ ಪಿ ಭಾಲ್ಕಿ, ಗುರುಪಾದ, ಸಿಪಿಐ ಭಾಲ್ಕಿ ಗ್ರಾಮೀಣ ವೃತ್ತರವರ ನೇತೃತ್ವದಲ್ಲಿ ವಿಶ್ವರಾಧ್ಯ, ವೀರಶೆಟ್ಟಿ ಪಾಟೀಲ್, ಪಿಎಸ್ ಐ ಧನ್ನೂರಾ ಪೊಲೀಸ್ ಠಾಣೆ ರವರನ್ನೊಳಗೊಂಡ ನೂರಿತ ಅಧಿಕಾರಿ ಸಿಬ್ಬಂದಿ ತಂಡ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ, 9,35,000 ರೂ. ಮೌಲ್ಯದ 16 ದ್ವಿಚಕ್ರವಾಹನ ಸಹಿತ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಮಧುಗಿರಿ: ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿ ಕೆಲಸ ಮಾಡುತ್ತಿರುವ ರಾಜ್ಯಪಾಲರು ಹಾಗೂ ವಿಪಕ್ಷಗಳಿಗೆ ಬುದ್ಧಿ ಕಲಿಸುವ ಕಾಲ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ತಿಳಿಸಿದರು. ಪಟ್ಟಣದ ಉಪ ವಿಭಾಗಾಧಿಕಾರಿಗಳ ಕಾರ್ಯಾಲಯದ ಮುಂಭಾಗ ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ರಾಜ್ಯಪಾಲರ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದಲ್ಲಿ ವಿವಿಧ ಜನಪರ ಯೋಜನೆಗಳನ್ನು ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಸುಳ್ಳು ಆರೋಪ ಮಾಡಿ ತಪಿತಸ್ಥ ಎಂದು ಬಿಂಬಿಸಲು ಬಿಜೆಪಿಯವರು ರಾಜ್ಯಪಾಲರನ್ನು ಬಳಸಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವರ ಮಾರ್ಗದರ್ಶನದಲ್ಲಿ ಇಡೀ ರಾಜ್ಯದಲ್ಲಿ ಇಂದು ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪಕ್ಷಪಾತ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು ದೂರುದಾರರು ಅರ್ಜಿ ಕೊಟ್ಟಾಕ್ಷಣ ಮುಖ್ಯಮಂತ್ರಿಗಳಿಗೆ ನೋಟಿಸ್ ನೀಡಿದ್ದಾರೆ. ಉನ್ನತ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳ ವಿರುದ್ಧ ದೂರು ನೀಡಿದರೆ ತನಿಕಾ ಸಂಸ್ಥೆಗಳ ಮೂಲಕ ತನಿಖೆ ನಡೆಸಿ ನೋಟಿಸ್ ನೀಡಬೇಕು. ಇಂತಹ ರಾಜ್ಯಪಾಲರನ್ನು ಬಳಸಿಕೊಂಡು ಮುಖ್ಯಮಂತ್ರಿಗಳಿಗೆ ಮಸಿ ಬಳೆಯಲು ಹೊರಟಿದ್ದು,…
ತುಮಕೂರು ಜಿಲ್ಲೆಯ, ಪಾವಗಡ ತಾಲೂಕು, ನಿಡಗಲ್ಲು ಹೋಬಳಿ, ಕ್ಯಾತಗಾನಹಳ್ಳಿ ಗ್ರಾಮದಿಂದ ಚಿಕ್ಕತಿಮ್ಮನಹಟ್ಟಿ ಗ್ರಾಮಕ್ಕೆ ಹೋಗುವ ರಸ್ತೆ 35ಕ್ಕೂ ಹೆಚ್ಚು ವರ್ಷಗಳಿಂದ ರಸ್ತೆಗೆ ಟಾರು ಹಾಕದೆ ಜನಸಾಮಾನ್ಯರು ಓಡಾಡಲು ಬಹಳಷ್ಟು ತೊಂದರೆ ಆಗುತ್ತಿದೆ ಎಂದು ಭಾರತೀಯ ಪರಿವರ್ತನ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಚಿಕ್ಕತಿಮ್ಮನಹಟ್ಟಿ ಗ್ರಾಮದ ಎಚ್. ಕೆಂಚರಾಯ ಹೇಳಿದ್ದಾರೆ. ಈ ರಸ್ತೆಯಲ್ಲಿ ನಿಡಗಲ್ಲು, ದೇವರಾಯನರೊಪ್ಪ, ಚಿಕ್ಕತಿಮ್ಮನಹಟ್ಟಿ, ನ್ಯಾಯದಗುಂಟೆ, ಇತರೆ ಗ್ರಾಮದವರು ಈ ರಸ್ತೆಯಲ್ಲಿ ದಿನನಿತ್ಯವೂ ಸಂಚಾರ ಮಾಡುತ್ತಾರೆ, ಇಲ್ಲಿನ ರಾಜಕಾರಣಿಗಳು ಇದನ್ನು ನಿರ್ಲಕ್ಷ ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತೀಯ ಪರಿವರ್ತನ ಸಂಘದ ತುಮಕೂರು ಜಿಲ್ಲಾಧ್ಯಕ್ಷರಾದ, ರವರು ಪಾವಗಡ ಹಾಲಿ ಶಾಸಕರಾದ ಎಚ್.ವಿ.ವೆಂಕಟೇಶ್ ಅವರು. ಈ ರಸ್ತೆಗೆ ಹೊಸದಾಗಿ ಟಾರು ಹಾಕಿಸಿ ರಸ್ತೆ ನಿರ್ಮಾಣ ಮಾಡಿಕೊಡಬೇಕೆಂದು BPS ವತಿಯಿಂದ ಇದೇ ವೇಳೆ ಅವರು ಒತ್ತಾಯ ಮಾಡಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋದಿಂದ ಇಳಿಯುವಾಗ ಓರ್ವ ಪ್ರಯಾಣಿಕ ಆಯತಪ್ಪಿ ಬಿದ್ದಿದ್ದು, ಭದ್ರತಾ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಇಂದು ಮಧ್ಯಾಹ್ನ 1.13ರ ಸುಮಾರಿಗೆ ಹಸಿರು ಮಾರ್ಗದಲ್ಲಿ ನಡೆದಿದೆ. ಮೆಟ್ರೋದಿಂದ ಇಳಿಯುವಾಗ ಆಯತಪ್ಪಿ ರೈಲು ಹಳಿಗೆ ಬಿದ್ದ ವ್ಯಕ್ತಿ ಅದೃಷ್ಟವಶಾತ್ ಬಚಾವ್ ಆಗಿರುವಂತಹ ಘಟನೆ ಮಧ್ಯಾಹ್ನ 1.13ರ ಸುಮಾರಿಗೆ ನಗರದ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ ನಡೆದಿದೆ. ಭದ್ರತಾ ಸಿಬ್ಬಂದಿ ತಕ್ಷಣ ಎಮರ್ಜೆನ್ಸಿ ಬಟನ್ ಉಪಯೋಗಿಸಿದ್ದರಿಂದ ಪ್ರಯಾಣಿಕ ಬಚಾವ್ ಆಗಿದ್ದಾರೆ. ಘಟನೆಯಿಂದಾಗಿ ಸುಮಾರು 15 ನಿಮಿಷಗಳ ಕಾಲ ಮೆಟ್ರೋ ಸೇವೆ ಸ್ಥಗಿತವಾಗಿತ್ತು. ಈ ವೇಳೆ ತಕ್ಷಣ ಭದ್ರತಾ ಸಿಬ್ಬಂದಿಗಳು ಎಮರ್ಜೆನ್ಸಿ ಬಟನ್ ಉಪಯೋಗಿಸಿದ್ದಾರೆ. ಪವರ್ ಸಪ್ಲೈ ಆಫ್ ಮಾಡಿದ್ದರಿಂದ ಮೆಟ್ರೋ ಪ್ರಯಾಣಿಕರು ಬಚಾವಾಗಿದ್ದಾರೆ. ಈ ವೇಳೆ ಹಳಿಗೆ ಬಿದ್ದರೂ ಯಾವುದೇ ತೊಂದರೆ ಇಲ್ಲದೆ ಪ್ರಯಾಣಿಕ ಪಾರಾಗಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಪಾವಗಡ: ತಾಲ್ಲೂಕಿನ ರ್ಯಾಪ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇನಹಳ್ಳಿ ತಾಂಡದಲ್ಲಿ ಇತ್ತೀಚಿಗೆ ಕಲುಷಿತ ಆಹಾರ ಸೇವಿಸಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ತಾಂಡದ ರೋಗಿಗಳನ್ನು ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್ ರವರು ಭೇಟಿಯಾಗಿ ಆರೋಗ್ಯ ವಿಚಾರಿಸಿ ಘಟನೆಯ ಕುರಿತು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ವರದರಾಜು , ಕಾರ್ಯ ನಿರ್ವಾಹಕ ಅಧಿಕಾರಿ ಜಾನಕಿ ರಾಮ್ ರವರು ಮತ್ತು ಹಲವು ಮುಖಂಡರು ಉಪಸ್ಥಿತರಿದ್ದರು. ವರದಿ: ನಂದೀಶ್ ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಒಂದೇ ದಿನ ರಾತ್ರಿ ಸುರಿದ ಭಾರೀ ಮಳೆಗೆ ಜಯಮಂಗಲಿ ನದಿ ಮೈತುಂಬಿ ಹರಿಯುತ್ತಿದೆ. ಇದು ತುಮಕೂರು ಜಿಲ್ಲೆಯ ಕೊರಟಗೆರೆ, ಮಧುಗಿರಿ ಭಾಗದಲ್ಲಿ ಹರಿಯುವ ನದಿಯಾಗಿದೆ. ಮಧುಗಿರಿ ತಾಲ್ಲೂಕಿನ ವೀರೇನಹಳ್ಳಿ– ಕಾಳೇನಹಳ್ಳಿ ನಡುವಿನ ರಸ್ತೆ ಜಲಾವೃತಗೊಂಡಿದೆ. ತೋಟ- ಹೊಲಗಳು ಜಲಾವೃತವಾಗಿದ್ದು ಜಯಮಂಗಲಿ ನದಿ ತುಂಬಿ ಹರಿದಿದ್ದಕ್ಕೆ ರೈತರಲ್ಲಿ ಸಂತಸ ಮೂಡಿದೆ. ತುಮಕೂರು ಜಿಲ್ಲಾದ್ಯಾಂತ ಕಳೆದ ರಾತ್ರಿ ಧಾರಾಕಾರ ಮಳೆಯಾಗಿದೆ. ತುಂಬಿ ಹರಿದ ಹಳ್ಳ ಕೊಳ್ಳಗಳು ತುಮಕೂರು ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದ ಸಾಕಷ್ಟು ಅನಾಹುತ ಸಂಭವಿಸಿವೆ. ಹಳ್ಳ ಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಬಹುತೇಕ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿ ನಂದಿಹಳ್ಳಿ ಯಿಂದ ಗೊಲ್ಲರಹಟ್ಟಿಗೆ ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದಿದೆ. ಕೊರಟಗೆರೆ ತಾಲೂಕು ಹಾಗೂ ಮಧುಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಹರಿಯುವ ಜಯಮಂಗಲಿ ನದಿ ನೀರು ಉಕ್ಕಿ ಹರಿಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೆಂಗಳೂರು: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಡೆಯುತ್ತಿದ್ದ ಸುದ್ದಿಗೋಷ್ಠಿ ವೇಳೆ ಕಾಂಗ್ರೆಸ್ ಮುಖಂಡರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಂಘದ ಮುಖಂಡ ರವಿಚಂದ್ರನ್ ಮೃತಪಟ್ಟವರಾಗಿದ್ದಾರೆ. ಇಂದು ಮಧ್ಯಾಹ್ನದ ವೇಳೆ ಸುದ್ದಿಗೋಷ್ಠಿ ಕರೆಯಲಾಗಿತ್ತು. ಸುದ್ದಿಗೋಷ್ಠಿಯನ್ನುದ್ದೇಶಿಸಿ ರವಿಚಂದ್ರನ್ ಮಾತನಾಡುತ್ತಿದ್ದರು. ಈ ವೇಳೆ ಏಕಾಏಕಿ ಅವರು ಎದೆನೋವು ಕಾಣಿಸಿಕೊಂಡು ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ. ತಕ್ಷಣವೇ ಅವರನ್ನು ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಣೆ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತಿಪಟೂರು: ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿ ತಿಪಟೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು. ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ಶಾಸಕ ಕೆ.ಷಡಕ್ಷರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ತಿಪಟೂರು ಗ್ರಾಮದೇವತೆ ಶ್ರೀಕೆಂಪಮ್ಮ ದೇವಿ ದೇವಾಲಯದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಕೋಡಿಸರ್ಕಲ್, ದೊಡ್ಡಪೇಟೆ, ಬಿ.ಹೆಚ್.ರಸ್ತೆ ಮೂಲಕ ನಗರಸಭಾ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರಸಲ್ಲಿಸಲಾಯಿತು. ತಿಪಟೂರು ತಹಶೀಲ್ದಾರ್ ಪವನ್ ಕುಮಾರ್ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನಾ ನಿರತರನ್ನುದ್ದೇಶಿಸಿ ಮಾತನಾಡಿದ ಶಾಸಕ ಕೆ.ಷಡಕ್ಷರಿ, ಪ್ರಾಮಾಣಿಕವಾಗಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನ ವಿರುದ್ಧ ರಾಜ್ಯಪಾಲ ನೀಡಿರುವ ಪ್ರಾಸಿಕ್ಯೂಷನ್ ದೋಷಪೂರಿತವಾಗಿದೆ. ಸಂವಿಧಾನಬದ್ಧವಾಗಿ ಆಡಳಿತ ನಡೆಸಬೇಕಾದ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರಾಜ್ಯಪಾಲರ ಮೇಲೆ ಒತ್ತಡ ಹೇರಿ, ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಮಾಡಿದ್ದಾರೆ ಎಂದರು. ಸಿದ್ದರಾಮಯ್ಯನವರಿಗೆ ತೊಂದರೆಯಾಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ನಮ್ಮ ಸರ್ಕಾರ 136 ಜನ ಚುನಾಯಿತ ಶಾಸಕರೊಂದಿಗೆ ಆಡಳಿತ…
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಸಂವಿಧಾನ ಬಾಹಿರವಾಗಿದೆ ಹಾಗೂ ರಾಜ್ಯಪಾಲರ ಈ ನಿರ್ಧಾರವನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ತುಮಕೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಕಾಂಗ್ರೆಸ್ ಮಾಜಿ ಶಾಸಕ ಗೌರಿಶಂಕರ್ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕುಣಿಗಲ್ ಹಾಗೂ ತುಮಕೂರು ನಡುವಿನ ರಸ್ತೆಯಲ್ಲಿ ಗಂಟೆಗೂ ಹೆಚ್ಚು ಕಾಲ ಧರಣಿ ನಡೆಸಿದರು. ಸಿದ್ದರಾಮಯ್ಯ ಅಂತಹ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಕಾನೂನು ಬಾಹಿರವಾದದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಕೂಡಲೇ ರಾಜ್ಯಪಾಲರು ಹಿಂಪಡೆಯಬೇಕೆಂದು ಆಗ್ರಹಿಸಿ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ನೇತೃತ್ವದಲ್ಲಿ ಸಾವಿರಾರು ಕಾಂಗ್ರೆಸ್ ಮುಖಂಡರು ಹೆಬ್ಬೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಹೆಬ್ಬೂರು ಸರ್ಕಲ್ ನಲ್ಲಿ ಬೃಹತ್ ಬೃಹತ್ ಪ್ರತಿಭಟನೆ ನಡೆಸಿದ ಬಳಿಕ ಮೆರವಣಿಗೆ ನಡೆಸಿ ರಾಜ್ಯಪಾಲರ ನಡೆ ತೀವ್ರವಾಗಿ ಖಂಡಿಸಿದರು. ಬಳಿಕ ಹೆಬ್ಬೂರಿನಿಂದ ತುಮಕೂರಿನ ವರೆಗೆ ಬೃಹತ್ ಬೈಕ್ ರ್ಯಾಲಿ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ…
ಕ್ಯಾನ್ಸರ್ ನ ಅನೇಕ ಪ್ರಕಾರಗಳಿಂದ ಜನ ಇಂದು ನರಳುತ್ತಿದ್ದಾರೆ. ಕೆಲವರು ಆರಂಭದಲ್ಲೇ ಪತ್ತೆ ಮಾಡಿ ಚಿಕಿತ್ಸೆಗೆ ಒಳಗಾಗಿದ್ದರೆ ಮತ್ತೆ ಕೆಲವರು ಕ್ಯಾನ್ಸರ್ ಕೊನೆಯ ಹಂತ ತಲುಪಿದಾಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುತ್ತಾರೆ. ಕ್ಯಾನ್ಸರ್ ನಲ್ಲಿ ಹತ್ತು ಹಲವು ವಿಧವಿದ್ದರೂ ಎಲ್ಲದಕ್ಕೂ ಒಂದೇ ರೀತಿಯ ಚಿಕಿತ್ಸಾ ಕ್ರಮ ನೋಡಹುದು. ಅದ್ರಲ್ಲೂ ಇತ್ತೀಚಿಗೆ ಯುವ ಜನತೆ ಕ್ಯಾನ್ಸರ್‌ಗೆ ತುತ್ತಾಗುತ್ತಿರುವುದು ಮತ್ತೊಂದು ಆತಂಕಕ್ಕೆ ಕಾರಣ. ನೀವು ತುಟಿ ಕ್ಯಾನ್ಸರ್ ನ ಬಗ್ಗೆ ಕೇಳಿದ್ದೀರಾ? ಬಹುಪಾಲು ಮಂದಿ ಈ ಕುರಿತು ಕೇಳಿರುವುದಿಲ್ಲ. ನಿಮ್ಮ ತುಟಿಗಳ ಮೇಲೆ ಕ್ಯಾನ್ಸರ್ ಕೋಶಗಳು ಬೆಳೆಯಲು ಆರಂಭಿಸುವ ಒಂದು ಪ್ರಕಾರವಾಗಿದೆ. ಆದರೆ ಈ ಪ್ರಕಾರವು ಆರಂಭಿಕ ಹಂತದಲ್ಲೇ ತಿಳಿದುಬರುವುದರಿಂದ ಚಿಕಿತ್ಸೆಯೂ ಸುಲಭವಾಗುತ್ತದೆ. ಅಮೆರಿಕದಲ್ಲಿ ಒಟ್ಟು ಕ್ಯಾನ್ಸರ್ ಪೀಡಿತರಲ್ಲಿ ಶೇ.0.6ರಷ್ಟು ಮಂದಿ ಈ ತುಟಿಗಳ ಕ್ಯಾನ್ಸರ್ ಹೊಂದಿದ್ದಾರೆ. ಇನ್ನು ಇಡೀ ವಿಶ್ವದಲ್ಲಿ ಪ್ರತಿ ವರ್ಷ ಸುಮಾರು 40 ಸಾವಿರ ಮಂದಿ ಈ ಕಾಯಿಲೆಯಿಂದ ಬಳಲುತ್ತಾರೆ ಎಂದು ವರದಿಯಾಗಿದೆ. ಆರಂಭಿಕ ಹಂತದಲ್ಲಿ ತುಟಿಯ…