Author: admin

ತುಮಕೂರು: ಮೈಸೂರಿನಲ್ಲಿ ಡಿ.28ರಂದು ನಡೆಯಲಿರುವ ರಾಜ್ಯ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಡಿ.18ರಂದು ನಗರದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆಸಲಾಗುತ್ತದೆ. ಪುರುಷರು ಮತ್ತು ಮಹಿಳೆಯರಿಗೆ 10ಕಿ.ಮೀ., 20ವರ್ಷದ ಬಾಲಕ ಮತ್ತು ಬಾಲಕಿಯರಿಗೆ 8 ಹಾಗೂ 6 ಕಿ.ಮೀ, 18 ವರ್ಷದ ಬಾಲಕ ಬಾಲಕಿಯರಿಗೆ 6 ಮತ್ತು 4 ಕಿ.ಮೀ., 16 ವರ್ಷದ ಬಾಲಕ ಬಾಲಕಿಯರಿಗೆ 2 ಕಿ.ಮೀ ದೂರದ ಸ್ಪರ್ಧೆಗಳು ಇರಲಿವೆ. ಆಯ್ಕೆ ಪ್ರಕ್ರಿಯೆ ಬೆಳಗ್ಗೆ 8:30 ಮತ್ತು ಸಂಜೆ 4:30 ಗಂಟೆಗೆ ನಡೆಸಲಾಗುವುದು. ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಆಯ್ಕೆಯ ದಿನದಂದು ವಯಸ್ಸಿನ ದೃಡೀಕರಣ ಪತ್ರ, ಆಧಾರ್ ಕಾರ್ಡ್ ಹಾಜರು ಪಡಿಸಿ ಜಿಲ್ಲಾ ಅಥ್ಲೆಟಿಕ್ ತರಬೇತುದಾರ ಶಿವಪ್ರಸಾದ್ ಅವರಲ್ಲಿ ವರದಿ ಮಾಡಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9964529175 ಅನ್ನು ಸಂಪರ್ಕಿಸಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಬೆಂಗಳೂರು : ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ) ಬೆಂಗಳೂರು ಇವರು ಪ್ರತಿ ವರ್ಷ ಕೊಡಮಾಡುವ “ಲೋಹಿಯಾ ಪ್ರಶಸ್ತಿ” 2025-26 ನೇ ಸಾಲಿನ ಸಾಧಕರಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಯ್ಕೆಯಾಗಿದ್ದಾರೆ. ರೈತಪರ ಜನಪರ ಹೋರಾಟಗಳು ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆ ಹಾಗೂ ಪತ್ರಕರ್ತರ ಸಂಘಟನೆಯಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ಎಸ್.ರಾಮಲಿಂಗೇಶ್ವರ (ಸಿಸಿರಾ) ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಿನಾಂಕ 19–12–2025 ರ ಶುಕ್ರವಾರ ಬೆಳಗ್ಗೆ 11:15 ಗಂಟೆಗೆ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಗಾಂಧಿ ಭವನದ ಅಧ್ಯಕ್ಷರಾದ ಡಾ.ವೂಡೇ ಪಿ ಕೃಷ್ಣ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಮುಖ್ಯ ಅತಿಥಿಗಳಾಗಿ ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್, ಕನ್ನಡ ಪ್ರಭ ಸಂಪಾದಕರಾದ ರವಿ ಹೆಗಡೆ, ದೂರದರ್ಶನ ಕಾರ್ಯಕ್ರಮ…

Read More

ಬೆಂಗಳೂರು: ಕರ್ನಾಟಕದ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ರಾಜ್ಯದ ಪ್ರಮುಖ ಜೈಲುಗಳಲ್ಲಿ ಭಾರಿ ಕಾರ್ಯಾಚರಣೆ ನಡೆಸಲಾಗಿದೆ. ಕಳೆದ 36 ಗಂಟೆಗಳಿಂದ ನಡೆದ ಈ ವಿಶೇಷ ತಪಾಸಣೆಯಲ್ಲಿ ಕೈದಿಗಳ ಬಳಿ ಇದ್ದ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಮಾದಕ ವಸ್ತುಗಳು ಮತ್ತು ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿವಿಧ ಜೈಲುಗಳಲ್ಲಿ ನಡೆದ ಕಾರ್ಯಾಚರಣೆ: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ಮೈಸೂರು, ಮಂಗಳೂರು, ಬೆಳಗಾವಿ ಮತ್ತು ವಿಜಯಪುರ ಜೈಲುಗಳಲ್ಲಿ ಈ ಮಿಂಚಿನ ದಾಳಿ ನಡೆಸಲಾಗಿದೆ. ಪರಪ್ಪನ ಅಗ್ರಹಾರ (ಬೆಂಗಳೂರು): ಇಲ್ಲಿ ನಡೆಸಿದ ತಪಾಸಣೆಯಲ್ಲಿ 14 ಮೊಬೈಲ್ ಫೋನ್‌ಗಳು, 9 ಸಿಮ್ ಕಾರ್ಡ್‌ಗಳು, ಚಾರ್ಜರ್‌ಗಳು ಮತ್ತು 10 ವಿವಿಧ ಬಗೆಯ ಚಾಕುಗಳು ಪತ್ತೆಯಾಗಿವೆ. ಮೈಸೂರು ಜೈಲು: ಇಲ್ಲಿ ಅತಿ ಹೆಚ್ಚು ಎಂದರೆ 9 ಮೊಬೈಲ್ ಫೋನ್‌ಗಳು ಹಾಗೂ 11 ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಳಗಾವಿ ಜೈಲು: ಇಲ್ಲಿ 4 ಮೊಬೈಲ್ ಫೋನ್‌ಗಳು…

Read More

ಬೆಂಗಳೂರು: ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಐತಿಹಾಸಿಕ ಜಯ ಸಾಧಿಸಿ ದೇಶಕ್ಕೆ ಕೀರ್ತಿ ತಂದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಪ್ರತಿಯೊಬ್ಬ ಸದಸ್ಯರಿಗೂ ಟಾಟಾ ಮೋಟಾರ್ಸ್ ಸಂಸ್ಥೆಯು ಹೊಚ್ಚ ಹೊಸ ‘ಟಾಟಾ ಸಿಯೆರಾ’ (Tata Sierra) ಕಾರನ್ನು ಉಡುಗೊರೆಯಾಗಿ ನೀಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ದಾಖಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ ಭಾರತೀಯ ವನಿತೆಯರ ಸಾಧನೆಯನ್ನು ಗೌರವಿಸಲು ಟಾಟಾ ಸಮೂಹ ಈ ನಿರ್ಧಾರ ಕೈಗೊಂಡಿದೆ. ಇತ್ತೀಚೆಗೆ ನಡೆದ ವಿಶೇಷ ಸಮಾರಂಭದಲ್ಲಿ ಟಾಟಾ ಸನ್ಸ್ ಮತ್ತು ಟಾಟಾ ಮೋಟಾರ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರು ಆಟಗಾರ್ತಿಯರಿಗೆ ಕಾರಿನ ಕೀ ಹಸ್ತಾಂತರಿಸಿದರು. ವಿಶೇಷತೆಗಳು: ಟಾಟಾ ಮೋಟಾರ್ಸ್ ಕೇವಲ ಕಾರನ್ನು ನೀಡುವುದಲ್ಲದೆ, ಆಟಗಾರ್ತಿಯರ ಇಷ್ಟದ ಬಣ್ಣದ ಕಾರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನೂ ನೀಡಿತ್ತು. ಉಡುಗೊರೆಯಾಗಿ ನೀಡಲಾದ ‘ಟಾಟಾ ಸಿಯೆರಾ’ ಟಾಪ್ ಎಂಡ್ ಮಾಡೆಲ್ ಕಾರಿನ ಎಕ್ಸ್ ಶೋ ರೂಂ ಬೆಲೆ ಸುಮಾರು 21.29 ಲಕ್ಷ ರೂಪಾಯಿಗಳಾಗಿದ್ದು, ಆನ್ ರೋಡ್…

Read More

ಕುಣಿಗಲ್: ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ ಮುಂದಿನ ವರ್ಷದಿಂದ ಸರಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನ ಸಭೆಯಲ್ಲಿ ಮಾತನಾಡಿದ ಅವರು,  2024–25ರಲ್ಲಿ ನಬಾರ್ಡ್ ನಿಂದ ಕಡಿಮೆ ಬಡ್ಡಿ ದರದಲ್ಲಿ 5,600 ಕೋಟಿ ಬರಬೇಕಾಗಿತ್ತು. ಅದರಲ್ಲಿ 3,415 ಕೋಟಿ ರೂ. ಬಂದಿದ್ದು, 2,185 ಕೋಟಿ ರೂ.ಗಳ ಕೊರತೆಯಾಗಿದೆ. ಮಧುಗಿರಿ ತಾಲ್ಲೂಕಿಗೆ ಹೆಚ್ಚು ಅನುದಾನ ನೀಡಿ, ಕುಣಿಗಲ್ ತಾಲ್ಲೂಕಿಗೆ ಅನುದಾನ ಕಡಿಮೆಯಾಗಿರುವ ಬಗ್ಗೆ ಶಾಸಕರು ತಿಳಿಸಿದ್ದಾರೆ. ಆದರೆ ಮಧುಗಿರಿಯಲ್ಲಿ ಶೇ. 6 ರಷ್ಟು ಎ ಸ್‌ಸಿ ಹಾಗೂ ಎಸ್‌ಟಿ  ಸಮುದಾಯದವರಿದ್ದು, ಕುಣಿಗಲ್‌ ನಲ್ಲಿ ಕೇವಲ ಶೇ.8 ರಷ್ಟು ಮಾತ್ರ ಎಸ್‌ ಸಿ ಮತ್ತು ಎಸ್‌ ಟಿ ಗೆ ಸೇರಿದ ಸಮುದಾಯಗಳಿವೆ. ಆದ್ದರಿಂದ ಅನುದಾನದ ಹೆಚ್ಚಿನ ಪಾಲು ಮಧುಗಿರಿಗೆ ನೀಡಿರಬಹುದು. ಆದರೆ ಮುಂದಿನ ವರ್ಷದಿಂದ ಈ ತಾರತಮ್ಯವನ್ನು ಕಾನೂನುಪ್ರಕಾರ ನಿವಾರಣೆ ಮಾಡಲಾಗುವುದು ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಹಾವೇರಿ: “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ನಿಷ್ಕ್ರಿಯಗೊಂಡಿದ್ದು, ಆಡಳಿತ ಯಂತ್ರ ಸತ್ತುಹೋಗಿದೆ. ಪ್ರತಿದಿನ ಒಂದಲ್ಲ ಒಂದು ಹೊಸ ಹಗರಣಗಳು ಹೊರಬರುತ್ತಿದ್ದು, ಇದೊಂದು ಹಗರಣಗಳ ಸರಮಾಲೆಯ ಸರ್ಕಾರವಾಗಿದೆ,” ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ತೀವ್ರವಾಗಿ ಟೀಕಿಸಿದ್ದಾರೆ. ಹಾವೇರಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಹರಿಹಾಯ್ದರು. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ ಎಂಬ ಭಾವನೆಯೇ ಜನರಲ್ಲಿ ಇಲ್ಲದಂತಾಗಿದೆ. ಮುಂಜಾನೆ ಒಂದು ಹಗರಣವಾದರೆ, ಮಧ್ಯಾಹ್ನ ಮತ್ತೊಂದು, ಸಂಜೆ ಮಗದೊಂದು ಎಂಬಂತೆ ಭ್ರಷ್ಟಾಚಾರದ ಸರಣಿ ಮುಂದುವರಿಯುತ್ತಿದೆ ಎಂದು ಆರೋಪಿಸಿದರು. ಅಧಿಕಾರಿಗಳ ಮೇಲೆ ಹಿಡಿತವಿಲ್ಲ: ಸರ್ಕಾರದ ಅಸ್ಥಿರತೆಯ ಬಗ್ಗೆ ಮಾತನಾಡಿದ ಪಾಟೀಲ್, “ಈ ಸರ್ಕಾರ ಯಾವಾಗ ಬಿದ್ದುಹೋಗುತ್ತದೆಯೋ ಎಂಬ ಆತಂಕದಲ್ಲಿ ಸಚಿವರಿದ್ದಾರೆ. ಸರ್ಕಾರ ಡೋಲಾಯಮಾನವಾಗಿದ್ದಾಗ ಅಧಿಕಾರಿಗಳು ಯಾರ ಮಾತನ್ನೂ ಕೇಳುವುದಿಲ್ಲ. ಅಭಿವೃದ್ಧಿ ಕೆಲಸಗಳ ಬಗ್ಗೆ ಪತ್ರ ಬರೆದರೆ ಕನಿಷ್ಠ ಸೌಜನ್ಯಕ್ಕೂ ಉತ್ತರ ನೀಡದ ಪರಿಸ್ಥಿತಿ ನಿರ್ಮಾಣವಾಗಿದೆ. ಆಡಳಿತ ಶೂನ್ಯವಾಗಿರುವುದರಿಂದ ಜನರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ,” ಎಂದರು. ಭ್ರಷ್ಟಾಚಾರದ ಆರೋಪ: ಹಿಂದಿನ…

Read More

ತುಮಕೂರು: ತುಮಕೂರಿನ ಮರಳೂರು ದಿಣ್ಣೆ ಸರ್ಕಾರಿ ಶಾಲೆಯಲ್ಲಿ ಅಯ್ಯಪ್ಪ ಮಾಲೆ ಮತ್ತು ದೀಕ್ಷಾ ವಸ್ತ್ರ ಧರಿಸಿ ಶಾಲೆಗೆ ಬಂದಿದ್ದ ಆರನೇ ತರಗತಿಯ ಇಬ್ಬರು ವಿದ್ಯಾರ್ಥಿಗಳನ್ನು ಮುಖ್ಯಶಿಕ್ಷಕಿ ಹೊರಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ, ಈ ಆರೋಪವನ್ನು ಶಾಲೆಯ ಮುಖ್ಯಶಿಕ್ಷಕಿ ಭಾಗ್ಯ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ತಾವು ಮಕ್ಕಳನ್ನು ಶಾಲೆಯಿಂದ ಹೊರಕ್ಕೆ ಕಳುಹಿಸಿಲ್ಲ, ಬದಲಾಗಿ ಅವರಿಗೆ ಪ್ರತ್ಯೇಕವಾಗಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಿದ್ದಾಗಿ ತಿಳಿಸಿದ್ದಾರೆ. ಶಾಲೆಯಲ್ಲಿ ಮೊಟ್ಟೆ ಬೇಯಿಸುವ ವ್ಯವಸ್ಥೆ ಇರುವುದರಿಂದ ಮತ್ತು ಮಾಲೆ ಧರಿಸಿದ ವಿದ್ಯಾರ್ಥಿಗಳ ಧಾರ್ಮಿಕ ನಿಯಮಗಳಿಗೆ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ಅವರು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ, ಸಮವಸ್ತ್ರ ನಿಯಮಗಳ ಬಗ್ಗೆ ಬಿಇಒ ಅವರ ಸೂಚನೆಯನ್ನು ಮಕ್ಕಳಿಗೆ ವಿವರಿಸಿದ್ದೇನೆ ಎಂದು ಅವರು ಹೇಳಿದ್ದಾರೆ. ಈ ಘಟನೆಯಿಂದ ಆಕ್ರೋಶಗೊಂಡ ಹಿಂದೂ ಹಿತರಕ್ಷಣಾ ವೇದಿಕೆಯ ಮುಖಂಡರು, ಮಕ್ಕಳ ಧಾರ್ಮಿಕ ಶ್ರದ್ಧೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಡಿಡಿಪಿಐಗೆ ದೂರು ನೀಡಿದ್ದಾರೆ. ಈ ಹಿಂದೆ ಚಿಕ್ಕಮಗಳೂರಿನ ಕಾಲೇಜೊಂದರಲ್ಲೂ ಇಂತಹದ್ದೇ ಘಟನೆ ನಡೆದಿದ್ದು, ಈಗ…

Read More

ಕರುನಾಡ ಚಕ್ರವರ್ತಿ ಶಿವರಾಜ್ ​ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಬೇಡಿಕೆಯ ನಟ ರಾಜ್ ಬಿ.ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಬಹುನಿರೀಕ್ಷಿತ ’45’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಈ ಮಲ್ಟಿಸ್ಟಾರ್ ಸಿನಿಮಾ ಆರಂಭದಿಂದಲೂ ಕುತೂಹಲ ಮೂಡಿಸಿದ್ದು, ಇದೇ ಡಿಸೆಂಬರ್ 25ರಂದು ಕ್ರಿಸ್ಮಸ್ ಹಬ್ಬದಂದು ತೆರೆಗೆ ಬರಲು ಸಿದ್ಧವಾಗಿದೆ. ಬೆಂಗಳೂರಿನ ವಿದ್ಯಾಪೀಠದ ಬಳಿಯಿರುವ ಡೊಂಕಣ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಟ್ರೇಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಬೆಂಗಳೂರು ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಟ್ರೇಲರ್ ಬಿಡುಗಡೆಯಾಗಿದ್ದು ವಿಶೇಷ. 100 ಕೋಟಿ ರೂಪಾಯಿ ಬಜೆಟ್​​ ನಲ್ಲಿ ಎಂ.ರಮೇಶ್ ರೆಡ್ಡಿ ಅವರು ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಅರ್ಜುನ್ ಜನ್ಯ ಅವರು ಮಾತನಾಡಿ, ತಾವು ಈ ಮೂವರು ನಾಯಕರ ಅಭಿಮಾನಿಯಾಗಿ ಸಿನಿಮಾ ನಿರ್ದೇಶನ ಮಾಡಿದ್ದು, ತಮ್ಮ ನಿರ್ದೇಶನದ ಹಿಂದಿನ ಪ್ರೇರಣೆ ಶಿವರಾಜ್‌…

Read More

ಮಂಡ್ಯ: ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಇಂದು ಅದ್ಧೂರಿಯಾಗಿ ಆಚರಿಸಿದರು. ನಾಡದೇವತೆ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯಲು ತೆರಳುತ್ತಿದ್ದ ಹೆಚ್‌ ಡಿಕೆ ಅವರನ್ನು ಮದ್ದೂರು ಮತ್ತು ಮಂಡ್ಯದ ವಿಸಿ ಫಾರಂ ಗೇಟ್ ಬಳಿ ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ ಮತ್ತು ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಮಂಗಳವಾದ್ಯ ಹಾಗೂ ಜಾನಪದ ಕಲಾತಂಡಗಳೊಂದಿಗೆ ಸ್ವಾಗತಿಸಲಾಯಿತು. ಪಕ್ಷದ ಮುಖಂಡರೊಂದಿಗೆ ಕೇಕ್ ಕತ್ತರಿಸಿದ ನಂತರ, ಗುತ್ತಿಗೆದಾರ ಶಂಕರೇಗೌಡ ಅವರು ಸಚಿವರಿಗೆ ದುಬಾರಿ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದರು. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಕಾರ್ಯಕರ್ತರ ಶುಭ ಹಾರೈಕೆಗೆ ಚಿರಋಣಿ ಎಂದರು. ರಾಜ್ಯ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು, ಗೃಹಲಕ್ಷ್ಮಿ ಹಣ ವಿತರಣೆಗಿಂತಲೂ ರೈತರ ಆತ್ಮಹತ್ಯೆ ಮುಂದುವರೆದಿರುವುದು ಮುಖ್ಯ ಸಮಸ್ಯೆಯಾಗಿದೆ. ಲೂಟಿ ಮಾಡುವುದೇ ಅಭಿವೃದ್ಧಿ ಎಂದು ಸರ್ಕಾರ ತಿಳಿದಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಕಾರ್ಯಕರ್ತರೊಬ್ಬರು ಕುಮಾರಸ್ವಾಮಿ ಅವರ ಯಶಸ್ಸಿಗಾಗಿ ರುದ್ರಹೋಮ ಮಾಡಿಸಿದ ತಾಯತವನ್ನು ಉಡುಗೊರೆಯಾಗಿ…

Read More

ಕೊರಟಗೆರೆ: ತಾಲೂಕು ಪತ್ರ ಬರಹಗಾರರ ಸಂಘದ ಪದಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಪತ್ರ ಬರಹಗಾರರಿಗೆ ಭದ್ರತೆಯನ್ನು ನೀಡುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ತಹಶೀಲ್ದಾರ್ ಕೆ. ಮಂಜುನಾಥ್ ರವರ ಮುಖೇನ ಮನವಿ ಪತ್ರ ಸಲ್ಲಿಸಿ ಪ್ರತಿಭಟಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ನಟರಾಜ್, ರಾಜ್ಯ ಸರ್ಕಾರವು ಡಿಜಿಟಲೀಕರಣದ ಹೆಸರಿನಲ್ಲಿ ಕಾವೇರಿ 0–1, ಕಾವೇರಿ 0–2 ತಂತ್ರಾಂಶಗಳನ್ನು ಜಾರಿಗೆ ತಂದಿದೆ. ಇದೀಗ ಕಾವೇರಿ 0–3 ತಂತ್ರಾಂಶವನ್ನು ಬರಬಹುದು ಮತ್ತು ಪೆನ್ ಲೆಸ್ ಹಾಗೂ ಪೇಪರ್ ಲೆಸ್ ನೋಂದಣಿಗೆ ಕಾರ್ಯಕ್ಕೆ ಸರ್ಕಾರ ಮುಂದಾಗುತ್ತಿದೆ. ನಮ್ಮ ಪತ್ರ ಬರಹಗಾರರಿಗೆ ಫೆನ್ ಲೆಸ್ ಮತ್ತು ಪೇಪರ್ ಲೆಸ್ ನೋಂದಣಿ ಕಾರ್ಯ ಪ್ರಾರಂಭವಾದಲ್ಲಿ ಪತ್ರ ಬರಹಗಾರರಿಗೆ ಯಾವುದೇ ರೀತಿಯ ಬರವಣಿಗೆ ಕಾರ್ಯ ಇಲ್ಲದಂತಾಗುತ್ತದೆ. ರಾಜ್ಯಾದ್ಯಂತ ಸುಮಾರು 12,000 ಪತ್ರ ಬರಹಗಾರರು ಮತ್ತು ಸಹಾಯಕರು ಇದೇ ವೃತ್ತಿಯನ್ನು ಅವಲಂಬಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಚಿಂತಿಸದೇ ಅಧಿಕಾರಿಗಳ ಸಲಹೆಯನ್ನು ಪಡೆದು ವಿದೇಶದಲ್ಲಿರುವಂತಹ ಪೆನ್ ಲೆಸ್ ಮತ್ತು ಪೇಪರ್ ಲೆಸ್…

Read More