Author: admin

ಬೆಂಗಳೂರು: ಕರ್ನಾಟಕದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರು ಜಿಲ್ಲೆಯ ಶಿರಾ ಬಳಿ ನಿರ್ಮಿಸಬೇಕೆಂದು ಕೋರಿ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರವು ಬೆಂಗಳೂರಿನ ಸಮೀಪದಲ್ಲೇ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ, ಅದನ್ನು ಸಿರಾ ಬಳಿ ನಿರ್ಮಿಸಬೇಕು ಎಂಬುದು ರಾಜ್ಯದ ಬಹುತೇಕ ಜನಪ್ರತಿನಿಧಿಗಳ ಒತ್ತಾಯವಾಗಿದೆ ಎಂದು ಸೋಮಣ್ಣ ತಿಳಿಸಿದ್ದಾರೆ. ಕಳೆದ ವರ್ಷ ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳ ಶಾಸಕರು ತಮಗೆ ಪತ್ರ ಬರೆದು ಈ ಬಗ್ಗೆ ಒತ್ತಾಯಿಸಿದ್ದರು ಎಂದು ಅವರು ನೆನಪಿಸಿದ್ದಾರೆ. ಈಗಾಗಲೇ ಕರ್ನಾಟಕವು ಬೆಂಗಳೂರು ಕೇಂದ್ರಿತವಾಗಿ ಅಭಿವೃದ್ಧಿ ಹೊಂದಿದ್ದು, ಮತ್ತೊಂದು ನಿಲ್ದಾಣವನ್ನು ಬೆಂಗಳೂರಿನ ಸಮೀಪವೇ ನಿರ್ಮಿಸಿದರೆ ಉತ್ತರ ಮತ್ತು ಮಧ್ಯ ಕರ್ನಾಟಕದ ಭಾಗಗಳಿಗೆ ಅನ್ಯಾಯವಾಗುತ್ತದೆ. ಶಿರಾದಲ್ಲಿ ನಿರ್ಮಿಸುವುದರಿಂದ ಈ ಭಾಗಗಳ ಪ್ರಗತಿಗೆ ದೊಡ್ಡ ವೇಗ ಸಿಗಲಿದೆ. ಸಿರಾದ ಸುತ್ತಮುತ್ತ ಮುಂಬೈ -– ಬೆಂಗಳೂರು ಕೈಗಾರಿಕಾ…

Read More

ಬೆಂಗಳೂರು: ರಾಜ್ಯದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರಿನಲ್ಲಿ ನಿರ್ಮಿಸಬೇಕು ಎಂಬುದು ನನ್ನ ಮೊದಲಿನಿಂದಲೂ ಇರುವ ಇಚ್ಛೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸದಾಶಿವನಗರದ ತಮ್ಮ ಗೃಹ ಕಚೇರಿ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿ.ವೈ. ವಿಜಯೇಂದ್ರ ಅವರು ತಮಗೆ ತಿಳಿದ ರೀತಿಯಲ್ಲಿ ಎರಡನೇ ವಿಮಾನ ನಿಲ್ದಾಣದ ಬಗ್ಗೆ ಮಾತನಾಡಿದ್ದಾರೆ. ಆದರೆ ತುಮಕೂರಿನಲ್ಲಿ ವಿಮಾನ ನಿಲ್ದಾಣವಾಗಬೇಕು ಎಂದು ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದರೆ ರಾಜ್ಯದ ಸುಮಾರು 20 ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದ್ದು, ತಾಂತ್ರಿಕವಾಗಿಯೂ ಇದು ಅತ್ಯಂತ ಸೂಕ್ತ ಸ್ಥಳವಾಗಿದೆ” ಎಂದು ಅಭಿಪ್ರಾಯಪಟ್ಟರು. ಈಗಾಗಲೇ ತಾಂತ್ರಿಕ ಸಮಿತಿಯು ನೆಲಮಂಗಲದ ಕುಣಿಗಲ್ ರಸ್ತೆ ಹಾಗೂ ಬಿಡದಿ ಪ್ರದೇಶಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದೆ. ಡಿಜಿಸಿಎ (DGCA) ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಸರ್ಕಾರ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದರು. ಬಿಡದಿ ಟೌನ್ ಶಿಪ್ ವಿರೋಧಿಸಿ ನಡೆಯುತ್ತಿರುವ ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿದ…

Read More

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ, ಪ್ರಜ್ವಲ್ ದೇವರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಕರಾವಳಿ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಆದರೆ, ಚಿತ್ರ ರಿಲೀಸ್ ಹತ್ತಿರವಾಗುತ್ತಿದ್ದಂತೆ ಚಿತ್ರತಂಡದಲ್ಲಿ ಎದ್ದಿರುವ ವಿವಾದವೀಗ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಇಡೀ ಗೊಂದಲ ಹಾಗೂ ವಿವಾದದ ಹಿನ್ನೆಲೆಯಲ್ಲಿ ಚಿತ್ರದಲ್ಲಿ ಪ್ರಮುಖ ಅತಿಥಿ ಪಾತ್ರ ಮಾಡಿರುವ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರು ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ. ಗುರುದತ್ ಗಾಣಿಗಾ ನಿರ್ದೇಶನದ ‘ಕರಾವಳಿ’ ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಬಂದು ಗಲಾಟೆ ಮಾಡಿದ್ದರು. ಇದರ ಬೆನ್ನಲ್ಲೇ ನಿರ್ದೇಶಕರು ಹಾಗೂ ಚಿತ್ರತಂಡದ ನಡುವೆ ಇದ್ದ ಭಿನ್ನಾಭಿಪ್ರಾಯಗಳು ಮತ್ತು ಮನಸ್ತಾಪಗಳು ಬಹಿರಂಗವಾಗಿ ಹೊರಬಂದಿದ್ದವು. ಒಬ್ಬರ ಮೇಲೊಬ್ಬರು ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಳ್ಳುವ ಮೂಲಕ ವಿವಾದ ಸೃಷ್ಟಿಯಾಗಿತ್ತು. ಇನ್ ಸ್ಟಾಗ್ರಾಂ ವಿಡಿಯೋ ಮೂಲಕ ಬೇಸರ ವ್ಯಕ್ತಪಡಿಸಿದ ರಾಜ್: ಈ ಘಟನೆಗಳ ಕುರಿತು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ ರಾಜ್ ಬಿ.…

Read More

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸುವರ್ಣ ಅವಕಾಶ. ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಸಹಭಾಗಿತ್ವದ ಸಂಸ್ಥೆಯಾದ ನಮ್ಮ ಮೆಟ್ರೋ, ನಿಯೋಜನೆ ಅಥವಾ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಯಾವ ಹುದ್ದೆಗೆ ನೇಮಕಾತಿ? ಮೆಟ್ರೋ ರೈಲು ನಿಗಮದ ಯೋಜನಾ ವಿಭಾಗದಲ್ಲಿ ಉಪ ಪ್ರಧಾನ ವ್ಯವಸ್ಥಾಪಕರು (Operation Safety – Deputy General Manager) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಈ ವಿಭಾಗದಲ್ಲಿ 01 ಹುದ್ದೆ ಖಾಲಿ ಇದ್ದು, ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತರಾಗಿರುವ ಅರ್ಹ ಹಾಗೂ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಮುಖ ದಿನಾಂಕಗಳು ಮತ್ತು ಸಮಯ: ಅಭ್ಯರ್ಥಿಗಳು ಆನ್ಲೈನ್ ಮತ್ತು ಆಫ್ಲೈನ್ ಎರಡೂ ವಿಧಾನಗಳ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:…

Read More

ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಭೂಯುದ್ಧ ಜೋರಾಗಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಸೇರಿದ ಜಮೀನಿಗೂ ಸಹ ಇದೀಗ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯ ಅಂತಿಮ ಅಧಿಸೂಚನೆ (Final Notification) ಹೊರಡಿಸಿದೆ. ಬಿಡದಿ ಹೋಬಳಿಯ ಹೊಸೂರು ಹಾಗೂ ಬನ್ನಿಗಿರಿ ಗ್ರಾಮಗಳ ವಿವಿಧ ಸರ್ವೇ ನಂಬರ್ಗಳಲ್ಲಿರುವ ಹೆಚ್.ಡಿ. ಕುಮಾರಸ್ವಾಮಿ ಕುಟುಂಬದ ಒಟ್ಟು 35 ಎಕರೆ ಜಮೀನು ಈ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿದೆ. ಇದರಲ್ಲಿ ಅನಿತಾ ಕುಮಾರಸ್ವಾಮಿ ಅವರ ಹೆಸರಿನಲ್ಲಿರುವ 31 ಎಕರೆ ಮತ್ತು ನಿಖಿಲ್ ಕುಮಾರಸ್ವಾಮಿ ಹೆಸರಿನಲ್ಲಿರುವ 4 ಎಕರೆ ಜಮೀನಿಗೆ ಅಂತಿಮ ನೋಟಿಫಿಕೇಷನ್ ಮಾಡಲಾಗಿದೆ. ದಾಖಲೆಗಳು ವೈರಲ್: ಇದೇ ವಿಷಯವನ್ನು ಅಸ್ತ್ರವಾಗಿಸಿಕೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು, ಹೆಚ್ ಡಿಕೆ ಕುಟುಂಬದ ಭೂ ದಾಖಲೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಮೂಲಕ ಜೆಡಿಎಸ್ ವಿರುದ್ಧ ಮುಗಿಬಿದ್ದಿದ್ದಾರೆ. “ಜೆಡಿಎಸ್ ಕುಟುಂಬಕ್ಕೆ ರೈತರ ಮೇಲೆ ಯಾವುದೇ ನೈಜ ಕಾಳಜಿಯಿಲ್ಲ. ತಮ್ಮ…

Read More

ತಿಪಟೂರು: ತಾಲೂಕಿನ ಹಲವು ಸರ್ಕಾರಿ ಶಾಲೆಗಳಲ್ಲಿ ಪ್ರಮುಖರಾದ ಶ್ರೀ ಲೋಕೇಶ್ವರ (ಲೋಕಣ್ಣ) ಅವರ ಹುಟ್ಟುಹಬ್ಬದ ಅಂಗವಾಗಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್‌ಗಳನ್ನು ವಿತರಿಸಲಾಯಿತು. ನೋಟ್‌ಬುಕ್ ವಿತರಿಸಿ ಮಾತನಾಡಿದ ಲೋಕಣ್ಣನವರು, “ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಶ್ರದ್ಧೆಯಿಂದ ಅಭ್ಯಾಸ ಮಾಡಬೇಕು. ಉತ್ತಮ ಶಿಕ್ಷಣ ಪಡೆದು ದೇಶದ ಜವಾಬ್ದಾರಿಯುತ ಹಾಗೂ ಮಾದರಿ ನಾಗರಿಕರಾಗಿ ಬೆಳೆಯಬೇಕು” ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಲೋಕಣ್ಣನವರು ಹಾಗೂ ಅವರ ಅಭಿಮಾನಿ ಬಳಗದವರು ಉಪಸ್ಥಿತರಿದ್ದು, ಶಾಲೆಯ ಪುಟ್ಟ ಮಕ್ಕಳೊಂದಿಗೆ ಹುಟ್ಟುಹಬ್ಬದ ಸಂಭ್ರಮವನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಲೋಕಣ್ಣ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಜೊತೆಗೆ, ಸಮಾಜದ ಏಳಿಗೆಗಾಗಿ ಅವರು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಇಂತಹ ಸಮಾಜಮುಖಿ ಸೇವಾ ಕಾರ್ಯಗಳನ್ನು ಮುಕ್ತಕಂಠದಿಂದ ಶ್ಲಾಘಿಸಿ, ಅಭಿನಂದನೆ ಸಲ್ಲಿಸಿದರು. ಒಟ್ಟಾರೆ ಕಾರ್ಯಕ್ರಮವು ಅತ್ಯಂತ ಸಂತೋಷ ಹಾಗೂ ಸೇವಾ ಮನೋಭಾವದ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ವರದಿ: ಅರವಿಂದ ಮಲ್ಲಿಗೆ, ಬೀದರ್ ಬೀದರ್: ಗ್ರಾಮೀಣ ಭಾಗದ ಬಡ ಕೂಲಿ ಕಾರ್ಮಿಕರು ಕೆಲಸ ಹುಡುಕಿಕೊಂಡು ಬೇರೆ ನಗರಗಳಿಗೆ ವಲಸೆ (ಗುಳೆ) ಹೋಗಬಾರದು. ಜುಲೈ 1ರಿಂದ ಜಾರಿಗೆ ಬಂದಿರುವ ಹೊಸ ‘ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ)’ ಅಂದರೆ ವಿಬಿ–ಜಿ ರಾಮ್ ಜಿ (VB–G RAM G) ಯೋಜನೆಯಡಿ ತಮ್ಮ ಸ್ವಗ್ರಾಮಗಳಲ್ಲೇ ಕೆಲಸ ಪಡೆದುಕೊಳ್ಳಬೇಕು ಎಂದು ಭಾಲ್ಕಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಸೂರ್ಯಕಾಂತ ಬಿರಾದಾರ್ ತಿಳಿಸಿದ್ದಾರೆ. ನರೇಗಾ ಯೋಜನೆ ಬಂದ್ ಆಗಿಲ್ಲ: ಗ್ರಾಮೀಣ ಭಾಗದ ಬಡವರ ಆಶಾಕಿರಣವಾಗಿದ್ದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆ ಸಂಪೂರ್ಣವಾಗಿ ಬಂದ್ ಆಗಿಲ್ಲ. ಬದಲಿಗೆ, ಕೇಂದ್ರ ಸರ್ಕಾರವು ಕೂಲಿ ಕಾರ್ಮಿಕರ ಹಿತದೃಷ್ಟಿಯಿಂದ ಈ ಯೋಜನೆಯಲ್ಲಿ ಹಲವು ಪ್ರಮುಖ ಮಾರ್ಪಾಡುಗಳನ್ನು ಮಾಡಿದೆ. ಈಗ ಈ ಯೋಜನೆಗೆ ‘ವಿಬಿ–ಜಿ ರಾಮ್ ಜಿ’ ಎಂದು ಹೊಸದಾಗಿ ನಾಮಕರಣ ಮಾಡಲಾಗಿದ್ದು, ಜುಲೈ 1ರಿಂದಲೇ ಇದು ಅಧಿಕೃತವಾಗಿ ಅನುಷ್ಠಾನಗೊಂಡಿದೆ ಎಂದು ಪ್ರಕಟಣೆಯಲ್ಲಿ…

Read More

ತುಮಕೂರು: ಲಡಾಖ್‌ ನ ಖ್ಯಾತ ಪರಿಸರವಾದಿ ಸೋನಮ್ ವಾಂಗ್ಚುಕ್ ಹಾಗೂ ಇತರೆ ಉಪವಾಸನಿರತ ಹೋರಾಟಗಾರರೊಂದಿಗೆ ಪ್ರಜಾತಾಂತ್ರಿಕ ಸಂವಾದ ಆರಂಭಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ, ಭಾರತದ ಸನ್ಮಾನ್ಯ ರಾಷ್ಟ್ರಪತಿಗಳಿಗೆ ಸಲ್ಲಿಸುವ ಮನವಿ ಪತ್ರಕ್ಕೆ ತುಮಕೂರು ನಗರದ ವಿವಿಧ ಕಾಲೇಜುಗಳು, ಮೈದಾನ ಹಾಗೂ ಹಾಸ್ಟೆಲ್‌ಗಳಲ್ಲಿ ವ್ಯಾಪಕ ಆನ್‌ಲೈನ್ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಅವರು, “ನೀಟ್–ಯುಜಿ (NEET–UG) ಪರೀಕ್ಷೆಯ ಸುತ್ತಲಿನ ಪರೀಕ್ಷಾ ಬಿಕ್ಕಟ್ಟು ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಈ ವ್ಯವಸ್ಥಿತ ವೈಫಲ್ಯದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ನೀಟ್ ಪರೀಕ್ಷೆ ರದ್ದತಿ ಮತ್ತು ನಂತರದ ಮರು-ಪರೀಕ್ಷೆಯ ಗೊಂದಲಗಳಿಂದಾಗಿ ಈಗಾಗಲೇ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಹಲವರು ತೀವ್ರ ಖಿನ್ನತೆಗೆ ಒಳಗಾಗಿದ್ದಾರೆ,” ಎಂದು ತೀವ್ರ ಕಳವಳ ವ್ಯಕ್ತಪಡಿಸಿದರು.…

Read More

 ರಾಘವೇಂದ್ರ ಅಡಿಗ ಎಚ್ಚೆನ್. ‘ಪುಣ್ಯಕೋಟಿ’ ಹಾಡನ್ನು ಕೇಳದ ಕಿವಿಗಳೆ ಇಲ್ಲ ಎನ್ನಬಹುದು. ಅಂತಹ “ಪುಣ್ಯಕೋಟಿ” ಹಾಡನ್ನು ಖ್ಯಾತ ಕಾದಂಬರಿಕಾರ, ಬರಹಗಾರ, ಕೃಷಿ ವಿಜ್ಞಾನಿ ಹಾಗೂ ಪ್ರಾಧ್ಯಾಪಕ ಕೆ.ಎನ್ ಗಣೇಶಯ್ಯ ಪುನರಚಿಸಿದ್ದಾರೆ. ಇದಕ್ಕೆ “ಪುಣ್ಯಕೋಟಿ ಶತಕರುಣಿ” ಎಂದು ಹೆಸರಿಟ್ಟಿದ್ದಾರೆ. ಲಾಫ್ಟಿಲ್ಯಾನ್ಡ್ ಸಂಸ್ಥೆ, ದಿನಿ ಸಿನಿ ಕ್ರಿಯೇಷನ್ಸ್ ಸಹಯೋಗದೊಂದಿಗೆ ಈ ಹಾಡನ್ನು ದೃಶ್ಯಕಾವ್ಯವಾಗಿ ನಿರ್ಮಾಣ ಮಾಡಿದ್ದಾರೆ. ಬಾಲು ಚಂದ್ರಶೇಖರ್ ನಿರ್ದೇಶಿಸಿದ್ದಾರೆ. ಅಜಯ್ ಶ್ರೀನಿವಾಸಮೂರ್ತಿ ಸಂಗೀತ ನೀಡಿರುವ ಈ ದೃಶ್ಯಕಾವ್ಯದ ಹಾಡನ್ನು ಮೇಘನ ಹಳಿಯಾಳ್, ಚಿಂತನ್ ವಿಕಾಸ್ ಹಾಗೂ ಆರವ್ ಜೋಶಿ ಹಾಡಿದ್ದಾರೆ. ಇತ್ತೀಚೆಗೆ ಈ ದೃಶ್ಯಕಾವ್ಯದ ಲೋಕಾರ್ಪಣೆ ಸಮಾರಂಭ ಜಯನಗರದ ಯಡಿಯೂರಿನಲ್ಲಿರುವ ಅ.ನ.ಕೃ ಸಮುದಾಯ ಭವನದ ಪುನೀತ್ ರಾಜಕುಮಾರ್ ಸಭಾಂಗಣದಲ್ಲಿ ಅದ್ದೂರಿಯಾಗಿ ನೆರವೇರಿತು. ರಾಜ್ಯಸಾಭಾ ಸದಸ್ಯರಾದ ಸುಧಾಮೂರ್ತಿ ಹಾಗೂ ಹೆಸರಾಂತ ನಟರಾದ ರಮೇಶ್ ಅರವಿಂದ್ ಈ ದೃಶ್ಯಕಾವ್ಯವನ್ನು ಲೋಕಾರ್ಪಣೆ ಮಾಡಿದರು. ಕನ್ನಡ ಹಾಗೂ ಇಂಗ್ಲೀಷ್ ಎರಡರಲ್ಲೂ ಈ ದೃಶ್ಯಕಾವ್ಯ ಮೂಡಿಬಂದಿರುವುದು ವಿಶೇಷ. ಇಂಗ್ಲೀಷ್ ನ‌ ದೃಶ್ಯಕಾವ್ಯಕ್ಕೆ ರಮೇಶ್ ಅರವಿಂದ್ ಅವರೆ ಧ್ವನಿ ನೀಡಿದ್ದಾರೆ. “ಪುಣ್ಯಕೋಟಿ…

Read More

ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ವತಿಯಿಂದ ನೆಲಮಂಗಲದ ಪುಷ್ಪ ಭೈರೇಗೌಡ ಕನ್ವೆನ್ಶನ್ ಹಾನಲ್ಲಿ ಆಗಸ್ಟ್ 8 ರಂದು ಬೆಳಿಗ್ಗೆ 10.30ಕ್ಕೆ ನಾಲ್ಕನೇ ರಾಜ್ಯ ಪತ್ರಕರ್ತರ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ವಾರ್ತಾ ಇಲಾಖೆಯ ಆಯುಕ್ತ ಎಂ. ಎನ್. ಅನುಚೇತ್ ಹಾಗೂ ಪ್ರಗತಿಪರ ರೈತ ಬಸವರಾಜು ಜಂಟಿಯಾಗಿ ಉದ್ಘಾಟಿಸುವರು. ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ. ಶಾಸಕ ಎನ್. ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು. ಮುಖ್ಯ ಮಂತ್ರಿ ಅವರ ಮಾಜಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಸಂಘಟನೆಯ ರಾಜ್ಯ ಅಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಪ್ರಾಸ್ತಾವಿಕವಾಗಿ ಮಾತನಾಡುವರು. ಸಂಘಟನೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಚೌಡೇಗೌಡ ಆಶಯ ನುಡಿ ಆಡುವರು ಎಂದು ಜಿಲ್ಲೆಯವರೇ ಆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಜಾನಸನ್ ಘೋಡೆ ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More