Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸರ್ಕಾರಿ ಆಸ್ಪತ್ರೆಗಳು ಕೋಮಾ ಸ್ಥಿತಿಯಲ್ಲಿವೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಅವರು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳ ದಾಸ್ತಾನಿಲ್ಲ. ವೈದ್ಯರು ಮತ್ತು ಶುಶ್ರೂಷಕರ ನೂರಾರು ಹುದ್ದೆಗಳು ಖಾಲಿ ಇವೆ. ಸ್ಕ್ಯಾನಿಂಗ್ ಸೇವೆ ಒದಗಿಸುವ ಕಂಪನಿಗಳಿಗೆ ಬಾಕಿ ಹಣ ಪಾವತಿ ಮಾಡದ ಕಾರಣ, ರಾಜ್ಯಾದ್ಯಂತ ಸ್ಕ್ಯಾನಿಂಗ್ ಸೇವೆಗಳು ಕುಂಠಿತಗೊಂಡಿವೆ. ಇದರಿಂದ ಬಡ ರೋಗಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಕಾಂಗ್ರೆಸ್ ಸರ್ಕಾರವು ಆಂತರಿಕ ಕಚ್ಚಾಟ, ಬಣ ರಾಜಕೀಯ ಮತ್ತು ಅಧಿಕಾರದ ಮೇಲಾಟದಲ್ಲಿ ಮುಳುಗಿದೆ. ಇದರಿಂದಾಗಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯು ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ ಎಂದು ಅವರು ಆರೋಪಿಸಿದ್ದಾರೆ. “ವಿಧಾನಸಭಾ ಅಧಿವೇಶನದಲ್ಲಿ ನಾನು ಈ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದಾಗ ಆರೋಗ್ಯ ಸಚಿವರು ಎಲ್ಲವೂ…
ಬೆಳಗಾವಿ: ರಾಜ್ಯ ಸರ್ಕಾರದ ಒಳ ಮೀಸಲಾತಿ ಜಾರಿಗೊಳಿಸುವ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಬೆಂಬಲ ಮತ್ತು ಜನಮನ್ನಣೆ ವ್ಯಕ್ತವಾಗುತ್ತಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆಗೆದುಕೊಂಡಿರುವ ಈ ತೀರ್ಮಾನವು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಒಂದು ‘ಐತಿಹಾಸಿಕ’ ನಡೆಯಾಗಿದೆ ಎಂದು ಬಣ್ಣಿಸಿದರು. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ಎಲ್ಲಾ ಸಮುದಾಯಗಳನ್ನು ಪ್ರತಿನಿಧಿಸುವ ಸಚಿವರು ಒಮ್ಮತದಿಂದ ಈ ನಿರ್ಧಾರಕ್ಕೆ ಅಸ್ತು ಎಂದಿದ್ದಾರೆ. ಸಂಪುಟದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿರಲಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಬಹುಕಾಲದ ಬೇಡಿಕೆಯಾಗಿದ್ದ ಒಳ ಮೀಸಲಾತಿಯಿಂದಾಗಿ ಅರ್ಹ ಸಮುದಾಯಗಳಿಗೆ ಮೀಸಲಾತಿಯ ಸೌಲಭ್ಯಗಳು ಸಮಾನವಾಗಿ ಹಂಚಿಕೆಯಾಗಲಿವೆ. ಇದು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ತಲುಪಿಸಲು ಸಹಕಾರಿಯಾಗಲಿದೆ. ಸರ್ಕಾರದ ಈ ಕ್ರಮವನ್ನು ಟೀಕಿಸುತ್ತಿರುವ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಜಾರಕಿಹೊಳಿ, ವಿರೋಧ ಪಕ್ಷದವರು ಸರ್ಕಾರದ ಪ್ರತಿಯೊಂದು…
ಬೆಂಗಳೂರು: ಡಾ. ರಾಜ್‌ಕುಮಾರ್ ಸ್ಮಾರಕಕ್ಕೆ ಸರ್ಕಾರ ಜಮೀನು ನೀಡಿರುವುದನ್ನು ವಿರೋಧಿಸಿ ಪೋಸ್ಟ್ ಮಾಡಿದ್ದ ನಟ ಚೇತನ್ ಅಹಿಂಸಾ, ಇದೀಗ ಕನ್ನಡಪರ ಹೋರಾಟಗಾರ ಸಾ.ರಾ. ಗೋವಿಂದು ಅವರ ವರ್ತನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. “ನನ್ನ ಮನೆ ಮುಂದೆ ಬಂದು ಗೂಂಡಾಗಳ ರೀತಿ ವರ್ತಿಸಿ ಧಮ್ಕಿ ಹಾಕಿದರೆ ನಾನು ಹೆದರುವುದಿಲ್ಲ, ಕಾನೂನು ಹೋರಾಟ ಮಾಡುತ್ತೇನೆ” ಎಂದು ಅವರು ಎಚ್ಚರಿಸಿದ್ದಾರೆ. ನಿನ್ನೆ ತಮ್ಮ ಮನೆ ಮುಂದೆ ಪ್ರತಿಭಟನೆ ನಡೆದಾಗ ಚೇತನ್ ಕ್ಷಮೆ ಕೇಳಿದ್ದರು. ಆದರೆ ಇಂದು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಅವರು, “ನಾನು ಕ್ಷಮೆ ಕೇಳಿದ್ದು ಅಣ್ಣಾವ್ರ ಅಭಿಮಾನಿಗಳಿಗೆ ನೋವಾಗಿದ್ದರೆ ಮಾತ್ರ. ಆದರೆ ನನ್ನ ನಿಲುವು ಮತ್ತು ನಾನು ಮಾಡಿದ ಟ್ವೀಟ್ ಗೆ ನಾನು ಇಂದಿಗೂ ಬದ್ಧನಾಗಿದ್ದೇನೆ” ಎಂದು ಹೇಳಿದ್ದಾರೆ. ಸಾ.ರಾ. ಗೋವಿಂದು ಅವರು ಬಳಸಿದ ಪದಗಳು ಸರಿಯಿಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಅವರು ಸೌಜನ್ಯದಿಂದ ಚರ್ಚಿಸಬಹುದಿತ್ತು. ಅದನ್ನು ಬಿಟ್ಟು ಮನೆ ಮುಂದೆ ಬಂದು ಗೂಂಡಾಗಿರಿ ಮಾಡುವುದು ಸರಿಯಲ್ಲ. ಇಂತಹ ವರ್ತನೆಗಳಿಂದ ಅವರು ಡಾ.…
ತುಮಕೂರು: ನಗರದ ಮಹಾತ್ಮಾ ಗಾಂಧಿ (ಎಂ.ಜಿ.) ಕ್ರೀಡಾಂಗಣದಲ್ಲಿ ನಡೆಯುತ್ತಿರುವ 24ನೇ ರಾಷ್ಟ್ರೀಯ ಜೂನಿಯರ್ (U–20) ಅಥ್ಲೆಟಿಕ್ಸ್ ಫೆಡರೇಶನ್ ಕಪ್ ನಲ್ಲಿ ಡೋಪಿಂಗ್ ಶಂಕೆ ವ್ಯಕ್ತವಾಗಿದೆ. ಕ್ರೀಡಾಂಗಣದ ಶೌಚಾಲಯದಲ್ಲಿ ಬಳಸಿದ 4ರಿಂದ 5 ಸಿರಿಂಜ್ ಗಳು ಮತ್ತು ಸೂಜಿಗಳು ಪತ್ತೆಯಾಗಿರುವುದು ಈ ಅನುಮಾನಕ್ಕೆ ಬಲ ನೀಡಿದೆ. ಕೆಲವು ಅಥ್ಲೀಟ್ ಗಳು ತಮ್ಮ ಪ್ರದರ್ಶನವನ್ನು ಉತ್ತಮಪಡಿಸಿಕೊಳ್ಳಲು ನಿಷೇಧಿತ ಉತ್ತೇಜಕಗಳನ್ನು ಬಳಸಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಸ್ಪರ್ಧೆಯ ನಿರ್ದೇಶಕ ಸತ್ಯನಾರಾಯಣ ಅವರು ಶೌಚಾಲಯದಲ್ಲಿ ಸಿರಿಂಜ್ ಗಳು ಪತ್ತೆಯಾಗಿರುವುದನ್ನು ಖಚಿತಪಡಿಸಿದ್ದಾರೆ. ಆದರೆ, ಇದರಲ್ಲಿ ಭಾಗಿಯಾಗಿರುವ ನಿರ್ದಿಷ್ಟ ಅಥ್ಲೀಟ್‌ಗಳ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ. ರಾಷ್ಟ್ರೀಯ ಡೋಪಿಂಗ್ ವಿರೋಧಿ ಸಂಸ್ಥೆಯ (NADA) ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಕ್ರೀಡಾಪಟುಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ. ಪದಕ ವಿಜೇತರು ಮತ್ತು ಅಂತಿಮ ಸುತ್ತು ತಲುಪಿದ ಅಥ್ಲೀಟ್ ಗಳ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಒಂದು ವೇಳೆ ಡೋಪಿಂಗ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದರೆ, ಅಂತಹ ಕ್ರೀಡಾಪಟುಗಳಿಗೆ ನಾಲ್ಕು ವರ್ಷಗಳ ಕಾಲ…
ಕೊರಟಗೆರೆ: ಶಿಕ್ಷಣವೇ ಜೀವನವನ್ನು ರೂಪಿಸುವ ಶಕ್ತಿಯಾಗಿದೆ. ವಿದ್ಯೆಯಿಂದ ವ್ಯಕ್ತಿಯ ಚಿಂತನೆ, ನಡೆ–ನುಡಿ ಎಲ್ಲವೂ ಬದಲಾಗುತ್ತದೆ. ಆದ್ದರಿಂದ ನಾವು ಶಿಕ್ಷಣ ಪಡೆದವರಾಗಿಯೂ, ಸಂಸ್ಕಾರವಂತರಾಗಿಯೂ ಬದುಕುವುದನ್ನು ಕಲಿಯಬೇಕು ಎಂದು ಬೆಂಗಳೂರಿನ ಬೇಲಿ ಮಠದ ಪೀಠಾಧ್ಯಕ್ಷ ಶಿವರುದ್ರ ಮಹಾ ಸ್ವಾಮೀಜಿ ಹೇಳಿದರು. ತಾಲೂಕಿನ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ನಡೆಯುತ್ತಿರುವ ಸಂಸ್ಕಾರ ಶಿಬಿರದಲ್ಲಿ ಶುಕ್ರವಾರ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಅವರು, “ನಮ್ಮಲ್ಲಿರುವ ಸಂಪತ್ತೆಲ್ಲವೂ ಕಳೆದುಹೋಗಬಹುದು. ಆದರೆ ನಾವು ಕಲಿತ ವಿದ್ಯೆಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಹಣವಂತರಿಗಿಂತ ಗುಣವಂತರಿಗೆ ಮತ್ತು ಜ್ಞಾನಿಗಳಿಗೆ ಸಮಾಜದಲ್ಲಿ ಹೆಚ್ಚಿನ ಗೌರವ ದೊರಕುತ್ತದೆ” ಎಂದು ಹೇಳಿದರು. ಶಿಬಿರದ ವೈಶಿಷ್ಟ್ಯವನ್ನು ವಿವರಿಸಿದ ಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ, ಇಲ್ಲಿ ಭಾಗವಹಿಸಿರುವ ಮಕ್ಕಳು ಮೊಬೈಲ್ ಮತ್ತು ಟಿವಿಗಳಿಂದ ದೂರವಿದ್ದು, ಜಂಕ್ ಫುಡ್ ಸೇರಿದಂತೆ ಆರೋಗ್ಯಕ್ಕೆ ಹಾನಿಕರ ಆಹಾರ ಪದಾರ್ಥಗಳನ್ನು ತ್ಯಜಿಸಿ, ಮಠದಲ್ಲಿ ನೀಡುವ ಸಾತ್ವಿಕ ಆಹಾರವನ್ನು ಸೇವಿಸುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಶಿಬಿರದಲ್ಲಿ ಭಾಗವಹಿಸುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದ್ದು, ಸಂಸ್ಕಾರ ಬೆಳೆದಂತೆ ಮೌಲ್ಯವೂ ಹೆಚ್ಚುತ್ತದೆ ಎಂದು ಹೇಳಿದರು.…
ತುಮಕೂರು: ದೇಶದ ಭವಿಷ್ಯವಾಗಿರುವ ಯುವ ಸಮುದಾಯ ಮಾದಕ ವ್ಯಸನಗಳಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಕರೆ ನೀಡಿದರು. ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ನಶಾ ಮುಕ್ತ ಭಾರತ’ ಹಾಗೂ ‘ಯುವ ಶುದ್ಧ ಅಭಿಯಾನ ವಾಕಥಾನ್’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ‘ನಶಾ ಮುಕ್ತ ಕ್ಯಾಂಪಸ್’, ‘ಆತ್ಮಹತ್ಯೆ ಮುಕ್ತ ಕ್ಯಾಂಪಸ್’ ಹಾಗೂ ‘ಅಂಗಾಂಗ ದಾನ ಅಭಿಯಾನ’ಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ವ್ಯಸನ ಮುಕ್ತ ಕ್ಯಾಂಪಸ್: ಕಾಲೇಜು ಕ್ಯಾಂಪಸ್ ಗಳಲ್ಲಿ ಕಲಿಯುತ್ತಿರುವ ಯುವಕರು ನಶಾ ಪದಾರ್ಥಗಳಿಂದ ಸಂಪೂರ್ಣವಾಗಿ ಮುಕ್ತರಾಗಬೇಕು. ಮಾದಕ ವ್ಯಸನವು ಕೇವಲ ವ್ಯಕ್ತಿಯನ್ನಲ್ಲದೆ, ಅವರ ಕುಟುಂಬ ಹಾಗೂ ಇಡೀ ದೇಶದ ಭವಿಷ್ಯವನ್ನೇ ನಾಶಪಡಿಸುತ್ತದೆ ಎಂದು ಸಚಿವರು ಎಚ್ಚರಿಸಿದರು. ಯುವಜನತೆ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಪ್ರತಿನಿತ್ಯ ಯೋಗ, ಪ್ರಾಣಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಅವರು ಕಿವಿಮಾತು ಹೇಳಿದರು. ವಿದ್ಯಾರ್ಥಿಗಳಲ್ಲಿ ಜಾಗೃತಿ…
ಹುಬ್ಬಳ್ಳಿ: ಮೊಬೈಲ್ ನಲ್ಲಿ ಆನ್ ಲೈನ್ ಗೇಮ್ ಆಡದಂತೆ ತಾಯಿ ಬುದ್ಧಿವಾದ ಹೇಳಿ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಮನನೊಂದ 14 ವರ್ಷದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಹುಬ್ಬಳ್ಳಿಯ ಬೆಂಗೇರಿಯ ಉದಯನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಸಮರ್ಥ್ ಪಟಿಕೆ ಎಂದು ಗುರುತಿಸಲಾಗಿದೆ. ಈತ ಕಳೆದ ಕೆಲವು ದಿನಗಳಿಂದ ‘ಫ್ರೀ ಫೈರ್’ (Free Fire) ಎಂಬ ಆನ್ ಲೈನ್ ಗೇಮ್ ಗೆ ತೀವ್ರವಾಗಿ ವ್ಯಸನಿಯಾಗಿದ್ದ ಎನ್ನಲಾಗಿದೆ. ಘಟನೆಯ ದಿನ ರಾತ್ರಿ ಸಮರ್ಥ್ ಸತತವಾಗಿ ಮೊಬೈಲ್ ನಲ್ಲಿ ಗೇಮ್ ಆಡುತ್ತಿದ್ದನ್ನು ಗಮನಿಸಿದ ತಾಯಿ, “ಮೊಬೈಲ್ ಸಾಕು ಮಾಡು, ಓದಿನ ಕಡೆ ಗಮನ ಕೊಡು” ಎಂದು ಬುದ್ಧಿವಾದ ಹೇಳಿದ್ದಾರೆ. ಅಲ್ಲದೆ, ಆತನ ಕೈಯಲ್ಲಿದ್ದ ಮೊಬೈಲ್ ಫೋನನ್ನು ಕಿತ್ತುಕೊಂಡಿದ್ದಾರೆ. ಇದರಿಂದ ತೀವ್ರವಾಗಿ ನೊಂದ ಬಾಲಕ ತಕ್ಷಣವೇ ತನ್ನ ಕೋಣೆಗೆ ಹೋಗಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದಾನೆ. ಸುಮಾರು 15–20 ನಿಮಿಷಗಳಾದರೂ ಮಗ ಹೊರಬಾರದಿದ್ದಾಗ ಆತಂಕಗೊಂಡ ತಂದೆ ಕಿಟಕಿಯಿಂದ ಇಣುಕಿ ನೋಡಿದಾಗ, ಸಮರ್ಥ್ ಸೀರೆಯಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ತಕ್ಷಣವೇ…
ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರು, ತಮಗೆ ವಿಧಿಸಲಾದ ಶಿಕ್ಷೆಯನ್ನು ಪ್ರಶ್ನಿಸಿ ಮತ್ತು ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಇಂದು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಿಸಿರುವ ಜೀವಾವಧಿ ಶಿಕ್ಷೆ ಮತ್ತು ಕನ್ವಿಕ್ಷನ್ ಆದೇಶವನ್ನು ಪ್ರಶ್ನಿಸಿರುವ ವಿನಯ್ ಕುಲಕರ್ಣಿ, ತಕ್ಷಣವೇ ಶಿಕ್ಷೆಗೆ ತಡೆಯಾಜ್ಞೆ ನೀಡಬೇಕು ಮತ್ತು ಜಾಮೀನು ಮಂಜೂರು ಮಾಡಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಕಾನೂನಿನ ಪ್ರಕಾರ ಶಿಕ್ಷೆಯ ತೀರ್ಪು ಪ್ರಕಟವಾದ 90 ದಿನಗಳೊಳಗೆ ಅದಕ್ಕೆ ತಡೆಯಾಜ್ಞೆ ಸಿಗದಿದ್ದರೆ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿ ಇರುವುದರಿಂದ, ವಿನಯ್ ಕುಲಕರ್ಣಿ ಅವರು ತುರ್ತಾಗಿ ಈ ಮೇಲ್ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಸಲ್ಲಿಕೆಯಾಗಿರುವ ಈ ಅರ್ಜಿಯ ವಿಚಾರಣೆಯು ಮುಂದಿನ ವಾರ ನಡೆಯುವ ಸಾಧ್ಯತೆಯಿದೆ. ಈ ವೇಳೆ ನ್ಯಾಯಾಲಯವು ಸಿಬಿಐ ಪರ ವಾದವನ್ನೂ ಆಲಿಸಲಿದೆ. 2016ರ ಜೂನ್ ನಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಅವರನ್ನು ಕೊಲೆ…
ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ವರನಟ ಡಾ. ರಾಜ್‌ಕುಮಾರ್ ಅವರ ಸಮಾಧಿ ಸ್ಥಳದ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದ ನಟ ಚೇತನ್ ಅಹಿಂಸಾ ಅವರ ವಿರುದ್ಧ ಈಗ ಕಾನೂನು ಸಂಕಷ್ಟ ಎದುರಾಗಿದೆ. ಅಭಿಮಾನಿಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ. ಇತ್ತೀಚೆಗೆ ಡಾ. ರಾಜ್‌ಕುಮಾರ್ ಅವರ ಜನ್ಮದಿನದ ಸಂದರ್ಭದಲ್ಲಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದ ಚೇತನ್, ರಾಜ್‌ಕುಮಾರ್ ಅವರ ಸಮಾಧಿಗಾಗಿ ಸರ್ಕಾರ 2.5 ಎಕರೆ ಜಾಗ ನೀಡಿರುವುದನ್ನು ಪ್ರಶ್ನಿಸಿದ್ದರು. 21ನೇ ಶತಮಾನದಲ್ಲಿ ಭೂಮಿಯೇ ಅತ್ಯಂತ ಪ್ರಮುಖ ಹೋರಾಟದ ವಸ್ತುವಾಗಿದೆ. ಸರ್ಕಾರವು ಸಾರ್ವಜನಿಕ ಭೂಮಿಯನ್ನು ಜನರ ಉಪಯೋಗಕ್ಕೆ ಬಳಸಬೇಕೇ ಹೊರತು, ಕೇವಲ ಮತಗಳ ಲಾಭಕ್ಕಾಗಿ ವ್ಯಕ್ತಿಗಳ ಸ್ಮರಣಾರ್ಥ ಹಂಚಬಾರದು ಎಂದಿದ್ದರು. ನಟ ಚೇತನ್ ಅವರ ಈ ನಡೆಗೆ ರಾಜ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾ. ರಾಜ್‌ಕುಮಾರ್ ಸೇನೆಯ ವತಿಯಿಂದ ಪೊಲೀಸರಿಗೆ ದೂರು ನೀಡಲಾಗಿದ್ದು, ಕೋಟಿಗಟ್ಟಲೆ ಅಭಿಮಾನಿಗಳ…
ತುಮಕೂರು: ಡಾ.ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಂದು ಜಾತಿಗೆ ಸೀಮಿತವಾದವರಲ್ಲ, ಅವರು ಇಡೀ ವಿಶ್ವಕ್ಕೆ ಮಾರ್ಗದರ್ಶಕರು ಎಂದು ವಿಶ್ವಸಂಸ್ಥೆಯ ವಿಶೇಷ ವರದಿಗಾರರಾದ ಡಾ. ಅಶ್ವಿನಿ ಕೆ.ಪಿ. ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಡಾ. ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಬೆಂಗಳೂರಿನ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಂವಿಧಾನ ಎಷ್ಟೇ ಉತ್ತಮವಾಗಿದ್ದರೂ, ಅದು ಯಾರ ಕೈಯಲ್ಲಿದೆ ಎನ್ನುವುದು ಮುಖ್ಯ. ಕೆಟ್ಟವರ ಕೈಯಲ್ಲಿ ಒಳ್ಳೆಯ ಸಂವಿಧಾನವೂ ಕೆಟ್ಟದಾಗಿ ಬಳಕೆಯಾಗಬಹುದು, ಅದೇ ಒಳ್ಳೆಯವರ ಕೈಯಲ್ಲಿ ಕೆಟ್ಟ ಸಂವಿಧಾನವೂ ಉತ್ತಮ ಫಲ ನೀಡಬಲ್ಲದು ಎಂದರು. ಮಿಸಲಾತಿ ಕೇವಲ ಎಸ್ಸಿ/ಎಸ್ಟಿ ಸಮುದಾಯಕ್ಕೆ ಸೀಮಿತವಾಗಿಲ್ಲ. ದೇಶದಲ್ಲಿ ಮಿಸಲಾತಿ ವ್ಯವಸ್ಥೆ ಸಮರ್ಪಕವಾಗಿ ಜಾರಿಯಲ್ಲಿದೆ. ಕನ್ನಡ ಮಾಧ್ಯಮ, ಹೈದರಾಬಾದ್–ಕರ್ನಾಟಕ, ಮಿಲಿಟರಿ ಮಿಸಲಾತಿ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಎಲ್ಲರಿಗೂ ಅವಕಾಶಗಳಿವೆ. ವಿದ್ಯಾರ್ಥಿಗಳು ಈ ಬಗ್ಗೆ ಸರಿಯಾದ ತಿಳುವಳಿಕೆ ಬೆಳೆಸಿಕೊಳ್ಳಬೇಕು ಎಂದರು. ಸಹಪ್ರಾಧ್ಯಾಪಕ ಪ್ರೊ.ರಾಜೇಂದ್ರ ಬಾಬು ಸಮ್ಮೇಳನದ ವರದಿ ಮಂಡಿಸಿದರು. ತುಮಕೂರಿನ ಪ್ರಥಮ ದರ್ಜೆ ಮಹಿಳಾ…