Author: admin

ರಾಖಿ ಹಬ್ಬದ ದಿನದಂದೇ ಆಕಾಶದಲ್ಲಿ ಅಪರೂಪದ ವಿಸ್ಮಯ ಘಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ ಆಗಸ್ಟ್ 19ರ ರಾಖಿ ಹುಣ್ಣಿಮೆಯಂದು ಆಕಾಶದಲ್ಲಿ ನೀಲಿ ಚಂದ್ರ ನೋಡಲು ಕಾಣಸಿಗಲಿದ್ದಾನೆ. ಅತ್ಯಪರೂಪದ ”ಸೂಪರ್ ಬ್ಲೂ ಮೂನ್”ಗೆ ಕ್ಷಣಗಣನೆ ಆರಂಭವಾಗಿದೆ. ಸೂಪರ್ಮೂನ್ಗಳು ಸಾಮಾನ್ಯವಾಗಿ ವರ್ಷಕ್ಕೆ 3-4 ಬಾರಿ ಸಂಭವಿಸುತ್ತವೆ.ಈ ತಿಂಗಳು, ಸೂಪರ್ ಮೂನ್ ಮತ್ತು ಬ್ಲೂ ಮೂನ್ ಒಂದುಗೂಡುವ ಅಪರೂಪದ ಖಗೋಳ ಘಟನೆಯನ್ನು ನಾವು ವೀಕ್ಷಿಸಬಹುದು. ಈ ಅಪರೂಪದ ಖಗೋಳ ವಿದ್ಯಮಾನವನ್ನು ಹಲವು ವರ್ಷಗಳಿಗೊಮ್ಮೆ ಮಾತ್ರ ಕಾಣಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ. ಸಾಮಾನ್ಯವಾಗಿ, ಆಗಸ್ಟ್ನಲ್ಲಿ ಬರುವ ಹುಣ್ಣಿಮೆಯನ್ನು ‘ಸ್ಟರ್ಜನ್ ಮೂನ್ ಎಂದು ಕರೆಯಲಾಗುತ್ತದೆ. ಸೂಪರ್ ಬ್ಲೂ ಮೂನ್ ಆಗಸ್ಟ್ನಲ್ಲಿ ಕಾಣಿಸಿಕೊಳ್ಳುವುದರಿಂದ ಇದನ್ನು ‘ಸ್ಟರ್ಜನ್ ಮೂನ್ ಎಂದೂ ಕರೆಯಲಾಗುತ್ತದೆ. ಚಂದ್ರನು ಭೂಮಿಗೆ ಹತ್ತಿರ ಬಂದಾಗ ಈ ಸೂಪರ್ ಮೂನ್ಗಳು ರೂಪುಗೊಳ್ಳುತ್ತವೆ. ಚಂದ್ರನು ಭೂಮಿಗೆ 90 ಪ್ರತಿಶತದಷ್ಟು ಹತ್ತಿರ ಬಂದಾಗ ಸೂಪರ್ ಮೂನ್ ಸಂಭವಿಸುತ್ತದೆ. ಸೂಪರ್ಮೂನ್ ಎಂಬ ಪದವನ್ನು ಖಗೋಳಶಾಸ್ತ್ರಜ್ಞ ರಿಚರ್ಡ್ ನೊಲ್ಲೆ ಅವರು 1979 ರಲ್ಲಿ ಸೃಷ್ಟಿಸಿದ್ದರು.…

Read More

ಹಬ್ಬಗಳು, ಸಮಾರಂಭಗಳು ಮತ್ತು ಮೆರವಣಿಗೆಗಳಲ್ಲಿ ಲೇಸರ್ ಗಳು, ಡಿಜೆಗಳ ಬಳಕೆಯ ಬಗ್ಗೆ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಹಬ್ಬಗಳು, ಸಮಾರಂಭಗಳು ಮತ್ತು ಮೆರವಣಿಗೆಗಳಲ್ಲಿ ಲೇಸರ್ ಗಳು, ಡಿಜೆಗಳ ಬಳಕೆಯ ಕುರಿತು ಬಾಂಬೆ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಲಾಗಿತ್ತು. ಈಗ ಬಾಂಬೆ ಹೈಕೋರ್ಟ್ ಈ ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಿದೆ. ಅಖಿಲ ಭಾರತ ಗ್ರಾಹಕ ಪಂಚಾಯತ್ ಪರವಾಗಿ ಬಾಂಬೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಲೇಸರ್ ಕಿರಣಗಳು ಮತ್ತು ಡಿಜೆಗಳನ್ನು ಹೆಚ್ಚಾಗಿ ಹಬ್ಬಗಳಲ್ಲಿ ಬಳಸಲಾಗುತ್ತದೆ. ಇದು ಅನೇಕ ಜನರ ದೃಷ್ಟಿ ಮತ್ತು ಶ್ರವಣ ಸಾಮರ್ಥ್ಯದ ಮೇಲೆ ಪರಿಣಾಮ ಬೀರಿದೆ. ಕೆಲವರು ಶಾಶ್ವತವಾಗಿ ದೃಷ್ಟಿ ಕಳೆದುಕೊಂಡಿದ್ದಾರೆ. ಆದ್ದರಿಂದ, ಲೇಸರ್ ಕಿರಣಗಳು ಮತ್ತು ಡಿಜೆಗಳ ಬಳಕೆಗೆ ಸಂಬಂಧಿಸಿದಂತೆ ಸೂಕ್ತ ಆದೇಶಗಳನ್ನು ಹೊರಡಿಸಬೇಕೆಂದು ಅರ್ಜಿದಾರರು ಒತ್ತಾಯಿಸಿದ್ದಾರೆ. ಡಿಜೆಗಳು, ದೊಡ್ಡ ಸಂಗೀತ ಮತ್ತು ಲೇಸರ್ ಬೆಳಕು ಸಾಕಷ್ಟು ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತವೆ. ಡಿಜೆ ಅನೇಕ ಜನರ ಹೃದಯ ಬಡಿತವನ್ನು ವೇಗವಾಗಿ ಮಾಡುತ್ತದೆ. ಡಿಜೆಗಳಿಂದ ಉತ್ಪತ್ತಿಯಾಗುವ ತೀವ್ರವಾದ…

Read More

ಆಗಸ್ಟ್ 21, 2024 ರ ಬುಧವಾರ ಭಾರತ್ ಬಂದ್ ಬಗ್ಗೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಚರ್ಚೆ ಭರದಿಂದ ಸಾಗಿದೆ. ಕಾರಣವೇನು ಗೊತ್ತೆ ? ಅಂದು ಯಾವ ಸೇವೆಗಳು ಲಭ್ಯವಾಗಲಿದೆ ? ಯಾವ ಸೇವೆಗಳು ಇರುವುದಿಲ್ಲ ? ಎಲ್ಲಾ ಮಾಹಿತಿ ಇಲ್ಲಿದೆ ನೋಡಿ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪನ್ನು ವಿರೋಧಿಸಿ ಮೀಸಲಾತಿ ಬಚಾವೋ ಸಂಘರ್ಷ ಸಮಿತಿ ಈ ಬಂದ್ ಗೆ ಕರೆ ನೀಡಿದೆ. ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠವು ಆಗಸ್ಟ್ 1, 2024 ರಂದು ಮಹತ್ವದ ತೀರ್ಪನ್ನು ನೀಡಿತು. ಎಸ್ಸಿ ಮತ್ತು ಎಸ್ಟಿ ಗುಂಪುಗಳಲ್ಲಿ ಉಪ-ವರ್ಗಗಳನ್ನು ರಚಿಸಲು ಅವರು ರಾಜ್ಯಗಳಿಗೆ ಅವಕಾಶ ನೀಡಿದರು, “ನಿಜವಾಗಿಯೂ ಅಗತ್ಯವಿರುವವರಿಗೆ ಮೀಸಲಾತಿಯಲ್ಲಿ ಆದ್ಯತೆ ಸಿಗಬೇಕು” ಎಂದು ಹೇಳಿದರು. ಈ ನಿರ್ಧಾರವು ವ್ಯಾಪಕ ಚರ್ಚೆಗೆ ಕಾರಣವಾಗಿದೆ ಮತ್ತು ಭಾರತ್ ಬಂದ್ಗೆ ಕರೆ ನೀಡಿದೆ ಎಂದು ವರದಿಯಾಗಿದೆ. ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸುವುದು ಮತ್ತು ಅದನ್ನು…

Read More

ಕೊರಟಗೆರೆ: 25 ಎಕರೆ ಜಮೀನಿಗಾಗಿ ಗೊಲ್ಲ–ದಲಿತ ಸಮುದಾಯದ ಜನರ ನಡುವೆ ಸಂಘರ್ಷ ಉಂಟಾದ ಘಟನೆ ಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ಸಂಕೇನಹಳ್ಳಿಯ ಗ್ರಾಮದ ಸರಕಾರಿ ಗೋಮಾಳದಲ್ಲಿ ನಡೆದಿದೆ. ಸಂಕೇನಹಳ್ಳಿ ಗ್ರಾಮದ ಸರ್ವೆ ನಂ.15 ಮತ್ತು 16ರಲ್ಲಿನ 25 ಎಕರೇ ಗೋಮಾಳ ಜಮೀನಿದೆ. 25 ಎಕರೆ ಗೋಮಾಳದ ಜಮೀನಿಗೆ ಸಂಕೇನಹಳ್ಳಿಯ 20 ಜನ ದಲಿತ ಕುಟುಂಬ ಅರ್ಜಿ ಸಲ್ಲಿಸಿದೆ. ಕಳೆದ 70 ವರ್ಷದಿಂದ ಸಂಕೇನಹಳ್ಳಿಯ 75 ದಲಿತ ಕುಟುಂಬಗಳಿಗೆ ಸ್ಮಶಾನವೇ ಇಲ್ಲದೇ ಪರದಾಡುತ್ತಿದ್ದಾರೆ. ಅತ್ತ ಗೋಮಾಳದ ಜಮೀನು ಮೇವಿಗಾಗಿ ಉಳಿಸಿಕೊಳ್ಳಲು ಗೊಲ್ಲ ಸಮುದಾಯದ ಅಲೆದಾಡುತ್ತಿದೆ. ಉಳುಮೆ ಮಾಡಲು ಗೋಮಾಳದ ಜಮೀನು ಪಡೆಯಲು ದಲಿತ ಕುಟುಂಬಗಳ ಪರದಾಡುತ್ತಿದೆ. ಒಟ್ಟಿನಲ್ಲಿ 40 ವರ್ಷದ ಗೊಲ್ಲ ಮತ್ತು ದಲಿತರ ನಡುವಿನ ಸಂಘರ್ಷಕ್ಕೆ ಪರಿಹಾರವೇ ಇಲ್ಲದಂತಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಬೆಂಗಳೂರು: ನನ್ನ ಸಿನಿಮಾದ ಕಥೆಗಳಿಗೆ ನನ್ನ ಊರು ಮತ್ತು ಯಕ್ಷಗಾನವೇ ಪ್ರೇರಣೆ ಎಂದು ಖ್ಯಾತ ಸಿನಿಮಾ ನಟ ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಕುಂದಾಪ್ರ ಕನ್ನಡ ಪ್ರತಿಷ್ಠಾನ’ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ‘ಕುಂದಾಪುರ ಕನ್ನಡ ಹಬ್ಬ–2024’ರ ಮೊದಲ ದಿನದ ಸಂಭ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಎಲ್ಲಿಗೆ ಹೋದರೂ, ಏನೇ ಮಾಡಿದರೂ, ಎಲ್ಲಿಂದ ಬಂದಿದ್ದೇವೆ ಎನ್ನುವುದು ಮುಖ್ಯ. ಆ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ನನ್ನ ಸಿನಿಮಾದ ಎಲ್ಲ ಕಥೆಗಳಿಗೂ ಕುಂದಾಪುರದ ನನ್ನೂರು ಕೆರಾಡಿಯೇ ಕಾರಣ, ನಾನು ಬೆಳೆದ ಪರಿಸರವೇ ಪ್ರೇರಣೆ. ಅದರಲ್ಲೂ ಓದದೆಯೇ ರಾಮಾಯಣ–ಮಹಾಭಾರತದ ಸಾರ ತಿಳಿಯಲು ಯಕ್ಷಗಾನ ಕಾರಣ. ‘ಕಾಂತಾರ’ ಸಿನಿಮಾ ಚಿತ್ರೀಕರಣ ಕೂಡ ಕುಂದಾಪುರ ಪರಿಸರದಲ್ಲೇ ಆಗಿರುವುದು ಎಂದು ತಿಳಿಸಿದರು. ನಮ್ಮ ಭಾಷೆ ಸಂಸ್ಕೃತಿ ಮಕ್ಕಳಿಗೆ ಗೊತ್ತಾಗಬೇಕು. ಅದಕ್ಕಾಗಿ ಇಂಥ ಹಬ್ಬಗಳು ಅತ್ಯಗತ್ಯ. ತುಳಸಿ ಕಟ್ಟೆಗಳು ಅಪರೂಪ ಆಗಿರುವ ಈ ಕಾಲದಲ್ಲಿ ಇಲ್ಲಿ ತುಳಸಿ ಕಟ್ಟೆ ಇಟ್ಟು ಉದ್ಘಾಟನೆ ನಡೆಸಿರುವುದು ಉತ್ತಮ…

Read More

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ಆರೋಪ ಸಂಬಂಧ ಕಾನೂನುಬಾಹಿರ ನಿರ್ಣಯ ಕೈಗೊಂಡ ರಾಜ್ಯಪಾಲರು ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹೈಕೋರ್ಟ್​ನಲ್ಲಿ ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ. ಇದೇ ವೇಳೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಆದೇಶದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಚುನಾಯಿತ ಸರ್ಕಾರವನ್ನು ಅಸ್ತಿರಗೊಳಿಸುತ್ತಿದೆ. ಇದು ಪ್ರಜಾಪ್ರಭುತ್ವದ ಮೂಲಭೂತ ತತ್ವಕ್ಕೆ ಧಕ್ಕೆ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ, ಪ್ರಜಾತಂತ್ರಕ್ಕೆ ಧಕ್ಕೆ ಎಂದು ಸಚಿವ ಸಂಪುಟ ನಿರ್ಣಯಿಸಿದೆ. ಎಲ್ಲಾ ರಾಜ್ಯ ಸರ್ಕಾರಗಳ ಎಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ ಸೆಪ್ಟೆಂಬರ್ 3, 2021 ಕ್ಕೆ ಕೇಂದ್ರ ಸರ್ಕಾರವೇ ಕಳುಹಿಸಿರುವ ಸುತ್ತೋಲೆ ಪ್ರಕಾರವೇ ರಾಜ್ಯಪಾಲರು ಪ್ರೊಸೀಜರ್ ಅನುಸರಿಸಿಲ್ಲ.  ಸುತ್ತೋಲೆಯಲ್ಲಿರುವ ನಿರ್ದೇಶನಗಳನ್ನೇ ರಾಜ್ಯಪಾಲರು ಪಾಲಿಸಿಲ್ಲ. ಆದ್ದರಿಂದ ರಾಜ್ಯಪಾಲರ ನಿರ್ಣಯ ಕಾನೂನುಬಾಹಿರ. ಈ ಕಾನೂನುಬಾಹಿರ ತೀರ್ಮಾನದ ವಿರುದ್ಧ ಕಾನೂನು ಹೋರಾಟ ನಡೆಸಲು ಸಚಿವ ಸಂಪುಟ ಸಭೆ ನಿರ್ಣಯಿಸಿದೆ. ಚುನಾಯಿತ ಸರ್ಕಾರವನ್ನು ಕಿತ್ತಾಕುವ…

Read More

ಚೆನ್ನೈ: ಎನ್ ಸಿಸಿ ಕ್ಯಾಂಪ್ ನಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಗೆ  ಲೈಂಗಿಕ ದೌರ್ಜನ್ಯ ಹಾಗೂ ಹಲವು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ನೀಡಿರುವ ಘಟನೆಗೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ 9 ಮಂದಿಯನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಶಿವರಾಮನ್ ಸೇರಿದಂತೆ ಶಾಲೆಯ ಪ್ರಾಂಶುಪಾಲ, ವರದಿಗಾರ, ಇಬ್ಬರು ಶಿಕ್ಷಕರು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಿ, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿದೆ. ಆಗಸ್ಟ್ 5ರಿಂದ 9ರವರೆಗೆ ಕೃಷ್ಣಗಿರಿ ಜಿಲ್ಲೆಯ ಬರಗೂರು ಖಾಸಗಿ ಶಾಲೆಯಲ್ಲಿ ಎನ್‌ಸಿಸಿ ಶಿಬಿರ ಆಯೋಜಿಸಲಾಗಿತ್ತು. ಶಿಬಿರದಲ್ಲಿ 17 ಬಾಲಕಿಯರು ಸೇರಿದಂತೆ ಒಟ್ಟು 41 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಬಿರದಲ್ಲಿ ಲೈಂಗಿಕ ಕಿರುಕುಳ ನಡೆದಿರುವುದು ಶಾಲಾ ಆಡಳಿತ ಮಂಡಳಿಗೆ ತಿಳಿದಿತ್ತು. ಆದರೆ, ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಪ್ರಯತ್ನಿಸಲಾಗಿತ್ತು. ಇದೀಗ ಶಾಲಾ ಆಡಳಿತ ಮಂಡಳಿ ಕೂಡ ಈ ಪ್ರಕರಣದಲ್ಲಿ ತಪ್ಪಿತಸ್ಥ ಸ್ಥಾನದಲ್ಲಿ ನಿಂತಿದ್ದು, ಕಾನೂನು ಕ್ರಮವಾಗುವ ಸಾಧ್ಯತೆ ಇದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೆಂಗಳೂರು: ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಶಾಸಕ  ಎ.ಮಂಜು ಆಗ್ರಹಿಸಿದರು. ಜೆಪಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ಕೊಟ್ಟಿದ್ದಾರೆ. ಪ್ರಾಸಿಕ್ಯೂಷನ್‌ ಗೆ ಅನುಮತಿ ಕೊಟ್ಟ ಮೇಲೆ ರಾಜೀನಾಮೆ ಕೊಡಬೇಕು ಅಂತ ಕಾನೂನಿನಲ್ಲಿ ಇಲ್ಲ. ಆದರೆ ನೈತಿಕತೆ ಅಂತ ಇದೆ. ಲಾಯರ್ ಆಗಿದ್ದವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ನೀಡಬೇಕು ಎಂದು ಅವರು ಒತ್ತಾಯಿಸಿದರು. ಕುಮಾರಸ್ವಾಮಿ ಕೇಸ್‌ಗೆ ರಾಜ್ಯಪಾಲರು ಅನುಮತಿ ಕೊಡಲಿಲ್ಲ ಎನ್ನುತ್ತಾರೆ. ಅವರು ಅಧಿಕಾರದಲ್ಲಿ ಇದ್ದಾಗ ನೋಡಿಕೊಳ್ಳಬೇಕಿತ್ತು. ನನಗೆ ಇರುವ ಮಾಹಿತಿ ಪ್ರಕಾರ ಸುಪ್ರೀಂ ಕೋರ್ಟ್‌ನಲ್ಲಿ ಸ್ಟೇ ಇದೆ. ಅದಕ್ಕೆ ರಾಜ್ಯಪಾಲರು ಅನುಮತಿ ಕೊಟ್ಟಿಲ್ಲ ಎನಿಸುತ್ತದೆ ಎಂದು ಹೇಳಿದರು. ಸಿಎಂ ನೈತಿಕತೆ ಬಗ್ಗೆ ಮಾತನಾಡುತ್ತಾರೆ. ಹೀಗಾಗಿ ಇವರು ತನಿಖೆಗೆ ಅವಕಾಶ ಮಾಡಿಕೊಡಲಿ. ಸಿದ್ದರಾಮಯ್ಯ ನಾನು ಲಾಯರ್ ಅಂತಾರೆ. ಲಾಯರ್ ಆಗಿರುವುದರಿಂದ ನೈತಿಕತೆಯಿಂದ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು…

Read More

ಬೆಂಗಳೂರು: ನಾವು ನಲಪಾಡ್ ಕಡೆಯವರು ಎಂದು ವಿದ್ಯಾರ್ಥಿಯನ್ನು ಬೆದರಿಸಿ, ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 9 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕಿಡ್ನಾಪ್ ಮಾಡಿ ಸುಲಿಗೆ ಮಾಡಿರುವ ಕುರಿತು ನಾಲ್ವರ ವಿರುದ್ಧ ಜೀವನ್‌ ಜೈನ್‌ ಎಂಬ ವಿದ್ಯಾರ್ಥಿ ಆರೋಪ ಮಾಡಿದ್ದಾನೆ. ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್‌ ಜೈನ್‌ ಎಂಬ ವಿದ್ಯಾರ್ಥಿ ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ಮೂರು ಲಕ್ಷ ಸಾಲ ಪಡೆದಿದ್ದ. ಇವೆಂಟ್ ಒಂದರ ವಿಚಾರವಾಗಿ ಹಣ ಪಡೆದಿದ್ದ. ಆದರೆ ಹೇಳಿದ ಸಮಯಕ್ಕೆ ಹಣ ನೀಡಲು ಆಗಿರಲಿಲ್ಲ. ತಡವಾಗಿ ಸಾಲ ತೀರಿಸಿದ್ದ. ಆದರೆ ಕಿಡಿಗೇಡಿಗಳು ಸಾಲ ತೀರಿಸಿದರೂ ಆತನನ್ನು ಬಿಡದೆ ಮತ್ತಷ್ಟು ಹಣಕ್ಕಾಗಿ ಕಿರುಕುಳ ನೀಡಿದ್ದಾರೆ  ಎಂದು ಆರೋಪಿಸಲಾಗಿದೆ. ಲೇಟಾಗಿ ಹಣ ಕೊಟ್ಟಿದ್ದಕ್ಕೆ ಕಿಡ್ನಾಪ್ ಮಾಡಿ ಬೆದರಿಸಲಾಗಿದೆ. ನಾವು ನಲಪಾಡ್ ಹುಡುಗರು, ಹತ್ತು ಲಕ್ಷ ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ. ಆರು ಲಕ್ಷ ರೂಪಾಯಿ ಹಾಕಿಸಿಕೊಂಡಿದ್ದಲ್ಲದೆ ಹತ್ತು…

Read More

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಇಂದಿನಿಂದ ಕಾನೂನು ಹೋರಾಟ ಆರಂಭಿಸಲಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮೂವರು ದೂರುದಾರರನ್ನು ಪ್ರತಿವಾದಿಯನ್ನಾಗಿಸಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ರಾಜ್ಯಪಾಲರು ನಡೆದುಕೊಂಡಿದ್ದಾರೆ. ಅನುಮತಿಗೂ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ರಿಟ್ ಅರ್ಜಿಯಲ್ಲಿ ತಿಳಿಸಲಾಗಿದೆ. ಖಾಸಗಿ ದೂರಿನ ಆಧಾರದ ಮೇಲೆ ಗೌರ್ನರ್ ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್ 17–ಎ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 218ರಡಿ ತನಿಖೆಗೆ ಅನುಮತಿ ನೀಡಿರುವುದು ಕಾನೂನು ಬಾಹಿರವಾಗಿರುವುದರಿಂದ ರದ್ದುಪಡಿಸುವಂತೆ ಸಿಎಂ ಪರ ವಕೀಲ ರವಿವರ್ಮ ಕುಮಾರ್ ವಾದ ಮಂಡಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More