Author: admin

ಕೊರಟಗೆರೆ : ಬೆಸ್ಕಾಂ ವತಿಯಿಂದ ಪ್ರತಿ ತಿಂಗಳ ಮೂರನೇ ಶನಿವಾರದಲ್ಲಿ ನಡೆಯುವ ಗ್ರಾಹಕರ ಸಂವಾದ ಸಭೆಯು ಪಟ್ಟಣದ ಬೆಸ್ಕಾಂ ಕಚೇರಿಯಲ್ಲಿ ಯಶಸ್ವಿಯಾಗಿ ನಡೆಯಿತು.. ಸಭೆಯಲ್ಲಿ ಚನ್ನರಾಯನದುರ್ಗ ಹೋಬಳಿಯ ನೇಗಲಾಲ ಮಜರೆ ಗ್ರಾಮವಾದ ಅನುಪಲು ಮತ್ತು ಮಾರಿಪಾಳ್ಯ ಹಾಗೂ ಮರೇನಾಯಕನಹಳ್ಳಿ  ಸುತ್ತ ಮುತ್ತಲಿನ ಗ್ರಾಮಗಳಲ್ಲಿನ ವಿದ್ಯುತ್ ಸಮಸ್ಯೆಯ ಕುರಿತು ಚರ್ಚೆ ನಡೆಸಲಾಯಿತು.. ಮರೇನಾಯಕನಹಳ್ಳಿ ಗ್ರಾಮದ ಮುಖ್ಯರಸ್ತೆಯಲ್ಲಿನ ಬೀದಿ ದೀಪದ ವಿದ್ಯುತ್ ಕಂಬಗಳು ದುರಸ್ತಿ ಕೆಲಸ ಮತ್ತು ಕೆಲವು ವಿದ್ಯುತ್ ಕಂಬಗಳು ತುಂಬಾ ವರ್ಷಗಳಿಂದ ಬಾಗಿದ್ದು ಅವುಗಳನ್ನು ತಗೆದು ಹೊಸ ಕಂಬ ಹಾಕುವಂತೆ ಮನವಿ ಮಾಡಲಾಗಿದೆ. ಅನುಪಲು ಗ್ರಾಮದ ಅಶೋಕ್ ಮನೆಯಿಂದ ನಾಗರಾಜುರವರ ಮನೆಯವರೆಗೆ ಬೀದಿ ದೀಪದ ವಿದ್ಯುತ್ ಕಂಬಗಳನ್ನು ಅಳವಡಿಸಲು ಹೊಸ ಯೋಜನೆ ರೂಪಿಸಬೇಕೆಂದು ಎ ಇ ಇ ಪ್ರಸನ್ನ ಕುಮಾರ್ ರವರಿಗೆ ಮನವಿ ನೀಡಲಾಯಿತು. ಗ್ರಾಹಕರ ಸಂವಾದ ಸಭೆಯಲ್ಲಿ ಎಇ ಇ ಪ್ರಸನ್ನ ಕುಮಾರ್,ಸಹಾಯಕ ಲೆಕ್ಕಾಧಿಕಾರಿ ನಟರಾಜ್ ಕೆ ವಿ,ಸಹಾಯಕ ಇಂಜಿನಿಯರ್ (ತಾಂತ್ರಿಕ) ಸುಹಾಸ್ ಮತ್ತು ಮಲ್ಲಯ್ಯ,ಪ್ರದೀಪ್ ಎಲ್ಲ ಶಾಖೆಯ ಶಾಖಾಧಿಕಾರಿಗಳು,…

Read More

ಬೀದರ್: ಬೀದರ್ ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ ಕಪಿಲದೇವ್ ಹಾಗೂ ಬೀದರ ಜಿಲ್ಲೆಯ ಮಂಠಾಳ, ಬ.ಕಲ್ಯಾಣ ಸಂಚಾರಿ, ಪ್ರಸ್ತುತ ಮುಡುಬಿ ಪೊಲೀಸ್ ಠಾಣೆಯ ಪಿ.ಎಸ್.ಐ. ಜಯಶ್ರೀ ಅವರು ತಮ್ಮ ಪ್ರಾಮಾಣಿಕತೆ ದಕ್ಷತೆಗಾಗಿ ಮುಖ್ಯಮಂತ್ರಿ ಪದಕ ಪಡೆದುಕೊಂಡಿದ್ದಾರೆ. ಇವರ ಸಾಧನೆಗೆ ಬೀದರ್ ಜಿಲ್ಲಾ ಪೊಲೀಸರು ಅಭಿನಂದಿಸಿದ್ದು, ತಮ್ಮ ಕರ್ತವ್ಯದಲ್ಲಿ ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕೆಲಸ ಮಾಡಿ ಸಾರ್ವಜನಿಕರ ಪ್ರೀತಿಗೆ ಪಾತ್ರರಾಗಿ ಮುಖ್ಯಮಂತ್ರಿ ಪದಕ ಪಡೆದುಕೊಂಡಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಸಾಧನೆ ಬೀದರ್ ಜಿಲ್ಲಾ ಪೊಲೀಸರ ಹೆಮ್ಮೆಯಾಗಿರುತ್ತದೆ. ಮುಂದೆಯು ಕೂಡ ಇದೆ ರೀತಿಯ ಸೇವೆ ಸಮಾಜಕ್ಕೆ ನೀಡುವಂತೆ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಐ.ಪಿ.ಎಸ್. ಆಶಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ತ್ರಿಪುರವಾಸಿನಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. 7 ನೇ ವೇತನ ಆಯೋಗ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರು ಇಂದು ನಮ್ಮಭಿಮಾನ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ವೇದಿಕೆಗೆ ಬರುತ್ತಿದ್ದಂತೆಯೇ ಜೋರಾಗಿ ಕೂಗಿ ರಾಜ್ಯ ಸರ್ಕಾರಿ ನೌಕರರು ಸಂಭ್ರಮಿಸಿ ಸ್ವಾಗತ ಕೋರಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತರಾತುರಿಯಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದರ ಹಿಂದೆ ಕೇಂದ್ರ ಹಾಗೂ ಬಿಜೆಪಿ ನಾಯಕರ ಒತ್ತಡವಿದೆ ಎಂದು ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ನಾಯಕರು ಅವರು ಕುಣಿಸಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ರಾಜ್ಯಪಾಲರ ಸ್ಥಾನಕ್ಕೆ ಇದು ಶೋಭೆ ತರುವುದಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರ ಗಣಿ ಹಗರಣದ ತನಿಖೆಗೆ ಲೋಕಾಯುಕ್ತ ಸಂಸ್ಥೆಯು ಅನುಮತಿ ಕೇಳಿದ್ದರೂ ರಾಜ್ಯಪಾಲರು ಕಳೆದ 10 ತಿಂಗಳಿಂದ ಕಡತವನ್ನು ಮೂಲೆಗೆ ತಳ್ಳಿ ಕೂತಿದ್ದಾರೆ. ಶಶಿಕಲಾ ಜೊಲ್ಲೆಯ ಮೊಟ್ಟೆ ಹಗರಣದ ವಿರುದ್ಧದ ತನಿಖೆಗೆ ಅನುಮತಿ ಕೋರಿದ್ದರು. ಆದರೆ ಈ ಪ್ರಕರಣ ರಾಜ್ಯಪಾಲರ ಯಾವುದೆ ಪ್ರತಿಕ್ರಿಯೆ ಇಲ್ಲದೆ ಸುಮಾರು 2 ವರ್ಷಗಳಿಂದ ಬಾಕಿ ಉಳಿದಿದೆ. ಅದಷ್ಟೇ ಅಲ್ಲ ಮುರುಗೇಶ್ ನಿರಾಣಿ ಮಂತ್ರಿಯಾಗಿದ್ದಾಗ ಬೃಹತ್ ಕೈಗಾರಿಕೆ ಇಲಾಖೆ ವ್ಯಾಪ್ತಿಯಡಿ ಬರುವ ಮಾರ್ಕೆಟಿಂಗ್, ಜಾಹೀರಾತು ಮತ್ತು ಪ್ರಚಾರ ಸಂಸ್ಥೆಯಲ್ಲಿ 2011-15ರ ನಡುವೆ ನಡೆದ ಅಕ್ರಮ ನೇಮಕಾತಿಯ ತನಿಖೆಗೆ ಅನುಮತಿ ಕೋರಿರುವ ಕಡತ…

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯ ಅಂತ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಸಂಬಂಧ ಅವರು ಬರೆದುಕೊಂಡಿದ್ದು,ಈ ಪ್ರಕರಣದ ತನಿಖೆ ವಿಸ್ತೃತ ನಡೆಯಬೇಕೆಂದು ಒತ್ತಾಯಿಸಿ ಜೆಡಿಎಸ್, ಬಿಜೆಪಿ ಪಕ್ಷಗಳು ಬೆಂಗಳೂರಿನಿಂದ ಮೈಸೂರು ನಗರಕ್ಕೆ ಪಾದಯಾತ್ರೆ ನಡೆಸಿದ್ದನ್ನು ಸ್ಮರಿಸಬಹುದು ಎಂದು ಹೇಳಿದ್ದಾರೆ. ನಮ್ಮ ಹೋರಾಟ ಸತ್ಯದ ಪರ ಎಂಬುದನ್ನು ರಾಜ್ಯಪಾಲರು ಕೈಗೊಂಡಿರುವ ಕ್ರಮ ಸಾಬೀತುಪಡಿಸಿದೆ. ಸೂರ್ಯಚಂದ್ರರು ಇರುವುದು ಎಷ್ಟು ಸತ್ಯವೋ ಮೂಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬ ಅಕ್ರಮ ಎಸಗಿದೆ ಎಂಬುದು ಅಷ್ಟೇ ಸತ್ಯ ಎಂದಿದ್ದಾರೆ. ʻಮಾನ್ಯ ಮುಖ್ಯಮಂತ್ರಿಗಳಿಗೆ ಅನ್ಯ ಆಯ್ಕೆಯೇ ಇಲ್ಲ. ಅವರು ಸತ್ಯ ಒಪ್ಪಬೇಕು, ಅಕ್ರಮ ಅಂಗೀಕರಿಸಬೇಕು. ಕೂಡಲೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಾನು ಶುದ್ಧ ಎಂದು ಪದೇ ಪದೆ ಹೇಳುವ ಸಿದ್ದರಾಮಯ್ಯನವರು ಗೌರವಯುತವಾಗಿ ನಿರ್ಗಮಿಸಬೇಕು. ಇಲ್ಲವಾದರೆ, ನಮ್ಮ ಹೋರಾಟ ನಿರಂತರ ಎಂದು…

Read More

ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. 1.08,2024 ರಲ್ಲಿ ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಕಾನೂನು ಚೌಕಟ್ಟಿನಲ್ಲಿ ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಿದ್ದೇವೆ. ಪ್ರಾಸಿಕ್ಯೂಷನ್ ರಾಜಕೀಯ ಪ್ರೇರಿತವಾಗಿದೆ. ರಾಜ್ಯಪಾಲರು ಸಂವಿಧಾನ ವಿರೋಧಿ ಪತ್ರ ಕೊಟ್ಟಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ತಿಳಿಸಿದರು. ಶೋಕಾಸ್ ನೋಟಿಸ್ ಗೆ ಈಗಾಗಲೇ ಉತ್ತರ ನೀಡಲಾಗಿತ್ತು. ಇಂದು ನೇರವಾಗಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಪತ್ರ ಕಳುಹಿಸಿದ್ದಾರೆ. ಇದಕ್ಕೆ ಕಾನೂನಿನ ಮೂಲಕವೇ ಉತ್ತರ ಕೊಡುತ್ತೇವೆ. ಸರ್ಕಾರ ಇಂಥ ಹಗರಣದಲ್ಲಿ ಭಾಗಿಯಾಗಿಲ್ಲ ಎಂದು ರಾಜ್ಯಪಾಲರಿಗೆ ತಿಳಿಸಿದ್ದೇವೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಹೊಸಪೇಟೆ: ತುಂಗಭದ್ರಾ ಡ್ಯಾಂಗೆ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಮಾಡೋದಕ್ಕೆ ಮೊದಲೇ ಹೇಳಿದ್ದೆ. ಅಗ ಅಧಿಕಾರಿಗಳು ಎಲ್ಲಾ ಸರಿ ಇದೆ ಅಂತಾ ಹೇಳಿದರು. ಅಂದು ಮುನ್ನೆಚ್ಚರಿಕೆ ತೆಗೆದುಕೊಂಡಿದಿದ್ದರೆ ಈ ಘಟನೆಗೆ ಕಾರಣ ಆಗುತ್ತಿರಲಿಲ್ಲ ಅಂತ ಡ್ಯಾಂ ಗೇಟ್ ತಜ್ಞ ಕನ್ನಯ್ಯ ನಾಯ್ಡು ಹೇಳಿದ್ದಾರೆ. ನಗರದ ಟಿಬಿಡ್ಯಾಂನ ಚಕ್ರವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆ ವಿಷಯ ತಿಳಿದ ನಂತರ ಮೂರು ರಾಜ್ಯಗಳ ನೀರಾವರಿ ಹಾಗೂ ಡ್ಯಾಂ ಅಧಿಕಾರಿಗಳ ಜತೆ ಸ್ಟಾಪ್ ಲಾಗ್ ಗೇಟ್ ಅಳವಡಿಕೆಗೆ ಚರ್ಚೆ ಮಾಡಿ ಸಿಡಬ್ಲೂಸಿ ಅಪ್ರೂವಲ್ ತಗೊಂಡೆವು. ಶುಕ್ರವಾರ ರಾತ್ರಿ ನೀರಿನಲ್ಲಿ ಎಲಿಮೆಂಟ್ ಅಳವಡಿಕೆ ಯಶಸ್ಸು ಆಗಿದೆ. ಶನಿವಾರ ಎರಡು ಎಲಿಮೆಂಟ್ ಅಳವಡಿಕೆ ಮಾಡುತ್ತೇವೆ. ಸೋಮವಾರಕ್ಕೆ ಮಿಕ್ಕಿದ್ದು ಕೆಲಸ ಮುಗಿಯುತ್ತೆ ಅಂತ ತಿಳಿಸಿದ್ರು. ಜಲಾಶಯ ಒಂದು 100 ವರ್ಷ ಬಾಳಿಕೆ ಬರುತ್ತೆ. ಕ್ರಸ್ಟ್ ಗೇಟ್ ಗಳು 50 ವರ್ಷ ಗೇಟ್ ಬಾಳಿಕೆ ಬರುತ್ತೆ. ಸದ್ಯ ಟಿಬಿಡ್ಯಾಂ ಗೇಟ್ 70 ವರ್ಷ ಆಗಿದೆ. ಗೇಟ್ ಬದಲಿಸಿದರೆ, ಇನ್ನು 30…

Read More

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಿಂದುಳಿದ ವರ್ಗಗಳ ವೇದಿಕೆ, ಕುರುಬರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಹೋರಾಟ ಆರಂಭಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ವತಿಯಿಂದ ಮೈಸೂರಿನ ನ್ಯಾಯಾಲಯದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ, ರಾಜ್ಯಪಾಲ ಗೆಹ್ಲೋಟ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿ, ಶಾ ಸೇವಕನಾಗಿರುವ ಗೆಹ್ಲೋಟ್ ಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಶಾಲಾ ಬಸ್ ಹರಿದು ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ವಿನಾಯಕನಗರದಲ್ಲಿ ನಡೆದಿದೆ. ತೇಜಸ್(14) ವರ್ಷದ ಬಾಲಕ ಮೃತ ದುರ್ದೈವಿಯಾಗಿದ್ದಾನೆ. ಬೈಕ್ ನಿಂದ ಬಾಲಕ ಆಯತಪ್ಪಿ ಕೆಳಗೆ ಬಿದ್ದಿದ್ದು, ಈ ವೇಳೆ ಬಸ್ ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೇಜಸ್ 9ನೇ ತರಗತಿಯಲ್ಲಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ಬೈಕ್ ನಿಂದ ಬಿದ್ದ ವೇಳೆ ಬಾಲಕನ ತಲೆಯ ಮೇಲೆಯೇ ಬಸ್ ನ ಚಕ್ರ ಹರಿದಿದೆ. ಪರಿಣಾಮವಾಗಿ ಬಾಲಕ ಸಾವನ್ನಪ್ಪಿದ್ದಾನೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ. ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಪಾವಗಡ: ವಿದ್ಯುತ್ ಆಘಾತದಿಂದ ಇಬ್ಬರು ಯುವಕರು ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಪಾವಗಡ ತಾಲ್ಲೂಕಿನ ಟಿ.ಎನ್.ಬೆಟ್ಟದ ಹೊರವಲಯದ ಸರ್ವೇ ನಂಬರ್ 293 ರ ಜಮೀನಿನಲ್ಲಿ ನಡೆದಿದೆ. ಅನಿಲ್ ಕುಮಾರ್(29), ಪುಟ್ಟರಾಜು(35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ರೈತಾಪಿವರ್ಗದವರಾಗಿದ್ದಾರೆ. ಸುಮಾರು 3 ಎಕರೆ ಜಮೀನಿನಲ್ಲಿ ಇವರು ಶೇಂಗಾ ಬಿತ್ತನೆ ಮಾಡಿದ್ದರು. ಕಾಡು ಪ್ರಾಣಿಗಳಿಂದ ಬೆಳೆ ಉಳಿಸಿಕೊಳ್ಳಲು ಪ್ರತಿನಿತ್ಯ ಹೊಲಕ್ಕೆ ಬಂದು ನೀರು ಹಾಯಿಸುತ್ತಿದ್ದರು. ಶುಕ್ರವಾರ ರಾತ್ರಿಯೂ ಹೊಲಕ್ಕೆ ಬಂದಿದ್ದರು. ರಾತ್ರಿ ವಿಪರೀತ ಮಳೆ ಕೂಡ ಇತ್ತು. ಬೆಳಗ್ಗಿನ ವೇಳೆ ಇಬ್ಬರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಹೊಲಕ್ಕೆ ತಂತಿಬೇಲಿ ಕಟ್ಟಿದ್ದರು. ಆದರೆ ವಿದ್ಯುತ್ ಸಂಪರ್ಕಕೊಟ್ಟಿರಲಿಲ್ಲ, ಈ ಹುಡುಗರು ನಮಗೆ ಗೊತ್ತಿಲ್ಲದೆ ವಿದ್ಯುತ್ ಸಂಪರ್ಕ ಕೊಟ್ಟಿದ್ದರೋ ಗೊತ್ತಿಲ್ಲ ಅಂತ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ. ಘಟನೆಯ ಮಾಹಿತಿ ತಿಳಿದು ಕೂಡಲೇ ಪಾವಗಡ ಅರಸೀಕೆರೆ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ತಾರಾಸಿಂಗ್ ಮತ್ತು ಮುಖ್ಯಪೇದೆ ಸಿದ್ದೇಶ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು…

Read More