Subscribe to Updates
Get the latest creative news from FooBar about art, design and business.
- ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
- ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
- ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
- ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
- ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
- ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
- ತುಮಕೂರು: ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
- ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
Author: admin
ಭುವನೇಶ್ವರ : ಹೊಟೇಲ್ ನಲ್ಲಿ ಇಬ್ಬರು ಯುವತಿಯರ ಜೊತೆಗೆ ಸರಸವಾಡುತ್ತಿದ್ದ ಪತಿಯನ್ನು ಪತ್ನಿ ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ಭುವನೇಶ್ವರದ ಪಾಟಿಯಾ ಪ್ರದೇಶದಲ್ಲಿ ನಡೆದಿದೆ. ಪತಿಯ ಅನೈತಿಕ ಸಂಬಂಧದಿಂದ ಬೇಸತ್ತು ಹೋಗಿದ್ದ ಪತ್ನಿ ಇನ್ಫೋಸಿಟಿ ಪೊಲೀಸರ ಸಹಕಾರದೊಂದಿಗೆ ಹೊಟೇಲ್ ಗೆ ನುಗ್ಗಿದ್ದಾಳೆ. ಮುಂಜಾನೆ 3 ಗಂಟೆಯ ವೇಳೆಗೆ ಆಕೆಯ ಪತಿ ಇಬ್ಬರು ಬೆಂಗಾಲಿ ಯುವತಿಯರೊಂದಿಗೆ ಸರಸ ಸಲ್ಲಾಪದಲ್ಲಿ ನಿರತನಾಗಿದ್ದ. ಈ ವೇಳೆ ರೆಡ್ ಹ್ಯಾಂಡ್ ಆಗಿ ಪತ್ನಿ ಹಾಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ದಾಳಿ ವೇಳೆ ಹೊಟೇಲ್ ನಲ್ಲಿ ಮದ್ಯದ ಬಾಟಲಿಗಳು, ಆಕ್ಷೇಪಾರ್ಹ ವಸ್ತುಗಳು ಸಿಕ್ಕಿವೆ. ತನ್ನ ಪತಿ ಇಂಜಿನಿಯರ್ ಆಗಿದ್ದ ಇದೀಗ ಆತ ತನ್ನ ವೃತ್ತಿ ಬದಲಿಸಿದ್ದಾನೆ. ಸೆಕ್ಸ್ ದಂಧೆ ನಡೆಸ್ತಾ ಇದ್ದಾನೆ ಎನ್ನುವ ಶಂಕೆ ಇದೆ ಅಂತ ಮಹಿಳೆ ಆರೋಪಿಸಿದ್ದು, ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಆರೋಪಿ ಪತಿ ಹಾಗೂ ಇಬ್ಬರು ಯುವತಿಯರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಪತಿ ಸದ್ಯ ರ್ಯಾಪರ್ ಆಗಿ ಕೆಲಸ…
ಕಲಬುರಗಿ: ಆಟೋ ಚಾಲಕರ ಸಂಘದ ಮುಖಂಡರು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ವೇಳೆ ಮಹಾತ್ಮ ಗಾಂಧಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳ ಜತೆಗೆ ಟಿಪ್ಪು ಸುಲ್ತಾನ್ ಫೋಟೊ ಇರಿಸಿ ಪೂಜಿಸಿದ ಘಟನೆ ನಗರದ ಹುಮನಾಬಾದ್ ರಿಂಗ್ ರೋಡ್ ಸಮೀಪ ನಡೆದಿದೆ. ಧ್ವಜಸ್ತಂಭದ ಬದಿಯಲ್ಲಿ ಗಾಂಧೀಜಿ ಮತ್ತು ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಇರಿಸಿ ಪೂಜಿಸುವ ಶಿಷ್ಟಾಚಾರವಿದೆ. ಆದರೆ, ಆಟೋ ಸಂಘದವರು ಟಿಪ್ಪು ಫೋಟೊ ಕೂಡ ಇರಿಸಿ ಪೂಜೆ ಸಲ್ಲಿಸಿದ್ದರು. ವಿಷಯ ತಿಳಿದು ಸಬ್ ಅರ್ಬನ್ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ಟಿಪ್ಪು ಫೋಟೋ ತೆಗೆಯುವಂತೆ ಸೂಚಿಸಿದರು. ತೆಗೆಯುವುದಾದರೆ ಮೂವರ ಫೋಟೊಗಳನ್ನೂ ತೆಗೆಯುತ್ತೇವೆ. ಟಿಪ್ಪು ಫೋಟೊ ಮಾತ್ರ ತೆಗೆಯುವುದಿಲ್ಲ ಎಂದು ಸಂಘದವರು ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ ಪೊಲೀಸರು ಗೊಂದಲದಲ್ಲಿ ಸಿಲುಕಿದರು. ಧ್ವಜಸ್ತಂಭದ ಬಳಿ ಟಿಪ್ಪು ಫೋಟೊ ಇರಿಸಿದ್ದನ್ನು ತೆರವುಗೊಳಿಸಿದ್ದೇವೆ. ಯಾರಾದರೂ ಮುಂದೆ ಬಂದು ದೂರು ದಾಖಲಿಸಿದರೆ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಶತಮಾನ ಕಂಡ ಶಾಲಾ ಆವರಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಧ್ವಜಾರೋಹಣವನ್ನು ಗ್ರಾಮಪಂಚಾಯಿತಿ ಅಧ್ಯಕ್ಷ ಸೈಯದ್ ಶಾನವಾಜ್ ನೆರವೇರಿಸಿದರು. ಎಲ್ಲಾ ಶಾಲಾ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಇದೇ ಸಂದರ್ಭದಲ್ಲಿ ಪಿಡಿಓ ಶ್ರೀರಾಮನಾಯ್ಕ, ಬಾಲಕರ ಶಾಲೆಯ ಮುಖ್ಯ ಶಿಕ್ಷಕ ಐ.ಎ.ನಾರಾಯಣಪ್ಪ ಹಾಗೂ ಎಲ್ಲಾ ಶಿಕ್ಷಕರು ಮತ್ತು ಗ್ರಾಮಸ್ಥರು ಇದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಗೊರವನಹಳ್ಳಿ ಮಹಾಲಕ್ಷ್ಮಿ ದೇಗುಲದಲ್ಲಿ ಇಂದು ಅಪಾರ ಸಂಖ್ಯೆಯ ಭಕ್ತರು ವರಮಹಾಲಕ್ಷ್ಮಿ ದರ್ಶನ ಪಡೆದರು. ಕೊರಟಗೆರೆ ತಾಲ್ಲೂಕಿನ ಗೊರವನಹಳ್ಳಿ ವರಮಹಾಲಕ್ಷ್ಮಿ ದೇಗುಲಕ್ಕೆ ಇಂದು ಬೆಳಗ್ಗೆಯಿಂದಲೂ ಸಾವಿರಾರು ಮಂದಿ ಭಕ್ತರು ಪೂಜಿಸಲಿಸುತ್ತಿದ್ದಾರೆ. ಅಲ್ಲದೆ ಬೆಳಗ್ಗೆ 5ರಿಂದಲೂ ವಿಶೇಷ ಕುಂಕುಮಾರ್ಚನೆ ವಿವಿಧ ಹೋಮ ಹವನಗಳನ್ನು ನಡೆಸಲಾಗುತ್ತಿದೆ. ದೇಗುಲದ ಕಾರ್ಯಕಾರಿ ಸಮಿತಿ ವತಿಯಿಂದ ಭಕ್ತರ ಅನುಕೂಲಕ್ಕಾಗಿ ಪೂರಕ ವ್ಯವಸ್ಥೆ ಮಾಡಲಾಗಿದೆ. ಬರುವ ಭಕ್ತರಲ್ಲರಿಗೂ ಭೋಜನದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಬೆಂಗಳೂರು ನೆರೆಯ ಆಂಧ್ರಪ್ರದೇಶ ಸೇರಿದಂತೆ ವಿವಿಧ ಜಿಲ್ಲೆಗಳಿಂದಲೂ ಕೂಡ ಭಕ್ತರು ಬಂದು ದರ್ಶನ ಪಡೆಯುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 20, 21 ಹಾಗೂ 22 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು ಕನ್ನಡ ಎಂದ ತಕ್ಷಣ ಎಲ್ಲರಿಗೂ ಮನಸ್ಸಿನಲ್ಲಿ ಸಂತೋಷ, ಮಂಡ್ಯ ಜಿಲ್ಲೆಯಲ್ಲಿ ಇದು ಮೂರನೇ ಬಾರಿ ಸಾಹಿತ್ಯ ಸಮ್ಮೇಳನದ ಆತಿಥ್ಯ ದೊರಕಿರುವುದು ಸಂತೋಷದ ವಿಷಯವಾಗಿದೆ ಎಂದರು. ಇಂದು ಆಯೋಜಿಸಿರುವ ಸಭೆಯು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡುವ ಕಾರ್ಯಕ್ರಮವಾಗಿದೆ. ಸಮಿತಿಯಲ್ಲಿರುವ ಪ್ರತಿಯೊಬ್ಬರು ಯಾವುದೇ ಲೋಪ ಉಂಟಾಗದಂತೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿ. ಶಾಸಕರು ಹಾಗೂ ಇನ್ನಿತರ ಗಣ್ಯರನ್ನು ಸಮಿತಿಗಳ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬೇರೆ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಗಳಿಂದ ಕನ್ನಡಾಭಿಮಾನಿಗಳನ್ನು ಆಗಮಿಸುವಂತೆ ಸಮ್ಮೇಳನವನ್ನು ಸಜ್ಜುಗೊಳಿಸೋಣ, ಪ್ರತಿಯೊಬ್ಬರಿಗೂ ಆಹ್ವಾನ ನೀಡೋಣ ಎಂದರು. ಎಲ್ಲಾ ಸಮಿತಿಯು ಸಮನ್ವಯದಿಂದ ಕಾರ್ಯನಿರ್ವಹಿಸೋಣ ಯಾವುದೇ ಗೊಂದಲ ಇದ್ದರೆ…
ಪಾವಗಡ: ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿಯ ಸಿದ್ದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಮುಖ್ಯ ಶಿಕ್ಷಕ ರಾಜಣ್ಣ ಎಸ್. ಮಾತನಾಡಿ, ಅನೇಕ ಮಹನೀಯರ ಹೋರಾಟ ತ್ಯಾಗ ಬಲಿದಾನದಿಂದ ಭಾರತಕ್ಕೆ ಬ್ರಿಟೀಷರಿಂದ ನಮಗೆ ಸ್ವಾತಂತ್ರ್ಯ ದೊರೆತಿದೆ. ಭವ್ಯ ಭಾರತಕ್ಕಾಗಿ ಪ್ರತಿಯೊಬ್ಬರು ಸಂಕಲ್ಪ ಮಾಡಿದಾಗ ಮಾತ್ರ ಬಲಿಷ್ಠ ಭಾರತ ನಿರ್ಮಾಣ ಸಾಧ್ಯವಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಉತ್ತಮವಾಗಿ ಓದಬೇಕು. ಭಾರತದ ಇತಿಹಾಸವನ್ನು ಅರಿತು ಬೆಳೆಯಬೇಕು. ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಂಡು ವಿಶ್ವದ ನಾಯಕರನ್ನಾಗಿ ಭಾರತವನ್ನು ರೂಪಿಸಬೇಕು ಎಂದು ತಿಳಿಸಿದರು. ಜಿಲ್ಲಾ ಮಟ್ಟದ ವಿಜ್ಞಾನ ಮಾದರಿ ರಚನಾ ಸ್ಪರ್ಧೆಯಲ್ಲಿ ವಿಜೇತನಾಗಿರುವ ಶಾಲಾ ವಿದ್ಯಾರ್ಥಿಯಾದ ಜಶ್ವಂತ್ ಎಂ. ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಅದರಂತೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿನಿ ಮುಂದಣಯನ್ನು ಸನ್ಮಾನಿಸಲಾಯಿತು. ಶಾಲಾ ಭೂದಾನಿ ಕುಟುಂಬಸ್ಥರಾದ ಹನುಮಂತರಾಯಪ್ಪ ಮತ್ತು ಶಾಲಾ ಸಮಿತಿ ಅಧ್ಯಕ್ಷರು ಗೋಪಾಲಪ್ಪ ಈರ್ವರೂ ಸೇರಿ ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು ಕವಾಯತು ಮೂಲಕ ಧ್ವಜ ವಂದನೆ ಸಲ್ಲಿಸಿದರು. ಗ್ರಾಮ…
ಕೊರಟಗೆರೆ: ತಾಲೂಕಿನ ಮಲ್ಲೇ ಕಾವು ಗ್ರಾಮದ ಸುವರ್ಣಮುಖಿ ಪ್ರೌಢಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸ್ನೇಹ ಪ್ರಿಯ ಸಮೂಹದಿಂದ ಆನಂದ್ ಕುಮಾರ್, ಪ್ರಸನ್ನ ಕುಮಾರ್, ಸುಬ್ರಹ್ಮಣ್ಯ, ಶ್ರೀನಿವಾಸಯ್ಯ, ಮಧು, ಗೋವಿಂದರಾಜು ಮತ್ತು ಸುವರ್ಣಮುಖಿ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಚಂದ್ರಶೇಖರ್, ಮಹದೇವಸ್ವಾಮಿ, ಸಂಧ್ಯಾ ರಾಣಿ, ಶ್ವೇತಾ ಸಂತೋಷ ಕುಮಾರಿ, ಲಕ್ಷ್ಮಿ, ಶೀಲಾವತಿ, ಕೊಂಡಮ್ಮ, ಶಿವಮ್ಮ, ಸುಧಾ ಶಿಕ್ಷಕರಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಮೂಹದವರಿಗೆ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್, ತುಮಕೂರು ಕಾರ್ಯದರ್ಶಿಯಾದ ಪ್ರವೀಣ್ ಕುಮಾರ್, ಪತ್ರಕರ್ತರ ಧ್ವನಿ ರಾಜ್ಯ ಕಮಿಟಿ, ಬಿ.ಜಿ.ಸಾಗರ್, ತುಮಕೂರು ನ್ಯೂಸ್ ಚಾನೆಲ್, ಟಾರ್ಗೆಟ್ ಟ್ರೂಥ್ ವರದಿಗಾರ ಕೊರಟಗೆರೆ ತಾಲೂಕ್, ರಘು ನಂದನ್ ಟಿ.ಆರ್.ನಟರಾಜ್, ಪ್ರಜಾವಾಣಿ ದಿನಪತ್ರಿಕ ವಿತರಕರು, ತಿಮ್ಮೇಗೌಡ ಅವರಿಗೆ ಸನ್ಮಾನವನ್ನು ಏರ್ಪಡಿಸಿದ್ದರು. ಮತ್ತು ಎಂಟನೇ ತರಗತಿ 9ನೇ ತರಗತಿ ಹತ್ತನೇ ತರಗತಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಏರ್ಪಡಿಸಿದ್ದರು. ವರದಿ: ಹನುಮಂತರಾಯಪ್ಪ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಪಾವಗಡ: ಇಂದು ಪಾವಗಡದ ಶಾಸಕರಾದ ಹೆಚ್.ವಿ.ವೆಂಕಟೇಶ್ ಅವರು ಶ್ರೀರಾಮಕೃಷ್ಣ ಸೇವಾಶ್ರಮದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ನಡೆಯುತ್ತಿರುವ ಉತ್ತರ ಕರ್ನಾಟಕ ಹಾಗೂ ಕೇರಳದ ವಯನಾಡು ಪ್ರವಾಹ ಪರಿಹಾರ ಕಾರ್ಯಗಳ ಸಿದ್ಧತೆಯನ್ನು ವೀಕ್ಷಿಸಿದರು. ಸ್ವಾಮಿ ಜಪಾನಂದಜೀ ಮಹಾರಾಜ್ ರವರ ದೇಶವ್ಯಾಪಿ ಕಾರ್ಯಯೋಜನೆಗಳನ್ನು ಕಂಡು ಇದೇ ವೇಳೆ ಮುಕ್ತಕಂಠದಿಂದ ಅಭಿನಂದಿಸಿದರು ಪಾವಗಡ ತಾಲ್ಲೂಕಿನಲ್ಲಿ ಸ್ವಾಮಿ ಜಪಾನಂದಜೀ ಮಹಾರಾಜ್ ನಡೆದಾಡುವ ದೇವರಂತೆ ಕಾರ್ಯವಹಿಸುತ್ತಾ ನಾನಾ ರೀತಿಯ ಸೇವಾ ಯೋಜನೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅಹರ್ನಿಷಿ ಸೇವೆಯನ್ನು ಸಲ್ಲಿಸುತ್ತಿರುವುದು ನಮ್ಮೆಲ್ಲರ ಭಾಗ್ಯವೇ ಸರಿ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು, ರಾಜಕೀಯ ಮುತ್ಸದ್ಧಿಗಳು ಹಾಗೂ ಇತರರು ಶಾಸಕರೊಂದಿಗೆ ಕೆಲಹೊತ್ತು ಸ್ವಾಮೀಜಿಯವರ ಕಾರ್ಯವೈಖರಿಯನ್ನು ವೀಕ್ಷಿಸಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು : ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಮುಗಿಸಿ ವಾಪಸ್ ಮನೆಗೆ ತೆರಳುವ ಸಂದರ್ಭದಲ್ಲಿ ಎರಡನೇ ತರಗತಿ ವಿದ್ಯಾರ್ಥಿ ಒಬ್ಬ ವಿದ್ಯುತ್ ತಂತಿತಗುಲಿ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ, ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿ ಎಚ್. ಕಾವಲ್ ಬಳಿ ನಡೆದಿದೆ. ಹೇಮಂತ್ 8 ಮೃತ ದುರ್ದೈವಿ ವಿದ್ಯಾರ್ಥಿಯಾಗಿದ್ದಾನೆ. ಹೆಚ್.ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್ ಇಂದು ಬೆಳಗ್ಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆ ಬದಿ ಇದ್ದ ವಿದ್ಯುತ್ ತಂತಿ ಬಿದ್ದಿತ್ತು, ಆಕಸ್ಮಾತ್ ಅದನ್ನು ಮುಟ್ಟಿದ ಸಂದರ್ಭದಲ್ಲಿ ಸ್ಥಳದಲ್ಲಿಯೇ ವಿದ್ಯುತ್ ಸ್ಪರ್ಶಿಸಿ ಆತ ಮೃತಪಟ್ಟಿದ್ದಾನೆ. ಹಲವು ಬಾರಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದರೂ ಕೂಡ ಸರಿಪಡಿಸುವ ಪ್ರಯತ್ನದಲ್ಲಿ ಅಧಿಕಾರಿಗಳು ಮುಂದಾಗಿರಲಿಲ್ಲ ಈಗ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಸಿರಾ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ಸುಮಾರು 30 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಅಂಗನವಾಡಿ ಕೇಂದ್ರವನ್ನು ಅದೇ ಸ್ಥಾನದಲ್ಲಿ ಪುನಃ ಸ್ಥಾಪಿಸುವಂತೆ ಒತ್ತಾಯಿಸಿ, ಬಹುಜನ ಸಮಾಜ ಪಾರ್ಟಿ(BSP) ತುಮಕೂರು ಘಟಕದ ನಗರಾಧ್ಯಕ್ಷ ದಿನೇಶ್ ಬಾಬು ಕೆ.ಬಿ. ಇವರ ನೇತೃತ್ವದಲ್ಲಿ ತುಮಕೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ಘಟನೆಯ ವಿವರ: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ 34ನೇ ವಾರ್ಡ್ ನ ಕ್ಯಾತ್ಸಂದ್ರ ಕಾಲೋನಿ(ಸುಭಾಷ್ ನಗರ) 1992—93ನೇ ಸಾಲಿನಲ್ಲಿ ಸರ್ಕಾರಿ ಜಾಗದಲ್ಲಿ ರೋಜ್’ಗಾರ್ ಯೋಜನೆ ಅಡಿಯಲ್ಲಿ ಅಂಗನವಾಡಿ ನಿರ್ಮಿಸಿ ಸುಮಾರು 30 ವರ್ಷಗಳ ಕಾಲ ಸುಲಲಿತವಾಗಿ ನಡೆಸಿಕೊಂಡು ಬರಲಾಗಿತ್ತು. ಕಳೆದೆರಡು ವರ್ಷಗಳಿಂದ ಕಟ್ಟಡ ಶಿಥಿಲಗೊಂಡ ಕಾರಣ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿಶು ಅಭಿವೃದ್ಧಿ ಇಲಾಖೆಯು ಅದೇ ಕಾಲೋನಿಯಲ್ಲಿ ಬಾಡಿಗೆ ಮನೆಯಲ್ಲಿ ಅಂಗನವಾಡಿ ಕೇಂದ್ರವನ್ನು ನಡೆಸುತ್ತಿದೆ. ಈ ನಡುವೆ ಶಿಶು ಅಭಿವೃದ್ಧಿ ಇಲಾಖೆ ಮತ್ತು ಸ್ಥಳೀಯರ ಮನವಿ ಮೇರೆಗೆ ತುಮಕೂರು ನಗರದ ಶಾಸಕ ಜ್ಯೋತಿ ಗಣೇಶ್ ಸ್ಮಾರ್ಟ್ ಸಿಟಿ ಯೋಜನೆಯ ಅನುದಾನದಲ್ಲಿ ನೂತನ ಕಟ್ಟಡ ಕಟ್ಟಲು ಶಂಕುಸ್ಥಾಪನೆ ನೆರೆವೇರಿಸಿದ್ದಾರೆ. ಆದರೆ ಶಿಶು…