Subscribe to Updates
Get the latest creative news from FooBar about art, design and business.
- ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
- ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
- ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
- ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
- ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
- ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
- ತುಮಕೂರು: ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
- ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
Author: admin
ಕಲಾವಿದರ ಸಂಘದ ಕಟ್ಟಡದಲ್ಲಿ ಹಲವು ಬಗೆಯ ಪೂಜೆ ಮಾಡಲಾಗಿದೆ. ಇದರಲ್ಲಿ ಅನೇಕ ಕಲಾವಿದರು ಭಾಗಿ ಆಗಿದ್ದಾರೆ. ನಟ ಜಗ್ಗೇಶ್ ಕೂಡ ಆಗಮಿಸಿ ಈ ಪೂಜೆಯ ಬಗ್ಗೆ ಮಾತನಾಡಿದ್ದಾರೆ. ಇಂದು (ಆ.14) ನಡೆದ ಪೂಜೆ ದರ್ಶನ್ ಸಲುವಾಗಿ ಮಾಡಿದ್ದು ಎಂಬ ಗುಮಾನಿ ಕೂಡ ಇದೆ. ಆ ಕುರಿತಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಜಗ್ಗೇಶ್ ಅವರು ನೇರವಾಗಿ ಉತ್ತರ ನೀಡಿದ್ದಾರೆ. ‘ನನಗೆ ಕೂಡ ಆರಂಭದಲ್ಲಿ ಅದೇ ರೀತಿಯ ಮಾಹಿತಿ ಬಂತು. ದರ್ಶನ್ಗಾಗಿ ಪೂಜೆ ಆಗಿದ್ದರೆ ನಾನು ಕೂಡ ಬರುತ್ತಿರಲಿಲ್ಲ. ಅದು ಬೇರೆ ಆಯಾಮ ಪಡೆದುಕೊಳ್ಳುತ್ತಿತ್ತು. ಆದರೆ ಇದು ಅದಲ್ಲ. ಕಲಾವಿದರ ಒಳಿತಿಗಾಗಿ ಈ ಪೂಜೆ ನಡೆದಿದೆ. ಕೆಲವರಿಗೆ ಮಾಹಿತಿ ಕೊರತೆ ಆಗಿರಬಹುದು. ಹಾಗಾಗಿ ಅಪಾರ್ಥ ಮಾಡಿಕೊಂಡಿದ್ದಾರೆ. ಅನೇಕರು ಬೇರೆ ವಲಯಗಳಿಂದ ನನಗೆ ಫೋನ್ ಮಾಡಿ ಕೇಳಿದರು. ನನಗೂ ಅನುಮಾನ ಬಂತು. ವಿಚಾರಿಸಿದಾಗ ಆ ಥರ ಅಲ್ಲ ಎಂಬುದು ಗೊತ್ತಾದಮೇಲೆ ನಾನು ಕೂಡ ಬಂದೆ’ ಎಂದು ಜಗ್ಗೇಶ್ ಹೇಳಿದ್ದಾರೆ. ‘ನಾಗದೇವರು ಸಲಹೆ ನೀಡಿದೆ. ತಂದೆ-ತಾಯಿ ಮುಂದಿನ…
ಪಾವಗಡ: ಭಾರತದ 78ನೇಯ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕರೆಕೊಟ್ಟಿರುವ ಹರ್ ಗರ್ ತಿರಂಗ ಅಭಿಯಾನದ ಪ್ರಯುಕ್ತ ಬುಧವಾರ ಮಧ್ಯಾಹ್ನ ಒಂದು ಗಂಟೆಯ ಸಂದರ್ಭದಲ್ಲಿ ಪಾವಗಡ ಪಟ್ಟಣದ ತುಮಕೂರು ರಸ್ತೆಯಲ್ಲಿರುವಂತಹ ಭಾರತೀಯ ಜನತಾ ಪಕ್ಷದ ಮಂಡಲ ಕಚೇರಿಯ ಬಳಿ ತಾಲೂಕು ಬಿಜೆಪಿ ಅಧ್ಯಕ್ಷ ರಂಗಣ್ಣ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತ 78ನೇ ಸ್ವತಂತ್ರ ದಿನೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಅಂತಹ ಸುಸಂದರ್ಭದಲ್ಲಿ ಭಾರತದ ಐಕ್ಯತೆಯ ಬಗ್ಗೆ ಮತ್ತು ಭಾರತ ದೇಶದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನ ನೆನೆಯುವ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲಿ ದೇಶಭಕ್ತಿಯ ದ್ವೀಪವನ್ನು ಉಜ್ವಲಿಸುವ ನಿಟ್ಟಿನಲ್ಲಿ ಮನೆಮನೆಗಳ ಮೇಲೆ ತಿರಂಗ ಧ್ವಜವನ್ನು ಹಾರಿಸಲು ಸರ್ಕಾರ ಕರೆ ಕೊಟ್ಟಿದ್ದು, ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂದು ಮನವಿ ಮಾಡಿಕೊಂಡರು ಬೈಕ್ ರ‍್ಯಾಲಿಯು ಪಟ್ಟಣದ ತುಮಕೂರು ರಸ್ತೆ, ಬಳ್ಳಾರಿ ರಸ್ತೆ, ಶನಿ ಮಹಾತ್ಮ ವೃತ್ತ ಸೇರಿದಂತೆ ವಿವಿಧ ರಸ್ತೆಗಳಲ್ಲಿ ನಡೆಸಲಾಗಿದೆ ಈ ಸಂದರ್ಭದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಆಲ್ಕುಂದಿರಾಜ್, ನವೀನ್ ಸೀತಾರಾಂ, ಶಿವಕುಮಾರ್ ಸಾಕೇಲ್,ರಾಮಾಂಜಿ,…
ತುಮಕೂರು: ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ತುಮಕೂರು ನಗರದಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ನ ಪದಾಧಿಕಾರಿಗಳು ಹಾಗೂ ಸದಸ್ಯರು ಕ್ಯಾಂಡಲ್ ಲೈಟ್ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ವೈದ್ಯರು ದೀಪ ಬೆಳಗಿಸಿ ಅತ್ಯಾಚಾರ ಹಾಗೂ ಕೊಲೆಗೆ ಹಿಡಾದ ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿ ಕೋರಿದರು ಅಲ್ಲದೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಚ್ಚಿನಿಂದ ಹೊಡೆದು ಮಗನಿಂದಲೇ ತಂದೆಯ ಭೀಕರ ಕೊಲೆ ನಡೆದಿರೋ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಆಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ವೆಂಕಟಪ್ಪ (75), ಕೊಲೆಯಾದ ದುರ್ದೈವಿಯಾಗಿದ್ದಾನೆ.ಸಿದ್ದಪ್ಪ (45), ತಂದೆಯನ್ನ ಕೊಲೆಗೈದ ಪಾಪಿ ಮಗನಾಗಿದ್ದಾನೆ. ಮೂರೂವರೆ ಎಕರೆ ಆಸ್ತಿ ಹೊಂದಿದ್ದ ವೆಂಕಟ್ಟಪ್ಪ, ಇತ್ತಿಚೆಗೆ ಜಮೀನು ಮಾರಾಟ ಮಾಡಿದ್ದನು. ಮಾರಾಟ ಮಾಡಿದ್ದ ಜಮೀನಿನ 25 ಲಕ್ಷ ಹಣವನ್ನ ಮಗಳಿಗೆ ಕೊಟ್ಟಿದ್ದನು ಹಾಗೂ ಜಮೀನನ್ನು ಸಹ ಮಗಳ ಹೆಸರಿದೆ ಬರೆದುಕೊಟ್ಟಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ತಂದೆ ಮಗನ ಜೊತೆ ಹಲವು ಬಾರಿ ಗಲಾಟೆ ನಡೆದಿತ್ತು. ಗ್ರಾಮದ ಹಿರಿಯರ ಸಮ್ಮುಖದಲ್ಲಿ ಹಲವು ಬಾರಿ ನ್ಯಾಯ ಪಂಚಾಯತಿ ಕೂಡಾ ಮಾಡಲಾಗಿತ್ತು. ನ್ಯಾಯ ಪಂಚಾಯತಿ ಮಾಡಿದ್ರು ಸಹ ಮಗನಿಗೆ ಆಸ್ತಿ, ಹಣ ನೀಡಲು ತಂದೆ ವೆಂಕಟಪ್ಪ, ಹಿಂದೇಟು ಹಾಕಿದ್ದನು. ಇದರಿಂದ ಬೇಸತ್ತು ತಂದೆಯನ್ನ ಮಗ ಸಿದ್ದಪ್ಪ, ತಲೆಗೆ ಮಚ್ಚಿನಿಂದ ಬಲವಾಗಿ ಹೊಡೆದು ಕೊಲೆ ಮಾಡಿ ಪರಾರಿ ಆಗಿದ್ದಾನೆ. ಸ್ಥಳಕ್ಕೆ ಎಎಸ್ ಪಿ ಮರಿಯಪ್ಪ ಹಾಗೂ…
ಸರಗೂರು: ಅಧಿಕಾರಿಗಳು ಸಭೆಗೆ ಬರುವಾಗ ಇಲಾಖೆಯ ಸಂಪೂರ್ಣ ಮಾಹಿತಿಯೊಂದಿಗೆ ಬಂದಲ್ಲಿ ಸಮಸ್ಯೆ ಬಗೆಹರಿಸಲು ಸಾಧ್ಯ. ಆದರೆ ಅಪೂರ್ಣ ಮಾಹಿತಿಯೊಂದಿಗೆ ಬಂದರೆ ಸಭೆ ಮಾಡುವುದಾದರೂ ಹೇಗೆ ಎಂದು ಅಧಿಕಾರಿಗಳನ್ನು ಶಾಸಕ ಅನಿಲ್ ಚಿಕ್ಕಮಾದು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳವಾರ ನಡೆಯಿತು. ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಅಕ್ರಮ ಸಕ್ರಮ ಸಭೆಯಲ್ಲಿ ಮಾತನಾಡಿದರು. ತಾಲೂಕಿನಲ್ಲಿ ಹಲವಾರು ವರ್ಷಗಳಿಂದ ಸರ್ಕಾರಿ, ಗೋಮಾಳ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ನೀಡಬೇಕೆಂದರೆ ಜಮೀನಿಗೆ ಸಂಬಂಧಿಸಿದ ಕಡತಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳು ತಯಾರಿಸಿ ಸೂಕ್ತ ಕಡತ ದೊಂದಿಗೆ ಬಂದರೆ ಸಾಗುವಳಿ ನೀಡಲು ಸಾಧ್ಯ ಆದರೆ ಅಧಿಕಾರಿಗಳು ಅಪೂರ್ಣ ದಾಖಲೆಗಳೊಂದಿಗೆ ಸಭೆಗೆ ಬಂದರೆ ರೈತರಿಗೆ ಯಾವ ರೀತಿ ಅನುಕೂಲ ಮಾಡಲು ಸಾಧ್ಯ ಎಂದು ಬೇಸರ ವ್ಯಕ್ತಪಡಿಸಿದರು. ಸರ್ಕಾರದ ಮಾರ್ಗ ಸೂಚಿ ಪ್ರಕಾರ ಕ್ಷೇತ್ರದಲ್ಲಿ ಸಾವಿರಕ್ಕೂ ಹೆಚ್ಚು ರೈತರಿಗೆ ವಿತರಣೆ ಮಾಡಿದ್ದೇನೆ ಅದರೂ 50, 53, 57 ನಮೂನೆ ಅರ್ಜಿ ಸಲ್ಲಿಸಿದ ಇನ್ನೂ ಸಾಕಷ್ಟು ಅರ್ಜಿಗಳು…
ಪಾವಗಡ: ಆಂಧ್ರಪ್ರದೇಶದ ರೊದ್ದಂ ನಿಂದ ಕರ್ನಾಟಕದ ಕೊಡುಮಡುಗು ಗ್ರಾಮದ ಕಡೆಗೆ ಬರುತ್ತಿದ್ದ ಬೈಕ್ ಮತ್ತು ಕೊಡಮಡುಗು ಗ್ರಾಮದಿಂದ ಆಂಧ್ರ ಕಡೆ ಹೋಗುತ್ತಿದ್ದ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಂಧ್ರಪ್ರದೇಶದ ಪೆದ್ದಗುವ್ವಲಪಲ್ಲಿ ಗ್ರಾಮದ 56 ವರ್ಷದ ರಾಮಾಂಜನೇಯಲು ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ಬುಧವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಪಾವಗಡ ತಾಲೂಕಿನ ಕೊಡುಮಡುಗು ಗ್ರಾಮದ ಹೊರವಲಯದ ಆಂಧ್ರ ಮತ್ತು ಕರ್ನಾಟಕ ಗಡಿ ರೇಖೆಯ ಸಮೀಪದಲ್ಲಿ ಜರುಗಿದೆ. ರಾಮಾಂಜನೇಯಲು ಅವರ ಪುತ್ರ ಕೋಟೇಶ್ವರಲು ಅವರಿಗೂ ಸಹ ಗಂಭೀರ ಗಾಯಗಳಾಗಿದ್ದು, ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಪಾತ್ರಪಲ್ಲಿ ಮೊದ್ಲೇಟಪ್ಪ ಅವರಿಗೂ ಸಹ ಕಾಲು ಮುರಿದು ಗಂಭೀರ ಗಾಯಗಳಾಗಿದ್ದು ಇವರನ್ನ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ರವಾನಿಸಲಾಗಿದೆ . ಘಟನಾ ಸ್ಥಳಕ್ಕೆ ಪಾವಗಡ ಪೊಲೀಸ್ ಠಾಣೆಯ ಸಿಪಿಐ ಸುರೇಶ್ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಪಾವಗಡ: ಪಾವಗಡ ತಾಲೂಕಿನ ಸಿ.ಕೆ.ಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಆರೋಗ್ಯ ತಪಾಸಣಾ ಅಭಿಯಾನ ಯೋಜನೆ ಮತ್ತು ಗರ್ಭಿಣಿ ಮಹಿಳೆಯ ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಸಿ.ಕೆ.ಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು. ಇದೇ ವೇಲೆ ಆಸ್ಪತ್ರೆಯಲ್ಲಿ ಇರುವಂತಹ ವ್ಯವಸ್ಥೆಯನ್ನು ಕಂಡು ತಾಲೂಕು ವೈದ್ಯಾಧಿಕಾರಿ ಡಾ.ಕಿರಣ್ ಗೆ ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಗಳಲ್ಲಿ ಇಷ್ಟು ಉತ್ತಮ ಸೌಲಭ್ಯಗಳಿದ್ದರೂ ಜನರಿಗೆ ಸೇವೆ ಮಾಡುವುದಕ್ಕೆ ಏನಾಗಿದೆ ಎಂದು ಪ್ರಶ್ನಿಸಿದರು. ಅದೇ ರೀತಿ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದೆ ಜನರು ಸಮಸ್ಯೆಯನ್ನು ಅನುಭವಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು ಶೀಘ್ರವಾಗಿ ಸಮಸ್ಯೆಗಳನ್ನು ಬಗೆಹರಿಸಿ ಮಾಹಿತಿ ನೀಡುವಂತೆ ಸೂಚಿಸಿದರು ಬಳಕೆ ಇಲ್ಲದ ಆಸ್ಪತ್ರೆಯ ಶೌಚಾಲಯ: ಸಿ.ಕೆ.ಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಶೌಚಾಲಯವನ್ನು ಗಮನಿಸಿದ ನಾಗಲಕ್ಷ್ಮೀ ಅವರು, ದಂಗಾಗಿದ್ದಾರೆ. ಆಸ್ಪತ್ರೆ ಪ್ರಾರಂಭವಾದಾಗಿಂದ ಇಲ್ಲಿಯವರೆಗೂ ಆಸ್ಪತ್ರೆಯ ಶೌಚಾಲಯ ಬಳಸಿಯೇ ಇಲ್ಲ. ಈ ಬಗ್ಗೆ ಎಚ್ಚರಿಕೆ ನೀಡಿದ ಅವರು, ಇದೇ…
ಶ್ರವಣಬೆಳಗೊಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮಗಳ ಅಭಿವೃದ್ಧಿ, ಆರ್ಥಿಕ ಸ್ವಾವಲಂಬನೆ, ಸಾಮಾಜಿಕ ಅಭಿವೃದ್ಧಿಗೆ ಪ್ರೋತ್ಸಾಹ ಹಾಗೂ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಹೇಳಿದರು. ಶ್ರೀಕ್ಷೇತ್ರ ಶ್ರವಣಬೆಳಗೊಳ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ವತಿಯಿಂದ ಶ್ರವಣಬೆಳಗೊಳದ ಯೋಜನೆಯ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸುಜ್ಞಾನ ನಿಧಿ ಶಿಷ್ಯವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಿಂದ ನೈತಿಕತೆ, ಸಂಸ್ಕಾರ ಹಾಗೂ ಉತ್ತಮ ಮಾನವೀಯ ಮೌಲ್ಯಗಳನ್ನು ವಿದ್ಯರ‍್ಥಿಗಳಿಗೆ ಬಾಲ್ಯದಿಂದಲೇ ಕಲಿಸಬೇಕು ಎಂದರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮಗಳಲ್ಲಿ ಸ್ವಸಹಾಯ ಸಂಘಗಳನ್ನು ಸ್ಥಾಪಿಸಿ, ಸಾಮಾಜಿಕ ಚಳುವಳಿಯನ್ನು ಮಾಡುತ್ತಿದ್ದು, ಕುಟುಂಬದ ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸಂಸ್ಥೆಯು ಸ್ವಸಹಾಯ ಸಂಘ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಗಳ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಿ, ಹೈನುಗಾರಿಕೆ, ಸಣ್ಣ ಉದ್ಯಮ ಸ್ಥಾಪಿಸಲು ಪ್ರೇರಣೆ ನೀಡುತ್ತಿದೆ. ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಲು ಶ್ರಮಿಸುತ್ತಿದೆ ಎಂದರು. ಅಂತರ್ಜಲ ವೃದ್ಧಿಸುವ ಸಲುವಾಗಿ…
ಬೀದರ್: ಜಿಲ್ಲೆಯ ಕಮಲನಗರ ತಾಲೂಕಿನ ಕೊರೆಕಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಷ್ಮಿನಗರ ಗ್ರಾಮದಲ್ಲಿ ಮುಂಜಾನೆ ಕುಡಿಯುವ ನೀರಿನಲ್ಲಿ ಕಪ್ಪೆ ಮರಿಗಳು ಪ್ರತ್ಯಕ್ಷವಾಗಿದ್ದು, ನೀರಿನಲ್ಲಿ ಕಪ್ಪೆ ಮರಿಗಳನ್ನು ಕಂಡು ಜನರು ಕಂಗಾಲಾಗಿದ್ದಾರೆ. ಘಟನೆ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ದೇಶಪಾಂಡೆ ಜನರಿಗೆ ಉಡಾಫೆ ಉತ್ತರಗಳನ್ನು ನೀಡಿದರು. ಇದರಿಂದ ಆಕ್ರೋಶಗೊಂಡ ಸಾಮಾಜಿಕ ಹೋರಾಟಗಾರರಾದ ರತ್ನದೀಪ ಕಸ್ತೂರೆ ಮತ್ತು ಸುನಿಲ್ ಮಿತ್ರರವರ ನೇತೃತ್ವದಲ್ಲಿ ಜನರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ನಿರತರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಧಿಕ್ಕಾರ ಕೂಗಿದರು.ಈ ವೇಳೆ ಕಮಲನಗರ ತಹಸೀಲ್ದಾರ ಅಮಿತ ಕುಮಾರ ಕುಲಕರ್ಣಿ ಸ್ಥಳಕ್ಕೆ ಭೇಟಿ ನೀಡಿ, ನೀರು ಪರಿಶೀಲಿಸಿ ಪಿ.ಡಿ. ಓ ಗೆ ತರಾಟೆಗೆ ತೆಗೆದುಕೊಂಡರು. ಮುಖಂಡ ರತ್ನದೀಪ ಕಸ್ತೂರೆ ಮಾತನಾಡಿ, ಕುಡಿಯುವ ನೀರಿನಲ್ಲಿ ಕಪ್ಪೆ ಮರಿಗಳು ಬಂದಿದ್ದು ವಿಷಾದನಿಯ ಸಂಗತಿಯಾಗಿದೆ. ಎಲ್ಲಾ ಓಣಿಗಳಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಎಲ್ಲಾ ಓಣಿಗಳಲ್ಲಿ ನೀರು ನಿಂತು ಗಬ್ಬು ನಾರುತ್ತಿವೆ, ಕೂಡಲೇ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿದು ಹೋಗುವ…
ಬೀದರ್: ಜಿಲ್ಲಾ ಪೊಲೀಸರು 10 ದ್ವಿಚಕ್ರ ವಾಹನ ಕಳ್ಳತನ ಮತ್ತು ಒಂದು ಕುರಿ ಕಳವು ಪ್ರಕರಣವನ್ನು ಭೇದಿಸಿದ್ದು, 16 ಲಕ್ಷಕ್ಕೂ ಅಧಿಕ ಮೌಲ್ಯದ ದ್ವಿಚಕ್ರ ವಾಹನ, ಕುರಿ ವಶಪಡಿಸಿಕೊಂಡು ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ ಮೇಲಾಧಿಕಾರಿಗಳ ಮಾರ್ಗದರ್ಶನದಂತೆ, ಚಂದ್ರಕಾಂತ್ ಪೂಜಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಬೀದರ್ ರವರ ಮುಂದಾಳತ್ವದಲ್ಲಿ ಭಾಲ್ಕಿ ಉಪ ವಿಭಾಗದ ಶಿವಾನಂದ್ ಪವಾಡ ಶೆಟ್ಟಿ, DySP ಭಾಲ್ಕಿ, ಅಮರೇಶ್, ಪಿ.ಐ ಬಾಲ್ಕಿ ನಗರ, ಗುರುಪಾದ, ಸಿಪಿಐ ಬಾಲ್ಕಿ ಗ್ರಾಮೀಣ ವೃತ್ತ, ಅಮರೆಪ್ಪ, ಸಿಪಿಐ ಕಮಲ ನಗರ ವೃತ್ತ ಇವರ ನೇತೃತ್ವದಲ್ಲಿ ಚಂದ್ರಶೇಖರ್, ಪಿಎಸ್ ಐ, ಕಮಲ ನಗರ ಪೊಲೀಸ್ ಠಾಣೆ, ಬಾಲಾಜಿ, ಪಿಎಸ್ ಐ ಇವರನ್ನೊಳಗೊಂಡ ನುರಿತ ಅಧಿಕಾರಿ ಸಿಬ್ಬಂದಿಯ ತಂಡ ಕಾರ್ಯಾಚರಣೆ ನಡೆಸಿ 10 ದ್ವಿಚಕ್ರ ವಾಹನಗಳನ್ನು ವಶ ಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಅದರಂತೆ ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕುರಿಗಳ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಿ 28 ಕುರಿಗಳನ್ನು ಮತ್ತು ಒಂದು…