Author: admin

ಪಾವಗಡ: ಪಾವಗಡದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳದಿಂದ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾ ಗಣಪತಿಯ ಶೋಭಯಾತ್ರೆಯನ್ನು ಸೆ.28ರಂದು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಶ್ರೀರಾಮ ಸೇನೆ ಅಧ್ಯಕ್ಷ ಕಾವಲಗೆರೆ ರಾಮಾಂಜಿ ತಿಳಿಸಿದರು ಶುಕ್ರವಾರ ಅರಳಿಕಟ್ಟೆ ಗಣಪತಿ ಬಳಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಬೆಳಗ್ಗೆ 11 ಗಂಟೆಗೆ ಮಧುಗಿರಿ ಊರು ಬಾಗಿಲು ಸಮೀಪದ ಅರಳಿಕಟ್ಟೆಯಿಂದ ಹಿಂದೂ ಮಹಾಗಣಪತಿಯ ಶೋಭಾಯಾತ್ರೆ ಪ್ರಾರಂಭಗೊಳ್ಳಲಿದೆ.  ಶೋಭಾಯಾತ್ರೆಯಲ್ಲಿ ಹಿಂದೂ ಫೈರ್ ಬ್ರಾಂಡ್ ಬಸನ ಗೌಡ ಪಾಟೀಲ್ ಯತ್ನಾಳ್, ಚಿತ್ರದುರ್ಗ ಸಂಸದ ಗೋವಿಂದ ಎಂ.ಕಾರಜೋಳ, ಪಾವಗಡ ಶಾಸಕ ಎಚ್.ವಿ.ವೆಂಕಟೇಶ್, ಎಂಎಲ್ಸಿ ಸಿ.ಟಿ. ರವಿ, ಪ್ರತಾಪ್ ಸಿಂಹ, ನಿಖಿಲ್ ಕುಮಾರಸ್ವಾಮಿ, ಚಿದಾನಂದ್ ಎಂ ಗೌಡ, ಹಿಂದೂ ಮುಖಂಡ ಶರಣ್ ಪಂಪ್ವೆಲ್, ರಘು ಸಕಲೇಶಪುರ, ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಘ-ಸಂಸ್ಥೆಗಳು ಭಾಗವಹಿಸಲಿವೆ ಜೊತೆಗೆ ಹತ್ತಕ್ಕೂ ಅಧಿಕ ಕಲಾತಂಡಗಳೊಂದಿಗೆ ವೈಭವ ಶೋಭಯಾತ್ರೆಯನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು. ಬಜರಂಗದಳ ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಗುಪ್ತ ಮಾತನಾಡಿ, 28ರ ಭಾನುವಾರ ಬೆಳಗ್ಗೆ 11 ಗಂಟೆಯಿಂದ…

Read More

ಶಿರಾ: ಕೆಎಸ್ ಆರ್ ಟಿಸಿ ಬಸ್ ನಿಂದ ಇಳಿಯುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಮಾರಗೊಂಡನಹಳ್ಳಿ ಗ್ರಾಮದ ಬಳಿ ನಡೆದಿದೆ. ಕಾಮಕ್ಕ(64) ಮೃತಪಟ್ಟ ಮಹಿಳೆಯಾಗಿದ್ದಾರೆ.  ಗುಡ್ಡದಜೋಗಿಹಳ್ಳಿ ಗ್ರಾಮದ ನಿವಾಸಿಯಾಗಿರುವ ಇವರು ತಮ್ಮ ಮಗಳ ಮನೆಗೆ ಹಬ್ಬಕ್ಕಾಗಿ ಬಂದಿದ್ದರು. ಹಬ್ಬ ಮುಗಿಸಿ ತಮ್ಮ ಮನೆಗೆ ಕೆಎಸ್ ಆರ್ ಟಿಸಿ ಬಸ್ ನಲ್ಲಿ ತೆರಳಿದ್ದರು. ಮಾರಗೊಂಡನಹಳ್ಳಿ ಬಳಿ ಬಸ್ ನಿಂದ ಇಳಿಯಲು ಮುಂದಾಗುತ್ತಿದ್ದಂತೆಯೇ ಚಾಲಕ ಬಸ್ ಮುಂದಕ್ಕೆ ಚಲಾಯಿಸಿದ್ದು, ಪರಿಣಾಮವಾಗಿ ಕಾಮಕ್ಕ ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ.  ಈ ವೇಳೆ ಬಸ್ ಅವರ ಮೇಲೆಯೇ ಹರಿದಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ  ಅವರನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಯಿತು. ಆದರೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ಬೀದರ್: ಎನ್‌ ಡಿಪಿಎಸ್ ಕಾಯ್ದೆಯಲ್ಲಿ ದಾಖಲಾದ ಪ್ರಕರಣದಡಿ ವಶಪಡಿಸಿಕೊಂಡಿದ್ದ 1,34,45,238 ರೂ. ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ ಗುರುವಾರ ಭಾಲ್ಕಿ ತಾಲ್ಲೂಕಿನ ಧನ್ನೂರ್ ಗ್ರಾಮದಲ್ಲಿರುವ ಇನ್ನೆರೋ ಬಯೋಟಿಕ್ ಜೈವಿಕ ತ್ಯಾಜ್ಯ ವಿಲೇವಾರಿ ಘಟಕದ ಕುಲುಮೆಯಲ್ಲಿ ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದ ಗಾಂಜಾ, ಗುಳಿಗೆ, ಸಿರಫ್ ಬಾಟಲ್, MDMA, ಮಾದಕ ದ್ರವ್ಯವನ್ನು ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮಿಟಿಯೊಂದಿಗೆ ಜತೆಗೂಡಿ ನಿಯಮಾನುಸಾರವಾಗಿ ನಾಶಗೊಳಿಸಲಾಯಿತು ಎಂದು ಅವರು ಹೇಳಿದ್ದಾರೆ. ಸುಮಾರು 16 ಪ್ರಕರಣಗಳಲ್ಲಿ ವಶಕ್ಕೆ ಪಡೆದ ಒಟ್ಟು 1,34,45,238 ರೂ. ಮೌಲ್ಯದ 84 ಕೆ.ಜಿ.ಕ್ಕಿಂತಲೂ ಹೆಚ್ಚು ಗಾಂಜಾ, ಗುಳಿಗೆ, ಸಿರಫ್ ಬಾಟಲ್ ಹಾಗೂ MDMA ಅನ್ನು ನಾಶಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ  ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ತುಮಕೂರು: ಜಾತಿವಾರು ಸಮೀಕ್ಷೆ ಆರಂಭವಾಗಿ ಐದನೇ ದಿನಕ್ಕೆ ಕಾಲಿಟ್ಟಿದ್ದರೂ ತುಮಕೂರು ಜಿಲ್ಲೆಯಲ್ಲಿ ಮಾತ್ರ ಮುಂದೆ ಸಾಗುತ್ತಿಲ್ಲ. ಇತರ ಜಿಲ್ಲೆಗಳಿಗಿಂತ ಸಾಕಷ್ಟು ಹಿಂದೆ ಉಳಿದಿದ್ದು, ಆಮೆ ವೇಗದಲ್ಲಿ ನಡೆಯುತ್ತಿದೆ. ತಾಂತ್ರಿಕ ಸಮಸ್ಯೆ ಶುಕ್ರವಾರ ಸಹ ಮುಂದುವರಿದಿದ್ದು, ಸಮೀಕ್ಷೆಗೆ ತೆರಳಿದ್ದ ಶಿಕ್ಷಕರು ಕೆಲವು ಕಡೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆ ವರೆಗೂ ಒಂದೂ ಮನೆಯ ಸಮೀಕ್ಷೆ ಮಾಡಲು ಸಾಧ್ಯವಾಗಿಲ್ಲ. ಸಮೀಕ್ಷೆ ಮಾಡಲೇಬೇಕು ಎಂದು ಶಿಕ್ಷಕರ ಮೇಲೆ ಅಧಿಕಾರಿಗಳು ನಿರಂತರವಾಗಿ ಒತ್ತಡ ಹಾಕುತ್ತಲೇ ಇದ್ದಾರೆ. ಆದರೆ ಸಮೀಕ್ಷೆ ಸಾಧ್ಯವಾಗದೆ ಸಾಕಷ್ಟು ಮಂದಿ ಕೈಚೆಲ್ಲಿ, ಅಸಹಾಯಕರಾಗಿ ಕುಳಿತಿದ್ದಾರೆ. ಮೊದಲು ತಾಂತ್ರಿಕ ಸಮಸ್ಯೆ ಬಗೆಹರಿಸಿ. ನಂತರ ಸಮೀಕ್ಷೆ ಮಾಡುವಂತೆ ಹೇಳಿ. ಆಗ ಕೆಲಸ ಮಾಡುತ್ತೇವೆ. ಸಮಸ್ಯೆ ಇದ್ದರೂ ಸುಮ್ಮನೆ ಸಮೀಕ್ಷೆ ಮಾಡಿ ಎಂದರೆ ಹೇಗೆ? ಬೆಳಿಗ್ಗೆಯಿಂದ ಸಂಜೆ ವರೆಗೂ ಪ್ರಯತ್ನಿಸಿದರೂ ಒಂದು ಕುಟುಂಬದ ಸಮೀಕ್ಷೆ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ. ಆದರೆ ಕೆಲಸದಲ್ಲಿ ತೊಡಗಿಸಿಕೊಂಡಿಲ್ಲ ಎಂದು ಹೇಳಿ ನೋಟಿಸ್ ಕೊಡಲು ಮುಂದಾಗಿದ್ದಾರೆ. ಇದು ಯಾವ ರೀತಿಯ ನ್ಯಾಯ ಅಂತ ಶಿಕ್ಷಕರು ಪ್ರಶ್ನಿಸಿದ್ದಾರೆ…

Read More

ಶ್ರೀರಂಗಪಟ್ಟಣ: ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್‌ ಎಸ್‌) ಬೃಂದಾವನ ಉದ್ಯಾನದ ಆವರಣದಲ್ಲಿ ನಡೆದ ಐತಿಹಾಸಿಕ ಕಾವೇರಿ ಆರತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಶುಕ್ರವಾರ ಸಂಜೆ ಚಾಲನೆ ನೀಡಿದರು. 10 ಸಾವಿರಕ್ಕೂ ಹೆಚ್ಚು ನೆರೆದಿದ್ದ ಭಕ್ತರ ಸಮ್ಮುಖದಲ್ಲಿ ಮೊದಲಿಗೆ ದಕ್ಷಿಣ ಭಾರತ ಶೈಲಿಯಲ್ಲಿ ಸ್ಥಳೀಯ ಪುರೋಹಿತರ ತಂಡ ಆರತಿ ಬೆಳಗಿತು. ಆನಂತರ ವಾರಣಾಸಿಯಿಂದ ಬಂದಿದ್ದ 13 ಜನ ಪುರೋಹಿತರ ತಂಡ ಆರತಿ ಬೆಳಗಿತು. ನಾಡಿನ ಜೀವನದಿ, ನಮ್ಮೆಲ್ಲರ ತಾಯಿ ಕಾವೇರಿಗೆ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆರತಿ ಬೆಳಗುವ ಈ ದಿವ್ಯ ಕ್ಷಣವು ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ನಡೆಯುವ ಗಂಗಾ ಆರತಿಯನ್ನೇ ಮೀರಿಸುವಂತೆ ಭಾವಿಸಿತು. “ಕಾವೇರಿ ಆರತಿಯನ್ನು ಬರೀ ಧಾರ್ಮಿಕ ಕಾರ್ಯಕ್ರಮವಾಗಿ ರೂಪಿಸಿಲ್ಲ. ನಮ್ಮೆಲ್ಲರನ್ನು ಕಾಪಾಡುವ ಕಾವೇರಿ ತಾಯಿಗೆ ಗೌರವ ಸಲ್ಲಿಸುವ, ಪ್ರಾರ್ಥನೆ ಸಲ್ಲಿಸುವ ಕಾರ್ಯಕ್ರಮವಾಗಿ ರೂಪಿಸಿದ್ದೇವೆ. ಇದನ್ನು ಯಾವುದೇ ತೊಂದರೆ ಬಂದರೂ ನಿಲ್ಲಿಸಲು ಸಾಧ್ಯವಿಲ್ಲ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು…

Read More

ಸರಗೂರು: ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬರುತ್ತಿದ್ದೇವೆ. ಅದರ ಜೊತೆಯಲ್ಲಿ ಗ್ರಾಮದಲ್ಲಿ ವಯಸ್ಸಾದ ಹಿರಿಯರಿಗೆ ಸಹಾಯಧನ ಟ್ರಸ್ಟ್ ವತಿಯಿಂದ ಮಾಡುತ್ತಿದ್ದೇವೆ ಎಂದು ವಿಷ್ಣು ಸೇನಾ ಟ್ರಸ್ಟ್ ಅಧ್ಯಕ್ಷ ಬಿ.ವಿ.ರವಿ ತಿಳಿಸಿದರು. ತಾಲೂಕಿನ ಬಿದರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದಲ್ಲಿ ವಿಷ್ಣುಸೇನಾ ಟ್ರಸ್ಟ್ ವತಿಯಿಂದ ಗುರುವಾರದಂದು ವಿಷ್ಣು ಸೇನಾ ಟ್ರಸ್ಟ್ ಕಛೇರಿಯ ಕಟ್ಟಡದ ಗುದ್ದಲಿ ಪೂಜೆಯನ್ನು ಗ್ರಾಮದ ಯಜಮಾನರು ಮತ್ತು ಮುಖಂಡರು ನೆರವೇರಿಸಿದರು. ಬಿದರಹಳ್ಳಿ ಗ್ರಾಮದಲ್ಲಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಹೆಸರಿನಲ್ಲಿ ಹುಟ್ಟುಹಬ್ಬ ಹಾಗೂ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಯುವಕರಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವ ನಿಟ್ಟಿನಲ್ಲಿ ಸಹಾಯ ಮಾಡಲು ನಮ್ಮ ಟ್ರಸ್ಟ್ ಸದಸ್ಯರು ಸಮ್ಮುಖದಲ್ಲಿ ಸಮಾಜ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ಕಳೆದೆ ಐದು ವರ್ಷಗಳ ಹಿಂದೆ ಸಂಘ ಮಾಡಿಕೊಂಡು ವಿವಿಧ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ಗ್ರಾಮದ ಅಭಿವೃದ್ಧಿಗೆ ಕೈ ಜೋಡಿಸಿಕೊಂಡು ಹಾಗೂ ಗ್ರಾಮದ ಯಾವುದೇ ಜನಾಂಗದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಹಾಗೂ  ಆರೋಗ್ಯದಲ್ಲಿ ಸಮಸ್ಯೆಯಲ್ಲಿ ಇದ್ದವರಿಗೂ ಟ್ರಸ್ಟ್…

Read More

ಸರಗೂರು: ಬೈಕ್‌ ನಲ್ಲಿ ಆರೋಪಿಯೊಬ್ಬ ಸಾಗಣೆ ಮಾಡುತ್ತಿದ್ದ ಹಸಿ ಹಾಗೂ ಒಣಗಾಂಜಾವನ್ನು ನಂಜನಗೂಡು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಸರಗೂರು ತಾಲೂಕಿನ ನಂಜನಾಥಪುರ ಗ್ರಾಮದ ನಿವಾಸಿ ವೆಂಕಟೇಶ್ ಎಂಬಾತ ಕಂದೇಗಾಲ ಗ್ರಾಮದ ಮಹದೇಶ್ವರ ದೇವಸ್ಥಾನದ ಬಳಿ ಬೈಕ್‌ ನಲ್ಲಿ ಪೇಪರ್‌ ನಲ್ಲಿ ಸುತ್ತಿಕೊಂಡು ಗಾಂಜಾ ಸಾಗಿಸುತ್ತಿದ್ದನು. ಮೈಸೂರು ಗ್ರಾಮಾಂತರ ಉಪ ವಿಭಾಗದ ಅಬಕಾರಿ ಇಲಾಖೆ ಅಧಿಕಾರಿಗಳ ಸೂಚನೆ ಮೇರೆಗೆ ದೊರೆತ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದಾಗ ಆರೋಪಿ ವೆಂಕಟೇಶ್ ಬೈಕ್ ಹಾಗೂ ಮಾಲನ್ನು ಬಿಟ್ಟು ಪರಾರಿಯಾಗಿದ್ದಾನೆ. ಈ ವೇಳೆ 15 ಸಾವಿರ ರೂ. ಮೌಲ್ಯದ ಹೂ ಬೀಜ ಮತ್ತು ತೆನೆ ಮಿಶ್ರಿತ 500ಗ್ರಾಂ ಒಣಗಾಂಜಾ ಹಾಗೂ 1.45 ಲಕ್ಷ ರೂ. ಮೌಲ್ಯದ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ವಿರುದ್ಧ ಎನ್‌ ಡಿಪಿಎಸ್ ಅನ್ವಯ ಪ್ರಕರಣ ದಾಖಲಿಸಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ. ಕಾರ್ಯಾಚರಣೆಯಲ್ಲಿ ನಂಜನಗೂಡು ಉಪ ವಿಭಾಗದ ಅಬಕಾರಿ ಇನ್‌ ಸ್ಪೆಕ್ಟರ್ ಮುದಾಸರ್ ಬಾಷಾ,…

Read More

ಸರಗೂರು:  ಕಾಡಂಚಿನ ಗ್ರಾಮದ  ಜನರಿಗೆ ಆರೋಗ್ಯವೃದ್ಧಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿರುವ  ಪ್ರಶಂಸನೀಯ ಹಾಗೂ  ತುಂಬಾ ಸಂತೋಷಕರ ವಿಷಯವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು. ತಾಲೂಕಿನ ಬಿ ಮಟಕರೆ ಗ್ರಾಪಂ ವ್ಯಾಪ್ತಿಯ ನೇಮ್ಮನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ, ಸಾರ್ವಜನಿಕ ಆಸ್ಪತ್ರೆ ಐ.ಸಿ.ಟಿ.ಸಿ.ವಿಭಾಗ ಹೆಚ್.ಡಿ.ಕೋಟೆ ಇವರ ವತಿಯಿಂದ, ಬಿ.ಮಟಕೆರೆ  ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ನೆಮ್ಮನ ಹಳ್ಳಿ ಗ್ರಾಮದಲ್ಲಿ ಶುಕ್ರವಾರದಂದು ಸಮುದಾಯ ಆಧಾರಿತ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನೆಮ್ಮನ ಹಳ್ಳಿ ಗ್ರಾಮದಲ್ಲಿ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಿದ್ದು ಹಾಗೂ ನಾವು ಇಂದು 2ನೇ ಬಾರಿ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ನಡೆಸುತ್ತಿದ್ದೇವೆ. ಈ ಶಿಬಿರದಲ್ಲಿ ಕಣ್ಣಿನ ಪರೀಕ್ಷೆ, ಮಧುಮೇಹ ಮತ್ತು ರಕ್ತದೊತ್ತಡ, ಐಸಿಟಿಸಿ ರಕ್ತ ಪರೀಕ್ಷೆ, ಕಫ ಪರೀಕ್ಷೆ  ಬಗ್ಗೆ ತಪಾಸಣೆ  ಮಾಡಲಾಗುತ್ತದೆ. ಸುತ್ತಮುತ್ತಲ ಗ್ರಾಮದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಶಿಬಿರವನ್ನು…

Read More

ಕುಣಿಗಲ್: ಕುಣಿಗಲ್ ದೊಡ್ಡಕೆರೆಯ ರಾಮಬಾಣ ಹಂತದ ಕಾಲುವೆ ತೂಬನ್ನು ಹತ್ತು ವರ್ಷಗಳ ಹಿಂದೆ ಕಾಂಕ್ರಿಟ್ ನಿಂದ  ಮುಚ್ಚಲಾಗಿದ್ದು, ಹೇಮಾವತಿ ನಾಲಾ ವಲಯದ ಅಧಿಕಾರಿಗಳ ತಂಡ ಗುರುವಾರ ಭೇಟಿ ನೀಡಿ ಪರಿಶೀಲಿಸಿ ತೆರವಿಗೆ ಮುಂದಾಗಿದ್ದಾರೆ. ದೊಡ್ಡಕೆರೆಗೆ ರಾಮಬಾಣ ಹಂತ ಮತ್ತು ಲಕ್ಷ್ಮೀದೇವಿ ಹಂತದ ಎರಡು ಕಾಲುವೆಗಳಿದ್ದು, ಸಾವಿರಾರು ಎಕರೆ ಅಚ್ಚುಕಟ್ಟು ಪ್ರದೇಶವಿದೆ. ಹೇಮಾವತಿ ನಾಲಾ ನೀರು ಬರುವ ಮುನ್ನ ಮಳೆಗೆ ಕೆರೆ ತುಂಬುವುದು ಕಷ್ಟ. ನೀರು ಸಂಗ್ರಹಣೆಗಾಗಿ ಕೆಲವರು ಕೆರೆ ನೀರು ತೂಬಿನ ಮೂಲಕ ಹೋಗದಂತೆ ತಡೆಯಲು ತೂಬಿಗೆ ಕಾಂಕ್ರಿಟ್ ಸುರಿದು ಮುಚ್ಚಿದ್ದರು. ಇದರಿಂದಾಗಿ ಅಚ್ಚುಕಟ್ಟುದಾರರಿಗೆ ನೀರಿಲ್ಲದೆ ಬೆಳಗಳನ್ನು ಬೆಳೆಯಲ್ಲಿ ಸಾಧ್ಯವಾಗದೆ ಕೆಲವರು ನಿವೇಶನಗಳನ್ನು ವಿಂಗಡಿಸಿ ಮಾರಾಟ ಮಾಡಿದ್ದಾರೆ. ಕಳೆದ ಏಳು ವರ್ಷಗಳಿಂದ ಹೇಮಾವತಿ ನೀರಿನಿಂದ ದೊಡ್ಡಕೆರೆ ತುಂಬಿ ಕೋಡಿಯಾಗುತ್ತಿದ್ದರೂ, ಅಚ್ಚುಕಟ್ಟು ಪ್ರದೇಶಕ್ಕೆ ಮಾತ್ರ ನೀರು ಹರಿಸಲು ಸಾಧ್ಯವಾಗಿರಲಿಲ್ಲ. ಅಚ್ಚುಕಟ್ಟುದಾರರು ಬೆಳೆಗಳಿಗೆ ನೀರು ಹರಿಸಲು ಶಾಸಕರಿಗೆ ಮನವಿ ಮಾಡಿದ್ದರು. ಶಾಸಕರ ಸೂಚನೆ ಮೇರೆಗೆ ಹೇಮಾವತಿ ನಾಲಾವಲಯದ ಅಧಿಕಾರಿಗಳಾದ ಕಿರಣ್, ರವಿ ಸೇರಿದಂತೆ ಮುಳುಗು…

Read More

ತಿಪಟೂರು: ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ 2024ರ ಆಗಸ್ಟ್‌ ನಲ್ಲಿ ನಡೆದ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿರುವ ಆರೋಪದ ಮೇರೆಗೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ನಾಲ್ವರು ನಗರಸಭಾ ಸದಸ್ಯರ ಸದಸ್ಯತ್ವ ಅನರ್ಹಗೊಳಿಸಿ ಜಿಲ್ಲಾಧಿಕಾರಿ ನ್ಯಾಯಾಲಯ ಆದೇಶಿಸಿದೆ. 31ನೇ ವಾರ್ಡ್‌ನ ಬಿಜೆಪಿ ಬೆಂಬಲಿತ ಸದಸ್ಯೆ ಅಶ್ವಿನಿ ದೇವರಾಜು, 16ನೇ ವಾರ್ಡ್‌ನ ಬಿಜೆಪಿ ಬೆಂಬಲಿತ ಸದಸ್ಯೆ ಪದ್ಮಶಿವಪ್ಪ, 11ನೇ ವಾರ್ಡ್ ಜೆಡಿಎಸ್‌ ಬೆಂಬಲಿತ ಸದಸ್ಯ ಎಂ.ಬಿ.ಜಯರಾಂ, 24ನೇ ವಾರ್ಡ್‌ನ ಜೆಡಿಎಸ್ ಬೆಂಬಲಿತ ಸದಸ್ಯೆ ಅಸೀಪಾ ಬಾನು ಅನರ್ಹಗೊಂಡ ಸದಸ್ಯರು. 33 ಸಂಖ್ಯಾಬಲದ ನಗರಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಯಮುನಾ ಎ.ಎಸ್., ಉಪಾಧ್ಯಕ್ಷ ಸ್ಥಾನಕ್ಕೆ ಮೇಘಶ್ರೀ ಭೂಷಣ್ ಸ್ಪರ್ಧಿಸಿದ್ದರು. ಬಿಜೆಪಿ ಹಾಗೂ ಜೆಡಿಎಸ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಲತಾ ಲೋಕೇಶ್‌ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಂಗಮೇಶ್ ಸ್ಪರ್ಧಿಸಿದ್ದರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕ್ರಮವಾಗಿ 18 ಹಾಗೂ 15 ಮತಗಳು ಚಲಾವಣೆಗೊಂಡು ಯಮುನಾ ಅಧ್ಯಕ್ಷರಾಗಿ, ಮೇಘಶ್ರೀ ಉಪಾಧ್ಯಕ್ಷರಾಗಿ…

Read More