Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ತುಮಕೂರು: ತುಮಕೂರು ನಗರದ ಮಾಜಿ ಶಾಸಕರಾದ ಡಾ.ರಫೀಕ್ ಅಹಮದ್ ಅವರ ತಾಯಿ ಫಾತಿಮಾ ಬೇಗಂ ಅವರು ಇಂದು ದೈವಾಧೀನರಾಗಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಇಂದು ತುಮಕೂರಿಗೆ ಭೇಟಿ ನೀಡಿದ ಸಚಿವರು, ಮೃತರ ಪಾರ್ಥಿವ ಶರೀರದ ದರ್ಶನ ಪಡೆದು ಪುಷ್ಪಗುಚ್ಛ ಅರ್ಪಿಸಿ ಗೌರವ ಸಲ್ಲಿಸಿದರು. ಬಳಿಕ ಮಾಜಿ ಶಾಸಕ ರಫೀಕ್ ಅಹಮದ್ ಹಾಗೂ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಚಿವರು, “ಫಾತಿಮಾ ಬೇಗಂ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಲಾರದ ದುಃಖವಾಗಿದೆ. ಭಗವಂತನು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಬೆಂಗಳೂರು: ನಗರದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ರಾಷ್ಟ್ರೀಯ ಅಂಬೇಡ್ಕರ್ ಸೇನೆ, ಡಾ.ಮನಮೋಹನ್ ಸಿಂಗ್ ನಗರ ವಿವಿಯ ಆಶ್ರಯದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಅವರ 135ನೇ ಜಯಂತಿ ಮತ್ತು ಮನ ಮನೆಗೆ ಸಂವಿಧಾನ ಎಂಬ ವಿಶೇಷ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಚಾಮರಾಜನಗರ ವಿವಿಯ ಕುಲಪತಿ ಪ್ರೊ. ಬಿ.ಎಲ್. ಗಂಗಾಧರ್ ಅವರು ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳುವ ಮೂಲಕ ಉನ್ನತ ಸ್ಥಾನಕ್ಕೇರಬೇಕು ಎಂದು ಸಲಹೆ ನೀಡಿದರು. ನಂತರದಲ್ಲಿ ಮಾತನಾಡಿದ ಅವರು, ರಾಷ್ಟ್ರ ನಿರ್ಮಾಣದ ಹರಿಕಾರ ಬಾಬಾಸಾಹೇಬರು, ಎಲ್ಲಾ ಕ್ಷೇತ್ರಗಳಲ್ಲಿಯೂ ಅವರ ಕೊಡುಗೆ ಇದೆ. ಅಂಬೇಡ್ಕರ್ ರವರ ಚಿಂತನೆಗಳು ಸರ್ವಕಾಲಿಕ ಪ್ರಸ್ತುತವಾಗಿದ್ದು, ಹಾಗೆ ವಿವಾಹ ಕಾಯಿದೆಗಳಲ್ಲಿ ಸಹ ಇವರ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಕೊಂಡರೆ ಮಾತ್ರ ಅಂಬೇಡ್ಕರ್ ಅವರಿಗೆ ಗೌರವ ನೀಡಿದಂತೆ ಎಂದು ತಿಳಿಸಿದರು. ನಂತರದಲ್ಲಿ ಬೆಂಗಳೂರು ನಗರ ವಿವಿಯ ಕುಲಪತಿಯಾದ ಪ್ರೊ. ಬಿ. ರಮೇಶ್ ಅವರು ಮಾತನಾಡಿ, ‘ಅಂಬೇಡ್ಕರ್ ಅವರು ಮಹಿಳಾ ಶಿಕ್ಷಣಕ್ಕೆ ನೀಡಿದ ಆದ್ಯತೆ ರಾಷ್ಟ್ರದಲ್ಲಿ ಮಹತ್ತರ ಬೆಳವಣಿಗೆಗೆ ಕಾರಣವಾಗಿದೆ.…
ತುಮಕೂರು: ಜಿಲ್ಲೆಯ ಕ್ರೀಡಾ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯುತ್ತಿರುವ 24ನೇ ರಾಷ್ಟ್ರೀಯ ಜೂನಿಯರ್ (20 ವರ್ಷದೊಳಗಿನ) ಅಥ್ಲೆಟಿಕ್ ಕ್ರೀಡಾಕೂಟಕ್ಕೆ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಅದ್ಧೂರಿ ಚಾಲನೆ ದೊರೆಯಿತು. ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಶುಕ್ರವಾರ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ದೀಪ ಬೆಳಗುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಉದ್ಘಾಟನಾ ಭಾಷಣ ಮಾಡಿದ ಸಚಿವ ಪರಮೇಶ್ವರ ಅವರು, ತುಮಕೂರು ಶೀಘ್ರದಲ್ಲೇ ಅಂತರಾಷ್ಟ್ರೀಯ ಕ್ರೀಡಾ ಹಬ್ ಆಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗುತ್ತಿದ್ದು, ಹಾಕಿ ಮತ್ತು ಕಬಡ್ಡಿ ಅಂಕಣಗಳಿಗೂ ಜಾಗ ಗುರುತಿಸಲಾಗಿದೆ ಎಂದು ತಿಳಿಸಿದರು. ಮುಂಬರುವ ಮೇ ತಿಂಗಳಲ್ಲಿ ಅಂತರಾಷ್ಟ್ರೀಯ ಮಹಿಳಾ ಟೆನಿಸ್ ಕ್ರೀಡಾಕೂಟ ನಡೆಯಲಿದ್ದು, ಸರ್ಕಾರವು ಕ್ರೀಡಾ ಅಭಿವೃದ್ಧಿಗಾಗಿ ₹3 ಕೋಟಿ ಅನುದಾನ ಮೀಸಲಿಟ್ಟಿದೆ ಎಂದು ಅವರು ತಿಳಿಸಿದರು. ಈ ಕ್ರೀಡಾಕೂಟದ ವಿಶೇಷವೆಂದರೆ, ಇಲ್ಲಿ ಮೊದಲ ಎರಡು ಸ್ಥಾನ ಪಡೆಯುವ ಪ್ರತಿಭಾವಂತ ಅಥ್ಲೀಟ್ ಗಳು ಆಗಸ್ಟ್ ನಲ್ಲಿ…
ತುಮಕೂರು: ನಗರದ ವಿವಿಧ ಭಾಗಗಳಲ್ಲಿ ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹2.32 ಲಕ್ಷ ಮೌಲ್ಯದ ಒಟ್ಟು 10 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಮರಳೂರು ದಿಣ್ಣೆಯ ನಾಸೀಂ ಪಾಷ (18) ಮತ್ತು ಖಾದರ್ ನಗರದ ಮಹ್ಮದ್ ಅನೀಸ್ (18) ಎಂದು ಗುರುತಿಸಲಾಗಿದೆ. ಗಮನಾರ್ಹವೆಂದರೆ, ಬಂಧಿತ ಮಹ್ಮದ್ ಅನೀಸ್ ಸಶಸ್ತ್ರ ಮೀಸಲು ಪಡೆಯ (DAR) ನಿವೃತ್ತ ಎಆರ್ ಎಸ್ ಐ (ARSI) ಅವರ ಮೊಮ್ಮಗ ಎಂದು ತಿಳಿದುಬಂದಿದೆ. ಆರೋಪಿಗಳಿಂದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳುವಾಗಿದ್ದ 4 ಬೈಕ್ ಗಳು ಹಾಗೂ ಹೊಸ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಕಳುವಾಗಿದ್ದ 6 ಬೈಕ್ ಗಳು ಸೇರಿದಂತೆ ಒಟ್ಟು 10 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ತಿಲಕ್ ಪಾರ್ಕ್ ಸಿಪಿಐ ಎಫ್.ಕೆ. ನದಾಫ್, ಪಿಎಸ್‌ಐಗಳಾದ ಎನ್. ಮೋಹನ್, ಎಚ್. ಮಂಜುನಾಥ್, ಜಿ.…
ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಐದು ದಶಕಗಳ ಸುದೀರ್ಘ ರಾಜಕೀಯ ಜೀವನವನ್ನು ಸಂಭ್ರಮಿಸಲು ಮೇ 9ರಂದು ಚಿತ್ರದುರ್ಗದಲ್ಲಿ ಬೃಹತ್ ‘ಅಭಿಮಾನೋತ್ಸವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಚಿತ್ರದುರ್ಗದಲ್ಲಿ ನಡೆಯಲಿರುವ ಈ ಐತಿಹಾಸಿಕ ಕಾರ್ಯಕ್ರಮವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉದ್ಘಾಟಿಸಲಿದ್ದಾರೆ. ಇದೇ ವೇಳೆ ಅವರು ಯಡಿಯೂರಪ್ಪನವರ ಸಾರ್ವಜನಿಕ ಸೇವೆ ಮತ್ತು ಸಾಧನೆಯನ್ನು ಗೌರವಿಸಿ ಸನ್ಮಾನಿಸಲಿದ್ದಾರೆ. ಮೇ 9ರಂದು ಕಾರ್ಯಕ್ರಮ ನಡೆಯಲಿದೆ. ಚಿತ್ರದುರ್ಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮೇ 8ರ ಸಂಜೆ 6 ಗಂಟೆಗೆ ಯಡಿಯೂರಪ್ಪನವರನ್ನು ಚಿತ್ರದುರ್ಗ ನಗರಕ್ಕೆ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗುವುದು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಸಂಸದ ಗೋವಿಂದ ಕಾರಜೋಳ ಅವರು, ಕಾರ್ಯಕ್ರಮದಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ರಾಜ್ಯದ ವಿವಿಧ ಮಠಗಳ ಸ್ವಾಮೀಜಿಗಳು, ಮಾಜಿ ಮುಖ್ಯಮಂತ್ರಿಗಳು, ಸಚಿವರು, ಸಾಹಿತಿಗಳು, ಕಲಾವಿದರು ಮತ್ತು ರೈತ ಸಮುದಾಯದ…
ಮೈಸೂರು: ಮದ್ಯ ಸೇವಿಸಲು ಹಣಕ್ಕಾಗಿ ಪೀಡಿಸುತ್ತಿದ್ದ ಮಗನ ಕಾಟ ತಾಳಲಾರದೆ ಹೆತ್ತ ತಾಯಿಯೇ ಮಗನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಚಾಮುಂಡಿಬೆಟ್ಟದ ರಸ್ತೆಯ ತಾವರೆಕಟ್ಟೆ ಎಂಬಲ್ಲಿ ಈ ಘಟನೆ ಸಂಭವಿಸಿದೆ. 45 ವರ್ಷದ ರಮೇಶ್ ಕೊಲೆಯಾದ ವ್ಯಕ್ತಿ. ಮೃತ ರಮೇಶ್ ಕುಡಿತದ ವ್ಯಸನಕ್ಕೆ ತುತ್ತಾಗಿದ್ದು, ಪ್ರತಿದಿನ ಮದ್ಯಕ್ಕಾಗಿ ತಾಯಿಯ ಬಳಿ ಹಣ ಕೇಳಿ ಪೀಡಿಸುತ್ತಿದ್ದ ಎನ್ನಲಾಗಿದೆ. ಘಟನೆ ನಡೆದ ದಿನವೂ ಸಹ ಮದ್ಯಕ್ಕಾಗಿ ಹಣ ಕೇಳಿ ತಾಯಿಯೊಂದಿಗೆ ಗಲಾಟೆ ಮಾಡಿದ್ದಾನೆ. ಮಗನ ಮದ್ಯದ ಚಟ ಮತ್ತು ನಿರಂತರ ಕಿರುಕುಳದಿಂದ ರೋಸಿಹೋಗಿದ್ದ ಮಂಜುಳಾ, ರೋಷಗೊಂಡು ತಾವರೆಕಟ್ಟೆ ಬಳಿ ಕಲ್ಲಿನಿಂದ ಮಗನ ತಲೆಯನ್ನು ಜಜ್ಜಿ ಹತ್ಯೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮಗನ ಹತ್ಯೆ ಮಾಡಿದ ಆರೋಪದ ಮೇಲೆ ತಾಯಿ ಮಂಜುಳಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಮೈಸೂರು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ…
ಕೊರಟಗೆರೆ : ವ್ಯಾಸ ಮಹರ್ಷಿಗಳ 18 ಪುರಾಣದ ಕೊನೆಯ ಪುಟದಲ್ಲಿ ‘‘ಪರೋಪಕಾರಿಯೇ ಪುಣ್ಯ. ಪರಪೀಡಿನೇ ಪಾಪ’’ ಎಂಬುದನ್ನು ಅರಿತು ಫ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಳಗ ಜನರಿಂದ ಏನನ್ನು ಬಯಸದೇ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಶ್ರೀಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಕೊರಟಗೆರೆ ಪುರಸಭೆ ಮುಂಭಾಗದಲ್ಲಿ ಫ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಗಳದಿಂದ ಆಯೋಸಿದ್ದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ ಮತ್ತು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಎರಡು ಸಂಘಗಳು 18 ವರ್ಷಗಳಿಂದೇ ಪ್ರಾರಂಭಿಸಿದ ಉಚಿತ ಆಂಬ್ಯುಲೆನ್ಸ್ ಸೇವೆಯನ್ನು ಮುಂದುವರೆಸಿ ಸೇವೆಗೆ ಮತ್ತೊಂದು ಆಂಬ್ಯುಲೆನ್ಸ್ ಖರೀದಿಸಿ ನಿಸ್ವಾರ್ಥ ಸೇವೆಗೆ ಮುಂದಾಗಿರುವುದು ನಿಜಕ್ಕೂ ಪ್ರಶಂಸನೀಯ. ಪೀಠಾಧಿಪತಿಗಳಾಗಿ 20 ವರ್ಷವಾಗಿದೆ ತಿಂಗಳಿಗೆ 8 ರಿಂದ 10 ಸಂಘಗಳ ಉದ್ಘಾಟನೆ ಮಾಡುತ್ತೇವೆ, ಇಲ್ಲಿಯವೆರಗೂ ಸಾವಿರಾರು ಸಂಘ ಉದ್ಘಾಟಿಸಿದರು ಜನ ಮನ್ನಣೆ ಪಡೆದಿರುವುದು…
ಬಳ್ಳಾರಿ: ಕನ್ನಡ ಚಿತ್ರರಂಗದ ಧ್ರುವತಾರೆ, ಕರ್ನಾಟಕ ರತ್ನ ಡಾ.ರಾಜ್ ಕುಮಾರ್ ಅವರ 97ನೇ ಜನ್ಮದಿನದ ಅಂಗವಾಗಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‌ಕುಮಾರ್ ಉದ್ಯಾನವನದಲ್ಲಿನ ಡಾ.ರಾಜ್ ಕುಮಾರ್ ಅವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಪುಷ್ಪನಮನ ಸಲ್ಲಿಸುವ ಮೂಲಕ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು, ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಅಭೂತ ಗೌರವ ನಮನ ಸಲ್ಲಿಸಿದರು. ಈ ವೇಳೆ ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಮಾತನಾಡಿ, ಡಾ.ರಾಜ್ ಕುಮಾರ್ ಅವರು ಅಪ್ಪಟ ಕನ್ನಡಪ್ರೇಮಿಯಾಗಿದ್ದರು. ಅವರ ಸಾಧನೆ ಹಾಗೂ ಕನ್ನಡ ನಾಡು–ನುಡಿಗೆ ಅವರು ನೀಡಿದ ಕೊಡುಗೆ ಅಪಾರ. ಕರ್ನಾಟಕ ಏಕೀಕರಣ ಮತ್ತು ಕನ್ನಡ ಭಾಷೆಯ ಉಳಿವಿಗಾಗಿ ನಡೆದ ಗೋಕಾಕ್ ಚಳುವಳಿಯಲ್ಲಿ ಡಾ.ರಾಜ್ ಅವರ ಪಾತ್ರ ಅವಿಸ್ಮರಣೀಯ. ಅವರ ನಾಯಕತ್ವದಲ್ಲಿ ನಡೆದ ಈ ಹೋರಾಟ ಕನ್ನಡ ಭಾಷೆಯ ಇತಿಹಾಸದಲ್ಲಿ ಮೈಲಿಗಲ್ಲಾಗಿದೆ ಎಂದು ಹೇಳಿದರು. ಡಾ.ರಾಜ್ ಕುಮಾರ್…
ಗುಬ್ಬಿ: “ತನ್ನ ಕೆಲಸದಲ್ಲಿ ದೇವರನ್ನು ಕಾಣು ಎಂದು ಹೇಳಿದ ಬಸವಣ್ಣನವರ ನಾಡು ಇದು. ದೇವರು ಇದ್ದಾನೆ ಎಂಬುದು ಅವರವರ ನಂಬಿಕೆಯಾಗಿದ್ದು, ಕೋಟ್ಯಾಂತರ ಜನರು ಆ ನಂಬಿಕೆಯ ಮೇಲೆ ಜೀವನ ಸಾಗಿಸುತ್ತಿದ್ದಾರೆ,” ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ ಶಿಲಾ ದೇವಾಲಯ ಲೋಕಾರ್ಪಣೆ, ಸಂಪ್ರೋಕ್ಷಣೆ, ಸ್ಥಿರ ಬಿಂಬ ಪ್ರತಿಷ್ಠಾಪನೆ ಹಾಗೂ ಮಹಾ ಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ಉತ್ತಮ ಕೆಲಸ ಮಾಡಿದಾಗ ದೇವರು ರಕ್ಷಣೆ ಮಾಡುತ್ತಾನೆ. ದೇವಾಲಯಗಳಿಗೆ ಹೋದಾಗ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಇದೇ ಕಾರಣಕ್ಕೆ ಹಳ್ಳಿಗಳಿಂದ ನಗರಗಳವರೆಗೆ ದೇವಾಲಯಗಳು ನಿರ್ಮಾಣಗೊಂಡಿವೆ. ಕಷ್ಟ ಬಂದಾಗ ದೇವರ ಮೊರೆ ಹೋಗುವುದು ಪುರಾತನ ಕಾಲದಿಂದಲೂ ಬಂದ ನಂಬಿಕೆ. ‘ನನ್ನನ್ನು ಎಂಎಲ್ಎ ಮಾಡು’ ಎಂದು ಕೂಡ ದೇವರಲ್ಲಿ ಪ್ರಾರ್ಥಿಸುತ್ತೇವೆ. ಪ್ರಾರ್ಥನೆಯಿಂದ ಮನಸ್ಸಿಗೆ ಶಾಂತಿ ಮತ್ತು ಕೆಲಸಗಳು ಯಶಸ್ವಿಯಾಗುತ್ತವೆ ಎಂಬ ಗಾಢ ನಂಬಿಕೆ ನಮ್ಮಲ್ಲಿದೆ ಎಂದರು. ಗುಬ್ಬಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ…
ತುಮಕೂರು: ಸ್ವಾಭಿಮಾನಿ ಕರ್ನಾಟಕ ವೇದಿಕೆಯು ಪ್ರತಿವರ್ಷದಂತೆ ಈ ವರ್ಷವೂ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ 2025 ರಲ್ಲಿ ಪ್ರಕಟಗೊಂಡ ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ಪ್ರಶಸ್ತಿ ನೀಡಲು ನಿರ್ಧರಿಸಿದ್ದು, ಲೇಖಕರು ಮತ್ತು ಪ್ರಕಾಶಕರಿಂದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ 4 ಪ್ರಕಾರದ, 4 ಕೃತಿಗಳಿಗೆ (ಅದರಲ್ಲಿ ಒಂದು ಡಾ.ಸಿ.ಸೋಮಶೇಖರ್/ ಸರ್ವಮಂಗಳಮ್ಮ ಸಾಹಿತ್ಯ ಸೇವಾ ಪ್ರತಿಷ್ಠಾನ (ರಿ) ಬೆಂಗಳೂರು ದತ್ತಿ ಪ್ರಶಸ್ತಿ ಸೇರಿದೆ) ಕಥೆ, ಕಾದಂಬರಿ, ಕವಿತೆ, ಮಕ್ಕಳ ಸಾಹಿತ್ಯ, ನಾಟಕ ಇತ್ಯಾದಿಯಾಗಿ ತಲಾ 5000 ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹೊಂದಿದೆ. ಪುಸ್ತಕದ ಮೂರು ಪ್ರತಿಗಳನ್ನು ಮೇ 30ರ ಒಳಗೆ ಕಳುಹಿಸಬೇಕೆಂದು ವೇದಿಕೆಯ ಅಧ್ಯಕ್ಷರಾದ ದ್ವಾರನಕುಂಟೆ ಪಾತಣ್ಣ ಅವರು ತಿಳಿಸಿದ್ದಾರೆ. ಪುಸ್ತಕಗಳನ್ನು ಕಳುಹಿಸಬೇಕಾದ ವಿಳಾಸ: ದ್ವಾರನಕುಂಟೆ ಪಾತಣ್ಣ, ಅಧ್ಯಕ್ಷರು ಸ್ವಾಭಿಮಾನಿ ಕರ್ನಾಟಕ ವೇದಿಕೆ, ನಂ.118, ‘ಹೊಂಬೆಳಕು’ 5ನೇ ಕ್ರಾಸ್, ಹೆಚ್.ಎಂ.ಟಿ. ಲೇಔಟ್, ನಾಗಸಂದ್ರ ಅಂಚೆ, ಬೆಂಗಳೂರು-560073 ಇಲ್ಲಿಗೆ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9686073837 ಇವರನ್ನು ಸಂಪರ್ಕಿಸುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…