Author: admin

ಮಾರುಕಟ್ಟೆಯಲ್ಲಿ ಹಲವು ರೀತಿಯ ಪಾನ್‌ ಗಳು ಲಭ್ಯವಿವೆ. ಚಾಕೊಲೇಟ್ ಪಾನ್, ಫೈರ್ ಪಾನ್, ಐಸ್ ಸ್ಮೋಕ್ ಪಾನ್ ಹೀಗೆ ಹಲವು ಬಗೆಯ ಎಲೆಗಳಿವೆ. ಇದು ನೂರಾರು ಅಥವಾ ಸಾವಿರಾರು ವೆಚ್ಚವಾಗಬಹುದು. ಆದರೆ ನೀವು ಎಂದಾದರೂ ಲಕ್ಷ ರೂಪಾಯಿಯ ಪಾನ್ ತಿಂದಿದ್ದೀರಾ..? ನೀವು ಎಂದಾದರೂ ಒಂದು ಲಕ್ಷ ರೂಪಾಯಿ ಮೌಲ್ಯದ ಪಾನ್ ತಿಂದಿದ್ದೀರಾ? ಇಷ್ಟೊಂದು ಬೆಲೆ ಪಾನ್​ ಇರುತ್ತಾ ಎಂದು ಎಂದಾದರೂ ಕೇಳಿದ್ದೀರಾ? ಅದಕ್ಕೆಲ್ಲಾ ಉತ್ತರ ಇಲ್ಲಿದೆ. ಮುಂಬೈನಲ್ಲಿ ಒಂದು ಪಾನ್​ ಅಂಗಡಿ ಇದೆ. ಅಲ್ಲಿ ಒಂದು ಲಕ್ಷ ರೂಪಾಯಿ ಬೆಲೆಬಾಳುವ ಪಾನ್​ ಸಿಗುತ್ತದೆ. ಈ ಅಂಗಡಿಯ ಮಾಲೀಕ ನೌಶಾದ್ ಶೇಖ್, ಇವರು ಎಂಬಿಎ ಮಾಡಿದ್ದಾರೆ. ಹಲವಾರು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಸಂಬಳದ ಕೆಲಸ ಸಿಕ್ಕಿತು. ಆದರೆ ಅವರು ತಮ್ಮದೇ ಆದದನ್ನು ಬ್ಯುಸಿನೆಸ್​ ಪ್ರಾರಂಭಿಸುವ ಗುರಿಯನ್ನು ಬೆನ್ನತ್ತಿದರು. 1 ಲಕ್ಷ ಬೆಲೆಯ ಪಾನ್ ​ಗೆ ರಾಯಲ್ ಲುಕ್ ನೀಡುವ ಮೂಲಕ ತಮ್ಮ ಪೂರ್ವಜರ ವ್ಯವಹಾರವನ್ನು ಮುಂದುವರೆಸಿದರು. ತಮ್ಮ ಅಂಗಡಿಗೆ ‘ದಿ ಪ್ಯಾನ್ ಸ್ಟೋರಿ’…

Read More

ಗರ್ಭಿಣಿ ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರದ ಮಾತೃವಂದನಾ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕøತ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೋಂದಣಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆ ಮಾಹಿತಿಯ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್, ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್(ಯಾವುದಾದರು ಪ್ರತಿ) ಸಲ್ಲಿಸಬೇಕು. ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ. ಮೊದಲ ಮಗುವಿಗೆ ಎರಡು ಕಂತುಗಳಲ್ಲಿ…

Read More

ತುಮಕೂರು: ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ೬,೯೨,೫೦೮ ಪಡಿತರ ಚೀಟಿಗಳ ಪೈಕಿ ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ ರದ್ದುಪಡಿಸಬೇಕೆಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಸೂಚಿಸಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆದಾಯ ತೆರಿಗೆ ಪಾವತಿ ಮಾಡುವ, ಕುಟುಂಬದ ಆದಾಯ ೧.೨೦ ಲಕ್ಷಕ್ಕಿಂತ ಹೆಚ್ಚಿರುವ, ಸರ್ಕಾರಿ  ನೌಕರರು, ೩ ಹೆಕ್ಟೇರ್‌ ಗಿಂತ ಹೆಚ್ಚು ಭೂಮಿ ಹೊಂದಿರುವ ಪಡಿತರ ಚೀಟಿಗಳನ್ನು ರದ್ದುಪಡಿಸಲು ಹಿಂದಿನ ಸಭೆಯಲ್ಲಿ ಸೂಚಿಸಲಾಗಿದ್ದರೂ ಕೇವಲ ೯೮,೮೯೩ ಪಡಿತರ ಚೀಟಿಗಳನ್ನು ಮಾತ್ರ ರದ್ದುಪಡಿಸಲಾಗಿದೆ. ಉಳಿದ ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಅವರಿಗೆ ಸೂಚನೆ ನೀಡಿದರು. ವಸತಿ ರಹಿತ ಬಡವರು, ನಿರ್ಗತಿಕ ಫಲಾನುಭವಿಗಳಿಗೆ ಬಸವ, ಡಾ.ಬಿ.ಆರ್.ಅಂಬೇಡ್ಕರ್ ನಿವಾಸ, ಪ್ರಧಾನಮಂತ್ರಿ ಅವಾಸ್ ಸೇರಿ ವಿವಿಧ ವಸತಿ ಯೋಜನೆಗಳಡಿ ವಸತಿ ಕಲ್ಪಿಸಲು ೨೦೧೫ ರಿಂದ ೨೦೨೩ರವರೆಗೆ ೫೨೮೨೩ ಮನೆಗಳನ್ನು…

Read More

ತುಮಕೂರು: ಜಿಲ್ಲೆಯ ವಿವಿಧ ನ್ಯಾಯಲಯಗಳಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದುಕೊಂಡಿರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸುವ ಉದ್ದೇಶದಿಂದ ಸೆಪ್ಟಂಬರ್ 14ರಂದು ರಾಷ್ಟ್ರೀ ಲೋಕ್ ಆದಾಲತ್ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್ ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ  ಪ್ರಕರಣಗಳನ್ನು ಕಡಿಮೆ ಮಾಡುವುದು ಮತ್ತು ಸಾರ್ವಜನಿಕರು ನ್ಯಾಯಾಲಯಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಲೋಕ್ ಆದಾಲತ್‌ಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕಳೆದ ಜುಲೈ ತಿಂಗಳಲ್ಲಿ ನಡೆದ ಲೋಕ್ ಆದಾಲತ್‌ನಲ್ಲಿ ಜಿಲ್ಲೆಯ ವಿವಿಧ ನ್ಯಾಯಲಯಗಳಲ್ಲಿ ಬಾಕಿ ಇದ್ದ ೯೭೭೧೯ ಪ್ರಕರಣಗಳ ಪೈಕಿ  ೧೦೨೦೩ ಪ್ರಕರಣಗಳನ್ನು ಹಾಗೂ ೧೬೬೩೨೮ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು. ಲೋಕ್ ಅದಾಲತ್‌ನಲ್ಲಿ  ಜನಸಾಮಾನ್ಯರಿಗೆ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ಎಲ್ಲಾ ರೀತಿಯ…

Read More

ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15ರ ಗುರುವಾರ ಬೆಳಿಗ್ಗೆ 9 ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ‘78ನೇ ಸ್ವಾತಂತ್ರ್ಯ ದಿನಾಚರಣೆ–2024’  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರು ಹಾಗೂ ಸಂಸದರಾದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ. ಪರಮೇಶ್ವರ  ಅವರು ಅಂದು ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡಿ, ಗೌರವರಕ್ಷೆ ಸ್ವೀಕರಿಸುವರು. ಸಹಕಾರ ಸಚಿವ ಕೆ.ಎನ್. ರಾಜಣ್ಣ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ತುಮಕೂರು ನಗರ ವಿಧಾನಸಭಾ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ.ಕಾರಜೋಳ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್. ಮಂಜುನಾಥ್, ಶಾಸಕರಾದ ಡಾ:…

Read More

ತುಮಕೂರು:  ಜಿಲ್ಲಾ ಕೇಂದ್ರದಲ್ಲಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತ್ಯೋತ್ಸವ ಕಾರ್ಯಕ್ರಮವನ್ನು ನಡೆಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಕುಳುವ ಸಮಾಜದ ಮುಖಂಡರ ಮನವಿ ಮೇರೆಗೆ ಈ ತೀರ್ಮಾನ ತೆಗೆದುಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ರಾಜ್ಯ ಸಚಿವರು ಪಾಲ್ಗೊಳ್ಳಲಿರುವುದರಿಂದ ಆಗಸ್ಟ್ 19ರಂದು ಆಚರಿಸಬೇಕಿದ್ದ ಜಿಲ್ಲಾ ಮಟ್ಟದ ಶ್ರೀ ನುಲಿಯ ಚಂದಯ್ಯ ಜಯಂತ್ಯೋತ್ಸವವನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ  ಬೆಳಿಗ್ಗೆ 11:30 ಗಂಟೆಗೆ ಆಚರಿಸಲು ಅನುವು ಮಾಡಿಕೊಡಬೇಕೆಂದು  ಕುಳುವ ಸಮಾಜ ಮುಖಂಡರೆಲ್ಲ ಒಮ್ಮತದಿಂದ ಸಭೆಗೆ ಮನವಿ ಮಾಡಿದರು. ಮನವಿಗೆ ಒಪ್ಪಿಗೆ ಸೂಚಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 10 ಗಂಟೆಗೆ ಟೌನ್ ಹಾಲ್ ವೃತ್ತದಿಂದ ಎಂ.ಜಿ. ರಸ್ತೆ ಮಾರ್ಗವಾಗಿ ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೂ ಶ್ರೀ ನುಲಿಯ ಚಂದಯ್ಯ ಅವರ  ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಬೇಕು.  ಮೆರವಣಿಗೆಯಲ್ಲಿ ಅತ್ಯುತ್ತಮ ಕಲಾ ಪ್ರದರ್ಶನ ನೀಡುವ…

Read More

ತುಮಕೂರು:  ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮವು ವಿದೇಶಿ ಉನ್ನತ ವ್ಯಾಸಂಗಕ್ಕಾಗಿ ನೇರ ಸಾಲದ ಯೋಜನೆಯಡಿ ಸಾಲ ಸೌಲಭ್ಯ ನೀಡಲು  ಜಿಲ್ಲೆಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಜನಾಂಗದ ವಿದ್ಯಾರ್ಥಿಗಳು   ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು 18 ರಿಂದ 38 ವರ್ಷದೊಳಗಿನವರಾಗಿದ್ದು, ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.  ಹಿಂದಿನ ವರ್ಷದಲ್ಲಿ ಕನಿಷ್ಟ ಶೇ.60 ಅಂಕ ಹಾಗೂ  ವಿದೇಶಿ ವಿಶ್ವ ವಿದ್ಯಾಲಯದಿಂದ ಆಫರ್ ಲೆಟರ್ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ರೂ. ಮೀರಿರಬಾರದು. ಈ ಸಾಲ ಸೌಲಭ್ಯ ಪಡೆಯುವ ಅರ್ಜಿದಾರರು ಸರ್ಕಾರವು ಅಂಗೀಕರಿಸಿದ ಅಲ್ಪಸಂಖ್ಯಾತ ವರ್ಗಗಳ ಪ್ರವರ್ಗ-1, 2ಬಿ, ಮತ್ತು 3ಬಿ ಗುಂಪಿಗೆ ಸೇರಿದವರಾಗಿರಬೇಕು. ಈ ಹಿಂದೆ ನಿಗಮದ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದವರಿಗೆ ಮತ್ತೊಮ್ಮೆ ಸಾಲ ಸೌಲಭ್ಯ ಪಡೆಯಲು ಅರ್ಹತೆ ಇರುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಆಸ್ತಿ(ಕಟ್ಟಡ/ಜಮೀನು)ಯನ್ನು ನಿಗಮದ ಹೆಸರಿಗೆ ಅಡಮಾನ ಇಟ್ಟರೆ ಮಾತ್ರ ಸಾಲ ಸೌಲಭ್ಯ ಕಲ್ಪಿಸಲಾಗುವುದು(ಆಸ್ತಿಯ…

Read More

ತುಮಕೂರು: ವಿದ್ಯಾರ್ಥಿ ಜೀವನದಲ್ಲಿ ಯಾವುದು ಕಠಿಣವಲ್ಲ. ಶ್ರದ್ಧೆ ಮತ್ತು  ಏಕಾಗ್ರತೆ ಇದ್ದರೆ ಎಲ್ಲವೂ ಸಾಧ್ಯ. ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಲು ಕಠಿಣ ಪರಿಶ್ರಮ ಪಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಜಿಲ್ಲೆಯ ಕುಣಿಗಲ್ ತಾಲ್ಲೂಕು ಭಕ್ತರಹಳ್ಳಿ ಇಂದಿರಾ ಗಾಂಧಿ ವಸತಿ ಶಾಲೆ(ಪ.ಜಾ)ಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ನಡೆಸುತ್ತಿರುವ ಕಿರು ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿರುವ ಮತ್ತು ವಿಷಯ ಗ್ರಹಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಏರ್ಪಡಿಸಿ ಪಠ್ಯಾಭ್ಯಾಸ ಮಾಡಿಸಬೇಕು ಎಂದು ಶಿಕ್ಷಕರಿಗೆ ಸೂಚನೆ ನೀಡಿದರಲ್ಲದೇ, ಶಾಲೆಯ ಆಡಳಿತಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಿಸದ ಶಾಲಾ ಮುಖ್ಯಸ್ಥರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು. ನಂತರ ಭಕ್ತರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕೊತ್ತಗೆರೆ ನಾಡ ಕಚೇರಿ, ಕುಣಿಗಲ್ ಪಟ್ಟಣದ ಮಹಾತ್ಮ ಗಾಂಧಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಣಿಗಲ್ ತಾಲೂಕು ಸಾರ್ವಜನಿಕ ಆಸ್ಪತ್ರೆ ಸೇರಿದಂತೆ  …

Read More

ತುಮಕೂರು:  ಭಾರತೀಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಇರುವುದರಿಂದ ಭಾರರೀ ಮಳೆಯಾಗುವ ಸಾಧ್ಯತೆ ಇದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿಂದು ಸಂಜೆ ನೀಡಿದ ತುರ್ತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ ಅವರು, ಮಳೆಯಿಂದ ಯಾವುದೇ ಜನ–ಜಾನುವಾರುಗಳಿಗೆ ಜೀವ ಹಾನಿಯಾಗದಂತೆ ನದಿ/ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ/ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನದಿ/ ಹಳ್ಳ/ ಕೆರೆ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಫೋಟೋ/ ಸೆಲ್ಫಿಗಳನ್ನು ತೆಗೆಯದಂತೆ ಯುವಕ/ ಯುವತಿಯರಿಗೆ ಮತ್ತು ಸಾರ್ವಜನಿಕರಿಗೆ ತಿಳಿ ಹೇಳಬೇಕು. ಭಾರೀ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರಬೇಕು ಹಾಗೂ ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಬೇಕು ಎಂದು ಗ್ರಾಮ…

Read More

ಉತ್ತಮ ದೇಹವನ್ನು ಹೊಂದಬೇಕು ಎಂಬ ಆಸೆ ಹೆಚ್ಚಾಗಿರುತ್ತದೆ. ಅದರಲ್ಲೂ ನಮ್ಮ ನೆಚ್ಚಿನ ಸೆಲೆಬ್ರಿಟಿಗಳು ಜಿಮ್‌ಗೆ (Gym) ಹೋಗುವುದನ್ನು ನೋಡಿದಾಗ ಹಾಗೂ ಸಾಮಾಜಿಕ ಜಾಲತಾಣಗಳ ವೀಕ್ಷಣೆಗಳಿಂದ ಪ್ರೇರಿತರಾಗಿ ಅನೇಕ ಮಂದಿ ಜಿಮ್‌ಗೆ ಸೇರುತ್ತಾರೆ. ಆದರೆ ನಮ್ಮ ದೇಹವು ನಾವು ಮಾಡುವ ಎಲ್ಲಾ ಚಟುವಟಿಕೆಗಳಿಗೆ ವಯಸ್ಸಿನ ಮಿತಿಗಳನ್ನು ಹೊಂದಿರುತ್ತದೆ. ಪ್ರತಿಯೊಬ್ಬರೂ ಜಿಮ್‌ಗೆ ಹೋಗಲು ಸರಿಯಾದ ವಯಸ್ಸು ಯಾವುದು ಎಂದು ತಿಳಿದಿರಬೇಕು. ಜಿಮ್‌ಗೆ ಸೇರಲು ಸರಿಯಾದ ವಯಸ್ಸು ಒಬ್ಬರ ದೈಹಿಕ ಪ್ರಬುದ್ಧತೆ ಮತ್ತು ಅನುಭವವನ್ನು ಅವಲಂಬಿಸಿರುತ್ತದೆ ಎಂದು ಡಾ. ದಿನೇಶ್ ಕಪೂರ್ ಹೇಳುತ್ತಾರೆ. 13-15 ವರ್ಷಗಳು: 13 ರಿಂದ 15 ವರ್ಷಗಳು ಒಬ್ಬರ ಜೀವನದ ಪ್ರಮುಖ ಅವಧಿಯಾಗಿದೆ. ಈ ಅವಧಿಯಲ್ಲಿ ದೇಹವು ಪ್ರೌಢಾವಸ್ಥೆಯನ್ನು ತಲುಪಿದಾಗ, ಅದು ಅನೇಕ ದೈಹಿಕ ಬದಲಾವಣೆಗಳಿಗೆ ಒಳಗಾಗುತ್ತದೆ. ಆದ್ದರಿಂದ 13 ರಿಂದ 15 ವರ್ಷದ ಮಕ್ಕಳು ಜಿಮ್‌ನಲ್ಲಿ ಭಾರ ಎತ್ತುವ ಬದಲು ಸರಳ ವ್ಯಾಯಾಮ ಮಾಡುವ ಮೂಲಕ ದೇಹವನ್ನು ಕಾಪಾಡಿಕೊಳ್ಳುವುದು ಉತ್ತಮ. ವಯಸ್ಸು 16-18: ದೇಹವು 16 ರಿಂದ 18 ವರ್ಷಗಳನ್ನು ತಲುಪುವ ಹೊತ್ತಿಗೆ,…

Read More