Author: admin

ರಕ್ಷಾ ಬಂಧನದಂದು ಸಹೋದರಿ ತನ್ನ ಸಹೋದರನಿಗೆ ರಕ್ಷೆ ದಾರ ಅಥವಾ ರಾಖಿಯನ್ನ ಕಟ್ಟಿ, ಅವನ ರಕ್ಷಣೆ ಸದಾ ತನ್ನ ಮೇಲಿರಲಿ ಎಂದು ಕೋರುತ್ತಾಳೆ. ಅದಕ್ಕೆ ಪ್ರತಿಯಾಗಿ ಸಹೋದರ..ತನ್ನ ಸಹೋದರಿಗೆ ಎಂದೆಂದಿಗೂ ಜೊತೆಗೆ ಇರುವ..ರಕ್ಷಣೆ ಮಾಡುವ ಭರವಸೆಯನ್ನ ಕೊಡುತ್ತಾನೆ. ಅಂದಹಾಗೇ, ಈ ಸಲ ರಕ್ಷಾ ಬಂಧನ ಹಬ್ಬ ಯಾವಾಗ? ಇತಿಹಾಸ ಏನು? ರಕ್ಷಾ ಬಂಧನ ಹಬ್ಬವನ್ನ ಈ ಸಲ ಆಗಸ್ಟ್‌ 19, ಸೋಮವಾರ ಆಚರಣೆ ಮಾಡಲಾಗುತ್ತಿದೆ. ಶ್ರಾವಣ ಮಾಸದ ಹುಣ್ಣಿಮೆಗೆ ವಿಶೇಷ ಪ್ರಾಶಸ್ತ್ಯವಿದ್ದು, ಅತ್ಯಂತ ಶುಭ ದಿನ ಎಂದು ಪರಿಗಣಿಸಲಾಗುತ್ತದೆ. ರಕ್ಷಾ ಬಂಧನ ಹಬ್ಬ ಪ್ರಾಮುಖ್ಯತೆ ಪಡೆದಿದ್ದು ಸುಮಾರು 16ನೇ ಶತಮಾನದಲ್ಲಿಯೇ ಆದರೂ, ನಿಜವಾಗಿ ರಕ್ಷಾ ಬಂಧನ ಶುರುವಾಗಿದ್ದು ಮಹಾಭಾರತ ಕಾಲದಿಂದ ಎಂದು ಹಿಂದುಗಳು ನಂಬುತ್ತಾರೆ. ಇದನ್ನು ಪ್ರಾರಂಭಿಸಿದ್ದು ಶ್ರೀಕೃಷ್ಣ ಎನ್ನಲಾಗುತ್ತದೆ…ಈ ಚೆಂದದ ಕಥೆ ಹೀಗಿದೆ ಓದಿ.. ʼಶ್ರೀ ಕೃಷ್ಣ, ಪಾಂಡವರು ಎಲ್ಲ ಒಟ್ಟಿಗೆ ಇದ್ದ ಸಂದರ್ಭದಲ್ಲಿ ಭಗವಂತ ಶ್ರೀಕೃಷ್ಣ ಗಾಳಿಪಟ ಹಾರಿಸುತ್ತಿರುತ್ತಾನೆ . ಆಗ ಗಾಳಿಪಟಕ್ಕೆ ಕಟ್ಟಿದ ನೂಲು ಕೃಷ್ಣನ ಬೆರಳನ್ನು…

Read More

ಕನ್ನಡದಲ್ಲಿ ಬಿಗ್ ಬಾಸ್ ಸೀಸನ್ 11 ಯಾವಾಗ ಶುರುವಾಗುತ್ತೆ ಎಂದು ವೀಕ್ಷಕರು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ. ಇದೀಗ ಬಿಗ್ ಅಪ್ಡೇಟ್ ಒಂದು ಲೀಕ್ ಆಗಿದೆ. ಬಿಗ್ ಬಾಸ್ 10ನೇ ಸೀಸನ್ ಮುಗಿದು ವರ್ಷವಾಗುತ್ತಾ ಬಂತು ಇನ್ನೇನು ಕೆಲವೇ ತಿಂಗಳಿನಲ್ಲಿ 1 ವರ್ಷ ಪೂರೈಸಲಿದೆ. ಈ ನಡುವೆ ಬಿಗ್ ಬಾಸ್ ಸೀಸನ್ 11 ಗೆ ಭರ್ಜರಿ ತಯಾರಿ ಆರಂಭವಾಗಿದೆ. ಕನ್ನಡ ಬಿಗ್ ಬಾಸ್ ಸೀಸನ್ 11ರ ಮೊದಲ ಪ್ರೋಮೋ ಶೂಟಿಂಗ್ ಮಾಡಿ ಮುಗಿಸಲಾಗಿದ್ದು, ಬಿಡುಗಡೆಗೆ ಎದುರು ನೋಡುತ್ತಿರುವ ಕಾರಣ ಎಡಿಟಿಂಗ್ ಟೇಬಲ್ ಸೇರಿದೆಯಂತೆ. ಈ ಬಾರಿ ಪ್ರೋಮೋವನ್ನು ಹೈದರಾಬಾದ್ ನಲ್ಲಿ ಶೂಟಿಂಗ್ ಮಾಡಲಾಗಿದೆಯಂತೆ. ಎಂದಿನಂತೆ ನಟ ಕಿಚ್ಚ ಸುದೀಪ್ ಅವರು ಈ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಎಡಿಟಿಂಗ್ ಹಂತದಲ್ಲಿರುವ ಪ್ರೋಮೋ ಆಗಸ್ಟ್ ಕೊನೆಯ ವಾರ ಅಥವಾ ಸೆಪ್ಟೆಂಬರ್ 2ನೇ ವಾರದ ಒಳಗೆ ಬಿಡುಗಡೆ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆಯಂತೆ. ಸೆಪ್ಟೆಂಬರ್ 29ರಂದು ಬಿಗ್ ಬಾಸ್ ಸೀಸನ್ 11 ಆರಂಭಿಸಲು ತಂಡ ಮತ್ತು ಕಲರ್ಸ್ ಕನ್ನಡ…

Read More

ಬೆಂಗಳೂರು: ಅರಣ್ಯ, ಪರಿಸರ ಮತ್ತು ಜೀವಿ ಶಾಸ್ತ್ರ ಇಲಾಖೆಯ ಸಚಿವರಾದ ಈಶ್ವರ ಖಂಡ್ರೆ ಅವರನ್ನು ಮಂಗಳವಾರ, ವಿಧಾನ ಸೌಧದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ಭೇಟಿಯಾಗಿ “ಚಿಣ್ಣರ ವನ ದರ್ಶನ” ಮತ್ತು “ಸಸ್ಯಶಾಮಲ” ಕಾರ್ಯಕ್ರಮಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದರು. ಸಭೆಯ ಮುಖ್ಯ ಉದ್ದೇಶ ಈ ಕಾರ್ಯಕ್ರಮಗಳನ್ನು ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ವಿಸ್ತರಿಸುವುದಾಗಿತ್ತು. ಈ ಸಂಬಂಧ, ಆಯೋಗದ ಸದಸ್ಯರು, ಈ ಕಾರ್ಯಕ್ರಮಗಳಿಗೆ ಇರುತ್ತಿರುವ ಮಿತಿಯನ್ನು ಹೆಚ್ಚಿಸುವ ಕುರಿತು ಸಚಿವರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರ್ ಗೌಡ ರಾಮತ್ನಾಳ, ಶಶಿಧರ್ ಕೋಸಂಬೆ, ಮತ್ತು ಡಾ. ತಿಪ್ಪೇಸ್ವಾಮಿ ಕೆ.ಟಿ. ಉಪಸ್ಥಿತರಿದ್ದರು. ಸಭೆಯು ಸಕಾರಾತ್ಮಕವಾಗಿ ಮುಗಿದಿದ್ದು, ಮಕ್ಕಳ ಹಕ್ಕುಗಳ ರಕ್ಷಣೆಗೆ ಈ ಕಾರ್ಯಕ್ರಮಗಳು ಹೇಗೆ ಉಪಯೋಗಿಯಾಗುತ್ತವೆ ಎಂಬ ವಿಷಯದಲ್ಲಿ ಸದರಿ ಮಂಡಳಿಯು ಆತ್ಮವಿಶ್ವಾಸ ವ್ಯಕ್ತಪಡಿಸಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಬೆಂಗಳೂರು: ಪಶ್ಚಿಮ ಬಂಗಾಳ ಮೂಲದ ಯುವತಿಯೊಬ್ಬಳು ಬೆಂಗಳೂರಿನಲ್ಲಿ ರೈಲಿಗೆ ಸಿಕ್ಕಿ ಸಾವಿಗೆ ಶರಣಾಗಿರುವ ಘಟನೆ ನಡೆದಿದೆ. ಲಿಖಿತ ಗೇಸರ್ (25) ಸಾವಿಗೆ ಶರಣಾದ ಯುವತಿಯಾಗಿದ್ದಾಳೆ. ಈಕೆ ಇತ್ತೀಚೆಗೆ ಈಕೆಯ ಅಕ್ಕ—ಭಾವನ ಜೊತೆಗೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ಸಮೀಪದಲ್ಲಿ ವಾಸವಾಗಿದ್ದಳು. 10 ದಿನಗಳ ಹಿಂದೆಯಷ್ಟೇ ಲಿಖಿತ ಬೆಂಗಳೂರಿಗೆ ಬಂದಿದ್ದಳು. ಇಂದು ಬೆಳಗ್ಗೆ 9 ಗಂಟೆಗೆ ಮನೆಯ ಸಮೀಪವಿರುವ ರೈಲ್ವೆ ನಿಲ್ದಾಣದ ಹಳಿ ಬಳಿ ಹೋಗಿ ರೈಲಿನಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಪ್ರೇಮವೈಫಲ್ಯದ ಹಿನ್ನೆಲೆ ಲಿಖಿತ ಜೀವನದಲ್ಲಿ ಜಿಗುಪ್ಸೆಗೊಂಡಿದ್ದಳು. ಹೀಗಾಗಿ ವಾತಾವರಣ ಬದಲಾಗಲಿ ಅಂತ ಅಕ್ಕ-ಭಾವ ತಮ್ಮ ಮನೆಗೆ ಕರೆಸಿಕೊಂಡಿದ್ದರು. ಆದರೆ ಇದೀಗ ಆಕೆ ಸಾವಿನ ಮೊರೆ ಹೋಗಿದ್ದಾಳೆ ಎನ್ನುವ ಶಂಕೆ ವ್ಯಕ್ತವಾಗಿದೆ. ಯಶವಂತಪುರ ರೈಲ್ವೆ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಬೆಂಗಳೂರು: ಮೊನ್ನೆ ಸುರಿದ ಬಾರಿ ಮಳೆಗೆ ಇಡಿ ನಗರ ತತ್ತರಿಸಿ ಹೋಗಲು ಬೀದಿ ಬದಿ ಅಂಗಡಿಗಳೇ ಕಾರಣ ಎನ್ನಲಾಗಿದ್ದು, ಅತೀ ಶೀಘ್ರವೇ ಫುಟ್ ಪಾತ್ ಅಂಗಡಿಗಳ ತೆರವು ಕಾರ್ಯಾಚರಣೆಗೆ ಮುಂದಾಗಲಿದ್ದಾರೆ ಎಂದು ತಿಳಿದು ಬಂದಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆದೇಶದ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ. ಪಾದಚಾರಿ ಮಾರ್ಗಗಳಲ್ಲಿ ಅಕ್ರಮವಾಗಿ ಹಾಕಿಕೊಂಡಿರುವ ಅಂಗಡಿಗಳ ತೆರವು ಕಾರ್ಯಚರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಮಳೆ ಅನಾಹುತ ಪ್ರದೇಶಗಳಿಗೆ ಭೇಟಿ ನೀಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ರಾಜಕಾಲುವೆ ನೀರು ಉಕ್ಕಿ ಹರಿಯಲು ಕಾರಣ ಎನ್ನುವುದು ಪತ್ತೆಯಾಗಿರುವುದರಿಂದ ಅವರು ಅಕ್ರಮ ಮಳಿಗೆಗಳ ತೆರವಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಪುಟ್ಪಾತ್ ಅಂಗಡಿಗಳು ತಮ್ಮ ಅಂಗಡಿಯ ತ್ಯಾಜ್ಯ ಗಳನ್ನು ರಾಜಕಾಲುವೆ ಗೆ ಬೇಕಾಬಿಟ್ಟಿ ಎಸೆಯುತ್ತಿರುವುದರಿಂದ ಡ್ರೈನೇಜ್ ಬ್ಲಾಕ್ ಅಗಿದೆ. ಅದೇ ರೀತಿ ಎಳನೀರು ವ್ಯಾಪಾರಿಗಳು ಖಾಲಿ ಬುರುಡೆಗಳನ್ನೂ ಚರಂಡಿಗೆ ಎಸೆದಿರುವುದು ಕಂಡು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಕೋಲ್ಕತ್ತ: ಪಶ್ಚಿಮ ಬಂಗಾಳದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಿ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ವಿದ್ಯಾರ್ಥಿನಿ ಸಾವನ್ನು ಕೊಲೆ ಎಂದು ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿತ್ತು. ಇದಾದ ಬೆನ್ನಲ್ಲೇ ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸಿತು. ಜತೆಗೆ ಬುಧವಾರ (ಆ. 14)ರೊಳಗಾಗಿ ಪ್ರಕರಣ ಕುರಿತ ಎಲ್ಲಾ ದಾಖಲೆಯನ್ನು ಸಿಬಿಐಗೆ ವಹಿಸುವಂತೆ ರಾಜ್ಯ ಪೊಲೀಸ್ಗೆ ಹೈಕೋರ್ಟ್ ನಿರ್ದೇಶಿಸಿದೆ. ಕೋಲ್ಕತ್ತ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ನೇತೃತ್ವದ ವಿಭಾಗೀಯ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಘಟನೆ ನಡೆದ ನಂತರ ತಕ್ಷಣ ದೂರು ದಾಖಲಾಗದ ಕಾರಣ, ಇದೊಂದು ಅಸಹಜ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಸರ್ಕಾರ ಪರ ವಕೀಲರು ನ್ಯಾಯಾಲಯಕ್ಕೆ ಹೇಳಿದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ, ‘ವಿದ್ಯಾರ್ಥಿನಿಯ ಮೃತ ದೇಹ ರಸ್ತೆಯಲ್ಲಿ ದೊರೆತಿಲ್ಲ. ಕಾಲೇಜಿನ ಪ್ರಾಚಾರ್ಯ ಅಥವಾ ಸೂಪರಿಂಟೆಂಡೆಂಟ್ ಅವರು ದೂರು ನೀಡಬಹುದಿತ್ತು’…

Read More

ಪಾವಗಡ: 2024 — 25 ನೇ ಸಾಲಿನ ತಾಲ್ಲೂಕಿನ ಕೋಟಗುಡ್ಡ ಸಹನಾ ಶಾಲೆಯ ವಿದ್ಯಾರ್ಥಿಗಳು ನಿಡಗಲ್ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗಿದ್ದು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿರುವುದಕ್ಕೆ ಸಹನಾ ಶಾಲೆಯ ಆಡಳಿತಾಧಿಕಾರಿಗಳಾದ ಶ್ರೀನಿವಾಸ್ ರವರು ದೈಹಿಕ ಶಿಕ್ಷಕರಾದ ಮಲ್ಲಿಕಾರ್ಜುನ್ ಹಾಗೂ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿಜೇತ ಮಕ್ಕಳ ವಿವರ: ಪ್ರಾಥಮಿಕ ಶಾಲಾ ವಿಭಾಗದಲ್ಲಿ 100 ಮೀಟರ್ ಓಟ ಪ್ರಥಮ ಸ್ಥಾನ, 100 ಮೀಟರ್ ಓಟ ದ್ವಿತೀಯ ಸ್ಥಾನ , 200 ಮೀಟರ್ ಓಟ ಪ್ರಥಮ ಸ್ಥಾನ, 200 ಮೀಟರ್ ಓಟ ತೃತೀಯ ಸ್ಥಾನ, ಬಾಲಕರ ರಿಲೇ ಪ್ರಥಮ ಸ್ಥಾನ, ಗುಂಡು ಎಸೆತ ದ್ವಿತೀಯ ಸ್ಥಾನ, ಬಾಲಕರ ಉದ್ದ– ಜಿಗಿತ ದ್ವಿತೀಯ ಸ್ಥಾನ, ಬಾಲಕರ ಥ್ರೋಬಾಲ್ ಪ್ರಥಮ ಸ್ಥಾನ, ಬಾಲಕರ ಟೇಬಲ್ ಟೆನಿಸ್ ಪ್ರಥಮ ಸ್ಥಾನ, ಬಾಲಕರ ಬ್ಯಾಡ್ಮಿಂಟನ್ ಪ್ರಥಮ ಸ್ಥಾನ, ಬಾಲಕಿಯರ ಟೇಬಲ್ ಟೆನ್ನಿಸ್ ಪ್ರಥಮ ಸ್ಥಾನ , ಬಾಲಕಿಯರ…

Read More

ತುಮಕೂರು: ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರು ತುಮಕೂರು ನಗರಸಭಾ ಹಾಗೂ ತುಮಕೂರು ನಗರಾಭಿವೃದ್ಧಿ ಮಾಜಿ ಅಧ್ಯಕ್ಷರಾದ ರೆಡ್ಡಿ ಚಿನ್ನ ಯಲ್ಲಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ‌ ಪಡೆದು, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ ಮುರಳಿಧರ್ ಹಾಲಪ್ಪ, ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹ್ಮದ್, ದಿನೇಶ್ ಮುಂತಾದವರು ಇದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು : ಮದುವೆ ಹೆಸರಲ್ಲಿ ಅವಿವಾಹಿತರನ್ನೇ ಟಾರ್ಗೆಟ್‌ ಮಾಡ್ತಿದ್ದ  ತಂಡವನ್ನು ತುಮಕೂರು ಜಿಲ್ಲೆ ಗುಬ್ಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಮೂಲಕ ಬಂಧಿಸಿದ್ದಾರೆ. ಸಂಪ್ರದಾಯದಂತೆ ಮದುವೆ ಮಾಡಿಕೊಂಡು ಹಣ–ಚಿನ್ನದೊಂದಿಗೆ ಪರಾರಿಯಾಗುತ್ತಿದ್ದರು. ತುಮಕೂರು ಸೇರಿದ್ದಂತೆ ರಾಜ್ಯದ ಹಲವು ಕಡೆ ಹಲವರನ್ನ ಯಾಮಾರಿಸಿದ್ದ ತಂಡವಾಗಿದೆ. ಏನಿದು ಪ್ರಕರಣ? ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಅತ್ತಿಗಟ್ಟೆ ಗ್ರಾಮದಲ್ಲಿ ನಡೆದ ದೋಖಾ ಮದುವೆ ಇದಾಗಿದೆ. ಪಾಲಾಕ್ಷ್ಯ ಎಂಬುವರು ಮಗನಿಗೆ ಮದುವೆ ಮಾಡಲು ಹರಸಾಹಸ ನಡೆಸಿದ್ದರು. ದಯಾನಂದಮೂರ್ತಿ ಗೆ 34 ವರ್ಷ ದಾಟಿದ್ರೂ ಹೆಣ್ಣು ಸಿಗದೆ ನೊಂದಿದ್ದರು. ಅನೇಕ ಕಡೆ ಹೆಣ್ಣು ಹುಡುಕಿದ್ರೂ  ಕಂಕಣ ಭಾಗ್ಯ ಕೂಡಿಬಂದಿರಲಿಲ್ಲ. ಹತ್ತಾರು ಮದುವೆ ಬ್ರೋಕರ್‌ ಗಳ ಮೂಲಕ ಹೆಣ್ಣು ಹುಡುಕಿಸಿದ್ದ ಪಾಲಾಕ್ಷ್ಯ, ಕುಷ್ಟಗಿ ಮೂಲದ ಬಸವರಾಜು ಮೂಲಕ ಲಕ್ಷ್ಮಿ ಎಂಬಾಕೆಯ ಪರಿಚಯವಾಗಿತ್ತು. ಮದುವೆ ಬ್ರೋಕರ್‌ ಕೆಲಸ ಮಾಡುತ್ತಿದ್ದ ಲಕ್ಷ್ಮಿ ಬಳಿ ಮಗನಿಗೆ ಹೆಣ್ಣು ತೋರಿಸುವಂತೆ ಪಾಲಾಕ್ಷ್ಯ ಕೇಳಿಕೊಂಡಿದ್ದರು . ಇವರ ಪರಿಸ್ಥಿತಿ ನೋಡಿ ಮೋಸ ಮಾಡುವ ತೀರ್ಮಾನ ಮಾಡಿದ ಲಕ್ಷ್ಮೀ, ಹುಬ್ಬಳ್ಳಿಯಲ್ಲಿ ಒಬ್ಬ…

Read More

ನವದೆಹಲಿ: ಪುರುಷನೊಬ್ಬ ಕಾರಿನೊಳಗೆ ಇಬ್ಬರು ಮಹಿಳೆಯರ ಜೊತೆ ಸರಸ ಸಲ್ಲಾಪದಲ್ಲಿ ತೊಡಗಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ನಿಶಾಂತ್ ಶರ್ಮಾ (ಭಾರದ್ವಾಜ್) ಎಂಬ ಬಳಕೆದಾರ ಎಕ್ಸ್ ನಲ್ಲಿ ಈ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಬಾರಾಬಂಕಿ ಪ್ರದೇಶದ ಲಕ್ನೋ–ಅಯೋಧ್ಯೆ ಎನ್‌ ಎಚ್ 27 ರಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರಿನಲ್ಲಿ ವ್ಯಕ್ತಿ ಇಬ್ಬರು ಮಹಿಳೆಯೊಂದಿಗೆ ಸರಸ ಸಲ್ಲಾಪದಲ್ಲಿ ನಿರತವಾಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸಿಟಿ ಕೊಟ್ವಾಲಿ ಪ್ರದೇಶದ ವ್ಯಾಪ್ತಿಯಲ್ಲಿರುವ ಸಫೇದಾಬಾದ್‍ನಲ್ಲಿರುವ ಕಾಳಿಕಾ ಹವೇಲಿ ರೆಸ್ಟೋರೆಂಟ್‍ ನ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಯುಪಿ 33 ಎಎಲ್ 0011 ಲೈಸೆನ್ಸ್ ಬೋರ್ಡ್ ನಂಬರ್ ಅನ್ನು ಹೊಂದಿರುವ ಈ ಕಾರಿನೊಳಗೆ ವ್ಯಕ್ತಿಯೊಬ್ಬ ಇಬ್ಬರು ಮಹಿಳೆಯರೊಂದಿಗೆ ಅಸಭ್ಯವಾಗಿ  ವರ್ತಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಾಹನವು ರಾಯ್ಬರೇಲಿ ಜಿಲ್ಲೆಯಲ್ಲಿ ನೋಂದಣಿಯಾಗಿದೆ ಎಂದು ಪೊಲೀಸರು ಪತ್ತೆ ಹಚ್ಚಿದ್ದು, ಸಾರ್ವಜನಿಕ ಸ್ಥಳದಲ್ಲಿ ಇಂತಹ ವರ್ತನೆ ತೋರಿದ ಹಿನ್ನೆಲೆ ಅವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು…

Read More