Author: admin

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಜೈಲುಪಾಲಾಗಿದೆ. ಇನ್ನು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಮಹತ್ವದ ಸಾಕ್ಷ್ಯಗಳ ಸಂಗ್ರಹಕ್ಕೆ ಮುಂದಾಗಿದ್ದಾರೆ. ದರ್ಶನ್‌ನ್ನು ಹೊರತರಲು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬಸ್ಥರು ಇನ್ನಿಲ್ಲದ ಪಯತ್ನಗಳನ್ನು ಮಾಡುತ್ತಿದ್ದಾರೆ. ಇದೀಗ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಜೈಲುಪಾಲಾಗಿ ಒಂದೂವರೇ ತಿಂಗಳು ಕಳೆದಿದ್ದು, ಚಾರ್ಜ್‌ಶೀಟ್‌ ಕೂಡ ಸಲ್ಲಿಕೆಯಾಗಿಲ್ಲ. ಆದರೆ ದರ್ಶನ್‌ಗೆ ಜಾಮೀನು ಸಿಗುತ್ತಾ.. ಇಲ್ಲವಾ? ಅನ್ನುವುದು ಇದೀಗ ತುಂಬಾ ಪ್ರಮುಖವಾಗಿದ್ದು, ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆಗುತ್ತಲೇ ಇದೆ. ಹಿರಿಯ ಪೊಲೀಸ್‌ (ನಿವೃತ್ತ ಪೊಲೀಸ್‌) ಅಧಿಕಾರಿ ಲೋಕೇಶ್ವರ್‌ ಎಂಬುವವರು ಹೇಳುವ ಪ್ರಕಾರ, “ಈ ಪ್ರಕರಣ ಒಂದು ವಿಶೇಷ ಪ್ರಕರಣ ಆಗಿದೆ. ಆದ್ದರಿಂದ ದರ್ಶನ್‌ಗೆ ಜಾಮೀನು ಸಿಗುವುದು ತುಂಬಾ ಕಷ್ಟ,” ಎಂದು ಹೇಳಿದ್ದಾರೆ. ಇನ್ನು ಈಗಾಲೇ ಪ್ರಕರಣದ ಪ್ರಮುಖ ಸಾಕ್ಷಿಗಳನ್ನು ಪೊಲೀಸರು ಕೆಲಹಾಕಿದ್ದು, ಇವುಗಳು ಬಲಿಷ್ಠವಾಗಿವೆ. ಟೆಕ್ನಿಕಲ್‌ ಎವಿಡೆನ್ಸ್‌ ಕೂಡ ಪ್ರಬಲವಾಗಿವೆ ಎನ್ನಲಾಗುತ್ತಿದೆ. ನಟ ದರ್ಶನ್‌ ಈ…

Read More

ನವದೆಹಲಿ: ರಷ್ಯಾದ ರಕ್ಷಣಾ ಸಚಿವಾಲಯವು ಈ ವರ್ಷದ ಏಪ್ರಿಲ್‌ನಿಂದ ಭಾರತ ಸೇರಿದಂತೆ ಇತರೆ ದೇಶಗಳ ನಾಗರಿಕರನ್ನು ಸೇನೆಗೆ ನೇಮಕ ಮಾಡಿಕೊಳ್ಳುವುದನ್ನು ನಿಲ್ಲಿಸಿದೆ ಎಂದು ಅಲ್ಲಿನ ರಾಯಭಾರ ಕಚೇರಿ ಮಾಹಿತಿ ನೀಡಿದೆ. ಉಕ್ರೇನ್ ನಲ್ಲಿ ರಷ್ಯಾ ನಡೆಸುತ್ತಿರುವ ವಿಶೇಷ ಸೇನಾ ಕಾರ್ಯಾಚರಣೆಯಲ್ಲಿ ಭಾರತೀಯ ಪ್ರಜೆಗಳು ಮೃತಪಟ್ಟಿರುವುದು ದುರದೃಷ್ಟಕರ ಎಂದು ರಷ್ಯಾದ ರಾಯಭಾರ ಕಚೇರಿ ಸಂತಾಪ ಸೂಚಿಸಿದೆ. ಅಲ್ಲದೇ ರಷ್ಯಾದ ಸಶಸ್ತ್ರ ಪಡೆಗಳಿಗೆ ಭಾರತೀಯರ ನೇಮಕಾತಿಯನ್ನು ನಿಲ್ಲಿಸಲಾಗಿದೆ ಎಂದು ಹೇಳಿದೆ. ರಷ್ಯಾ ಸೇನೆಗೆ ಸೇರಲು ಸ್ವಯಂಪ್ರೇರಣೆಯಿಂದ ಒಪ್ಪಂದಕ್ಕೆ ಸಹಿ ಹಾಕಿರುವ ಮತ್ತು ಭಾರತಕ್ಕೆ ಮರಳಲು ಬಯಸುವ ಭಾರತೀಯ ಪ್ರಜೆಗಳ ಗುರುತಿಸುವಿಕೆ ಮತ್ತು ಬಿಡುಗಡೆಗೊಳಿಸುವಿಕೆಗೆ ಸಂಬಂಧಿಸಿ ಉಭಯ ದೇಶಗಳು ನಿಕಟ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ರಾಯಭಾರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಸ್ತುತ 69 ಭಾರತೀಯ ಪ್ರಜೆಗಳು ರಷ್ಯಾದ ಸೇನೆಯಿಂದ ಬಿಡುಗಡೆಗಾಗಿ ಕಾಯುತ್ತಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಶುಕ್ರವಾರ ಲೋಕಸಭೆಯಲ್ಲಿ ತಿಳಿಸಿದ್ದಾರೆ. ಭಾರತೀಯರನ್ನು ಶೀಘ್ರವೇ ಬಿಡುಗಡೆಗೊಳಿಸುವ ಕುರಿತು ರಷ್ಯಾ ಭರವಸೆ ನೀಡಿದೆ ಎಂದು ಮೋದಿ…

Read More

ನವದೆಹಲಿ: ಮಾಜಿ ವಿದೇಶಾಂಗ ಸಚಿವ ಕೆ.ನಟ್ವರ್ ಸಿಂಗ್ ಶನಿವಾರ ರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಅನಾರೋಗ್ಯ ಹಿನ್ನೆಲೆ ದೆಹಲಿ ಬಳಿಯ ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಯಲ್ಲಿ ಕಳೆದೆರಡು ವಾರಗಳಿಂದ ದಾಖಲಾಗಿದ್ದ ಅವರು ಕೊನೆಯುಸಿರೆಳೆದಿದ್ದಾರೆ. 1931ರಲ್ಲಿ ಸಿಂಗ್ ಅವರು ರಾಜಸ್ಥಾನದ ಭರತ್ ಪುರ ಜಿಲ್ಲೆಯಲ್ಲಿ ಜನಿಸಿದ್ದರು. ಅವರು ವೃತ್ತಿ ರಾಜತಾಂತ್ರಿಕರಾಗಿ ಕಾರ್ಯನಿರ್ವಹಿಸಿದ್ದರು. ನಟ್ವರ್ ಸಿಂಗ್ ವಿದೇಶಿ ವ್ಯವಹಾರಗಳ ಸೂಕ್ಷ್ಮ ವಿಷಯಗಳ ಬಗ್ಗೆ ಬರೆಯುತ್ತಿದ್ದ ಲೇಖನಗಳಿಂದಲೂ ಜನಪ್ರಿಯತೆ ಗಳಿಸಿದ್ದರು. ತಮ್ಮ ವಿಶಿಷ್ಟ ವೃತ್ತಿಜೀವನದ ಅವಧಿಯಲ್ಲಿ ಅವರು ಅನೇಕ ಗೌರವಗಳಿಗೆ ಪಾತ್ರರಾಗಿದ್ದರು. ಅವರ ಸೇವೆಗಾಗಿ 1984ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ. ಅನುಭವಿ ರಾಜಕಾರಣಿ, ಕೆ.ನಟ್ವರ್ ಸಿಂಗ್ ಅವರು ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ–1 ಸರ್ಕಾರದ 2004-05ರ ಅವಧಿಯಲ್ಲಿ ಭಾರತದ ವಿದೇಶಾಂಗ ಸಚಿವರಾಗಿದ್ದರು. 1966ರಿಂದ 1971ರವರೆಗೆ ಪ್ರಧಾನಿ ಇಂದಿರಾ ಗಾಂಧಿಯವರ ಅವಧಿಯಲ್ಲಿ ಸಿಂಗ್ ಪಾಕಿಸ್ತಾನಕ್ಕೆ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಬೆಂಗಳೂರು: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಮುರಿದು ಹೋದ ಪರಿಣಾಮ ಅಪಾರ ನೀರು ಡ್ಯಾಂನಿಂದ ನದಿಗೆ ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಭಾನುವಾರ ಮಧ್ಯಾಹ್ನ ಹೊಸಪೇಟೆಗೆ ಆಗಮಿಸಲಿದ್ದಾರೆ. ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ಕರೆದಿರುವ ಡಿಕೆಶಿ, ಇದಕ್ಕೂ ಮೊದಲು ಚೈನ್ ಲಿಂಕ್ ಮುರಿದಿರುವ ಕುರಿತು ಅಧಿಕಾರಿಗಳಿಂದ ವರದಿ ಕೇಳಿದ್ದಾರೆ. ಕೊಪ್ಪಳ–ಹೊಸಪೇಟೆ ಗಡಿಯ ಮುನಿರಾಬಾದ್‌ನಲ್ಲಿ ತುಂಗಭದ್ರಾ ಡ್ಯಾಂ ಇದೆ. ಶನಿವಾರ ಮಧ್ಯರಾತ್ರಿ ಡ್ಯಾಂನ ಕ್ರೆಸ್ಟ್ ಗೇಟ್ ನಂಬರ್ 19ರ ಚೈನ್ ಲಿಂಕ್ ಮುರಿದು ಹೋಗಿದೆ. ಆದ್ದರಿಂದ ಜಲಾಶಯದ ನೀರು ವ್ಯರ್ಥವಾಗಿ ನದಿಗೆ ಹರಿದು ಹೋಗುತ್ತಿದೆ. ಸದ್ಯ ಜಲಾಶಯದಿಂದ ತುಂಗಭದ್ರಾ ನದಿಗೆ 1.35 ಲಕ್ಷ ಕ್ಯೂಸೆಕ್ ನೀರು ಹರಿದು ಹೋಗುತ್ತಿದೆ. ಗೇಟ್ ನಂಬರ್ 19ರ ಮೇಲೆ ಒತ್ತಡ ಹೆಚ್ಚಾಗಿದ್ದು, ಈ ಒಂದು ಗೇಟ್‌ನಿಂದಲೇ 35 ಸಾವಿರ ಕ್ಯುಸೆಕ್‌ಗೂ ಅಧಿಕ ನೀರು ನದಿಗೆ ಹೋಗುತ್ತಿದೆ. ಗೇಟ್ ಮುರಿದಿರುವ ಪರಿಣಾಮ ಭಾನುವಾರ…

Read More

ಸ್ಯಾಂಡಲ್ ವುಡ್ ನಿರ್ದೇಶಕ ತರುಣ್ ಸುಧೀರ್ ಹಾಗೂ ತುಳುನಾಡಿ ನಟಿ ಸೋನಲ್ ಮೊಂಥೆರೋ ಅವರ ವಿವಾಹ ಕಾರ್ಯಕ್ರಮ ಹಿಂದೂ ಸಂಪ್ರದಾಯದಂತೆ ಬೆಂಗಳೂರಿನ ಪೂರ್ಣಿಮಾ ಪ್ಯಾಲೇಸ್ ನಲ್ಲಿ ಇಂದು ನಡೆಯಿತು. ಈ ವಿವಾಹ ಕಾರ್ಯಕ್ರಮದಲ್ಲಿ ಸಿನಿತಾರೆಯರ ದಂಡೇ ಪಾಲ್ಗೊಂಡಿತ್ತು. ಅಲ್ಲದೇ ನಾನಾ ಪಕ್ಷಗಳ ರಾಜಕೀಯ ನಾಯಕರು ಕೂಡ ಭಾಗಿಯಾಗಿದ್ದರು. ಹಿರಿಯ ನಟಿ ಗಿರಿಜಾ ಲೋಕೇಶ್, ಸುಧಾರಾಣಿ, ಮಾಳವಿಕಾ ಹಾಗೂ ಅವಿನಾಶ್, ಯೋಗಿ ದ್ವಾರಕೀಶ್, ರಾಕ್ ಲೈನ್ ವೆಂಕಟೇಶ್ ವಿಶೇಷವಾಗಿ ಟಾಲಿವುಡ್ನ ನಟ ಜಗಪತಿ ಬಾಬು ಈ ಜೋಡಿಗೆ ಶುಭ ಹಾರೈಸಿದರು. ಖ್ಯಾತ ಗಾಯಕ ವಿಜಯ್ ಪ್ರಕಾಶ್ , ರವಿಚಂದ್ರನ್ ಸಹೋದರ ಬಾಲಾಜಿ, ಸಾಧು ಕೋಕಿಲ, ತನಿಷಾ ಕುಪ್ಪಂಡ, ನಿರೂಪಕ ನಿರಂಜನ್ ದೇಶಪಾಂಡೆ, ನಟ–ನಿರ್ದೇಶಕ ರಘು ರಾಮ್, ಗೋಲ್ಡನ್ ಸ್ಟಾರ್ ಗಣೇಶ್, ತಾರಾ ಅನುರಾಧಾ, ವಿನೋದ್ ರಾಜ್, ಮೇಘನಾ ಗಾಂವ್ಕರ್ ಸೇರಿದಂತೆ ಹಲವಾರು ಗಣ್ಯರು ಆಗಮಿಸಿ ವಧುವರರಿಗೆ ಶುಭ ಹಾರೈಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ತುರುವೇಕೆರೆ: ಪ್ರತಿಯೊಬ್ಬರ ಜೀವನದಲ್ಲಿ ವಿದ್ಯಾರ್ಥಿ ಜೀವನ ಮುಖ್ಯವಾದ ಪಾತ್ರ ವಹಿಸುತ್ತದೆ. ಪ್ರಸ್ತುತ ಸಂದರ್ಭದಲ್ಲಿ ನಾವು ಕೇವಲ ಒಂದು ಭಾಷೆಗೆ ಸೀಮಿತವಾಗಿರದೆ, ಹಲವು ಭಾಷಾಜ್ಞಾನವನ್ನು ಬೆಳೆಸಿಕೊಳ್ಳಬೇಕು. ಇದು ಮುಂದಿನ ವೃತ್ತಿ ಬದುಕಲ್ಲಿ ಬಹು ಮುಖ್ಯವಾದ ಪರಿಣಾಮವನ್ನು ಬೀರುತ್ತದೆ ಎಂದು ಗ್ಲೋಬಲ್ ಎಂಬಸ್ಸಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಗಂಗಾಧರ್ ದೇವರ ಮನೆ ತಿಳಿಸಿದರು. ತುರುವೇಕೆರೆ ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಜಯಣ್ಣ ಕನ್ವೆನ್ಷನ್ ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿ ನಡೆದ ಸುಜ್ಞಾನ ನಿಧಿ ಶಿಷ್ಯವೇತನದ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ ಎಂ. ಮಾತನಾಡಿ, ರಾಜ್ಯದಲ್ಲಿ 96,854 ವಿದ್ಯಾರ್ಥಿಗಳಿಗೆ ಇದುವರೆಗೆ ಶಿಷ್ಯವೇತನವನ್ನು ಪಡೆಯುತ್ತಿದ್ದು 114 ಕೋಟಿ ಮೊತ್ತ ಇದುವರೆಗೆ ವಿತರಿಸಲಾಗಿದೆ. ವಿದ್ಯಾರ್ಥಿಗಳು ಈ ಮೊತ್ತವನ್ನು ಉತ್ತಮ ರೀತಿಯಲ್ಲಿ ವಿನಿಯೋಗಿಸುವಂತೆ ಮಾರ್ಗದರ್ಶನ ನೀಡಿದರು. ತುರುವೇಕೆರೆಯ ಹಿರಿಯ ವಕೀಲರಾದ ಶ್ರೀಧನಪಾಲ್ ರವರು ವಿದ್ಯಾರ್ಥಿಗಳಿಗೆ ಶಿಷ್ಯವೇತನದ ಮಂಜೂರಾತಿ ಪತ್ರ ವಿತರಿಸಿ, ವಿದ್ಯಾರ್ಥಿ ಜೀವನ ಅಮೂಲ್ಯವಾದದು ತಂದೆ…

Read More

ಪಾವಗಡ: ಅಪರಿಚಿತ ಮಹಿಳೆಯೊಬ್ಬರು ಪಾವಗಡ ಠಾಣೆ ಬಳಿ ಬಂದಿದ್ದು, ಅವರಿಗೆ ಊರು ಮತ್ತು ವಿಳಾಸ ಗೊತ್ತಿಲ್ಲ. ಮಾತನಾಡಲು ಬರುತ್ತಿಲ್ಲ. ಹೀಗಾಗಿ ಯಾವ ಊರು ಅಂತ ಬರೆಯಿರಿ ಎಂದಾಗ ಧಾರವಾಡ ಎಂದು ಬರೆದಿದ್ದಾರೆ. ಹೀಗಾಗಿ ಈ ಮಹಿಳೆಯ ಪರಿಚಯವಿದ್ದವರು ಪಾವಗಡ ಪೊಲೀಸ್ ಠಾಣೆ ಪಿ.ಐ.ಸುರೇಶ ಎಂ.ಆರ್. ಅವರ ಮೊಬೈಲ್ ನಂಬರ್ 9480802941 ಅಥವಾ 9611750273ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಮೂಡಾ ಪ್ರಕರಣವನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡುವುದಿಲ್ಲ ಎಂಬ ವಿಶ್ವಾಸವಿದೆ. ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ, ಕಾನೂನು ಹೋರಾಟ ನಡೆಸುತ್ತೇವೆ. ಕಾನೂನು ಹೋರಾಟ ಪ್ರಾರಂಭವಾದ ಬಳಿಕ ಮುಂದಿನ ಬೆಳವಣಿಗೆ ಏನೆಂಬುದನ್ನು ಗಮನಿಸಿ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ನಿರ್ಧರಿಸಲಾಗುವುದು‌ ಎಂದು ಹೇಳಿದರು. ಹತ್ತಾರು ಪ್ರಕರಣಗಳು ರಾಜ್ಯಪಾಲರ ಕಚೇರಿಯಲ್ಲಿ ಬಾಕಿ ಉಳಿದಿವೆ. ಯಾವುದಕ್ಕು ಕೂಡ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಮುಂದಾಗಿಲ್ಲ. ಮೂಡಾ ವಿಚಾರದಲ್ಲಿ ತುರಾತುರಿಯಲ್ಲಿ ನೋಟಿಸ್ ನೀಡಿದ್ದಾರೆ. ಜುಲೈ 26ರಂದು ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ಮನವಿ ಕೊಡುತ್ತಾರೆ. ಅದೇ ದಿನ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆಯುತ್ತಾರೆ. ಮುಖ್ಯ ಕಾರ್ಯದರ್ಶಿಯವರು ಹೋಗಿ ಸ್ಪಷ್ಟನೆ ನೀಡಿ ಬಂದಿದ್ದಾರೆ.‌ ಅದೇ‌ದಿನ ಸಂಜೆ ಸಿಎಂ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದರ ಹಿಂದಿನ ಉದ್ದೇಶ ಏನೆಂಬುದನ್ನು ರಾಜ್ಯಪಾಲರು ಹೇಳಬೇಕಲ್ಲವೇ ಎಂದು…

Read More

ರಾಮನಗರ: ಚೆನ್ನಪಟ್ಟಣ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ಚುನಾವಣಾ ಸಿದ್ಧತಾ ಭಾಗವಾಗಿ ಸಿ.ಪಿ.ಯೋಗೇಶ್ವರ್ ಬೆಂಬಲಿಗರು ಸಮಾನ ಮನಸ್ಕರರ ಸಮಾವೇಶ ಆಯೋಜಿಸಿದ್ದರು. ಇದೀಗ ಹೈಕಮಾಂಡ್ ಕರೆಯ ಹಿನ್ನೆಲೆ ಸಿ.ಪಿ.ಯೋಗೇಶ್ವರ್ ದೆಹಲಿಗೆ ತೆರಳಲಿದ್ದು, ಈ ಹಿನ್ನೆಲೆಯಲ್ಲಿ ಸಮಾನ ಮನಸ್ಕರರ ಸಮಾವೇಶ ಕೊನೆಯ ಕ್ಷಣಗಳಲ್ಲಿ ರದ್ದಾಗಿದೆ ಎಂದು ತಿಳಿದು ಬಂದಿದೆ. ರಾಮನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ‘ನಮ್ಮ ಶಾಸಕ ನಮ್ಮ ಹಕ್ಕು’ ಹೆಸರಲ್ಲಿ ಸಮಾನ ಮನಸ್ಕರರ ಹಾಗೂ ಯೋಗೇಶ್ವರ್ ಅಭಿಮಾನಿ ಬಳಗದಿಂದ ಸಮಾವೇಶ ಆಯೋಜಿಸಲಾಗಿತ್ತು. ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದರೆ, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸಲಾಗಿತ್ತು.  ಚೆನ್ನಪಟ್ಟಣ ಕ್ಷೇತ್ರದ ಮೇಲೆ ಜೆಡಿಎಸ್ ಕಣ್ಣಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಸಿ.ಪಿ.ಯೋಗೇಶ್ವರ್ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದಾರೆ. ಚನ್ನಪಟ್ಟಣದಲ್ಲಿ ದೋಸ್ತಿಗಳ ಮುಖಾಮುಖಿ ಸ್ಪರ್ಧೆಯಾದ್ರೆ, ಕಾಂಗ್ರೆಸ್ ಗೆ ಲಾಭವಾಗುವ ಲೆಕ್ಕಾಚಾರಗಳು ಕೇಳಿ ಬಂದಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಬೀದರ್: ಶನಿವಾರ ಸಂಜೆ ಬೀದರ್ ಜಿಲ್ಲೆಯಲ್ಲಿ ಲಘುಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.6ರಷ್ಟು ತೀವ್ರತೆ ದಾಖಲಾಗಿದೆ. ಹುಮನಾಬಾದ್ ತಾಲ್ಲೂಕಿನ ಸೀತಾಳಗೇರಾ, ತಾಳಮಡಗಿ ಹಾಗೂ ಬೀದರ್ ತಾಲ್ಲೂಕಿನ ಸಿರಕಟನಳ್ಳಿ, ರಂಜೋಳಖೇಣಿ ಗ್ರಾಮದಲ್ಲಿ ಶನಿವಾರ ಸಂಜೆ ಭೂಕಂಪನವಾಗಿದೆ. ಇದು ಲಘು ಭೂಕಂಪನವಾಗಿದ್ದು, ಯಾವುದೇ ಹಾನಿ ಉಂಟಾಗಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More