Subscribe to Updates
Get the latest creative news from FooBar about art, design and business.
- ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
- ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
- ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
- ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
- ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
- ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
- ತುಮಕೂರು: ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
- ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
Author: admin
ಚಿಕ್ಕಬಳ್ಳಾಪುರ: ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೆ ಸ್ಫೋಟಕ ಭವಿಷ್ಯ ಹೇಳಿದ್ದು, ದೇಶದಲ್ಲಿ ಜಲಕಂಟಕ, ಅಗ್ನಿ ಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆಯಂತೆ! ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕೋಡಿ ಮಠದ ಶ್ರೀಗಳು, ಶ್ರಾವಣ ಮಾಸದಲ್ಲಿ ದೇಶದಲ್ಲಿ ಅವಘಡಗಳು ಸಂಭವಿಸಲಿವೆ ಎಂದು ಆಘಾತಕಾರಿಯಾದ ಭವಿಷ್ಯ ನುಡಿದಿದ್ದಾರೆ. ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣುಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆಯಂತೆ, ರಾಜ್ಯದಲ್ಲಿ ಅತಿವೃಷ್ಟಿಯಾಗುವ ಸಾಧ್ಯತೆ ಇದೆಯಂತೆ. ಕೋಧಿನಾಮ ಸಂವತ್ಸರ ಆರಂಭವಾಗಿದ್ದು, ದೇಶದಲ್ಲಿ ಜಲ, ಅಗ್ನಿ, ವಾಯು ಕಂಟಕಗಳು ಹೆಚ್ಚಾಗಲಿವೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
‘ಡ್ರೆಸ್ಸಿಂಗ್ ನ ಸಂತೋಷವು ಒಂದು ಕಲೆ’ ಎಂದು ಬರೆದುಕೊಂಡು ಬಾಲಿವುಡ್ ನ ಖ್ಯಾತ ನಟಿ ಫೋಟೋವೊಂದನ್ನು ಶೇರ್ ಮಾಡಿದ್ದು, ಈ ಫೋಟೋ ಇದೀಗ ಇಂಟರ್ ನೆಟ್ ನಲ್ಲಿ ಬೆಂಕಿ ಹಚ್ಚಿದೆ. ನಟಿ ನಿಖಿತಾ ಘಾಗ್ ಈ ಫೋಟೋವನ್ನು ಹಂಚಿಕೊಂಡಿದ್ದು, ಸದಾ ಫ್ಯಾಷನ್ ಲೋಕದಲ್ಲಿ ಸುದ್ದಿಯಾಗುತ್ತಿರುವ ಇವರು ಅರೆಬೆತ್ತಲೆ ಫ್ಯಾಶನ್ ನಿಂದ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಅವರು ಶೇರ್ ಮಾಡಿರುವ ಫೋಟೋದಲ್ಲಿ ಟಾಪ್ ಲೆಸ್ ಫೋಟೋಶೂಟ್ ನಲ್ಲಿ, ಅರ್ಧ–ಬೀಜ್ ಟ್ರೆಂಚ್ ಕೋಟ್ ಧರಿಸಿ ಬೆತ್ತಲೆ ದೇಹವನ್ನು ಪ್ರದರ್ಶಿಸಿದ್ದಾರೆ. ಈ ಫೋಟೋಗೆ ಸಾಕಷ್ಟು ಜನರು ತಮ್ಮದೇ ರೀತಿಯಲ್ಲಿ ಕಾಮೆಂಟ್ ಹಾಕಿದ್ದಾರೆ. ಕೆಲವರು ನಟಿಯ ಲುಕ್ ನ್ನು ಹೊಗಳಿದ್ದಾರೆ. ಇನ್ನು ಕೆಲವರು ಬೆತ್ತಲೆ ಪ್ರದರ್ಶನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂದಹಾಗೆ, ನಟಿ ನಿಖಿತಾ ಘಾಗ್ ಅವರು ಬೆಕಾಬೂ 3, ಫುಹ್ ಸೆ ಫ್ಯಾಂಟಸಿ, ನಶಿಲಾ ಹುಸ್ನ್ ಮತ್ತು ಹಲವು ಸಿನಿಮಾ ಸೇರಿದಂತೆ ಸಿರೀಸ್ ನಲ್ಲಿ ಕೆಲಸ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಮೈಸೂರು: ಕಳೆದ 7 ದಿನಗಳಿಂದಲೂ ಆರಂಭವಾಗಿರುವ ಬಿಜೆಪಿ—ಜೆಡಿಎಸ್ ದೋಸ್ತಿಗಳ ಪಾದಯಾತ್ರೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ಬೃಹತ್ ಸಮಾವೇಶದ ಮೂಲಕ ಅಂತ್ಯ ಕಾಣಲಿದೆ. ಕಾಂಗ್ರೆಸ್ ಜನಾಂದೋಲನ ಬೆನ್ನಲ್ಲೇ ಇಂದು ಮೈಸೂರಿನಲ್ಲಿ ಬಿಜೆಪಿ—ಜೆಡಿಎಸ್ ದೋಸ್ತಿಗಳ ಬೃಹತ್ ಸಮಾವೇಶ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿ ಘಟಾನುಘಟಿ ನಾಯಕರು ಭಾಗಿಯಾಗಲಿದ್ದಾರೆ. ಇನ್ನೂ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಆಗರ್ವಾಲ್ ಕೂಡ ಆಗಮಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ರಸ್ತೆಯಲ್ಲಿ ಕಸ ಎಸೆದದ್ದನ್ನು ಪ್ರಶ್ನಿಸಿದ ಮನೆ ಮಾಲಿಕನನ್ನು ಬಾಡಿಗೆದಾರ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದಪ್ಪ(70) ಕೊಲೆಯಾದವರು. ತುಮಕೂರು ಜಿಲ್ಲೆ ಶಿರಾ ಮೂಲದ ಪುನೀತ್(24) ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಸಿದ್ದಪ್ಪ ಅವರು ಹಿಮಾಲಯ ಡ್ರಗ್ಸ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ಬಳಿಕ ಮಾದನಾಯಕನಹಳ್ಳಿಯಲ್ಲಿ ಮನೆ ಕಟ್ಟಿಕೊಂಡು ಕೆಲವು ಮನೆಗಳನ್ನು ಬಾಡಿಗೆಗೆ ನೀಡುತ್ತಿದ್ದರು. ಈ ಮನೆಯನ್ನು ಪುನೀತ್ ಮತ್ತು ಆತನ ತಾಯಿ ಬಾಡಿಗೆಗೆ ಪಡೆದುಕೊಂಡಿದ್ದರು ಎನ್ನಲಾಗಿದೆ. ಘಟನೆ ನಡೆದ ದಿನ ಸಿದ್ದಪ್ಪ ವಾಕಿಂಗ್ ಹೋಗಿ ಬರುತ್ತಿದ್ದರು. ಈ ವೇಳೆ ಪುನೀತ್ ಕಸ ತುಂಬಿದ್ದ ಕವರ್ ನ್ನು ರಸ್ತೆಯಲ್ಲೇ ಎಸೆದಿದ್ದು, ಗುಟ್ಕಾ ತಿಂದು ರಸ್ತೆಯಲ್ಲೇ ಉಗಿದಿದ್ದ. ಇದನ್ನು ನೋಡಿ ಕೋಪಗೊಂಡ ಸಿದ್ದಪ್ಪ ಆತನಿಗೆ ಬೈದಿದ್ದರು. ಇದರಿಂದ ಆಕ್ರೋಶ ವ್ಯಕ್ತಪಡಿಸಿದ ಸಿದ್ದಪ್ಪ ಮನೆಗೆ ಹೋಗಿ ಮಚ್ಚು ತಂದಿದ್ದು, ಸಿದ್ದಪ್ಪ ಅವರ ಕತ್ತಿಗೆ ಮಚ್ಚಿನಿಂದ ಹೊಡೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ, ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ…
ನವದೆಹಲಿ: ಧೈರ್ಯವಿದ್ದರೆ ಗಂಡಸ್ತನದಿಂದ ರಾಜಕೀಯ ಮಾಡಬೇಕು. ನಪುಂಸಕನ ಕೆಲಸ ಮಾಡುತ್ತಿದ್ದಾನೆ. ನನ್ನನ್ನು ಪ್ರಶ್ನಿಸುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಏಕ ವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಯಾರ ಮಗನನ್ನು ಬೆಳೆಸಬೇಕು ಎಂಬುದನ್ನು ಜನ ನಿರ್ಧಾರ ಮಾಡುತ್ತಾರೆ. ಒಳ್ಳೆಯದು ಹಾಗೂ ಕೆಟ್ಟದು ಏನು ಎನ್ನುವುದು ಅವರಿಗೆ ಗೊತ್ತಿದೆ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಿರ್ಧಾರ ಮಾಡುತ್ತಾರೆ. ಮೊದಲು ನೆಟ್ಟಗೆ ಬದುಕು. ನನ್ನನ್ನು ಕೆಣಕಬೇಡ ಶಿವಕುಮಾರ್.. ಹುಷಾರ್ ಎಂದು ಕುಮಾರಸ್ವಾಮಿ ಎಚ್ಚರಿಕೆ ಕೊಟ್ಟಿದ್ದಾರೆ. ನಿನ್ನ ಬಗ್ಗೆ ನನ್ನಲ್ಲಿರುವ ಮಾಹಿತಿ ತೆಗೆದಿಟ್ಟರೆ ನೀನು ಬದುಕಲು ಕಷ್ಟವಾಗುತ್ತದೆ. ನಮ್ಮ ಕುಟುಂಬದ ವಿರುದ್ಧ ನೀನು ಏನೆಲ್ಲಾ ಸಂಚು ಮಾಡಿದೆ? ರೇವಣ್ಣ ಕುಟುಂಬ ಮುಗಿಸಲು ಏನು ಕುತಂತ್ರ ಮಾಡಿದೆ ಎನ್ನುವುದು ನನಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಬೀದರ್: ಸಂಸದರಾದ ಸಾಗರ್ ಈಶ್ವರ ಖಂಡ್ರೆ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಬೀದರ್ ಜಿಲ್ಲಾ ಭಾಲ್ಕಿ ಪಟ್ಟಣದಲ್ಲಿರುವ ರೈಲ್ವೆ ಗೇಟ್ ಬಳಿ ಟ್ರಾಫಿಕ್ ಸಮಸ್ಯೆಯಿಂದಾಗಿ ಜನರು ಸಾಕಷ್ಟು ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿದರಲ್ಲದೇ ರೈಲ್ವೆ ಗೇಟ್ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಮನವಿ ಮಾಡಿಕೊಂಡರು. ಸಂಸದರ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಮಸ್ತೆ ಪರಿಹಾರಕ್ಕೆ ಶೀಘ್ರವೇ ಕ್ರಮಕೈಗೊಳ್ಳುವ ಭರವಸೆ ನೀಡಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತಿಪಟೂರು: ನಗರ ವ್ಯಾಪ್ತಿಯ 30ನೇ ವಾರ್ಡ್ ನ ಟಿ.ಎಲ್.ಪಾಳ್ಯದಲ್ಲಿ ತಲೆಮಾರುಗಳಿಂದ ವಾಸಿಸುತ್ತಿರುವ ನಾಗರಿಕರು ಸರಕಾರದಿಂದ ಹಕ್ಕು ಪತ್ರ ಸಿಗದೇ ಪರದಾಡುತ್ತಿರುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸುಮಾರು 120 ಮನೆಗಳಿರುವ ಟಿ.ಎಲ್.ಪಾಳ್ಯ ಗ್ರಾಮದಲ್ಲಿ ಸುಮಾರು 400 ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ವಾಸಿಸುತ್ತಿದ್ದು, ಕೂಲಿ ನಾಲಿ ಮಾಡಿ ಪುಟ್ಟದೊಂದು ಸೂರು ಕನಸು ಕಂಡು ಕಟ್ಟಿರುವ ಮನೆಗಳಿಗೆ ನಗರ ಸಭೆ ವತಿಯಿಂದ ಮೂರು ನಾಲ್ಕು ವರ್ಷದಿಂದ ಎನ್ ಓ ಸಿ ನೀಡದೆ, ಮನೆಗಳಿಗೆ ವಿದ್ಯುತ್ ಸಂಪರ್ಕ ಕೂಡ ನೀಡಿಲ್ಲ. ಇದರಿಂದಾಗಿ ಶಾಲಾ– ಕಾಲೇಜು ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಟಾರ್ಚ್ ಹಾಗೂ ಮೇಣದಬತ್ತಿ ಮೊರೆ ಹೋಗುವಂತಹ ಪರಿಸ್ಥಿತಿ ನಿರ್ಮಾಣ ವಾಗಿದೆ . ಇನ್ನು ಟಿ.ಎಲ್. ಪಾಳ್ಯದ ವಾಸಿಗಳಿಗೆ ಕುಡಿಯಲು ಶುದ್ಧ ನೀರು ಸಿಗದೆ ಅಕ್ಕ ಪಕ್ಕದಲ್ಲಿ ಇರುವ ಬಡಾವಣೆಗಳಿಂದ ನೀರು ತರಬೇಕಾಗಿದೆ. ನಗರಸಭೆ ವತಿಯಿಂದ ಕೊರೆಸಿರುವ ಕೊಳವೆ ಬಾವಿಯಿಂದ ಬಳಸಲು ಯೋಗ್ಯವಲ್ಲದ ನೀರು ಸರಬರಾಜು ಆಗುತ್ತಿದ್ದು, ಇದನ್ನೇ ಕುಡಿದು ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿ ವಾಸ ಮಾಡುತ್ತಿರುವ…
ಇಂದು ನವದೆಹಲಿಯಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ ಸಿಂಗ್ ಚೌಹಾಣ್ ರನ್ನು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಭೇಟಿ ಮಾಡಿ, ರಾಜ್ಯದಲ್ಲಿ ಉಂಡೆ ಕೊಬ್ಬರಿಗೆ ಸಂಬಂಧ ಪಟ್ಟಂತೆ ನೆಪೆಡ್ ಸಂಸ್ಥೆಯಿಂದ ಪಾವತಿಸಬೇಕಾದ ರೂ.೬೯೧ ಕೋಟಿ ಹಣವನ್ನು ರಾಜ್ಯದ ಸಂಬಂಧಪಟ್ಟ ಖರೀದಿ ಎಜೆನ್ಸಿಗಳಿಗೆ ಮರು ಪಾವತಿಸಲು ಮನವಿಯನ್ನು ಸಲ್ಲಿಸಿದರು. ಇದರಿಂದ ಕರ್ನಾಟಕ ರಾಜ್ಯದಲ್ಲಿ ತುಮಕೂರು, ಮಂಡ್ಯ, ಹಾಸನ, ಮೈಸೂರು, ಚಾಮರಾಜ ನಗರ, ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆಂಗು ಬೆಳೆಯುವ ರೈತರ ಹಿತಾಶಕ್ತಿ ಕಾಪಾಡಲು ಅನುಕೂಲವಾಗುತ್ತದೆಯೆಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಿಗೆ ಕೇಂದ್ರ ಸಚಿವ ಸೋಮಣ್ಣನವರು ಮನವರಿಕೆ ಮಾಡಿ ಕೊಟ್ಟಿದ್ದಾರೆ. ವಿಶೇಷವಾಗಿ ತುಮಕೂರು ಜಿಲ್ಲೆ ಹೆಚ್ಚಿನ ಪ್ರಮಾಣದಲ್ಲಿ ಉಂಡೆ ಕೊಬ್ಬರಿ ಉತ್ಪಾದಕ ಜಿಲ್ಲೆಯಾಗಿದ್ದು, ಈ ಜಿಲ್ಲೆಯ ರೈತರಿಗೆ ಸಹಾಯ ಮಾಡುವಂತೆ ಕೇಂದ್ರ ಸಚಿವರು ಖುದ್ದಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ರಾಜ್ಯ ರೈಲ್ವೆ ಮತ್ತು ಜಲಶಕ್ತಿ ಖಾತೆಯ ರಾಜ್ಯ…
ತುಮಕೂರು: ಹಿರೇಹಳ್ಳಿಯ ಐಸಿಎಆರ್–ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ವತಿಯಿಂದ ಹಲಸಿನ ಹಣ್ಣಿನ ನೇರ ಮಾರಾಟವನ್ನು ವಿಶೇಷ ಕಾರ್ಯಕ್ರಮವನ್ನು ಕ್ಯಾತಸಂದ್ರ ಜೆಎಎಸ್ ಟೋಲ್ ಪ್ಲಾಜಾದಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ತುಮಕೂರಿನ ರೈತರಿಗೆ ತಮ್ಮ ಹಲಸಿನ ಹಣ್ಣುಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಅಮೂಲ್ಯವಾದ ವೇದಿಕೆಯನ್ನು ಒದಗಿಸಿತು, ಮಧ್ಯವರ್ತಿಗಳನ್ನು ತಪ್ಪಿಸಿ ಮತ್ತು ಅವರ ಆದಾಯವನ್ನು ಹೆಚ್ಚಿಸಿತು. ಕಾರ್ಯಕ್ರಮವನ್ನು ಕೆವಿಕೆ ಹಿರೇಹಳ್ಳಿಯ ಮುಖ್ಯಸ್ಥ ಡಾ.ಎನ್.ಲೋಗಾನಂದನ್, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ (ಐಐಎಚ್‌ಆರ್) ಪ್ರಧಾನ ವಿಜ್ಞಾನಿ ಡಾ.ಜಿ.ಕರುಣಾಕರನ್ ಮತ್ತು ಶ್ರೀಮತಿ ಶಾರದಮ್ಮ, ತುಮಕೂರು ತೋಟಗಾರಿಕೆ ಉಪನಿರ್ದೇಶಕರು (ಡಿಡಿಎಚ್) ಉದ್ಘಾಟಿಸಿದರು. ಈ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ‘ಸಿದ್ದು’ ಹಲಸಿನ ಹಣ್ಣನ್ನು ಕತ್ತರಿಸುವ ಮೂಲಕ ಗುರುತಿಸಲಾಯಿತು. ಇದು ರೈತರಿಂದ ಗ್ರಾಹಕರ ನೇರ ಉಪಕ್ರಮಗಳ ಮಹತ್ವವನ್ನು ಒತ್ತಿಹೇಳುತ್ತದೆ. ನರಸಿಂಹಮೂರ್ತಿ, ಸುರೇಶ್, ಮಧು, ಲೋಕೇಶ್, ಕುಮಾರಯ್ಯ ಸೇರಿದಂತೆ ಸ್ಥಳೀಯ ರೈತರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಅವರು ತಮ್ಮ ಹಲಸಿನ ಉತ್ಪನ್ನಗಳನ್ನು ತ್ವರಿತವಾಗಿ ಮತ್ತು ನ್ಯಾಯಯುತ ಬೆಲೆಯಲ್ಲಿ ಮಾರಾಟ…
ತಿಪಟೂರು ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕ್ ಸಂಚಾಲಕರಾದ ರಾಘವೇಂದ್ರ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ತಿಪಟೂರು ತಾಲ್ಲೂಕಿನ ಹೋಬಳಿ ಶಾಖೆ ರಚನೆ ಮಾಡುವ ಬಗ್ಗೆ ತೀರ್ಮಾನಿಸಲಾಯಿತು. ಇದೇ ವೇಳೆ ತಿಪಟೂರು ತಾಲ್ಲೂಕು ಮಹಿಳಾ ಸಂಚಾಲಕಿಯಾಗಿ ಕವಿತಾ ವಿ. ಮತ್ತು ತಿಪಟೂರು ನಗರ ಘಟಕ ಸಂಚಾಲಕರಾಗಿ ರಮೇಶ್ ಮಾರನಗೆರೆ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೊಪ್ಪ ಶಾಂತಪ್ಪ, ಕುಪ್ಪಾಳು ರಂಗಸ್ವಾಮಿ, ಜಿಲ್ಲಾ ಸಂಘಟನಾ ಸಂಚಾಲಕರಾದಮತ್ತಿಹಳ್ಳಿ ಹರೀಶ್ ಗೌಡ, ಬಿಳಿಗೆರೆ ಚಂದ್ರಶೇಖರ್, ಟಿ.ಕೆ.ಕುಮಾರ್, ಮತೀಘಟ್ಟ ಶಿವಕುಮಾರ್ ಎ ಎಸ್ ಎಸ್ ಸಮಿತಿ ಅಧ್ಯಕ್ಷರು, ಬಿಳಿಗೆರೆ ಮಹದೇವ್, ಹಟ್ನ, ದಯಾನಂದ್, ಲಿಂಗದೇವರು, ಬಸವರಾಜ್, ದೇವರಾಜ್ ರಾಮನಾಯಕ್, ಸುರೇಶ್, ರಂಗಸ್ವಾಮಿ, ಹರೀಶ್, ಭಾಗವಹಿಸಿ ಸಭೆ ಯಶಸ್ವಿಗೊಳಿಸಲಾಯಿತು. ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…