Subscribe to Updates
Get the latest creative news from FooBar about art, design and business.
- ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
- ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
- ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
- ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
- ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
- ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
- ತುಮಕೂರು: ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
- ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
Author: admin
ಪಾವಗಡ: ಆಗಸ್ಟ್ 8ರಿಂದ 9ರವರೆಗೆ ಪಾವಗಡದಲ್ಲಿ ನಡೆದ ನಾಲಮಾಡಿಕೆ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಬಿ.ಕೆ ಹಳ್ಳಿ ಶಾಲೆಯ ವಿದ್ಯಾರ್ಥಿನಿಯರು ಬಾಲಕಿಯರ ಕಬ್ಬಡಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾರೆ. ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕ ಸಿ.ಓಂಕಾರಪ್ಪ, ಸಹ ಶಿಕ್ಷಕರು, ಎಸ್.ಡಿ.ಎಂ.ಸಿ, ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾವಗಡ: ಮುಂಗಾರು ಹಂಗಾಮಿನ ಶೇಂಗಾ(ಮಳೆಆಶ್ರಿತ) ಬೆಳೆ ಸ್ಪರ್ಧೆಗೆ ಪಾವಗಡ ತಾಲೂಕಿನ ರೈತರಿಂದ ಆನ್’ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2024–25ನೇ ಸಾಲಿನಲ್ಲಿ ಕೃಷಿ ಪ್ರಶಸ್ತಿಯಡಿ ಮುಂಗಾರು ಬೆಳೆ ಸ್ಪರ್ಧೆಗೆ ಆಸಕ್ತ ರೈತರು, ರೈತ ಮಹಿಳೆಯರು Citizen Login ಅಥವಾ RSK Login ಮೂಲಕ ರೈತ ಸಂಪರ್ಕ ಕೇಂದ್ರ, ಸೇವಾಕೇಂದ್ರಗಳಲ್ಲಿ ಆ.31ರೊಳಗೆ ಕೃಷಿ ಇಲಾಖೆ ಕೆ–&ಕಿಸಾನ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಲು ಶುಕ್ರವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಪ್ರಕಟಣೆಯಲ್ಲಿ ಸಹಾಯಕ ನಿರ್ದೇಶಕ ಅಜಯ್ ಕುಮಾರ್ ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮದ ಹಿರಿಯ ಹೋರಾಟಗಾರರಾದ ಕೆ.ವಿ.ದೊಡ್ಡನರಸಪ್ಪ ಕೊರಟಗೆರೆ ತಾಲ್ಲೂಕು ಆಡಳಿತದಿಂದ ಗೌರವ ಪೂರ್ವಕವಾಗಿ ತಹಶೀಲ್ದಾರ್ ಮಂಜುನಾಥ್ ಕೆ ಸನ್ಮಾನಿಸಿ ಗೌರವಿಸಿದರು. ಕೆ.ವಿ.ದೊಡ್ಡನರಸಪ್ಪರವರ ಮನೆಗೆ ತೆರಳಿ ತಾಲೂಕು ಮತ್ತು ಜಿಲ್ಲಾ ಆಡಳಿತದ ವತಿಯಿಂದ ಗೌರವ ಸಮರ್ಪಣೆಯನ್ನು ಅರ್ಪಿಸಲಾಯಿತು. ದೊಡ್ಡನರಸಪ್ಪನವರು ವಿದ್ಯಾರ್ಥಿ ಜೀವನದಲ್ಲಿದ್ದಾಗಲೇ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಸೆರೆವಾಸ ಅನುಭವಿಸಿ ಮಹಾತ್ಮ ಗಾಂಧೀಜಿಯವರ ಮಾರ್ಗದರ್ಶನವನ್ನು ಪಡೆದು ತನ್ನ ಜೀವನದಲ್ಲಿ ಅಳವಡಿಸಿಕೊಂಡು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸ್ವಾತಂತ್ರ್ಯಕ್ಕೋಸ್ಕರ ದುಡಿದವರಾಗಿರುತ್ತಾರೆ. ಪ್ರತಿ ವರ್ಷವೂ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ತಾಲೂಕು ಮತ್ತು ಜಿಲ್ಲಾ ಆಡಳಿತವು ನಮ್ಮ ಮನೆಗೆ ಬಂದು ಸರ್ಕಾರದ ವತಿಯಿಂದ ಸನ್ಮಾನಿಸಿ ಗೌರವಿಸುತ್ತಾರೆ. ತಾಲ್ಲೂಕು ಮತ್ತು ಜಿಲ್ಲಾ ಆಡಳಿತಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ವಿ.ದೊಡ್ಡನರಸಪ್ಪ ತಿಳಿಸಿದರು. ತಹಶೀಲ್ದಾರ್ ಮಂಜುನಾಥ್ ಕೆ. ಅಂದಿನ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಮತ್ತು ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ಈ ಶುಭ ಸಂದರ್ಭದಲ್ಲಿ ಚನ್ನರಾಯನದುರ್ಗ ಹೋಬಳಿಯ ಉಪ ತಹಶೀಲ್ದಾರ್ ರಾಜು, ಗ್ರಾಮ…
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದು, ಗೃಹಜ್ಯೋತಿ ಯೋಜನೆ, ಜಾರಿಯಾದ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಹೊರಡಿಸಲಾಗಿದೆ. ಈ ಯೋಜನೆಯಡಿ, ಇಂಧನ ಇಲಾಖೆ ಹೊಸ ಸೌಲಭ್ಯವನ್ನು ಪರಿಚಯಿಸಿದ್ದು, ಮನೆ ಬದಲಾಯಿಸಿದ ಗ್ರಾಹಕರಿಗೂ ಉಚಿತ ವಿದ್ಯುತ್ ಸೌಲಭ್ಯ ಪಡೆಯುವ ಅವಕಾಶವನ್ನು ನೀಡಲಾಗಿದೆ. ವಿವರಗಳು: ಹಳೆಯ ಆರ್‌ಆರ್ ಸಂಖ್ಯೆಯ ಡಿ–ಲಿಂಕ್: * ಮನೆ ಬದಲಾಯಿಸಿದ ಗ್ರಾಹಕರು ಹಳೆಯ ಮನೆಯ ಆರ್ ಆರ್ (ರಿಜಿಸ್ಟರ್ಡ್ ಕನೆಕ್ಟರ್) ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಡಿ–ಲಿಂಕ್ ಮಾಡಬಹುದು. * ಈ ಸೇವೆಯನ್ನು ಪಡೆಯಲು, ಸೇವಾ ಸಿಂಧು ಪೋರ್ಟಲ್‌ನಲ್ಲಿ ಲಭ್ಯವಿರುವ https://sevasindhu.karnataka.gov.in/GruhaJyothi_Delink/GetAadhaarData.aspx ವೆಬ್ ಸೈಟ್ ಗೆ ಲಾಗಿನ್ ಮಾಡಬೇಕು. * ಪೋರ್ಟಲ್ ಓಪನ್ ಆಗದಿದ್ದಲ್ಲಿ, Cache Memory Clear ಮಾಡುವ ಮೂಲಕ ಮತ್ತೆ ಪ್ರಯತ್ನಿಸಬಹುದು. ಹೊಸ ಆರ್.ಆರ್. ಸಂಖ್ಯೆಯ ಲಿಂಕ್: * ಹಳೆಯ ಆರ್‌ಆರ್ ಸಂಖ್ಯೆಯನ್ನು ಡಿ-ಲಿಂಕ್ ಮಾಡಿದ ನಂತರ, ಹೊಸ ಮನೆಯಲ್ಲಿ ಲಭ್ಯವಿರುವ ಆರ್‌ಆರ್ ಸಂಖ್ಯೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬಹುದು. * ಡಿ–ಲಿಂಕ್ ಮಾಡದಿದ್ದರೆ, ಹೊಸ ಮನೆಯ ಆರ್.ಆರ್.…
ಚಿಕ್ಕನಾಯಕನಹಳ್ಳಿ: ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಮೇಲನಹಳ್ಳಿ ಚಿಕ್ಕನಾಯಕನಹಳ್ಳಿ ಇಲ್ಲಿಗೆ ಚಿರತೆ ಮರಿಗಳೊಂದಿಗೆ ಕಳೆದ ಒಂದು ತಿಂಗಳಿಂದ ಶಾಲೆ ಹತ್ತಿರ ಬಂದು ಹೋಗುತ್ತಿತ್ತು. ಇದೀಗ ಅಂತಿಮವಾಗಿ ಅರಣ್ಯ ಇಲಾಖೆಯ ಬೋನಿಗೆ ಚಿರತೆ ಬಿದ್ದಿದೆ. ನಿರಂತರ ಚಿರತೆ ಸಂಚಾರದಿಂದ ಆತಂಕಕ್ಕೀಡಾಗಿದ್ದ ಶಾಲೆಯ ಮಕ್ಕಳು ಹಾಗೂ ಸಾರ್ವಜನಿಕರು ಚಿರತೆಯನ್ನು ಹಿಡಿದು ಸ್ಥಳಾಂತರಿಸುವಂತೆ ಒತ್ತಾಯಿಸಿದ್ದರು. ಅಂತೆಯೇ ಅರಣ್ಯ ಇಲಾಖೆ ಅಧಿಕಾರಿಗಳು ಇತ್ತೀಚೆಗೆ ಬೋನ್ ಇರಿಸಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ. ರಾತ್ರಿ ವೇಳೆ ಅರಣ್ಯ ಇಲಾಖೆಯ ಬೋನಿಗೆ ಚಿರತೆ ಬಿದ್ದಿದೆ. ಚಿರತೆ ಸೆರೆಯಿಂದಾಗಿ ವಿದ್ಯಾರ್ಥಿಗಳು ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಅರಣ್ಯ ಇಲಾಖೆಯವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಹಿಳೆಯೊಬ್ಬರು ಹಾಡಹಗಲೇ ಪತಿಯನ್ನು ಭೀಕರವಾಗಿ ಹತ್ಯೆಮಾಡಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ. ಹತ್ಯೆಗೈದ ಆರೋಪಿ ಪತ್ನಿಯನ್ನು ಗಾಯತ್ರಿ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ ಗಾಯತ್ರಿ ಮತ್ತು ಪತಿ ಸತ್ಯಪಾಲ್ ಗಳು ಆಗಾಗ ಜಗಳವಾಡುತ್ತಿದ್ದರು ಎನ್ನಲಾಗಿದೆ. ಎಂದಿನಂತೆ ಗುರುವಾರವೂ ಜಗಳವಾಡಿದ್ದು ಕೋಪಗೊಂಡ ಪತ್ನಿ ಪತಿಯನ್ನು ನೆಲಕ್ಕೆ ಉರುಳಿಸಿ, ಅವನ ಎದೆಯ ಮೇಲೆ ಕುಳಿತು, ತಲೆಗೆ ಇಟ್ಟಿಗೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾಳೆ.ಮಾತ್ರವಲ್ಲದೆ ಆತನ ಮೆದುಳನ್ನು ಹೊರ ತೆಗೆದಿದ್ದಾಳೆ ಎನ್ನಲಾಗಿದೆ. ಘಟನೆಯ ನಂತರ ಮಹಿಳೆ ಪೊಲೀಸರಿಗೆ ಶರಣಾಗಿದ್ದಾಳೆ.ಪ್ರಕರಣ ದಾಖಲಿಸಿದ ಪೋಲಿಸರು ಮೃತದೇಹವನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತ ಸತ್ಯಪಾಲ್ ಪತ್ನಿ ಗಾಯತ್ರಿ ಮತ್ತು ಮಕ್ಕಳು ಹಾಗೂ. ಸತ್ಯಪಾಲ್ ನ ವೃದ್ಧ ತಾಯಿಯೊಂದಿಗೆ ಶಹಜಹಾನ್‌ಪುರದ ಹತೌರಾ ಬುಜುರ್ಗ್ ಗ್ರಾಮದಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮೈಸೂರಿನ ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಯುಜಿಸಿ ಅನುಮೋದಿತ ಕೋರ್ಸ್ ಗಳ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯಗಳ ದೂರ ಶಿಕ್ಷಣದ ಪದವಿ ಮತ್ತು ಸಾಂಪ್ರದಾಯಿಕ ವಿವಿಗಳು ನೀಡುವ ಶಿಕ್ಷಣ ಕ್ರಮಗಳ ಪದವಿಗಳಿಗೆ ಸಮನಾಗಿರುತ್ತದೆ. ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ: ಬಿ.ಎ-ರೂ.8,400/-., ಬಿ.ಕಾಂ.-ರೂ.8,900/-.,ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-12,400/-., ಬಿ.ಸಿ.ಎ/ಬಿ.ಎಸ್ಸಿ-ರೂ.23,900/-., ಬಿ.ಎಸ್.ಡಬ್ಲ್ಯೂ-ರೂ.12,900/-., ಎಂ.ಎ-ರೂ.10,600/-., ಎಂ.ಸಿ.ಜೆ-ರೂ.16,200/-., ಎಂ.ಕಾಂ-ರೂ.12,400/-., ಎಂ.ಬಿ.ಎ–ರೂ.29,900/-., ಎಂ.ಎಸ್ಸಿ/ಎಂ.ಸಿ.ಎ-ರೂ.29,700/-., ಎಂ.ಎಸ್.ಡಬ್ಲ್ಯೂ-ರೂ.21,300/-., ಎಂ.ಎಲ್.ಐ.ಎಸ್ಸಿ-ರೂ.18,150/-ಗಳಾಗಿರುತ್ತದೆ. ಬೋಧನಾ ಶುಲ್ಕ ರಿಯಾಯಿತಿ:- ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ…
ತಿಪಟೂರು: ತಾಲ್ಲೂಕಿನ ಬಿದರೆಗುಡಿಯ ಬಿದಿರಾಂಬಿಕಾ ದೇವಸ್ಥಾನದ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ‘ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ’ ಇವರ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣದ ಅಡಿಯಲ್ಲಿ 2,000 ಸಸಿಗಳ ಗಿಡ ನಾಟಿ ಹಾಗೂ ತಾಲ್ಲೂಕಿನ ರೈತರಿಗೆ ಸಸಿ ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣರವರು ಧ.ಗ್ರಾ.ಯೋಜನೆಯು ಬಡವರ ಅಶಕ್ತರ ನಿರ್ಗತಿಕರ ಬಾಳಿಗೆ ಬೆಳಕಾಗಲು ಅನೇಕ ಕಾರ್ಯಕ್ರಮಗಳನ್ನು ಸಂಘಟಿಸುವುದಲ್ಲದೇ ಪರಿಸರ ಸಂರಕ್ಷಣೆಯ ಮೂಲ ಉದ್ದೇಶದಿಂದ ಪ್ರಕೃತಿಯನ್ನು ಕಾಪಾಡಲು ಸಹಕರಿಸಬೇಕೆಂಬ ದ್ಯೇಯ ಉದ್ದೇಶದಿಂದ ಇದುವರೆಗೂ ರಾಜ್ಯಾದ್ಯಂತ 73 ಕೋಟಿಯಷ್ಟು ಗಿಡ ನಾಟಿ ಮಾಡಿದೆ. ಪ್ರಸ್ತುತ ವರ್ಷದಲ್ಲಿ ಯೋಜನೆಯು ರಾಜ್ಯಾದ್ಯಂತ 2 ಲಕ್ಷಕ್ಕೂ ಅಧಿಕ ಸಸಿಯನ್ನು ನಾಟಿ ಮಾಡಲು ಪರಿಸರ ಕಾರ್ಯಕ್ರಮ, ಕೆರೆಯಂಗಳದಲ್ಲಿ ಗಿಡನಾಟಿ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮಗಳನ್ನು ಸಂಘಟಿಸುತ್ತಿದೆ ಎಂದು ತಿಳಿಸಿದರು. ಜೊತೆಗೆ ಪ್ರಸ್ತುತ ವರ್ಷ ತುಮಕೂರು–1 ಜಿಲ್ಲೆಯಾದ್ಯಂತ 20 ಸಾವಿರ ಸಸಿಗಳನ್ನು ನಾಟಿ ಮಾಡಿ ಪ್ರಕೃತಿಯನ್ನು ಕಾಪಾಡಲು ಕೊಡುಗೆ ನೀಡುತ್ತಿದೆ…
ಗೂಗಲ್ (google) ಸಂಸ್ಥೆಯು ಭಾರತದಲ್ಲಿ ಗೂಗಲ್ ಮ್ಯಾಪ್‌ಗಳಿಗಾಗಿ (Google Map) ಆರು ಹೊಸ ವೈಶಿಷ್ಟ್ಯಗಳನ್ನು ಅನಾವರಣಗೊಳಿಸಿದೆ. ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಮತ್ತು ಸ್ಥಳೀಯ ಪಾಲುದಾರಿಕೆಗಳ ಮೇಲೆ ಕೇಂದ್ರೀಕರಿಸಿ ಈ ವೈಶಿಷ್ಟ್ಯಗಳನ್ನು ಪರಿಚಯಿಸಲಾಗುತ್ತಿದೆ. 1. ಕಿರಿದಾದ ರಸ್ತೆ ತಪ್ಪಿಸುವಿಕೆ ನಾಲ್ಕು ಚಕ್ರ ವಾಹನಗಳಿಗೆ ಸೂಕ್ತವಲ್ಲದ ರಸ್ತೆಗಳ ಮೂಲಕ ಸಂಚಾರವನ್ನು ತಡೆಯಲು, ಕಿರಿದಾದ ರಸ್ತೆಗಳನ್ನು ಗುರುತಿಸಲು ಮತ್ತು ಅವುಗಳನ್ನು ತಪ್ಪಿಸಲು ಗೂಗಲ್ ನಕ್ಷೆಗಳು ಈಗ ಎಐ ಅನ್ನು ಬಳಸುತ್ತವೆ. ಈ ವೈಶಿಷ್ಟ್ಯವು ರಸ್ತೆಯ ಅಗಲವನ್ನು ಅಂದಾಜು ಮಾಡಲು ಮತ್ತು ರೂಟಿಂಗ್ ಅಲ್ಗಾರಿದಮ್‌ಗಳನ್ನು ಪರಿಷ್ಕರಿಸಲು ಉಪಗ್ರಹ ಚಿತ್ರಣ, ಗಲ್ಲಿ ವೀಕ್ಷಣೆ ಡೇಟಾವನ್ನು ಬಳಸಿಕೊಳ್ಳುತ್ತದೆ. ಇದು ಆರಂಭದಲ್ಲಿ ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಎಂಟು ನಗರಗಳಲ್ಲಿ ಲಭ್ಯವಾಗಲಿದೆ. 2. ಫ್ಲೈಓವರ್ ನ್ಯಾವಿಗೇಷನ್ ಗೂಗಲ್ ನಕ್ಷೆಗಳು ಈಗ 40 ಭಾರತೀಯ ನಗರಗಳಲ್ಲಿ ಶಿಫಾರಸು ಮಾಡಲಾದ ಮಾರ್ಗಗಳಲ್ಲಿ ಫ್ಲೈಓವರ್‌ಗಳನ್ನು ಹೈಲೈಟ್ ಮಾಡುತ್ತವೆ. ಇದು ಚಾಲಕರು ಎತ್ತರದ ರಸ್ತೆ ಮಾರ್ಗಗಳಲ್ಲಿ ಸರಾಗವಾಗಿ ಸಾಗಲು ಸಹಾಯ ಮಾಡುತ್ತದೆ. 3. ಮೆಟ್ರೋ ಟಿಕೆಟ್ ಬುಕಿಂಗ್…
ಮೀರತ್: ನಡುರಸ್ತೆಯಲ್ಲಿ ಬಾಲಕಿಯನ್ನು ಆಕೆಯ ಅಣ್ಣನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ನಾಗ್ಲಾ ಶೇಖು ಗ್ರಾಮದಲ್ಲಿ ನಡೆದಿದೆ. ಹತ್ಯೆಗೀಡಾದ ಬಾಲಕಿಯನ್ನು ಅನ್ಯಧರ್ಮದ ಯುವಕನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ಈ ಮರ್ಯಾದಾ ಹತ್ಯೆ ನಡೆದಿದೆ.ಹತ್ಯೆಯ ದೃಶ್ಯವನ್ನು ನೆರೆಹೊರೆಯವರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕಿ ಹಿಂದೂ ಯುವಕನನ್ನು ಪ್ರೀತಿಸಿ, ಆತನೊಂದಿಗೆ ಓಡಿಹೋಗಲು ಪ್ಲಾನ್ ಮಾಡಿದ್ದಾಳೆ ಎಂದು ಗೊತ್ತಾಗುತ್ತಿದ್ದಂತೆ ಸಿಟ್ಟಿಗೆದ್ದ ಅಣ್ಣ ಹಾಡಹಗಲೇ ನಡುರಸ್ತೆಯಲ್ಲಿ ಆಕೆಯನ್ನು ಭೀಕರವಾಗಿ ಕೊಲೆಮಾಡಿದ್ದಾರೆ. ಆರೋಪಿಯನ್ನು 20 ವರ್ಷದ ಹಸೀನ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಸೀನ್ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ. ಮೃತ ಯುವತಿ ಮುಸ್ಲಿಂ ಕುಟುಂಬಕ್ಕೆ ಸೇರಿದವಳಾಗಿದ್ದು,ಆಕೆ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದಳು.ಇದರಿಂದ ಮರ್ಯಾದೆಗೆ ಅಂಜಿ ಆಕೆಯನ್ನು ಕೊಲೆ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296