Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ಸಿರಾ: 2025–26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಸಿರಾ ತಾಲೂಕಿಗೆ ಶೇ.89.75 ರಷ್ಟು ಫಲಿತಾಂಶ ಲಭ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಒಟ್ಟು 3,553 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3189 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 364 ಮಂದಿ ಅನುತ್ತೀರ್ಣರಾಗಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳ ಫಲಿತಾಂಶ ಶೇ.91.58%, ಅನುದಾನಿತ ಪ್ರೌಢಶಾಲೆಗಳ ಫಲಿತಾಂಶ ಶೇ.79.88%, ಅನುದಾನ ರಹಿತ ಪ್ರೌಢಶಾಲೆಗಳ ಫಲಿತಾಂಶ ಶೇ.96.02% ಆಗಿದೆ. ನಗರದ ಆರ್. ರೆಹಾನ್ ಶಾಲೆಯ ಟಿ.ಎಂ. ಜೀವನ್ 620 ಅಂಕಗಳನ್ನು ಪಡೆಯುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದರೆ ಸೇಂಟ್ ಆನ್ ಪ್ರೌಢಶಾಲೆಯ ಆರ್ ಕೀರ್ತನ 619 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದರೆ ಇದೇ ಶಾಲೆಯ ಬಲ್ಕಿಸ್ ಖಾನಂ 618 ಅಂಕಗಳನ್ನು ಪಡೆದು ತೃತೀಯ ಸ್ಥಾನ ಹೊಂದಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಓದಿದ ಸಿರಾ ಬುವನಹಳ್ಳಿ ಮೊರಾರ್ಜಿ ದೇಸಾಯಿ ವಸತಿಯುತ ಪ್ರೌಢಶಾಲೆಯ ಪುನೀತ್ 615, ಬರಗೂರು ಸರ್ಕಾರಿ ಪ್ರೌಢಶಾಲೆಯ ಪುಷ್ಪಲತಾ…
ತುಮಕೂರು: ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಎರಡು ಶೈಕ್ಷಣಿಕ ಜಿಲ್ಲೆಗಳು ಗಣನೀಯ ಪ್ರಗತಿ ಸಾಧಿಸಿವೆ. ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ಭಾರಿ ಏರಿಕೆ ಕಂಡುಬಂದಿದ್ದರೂ, ರಾಜ್ಯ ಮಟ್ಟದ ಶ್ರೇಯಾಂಕದಲ್ಲಿ ಮಾತ್ರ ಜಿಲ್ಲೆ ಸ್ವಲ್ಪ ಹಿನ್ನಡೆ ಅನುಭವಿಸಿದೆ. ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆ ಬರೆದ 20,466 ವಿದ್ಯಾರ್ಥಿಗಳ ಪೈಕಿ 9,214 ಮಂದಿ ಉತ್ತೀರ್ಣರಾಗಿದ್ದು, ಶೇ. 92.90 ಫಲಿತಾಂಶ ದಾಖಲಾಗಿದೆ. ಇದು ಕಳೆದ ಬಾರಿಗಿಂತ ಶೇ. 24.90 ರಷ್ಟು ಹೆಚ್ಚಳವಾಗಿದೆ. ಅದೇ ರೀತಿ, ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 11,044 ವಿದ್ಯಾರ್ಥಿಗಳ ಪೈಕಿ 9,962 ಮಂದಿ ತೇರ್ಗಡೆಯಾಗಿದ್ದು, ಶೇ. 90.24 ಫಲಿತಾಂಶ ಬಂದಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 29.61 ರಷ್ಟು ಅಧಿಕವಾಗಿದೆ. ಈ ಸಾಲಿನ ಪರೀಕ್ಷೆಯಲ್ಲಿ ತುಮಕೂರು ಶೈಕ್ಷಣಿಕ ಜಿಲ್ಲೆಗೆ ಸಾದಿಯಾಬಾನು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಹಿತಶ್ರೀ ಅವರು ಟಾಪರ್ಸ್ ಆಗಿ ಹೊರಹೊಮ್ಮುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹೆಣ್ಣು ಮಕ್ಕಳೇ ಮೊದಲು: ಎರಡೂ ಶೈಕ್ಷಣಿಕ ಜಿಲ್ಲೆಗಳಲ್ಲಿ ಬಾಲಕಿಯರೇ ಮೇಲುಗೈ…
ತುಮಕೂರು: ಬೆಸ್ಕಾಂ ಕ್ಯಾತ್ಸಂದ್ರ ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಲಿಂಕ್ ಲೈನ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 25ರಂದು ನಗರದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಏಪ್ರಿಲ್ 25ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ. ಕ್ಯಾತ್ಸಂದ್ರ ಉಪವಿಭಾಗದ ವ್ಯಾಪ್ತಿಗೆ ಬರುವ ಊರ್ಡಿಗೆರೆ, ಮೈದಾಳ, ಸೀತಕಲ್ಲು ಮತ್ತು ಅರೇಗುಜ್ಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ. ಕಾಮಗಾರಿ ನಡೆಯುವ ಅವಧಿಯಲ್ಲಿ ಸಾರ್ವಜನಿಕರು ಬೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಪಾವಗಡ: ತಾಲೂಕಿನ ಕೋಟಗುಡ್ಡದ ಸಹನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಲುವಾಗಿ ಇಂದು ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಬಾರಿಯ ಪರೀಕ್ಷೆಯಲ್ಲಿ ಶಾಲೆಯ ರಿಷಿತಾ ಎಸ್. 613 ಅಂಕಗಳನ್ನು ಪಡೆಯುವ ಮೂಲಕ ಪಾವಗಡ ತಾಲೂಕಿಗೆ ತೃತೀಯ ಸ್ಥಾನ ಹಾಗೂ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಪ್ರೀತಮ್ ಎ. 606 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಚಂದು ಆರ್.ಎಸ್. ಮತ್ತು ಸುಪ್ರೀತ್ ರೆಡ್ಡಿ ತಲಾ 605 ಅಂಕಗಳನ್ನು ಗಳಿಸಿ ಶಾಲೆಗೆ ಜಂಟಿಯಾಗಿ ತೃತೀಯ ಸ್ಥಾನ ತಂದುಕೊಟ್ಟಿದ್ದಾರೆ. ಶಾಲೆಯ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಅವರ ಪೋಷಕರ ಸಮ್ಮುಖದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಶಾಲೆಯ ಆಡಳಿತಾಧಿಕಾರಿಗಳಾದ ಶ್ರೀನಿವಾಸ್ ಅವರು ವಿದ್ಯಾರ್ಥಿಗಳ ಶ್ರಮವನ್ನು ಶ್ಲಾಘಿಸಿ, ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ನರಸಿಂಹಪ್ಪ ಎಸ್., ಶಿಕ್ಷಕಿಯರಾದ ಮಮತಾ, ಶ್ವೇತ, ಲೀಲಾವತಿ,…
ತುಮಕೂರು: ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡ ಮಾಧ್ಯಮವನ್ನು ಕಿತ್ತುಹಾಕಿ ಇಂಗ್ಲಿಷ್ ಮಾಧ್ಯಮವನ್ನು ಕಡ್ಡಾಯ ಮಾಡುತ್ತಿರುವ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ ಎಐಡಿಎಸ್ ಓ ತುಮಕೂರು ಜಿಲ್ಲಾ ವತಿಯಿಂದ ನಗರದ ಟೌನ್ ಹಾಲ್ ಬಳಿ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿಗಳಾದ ಲಕ್ಕಪ್ಪ ಅವರು ಮಾತನಾಡಿ, ಕರ್ನಾಟಕದಲ್ಲಿ ಕನ್ನಡ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಹೇರಿಕೆ ಮಾಡುವುದರ ಮೂಲಕ ಕನ್ನಡವನ್ನೇ ಮರೆಮಾಚುವ ಉನ್ನಾರವನ್ನು ಇಂದು ಸರ್ಕಾರ ರೂಪಿಸಿದೆ, ಮಾತೃಭಾಷೆ ನಮ್ಮ ಸಂವಹನದ ಭಾಷೆಯಾಗಿದ್ದು ಆ ಭಾಷೆಯ ಮೂಲಕವೇ ಕಲಿಕೆಯಾದಾಗ ಮಗುವು ಸರಿಯಾಗಿ ವಿಷಯಗಳನ್ನು ಗ್ರಹಿಸಲು ಮತ್ತು ತನ್ನ ಭಾವನೆಗಳನ್ನು ನಿರ್ದಿಷ್ಟವಾಗಿ ವ್ಯಕ್ತಪಡಿಸಲು ಸಹಾಯಕವಾಗುತ್ತದೆ. ಪ್ರಾಥಮಿಕ ಶಿಕ್ಷಣ ಮಾತೃ ಭಾಷೆಯ ಮೂಲಕ ಕೊಡುವುದರಿಂದ ಮಗುವಿನ ಬೌದ್ಧಿಕ ಮಟ್ಟವು ಹೆಚ್ಚುತ್ತದೆ ಹಾಗೂ ಮಾನಸಿಕವಾಗಿ ಸದೃಢವಾಗಲು ಸಹಾಯವಾಗುತ್ತದೆ ಎಂದು ಹೇಳಿದರು ಮುಂದುವರಿದು, ರಾಜ್ಯ ಸರ್ಕಾರವು ಇದ್ಯಾವುದನ್ನು ಪರಿಗಣಿಸದೆ, “ರಾಜ್ಯದ 4404 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ…
ಮಧುಗಿರಿ : ಯಾವುದೇ ಸಹಕಾರಿ ಬ್ಯಾಂಕುಗಳಾಗಲಿ ಆರ್ಥಿಕ ಶಿಸ್ತು, ಸಾಲ ವಸೂಲಾತಿ, ಬಡವರ ಹಾಗೂ ರೈತರ ಬಗ್ಗೆ ಅಂತಃಕರಣ ಹೊಂದಿರುವ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಪ್ರಾಮಾಣಿಕ ಸೇವೆಯೇ ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಮಾಜಿ ಸಹಕಾರ ಸಚಿವರು, ಶಾಸಕರೂ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅಭಿಪ್ರಾಯಪಟ್ಟರು. ಪಟ್ಟಣದ ಕನಕ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ನಿಮ್ಮ ಈ ಕನಕಪತ್ತಿನ ಸಹಕಾರ ಸಂಘವು ಶೇ. 96 ರಷ್ಟು ಮರುಪಾವತಿಯ ದಾಖಲೆ ತೋರಿಸಿದ್ದು ಉತ್ತಮವಾಗಿದೆ. ಹಾಗೂ ಆರ್ಥಿಕ ಶಿಸ್ತನ್ನು ಇದೇ ರೀತಿ ಮುಂದುವರೆಸಿ. ನನ್ನ ಎಲ್ಲ ರೀತಿಯ ಸಹಕಾರ ಸದಾ ಇರಲಿದೆ. ಸಾಲ ಪಡೆಯುವುದು ಸದಸ್ಯರ ಹಕ್ಕು. ಹಾಗೆಯೇ ಸಾಲ ತೀರಿಸುವುದು ಅವರ ಜವಾಬ್ದಾರಿ ಆಗಬೇಕು. ಸಹಕಾರಿ ಸಂಘದಲ್ಲಿ ಠೇವಣಿ ಜೊತೆಗೆ ಆಸ್ತಿಯನ್ನು ಮಾಡಲು ಮುಂದಾಗಬೇಕು. ಅದು ಕಷ್ಟದ ಸಮಯದಲ್ಲಿ ಸಹಾಯಕ್ಕೆ ಬರಲಿದೆ. 1 ಸಾವಿರದಿಂದ 13696 ಸದಸ್ಯರು ಷೇರು ಹಾಕಿರುವ ಸಂಘವಾಗಿದ್ದು…
ತುಮಕೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೇವಲ ಒಂದು ವಾರದ ಅವಧಿಯಲ್ಲಿ ಬರೋಬ್ಬರಿ 32 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿರುವುದು ಸ್ಥಳೀಯರಲ್ಲಿ ಹಾಗೂ ಪರಿಸರ ಪ್ರೇಮಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಏಪ್ರಿಲ್ 16ರಿಂದ ಏಪ್ರಿಲ್ 21ರ ಅವಧಿಯಲ್ಲಿ ಜಿಲ್ಲೆಯ ಬೊಮ್ಮನಹಳ್ಳಿ, ಕೋಳಿಹಳ್ಳಿ, ಭೈರಸಂದ್ರ ಮತ್ತು ಹುಲ್ಲೆನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಈ ಸಾವುಗಳು ಸಂಭವಿಸಿವೆ. ಮೃತಪಟ್ಟ ನವಿಲುಗಳು ಬೇರೆ ಬೇರೆ ಕಡೆ ಪತ್ತೆಯಾಗಿದ್ದು, ಯಾವುದೇ ನಿರ್ದಿಷ್ಟ ಒಂದು ಪ್ರದೇಶಕ್ಕೆ ಈ ಸಾವುಗಳು ಸೀಮಿತವಾಗಿಲ್ಲ ಎಂಬುದು ಗಮನಾರ್ಹ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಆರ್. ಶಶಿಧರ್ ಅವರು, “ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ,” ಎಂದು ತಿಳಿಸಿದ್ದಾರೆ. ಪ್ರಾಥಮಿಕ ಮರಣೋತ್ತರ ಪರೀಕ್ಷೆಯ ಸಮಯದಲ್ಲಿ ನವಿಲುಗಳ ದೇಹದಲ್ಲಿ ಯಾವುದೇ ವಿಷಕಾರಿ ಅಂಶ ಅಥವಾ ಅನುಮಾನಾಸ್ಪದ ವಸ್ತುಗಳು ಮೇಲ್ನೋಟಕ್ಕೆ ಕಂಡುಬಂದಿಲ್ಲ. ಹೀಗಾಗಿ, ಪ್ರಖರ ಬಿಸಿಲು ಮತ್ತು ನೀರಿನ ಹಸಿವಿನಿಂದ ಉಂಟಾಗುವ…
ಬೆಂಗಳೂರು: ಕಬಡ್ಡಿ ಪಂದ್ಯವೊಂದರ ಸಂದರ್ಭದಲ್ಲಿ ಬೆಟ್ಟಿಂಗ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. “ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ಈಗಿನ ಕಾಲದಲ್ಲಿ ತಮಾಷೆ ಕೂಡ ಮಾಡುವಂತಿಲ್ಲ ಎಂಬಂತಾಗಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಹೇಳಿದ್ದು ಗ್ರಾಮೀಣ ಭಾಗದಲ್ಲಿ ಕಬಡ್ಡಿ ಪಂದ್ಯಗಳ ವೇಳೆ ಸಾಮಾನ್ಯವಾಗಿ ಆಡುವಂತಹ ಮಾತುಗಳು. ಕಾನೂನಿನ ದೃಷ್ಟಿಯಿಂದ ಅದು ತಪ್ಪಾಗಿ ಕಾಣಿಸಬಹುದು, ಆದರೆ ನಾನು ಯಾವ ಉದ್ದೇಶದಿಂದ ಹೇಳಿದ್ದೇನೆ ಎಂಬುದು ಮುಖ್ಯವಾಗುತ್ತದೆ” ಎಂದು ಸಮರ್ಥಿಸಿಕೊಂಡರು. “ನಾನು ಬೆಟ್ಟಿಂಗ್ ಪ್ರಮೋಟ್ ಮಾಡಿ ಎಂದು ಹೇಳಿದ್ದರೆ ಅದು ತಪ್ಪು. ಜವಾಬ್ದಾರಿಯುತ ಸ್ಥಾನದಲ್ಲಿರುವ ನಾನು ಬೆಟ್ಟಿಂಗ್ ಪ್ರೋತ್ಸಾಹಿಸುತ್ತೇನೆ ಎಂಬುದು ಶುದ್ಧ ಸುಳ್ಳು. ಜನರು ಇದನ್ನು ಹೇಗೆ ಅರ್ಥೈಸಿಕೊಳ್ಳುತ್ತಾರೆ ಎಂಬುದರ ಮೇಲೆ ಇದು ಅವಲಂಬಿತವಾಗಿದೆ” ಎಂದು ತಿಳಿಸಿದರು. “ನಾನು ಕಾನೂನನ್ನು ಗೌರವಿಸುವವನು. ಕಾನೂನು ರಕ್ಷಣೆ ಮಾಡುವ ಖಾತೆಯನ್ನು ನಿಭಾಯಿಸುತ್ತಿದ್ದೇನೆ. ನೋಟಿಸ್ ನೀಡದೆ ಏಕಾಏಕಿ ಆದೇಶ ಮಾಡಲಾಗಿದೆ. ಆದರೂ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಇಂದು ಬಹುನಿರೀಕ್ಷಿತ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ರಾಜ್ಯದಲ್ಲಿ ದಾಖಲೆಯ ಶೇ. 94.10 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಈ ವರ್ಷ ಒಟ್ಟು 7,70,209 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಶೇ. 98.40 ಫಲಿತಾಂಶದೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ, ಉಡುಪಿ (ಶೇ. 98.18) ದ್ವಿತೀಯ ಹಾಗೂ ಉತ್ತರ ಕನ್ನಡ (ಶೇ. 98.09) ಜಿಲ್ಲೆಗಳು ತೃತೀಯ ಸ್ಥಾನ ಪಡೆದಿವೆ. ಕಲಬುರಗಿ ಜಿಲ್ಲೆಯು ಕೊನೆಯ ಸ್ಥಾನದಲ್ಲಿದೆ. ಈ ಬಾರಿ ಒಟ್ಟು 7 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಹಂಚಿಕೊಂಡಿದ್ದಾರೆ. ಇವರಲ್ಲಿ ದಾವಣಗೆರೆಯ ಭರತ್ ಜಿ, ಬೆಳಗಾವಿಯ ರೂಪಾ ಚನ್ನೇಗೌಡ ಪಾಟೀಲ್, ಮತ್ತು ಹಾಸನದ ಜಾಹ್ನವಿ ಪ್ರಮುಖರು. ಪ್ರತಿ ಬಾರಿಯಂತೆ ಈ…
ತುಮಕೂರು: “ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡ ಮತ್ತು ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು ಎಂಬುದು ನಮ್ಮ ಸಂಘಟನೆಯ ಮೂಲ ಆಶಯ,” ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ ಅವರು ತಿಳಿಸಿದರು. ನಗರದಲ್ಲಿ ಬುಧವಾರ ನಡೆದ ಕರವೇ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷರಾದ ನಾರಾಯಣಗೌಡರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದರು. ಜಿಲ್ಲೆಯ ಕೈಗಾರಿಕಾ ವಲಯದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಿದ ಅವರು, “ಜಿಲ್ಲೆಯ ಕಾರ್ಖಾನೆಗಳಲ್ಲಿ ಪರರಾಜ್ಯದವರೇ ತುಂಬಿ ಹೋಗಿದ್ದಾರೆ. ಅರ್ಹ ಕನ್ನಡಿಗರು ಕೆಲಸವಿಲ್ಲದೆ ಮೂಲೆಗುಂಪಾಗುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಕನ್ನಡಿಗರಿಗೆ ಮೊದಲ ಆದ್ಯತೆಯ ಮೇರೆಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದರೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು,” ಎಂದು ಎಚ್ಚರಿಸಿದರು. ನೂತನ ಪದಾಧಿಕಾರಿಗಳ ಪಟ್ಟಿ ಜಿಲ್ಲಾ ಉಪಾಧ್ಯಕ್ಷರು: ಎಂ.ಡಿ. ಮನ್ಸೂರ್ ಅಲಿ, ಅರುಣ್‌ಗೌಡ. ಜಿಲ್ಲಾ ಸಂಘಟನಾ…