Subscribe to Updates
Get the latest creative news from FooBar about art, design and business.
- ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
- ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
- ತುಮಕೂರು: ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
- ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
- ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!
- ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
- ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
- ಗಡಿ ಚೆಕ್ ಪೋಸ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
Author: admin
82ನೇ ವರ್ಷದಲ್ಲಿ ಪೋಕ್ಸೋ ಕೇಸ್ ಎದುರಿಸಿದ ಯಡಿಯೂರಪ್ಪ ನನ್ನ ಬಗ್ಗೆ ಮಾತನಾಡುವ ನೈತಿಕತೆ ಏನು ಉಳಿಸಿಕೊಂಡಿದ್ದಾರೆ ಅಂತ ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಬಿಎಸ್ ವೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ ಎಂಬ ಬಿಎಸ್ ಯಡಿಯೂರಪ್ಪ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕೋರ್ಟ್ ದಯೆಯಿಂದ ಬಚಾವಾಗಿದ್ದಾರೆ ಅವರಿಗೆ ನನ್ನ ಬಗ್ಗೆ ಮಾತನಾಡುವ ನೈತಿಕತೆ ಏನಿದೆ. ಪೋಕ್ಸೋ ಕೇಸ್ ಎದುರಿಸಿದ ಇವರು ನನ್ನ ಬಗ್ಗೆ ಮಾತನಾಡೋದು ಸರೀನಾ? ಎಂದು ಪ್ರಶ್ನಿಸಿದ್ದಾರೆ. 82 ವರ್ಷ ವಯಸ್ಸಿನಲ್ಲಿ ಇದು ಬೇಕಿತ್ತಾ? ಯಡಿಯೂರಪ್ಪಗೆ ಯಾವ ನೈತಿಕತೆ ಇದೆ ನನ್ನ ಬಗ್ಗೆ ಮಾತನಾಡುವುದ್ದಕ್ಕೆ. ಯಡಿಯೂರಪ್ಪ ರಾಜಕೀಯ ಜೀವನದಿಂದ ನಿವೃತ್ತಿಯಾಗಬೇಕಿತ್ತು. ಅವರಿಗೆ ರಾಜಕೀಯ ನಿವೃತ್ತರಾಗಲು ಹೇಳಿ ಎಂದು ಖಡಕ್ ಪ್ರತಿಕ್ರಿಯೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚೆನ್ನೈ: ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಇಶಾ ಫೌಂಡೇಶನ್ನ ಸಂಸ್ಥಾಪಕ, ಆಧ್ಯಾತ್ಮಿಕ ಗುರುಗಳಾದ ಶ್ರೀ ಸದ್ಗುರು ಒತ್ತಾಯಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಹಿಂದೂಗಳ ಮೇಲಿನ ದೌರ್ಜನ್ಯ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ. ನಮ್ಮ ನೆರೆಹೊರೆಯಲ್ಲಿರುವ ಅಲ್ಪಸಂಖ್ಯಾತರ ಸುರಕ್ಷತೆಗೆ ಸಾಧ್ಯವಾದಷ್ಟು ಬೇಗ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಒತ್ತಾಯಿಸಿದರು. ಬಾಂಗ್ಲಾದ ಹಿಂದೂಗಳ ಪರವಾಗಿ ನಿಲ್ಲದಿದ್ದರೆ ಭಾರತ ಎಂದಿಗೂ ಮಹಾಭಾರತವಾಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ದೌರ್ಜನ್ಯಗಳಿಂದ ನಮ್ಮ ಜನಾಂಗವನ್ನು ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ಹೇಳಿದ್ದಾರೆ. ಬಾಂಗ್ಲಾದೇಶದ 27 ಜಿಲ್ಲೆಗಳಲ್ಲಿ ಹಿಂದೂ ನಿವಾಸಗಳು ಮತ್ತು ಅವರ ವ್ಯಾಪಾರ ಸಂಸ್ಥೆಗಳ ಮೇಲೆ ದಾಳಿಗಳು ಮತ್ತು ಲೂಟಿಗಳ ವರದಿಗಳಿವೆ. ಪ್ರಧಾನಿ ರಾಜೀನಾಮೆ ನಂತರವೂ ಹಿಂಸಾತ್ಮಕ ಕೃತ್ಯ ಮುಂದುವರಿದಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸದ್ಯ ಜೈಲಿನಲ್ಲಿದ್ದು, ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ಅವರ ಬದಲು ಸಚಿವೆ ಅತಿಶಿ ಮರ್ಲೆನಾ ಅವರು ಧ್ವಜಾರೋಹಣ ಮಾಡಲಿದ್ದಾರಂತೆ. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆರೋಪಿಯಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸದ್ಯ ಜೈಲಿನಲ್ಲಿದ್ದಾರೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜೈಲಿನಿಂದ ಲೆಫ್ಟಿನೆಂಟ್ ಗವರ್ನರ್‌ಗೆ ಪತ್ರ ಬರೆದಿದ್ದು, ತನ್ನ ಬದಲು ಸಚಿವೆ ಅತಿಶಿ ಮರ್ಲೆನಾ ಧ್ವಜ ಹಾರಿಸುವುದಾಗಿ ತಿಳಿಸಿದ್ದಾರೆ. ಪ್ರತಿ ವರ್ಷ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮಗಳು ಛಾರ್ ತ್ರಾಸಲ್ ಮೈದಾನದಲ್ಲಿ ನಡೆಯುತ್ತಿತ್ತು. ಅರವಿಂದ ಕೇಜ್ರಿವಾಲ್ ಸಾರ್ವಜನಿಕ ಭಾಷಣ ಮಾಡುತ್ತಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕಾರವಾರ: ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿಯ ಮೇಲಿನ ಸೇತುವೆ, ಬುಧವಾರ ರಾತ್ರಿ 1:50 ರ ಸುಮಾರಿಗೆ ಕುಸಿದಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸೇತುವೆ ಕುಸಿತವಾದ ಸ್ಥಳಕ್ಕೆ ಭೇಟಿ ನೀಡಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಕಾಳಿನದಿಯ ಸೇತುವೆ ಕುಸಿತಕ್ಕೆ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಸಾಕಷ್ಟು ಅಧ್ವಾನ ನಡೆದರೂ ಅವರು (ಕೇಂದ್ರ ಸರ್ಕಾರ) ಮೌನವಾಗಿರುವುದು ಅಚ್ಚರಿ ಮೂಡಿಸುತ್ತಿದೆ ಎಂದು ಅವರು ಹೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಯೋಜನೆ ಕೇಂದ್ರ ಸರ್ಕಾರಕ್ಕೆ ಸೇರಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಐ.ಆರ್.ಬಿ ಕಂಪನಿ ಮೇಲೆ ಕೇಂದ್ರದ ಹಿಡಿತವಿದೆ. ಕಂಪನಿ ಈವರೆಗೆ ಹಲವು ಅವೈಜ್ಞಾನಿಕ ಕೆಲಸ ಮಾಡಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ ಎಂದರು. ಕಾಳಿ ನದಿಗೆ ಹೊಸ ಸೇತುವೆ ನಿರ್ಮಿಸುವ ವೇಳೆ ಹಳೆಯ ಸೇತುವೆ ಮೇಲೆ ಭಾರದ ಯಂತ್ರೋಪಕರಣ ಇಟ್ಟು ಕೆಲಸ ಮಾಡಿದ್ದರು. ಅಂಕೋಲಾದ ಹಟ್ಟಿಕೇರಿಯಲ್ಲೂ ಅಂತಹ ಕೆಲಸ ನಡೆದಿತ್ತು.…
ತುಮಕೂರು: ಜಿಲ್ಲೆಯ ತಿಪಟೂರು ತಾಲೂಕಿನ ಹಾಲ್ಕುರಿಕೆ ಗ್ರಾಮದ 80 ವರ್ಷದ ವಯೋವೃದ್ಧೆ ಹುಚ್ಚಮ್ಮ ಎಂಬವರು ಗೃಹಲಕ್ಷ್ಮೀ ಹಣದ ಜೊತೆಗೆ ವೃದ್ಧಾಪ್ಯ ವೇತನವೂ ಸಿಗದೇ ಕಷ್ಟಪಡುತ್ತಿರುವುದಾಗಿ ಇತ್ತೀಚೆಗೆ ನಮ್ಮತುಮಕೂರು ಮಾಧ್ಯಮದಲ್ಲಿ ವರದಿ ಪ್ರಕಟವಾಗಿತ್ತು. “ಗೃಹ ಲಕ್ಷ್ಮಿಯ ಹಣವೂ ಇಲ್ಲ, ವೃದ್ದಾಪ್ಯ ವೇತನವೂ ಇಲ್ಲ: ವೃದ್ಧೆಯನ್ನು ಭಿಕ್ಷಾಟನೆ ದೂಡಿದ ಅಧಿಕಾರಿಗಳು” ಎಂಬ ಶೀರ್ಷಿಕೆಯಡಿ ನಮ್ಮತುಮಕೂರು ವರದಿ ಪ್ರಕಟಿಸಿತ್ತು. ಈ ವರದಿಯ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗ ವೃದ್ಧೆಗೆ ನೆರವಾಗಿದೆ. ರಘುರಾಜ್ ಎಂಬವರು ಈ ಕುರಿತ ವರದಿಗಳನ್ನು ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳ ಗಮನಕ್ಕೆ ತಂದಿದ್ದರು. ಇದರ ಬೆನ್ನಲ್ಲೇ ಸಮಸ್ಯೆಗೆ ಕೂಡಲೇ ಸ್ಪಂದಿಸಿದ ಅಧಿಕಾರಿಗಳು, ವೃದ್ಧೆ ಹುಚ್ಚಮ್ಮ ಅವರ ಕಷ್ಟಕ್ಕೆ ನೆರವಾಗಿದ್ದಾರೆ. ಆಗಸ್ಟ್ 5 ರಂದು ತಿಪಟೂರಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ವೃದ್ಧೆಯ ಮನೆ ಭೇಟಿ ಮಾಡಿ ಸರ್ಕಾರಿ ಸೌಲಭ್ಯಗಳು ದೊರೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತಿಳಿದು ಬಂದಿರುವುದೇನೆಂದರೆ, ಹುಚ್ಚಮ್ಮನವರು 2023ರ ಸೆಪ್ಟೆಂಬರ್ ನಲ್ಲಿ ಗೃಹಲಕ್ಷ್ಮಿ ಯೋಜನೆಗೆ…
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ—ಜೆಡಿಎಸ್ ಪಾದಯಾತ್ರೆ ನಡೆಸುತ್ತಿದೆ. ಈ ನಡುವೆ ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ನೀಡಿರುವ ನೋಟಿಸ್ ಗೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಿಂದ ನನಗೆ ಬಂದಿರುವುದು ಒಂದೇ ನೋಟಿಸ್, ಆ ನೋಟಿಸ್ ಗೆ ನಾನು ಉತ್ತರ ಕೊಟ್ಟಿದ್ದೇನೆ. ಸಿಎಸ್ ರಾಜ್ಯಪಾಲರನ್ನು ಭೇಟಿಯಾಗಿರುವುದು ಬೇರೆ ವಿಚಾರಕ್ಕೆ, ಸಿಎಸ್ ಆಗಿ ನೇಮಕವಾಗಿರುವುದಕ್ಕೆ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ ಎಂದರು. ರಾಜ್ಯಪಾಲರು ನೀಡಿರುವ ನೋಟಿಸ್ ಗೆ ನಾನು ಈಗಾಗಲೇ ಉತ್ತರ ಕೊಟ್ಟಿದ್ದೇನೆ, ಸಚಿವ ಸಂಪುಟದಿಂದ ನೋಟಿಸ್ ಗೆ ಉತ್ತರ ನೀಡಲಾಗಿದೆ. ಕಾನುನಾತ್ಮಕವಾಗಿ ರಾಜ್ಯಪಾಲರು ಉತ್ತರನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷದ ಅವಾನಿ ಲೀಗ್ ಪಕ್ಷದ ಕಾರ್ಯಕರ್ತರು ಹಾಗೂ ಅವರ ಕುಟುಂಬದವರ ಮಾರಣಹೋಮವೇ ನಡೆಯುತ್ತಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಕುಟುಂಬಸ್ಥರ 29 ಮೃತದೇಹಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ಶೇಖ್ ಹಸೀನಾ ಭಾರತಕ್ಕೆ ಪರಾರಿಯಾದ ಬೆನ್ನಲೇ ಅವಾನಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗಿವೆ. ಅವಾನಿ ಪಕ್ಷವನ್ನು ಗುರಿಯಾಗಿಸಿ ದಾಳಿ ನಡೆಯುತ್ತಿವೆ. ಸತ್ಕಿರಾ ಪ್ರದೇಶವೊಂದರಲ್ಲೇ ಅವಾನಿ ಪಕ್ಷದ 10 ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಇದರಲ್ಲಿ 5 ಮಂದಿ ಅಪ್ರಾಪ್ತರು ಎಂದು ಹೇಳಲಾಗಿದೆ. ಅವಾನಿ ಪಕ್ಷದ ಮುಖಂಡರ ಮನೆ ಹಾಗೂ ಅಂಗೆಇಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ಅಂಗಡಿಗಳನ್ನು ಪುಂಡರು ಲೂಟಿ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಬಾಂಗ್ಲಾದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನವದೆಹಲಿ: ಡೆಲ್ ಕಂಪೆನಿ ಕಳೆದ 15 ತಿಂಗಳುಗಳಲ್ಲಿ ಎರಡನೇ ಸುತ್ತಿನಲ್ಲಿ ಸಾವಿರಾರು ಕಾರ್ಮಿಕರನ್ನು ಕಂಪೆನಿಯಿಂದ ಕೈಬಿಟ್ಟಿದ್ದು, ಕಾರ್ಮಿಕರ ಸಾಮೂಹಿಕ ವಜಾವನ್ನು ಕಂಪೆನಿ ದೃಢಪಡಿಸಿದೆ. ಆದರೆ ಎಷ್ಟು ಕಾರ್ಮಿಕರನ್ನು ವಜಾ ಮಾಡಲು ನಿರ್ಧರಿಸಿದೆ ಎನ್ನುವುದನ್ನು ಬಹಿರಂಗಪಡಿಸಲ ಕಂಪೆನಿ ನಿರಾಕರಿಸಿದೆ. ಎಐ ಉತ್ಪನ್ನಗಳಿಗೆ ಆದ್ಯತೆ ನೀಡಲು ಡೆಲ್ ತನ್ನ ಮಾರಾಟ ತಂಡಗಳನ್ನು ಬದಲಾಯಿಸುತ್ತಿದೆ. ಆಂತರಿಕ ಜ್ಞಾಪಕ ಪತ್ರದಲ್ಲಿ, ‘ನಾವು ನಿರ್ವಹಣೆಯ ಪದರಗಳನ್ನು ಸುವ್ಯವಸ್ಥಿತಗೊಳಿಸುತ್ತಿದ್ದೇವೆ ಮತ್ತು ನಾವು ಎಲ್ಲಿ ಹೂಡಿಕೆ ಮಾಡುತ್ತೇವೆ ಎಂಬುದನ್ನು ಮರುಪರಿಶೀಲಿಸುತ್ತಿದ್ದೇವೆ’ ಎಂದು ಹೇಳಲಾಗಿದೆ. ಡೆಲ್ ಈ ವಾರ 12,500 ಕ್ಕೂ ಹೆಚ್ಚು ಉದ್ಯೋಗಿಗಳನ್ನು ತೆಗೆದುಹಾಕಿದೆ ಮತ್ತು ಇದು ಡೆಲ್ ನ ಮಾರಾಟ ಮತ್ತು ಮಾರ್ಕೆಟಿಂಗ್ ತಂಡಗಳ ಮೇಲೆ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ. ಕಳೆದ ಹಣಕಾಸು ವರ್ಷದಲ್ಲಿ ಡೆಲ್ 13,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೀದರ್: ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅವ್ಯವಸ್ಥೆ ಹಾಗೂ ಕಾರ್ಯವೈಖರಿ ಬಗ್ಗೆ ಕೆಲ ಲೋಪದೋಷಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಉತ್ತಮವಾದ ಸೇವೆಯನ್ನು ಒದಗಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಕೆಆರ್ ಎಸ್ ಪಕ್ಷವು ಲಂಚಮುಕ್ತ ಅಭಿಯಾನಕ್ಕೆ ಚಾಲನೆ ನೀಡಿತು. ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ತುಕಾರಾಮ ಗೌರೆ, ಕೆಆರ್’ಎಸ್ ಪಕ್ಷವು ಸ್ವಚ್ಛ ಪ್ರಾಮಾಣಿಕ ಮತ್ತು ಜನಪರ ರಾಜಕಾರಣಕ್ಕಾಗಿ ಶ್ರಮಿಸುತ್ತಿದ್ದೇವೆ ಮತ್ತು ಈ ಮೂಲಕ ಜನರ ಏಳಿಗೆಗೆ ಮತ್ತು ಸಂಕಷ್ಟಕ್ಕೆ ನೆರವಾಗಲು ಬಯಸುತ್ತೇವೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲೆಯ ಮತ್ತು ತಾಲೂಕಿನ ಸರ್ಕಾರಿ ಕಚೇರಿ ಆಸ್ಪತ್ರೆಗಳಲ್ಲಿನ ಅವ್ಯವಸ್ಥೆಯನ್ನು ಕಂಡು ಪರಿಶೀಲಿಸಿ ಅವುಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲು ತಮಗೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ KRS ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿಯಾದ ತುಕಾರಾಮ ಗೌರೇ, ಜಿಲ್ಲಾ ಅಧ್ಯಕ್ಷರಾದ ಹನುಮಂತ ಮಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಬಜರಂಗ್ ಪವಾರ್,…
ತುಮಕೂರು: ಉರ್ದು ಭಾಷೆಯ ಶ್ರೀಮಂತಿಕೆಯನ್ನು ಅರಿಯಲು, ಸರ್ಕಾರಿ ಫಸ್ಟ್ ಗ್ರೇಡ್ ಕಾಲೇಜು ತುಮಕೂರು ಕಾಲೇಜಿನಲ್ಲಿ 2024ರ ಉರ್ದು ಉತ್ಸವವನ್ನು ಜುಲೈ 7ರಂದು ವಿಶ್ವಮಾನವ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸಲಾಗುತ್ತಿದೆ. ಮುಖ್ಯ ಅತಿಥಿಗಳು: ಡಾ. ಮಸೂದ್ ಸಿರಾಜ್ ಮತ್ತು ಡಾ. ಮನ್ಸೂರ್ ನೌಮಾನ್ ಅವರು ತಮ್ಮ ಗಂಭೀರವಾದ ಭಾವನೆಗಳನ್ನು ಹಂಚಿಕೊಳ್ಳಲಿದ್ದಾರೆ. ಡಾ. ಮಸೂದ್ ಸಿರಾಜ್ ಅವರು ಉರ್ದು ವಿಭಾಗದ ಮಾಜಿ ಅಧ್ಯಕ್ಷರಾಗಿದ್ದು, ಮಾನಸಗಂಗೋತ್ರಿ, ಮೈಸೂರಿನಲ್ಲಿದ್ದಾಗ ತಮ್ಮ ಕಾರ್ಯಕಾಲದಲ್ಲಿ ಈ ಕ್ಷೇತ್ರದಲ್ಲಿ ಹಲವಾರು ಮಹತ್ವದ ಬದಲಾವಣೆ ತರುವಲ್ಲಿ ಶ್ರಮಿಸಿದ್ದಾರೆ. ಡಾ. ಮನ್ಸೂರ್ ನೌಮಾನ್ ಅವರು ಬೆಂಗಳೂರು ಎಲ್ ಬಿಎಸ್ ಕಾಲೇಜಿನ ಪ್ರಾಂಶುಪಾಲರು ಮತ್ತು ಉರ್ದು ವಿಭಾಗದ ಮುಖ್ಯಸ್ಥರಾಗಿದ್ದು, ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ಅಧ್ಯಕ್ಷತೆ: ಪ್ರೊ. ತರ್ನ್ನುಮ್ ನಿಖತ್ ಎಸ್ ಅವರು ನಮ್ಮ ಕಾಲೇಜಿನ ಪ್ರಾಂಶುಪಾಲರು ಮತ್ತು ಉರ್ದು ವಿಭಾಗದ ಮುಖ್ಯಸ್ಥರಾಗಿ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಅವರ ನೇತೃತ್ವದಲ್ಲಿ ಈ ಉತ್ಸವವು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ. ಅತಿಥಿಗಳು: ಹೆಚ್ಚಿನ ಅನೇಕ ಪ್ರಖ್ಯಾತ ವ್ಯಕ್ತಿಗಳು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅವರಲ್ಲಿ…