Subscribe to Updates
Get the latest creative news from FooBar about art, design and business.
- ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
- ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
- ತುಮಕೂರು: ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
- ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
- ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!
- ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
- ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
- ಗಡಿ ಚೆಕ್ ಪೋಸ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
Author: admin
ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಿರಿಗೆರೆ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಈ ಕೂಡಲೇ ನಿವೃತ್ತಿಯಾಗಿ ಎರಡೂ ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸಬೇಕೆಂಬ ನಿರ್ಣಯ ಕೈಗೊಳ್ಳಲಾಗಿದೆ. ಹಿರಿಯ ಗುರುಗಳ ಅವಧಿಯಲ್ಲಿ ರೂಪಿತವಾಗಿದ್ದ ನಿಯಮಗಳ ಪ್ರಕಾರ 60 ವರ್ಷದ ನಂತರ ಪೀಠ ತ್ಯಾಗ ಮಾಡಿ ಉತ್ತರಾಧಿಕಾರಿ ನೇಮಿಸಬೇಕು. ಆ ನಿಯಮ ಪಾಲನೆಯಾಗುತ್ತಿಲ್ಲ.ಈಗಿನ ಜಗದ್ಗುರುಗಳಿಗೆ 78 ವರ್ಷ ವಯಸ್ಸಾಗಿದೆ. ಮರಿ ಗುರುಗಳನ್ನೂ ನೇಮಿಸಿಲ್ಲ ಎಂಬುದು ಭಕ್ತರ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿತ್ತು. ಮಠದ ಸಂಪೂರ್ಣ ಆಡಳಿತವನ್ನು ಸ್ವಾಮೀಜಿ ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ. 30 ವರ್ಷಗಳ ಹಿಂದೆ ಟ್ರಸ್ಟ್ ರಚಿಸಿ,ಮಾಡಿರುವ ಏಕ ವ್ಯಕ್ತಿ ಡೀಡ್ ವಿಸರ್ಜಿಸಬೇಕು. ಭಕ್ತರ ತೀರ್ಮಾನವೇ ಅಂತಿಮ ಆಗಬೇಕು ಎಂದು ಸಭೆ ಅಭಿಪ್ರಾಯಪಟ್ಟಿತು. ದಾವಣಗೆರೆ, ಚಿತ್ರದುರ್ಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬೆಂಗಳೂರು ಸೇರಿ ರಾಜ್ಯದ ನಾನಾ ಜಿಲ್ಲೆಗಳಿಂದ ಮುಖಂಡರು ಆಗಮಿಸಿದ್ದರು. ಭಾನುವಾರ ನಡೆದ ಅಖಿತ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಅಧ್ಯಕ್ಷತೆ ವಹಿಸಿದ್ದ ಶಾಮನೂರು ಶಿವಶಂಕರಪ್ಪ ಸಭೆಯಲ್ಲಿ ಕೈಗೊಂಡಿರುವ ನಿರ್ಣಯದ ಬಗ್ಗೆ…
ಕಳೆದ ದಿನ ಉತ್ತರಪ್ರದೇಶದ ವ್ಯಕ್ತಿಯೊಬ್ಬರು ನಮ್ಮ ಮೆಟ್ರೋ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿನ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.ಕಳೆದ ದಿನ ಸಂಜೆ 5:45ರ ವೇಳೆಗೆ ನಾಗಸಂದ್ರ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್ (ಹಸಿರು) ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು. ಸದ್ಯ ಈ ವ್ಯಕ್ತಿಯ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದು ಬಂದಿದೆ. ನವೀನ್ ಅರೋರ ಅವರ ಪುತ್ರ ಸ್ವಂತ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದಾರೆ. ಪುತ್ರಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾಳೆ. ನವೀನ್ ಕೆಆರ್ ಮಾರುಕಟ್ಟೆಯಲ್ಲಿ ಹಾರ್ಡ್‌ವೇರ್ ಅಂಗಡಿ ನಡೆಸುತ್ತಿದ್ದರು. ಚೆನ್ನಾಗಿದ್ದ ವ್ಯಾಪಾರ ಅದ್ಯಾಕೋ ಏನೋ ನೆಲಕ್ಕಚ್ಚಿ ಹೋಯಿತು. ಇದೇ ವಿಚಾರಕ್ಕೆ ಮನೆಯಲ್ಲಿ ಜಗಳವಾಗಿ ನವೀನ್ ಮನೆಯನ್ನು ತೊರೆದಿದ್ದರು. ಜೊತೆಗೆ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಮೃತ ನವೀನ್ ಕಳೆದ ಏಳು ವರ್ಷದಿಂದ ಕುಟುಂಬಸ್ಥರಿಂದ ದೂರವಿದ್ದು ಜೆಪಿ ನಗರದ ಹೋಟೆಲ್‌ವೊಂದರಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದರು. ಬಳಿಕ ಕೆಆರ್ ಮಾರುಕಟ್ಟೆಯಲ್ಲಿ ರೂಮ್ ಮಾಡಿಕೊಂಡು ಇದ್ದರು. ಕುಟುಂಬಸ್ಥರಿಂದ ಹಣ ತರಿಸಿಕೊಳ್ಳುತ್ತಿದ್ದರು. ಕುಟುಂಬಸ್ಥರು ನೀಡಿದ ಹಣದಲ್ಲಿ ರೂಮ್ ಬಾಡಿಗೆ, ಊಟ, ತಿಂಡಿ…
ತುಮಕೂರು: ಶುಕ್ರವಾರವಷ್ಟೇ ನಿಧನರಾದ ತುಮಕೂರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್. ಮಮತಾರವರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ ಕಾರ್ಯಕ್ರಮವನ್ನುಆಯೋಜಿಸಲಾಗಿತ್ತು. ಮೆದುಳು ರಕ್ತಸ್ರಾವದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಶುಕ್ರವಾರ ನಿಧನರಾಗಿದ್ದರು. ಮೃತರ ಗೌರವಾರ್ಥವಾಗಿ ನಗರದ ಪತ್ರಿಕಾಭವನದಲ್ಲಿ ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮವನ್ನುಆಯೋಜಿಸಲಾಗಿದ್ದು, ನೆರೆದಿದ್ದ ಪತ್ರಕರ್ತರು ಮಮತಾರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಂತಾಪ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಮಮತಾರವರು ಅತ್ಯಂತ ಸ್ನೇಹ ಪೂರ್ವಕವಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರತಿಯೊಬ್ಬರೊಂದಿಗೆ ಪ್ರೀತಿಯಿಂದ ಹಾಗೂ ಆತ್ಮೀಯತೆಯರಾಗಿ ವರ್ತಿಸುತ್ತಾ ತಮ್ಮ ಕೆಲಸ ನಿರ್ವಹಿಸುತ್ತಿದ್ದರು. ಅವರು ಇತ್ತೀಚೆಗೆ ತಮ್ಮಅನಾರೋಗ್ಯದ ಬಗ್ಗೆ ಪತ್ರಕರ್ತ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದರು. ಆದರೆ ಇಷ್ಟು ಬೇಗ ಸಾವು ಅವರನ್ನು ಅಪ್ಪಿಕೊಳ್ಳತ್ತದೆ ಎಂಬುದನ್ನು ಊಹಿಸಿರಲಿಲ್ಲ. ಈ ಹಿಂದಿನ ಹಿರಿಯ ಸಹಾಯಕ ನಿರ್ದೇಶಕರಾದ ಮಂಜುನಾಥ್ ರವರೂ ಸಹ ಅಕಾಲಿಕ ಮರಣಕ್ಕೆ ತುತ್ತಾಗಿದ್ದು,…
ತುಮಕೂರು: ಪಾಲಿಕೆ ವ್ಯಾಪ್ತಿಗೆ ಸೇರಿದ ಎಲ್ಲಾ ಆಸ್ತಿಗಳನ್ನು ಇ–ಆಸ್ತಿಯಲ್ಲಿ ಕಾಲೋಚಿತಗೊಳಿಸಲು ಆಗಸ್ಟ್ 6 ರಿಂದ 9ರವರೆಗೆ ಇ–ಆಸ್ತಿ ತ್ವರಿತ ಸೇವಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯ 25, 26, 27ನೇ ವಾರ್ಡ್ ಹೊರತುಪಡಿಸಿ ಉಳಿದೆಲ್ಲಾ ವಾರ್ಡ್ ಗಳಲ್ಲಿ ಈ ಅಭಿಯಾನ ನಿಗಧಿತ ದಿನಾಂಕಗಳಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದೆ. ಆಸ್ತಿ ತೆರಿಗೆ ಹೊಣೆಗಾರಿಕೆಯ ವರ್ಗಾವಣೆಯನ್ನು ಸರಳೀಕರಣಗೊಳಿಸುವುದು, ಪಾಲಿಕೆ ವ್ಯಾಪ್ತಿಯ ಎಲ್ಲಾ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸುವುದು, ಆಸ್ತಿ ಸಂಪನ್ಮೂಲ ಕ್ರೋಢೀಕರಣಗೊಳಿಸುವುದು. ಕಾವೇರಿ ತಂತ್ರಾಂಶದೊಡನೆ ಇ–ಆಸ್ತಿ ತಂತ್ರಾಂಶವನ್ನು ಜೋಡಿಸುವುದು ಈ ಅಭಿಯಾನದ ಮೂಲ ಉದ್ದೇಶವಾಗಿದೆ. ಈಗಾಗಲೇ ಪಾಲಿಕೆಯಲ್ಲಿ ಆಸ್ತಿ ತೆರಿಗೆ ಹಕ್ಕು ದಾಖಲಿಸಿಕೊಂಡಿರುವ ಆಸ್ತಿ ಮಾಲೀಕರು ಇ–ಆಸ್ತಿಯಲ್ಲಿ ಕಾಲೋಚಿತಗೊಳಿಸಲು ಕ್ರಯಪತ್ರ/ದಾನಪತ್ರ/ವಿಭಾಗ ಪತ್ರ/ಹಕ್ಕು ಪತ್ರ, ಇ.ಸಿ, ಭೂಪರಿವರ್ತನೆ ಆದೇಶ, ಅನುಮೋದಿತ ಲೇಔಟ್ ನಕ್ಷೆ, ನಮೂನೆ-3, ಸ್ವತ್ತಿನ ಭಾವಚಿತ್ರ, ಮಾಲೀಕರ ಭಾವಚಿತ್ರ, ಪಾನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಕಟ್ಟಡ ಪರವಾನಿಗೆ…
ತುಮಕೂರು: ಪಾಲಿಕೆಯ ವಾರ್ಡ್ ಸಂಖ್ಯೆ 17 ಮತ್ತು 28ಕ್ಕೆ ಸಂಬಂಧಿಸಿದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಆಗಸ್ಟ್ 7ರಂದು ಸಂಜೆ 4 ಗಂಟೆಗೆ ಗ್ರಂಥಾಲಯ ಪಾರ್ಕ್ ನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಪಾಲಿಕೆ ಆಯುಕ್ತರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತುಮಕೂರು, ಹಾಲಪ್ಪ ಪ್ರತಿಷ್ಠಾನ, ಉದ್ಯೋಗ ಕೋಶ–ಐಕ್ಯೂಎಸಿ ಸಹಯೋಗದೊಂದಿಗೆ ಜುಲೈ 6ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೈಲ್ವೇ ನಿಲ್ದಾಣ ರಸ್ತೆ, ತುಮಕೂರು ಇಲ್ಲಿ ಉದ್ಯೋಗ ಮೇಳ-2024 ಆಯೋಜಿಸಲಾಗಿದೆ. ಬೆಳಗ್ಗೆ 10ಯಿಂದ ಉದ್ಯೋಗ ಮೇಳ ಆರಂಭವಾಗಲಿದೆ. ಗೃಹಸಚಿವ ಡಾ. ಜಿ.ಪರಮೇಶ್ವರ ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ಮುರುಲೀಧರ ಹಾಲಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ವಿ. ಸೋಮಣ್ಣ ಭಾಗವಹಿಸಲಿದ್ದು, ಇನ್ನೂ ಹಲವಾರು ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ (BA, BSc, BCom, BBA/BBM, BCA, BSW, BE, BVA), ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸುಮಾರು 30ಕ್ಕೂ ಹೆಚ್ಚು ಕಂಪೆನಿಗಳು ನೇಮಕಾತಿ ಮಾಡುತ್ತಿವೆ. ಉದ್ಯೋಗ ಮೇಳದಲ್ಲಿ ಯಾವುದೇ ನೋಂದಣಿ ಶುಲ್ಕವಿರುವುದಿಲ್ಲ. ಈಗಲೇ ನೋಂದಣಿ ಮಾಡಿಕೊಳ್ಳಿ: https://forms.gle/6m4oXtRNUHoie9766 ಮಾಹಿತಿ ಪಡೆಯಲು ವಾಟ್ಸಪ್ ಗ್ರೂಪ್‌ಗೆ ಸೇರಬಹುದು: https://chat.whatsapp.com/Con0HGs2aCSFZv8WBMuNge…
ತುಮಕೂರು: ಸಮಾಜಕಾರ್ಯ ವಿದ್ಯಾರ್ಥಿಗಳಿಗೆ ಮುಖ್ಯವಾಗಿಕೌಶಲ್ಯ, ಶಿಸ್ತು ಹಾಗೂ ವಿಷಯಗಳನ್ನು ಪರಿಕಲ್ಪನೆ ಮಾಡುವ ಜ್ಞಾನವಿರಬೇಕು ಎಂದು ತುಮಕೂರು ವಿವಿಯ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜಕಾರ್ಯ ವಿಭಾಗವು ಸೋಮವಾರ ಆಯೋಜಿಸಿದ್ದ ‘ಸಮಾಜಕಾರ್ಯ ಹಬ್ಬ-೨೦೨೪’ಕಾರ್ಯಕ್ರಮವನ್ನುಉದ್ಘಾಟಿಸಿ ಮಾತನಾಡಿದರು. ಸಮಾಜಕಾರ್ಯ ವಿದ್ಯಾರ್ಥಿಗಳು ಗ್ರಾಮೀಣ ಭಾಗದಲ್ಲಿಹೆಚ್ಚು ಶಿಬಿರಗಳನ್ನು ಆಯೋಜಿಸಿ, ಅಲ್ಲಿನಜನರ ವಿಷಯ ವಿಶ್ಲೇಷಣೆ ಮಾಡಬೇಕು. ಸಮಸ್ಯೆಗಳಿಗೆ ಪರಿಹಾರಒದಗಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು.ರೈತರಿಗೆ ಹೆಚ್ಚು ಸಹಾಯ ಮಾಡಬೇಕುಎಂದು ತಿಳಿಸಿದರು. ಕುಲಸಚಿವೆ ನಾಹಿದಾ ಜಮ್ ಜಮ್ ಮಾತನಾಡಿ, ಸಮಾಜಕಾರ್ಯ ವಿದ್ಯಾರ್ಥಿಗಳು ಸಮಾಜಮುಖಿಯೋಜನೆಗಳನ್ನು ಕಾರ್ಯರೂಪಕ್ಕೆತರಬೇಕು. ಸಮಾಜದ ಏಳ್ಗೆಗಾಗಿ ಶ್ರಮಿಸಬೇಕು. ಆತ್ಮತೃಪ್ತಿ ಬರುವುದು ಸಮಾಜದ ಡೊಂಕುಗಳನ್ನು ಸರಿದಾರಿಗೆ ತಂದಾಗ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ ಮಾತನಾಡಿ, ಸಮಾಜಕಾರ್ಯ ವಿದ್ಯಾರ್ಥಿಗಳ ಕಾರ್ಯವೆಲ್ಲವೂ ವಿಶೇಷ ಹಾಗೂ ವಿಭಿನ್ನವಾಗಿ ಇರುತ್ತದೆ. ಶಿಕ್ಷಕರು ಒಗ್ಗಟ್ಟಾಗಿದ್ದಾರೆ ಮಾತ್ರ ವಿದ್ಯಾರ್ಥಿಗಳು ಒಗ್ಗಟ್ಟಾಗಿ ಮಹತ್ವವಾದುದನ್ನು ಸಾಧಿಸಬಹುದು ಎಂದು ಹೇಳಿದರು. ಸಮಾಜಕಾರ್ಯ ಹಬ್ಬದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ರೇಷ್ಮೆ ಇಲಾಖೆ, ಉಚಿತ…
ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕು ಕುಂಟರಾಮನಹಳ್ಳಿ ಗ್ರಾಮದ ನ್ಯಾಯಬೆಲೆ ಅಂಗಡಿಯವರು ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಪಡಿತರ ಧಾನ್ಯಗಳನ್ನು 2021ರ ಅಕ್ಟೋಬರ್ 24ರಂದು ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದ್ದು, ವಶ ಪಡಿಸಿಕೊಂಡ ಪಡಿತರ ಧಾನ್ಯಗಳನ್ನು ಆಗಸ್ಟ್ 6ರಂದು ಬೆಳಿಗ್ಗೆ 11 ಗಂಟೆಗೆ ಗುಬ್ಬಿ ತಾಲ್ಲೂಕಿನ ಟಿ.ಎ.ಪಿ.ಸಿ.ಎಂ.ಎಸ್. ಸಗಟು ಮಳಿಗೆ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುವುದು ಎಂದು ಗುಬ್ಬಿ ತಹಶೀಲ್ದಾರ್ ಆರತಿ ತಿಳಿಸಿದ್ದಾರೆ. ತಹಶೀಲ್ದಾರ್ ಮತ್ತು ಆಹಾರ ನಿರೀಕ್ಷಕರ ತಂಡವು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 13.06 ಕ್ವಿಂಟಾಲ್ (21 ಪ್ಲಾಸ್ಟಿಕ್ ಚೀಲಗಳಲ್ಲಿರುವ) ರಾಗಿ ಹಾಗೂ ಅಕ್ಕಿ, ಗೋಧಿ ಸೇರಿದಂತೆ ವಿವಿಧ ಪಡಿತರ ಧಾನ್ಯಗಳನ್ನು ವಶಪಡಿಸಿಕೊಂಡು ಚೇಳೂರು ಪೊಲೀಸ್ ಠಾಣೆಯ ವಶಕ್ಕೆ ನೀಡಿ ಪ್ರಕರಣವನ್ನು ದಾಖಲಿಸಲಾಗಿತ್ತು. ಸದರಿ ದಾಸ್ತಾನನ್ನು ಗುಬ್ಬಿ ಪಟ್ಟಣದ ಟಿ.ಎ.ಪಿ.ಸಿ.ಎಂ.ಎಸ್. ಸಗಟು ಮಳಿಗೆಯಲ್ಲಿ ದಾಸ್ತಾನು ಮಾಡಲಾಗಿತ್ತು. ಆಸಕ್ತರು ಅಗತ್ಯ ದಾಖಲೆ ಹಾಗೂ ಗುರುತಿನ ಚೀಟಿಯೊಂದಿಗೆ ಬಹಿರಂಗ ಹರಾಜಿನಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮೊತ್ತಕ್ಕೆ ಬಿಡ್ ಮಾಡಿದ ಬಿಡ್‌ದಾರರು ಶೇ.೫೦ರಷ್ಟು ಹಣವನ್ನು ಕಟ್ಟಬೇಕು. ಬಿಡ್ ದಿನ…
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ೧೭ನೇ ವಾರ್ಷಿಕ ಘಟಿಕೋತ್ಸವವು ಆಗಸ್ಟ್ 7ರಂದು ಕುಲಪತಿಗಳ ಕಚೇರಿ ಮುಂಭಾಗದ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು. ವಿಶ್ವ ವಿದ್ಯಾನಿಲಯದ ಸರ್ ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿಂದು ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ಘಟಿಕೋತ್ಸವದಲ್ಲಿ ಕ್ರೀಡೆ ಮತ್ತು ಸಂಸ್ಕೃತಿ ವಿಭಾಗದಲ್ಲಿ ಜಲಕ್ರೀಡಾ ಸಾಹಸಿಗ ಮತ್ತು ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿರುವ ಜಿಲ್ಲೆಯ ಸುಗ್ಗನಪಾಳ್ಯದ ಎಸ್.ಸಿ. ನಾಗಾನಂದಸ್ವಾಮಿ, ಸಮಾಜ ಸೇವಾ ವಿಭಾಗದಲ್ಲಿ ಕೈಗಾರಿಕೋದ್ಯಮಿ ಎಚ್.ಜಿ. ಚಂದ್ರಶೇಖರ್, ಆಧ್ಯಾತ್ಮಿಕ ಮತ್ತು ಸಾಮಾಜಿಕ ಸೇವಾ ವಿಭಾಗದಲ್ಲಿ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀಶ್ರೀಶ್ರೀ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಸೇರಿ ೩ ಮಂದಿಗೆ ಗೌರವ ಡಾಕ್ಟರೇಟ್ ಹಾಗೂ ೩೬ ಅಭ್ಯರ್ಥಿಗಳಿಗೆ ಪಿಎಚ್.ಡಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು. ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯದ ಉನ್ನತ ಶಿಕ್ಷಣ…
ಬೀದರ: ಸಂಸದ ಸಾಗರ್ ಖಂಡ್ರೆ ಅವರು ಜಿಲ್ಲಾ ಜಿಪಂ ಸಭಾಂಗಣದಲ್ಲಿ ನಡೆದ ಸಲಹಾ ಸಮಿತಿ ಸಭೆಗೂ ಮುನ್ನ ನರೇಗಾ ಕಾಮಗಾರಿ ಸ್ಥಳದಲ್ಲಿ ಹೃದಯಘಾತದಿಂದ ಮೃತಪಟ್ಟ ಕೂಲಿ ಕಾರ್ಮಿಕನ ಕುಟುಂಬಕ್ಕೆ 2 ಲಕ್ಷ ರೂಗಳ ಪರಿಹಾರ ಧನದ ಚೆಕ್ ವಿತರಣೆ ಮಾಡಿದರು. ಇದೇ ವೇಳೆ ನೊಂದ ಕುಟುಂಬಸ್ಥರಿಗೆಸ ಸಾಂತ್ವಾನ ಹೇಳಿದ ಅವರು ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ಬದೋಲೆ ಸೇರಿದಂತೆ ಬ್ಯಾಂಕ್ ಅಧಿಕಾರಿಗಳು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296