Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ತುಮಕೂರು: ನಗರದ ಜನತೆಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಅಧಿಕಾರಿಗಳ ತಂಡದೊಂದಿಗೆ ಬುಗುಡನಹಳ್ಳಿ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರಕ್ಕೆ ಪ್ರಮುಖ ನೀರಿನ ಮೂಲವಾಗಿರುವ ಬುಗುಡನಹಳ್ಳಿ ಕೆರೆಯಲ್ಲಿ ಪ್ರಸ್ತುತ ಇರುವ ನೀರಿನ ಸಂಗ್ರಹದ ಬಗ್ಗೆ ಖುದ್ದು ಮಾಹಿತಿ ಪಡೆದ ಸಚಿವರು, ಲಭ್ಯವಿರುವ ನೀರು ಇನ್ನೂ ಎಷ್ಟು ದಿನಗಳ ಕಾಲ ಪೂರೈಕೆಗೆ ಸಾಕಾಗುತ್ತದೆ ಎಂಬುದನ್ನು ಅಧಿಕಾರಿಗಳಿಂದ ಕೇಳಿ ತಿಳಿದುಕೊಂಡರು. ತುಮಕೂರು ನಗರದಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗದಂತೆ ತಡೆಯಲು ಸಚಿವರು ತಕ್ಷಣದ ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಮಾತನಾಡಿದ ಅವರು, “ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರಿಗೆ ಖುದ್ದು ಕರೆ ಮಾಡಿ ಮಾತನಾಡಿದ್ದೇನೆ. ಹೇಮಾವತಿ ಜಲಾಶಯದಿಂದ ಕೂಡಲೇ ನೀರು ಹರಿಸುವ ಕುರಿತು ಸಮಾಲೋಚನೆ ನಡೆಸಲಾಗಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ,” ಎಂದು ತಿಳಿಸಿದರು. ಕೆರೆ ಪರಿಶೀಲನೆಯ ನಂತರ ಅಧಿಕಾರಿಗಳೊಂದಿಗೆ…
ತುಮಕೂರು: ಕಲ್ಪತರು ನಾಡು ತುಮಕೂರು ಈಗ ರಾಷ್ಟ್ರೀಯ ಮಟ್ಟದ ಕ್ರೀಡಾ ಸಂಭ್ರಮಕ್ಕೆ ಸಜ್ಜಾಗಿದೆ. ಇದೇ ಏಪ್ರಿಲ್ 24ರಿಂದ ಮೂರು ದಿನಗಳ ಕಾಲ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ’24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟ’ (U–20) ಆಯೋಜನೆಯಾಗಿದ್ದು, ಜಿಲ್ಲೆಗೆ ಈ ಪ್ರತಿಷ್ಠಿತ ಕೂಟದ ಆತಿಥ್ಯ ವಹಿಸುವ ಅವಕಾಶ ಒದಗಿ ಬಂದಿದೆ. ಈ ಬಾರಿಯ ಕ್ರೀಡಾಕೂಟ ಕೇವಲ ಸ್ಪರ್ಧೆಯಲ್ಲ, ಬದಲಾಗಿ ಅಂತರರಾಷ್ಟ್ರೀಯ ಮಟ್ಟಕ್ಕೆ ಏರಲು ಕ್ರೀಡಾಪಟುಗಳಿಗೆ ಇರುವ ದೊಡ್ಡ ಅವಕಾಶ. ಆಗಸ್ಟ್ 5 ರಿಂದ 9 ರವರೆಗೆ ಅಮೆರಿಕದ ಒರೆಗನ್ ಸ್ಟೇಟ್‌ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್ ಶಿಪ್ ಗೆ ಭಾರತವನ್ನು ಪ್ರತಿನಿಧಿಸುವ ಅಥ್ಲೀಟ್ ಗಳನ್ನು ಈ ಕೂಟದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ರಾಷ್ಟ್ರದಾದ್ಯಂತ ವಿವಿಧ ರಾಜ್ಯಗಳಿಂದ ಸುಮಾರು 1500 ಕ್ರೀಡಾಪಟುಗಳು ಆಗಮಿಸಲಿದ್ದಾರೆ. ಒಟ್ಟು 40 ವಿವಿಧ ಅಥ್ಲೆಟಿಕ್ ಸ್ಪರ್ಧೆಗಳು ನಡೆಯಲಿವೆ. ರಾಜ್ಯದಿಂದ 110 ಅಥ್ಲೀಟ್ ಗಳು ಪಾಲ್ಗೊಳ್ಳುತ್ತಿದ್ದು, ಅದರಲ್ಲಿ 6…
ಬೆಂಗಳೂರು: ಬಹುಚರ್ಚಿತ ಚಿನ್ನದ ಕಳ್ಳಸಾಗಣೆ (Gold Smuggling) ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಅವರಿಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಕೆಲ ದಿನಗಳ ಹಿಂದೆ ಚಿನ್ನದ ಕಳ್ಳಸಾಗಣೆ ಆರೋಪದ ಮೇಲೆ ನಟಿ ರನ್ಯಾ ರಾವ್ ಅವರನ್ನು ಅಧಿಕಾರಿಗಳು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ. ನ್ಯಾಯಾಲಯವು ಜಾಮೀನು ನೀಡಿದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 22) ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರನ್ಯಾ ರಾವ್ ಅವರು ಸುದೀಪ್ ನಟನೆಯ ‘ಮಾಣಿಕ್ಯ’ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ಈ ಸ್ಮಗ್ಲಿಂಗ್ ಪ್ರಕರಣ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಸದ್ಯ ನ್ಯಾಯಾಲಯದ ಆದೇಶದಂತೆ ಅವರು ಜೈಲಿನಿಂದ ಹೊರಬರುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಕೊಡಿಗೇನಹಳ್ಳಿ (ತುಮಕೂರು ಜಿಲ್ಲೆ): ಮಗಳ ಪ್ರಿಯಕರನ ಜೊತೆ ಸೇರಿ ಅತ್ತೆಯೇ ತನ್ನ ಅಳಿಯನನ್ನು ಕೊಲೆ ಮಾಡಿರುವ ಭೀಕರ ಘಟನೆ ಇಲ್ಲಿನ ದಂಡೀಪುರದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಅತ್ತೆ ಜಯಮ್ಮ (50), ಆಕೆಯ ಪುತ್ರ ನಂದೀಶ್ (35) ಮತ್ತು ಮಗಳ ಪ್ರಿಯಕರ ಅಮರ್ ನಾರಾಯಣ್ (23) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ನರಸಿಂಹಮೂರ್ತಿ ಎಂದು ಗುರುತಿಸಲಾಗಿದೆ. ಇವರು ಮೂರು ವರ್ಷಗಳ ಹಿಂದೆ ಜಯಮ್ಮ ಅವರ ಪುತ್ರಿ ಸುಜಾತಾ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು ಮತ್ತು ಅತ್ತೆ ಮನೆಯಲ್ಲೇ ವಾಸವಾಗಿದ್ದರು. ಆದರೆ, ಸುಜಾತಾ ಅವರು ಅನಾರೋಗ್ಯದ ಕಾರಣದಿಂದ ಕಳೆದ ಜನವರಿ 31ರಂದು ಮೃತಪಟ್ಟಿದ್ದರು. ಸುಜಾತಾ ಬದುಕಿದ್ದಾಗ ಆಕೆಗೆ ಅಮರ್ ಎಂಬಾತನೊಂದಿಗೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದೆ. ಈ ವಿಷಯವಾಗಿ ನರಸಿಂಹಮೂರ್ತಿ ಅವರು ಅತ್ತೆ ಜಯಮ್ಮ ಅವರೊಂದಿಗೆ ಆಗಾಗ ಗಲಾಟೆ ಮಾಡುತ್ತಿದ್ದರು. ಇದರಿಂದ ರೋಸಿಹೋದ ಜಯಮ್ಮ, ತನ್ನ ಮಗ ನಂದೀಶ್ ಮತ್ತು ಮಗಳ ಪ್ರಿಯಕರ ಅಮರ್ ಜೊತೆ ಸೇರಿ ಅಳಿಯನನ್ನು ಮುಗಿಸಲು ಸಂಚು…
ಬೆಂಗಳೂರು: ಪ್ರೀತಿಸಿ, ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದ ಪತ್ನಿಯೊಬ್ಬಳು, ಪತಿಯ ಸ್ನೇಹಿತನನ್ನೇ ‘ಅಣ್ಣ’ ಎಂದು ಕರೆದು ಈಗ ಆತನ ಜೊತೆಯೇ ಪರಾರಿಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಜಿಮ್ ಟ್ರೈನರ್ ಆಗಿರುವ ನಿತೇಶ್ ಎಂಬುವವರು ನಂದಿನಿ (ಹೆಸರು ಬದಲಾಯಿಸಲಾಗಿದೆ) ಎಂಬಾಕೆಯನ್ನು ಪ್ರೀತಿಸಿ ವಿವಾಹವಾಗಿದ್ದರು. ನಿತೇಶ್ ಅವರು ಈ ಹಿಂದೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ನವೀನ್ ಎಂಬಾತನ ಪರಿಚಯವಾಗಿತ್ತು. ಇಬ್ಬರು ಆಪ್ತ ಸ್ನೇಹಿತರಾಗಿದ್ದರು. ಮದುವೆಯ ನಂತರ ನವೀನ್, ನಿತೇಶ್ ಅವರ ಮನೆಯಲ್ಲೇ ಬಾಡಿಗೆಗೆ ವಾಸವಿದ್ದನು. ಮನೆಯಲ್ಲೇ ವಾಸವಿದ್ದ ನವೀನ್ ಜೊತೆ ಪತ್ನಿ ನಂದಿನಿ ಅತಿಯಾದ ಸಲುಗೆ ಬೆಳೆಸಿಕೊಂಡಿದ್ದಳು. ಇದನ್ನು ಗಮನಿಸಿದ ಪತಿ ನಿತೇಶ್ ಹಲವಾರು ಬಾರಿ ಪತ್ನಿಗೆ ಬುದ್ಧಿವಾದ ಹೇಳಿದ್ದರು. ಅಷ್ಟೇ ಅಲ್ಲದೆ, ಈ ಕಾರಣಕ್ಕಾಗಿಯೇ ಅವರು ಮನೆ ಬದಲಾಯಿಸಿದ್ದರು. ಆದರೂ ನಂದಿನಿ ಮಾತ್ರ ನವೀನ್ ಜೊತೆಗಿನ ಸಂಪರ್ಕವನ್ನು ಮುಂದುವರಿಸಿದ್ದಳು. ಘಟನೆ ನಡೆದ ದಿನದಂದು ತನಗೆ ಹೊಟ್ಟೆನೋವು ಇದೆ ಎಂದು ಕೆಲಸಕ್ಕೆ ರಜೆ ಹಾಕಿದ್ದ ನಂದಿನಿ, ಪತಿ ಇಲ್ಲದ ವೇಳೆ ನವೀನ್ ಜೊತೆ…
ಕೊರಟಗೆರೆ: ತಾಲ್ಲೂಕಿನ ಸಾರ್ವಜನಿಕರ ಅನುಕೂಲಕ್ಕಾಗಿ ಫ್ರೆಂಡ್ಸ್ ಗ್ರೂಪ್ ಸೇವಾ ಸಮಿತಿ ವತಿಯಿಂದ ನೂತನ ಉಚಿತ ತುರ್ತು ವಾಹನವನ್ನು (Ambulance) ಇಂದು ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷರಾದ ರವಿಕುಮಾರ್ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಫ್ರೆಂಡ್ಸ್ ಗ್ರೂಪ್ ಸೇವಾ ಸಮಿತಿ ಮತ್ತು ಜಗ್ಗೇಶ್ ಅಭಿಮಾನಿಗಳ ಸಂಘದ ಜಂಟಿ ಆಶ್ರಯದಲ್ಲಿ ಇಂದು ಸಂಜೆ 5:00 ಗಂಟೆಗೆ ಪಟ್ಟಣದ ಪುರಸಭಾ ಕಾರ್ಯಾಲಯದ ಮುಂಭಾಗದಲ್ಲಿ ಈ ಸೇವಾ ಕಾರ್ಯಕ್ರಮ ನಡೆಯಲಿದೆ ಎಂದರು. ಹೊಸ ವಾಹನದ ಅವಶ್ಯಕತೆ: ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಹಳೆಯ ತುರ್ತು ವಾಹನವು ದುರಸ್ತಿಯಲ್ಲಿದ್ದ ಕಾರಣ, ಸಾರ್ವಜನಿಕರ ತುರ್ತು ಅಗತ್ಯಗಳಿಗಾಗಿ ನೂತನ ವಾಹನವನ್ನು ಸಜ್ಜುಗೊಳಿಸಲಾಗಿದೆ. ವಾಹನ ಸಮರ್ಪಣೆಯ ಜೊತೆಗೆ ಗುರುವಂದನೆ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ, ಇದೇ ವೇಳೆ ಚಲನಚಿತ್ರ ಹಾಸ್ಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು. ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹಾಗೂ ಎಲೆರಾಂಪುರದ ಡಾ. ಶ್ರೀ ಹನುಮಂತನಾಥ ಸ್ವಾಮೀಜಿ ಅವರು…
ತುಮಕೂರು: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ‘ನಾರಿಶಕ್ತಿ ವಂದನ್’ ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ಪಕ್ಷವು ದೇಶದ ಅರ್ಧದಷ್ಟು ಜನಸಂಖ್ಯೆಯಾಗಿರುವ ಮಹಿಳೆಯರಿಗೆ ದ್ರೋಹ ಬಗೆದಿದೆ ಎಂದು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಕಿಡಿಕಾರಿದ್ದಾರೆ. ಮಂಗಳವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರ ನಿಜವಾದ ಸಬಲೀಕರಣಕ್ಕಾಗಿ ತಂದ ಮಸೂದೆಯನ್ನು ‘ಇಂಡಿ’ ಒಕ್ಕೂಟವು ತಿರಸ್ಕರಿಸಿದೆ. ಇದು ಕೇವಲ ಬಿಜೆಪಿಯ ಮಹಿಳೆಯರಿಗಲ್ಲದೆ, ಎಲ್ಲಾ ಪಕ್ಷಗಳ ಮಹಿಳೆಯರ ರಾಜಕೀಯ ಅವಕಾಶವನ್ನು ಕಸಿದುಕೊಂಡಂತಾಗಿದೆ ಎಂದು ಅವರು ಹೇಳಿದರು. ಮಹಿಳಾ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರವು ಜಲಜೀವನ್ ಮಿಷನ್ ಮೂಲಕ 15 ಕೋಟಿ ಮನೆಗಳಿಗೆ ನೀರು, 10 ಕೋಟಿ ಉಜ್ವಲ ಅನಿಲ ಸಂಪರ್ಕ, 12 ಕೋಟಿ ಶೌಚಾಲಯ ಹಾಗೂ 4 ಕೋಟಿಗೂ ಹೆಚ್ಚು ಮನೆಗಳನ್ನು ಮಹಿಳೆಯರ ಹೆಸರಿನಲ್ಲಿ ನೀಡಿದೆ ಎಂದು ಶಾಸಕರು ವಿವರಿಸಿದರು.…
ತಿಪಟೂರು: ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ನಗರಸಭೆ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಹಲವು ಮಹತ್ವದ ನಿರ್ದೇಶನಗಳನ್ನು ನೀಡಿದರು. ಬೇಸಿಗೆ ಕಾಲ ಆರಂಭವಾಗುತ್ತಿರುವುದರಿಂದ ನಗರವಾಸಿಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು. ವಾರ್ಡ್‌ಗಳ ಬೇಡಿಕೆಗೆ ಅನುಗುಣವಾಗಿ ನೀರು ಒದಗಿಸಬೇಕು ಹಾಗೂ ಅವಶ್ಯಕತೆ ಇರುವ ಕಡೆಗಳಲ್ಲಿ ಹೊಸ ಕೊಳವೆಬಾವಿಗಳನ್ನು ಕೊರೆಸಬೇಕು ಎಂದು ಸೂಚಿಸಿದರು. ನಗರದಲ್ಲಿ ನಿರ್ಮಾಣವಾಗುತ್ತಿರುವ ವಾಣಿಜ್ಯ ಮತ್ತು ವಸತಿ ಸಂಕೀರ್ಣಗಳ ಮಾಹಿತಿ ಪಡೆದು, ಅವುಗಳ ನಿಯಮಬದ್ಧ ಪರಿಶೀಲನೆ ನಡೆಸಲು ಆದೇಶಿಸಿದರು. ರಜತಾದ್ರಿಪುರ ಮತ್ತು ಕೊನೇಹಳ್ಳಿಯಲ್ಲಿ ಬೆಸ್ಕಾಂ ಕಚೇರಿ, ಎಪಿಎಂಸಿ ಆವರಣದಲ್ಲಿ ಕೋಲ್ಡ್ ಸ್ಟೋರೇಜ್ ಹಾಗೂ ಅಮಾನಿಕೆರೆಯಲ್ಲಿ ಗಾಜಿನ ಮನೆ ನಿರ್ಮಾಣದ ಕುರಿತು ಚರ್ಚಿಸಲಾಯಿತು. ಮುಖ್ಯಮಂತ್ರಿಗಳು ಮಂಜೂರು ಮಾಡಿರುವ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ತಾಕೀತು ಮಾಡಿದರು. ಇನ್ನೂ, ಮಾಟನಹಳ್ಳಿ ಗ್ರಾಮದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಿಂದ ಎರಡು ಮನೆಗಳು ಸುಟ್ಟು ಹೋಗಿರುವ…
ತುಮಕೂರು: ನಗರದ ಕ್ಯಾತ್ಸಂದ್ರ ಸಮೀಪದ ಡಾ.ಪುನೀತ್ ರಾಜ್ ಕುಮಾರ್ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ನಿವಾಸಿಗಳು ನರಕಯಾತನೆ ಅನುಭವಿಸುತ್ತಿದ್ದು, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (TUDA) ಮತ್ತು ಮಹಾನಗರ ಪಾಲಿಕೆಯ ವಿಳಂಬ ನೀತಿಯ ವಿರುದ್ಧ ನಾಗರಿಕ ಹಿತರಕ್ಷಣಾ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮಂಗಳವಾರ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಬಡಾವಣೆಯ ನಾಗರಿಕರು, ತಮ್ಮ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸದಿದ್ದರೆ ಸಾಮೂಹಿಕ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಡಾವಣೆಯ ಚರಂಡಿ ವ್ಯವಸ್ಥೆಯು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದ್ದು, ಒಳಚರಂಡಿ ನೀರು ರಸ್ತೆಗಳ ಮೇಲೆ ಹರಿಯುತ್ತಿದೆ. ಬಡಾವಣೆಗೆ ಇನ್ನೂ ಅಧಿಕೃತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿಲ್ಲ. ಇದರ ಜೊತೆಗೆ ರಸ್ತೆ ಮೇಲೆ ಹರಿಯುವ ಕೊಳಚೆ ನೀರಿನಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳು ಮತ್ತು ವೃದ್ಧರ ಆರೋಗ್ಯಕ್ಕೆ ಗಂಭೀರ ಅಪಾಯ ಉಂಟಾಗಿದೆ ಎಂದು ಪ್ರತಿಭಟನಾಕಾರರು ದೂರಿದರು. ಈ ಸಂದರ್ಭದಲ್ಲಿ ಮಾತನಾಡಿದ ನಾಗರಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾದ ಪ್ರತಾಪ್ ಮುದಕರಿ, “ಪ್ರಾಧಿಕಾರವು ಕಾಮಗಾರಿಗಳನ್ನು…
ತುಮಕೂರು: ಕೇಂದ್ರ ಸರ್ಕಾರ ಮಂಡಿಸಿರುವ ‘ನಾರಿಶಕ್ತಿ ವಂದನ್ ಮಸೂದೆ’ಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ಧೋರಣೆಯನ್ನು ಖಂಡಿಸಿ, ಜಿಲ್ಲಾ ಜೆಡಿಎಸ್ ಘಟಕದ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಜೆಡಿಎಸ್ ಕಚೇರಿಯಿಂದ ಬಿಜಿಎಸ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಮುಖಂಡರು ಮತ್ತು ಕಾರ್ಯಕರ್ತರು, ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಕಾಂಗ್ರೆಸ್‌ನ ಮಹಿಳಾ ವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸಲಾಯಿತು. ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹೆಚ್. ಸಿಂಗಪ್ಪ ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ಮಸೂದೆ ಮಂಡಿಸಿದರೆ, ಕಾಂಗ್ರೆಸ್ ಅದನ್ನು ತಿರಸ್ಕರಿಸುತ್ತಿದೆ. ಮಹಿಳೆಯರನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಳ್ಳುವುದು ಕಾಂಗ್ರೆಸ್ ಸಂಸ್ಕೃತಿ,” ಎಂದು ಟೀಕಿಸಿದರು. ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ಮಾತನಾಡಿ, “ಗ್ಯಾರಂಟಿಗಳ ಆಮಿಷವೊಡ್ಡಿ ಮಹಿಳೆಯರ ಹಾದಿ ತಪ್ಪಿಸಬಹುದು ಎಂದು ಕಾಂಗ್ರೆಸ್ ನಾಯಕರು ಭಾವಿಸಿದ್ದಾರೆ. ಆದರೆ ಮಹಿಳೆಯರು ಜಾಗೃತರಾಗಿದ್ದಾರೆ,…