Subscribe to Updates
Get the latest creative news from FooBar about art, design and business.
- ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
- ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
- ಗಡಿ ಚೆಕ್ ಪೋಸ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
- ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
- ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
- ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
- ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ: ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
- ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ: ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
Author: admin
ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ರಿಯಾಲಿಟಿ ಶೋನಲ್ಲಿ ಮಾತನಾಡಿದ ಜಗ್ಗೇಶ್, ನಾವು ಹೇಗೆ ಸಿನಿಮಾ ಮಾಡೋದು? 4-5 ವರ್ಷಗಳಿಂದ ಎಲ್ಲವೂ ಡಿಸಾಸ್ಟರ್ ಆಗಿದೆ. ಎಲ್ಲರೂ ಒಳ್ಳೆಯ ಸಿನಿಮಾಗಳನ್ನೇ ಮಾಡುತ್ತಿದ್ದಾರೆ. ಕೆಟ್ಟ ಸಿನಿಮಾಗಳನ್ನು ಯಾರೂ ಮಾಡುತ್ತಿಲ್ಲ. ಎಲ್ಲ ರೀತಿಯ ಪ್ರಚಾರಗಳನ್ನು ಸಹ ಮಾಡುತ್ತಿದ್ದಾರೆ. ಪತ್ರಿಕೆಯಲ್ಲಿ ಜಾಹಿರಾತು ನೀಡುತ್ತಿದ್ದಾರೆ. ಟಿವಿಗಳಲ್ಲಿ ಜಾಹಿರಾತು ನೀಡುತ್ತಿದ್ದಾರೆ. ಎಲ್ಲವನ್ನೂ ಮಾಡುತ್ತಾರೆ. ಅದೇ ನಿರೀಕ್ಷೆಯಲ್ಲಿ ಥಿಯೇಟರ್‌ಗೆ ಬಂದಾಗ ಜನವೇ ಇಲ್ಲ ಅಂದಾಗ ತುಂಬಾ ಬೇಸರವಾಗುತ್ತದೆ. ಯಾಕೆ ಈ ರೀತಿ ಆಯ್ತು. ಕನ್ನಡ ಚಿತ್ರರಂಗ ಹಿಂಗೆ ಅಂದರೆ ಸತ್ಯವಾಗಿ ಅದಲ್ಲ. ಕನ್ನಡಕ್ಕೆ ಮಾತ್ರ ಹಿಂಗೆ ಅಂದ್ರೆ ಅಲ್ಲ ಎಲ್ಲರಿಗೂ ಆಗುತ್ತಿದೆ. ಚಿತ್ರರಂಗಕ್ಕೆ ಏನಾಗುತ್ತಿದೆ. ನಾವು ಹೇಗೆ ಸಿನಿಮಾ ಮಾಡುವುದು. ಯಾಕೆ ಜನ ಸಿನಿಮಾ ನೋಡಲು ಚಿತ್ರಮಂದಿರಗಳಿಗೆ ಬರುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಮಾತು ಮುಂದುವರಿಸಿದ ಅವರು ಅಕ್ಷಯ್ ಕುಮಾರ್‌ದ ಕೋಟ್ಯಂತರ ರೂಪಾಯಿ ಹಾಕಿ ಸಿನಿಮಾ ಮಾಡಿದ್ದಾರೆ. ಆ ಸಿನಿಮಾ ಕೂಡ ಹೀನಾಯ ಸೋಲು ಕಂಡಿದೆ. ಇಡೀ ಭಾರತದಲ್ಲಿ ಸಿನಿಮಾ ವಾಷ್‌ಔಟ್ ಆಗಿದೆ.…
ನವದೆಹಲಿ: ನೂತನವಾಗಿ ನಿರ್ಮಾಣವಾಗಿರುವ ಸಂಸತ್ ಭವನ ಕೂಡ ಸೋರಲು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರು ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮ ಸಂಸತ್ ಭವನದ ಸುತ್ತ ಮುತ್ತಲು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇನ್ನೊಂದೆಡೆ ಸಂಸತ್ ಭವನ ಸೋರುತ್ತಿದೆ. ಲೋಕಸಭೆಯ ಲಾಬಿಯಲ್ಲಿ ನೀರು ಸೋರಿಕೆ ಆಗುತ್ತಿರುವ ಬಗ್ಗೆ ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್ ಅವರು ಈ ವಿಷಯದ ಕುರಿತು ಮುಂದೂಡಿಕೆ ನಿರ್ಣಯವನ್ನು ಮಂಡಿಸಿದರೆ, ಅಖಿಲೇಶ್ ಯಾದವ್ ಹೊಸ ಸಂಸತ್ತನ್ನು ನಿರ್ಮಿಸಲು ಕೋಟ್ಯಂತರ ಖರ್ಚು ಮಾಡಿದೆ ಎಂದು ಬಿಜೆಪಿಯನ್ನು ಲೇವಡಿ ಮಾಡಿದ್ದಾರೆ. ಅಲ್ಲದೆ, ಕಲಾಪವನ್ನು ಹಳೆಯ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ. ಸಂಸತ್ ಭವನ ಪೂರ್ಣಗೊಂಡ ಒಂದೇ ವರ್ಷದಲ್ಲಿ ಈ ರೀತಿಯ ಸಮಸ್ಯೆ ಆಗಿದೆ. ಹೀಗಾಗಿ ಮುಂಗಾರು ಅಧಿವೇಶನದ ಉಳಿದ ಭಾಗವನ್ನು ಹಳೆಯ ಸಂಸತ್ತಿನ ಕಟ್ಟಡಕ್ಕೆ ಸ್ಥಳಾಂತರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ರಾಂಚಿ: ಸದನದಲ್ಲಿ ಗದ್ದಲವನ್ನು ಸೃಷ್ಟಿಸುವ ಮೂಲಕ ಸದನಕ್ಕೆ ಅಡ್ಡಿಪಡಿಸಿದ ಕಾರಣ ಜಾರ್ಖಂಡ್ನ 18 ಬಿಜೆಪಿ ಶಾಸಕರನ್ನು ಆಗಸ್ಟ್ 2ರ 2 ಗಂಟೆಯವರೆಗೆ ವಿಧಾನಸಭೆಯಿಂದ ಅಮಾನತುಗೊಳಿಸಲಾಗಿದೆ. ನಿನ್ನೆ ವಿರೋಧ ಪಕ್ಷದ ಶಾಸಕರನ್ನು ಸದನದಿಂದ ಹೊರಗೆ ಕಳುಹಿಸಿದ್ದರ ವಿರುದ್ಧ ಸದನದಲ್ಲಿ ಗದ್ದಲವನ್ನು ಸೃಷ್ಟಿಸುವ ಮೂಲಕ ಸದನಕ್ಕೆ ಅಡ್ಡಿಪಡಿಸಿದ ಕಾರಣದಿಂದಾಗಿ ಸ್ಪೀಕರ್ ರವೀಂದ್ರ ನಾಥ್ ಮಹ್ತೋ ಅವರು ಬಿಜೆಪಿ ಸದಸ್ಯರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಮಾರ್ಷಲ್ ಗಳ ಸಹಾಯದಿಂದ ಶಾಸಕರನ್ನು ಇಂದು (ಗುರುವಾರ) ಸದನದಿಂದ ಹೊರಗೆ ಕಳುಹಿಸಲಾಗಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಉದ್ಯೋಗ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಿಲ್ಲವೆಂದು ಬಿಜೆಪಿ ಸದಸ್ಯರು ಪ್ರತಿಭಟಿಸಿದ್ದರು. ಪ್ರತಿಭಟನೆ ವೇಳೆ ಕೆಲವು ದಾಖಲೆಗಳನ್ನು ಹರಿದು ಹಾಕಿದ್ದಾರೆ. ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ತೀವ್ರ ಮಾತಿನ ಜಟಾಪಟಿ ನಡೆದಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗಿನಿಂದಲೇ ಮತ್ತೆ ಮಳೆ ಆರಂಭಗೊಂಡಿದ್ದು, ಮಡಿಕೇರಿ ನಗರ ಸೇರಿದಂತೆ ಬಹುತೇಕ ಎಲ್ಲೆಡೆ ಬಿರುಸಿನಿಂದ ಸುರಿಯುತ್ತಿದೆ. ಮಡಿಕೇರಿ ನಗರದಲ್ಲಿ ದಟ್ಟ ಮಂಜಿನೊಂದಿಗೆ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸಿದ್ದಾಪುರ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಿಸಿದೆ. ಗುಹ್ಯ ಗ್ರಾಮದ ಕಕ್ಕಟ್ಟುಕಾಡು ವಿಗೆ ತೆರಳುವ ರಸ್ತೆ ಜಲಾವೃತಗೊಂಡಿದ್ದು, ಸಂಪರ್ಕ ಕಡಿತಗೊಂಡಿದೆ. ಕರಡಿಗೋಡು ಗ್ರಾಮಕ್ಕೆ ತೆರಳುವ ರಸ್ತೆಯೂ ಜಲಾವೃತಗೊಂಡಿದೆ. ಕರಡಿಗೋಡು ನದಿ ದಡದ 24 ಕುಟುಂಬಗಳ 76 ಮಂದಿಯನ್ನು ಸಿದ್ದಾಪುರದ ಸ್ವರ್ಣಮಾಲ ಕಲ್ಯಾಣ ಮಂಟಪದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಹಚ್ಚಿನಾಡು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾಳಜಿ ಕೇಂದ್ರ ಆರಂಭಿಸಿದ್ದು, 10 ಕುಟುಂಬದ 44 ಮಂದಿಯನ್ನು ಸ್ಥಳಾಂತರಿಸಲಾಗಿದೆ. ಸ್ಥಳದಲ್ಲಿ ಅಧಿಕಾರಿಗಳು ಠಿಕಾಣಿ ಹೂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವಯನಾಡ್: ಪ್ರವಾಹ ಪೀಡಿತ ಚೊರಾಲ್ ಮಾಲಾ ಪ್ರದೇಶಕ್ಕೆ ಮಾಜಿ ಸಂಸದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದ್ದು, ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ. ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಳಿಕ ರಸ್ತೆ ಮಾರ್ಗವಾಗಿ ವಯನಾಡಿಗೆ ತೆರಳಿದರು. ಮೆಪ್ಪಡಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಮೆಪ್ಪಡಿಯಲ್ಲಿನ ಡಾ.ಮೂಫೆನ್ಸ್ ವೈದ್ಯಕೀಯ ಕಾಲೇಜು ಹಾಗೂ ಎರಡು ಪರಿಹಾರ ಶಿಬಿರಗಳಿಗೆ ತೆರಳಿ ಸಂತ್ರಸ್ತ ಸಮಸ್ಯೆಗಳನ್ನು ಆಲಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಕೂಡ ಸಾಥ್ ನೀಡಿದರು. ರಾಹುಲ್ ಗಾಂಧಿ 2019ರ ಲೋಕಸಭಾ ಚುನಾವಣೆಯಲ್ಲಿ ವಯನಾಡಿನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ, ಉತ್ತರ ಪ್ರದೇಶದ ರಾಯಬರೇಲಿ ಕ್ಷೇತ್ರದಲ್ಲಿಯೂ ಗೆಲುವು ಸಾಧಿಸಿದ್ದರಿಂದ ಅದನ್ನು ಉಳಿಸಿಕೊಂಡು ವಯನಾಡನ್ನು ಬಿಟ್ಟುಕೊಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮವು ವಿದೇಶಿ ಉನ್ನತ ವ್ಯಾಸಂಗಕ್ಕಾಗಿ ನೇರ ಸಾಲದ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಜಿಲ್ಲೆಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಜನಾಂಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ೧೮ ರಿಂದ ೩೮ ವರ್ಷದೊಳಗಿನವರಾಗಿದ್ದು, ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಹಿಂದಿನ ವರ್ಷದಲ್ಲಿ ಕನಿಷ್ಟ ಶೇ.೬೦ ಅಂಕ ಹಾಗೂ ವಿದೇಶಿ ವಿಶ್ವ ವಿದ್ಯಾಲಯದಿಂದ ಆಫರ್ ಲೆಟರ್ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ೮ ಲಕ್ಷ ರೂ. ಮೀರಿರಬಾರದು. ಈ ಸಾಲ ಸೌಲಭ್ಯ ಪಡೆಯುವ ಅರ್ಜಿದಾರರು ಸರ್ಕಾರವು ಅಂಗೀಕರಿಸಿದ ಅಲ್ಪಸಂಖ್ಯಾತ ವರ್ಗಗಳ ಪ್ರವರ್ಗ-೧, ೨ಬಿ, ಮತ್ತು ೩ಬಿ ಗುಂಪಿಗೆ ಸೇರಿದವರಾಗಿರಬೇಕು. ಈ ಹಿಂದೆ ನಿಗಮದ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದವರಿಗೆ ಮತ್ತೊಮ್ಮೆ ಸಾಲ ಸೌಲಭ್ಯ ಪಡೆಯಲು ಅರ್ಹತೆ ಇರುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಆಸ್ತಿ(ಕಟ್ಟಡ/ಜಮೀನು)ಯನ್ನು ನಿಗಮದ ಹೆಸರಿಗೆ ಅಡಮಾನ ಇಟ್ಟರೆ ಮಾತ್ರ ಸಾಲ ಸೌಲಭ್ಯ…
ಪಾವಗಡ: 2024-25 ನೇ ಸಾಲಿನ ನೀಡಗಲ್ ಹೋಬಳಿಯ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು. ಕ್ರೀಡಾಕೂಟವನ್ನು ಉದ್ಘಾಟನೆ ನೆರವೇರಿಸಿದ ಬಳಿಕ ಮಾತನಾಡಿದ ಇಂದ್ರಾಣಮ್ಮ, ಕ್ರೀಡೆಯಲ್ಲಿ ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ. ಉತ್ತಮ ಆಟವನ್ನು ಆಡಿದಂತ ವ್ಯಕ್ತಿಗಳು ಮಾತ್ರ ಗೆಲ್ಲಲು ಸಾಧ್ಯವಾಗುತ್ತದೆ. ಆದ್ದರಿಂದ ಸೋತರು ಕೂಡ ನೀವು ಸಮಾನ ಮನಸ್ಸಿನಿಂದ ಗೆದ್ದವರಿಗೆ ಶುಭಾಶಯ ತಿಳಿಸಿ ಸೋಲು– ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಕ್ರೀಡಾಪಟುಗಳಿಗೆ ಹುರುಪು ತುಂಬಿದರು. ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಶಂಕರಪ್ಪ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಓದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಕ್ರೀಡೆ ಆಗಿದೆ ಎಂದು ಕಿವಿಮಾತು ಹೇಳಿದರು. ಇದೇ ಸಂದರ್ಭದಲ್ಲಿ ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಬಸವರಾಜು, ಬಿ.ಆರ್.ಸಿ.ವೆಂಕಟೇಶ್, ನಿವೃತ್ತ ದೈಹಿಕ ಶಿಕ್ಷಕರಾದ ಹನುಮಂತ ರಾಯಪ್ಪ, ದೈಹಿಕ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಕ್ರೀಡಾಭಿಮಾನಿಗಳು ಹಾಜರಾಗಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ನವದೆಹಲಿ: ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪವರ್ಗೀಕರಿಸುವ ಹಕ್ಕು ರಾಜ್ಯಗಳಿಗಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಆ ಮೂಲಕ 2004ರಲ್ಲಿ ಇ.ವಿ.ಚಿನ್ನಯ್ಯ ವರ್ಸಸ್ ಆಂಧ್ರ ಪ್ರದೇಶ ಸರ್ಕಾರ ಪ್ರಕರಣದಲ್ಲಿ ನೀಡಲಾಗಿದ್ದ ತೀರ್ಪನ್ನು ರದ್ದುಗೊಳಿಸಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯ ಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠದಲ್ಲಿ ಒಬ್ಬರನ್ನು ಹೊರತುಪಡಿಸಿ (ನ್ಯಾ. ಬೇಲಾ ತ್ರಿವೇದಿ) ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಇದ್ದ ನ್ಯಾಯಪೀಠ ಈ ಮಹತ್ವದ ತೀರ್ಪು ಪ್ರಕಟಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ತರಗತಿಗಳಲ್ಲಿ ತಂತ್ರಜ್ಞಾನದ ಮೇಲಿನ ಅವಲಂಬನೆ ಪುಸ್ತಕಕ್ಕಿಂತಲೂ ಹೆಚ್ಚಾಗಿರುವುದುವಿಪರ್ಯಾಸ. ವಿದ್ಯಾರ್ಥಿಗಳಲ್ಲಿಚರ್ಚಾ ವಲಯವನ್ನುವೃದ್ಧಿಸಿ, ಶಿಕ್ಷಣ ಸಮಾನತೆಯನ್ನು ಕಲಿಸಬೇಕಾದ ತರಗತಿಗಳು ಮನುಷ್ಯತ್ವವಿಲ್ಲದ ಮಾನವರನ್ನು ಸೃಷ್ಟಿಸುತ್ತಿರುವುದು ಈ ಯುಗದದುರಂತ ಎಂದುಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜು ಗುರುವಾರ ಆಯೋಜಿಸಿದ್ದ ‘ಕಲಾಸಿರಿ–೨೦೨೪’ ಕಾಲೇಜು ವಾರ್ಷಿಕೋತ್ಸವ ಹಾಗೂ ಜಾನಪದ ಕಲಾಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಂತ್ರಜ್ಞಾನದ ಬಳಕೆ ಹೆಚ್ಚಾದಂತೆ ಮನುಷ್ಯ ಸಂಬಂಧ ಕುಸಿಯುತ್ತಿದೆ. ಮುಖ್ಯವಾಗಿಶಿಕ್ಷಕರು–ವಿದ್ಯಾರ್ಥಿಗಳ ನಡುವಿನ ಸಂಬಂಧ ಕುಸಿದಿದೆ. ಶಿಕ್ಷಣದ ಮಹತ್ವ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಿಗೆ ತಿಳಿಯಬೇಕಾದ ಪರಿಸ್ಥಿತಿಯುಂಟಾಗಿದೆ. ಮಾನವಿಕ ಮುಖಗಳನ್ನು ತಿಳಿಯಬೇಕಾದ ಯುವಪೀಳಿಗೆ ಲಾಭಕೋರ ಮನಸ್ಥಿತಿಯಿಂದ ಮೌಲ್ಯಗಳನ್ನು ಪಲ್ಲಟಗೊಳಿಸಿ ವಿಕೃತಿ ಮೆರೆಯುತ್ತಿದ್ದಾರೆಎಂದರು. ಯಂತ್ರಕ್ಕೆ ಮನುಷ್ಯತ್ವವನ್ನುಕೊಡುವ ಶಿಕ್ಷಣ ನಮ್ಮದಾಗಬೇಕು. ಮಾನವನನ್ನು ಯಂತ್ರವಾಗಿ ಮಾಡುವ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಭವಿಷ್ಯ ನಾಶವಾಗುತ್ತಿದೆ.ಭಾರತದಲ್ಲಿ ಮಾನವಿಕ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವವರ ಸಂಖ್ಯೆ ಕೇವಲ ಶೇ.೫ ರಷ್ಟಿದೆ.ನಮ್ಮ ಶಿಕ್ಷಣ ಎಲ್ಲಿಯವರೆಗೆಜ್ಞಾನಮುಖಿ, ಉದ್ಯೋಗಮುಖಿಎಂಬುದನ್ನು ತಿಳಿಯಬೇಕು. ಶೈಕ್ಷಣಿಕ ವಿಭಾಗೀಕರಣವನ್ನು ವಿದ್ಯಾರ್ಥಿಗಳಲ್ಲಿ ಕಲಿಸಬೇಕು ಎಂದರು. ವಿವೇಕರಹಿತ ಶಿಕ್ಷಣ ಪ್ರಯೋಗಗಳಾದ ರಾಷ್ಟ್ರೀಯ ಶಿಕ್ಷಣ…
ತುಮಕೂರು: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ಜಿಲ್ಲೆಯ ಹಲವು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಜಯಂತ ಕುಮಾರ್ ಅವರು ತಿಳಿಸಿದ್ದಾರೆ. ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿರುವ ಕುಡಿಯುವ ನೀರು, ಪ್ರಾಥಮಿಕ ಚಿಕಿತ್ಸಾ ಸಲಕರಣೆ ಮೊದಲಾದ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ, ಭೇಟಿ ನೀಡಿದ ಪ್ರತಿಯೊಂದು ಅಂಗನವಾಡಿ ಕೇಂದ್ರಗಳ ಕುಂದು ಕೊರತೆಗಳನ್ನು ಆಲಿಸಲಾಗಿದೆ. ಪ್ರಧಾನ ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ.ಜಯಂತ ಕುಮಾರ್ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನ್ಯಾ.ನೂರುನ್ನಿಸ ಅವರ ನೇತೃತ್ವದಲ್ಲಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ಭೇಟಿ ನೀಡಿದ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳ ಒಳ ಮತ್ತು ಹೊರಾಂಗಣಗಳಲ್ಲಿ ಶುಚಿತ್ವ ಕಾಪಾಡಿಕೊಂಡು ಶುದ್ಧ ಕುಡಿಯುವ ನೀರನ್ನು ಮಕ್ಕಳಿಗೆ…