Subscribe to Updates
Get the latest creative news from FooBar about art, design and business.
- ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
- ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
- ಗಡಿ ಚೆಕ್ ಪೋಸ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
- ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
- ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
- ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
- ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ: ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
- ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ: ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
Author: admin
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ದರ್ಶನ್ ಹಾಗೂ ಇತರ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಬೆನ್ನಲ್ಲೇ ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರು ಆರೋಪಿಗಳ ಹೆಸರು ಹೇಳಿ ಹಾಜರಾತಿ ಪಡೆದರು. ಬಳಿಕ ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೀದರ್: ಜಿಲ್ಲೆಯ ಔರಾದ ತಾಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾ ಭಾವು ಸಾಠೆ ಜಯಂತಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಾಹಿತ್ಯ ರತ್ನ ಅಣ್ಣಾ ಭಾವು ಸಾಠೆ ಅವರ ಕುರಿತು ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳರು ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನರಸಿಂಗ ಪಾಟೀಲ, ಮಾರುತಿ ಸೂರ್ಯವಂಶಿ, ರಾಜು ಮುಂತಾದವರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೇರಳದ ವಯನಾಡ್ ನಲ್ಲಿ ಅತಿ ಹೆಚ್ಚು ಮಳೆಯಿಂದ ಪ್ರಕೃತಿ ವಿಕೋಪ ದಿಂದ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಜನರನ್ನು ರಕ್ಷಿಸಲು ಮತ್ತು ಜನರ ಆರೋಗ್ಯ ತಪಾಸಣೆ ಮಾಡುವ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತ ವತಿಯಿಂದ ತಜ್ಞ ವೈದ್ಯರು ಮತ್ತು ತಂಡ ವನ್ನು ಔಷಧಿ ಗಳೊಂದಿಗೆ ನಿಯೋಜನೆ ಮಾಡಲಾಗಿದೆ. ಈ ತಂಡವನ್ನೂ ಕರ್ನಾಟಕ ಮತ್ತು ಕೇರಳ ಗಡಿ ಭಾಗವಾದ ಬಾವಲಿ ಚೆಕ್ ಪೋಸ್ಟ್ ನಲ್ಲಿ ಹುಣಸೂರು ಉಪ ವಿಭಾಗಾಧಿಕಾರಿ ಡಾ .ಎನ್.ಸಿ. ವೆಂಕಟರಾಜು , ತಹಶೀಲ್ದಾರ್ ಶ್ರೀನಿವಾಸ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ರವಿಕುಮಾರ್ ರವರು ತಜ್ಞ ವೈದ್ಯರಾದ ಡಾ.ಶ್ರೀನಿವಾಸ್, ಡಾ. ನಾಗೇಶ್ ರಾವ್, ಡಾ.ಶೇಷಾದ್ರಿ, ಹಿರಿಯ ಔಷಧ ವಿತರಣಾಧಿಕಾರಿ ಉಮೇಶ್ ತಂಡವನ್ನೂ ಕೇರಳ ವೈನಾಡುಗೆ ಕಳುಹಿಸಿಕೊಟ್ಟರು. ಈ ಸಂದರ್ಭದಲ್ಲಿ ಹುಣಸೂರು ಉಪ ವಿಭಾಗಾಧಿಕಾರಿ ಡಾ ಎನ್.ಸಿ. ವೆಂಕಟರಾಜು ರವರು ಮಾತನಾಡಿ ನಮ್ಮ ಜಿಲ್ಲಾ ಆಡಳಿತ ವತಿಯಿಂದ ನುರಿತ ತಜ್ಞರನ್ನು ನಿಯೋಜನೆ ಮಾಡಿ ಕೇರಳ ವೈನಾಡಿಗೆ ಕಳಿಸಿ ಕೊಡುತ್ತಿದ್ದೇವೆ ಹಾಗೂ ನಮ್ಮ ಜಿಲ್ಲೆಯಲ್ಲೂ ಸಹ ಅಗತ್ಯ ಔಷಧಿಗಳೊಂದಿಗೆ…
ಕೇರಳ: ವಯನಾಡಿನಲ್ಲಿ ಸಂಭವಿಸಿದ ಭೀಕರ ಪರ್ವತ ಸ್ಫೋಟಕ್ಕೆ ಇಡೀ ದೇಶವೇ ಕಣ್ಣೀರು ಹಾಕಿದೆ. 200ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ನೂರಾರು ಕುಟುಂಬಗಳು ತಮ್ಮವರನ್ನು ಕಳೆದುಕೊಂಡು ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಆಂಬುಲೆನ್ಸ್ ಗಳು ಬಂದಾಗ ಕಳೆದುಕೊಂಡವರನ್ನು ಹುಡುಕುವವರ ದೃಶ್ಯ ಎಂಥವರ ಕರುಳು ಹಿಂಡುವಂತಿದೆ. ಮೃತದೇಹಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದಾಗಿ ಮಲ್ಪಾಡಿಯಲ್ಲಿನ ಸರ್ಕಾರಿ ಆಸ್ಪತ್ರೆಯ ಶವಾಗಾರವನ್ನು ತಾತ್ಕಾಲಿಕವಾಗಿ ಸಭಾಂಗಣಕ್ಕೆ ಶಿಫ್ಟ್ ಮಾಡಲಾಗಿದೆ. ಸ್ಮಶಾನಗಳಲ್ಲಿ ಸಾಮೂಹಿಕವಾಗಿ ಅಂತ್ಯಸಂಸ್ಕಾರ ಮಾಡುತ್ತಿರುವುದು ಕಣ್ಣೀರು ತರಿಸುವಂತಿದೆ. ನದಿಗಳಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ಮೃತದೇಹದಿಂದ ಬೇರ್ಪಟ್ಟ ದೇಹದ ಭಾಗಗಳು ಇದೆಲ್ಲವೂ ವಯನಾಡಿನ ಭೂಕುಸಿತ ಸಂಭವಿಸಿದ ಪ್ರದೇಶದ ಸದ್ಯದ ಪರಿಸ್ಥಿತಿಯಾಗಿದೆ. ಕೆಲವು ಕುಟುಂಬಗಳು ತಮ್ಮ ಕನಸಿನ ಮನೆ, ವಾಹನ ಆಸ್ತಿ ಎಲ್ಲವನ್ನು ಕಳೆದುಕೊಂಡು ಬರಿಗೈಯಲ್ಲಿ ನಿಂತು ಮುಂದೇನು ? ಎಂದು ಕಣ್ಣೀರು ಇಡುತ್ತಿದ್ದಾರೆ. ಸಾಕು ಪ್ರಾಣಿಗಳು ತಮ್ಮನ್ನು ಪ್ರೀತಿಯಿಂದ ಸಾಕಿದ ಯಜಮಾನರನ್ನು ಹುಡುಕುತ್ತಿರುವುದು ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ಕಾಣಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಸರಗೂರು: ತಾಲ್ಲೂಕಿನ ಕಬಿನಿ ಜಲಾಶಯದಿಂದ ನೀರು ನದಿಗೆ ಹೆಚ್ಚಳ ಮಾಡುವುದರಿಂದ ಹೊಳೆಯ ದಡದಲ್ಲಿ ಇರುವ ಗ್ರಾಮಗಳಲ್ಲಿ ಜಮೀನಿಗೆ ನೀರು ನುಗ್ಗಿದ್ದು, ರೈತರ ಬೆಳೆಗಳು ಮುಳುಗಿ ಹೋಗಿ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಮೀನು ಮತ್ತು ಗದ್ದೆಗಳು ಜಾಲವೃತಗೊಂಡು ರೈತರು ಬೆಳೆದ ಬೆಳೆ ಕೈಗೆ ಸಿಕ್ಕದಂತಾಗಿದೆ ಎಂದು ಕೊತ್ತೇಗಾಲ ಗ್ರಾಮದ ಶಿವಲಿಂಗಪ್ಪ ಎಂಬುವರು ಅಳಲು ತೋಡಿಕೊಂಡಿದ್ದಾರೆ. ಕೊತ್ತೇಗಾಲ ಗ್ರಾಮದ ಶಿವಲಿಂಗಪ್ಪ ಎಂಬುವರ 10 ಎಕರೆ ಗದ್ದೆಯಲ್ಲಿ ಬೆಳೆದ ಭತ್ತ ಬೆಳೆದಿದ್ದು ಸಾವಿರಾರು ಹಣವನ್ನು ಖರ್ಚು ಮಾಡಿ ಬೆಳೆಯನ್ನು ಬೆಳೆದ ಫಸಲು ಇನ್ನೂ ವಾರದಲ್ಲೇ ಕಟಾವು ಮಾಡಬೇಕು ಸಮಯದಲ್ಲಿ ನೀರಿನಲ್ಲಿ ಜಲಾವೃತವಾಗಿ ಗದ್ದೆಯಲ್ಲ ನೀರು ತುಂಬಿಕೊಂಡು ಬೆಳೆಯಲ್ಲ ನೀರು ಪಾಲಾಗಿದೆ ಎಂದು ಆಗ್ರಹಿಸಿದರು. ರೈತರ ಜಮೀನಿಗೆ ನೀರು ನುಗ್ಗಿದ್ದು ಭತ್ತ, ರಾಗಿ, ಚೆಂಡು ಮಲ್ಲಿಗೆ, ಕಬ್ಬು, ತೊಗರಿ ಬೆಳೆಗಳು ನೀರು ಪಾಲಾಗಿವೆ. ಪ್ರವಾಹ ಬಂದಾಗಲೆಲ್ಲ ರೈತರು ಇದೆ ಸಮಸ್ಯೆ ಎದುರಿಸುತ್ತಿದ್ದಾರೆ. ರೈತರಿಗೆ ಬೆಳೆ ಪರಿಹಾರ ನೀಡಬೇಕು ಎಂದು ರೈತ ಶಿವಲಿಂಗಪ್ಪ ಒತ್ತಾಯಿಸಿದ್ದಾರೆ. ಕಬಿನಿ ಜಲಾಶಯದ ಹೊಳೆಯ…
ತುಮಕೂರು: ತುಮಕೂರಿನ ವಿವಾದಿತ ಸಿದ್ದಿವಿನಾಯಕ ಮಾರುಕಟ್ಟೆ ಪ್ರದೇಶಕ್ಕೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ಧಿ ವಿನಾಯಕ ದೇವಸ್ಥಾನದ ಇರುವ ಆವರಣದಲ್ಲಿ ತುಮಕೂರು ಮಹಾನಗರ ಪಾಲಿಕೆ ವತಿಯಿಂದ ಈಗಾಗಲೇ ಯೂಟಿಲಿಟಿ ಮಲ್ಟಿಪರ್ಪಸ್ ಮಾಲ್ ನಿರ್ಮಾಣ ಸಂಬಂಧ ಈಗಾಗಲೇ ಸಚಿವ ಪರಮೇಶ್ವರ್ ಶಂಕು ಸ್ಥಾಪನೆಯನ್ನು ನೆರವೇರಿಸಿದ್ದಾರೆ. ಪಾಲಿಕೆಯ ಈ ನಿರ್ಧಾರಕ್ಕೆ ಬಿಜೆಪಿ ಮುಖಂಡರು ಬಾರಿ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ವಿವಾದ ಭುಗಿಲೆದಿದೆ. ಹೀಗಾಗಿ ಇಂದು ಇಂದು ಸಿದ್ದಿವಿನಾಯಕ ದೇವಸ್ಥಾನಕ್ಕೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಪೂಜೆ ಸಲ್ಲಿಸಿ ಪರಿಶೀಲನೆ ನಡೆಸಿದರು. ಸ್ಥಳೀಯ ವ್ಯಾಪಾರಸ್ಥರಿಂದ ಮಾಹಿತಿ ಪಡೆದ ಮುತಾಲಿಕ್, ದೇವಸ್ಥಾನ ಸ್ಥಳಾಂತರಿಸಿದ್ರೆ ಹೋರಾಟದ ಎಚ್ಚರಿಕೆ ನೀಡಿದರಲ್ಲದೇ ಇದರ ವಿರುದ್ಧ ಹೋರಾಟ ಮಾಡುವಂತೆ ಸ್ಥಳೀಯರಿಗೆ ಮನವಿ ಮಾಡಿದರು. ಸಿದ್ದವಿನಾಯಕ ಮಾರುಕಟ್ಟೆ ಆವರಣದಲ್ಲಿ ಮಾಲ್ ನಿರ್ಮಿಸಲು ಮುಂದಾಗಿರುವ ಸರ್ಕಾರ ಮುಂದಾಗಿದೆ. ಈ ಬಗ್ಗೆ ಖಾಸಗಿ ವ್ಯಕ್ತಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರ ವಿರುದ್ಧ ಕಳೆದ ಹಲವು ದಿನಗಳಿಂದ ಹೋರಾಟ ಆರಂಭಗೊಂಡಿದೆ. ನಮ್ಮತುಮಕೂರಿನ…
ತುಮಕೂರು: ಪುಟ್ಟ ಮಕ್ಕಳಿಗೂ ಶಾಲೆ , ಶಾಲೆಯ ವ್ಯವಸ್ಥೆಯ ಬಗ್ಗೆ ಇರುವ ಕಾಳಜಿಗೆ ಇಡೀ ಊರೇ ಬಾಯಿ ಮೇಲೆ ಬೆರಳಿಟ್ಟುಕೊಂಡಿರುವ ಪ್ರಸಂಗವೊಂದು ತುಮಕೂರು ಜಿಲ್ಲೆಯ ಬೆಳೆದರೆ ಗ್ರಾಮ ಒಂದರಲ್ಲಿ ನಡೆದಿದೆ. ಇಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯೊಂದು ಬಹಳ ವರ್ಷಗಳಿಂದಲೂ ಇದೆ. ಈ ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳಿಗೇನು ಅಷ್ಟಾಗಿ ಕೊರತೆ ಕಂಡು ಬಂದಿಲ್ಲ. ಆದರೂ ಶಾಲೆಗೆ ಭದ್ರತೆ ನೀಡುವಲ್ಲಿ ಸಂಬಂಧಪಟ್ಟ ಇಲಾಖೆಗಳು ತಾಸ್ಕಾರ ಮನೋಭಾವ ಮಕ್ಕಳ ಮನಸ್ಸಿಗೂ ನಾಟಿರುವುದು ದುರದೃಷ್ಟಕರ ಸಂಗತಿ. ಇದಕ್ಕೊಂದು ತಾಜಾ ಉದಾಹರಣೆಯೊಂದು ಆಶ್ಚರ್ಯ ಪಡುವ ರೀತಿಯಲ್ಲಿ ಒಂದು ಘಟನೆ ಬೆಳಕಿಗೆ ಬಂದಿದೆ. ಅದೇನೆಂದರೆ ೨೯ ಜುಲೈ ೨೦೨೪ ರ ಸೋಮವಾರ ಶಿಕ್ಷಣಾಧಿಕಾರಿ ಹನುಮಂತಪ್ಪನವರು ಸಮಸ್ಯೆಯತ್ತ ಬೆಳೆಧರೆ ಸರ್ಕಾರಿ ಪ್ರಾಥಮಿಕ ಶಾಲೆಗೆ ಡಿಡಿಪಿಐ ಮಂಜುನಾಥ್ ಅವರೊಂದಿಗೆ ಭೇಟಿ ನೀಡುತ್ತಾರೆ. ಈ ಸಂದರ್ಭದಲ್ಲಿ ಕೆಲವು ರೆಗ್ಯುಲರ್ ಮಕ್ಕಳು ಶಾಲೆ ಬಿಟ್ಟಿದ್ದಾರೆ ಎನ್ನುವ ಮಾಹಿತಿ ತಿಳಿದು ಬರುತ್ತದೆ. ಕೂಡಲೇ ಎಚ್ಚೆತ್ತ ಬಿಇಒ ಹನುಮಂತಪ್ಪ ಗೈರು ಆದ ಮಕ್ಕಳ ಮನೆಗೆ ಭೇಟಿ ನೀಡಲು ಮುಂದಾಗುತ್ತಾರೆ.…
ತುರುವೇಕೆರೆ: ನಮ್ಮ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗಾಢ ನಿದ್ರೆಯಲ್ಲಿದೆ ನಿದ್ರೆಯಿಂದ ಎಬ್ಬಿಸಲು ನಮ್ಮ ಹೋರಾಟ. ಇದು ಒಬ್ಬರ ವಿರುದ್ಧ ಅಲ್ಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಎಂದು ಅವರು ಹೇಳಿದರು. ಪಟ್ಟಣದ ಸಮೀಪವಿರುವ ಮಾಜಿ ಶಾಸಕ ಮಸಾಲ ಜಯರಾಮ್ ರವರ ಫಾರ್ಮ್ ಹೌಸ್ ನಲ್ಲಿ ಏರ್ಪಡಿಸಿದ್ದ ಮೈಸೂರು ಚಲೋ ಪೂರ್ವಾಸಿದ್ದತಾ ಸಭೆಯ ನಂತರ ಅವರು ಮಾತನಾಡಿದರು. ಶೋಷಿತ ಸಮುದಾಯವಾದ ಎಸ್ಸಿ ಎಸ್ಟಿ ಮೀಸಲಿಟ್ಟ 25,000 ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಹಣವನ್ನು ಸಹ ಕೊಳ್ಳೆ ಹೊಡೆದಿದ್ದಾರೆ. ಚುನಾವಣಾ ಸಮಯದಲ್ಲಿ ಈ ಹಣವನ್ನು ಅಕ್ರಮವಾಗಿ ಬಳಸಿಕೊಂಡು ಲೂಟಿ ಮಾಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಅತಿವೃಷ್ಟಿ ಮತ್ತು ಬರದಂತಹ ಪರಿಸ್ಥಿತಿಯಲ್ಲಿ ಈ ಸರ್ಕಾರ ಸಂತ್ರಸ್ತರ ನೆರವಿಗೆ ಬಾರದೆ ನಿರ್ಲಕ್ಷವನ್ನು ತೋರಿದೆ ಇಂತಹ…
ನವದೆಹಲಿ: ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆ ಏರಿಕೆ ಮತ್ತೆ ಆರಂಭಗೊಂಡಿದೆ. ಬಜೆಟ್ ನಂತರ ತೈಲ ಕಂಪನಿಗಳು ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ ಏರಿಕೆ ಮಾಡಿವೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಗಳಲ್ಲಿ ಮಾತ್ರ ಬೆಲೆ ಹೆಚ್ಚಳ ಮಾಡಲಾಗಿದೆ. ಸದ್ಯ 14 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಜನಸಾಮಾನ್ಯರು ಸಮಾಧಾನಪಡುವಂತಿಲ್ಲ, ಯಾವುದೇ ಕ್ಷಣದಲ್ಲಾದರೂ 14 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಮಾಡುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಆಗಸ್ಟ್ 1 ರಿಂದ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ ಜಾರಿಗೆ ಬರಲಿದೆ. 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 8.50 ರೂಪಾಯಿ ಹೆಚ್ಚಳ ಮಾಡಲಾಗಿದೆ. ಹೊಸ ಬೆಲೆ ಜಾರಿಗೆ ಬಂದ ನಂತರ ದೆಹಲಿ, ಮುಂಬೈ, ಕೋಲ್ಕತ್ತಾ, ಚೆನ್ನೈ ಸೇರಿದಂತೆ ದೇಶಾದ್ಯಂತ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳು ದುಬಾರಿಯಾಗಲಿವೆ. ದೆಹಲಿ ಮತ್ತು ಮುಂಬೈನಂತಹ ನಗರಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್…
ನವದೆಹಲಿ: ಭಾರತದ ಸುಮಾರು 300 ಬ್ಯಾಂಕ್ ಗಳ ಮೇಲೆ Ransomware ದಾಳಿ ನಡೆದಿದೆ. ಇದರಿಂದಾಗಿ ಪಾವತಿ ವ್ಯವಸ್ಥೆಗಳಿಗೆ ಅಡ್ಡಿಪಡಿಸಲಾಗಿರುವ ಘಟನೆ ನಡೆದಿದೆ. Ransomware ದಾಳಿಯು ಬುಧವಾರ ನಡೆದಿದ್ದು, 300 ಸಣ್ಣ ಬ್ಯಾಂಕ್ ಗಳ ಪಾವತಿ ವ್ಯವಸ್ಥೆಗಳ ಮೇಲೆ ನಡೆದ ದಾಳಿ ಇದಾಗಿದೆ. ಈ ದಾಳಿಯ ಪರಿಣಾಮ ಪ್ರಾಥಮಿಕವಾಗಿ ಗ್ರಾಮೀಣ ಮತ್ತು ಸಹಕಾರಿ ಹಣಕಾಸು ಸಂಸ್ಥೆಗಳ ಮೇಲೆ ಪರಿಣಾಮ ಬೀರಿದೆ. ಭಾರತದಾದ್ಯಂತ ಸಣ್ಣ ಹಣಕಾಸು ಸಂಸ್ಥೆಗಳಿಗೆ ಬ್ಯಾಂಕಿಂಗ್ ತಂತ್ರಜ್ಞಾನ ಪರಿಹಾರಗಳ ನಿರ್ಣಾಯಕ ಪೂರೈಕೆದಾರರಾದ ಸಿ-ಎಡ್ಜ್ ಟೆಕ್ನಾಲಜೀಸ್ ಅನ್ನು ಗುರಿಯಾಗಿಟ್ಟುಕೊಂಡು ಸೈಬರ್ ಸುರಕ್ಷತೆ ಉಲ್ಲಂಘನೆಯಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ransonware ದಾಳಿ ಬಗ್ಗೆ ನಿಯಂತ್ರಕ ಸಂಸ್ಥೆಗಳು ತ್ವರಿತ ಕ್ರಮ ಕೈಗೊಂಡಿವೆ. ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ(NPCI) C-Edge ಟೆಕ್ನಾಲಜೀಸ್ ತನ್ನ ಚಿಲ್ಲರೆ ಪಾವತಿ ಜಾಲವನ್ನು ಪ್ರವೇಶಿಸುವುದರಿಂದ ತಾತ್ಕಾಲಿಕವಾಗಿ ಸಂಪರ್ಕ ಕಡಿತಗೊಳಿಸಿದೆ. ಈ ಕ್ರಮವು ಸೈಬರ್ ಬೆದರಿಕೆಯ ಸಂಭಾವ್ಯ ಹರಡುವಿಕೆಯನ್ನು ಒಳಗೊಂಡಿರುವ ಗುರಿಯನ್ನು ಹೊಂದಿದೆ ಎಂದು ಹೇಳಲಾಗಿದೆ. ಈ ಘಟನೆಯು ಹಣಕಾಸಿನ ವಲಯದಲ್ಲಿ…