Subscribe to Updates
Get the latest creative news from FooBar about art, design and business.
- ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
- ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
- ಗಡಿ ಚೆಕ್ ಪೋಸ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
- ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
- ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
- ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
- ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ: ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
- ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ: ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
Author: admin
ಪಾವಗಡ: ತಾಲ್ಲೂಕಿನ ಪ್ರತಿಷ್ಠಿತ ಶಾಲೆಯಾದ ಜ್ಞಾನಬೋಧಿನಿ ಶಾಲೆಯಲ್ಲಿ ಜುಲೈ 29ರಿಂದ ಆಗಸ್ಟ್ 2ವರೆಗೆ ನೂತನ ಪದವೀಧರ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸುಮಾರು ಐದು ದಿನಗಳ ಕಾಲ ಮಕ್ಕಳ ಕಲಿಕಾ ಬಲಸಂವರ್ಧನೆ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಜ್ಞಾನಬೋಧಿನಿ ಶಾಲೆಯ ಅಧ್ಯಕ್ಷರಾದ ಜಿ.ಅನಿಲ್ ಕುಮಾರ್ ಹಾಗೂ ಕಾರ್ಯದರ್ಶಿಗಳಾದ ಡಾ.ಕೆ.ಎಸ್.ಅನಿಲ್ ಕುಮಾರ್ ಪಾಲ್ಗೊಂಡಿದ್ದು, ಈ ಸಸಂದರ್ಭದಲ್ಲಿ ಕೆ.ಎಸ್.ಅನಿಲ್ ಕುಮಾರ್ ಅವರು, ನೂತನ ಪದವೀಧರ ಶಿಕ್ಷಕರನ್ನು ಕುರಿತು ಮಾರ್ಗದರ್ಶನವನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕರಾದ ಗಂಗಾಧರ್ ಎಚ್.ಆರ್., ವಿಷಯ ಪರಿವೀಕ್ಷಕರಾದ ಚಿತ್ತಯ್ಯ ಮತ್ತು ಡಯಟ್ ನ ಉಪನ್ಯಾಸಕರಾದ ನವೀನ್ ಕುಮಾರ್, ಹಾಗೆಯೇ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳಾದ ದೇವರಾಜು ಮತ್ತು ಸಾಧಿಕ್ ಉಲ್ಲಾ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ಪದವೀಧರ ಶಿಕ್ಷಕರಿಗೆ ತರಬೇತಿಯನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತಿಪಟೂರು: ಸಾರ್ಥವಳ್ಳಿ ವಲಯದ ಘಟಣಿಕೆರೆ ಗ್ರಾಮದ ಶೃತಿ ಎಂಬವರ ಬಾಳೆಕೃಷಿ ಗಾಳಿ ಮಳೆಯಿಂದ ನಾಶವಾಗಿದ್ದು, ಈ ಬಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳ ಸಹಾಯಧನಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆ ಶ್ರೀ ಕ್ಷೇತ್ರದಿಂದ 5,000 ರೂ. ಸಹಾಯಧನ ಮಂಜೂರಾಗಿದ್ದು, ಈ ಮಂಜೂರು ಪತ್ರವನ್ನು ತಾಲೂಕು ಯೋಜನಾಧಿಕಾರಿಯಾದ ಉದಯ್ ಕೆ. ನೀಡಿದರು. ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ಪ್ರದೀಪ್, ಸೇವಾಪ್ರತಿನಿಧಿ ವಿನುತಾ, ಸ್ವ ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಹೈದರಾಬಾದ್: ಚಲಿಸುತ್ತಿದ್ದ ಬಸ್ ನಲ್ಲಿಯೇ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದ್ದು, ಈ ಘಟನೆ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಹರಿಕೃಷ್ಣ ಟ್ರಾವೆಲ್ಸ್ ಗೆ ಸೇರಿದ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಚಾಲಕನೇ ಈ ದುಷ್ಕೃತ್ಯ ಎಸಗಿದ್ದಾನೆ. ಕೂಲಿ ಕೆಲಸ ಮಾಡುತ್ತಿರುವ ಮಹಿಳೆ ತನ್ನ ಚಿಕ್ಕಮಗಳ ಜೊತೆಗೆ ನಿರ್ಮಲ್‌ನಿಂದ ಪ್ರಕಾಶಂ ಜಿಲ್ಲೆಯ ಪಾಮುರು ಕಡೆಗೆ ಹೋಗಲು ಬಸ್ ಹತ್ತಿದ್ದರು. ಇದೇ ವೇಳೆ ಬಸ್ ಚಾಲಕ ರಾತ್ರಿ ಊಟದ ನಂತರ ಸಹ ಚಾಲಕನಿಗೆ ಬಸ್ ಓಡಿಸಲು ಕೊಟ್ಟು ಬಸ್ ಹಿಂಬದಿ ಸೀಟ್ ಗೆ ಬಂದಿದ್ದು, ಅಲ್ಲಿದ್ದ ಕೂಲಿ ಕಾರ್ಮಿಕ ಮಹಿಳೆ ಮೇಲೆ ಆಕೆ ಪುಟ್ಟ ಮಗಳ ಮುಂದೆಯೇ ಅತ್ಯಾಚಾರ ಎಸಗಿದ್ದಾನೆ. ಬಸ್ ಚಾಲನೆಯಲ್ಲಿರುವಾಗಲೇ ಈ ಕೃತ್ಯ ಎಸಗಲಾಗಿದೆ. ಅತ್ಯಾಚಾರದ ವೇಳೆ ಮಹಿಳೆಯ ಬಾಯಿಗೆ ಬೆಡ್ ಶೀಟ್ ತುರುಕಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ. ಇದೇ ವೇಳೆ ಮಹಿಳೆ ಮೇಲೆ ಹಲ್ಲೆ ಕೂಡಾ ನಡೆಸಲಾಗಿದೆ. ಇನ್ನು ಘಟನೆಯ ನಂತರ ಮಹಿಳೆ…
ಬೆಂಗಳೂರು: ಮುಡಾ ಪ್ರಕರಣದ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಹಾಗೂ ಜೆಡಿಎಸ್ ಪಾದಯಾತ್ರೆಗೆ ಮುಂದಾಗಿದೆ. ಆದರೆ, ಇದೀಗ ಪಾದಯಾತ್ರೆಗೂ ಮುನ್ನವೇ ಬಿಜೆಪಿ—ಜೆಡಿಎಸ್ ನಡುವೆ ಹೊಂದಾಣಿಕೆ ಸಮಸ್ಯೆ ಕಾಣಿಸಿಕೊಂಡಿದ್ದು, ಅಪಸ್ವರ ಎದ್ದಿದೆ. ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಕಮಿಟಿ ಅಧ್ಯಕ್ಷ ಶಾಸಕ ಜಿ.ಟಿ.ದೇವೇಗೌಡ ಈ ಧರಣಿ ಯಾತ್ರೆಯನ್ನು ಮುಂದೂಡುವಂತೆ ಬಿಜೆಪಿಗೆ ಮನವಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಮಳೆ, ಪ್ರವಾಹ ಉಂಟಾಗಿದೆ. ಇದಲ್ಲದೇ ಮುಖ್ಯವಾಗಿ ನಮ್ಮ ನಾಯಕರಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಬಜೆಟ್ ಅಧಿವೇಶನದಲ್ಲಿ ಇದ್ದಾರೆ. ಅವರು ಇಲ್ಲದ ನಾಯತ್ವದಲ್ಲಿ ನಾವು ಹೋರಾಟ ಮಾಡಲ್ಲ ಅಂತ ಅವರು ಹೇಳಿದ್ದಾರೆ. ರಾಜಕೀಯ ಲೆಕ್ಕಾಚಾರ? ಬೆಂಗಳೂರು–ಮೈಸೂರುವರೆಗೆ ಬಿಜೆಪಿಯೊಂದಿಗೆ ಜೆಡಿಎಸ್ ಪಾದಯಾತ್ರೆಯಲ್ಲಿ ಭಾಗಿಯಾದರೆ, ಈ ಭಾಗದಲ್ಲಿ ಬಲಿಷ್ಠವಿರುವ ಜೆಡಿಎಸ್ ಗೆ, ಇಲ್ಲಿ ಬಿಜೆಪಿಯೇ ಹೋರಾಟ ಲೀಡ್ ಮಾಡಿದಂತಾಗುತ್ತದೆ ಎನ್ನುವುದು ಜೆಡಿಎಸ್ ನಾಯಕರ ಆತಂಕ ಅಂತ ಹೇಳಲಾಗುತ್ತಿದ್ದು, ಹೀಗಾಗಿ ಪಾದಯಾತ್ರೆಯನ್ನು ಮೊಟಕುಗೊಳಿಸಲು ಜೆಡಿಎಸ್ ನಾಯಕರು ಮುಂದಾದರೆ ಎನ್ನುವ ಪ್ರಶ್ನೆಗಳು ಕೇಳಿ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಆನೇಕಲ್: ಪುರಸಭೆ ಸದಸ್ಯನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ವೊಬ್ಬನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿಯಾಗಿದ್ದಾನೆ. ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಕಳೆದ 24ನೇ ತಾರೀಕು ಬುಧವಾರ ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಸ್ಕ್ರಾಪ್ ರವಿ ಕಚೇರಿಯಲ್ಲಿದ್ದಾಗ ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಗ್ಯಾಂಗ್ ಕಚೇರಿಗೆ ನುಗ್ಗಿ ಕೊಲೆ ಮಾಡಿತ್ತು. ಆರೋಪಿಗಳ ಬಂಧನಕ್ಕೆ…
ನವದೆಹಲಿ: ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ. ELCIA ಟೆಕ್ ಶೃಂಗಸಭೆ 2024 ರಲ್ಲಿ ಮಾತನಾಡಿದ ಅವರು, ಭಾರತವು ಚೀನಾವನ್ನು ಹಿಂದಿಕ್ಕಿ ಜಾಗತಿಕ ಉತ್ಪಾದನಾ ಕೇಂದ್ರವಾಗುವುದು ಸುಲಭವಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಚೀನಾ ನಮ್ಮ ದೇಶಕ್ಕಿಂತ ಆರು ಪಟ್ಟು ಹೆಚ್ಚಿನ ಜಿಡಿಪಿ(GDP)ಯನ್ನು ಹೊಂದಿದ್ದು, ಅದರ ಉತ್ಪಾದನಾ ಸಾಮರ್ಥ್ಯವನ್ನು ಮ್ಯಾಚ್ ಮಾಡಲು ಭಾರತಕ್ಕೆ ಸಾಧ್ಯವಿಲ್ಲ ಎಂದು ಅವರು ಹೇಳಿದರು. ಚೀನಾವನ್ನು ಹಿಂದಿಕ್ಕಿ ಜಾಗತಿಕ ಉತ್ಪಾದನಾ ಕೇಂದ್ರವಾಗುವುದು ಸುಲಭವಲ್ಲ, ಹಾಗಾಗಿ “ಹಬ್” ಮತ್ತು “ವಿಶ್ವ ಗುರು” ನಂತಹ ಭವ್ಯವಾದ ಪದಗಳನ್ನು ಸುಖಾ ಸುಮ್ಮನೆ ಬಳಸದಂತೆ ಅವರು ಸಲಹೆ ನೀಡಿದರು. ಐಟಿ ವಲಯವು ರಫ್ತಿನ ಮೇಲೆ ಅವಲಂಬಿತವಾಗಿರುವಾಗ, ಉತ್ಪಾದನಾ ಉದ್ಯಮಕ್ಕೆ ಹೆಚ್ಚಿನ ದೇಶೀಯ ಕೊಡುಗೆ ಮತ್ತು ಸರ್ಕಾರದ ಬೆಂಬಲದ ಅಗತ್ಯವಿದೆ. ಉತ್ಪಾದನೆಗೆ ದೇಶೀಯ ಕೊಡುಗೆ ಹೆಚ್ಚು. ಉತ್ಪಾದನೆಯ ಯಶಸ್ಸಿನಲ್ಲಿ ಸರ್ಕಾರವು ದೊಡ್ಡ ಪಾತ್ರವನ್ನು ವಹಿಸುತ್ತದೆ. ದುರದೃಷ್ಟವಶಾತ್, ಭಾರತದಂತಹ…
ತುಮಕೂರು: ಆಯತಪ್ಪಿ ಚಿರತೆಯೊಂದು ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಪುಟ್ಟಮಾದಿಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಕೆಂಪಮ್ಮ ಎಂಬುವರ ಜಮೀನಿನಲ್ಲಿದ್ದ ಬಾವಿಗೆ ಬಿದ್ದಿದೆ. ಬಾವಿಗೆ ಬಿದ್ದ ಮೇಲೆ ಬರಲು ಸಾಧ್ಯವಾಗದೆ ಪ್ರಾಣ ಬಿಟ್ಟಿದ್ದು ಎರಡ್ಮೂರು ದಿನಗಳ ಹಿಂದೆ ಬಾವಿಗೆ ಬಿದ್ದಿದೆ ಎಂದು ಅಂದಾಜಿಸಲಾಗಿದೆ. ಮಾಲೀಕರು ತೋಟಕ್ಕೆ ಬಂದು ಬಾವಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೊಳೆತ ಸ್ಥಿತಿ ತಲುಪಿರುವ ಚಿರತೆ ಕಳೆಬರ ಪತ್ತೆಯಾಗಿದೆ. ತಕ್ಷಣವೇ ಅರಣ್ಯಾಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ, ಚಿರತೆ ಶವ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಪೂಜೆ ಮಾಡುವ ನೆಪದಲ್ಲಿ ಕರೆದು ಮಹಿಳೆಯೊಬ್ಬರ ಮೇಲೆ ಪೂಜಾರಿಯೊಬ್ಬ ಅತ್ಯಾಚಾರ ನಡೆಸಿರುವ ಘಟನೆ ನಡೆದಿದ್ದು, ಸದ್ಯ ಬಾಗಲಗುಂಟೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿರುವ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್(39) ಬಂಧಿತ ಆರೋಪಿಯಾಗಿದ್ದಾನೆ. ಕೆಲವು ದಿನಗಳ ಹಿಂದೆ ದೋಷ ನಿವಾರಣೆ ಮಾಡುವುದಾಗಿ ಮಹಿಳೆಯಿಂದ ಹಣಪಡೆದುಕೊಂಡಿದ್ದ ಪೂಜಾರಿ, ಮಹಿಳೆಯನ್ನು ಕರೆಸಿಕೊಂಡಿದ್ದು, ಬಳಿಕ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಮಹಿಳೆಯ ದೂರಿನ್ವಯ ಬಾಗಲಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇದೀಗ ಆರೋಪಿ ದಯಾನಂದ್ ನನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಕೊರಟಗೆರೆ: ಬೈಚಾಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ತಿಪ್ಪೇಶ್ ಆರ್.ಟಿ.ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಕೊರಟಗೆರೆ ತಾಲೂಕು ತಹಶೀಲ್ದಾರ್ ಮಂಜುನಾಥ್ ತಿಳಿಸಿದರು. ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು. ಮಧುಗಿರಿ ಉಪ ವಿಭಾಗಾಧಿಕಾರಿಗಳ ನಿರ್ದೇಶನದಂತೆ ಅನುಸೂಚಿತ ಜಾತಿಗೆ ಮೀಸಲಿದ್ದ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಯಿತು. ಎರಡನೇ ಅವಧಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅನುಸೂಚಿತ ಜಾತಿಗೆ ಮೀಸಲಿದ್ದ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ತಿಪ್ಪೇಶ್ ಆರ್ ಟಿ ಅವಿರೋಧ ಆಯ್ಕೆ ಮಾಡಲಾಯಿತು. ಇದೇ ವೇಳೆ ಮಾತನಾಡಿದ ನೂತನ ಅಧ್ಯಕ್ಷ ತಿಪ್ಪೇಶ್, ಗ್ರಾಮ ಪಂಚಾಯಿತಿ ಎಲ್ಲ ಸದಸ್ಯರು ಸಾಮರಸ್ಯದಿಂದ ಒಟ್ಟಾಗಿ ಅವಿರೋಧವಾಗಿ ಅಯ್ಕೆ ಮಾಡಿದ್ದಾರೆ. ಎಲ್ಲಾ ಸದಸ್ಯರಿಗೂ ಸಹಕಾರದಿಂದ ನೀಡುತ್ತೇನೆ. ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸೋಣ ಎಂದರಲ್ಲದೇ , ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರಿಗೆ ನೂತನವಾಗಿ ಧನ್ಯವಾದಗಳನ್ನು ತಿಳಿಸಿದರು.. ಸುತ್ತಮುತ್ತಲಿನ ಗ್ರಾಮಸ್ಥರು ಮತ್ತು ಮತದಾರರು ನೂತನ ಅಧ್ಯಕ್ಷರಿಗೆ ಸಿಹಿ ತಿನ್ನಿಸಿ ಹಾರ…
ಸಾಮಾನ್ಯವಾಗಿ ಮದುವೆ ಆದ ಕೆಲ ತಿಂಗಳು ಕಳೆಯುತ್ತಿದ್ದಂತೆ, ನಮ್ಮ ಸುತ್ತಲಿನ ಆಪ್ತರು, ಸ್ನೇಹಿತರು, ಕುಟುಂಬದವರು ಗುಡ್ ನ್ಯೂಸ್ ಯಾವಾಗ? ಎಂದು ಪ್ರಶ್ನೆ ಮಾಡುವುದು ಸಹಜ. ಈ ಸಹಜ ಪ್ರಕ್ರಿಯೆ ಬಗ್ಗೆಯೂ ಕೊಂಚ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ ಅನು ಪ್ರಭಾಕರ್. ಅದು ಅವಳ ಗರ್ಭ, ಅವಳ ನಿರ್ಧಾರ ಅದನ್ಯಾಕೆ ಪ್ರಶ್ನಿಸಬೇಕು? ಎಂಬುದು ಅನು ಅವರ ವಾದ. ಆ ಬೇಸರದ ವಿಷಯದ ಬಗ್ಗೆ ರ್ಯಾಪಿಡ್ ರಶ್ಮಿ ಯೂಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಸುದೀರ್ಘವಾಗಿ ಹೇಳಿಕೊಂಡಿದ್ದಾರೆ ಅನು. “8 ವರ್ಷ ಆಯ್ತು ಮದುವೆ ಆಗಿಲ್ಲ. ಆಕೆಗೆ ಕಿರುಕುಳ ಕೊಡ್ತಿದ್ದಾರೆ. ಬಂಜೆ ಅದೂ ಇದೂ ಎಂದೆಲ್ಲ ಕರೆಸಿಕೊಳ್ಳುವ ಪರಿಸ್ಥಿತಿ ಅವಳದ್ದು. ಇದೆಲ್ಲದರ ಮೇಲೆ ಅವಳಿಗೆ ಮಗು ಆಗುತ್ತದೆ. ಆದರೆ, ಆ ಮಗು ವಿಕಲಚೇತನ ಆಗಿರುತ್ತೆ. ಡಾಕ್ಟರ್ ಬೇಡ ಅಂತ ಹೇಳಿದ್ರೂ, ಆಕೆ ಆ ಮಗುವನ್ನು ಪಡೆದುಕೊಳ್ತಾಳೆ. ಇಷ್ಟು ದಿನ ಕಾದರೂ ನನಗೆ ಸಿಕ್ಕಿರಲಿಲ್ಲ. ಇದೀಗ ಇದು ದೇವರ ಮಗು ನನಗೆ. ನಾನು ಇದನ್ನ ಸಾಕ್ತಿನಿ. ಆ…