Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ಗುಬ್ಬಿ : ಪಟ್ಟಣದ ಸಮೀಪದ ಎಂ.ಹೆಚ್.ಪಟ್ಟಣ ಗೇಟ್ ಬಳಿ ತಾಂತ್ರಿಕ ದೋಷದಿಂದ ಆಕ್ಸಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ದೊಡ್ಡ ಅಪಾಯದಿಂದ ಪಾರದ ಘಟನೆ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ತಿಪಟೂರು ಡಿಪೋದಿಂದ ಪ್ರಯಾಣಿಸುತ್ತಿದ್ದ ಸರ್ಕಾರಿ ಬಸ್ ನ ಅಕ್ಸೆಲ್ ಭಾಗದಲ್ಲಿ ತಾಂತ್ರಿಕ ದೋಷ ಉಂಟಾಗಿ, ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಪಲ್ಟಿಯಾಗಿದೆ. ತಕ್ಷಣವೇ ಸ್ಥಳೀಯರು ಸ್ಪಂದಿಸಿ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಗೆ ಮುಂದಾದರು. ಮಾಹಿತಿ ತಿಳಿದ ಗುಬ್ಬಿ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದೇ ನಿಟ್ಟುಸಿರು ಬಿಡುವ ಸಂಗತಿ. ಗಾಯಗೊಂಡ ಪ್ರಯಾಣಿಕರಿಗೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪಘಾತದ ಪರಿಣಾಮವಾಗಿ ಕೆಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾದರೂ, ನಂತರ ಪೊಲೀಸರು ಕ್ರಮ ಕೈಗೊಂಡು ಸಂಚಾರವನ್ನು ಸುಗಮಗೊಳಿಸಿದರು. ಈ ಘಟನೆ ಹಿನ್ನೆಲೆಯಲ್ಲಿ ವಾಹನಗಳ ನಿರ್ವಹಣೆ ಮತ್ತು ತಾಂತ್ರಿಕ ಪರಿಶೀಲನೆ…
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಳ್ಳಕೆರೆ ತಾಲೂಕಿನ ಗುಂತಕೊಲಮ್ಮನಹಳ್ಳಿ ಗ್ರಾಮದ ಪಾಲಯ್ಯ ಜಿ (58) ಬಂಧಿತ ಆರೋಪಿ. ಈತ ತನ್ನ ಜಮೀನಿನಲ್ಲಿ ಗುಟ್ಟಾಗಿ ಗಾಂಜಾ ಗಿಡಗಳನ್ನು ಬೆಳೆಸುತ್ತಿದ್ದನು. ಖಚಿತ ಮಾಹಿತಿ ಮೆರೆಗೆ ನಾಯಕನಹಟ್ಟಿ ಪೊಲೀಸರು ಜಮೀನಿನ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸರು ನಡೆಸಿದ ಈ ಕಾರ್ಯಾಚರಣೆಯಲ್ಲಿ ಸುಮಾರು 18 ಲಕ್ಷ ರೂಪಾಯಿ ಮೌಲ್ಯದ 791 ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು 187 ಕೆ.ಜಿ. ತೂಕದ ಗಾಂಜಾ ಸೊಪ್ಪನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರು ಹಾಗೂ ಚಳ್ಳಕೆರೆ ಉಪ ಡಿವೈಎಸ್ಪಿ ಸತ್ಯನಾರಾಯಣ ರಾವ್ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ. ತಳಕು ಪೊಲೀಸ್ ವೃತ್ತ ನಿರೀಕ್ಷಕ ಹನುಮಂತಪ್ಪ ಎಂ. ಶಿರೇಹಳ್ಳಿ ಹಾಗೂ ನಾಯಕನಹಟ್ಟಿ ಪೊಲೀಸ್ ಪಿಎಸ್‌ಐ ಜಿ. ಪಾಂಡುರಂಗಪ್ಪ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ದಾಳಿಯ…
ಬೀದರ್: ರಾಜ್ಯದಲ್ಲಿ ಸೂರ್ಯನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಿಸಿಲಿನ ತಾಪಕ್ಕೆ ಯುವಕನೊಬ್ಬ ಬಲಿಯಾಗಿರುವ ಘಟನೆ ಬೀದರ್ ಜಿಲ್ಲೆಯ ಕಮಲನಗರ ಪಟ್ಟಣದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಮೊಹ್ಮದ್ ಸಮೀರ್ ಅಹ್ಮದ್ (20) ಮೃತಪಟ್ಟ ದುರ್ದೈವಿ. ಸಮೀರ್ ಅಹ್ಮದ್ ಪಟ್ಟಣದ ಡಿಗ್ಗಿ ರಸ್ತೆ ಬಳಿ ತರಕಾರಿ ತರಲು ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ತರಕಾರಿ ತರಲು ಹೋಗಿದ್ದಾಗ ಅತಿಯಾದ ಬಿಸಿಲಿನಿಂದಾಗಿ ಸಮೀರ್‌ಗೆ ತಲೆತಿರುಗಿದಂತಾಗಿದೆ. ಕೂಡಲೇ ಆತ ಸಮೀಪದಲ್ಲಿದ್ದ ಮೆಕಾನಿಕ್ ಅಂಗಡಿಯೊಂದಕ್ಕೆ ತೆರಳಿ ನೀರು ಕುಡಿದು ಸ್ವಲ್ಪ ಸಮಯ ವಿಶ್ರಾಂತಿ ಪಡೆದಿದ್ದಾನೆ. ವಿಶ್ರಾಂತಿಯ ನಂತರ ಮರಳಿ ಮನೆಗೆ ಹೋಗುತ್ತಿದ್ದಾಗ, ಡಿಗ್ಗಿ ಗ್ರಾಮದ ರಸ್ತೆ ಬಳಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. “ನನ್ನ ಮಗ ಅತಿಯಾದ ಬಿಸಿಲಿನ ಝಳ ತಾಳಲಾರದೆ ಸಾವನ್ನಪ್ಪಿದ್ದಾನೆ” ಎಂದು ಮೃತನ ತಂದೆ ಲಯಿಕ್ ಅಹ್ಮದ್ ಗೋಳಾಡಿದ್ದಾರೆ. ಮಗನ ಸಾವಿಗೆ ಬಿಸಿಲೇ ಕಾರಣ ಎಂದು ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ…
ವಿಜಯಪುರ: ರಾಜ್ಯ ರಾಜಕಾರಣದಲ್ಲಿ ಸದಾ ತಮ್ಮ ನೇರ ನುಡಿ ಹಾಗೂ ಭಿನ್ನ ನಿಲುವಿನಿಂದಲೇ ಗುರುತಿಸಿಕೊಂಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಹೊಸ ರಾಜಕೀಯ ಬಾಷ್ಯ ಬರೆಯಲು ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳು ಅಂದರೆ ಮೇ ತಿಂಗಳಲ್ಲಿ “ಒಳ್ಳೆಯ ಮುಹೂರ್ತ” ನೋಡಿ ತಮ್ಮ ಹೊಸ ರಾಜಕೀಯ ಪಯಣವನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. ಮೇ ತಿಂಗಳಿನಿಂದ ಯತ್ನಾಳ್ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದು, ಮೊದಲು ಜಿಲ್ಲಾ ಕೇಂದ್ರಗಳು ಮತ್ತು ನಂತರ ತಾಲ್ಲೂಕು ಕೇಂದ್ರಗಳಲ್ಲಿ ಸಭೆ ನಡೆಸಲಿದ್ದಾರೆ. ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದಿಂದ ತಮ್ಮ ಜಿಲ್ಲಾವಾರು ಸಭೆಗಳನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ. ಹಿಂದುತ್ವ, ನಿರುದ್ಯೋಗ ನಿವಾರಣೆ ಮತ್ತು ಅಭಿವೃದ್ಧಿ — ಈ ಮೂರು ಪ್ರಮುಖ ಉದ್ದೇಶಗಳನ್ನು ಇಟ್ಟುಕೊಂಡು ಜನರನ್ನು ತಲುಪಲಿದ್ದಾರೆ. ಈ ಪ್ರವಾಸದ ವೇಳೆ ಹೊಸ ಪ್ರಾದೇಶಿಕ ಪಕ್ಷವನ್ನು ಕಟ್ಟುವ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗುವುದು. “ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ ಈಗಾಗಲೇ ಶುರುವಾಗಿದೆ, ಜನರ ಬೆಂಬಲ ನೋಡಿಕೊಂಡು ಮುಂದಿನ ತೀರ್ಮಾನ…
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮತ್ತೆ ಜೆಡಿಎಸ್ ಸೇರುತ್ತಾರೆ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ರಹಸ್ಯ ಮಾತುಕತೆ ನಡೆಸಿದ್ದಾರೆ ಎಂಬ ವದಂತಿಗಳಿಗೆ ಸ್ವತಃ ಜಮೀರ್ ಅಹ್ಮದ್ ಅವರೇ ತೆರೆ ಎಳೆದಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು ಜೆಡಿಎಸ್‌ಗೆ ಹೋಗುತ್ತೇನೆ ಎನ್ನುವುದು ಕೇವಲ ಊಹಾಪೋಹ. ಕಾಂಗ್ರೆಸ್ ಪಕ್ಷ ನನಗೆ ಎಲ್ಲವನ್ನೂ ನೀಡಿದೆ, ಅಂದಮೇಲೆ ನಾನು ಯಾಕೆ ಜೆಡಿಎಸ್‌ಗೆ ಹೋಗಲಿ?” ಎಂದು ಪ್ರಶ್ನಿಸಿದರು. “2017ರಲ್ಲಿ ನಾನು ಕಾಂಗ್ರೆಸ್ ಸೇರಿದೆ. 2018ರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾನು ಕೇಳದಿದ್ದರೂ ನನಗೆ ಸಚಿವ ಸ್ಥಾನ ನೀಡಿ 5 ಪ್ರಮುಖ ಖಾತೆಗಳನ್ನು ನೀಡಲಾಗಿತ್ತು. ಈಗಲೂ ಸಹ 4 ಖಾತೆಗಳನ್ನು ನೀಡಿದ್ದಾರೆ. ಜೆಡಿಎಸ್ ನಲ್ಲಿ ಇದ್ದಾಗ ಕುಮಾರಸ್ವಾಮಿ ಅವರು ಕೇವಲ ವಕ್ಫ್ ಖಾತೆ ಮಾತ್ರ ಕೊಟ್ಟಿದ್ದರು. ಪಕ್ಷ ನನಗೇನು ಕಡಿಮೆ ಮಾಡಿಲ್ಲ,” ಎಂದು ಅವರು ತಿಳಿಸಿದರು. ಕುಮಾರಸ್ವಾಮಿ ಅವರೊಂದಿಗೆ ರಹಸ್ಯವಾಗಿ ಮಾತನಾಡಿದ್ದಾರೆ ಎಂಬ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, “ಅದೆಲ್ಲ ಸುಳ್ಳು…
ತುಮಕೂರು: ಸಾಮಾಜಿಕ ಬದಲಾವಣೆಗೆ ಬಸವಣ್ಣನವರ ತಮ್ಮ ವಚನಗಳ ಮೂಲಕ ಕೈಗೊಂಡ ವಿಚಾರಧಾರೆಯೂ ಭಾರತ ಸಂವಿಧಾನದಲ್ಲಿ ಅಡಕವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ. ಗದಗ ಕನ್ನಡ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ತುಮಕೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರ ಸಹಯೋಗದಲ್ಲಿ ಹಾಗೂ ಜಿಲ್ಲೆಯ ಸಮಸ್ತ ವೀರಶೈವ ಲಿಂಗಾಯತ ಸಮಾಜದ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. 12ನೇ ಶತಮಾನದಲ್ಲಿ ಸಾಮಾಜಿಕ ಅಸಮತೋಲನ ನಿವಾರಿಸುವ ಬಸವಾದಿ ಶರಣರ ವಚನ ಕ್ರಾಂತಿಯಲ್ಲಿ ಜಾತ್ಯತೀತತೆ, ಸಮಸಮಾಜ ನಿರ್ಮಾಣ, ಸ್ತ್ರೀ ಸಂವೇದಿ ಧೋರಣೆಯಂತಹ ವಿಚಾರಧಾರೆಗಳು ಭಾರತ ಸಂವಿಧಾನದಲ್ಲಿ ಅಡಕವಾಗಿವೆ. ಈ ಹಿನ್ನೆಲೆಯಲ್ಲಿ ಸಂವಿಧಾನದ ಯಥಾವತ್ ಅನುಸರಣೆ ಮೂಲಕ ಬಸವಾದಿ ಶರಣರಿಗೆ ಗೌರವ ಸಲ್ಲಿಸಬೇಕು ಎಂದರು. ಹುಟ್ಟು ಅನಿವಾರ್ಯವಾದುದು, ಆದರೆ ಬದುಕಿನ ಮೌಲ್ಯವನ್ನು ಹೆಚ್ಚಿಸುವುದು ನಮ್ಮ ಕೈಯಲ್ಲಿದೆ. ಜಗತ್ತಿಗೆ ಉತ್ತಮ ದಾರಿಯನ್ನು ತೋರಿಸಿ ಹೋಗುವವರೇ ನಿಜವಾಗಿ ಹೆಚ್ಚು ಬದುಕಿದವರು…
ಕೊರಟಗೆರೆ: ನಮ್ಮ ದೇಶದ ಸಂವಿಧಾನಕ್ಕೆ ತನ್ನದೇ ಆದ ಮಹತ್ವವಿದೆ ಅದರ ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ ಮತ್ತು ಮಾನವೀಯತೆಯ ಸಂದೇಶ ಸ್ಪಷ್ಟವಾಗಿ ಕಾಣಿಸುತ್ತದೆ ನಮ್ಮ ಸಂವಿಧಾನದ ಮೂಲ ಬಸವಣ್ಣನವರು ಎಂದು ಗೃಹ ಸಚಿವ ಡಾ.ಜಿ.ಪರಮೇಶ‍್ವರ್ ತಿಳಿಸಿದರು. ತಾಲ್ಲೂಕಿನ ಮಲ್ಲೇಶಪುರ ಗ್ರಾಮದ ಬಳಿಯ ಸುಮಾರು 300 ವರ್ಷಗಳ ಇತಿಹಾಸ ಹೊಂದಿರುವ ಬಸವೇಶ್ವರ ಸ್ವಾಮಿಯ ದೇವಾಲಯದ ಪುನರ್ ಪ್ರತಿಷ್ಠಾಪನೆ ಮತ್ತು ನೂತನ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಬಸವಣ್ಣನವರು 18ನೇ ಶತಮಾನದಲ್ಲಿಯೇ ಜಾತ್ಯಾತೀತ ತತ್ವವನ್ನು ಸಾರಿದ ಮಹಾನ್ ಚಿಂತಕರು. “ಸರ್ವ ಜನಾಂಗದ ಶಾಂತಿಯ ತೋಟ” ಎಂಬ ಅವರ ಸಂದೇಶವು 21ನೇ ಶತಮಾನದಲ್ಲೂ ಮಾದರಿಯಾಗಿದ್ದು, ಸಮಾಜಕ್ಕೆ ದಿಕ್ಕು ತೋರಿಸುತ್ತಿತ್ತು ವಿಶ್ವದ ಮೊದಲ ಸಂಸತ್(ಅನುಭವ ಮಠಪ)ವನ್ನು ಸ್ಥಾಪಿಸಿದಂತೆ ಮಹಾನ್ ನಾಯಕರು, ಬ್ರಿಟಿಷ್ ಪಾರ್ಲಿಮೆಂಟನ್ನು ವಿಶ್ವದ ಪಾರ್ಲಿಮೆಂಟ್ ತಂದೆ ಎಂದು ಕರೆದರೆ ನಮ್ಮ ಸಂಮಿದಾನವನ್ನು ಇಡೀ ವಿಶ್ವಯದಲ್ಲಿಯೇ ಅಂಬೇಡ್ಕರ್ ಮತ್ತು ಬಸವಣ್ಣವನರ ಸಂಮಿಧಾನ ಶ್ರೇಷ್ಠವಾದದ್ದು ಎಂದು ಒಪ್ಪುವಂತಿದೆ ಎಂದರು. ಸಿದ್ದರಬೆಟ್ಟದ ಬಾಳೇಹೊನ್ನೂರು ಖಾಸಾ ಶಾಖಾ ಮಠದ…
ತಿಪಟೂರು: 12ನೇ ಶತಮಾನದಲ್ಲಿಯೇ ಮಹಿಳಾ ಸಮಾನತೆ, ಶೋಷಣೆ ಮುಕ್ತ ಸಮಾಜ ಮತ್ತು ಮೂಢನಂಬಿಕೆಗಳ ವಿರುದ್ಧ ಕ್ರಾಂತಿಕಾರಿ ಹೋರಾಟ ನಡೆಸಿದ ವಿಶ್ವಗುರು ಬಸವಣ್ಣನವರ ಆದರ್ಶಗಳನ್ನು ನಾವೆಲ್ಲರೂ ಇಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ತಿಳಿಸಿದರು. ನಗರದ ತಮ್ಮ ಗುರು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಸವೇಶ್ವರರ ಪರಿಕಲ್ಪನೆಯ ಅಡಿಯಲ್ಲೇ ಆಡಳಿತ ನಡೆಸುತ್ತಿದ್ದಾರೆ. ಲಂಡನ್‌ನಲ್ಲಿ ಬಸವಣ್ಣನವರ ಪ್ರತಿಮೆ ಅನಾವರಣಗೊಳಿಸುವ ಮೂಲಕ ವಿಶ್ವಕ್ಕೆ ಅವರ ಸಂದೇಶ ಸಾರಿದ್ದಾರೆ. ಅಲ್ಲದೆ, ದೇಶದಲ್ಲಿ ಮಹಿಳಾ ಸಮಾನತೆ ಮಸೂದೆ ಜಾರಿಗೆ ತರಲು ಪ್ರಧಾನಿಗಳು ಮುಂದಾದಾಗ ವಿರೋಧ ಪಕ್ಷದವರು ಅದಕ್ಕೆ ಅಡ್ಡಿಪಡಿಸಿದರು ಎಂದು ಅವರು ಬೇಸರ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ತಿಪಟೂರು ತಾಲೂಕಿನ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡಿದ ಶಾಂತಕುಮಾರ್ ಅವರು ಸ್ಥಳೀಯ ಶಾಸಕರ ವಿರುದ್ಧ ಕಿಡಿಕಾರಿದ ಅವರು, ತಾಲೂಕಿನಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚಾಗುತ್ತಿದೆ. ಕೇವಲ ಮೂರು ತಿಂಗಳು ಮಾತ್ರ…
ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಿಹಿ ಸುದ್ದಿ ನೀಡಿದೆ. ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 890 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನವಾಗಿದೆ. ಹುದ್ದೆಗಳ ವಿವರ: ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಉಳಿಕೆ ಮೂಲ ವೃಂದ (RPC): 632 ಹುದ್ದೆಗಳು (81 ಕೃಷಿ ಅಧಿಕಾರಿ ಮತ್ತು 551 ಸಹಾಯಕ ಕೃಷಿ ಅಧಿಕಾರಿ). ಕಲ್ಯಾಣ ಕರ್ನಾಟಕ ವೃಂದ (HK): 258 ಹುದ್ದೆಗಳು (40 ಕೃಷಿ ಅಧಿಕಾರಿ ಮತ್ತು 218 ಸಹಾಯಕ ಕೃಷಿ ಅಧಿಕಾರಿ). ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಮೇ 2026. ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 12 ಮೇ 2026. ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ: 06 ಜೂನ್ 2026. RPC ವೃಂದದ ಲಿಖಿತ ಪರೀಕ್ಷೆ: 07 ಜೂನ್ 2026. ಕಲ್ಯಾಣ…
ಗುಬ್ಬಿ (ತುಮಕೂರು): ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಳಿ ಸೋಮವಾರ ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸೈಕಲ್ ನಲ್ಲಿ ಹೋಗುತ್ತಿದ್ದ ಬಾಲಕನೋರ್ವ ಮೃತಪಟ್ಟಿದ್ದಾನೆ. ನಿಟ್ಟೂರಿನ ಮೈಸೂರು ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಮೃತ ಬಾಲಕನನ್ನು ಶೋಬಿತ್ ರಾಘವ್ (12) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಿಗ್ಗೆ ಶೋಬಿತ್ ತನ್ನ ಸೈಕಲ್ ನಲ್ಲಿ ರಸ್ತೆ ಪಕ್ಕದಲ್ಲಿ ಹೋಗುತ್ತಿದ್ದಾಗ, ಅತಿ ವೇಗವಾಗಿ ಬಂದ ಎಲೆಕ್ಟ್ರಿಕ್ ಕಾರೊಂದು ನಿಯಂತ್ರಣ ತಪ್ಪಿ ಆತನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ, ದಾರಿ ಮಧ್ಯೆಯೇ ಆತ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ. ಅಪಘಾತ ಸಂಭವಿಸಿದ ಕೂಡಲೇ ಕಾರು ಚಾಲಕ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಗುಬ್ಬಿ ಪೊಲೀಸರು ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆ ಮುಂದುವರಿಸಿದ ಪೊಲೀಸರು ಸದ್ಯ ಚಾಲಕನನ್ನು ಪತ್ತೆಹಚ್ಚಿದ್ದಾರೆ ಎನ್ನಲಾಗಿದೆ. ಹಬ್ಬದ ಸಡಗರದಲ್ಲಿದ್ದ ಕುಟುಂಬಕ್ಕೆ ಬಾಲಕನ ಸಾವು ಬರಸಿಡಿಲು ಬಡಿದಂತಾಗಿದೆ. ಮಗನನ್ನು ಕಳೆದುಕೊಂಡ…