Subscribe to Updates
Get the latest creative news from FooBar about art, design and business.
- ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
- ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
- ಗಡಿ ಚೆಕ್ ಪೋಸ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
- ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
- ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
- ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
- ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ: ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
- ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ: ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
Author: admin
ಬೆಳಧರ: ಶಾಲೆಯ ಆಟದ ಮೈದಾನಕ್ಕೆ ಕಾಂಪೌಂಡ್ ಮಾಡಿಸಿಕೊಡದೇ ನಾನು ಶಾಲೆಗೆ ಬರುವುದಿಲ್ಲ ಎಂದು ಪ್ರತಿಜ್ಞೆ ಮಾಡಿ, ಶಾಲೆಯ ಬಿಟ್ಟಿದ್ದ ಮಗುವಿನ ಮನವೊಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಂಪೌಂಡ್ ನಿರ್ಮಾಣದ ಭರವಸೆ ನೀಡಿ ಮಗುವನ್ನು ಶಾಲೆಗೆ ಕರೆದು ಕೊಂಡು ಬಂದ ಘಟನೆ ನಡೆದಿದೆ. ಶಾಲೆಯ ಕಾಂಪೌಂಡ್ ನಿರ್ಮಿಸದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ ಕಾರಣ ಶಾಲೆಯ ಆಟದ ಮೈದಾನಕ್ಕೆ ಕಾಂಪೌಂಡ್ ಮಾಡಿಕೊಡುವವರೆಗೂ ನಾನು ಶಾಲೆಗೆ ಹೋಗುವುದಿಲ್ಲ ಎಂದು ಮಗು ಪಟ್ಟು ಹಿಡಿದು ಕುಳಿತಿದ್ದು, ಕಳೆದ ಒಂದೂವರೆ ತಿಂಗಳುಗಳಿಂದ ಮಗು ಶಾಲೆಯಿಂದ ಹೊರಗಿದ್ದರೂ ಅಧಿಕಾರಿಗಳು ಶಾಲೆಗೆ ಕರೆ ತರಲು ಮುಂದಾಗಿರಲಿಲ್ಲ. ನಿಕಟ ಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಮಗು ಶಾಲೆಯಿಂದ ಹೊರಗುಳಿದಿರುವ ಬಗ್ಗೆ ಗೊತ್ತಿದ್ದರೂ, ಅವರು ಯಾವುದೇ ಕ್ರಮಕ್ಕೆ ಮುಂದಾಗಿರಲಿಲ್ಲ. ಅವರಿಗೆ ಕಾಳಜಿ ತಂಡದ ಸದಸ್ಯರು ಈ ವಿಚಾರವನ್ನು ಪದೇ ಪದೇ ಗಮನಕ್ಕೆ ತಂದರೂ, ಇದು ನನ್ನ ಕೆಲಸವೇ ಅಲ್ಲ, ಎಂಬಂತೆ ಬೇಜವಾಬ್ದಾರಿಯಿಂದ ವರ್ತಿಸಿದ್ದರು. ಇದರಿಂದ ಬೇಸತ್ತು ಕಾಳಜಿ ತಂಡವು ಉಪ ನಿರ್ದೇಶಕರ ಗಮನಕ್ಕೆ ತಂದರು. ಆದರೆ ಉಪ…
ತಿಪಟೂರು: ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಸೇಷನ್ ಮತ್ತು ಸಮಾನ ಮನಸ್ಕ ಪ್ರವಾಸಿ ವಾಹನ ಸಂಘಟನೆಗಳ ವತಿಯಿಂದ, ಪ್ರವಾಸಿ ವಾಹನಗಳಿಗೆ ಅವೈಜ್ಞಾನಿಕ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಆದೇಶದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಡಾ. ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಸಹ ಕಾರ್ಯದರ್ಶಿ ಯೋಗೇಶ್, ಕೇಂದ್ರ ಸಾರಿಗೆ ಇಲಾಖೆಯ ಆದೇಶದಂತೆ, ರಾಜ್ಯ ಸಾರಿಗೆ ಇಲಾಖೆಯು ನೀಡಿರುವ ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿ.ಪಿ.ಆರ್.ಎಸ್ ಎಂಬ ಅವೈಜ್ಞಾನಿಕವಾದ ಸಾಧನವನ್ನು ಅಳವಡಿಸಲು ನೀಡಿರುವ ಆದೇಶ ತುಂಬಾ ತ್ರಾಸದಾಯಕವಾಗಿದ್ದು, ರಾಜ್ಯದ ಎಲ್ಲಾ ವಾಣಿಜ್ಯ ವಾಹನಗಳು,ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕ– ಮಾಲೀಕರುಗಳಿಗೆ ಇದರಿಂದ ತುಂಬಾ ತೊಂದರೆಯಾಗಲಿದ್ದು, ಬಾರಿ ಸಂಕಷ್ಟದಿಂದ ಜೀವನ ನಡೆಸುತ್ತಿದ್ದೇವೆ. ಈ ಆದೇಶದಿಂದ ಮತ್ತಷ್ಟು ನಾವುಗಳು ಬೀದಿಗೆ ಬರಲಿದ್ದೇವೆ ಎಂದು ತಿಳಿಸಿದರು. ರಾಜ್ಯ ಜಂಟಿ ಕಾರ್ಯದರ್ಶಿ ಮಹಮ್ಮದ್ ಹುಸೇನ್ ಮಾತನಾಡಿ, ದುಬಾರಿ ತೆರಿಗೆ, ಸ್ಪೀಡ್ ಗವರ್ನರ್ ಬಾಡಿಗೆ…
ಬೀದರ್ ಜಿಲ್ಲೆಯಲ್ಲಿ ಸಚಿವ ಈಶ್ವರ ಖಂಡ್ರೆ ಮಳೆ ಹಾನಿ ವೀಕ್ಷಿಸಿದದರು. ಕಳೆದ ವಾರ ಬೀದರ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಬೀದರ ಜಿಲ್ಲೆಯಲ್ಲಿ ಸಾಕಷ್ಟು ಮನೆಗಳು ಹಾಗೂ ಬೆಳೆ ಹಾನಿಯಾಗಿದ್ದು, ಈ ಹಿನ್ನೆಲೆ ಗ್ರಾಮಗಳಿಗೆ ಅವರು ಭೇಟಿ ನೀಡಿದರು. ಬೀದರ್ ದಕ್ಷಿಣ ಕ್ಷೇತ್ರದ ಖಾಶೆಂಪುರ್, ಕಾಡವಾದ, ಚಟ್ನಳ್ಳಿ ಗ್ರಾಮಗಳಿಗೆ ಜಿಲ್ಲೆಯ ಉನ್ನತ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ, ಮನೆಯ ಗೋಡೆಗಳು ಹಾಗೂ ಮೇಲ್ಛಾವಣಿಗಳು ಕುಸಿದು ಬಿದ್ದಿರುವ ಬಗ್ಗೆ ಪರಿಶೀಲನೆ ನಡೆಸಿದರು. ಭಾಗಶಃ ಕುಸಿದಿರುವ ಮನೆಗೆ ತುರ್ತು 6,500 ರೂ. ನೀಡುವಂತೆ ಆದೇಶ ನೀಡಿದ ಅವರು, 50 ಸಾವಿರ ಪರಿಹಾರ ನೀಡುವಂತೆ ಸೂಚನೆ ನೀಡಿದರಲ್ಲದೇ, ಪೂರ್ತಿ ಮನೆ ಬಿದ್ದಿರುವ ಸಂತ್ರಸ್ಥರಿಗೆ (NDRF-SDRF) ಅಡಿ 1 ಲಕ್ಷ 20 ಸಾವಿರ ಹಾಗೂ ಸರ್ಕಾರದ ವತಿಯಿಂದ ಒಂದು ಮನೆ ಕೊಡುವ ಭರವಸೆಯನ್ನು ಸಚಿವ ಈಶ್ವರ ಖಂಡ್ರೆ ನೀಡಿದರು. ಮಳೆ ಅವಾಂತರದಿಂದ ಜಿಲ್ಲೆಯ ಜನರಿಗೆ ಸಂಕಷ್ಟ ಆಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು…
ಹೊಸ ಸಿನಿಮಾಗಳನ್ನು ಕೆಲವೇ ದಿನಗಳಲ್ಲಿ ವೆಬ್ ಸೈಟ್ ಗೆ ಅಪ್ ಲೋಡ್ ಮಾಡಿ ಚಿತ್ರ ನಿರ್ಮಾಪಕರಿಗೆ ನಷ್ಟ ಉಂಟು ಮಾಡುತ್ತಿದ್ದ ತಮಿಳ್ ರಾಕರ್ಸ್ ವೆಬ್ ಸೈಟ್ ಅಡ್ಮಿನ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸ್ಟೀಫನ್ ರಾಜ್ ಬಂಧಿತ ಆರೋಪಿಯಾಗಿದ್ದಾನೆ. ಈತ ಕೇರಳದ ತಿರುವನಂತಪುರಂನಲ್ಲಿರುವ ಏರಿಯಾಸ್ ಥಿಯೇಟರ್ ನಲ್ಲಿ ನಟ ಧನುಷ್ ಅಭಿನಯದ ರಾಯನ್ ಚಿತ್ರದ ರೆಕಾರ್ಡಿಂಗ್ ಮಾಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಸ್ಟೀಫನ್ ಒಂದು ವರ್ಷಗಳಿಂದಲೂ ಹೊಸ ಸಿನಿಮಾ ರಿಲೀಸ್ ಆಗುತ್ತಿದ್ದಂತೆಯೇ ಮೊದಲಿಗೆ ಬರುತ್ತಿದ್ದನಂತೆ. ಸೀಟಿನಲ್ಲಿ ಚಿಕ್ಕ ಕ್ಯಾಮೆರಾ ಅಳವಡಿಸಿ ಹೊಸ ಚಿತ್ರಗಳ ವಿಡಿಯೋ ತೆಗೆಯುತ್ತಿದ್ದ ಎಂದು ಪೊಲೀಸರ ವಿಚಾರಣೆ ವೇಳೆ ಹೇಳಿದ್ದಾನೆ. ಒಂದು ಚಿತ್ರವನ್ನು ಈತ ವೆಬ್ ಸೈಟ್ ಗೆ ಅಪ್ ಲೋಡ್ ಮಾಡಿದ್ರೆ 5 ಸಾವಿರ ರೂಪಾಯಿ ಕಮಿಷನ್ ಸಿಗುತ್ತಿತ್ತು ಎಂದು ಆತ ತಿಳಿಸಿರುವುದಾಗಿ ತಿಳಿದು ಬಂದಿದೆ. ತಮಿಳ್ ರಾಕರ್ಸ್ ಅಂದ್ರೆ ಪೈರಸಿ ಮಾಡೋದ್ರಲ್ಲಿ ಪಂಟರ್ ಅಂತಲೇ ಕರೆಯಲ್ಪಡುತ್ತಾರೆ. ಈಗಾಗಲೇ ಇವರ ವಿರುದ್ಧ ಹಲವಾರು ಬಾರಿ…
ಬೆಂಗಳೂರು: ರಾಜ್ಯಾದ್ಯಂತ ನಿರಂತರ ಗಾಳಿ ಮಳೆ, ಗುಡ್ಡ ಕುಸಿತ ಹಾಗೂ ಉಕ್ಕಿ ಹರಿಯುತ್ತಿರುವ ನದಿಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಇದರಿಂದಾಗಿ ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಕಷ್ಟು ಹಾನಿಯಾಗಿವೆ. ಈ ಸಂಬಂಧ ಬೆಳೆ ಹಾನಿ ಅಧ್ಯಯನಕ್ಕೆ ಬಿಜೆಪಿ ನಾಯಕರು ಮುಂದಾಗಿದ್ದಾರೆ. 6 ತಂಡಗಳಾಗಿ ರಾಜ್ಯದಲ್ಲಿ ಬಿಜೆಪಿ ನಾಯಕರ ತಂಡ ಬೆಳೆ ಹಾನಿ ಪರಿಶೀಲನೆ ನಡೆಸಲಿದೆ. ಬಿಜೆಪಿ ನಾಯಕರ ತಂಡ ರಾಜ್ಯಾದ್ಯಂತ ಸಂಚರಿಸಿ ಬೆಳೆ ಹಾನಿ ಬಗ್ಗೆ ಮಾಹಿತಿ ಕಲೆ ಹಾಕಲಿದೆ. ವಿಪಕ್ಷ ನಾಯಕ ಆರ್.ಅಶೋಕ್, ಶಾಸಕರಾದ ಆರಗ ಜ್ಞಾನೇಂದ್ರ, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಪರಿಷತ್ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ನೇತೃತ್ವದ ತಂಡಗಳು ರಾಜ್ಯಾದ್ಯಂತ ಸಂಚರಿಸಲಿವೆ. ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ತಂಡ ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದ ತಂಡ ಪ್ರವಾಸ ಕೈಗೊಳ್ಳಲಿದೆ. ಮಾಜಿ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿದರು. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಚಿವರಾದ ಎನ್. ಚಲುವರಾಯಸ್ವಾಮಿ, ಡಾ. ಹೆಚ್.ಸಿ. ಮಹದೇವಪ್ಪ, ಎನ್., ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮೂಡುಬಿದಿರೆ: ಗ್ಯಾಸ್ ಗೀಸರ್ ಬಳಸುವ ಮುನ್ನ ಸಾರ್ವಜನಿಕರು ಎಚ್ಚರವಾಗಿರಬೇಕು. ಯಾಕಂದ್ರೆ ಸ್ವಲ್ಪ ಯಾಮಾರಿದ್ರೂ ದೊಡ್ಡ ಅವಘಡವೇ ಸಂಭವಿಸಬಹುದು. ಇಂತಹದ್ದೊಂದು ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಡೆದಿದೆ. ಇಲ್ಲಿನ ಕೋಟೆಬಾಗಿಲಿನ ಫ್ಯ್ಲಾಟ್ ನಲ್ಲಿ ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕ ಗ್ಯಾಸ್ ಗೀಸರ್ ನ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ವರದಿಗಳಿಂದ ತಿಳಿದು ಬಂದಿದೆ. ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದು, ಸಾಕಷ್ಟು ಹೊತ್ತಾದ್ರೂ ಮರಳಿ ಬಂದಿರಲಿಲ್ಲ. ಬಾತ್ ರೂಮ್ ಬಾಗಿಲು ಬಡಿದು ಕರೆದರೂ ಯಾವುದೇ ಪ್ರತಿಕ್ರಿಯೆ ಬಾರದೇ ಹೋದಾಗ ಬಾತ್ ರೂಮ್ ಬಾಗಿಲು ಮುರಿದು ನೋಡಿದಾಗಿ ಘಟನೆ ಬೆಳಕಿಗೆ ಬಂದಿದೆ. ಮೃತ ಶಾರಿಕ್ ದ್ವಿತೀಯ ಪಿಯು ಮುಗಿಸಿ ಪ್ರಥಮ ವರ್ಷದ ಪದವಿಗೆ ಪ್ರವೇಶಾತಿ ಪಡೆದಿದ್ದರು ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಮೈಸೂರು: ಮುಡಾ ವಿಚಾರದಲ್ಲಿ ನನಗೆ ಬೇಜಾರಿಲ್ಲ, ಯಾಕೆಂದರೆ ನಾನು ತಪ್ಪು ಮಾಡಿಲ್ಲ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ಸಾಕಷ್ಟು ಹಗರಣ ಮಾಡಿದ್ದಾರೆ. ಬಿಜೆಪಿಯವರು ಒಂದೇ ಒಂದು ತನಿಖೆಯನ್ನು ನ್ಯಾಯಾಂಗಕ್ಕೆ ಕೊಟ್ಟಿಲ್ಲ ಎಂದಿರುವ ಅವರು, 40 ವರ್ಷದ ರಾಜಕಾರಣದಲ್ಲಿ ನಾನು ಯಾವುದೇ ಹಗರಣ ಮಾಡಿಲ್ಲ. ನನ್ನ ಹೆಸರಿಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ ಎಂದರು. ಮೂಡಾ ಪ್ರಕರಣದಲ್ಲಿ ನಿವೇಶನಗಳನ್ನು ಸಿಎಂ ಹಿಂದಿರುಗಿಸಿ ತನಿಖೆಗೆ ಅವಕಾಶ ಕೊಡಬೇಕೆಂದು ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮೂಡಾ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ. ಈ ಬಗ್ಗೆ ನ್ಯಾಯಾಂಗ ಆಯೋಗ ರಚನೆಯಾಗಿದೆ. ಬಿಜೆಪಿ ಯಾವುದೇ ನ್ಯಾಯಾಂಗ ತನಿಖೆ ರಚಿಸಿತ್ತೆ ಎಂದು ಪ್ರಶ್ನಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್…
ತುಮಕೂರು: ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆದರೂ ಫಲಕಾರಿಯಾಗದೆ ಮೃತಪಟ್ಟ ಶಾಲಾ ಬಾಲಕಿಯ ಅಂಗಾಂಗವನ್ನು ಪೋಷಕರು ದಾನ ಮಾಡಿರುವ ಮಾನವೀಯ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಮಗಳ ಸಾವಿನ ನೋವಿನಲ್ಲೂ ಸಾರ್ಥಕತೆ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ನಗರದ ಶ್ರೀ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದ ಚಂದನ, ಜು.23ರಂದು ಶಾಲೆ ಮುಗಿಸಿ ವಾಪಸ್ ಮನೆಗೆ ಬರುವಾಗ ಅಪಘಾತ ಸಂಭವಿಸಿತ್ತು. ಲಾರಿ ಡಿಕ್ಕಿ ಹೊಡೆದ ನಂತರ ಚಂದನ ತೆಲೆಗೆ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿತ್ತು. ಅಪಘಾತದ ಬಳಿಕ ಹಾಸನ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದಳು. ನಂತರ ಚಂದನಳ ಅಂಗಾಂಗ ದಾನ ಮಾಡಲು ಒಪ್ಪಿದ ಪೋಷಕರ ನಿರ್ಧಾರಕ್ಕೆ ಆಸ್ಪತ್ರೆ ಸಿಬ್ಬಂದಿ ಗೌರವ ಸಲ್ಲಿಸಿದರು. ಚಂದನಳ ಅಂಗಾಂಗಗಳನ್ನು ಮೈಸೂರು ಹಾಗೂ ಬೆಂಗಳೂರಿನ 6 ಮಕ್ಕಳಿಗೆ ಜೋಡಣೆ ಮಾಡಲಾಗಿದ್ದು, 6 ಜೀವಗಳಿಗೆ ಚಂದನ ಬೆಳಕಾಗಿದ್ದಾಳೆ. ಇಂದು ಸಂಜೆ ಚಂದನಳ ಅಂತ್ಯಸಂಸ್ಕಾರ ನೆರವೇರಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಬೀದರ್: ಹೃದಯಾಘಾತದಿಂದ ನಿಧನರಾದ ವೀರ ಯೋಧ ಅನಿಲ್ ಕುಮಾರ್ ಅವರ ಅಂತಿಮ ದರ್ಶನವನ್ನು ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪಡೆದರು. ಸಿಕ್ಕಿಂ ಹಿಮಪಾತದಲ್ಲಿ ಕರ್ತವ್ಯದಲ್ಲಿರುವಾಗ ಹೃದಯಾಘಾತದಿಂದ ನಿಧನರಾಗಿರುವ ಬೀದರ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ವೀರ ಯೋಧ ಅನಿಲ್ ಕುಮಾರ್ ನವಾಡೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ವೀರ ಯೋಧ ಅನಿಲ್ ಕುಮಾರ್ ಅವರ ಕುಟುಂಬ ಸದಸ್ಯರಿಗೆ ಧೈರ್ಯವನ್ನು ತುಂಬಿ ಸಾಂತ್ವನ ಹೇಳಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA