Subscribe to Updates
Get the latest creative news from FooBar about art, design and business.
- ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
- ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
- ಗಡಿ ಚೆಕ್ ಪೋಸ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
- ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
- ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
- ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
- ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ: ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
- ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ: ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
Author: admin
ಹೆಚ್ಚಿನ ಮಾಂಸಾಹಾರಿಗಳು ಮೀನು ಸೇವಿಸಲು ಬಯಸುತ್ತಾರೆ ಕೂಡ ಅಂದ ಹಾಗೇ ಮೀನು ಸೇವಿಸುವುದರಿಂದ ದೇಹಕ್ಕೆ ಅನೇಕ ಪ್ರಯೋಜನಗಳಿವೆ.ಮೀನು ತಿನ್ನುವುದು ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ ಎಂದು ಎಲ್ಲರಿಗೂ ತಿಳಿದಿದೆ, ಆದರೆ ಮೀನಿನ ತಲೆ ನಿಮ್ಮ ದೇಹವು ಎಷ್ಟು ಪ್ರಯೋಜನ ಪಡೆಯುತ್ತದೆ ಎಂದು ಹೆಚ್ಚಿನ ಜನರಿಗೆ ತಿಳಿದಿಲ್ಲ. ಮೀನಿನ ತಲೆಯನ್ನು ಮಕ್ಕಳು ಮತ್ತು ವೃದ್ಧರು ತಿನ್ನಬೇಕು. ಅಂದ ಹಾಗೇ ಮೀನಿನ ತಲೆಯಲ್ಲಿ ವಿಟಮಿನ್ ಎ ಸಮೃದ್ಧವಾಗಿರುವುದರಿಂದ, ಇದು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ, ಮೀನಿನ ತಲೆಯನ್ನು ಸೇವಿಸುವುದರಿಂದ ಕಣ್ಣುಗಳಿಗೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಸಹ ತೆಗೆದುಹಾಕುತ್ತದೆ. ಆದ್ದರಿಂದ, ಮೀನಿನ ತಲೆಯನ್ನು ವಾರಕ್ಕೊಮ್ಮೆ ಸೇವಿಸಬೇಕು ಎನ್ನಲಾಗಿದೆ. ಮೀನಿನ ತಲೆಯನ್ನು ತಿನ್ನುವುದರಿಂದ ದೇಹಕ್ಕೆ ಮತ್ತು ನಿಮ್ಮ ಮೆದುಳಿಗೆ ಅನೇಕ ಪ್ರಯೋಜನಗಳಿವೆ. ನೀವು ಆಗಾಗ್ಗೆ ಮರೆಗುಳಿತನವನ್ನು ಹೊಂದಿದ್ದರೆ, ನೀವು ಮೀನಿನ ತಲೆಯನ್ನು ತಿನ್ನಬೇಕು ಏಕೆಂದರೆ ಮೀನಿನ ತಲೆಯಲ್ಲಿ ಒಮೆಗಾ 3 ಸಮೃದ್ಧವಾಗಿದೆ. ಇದು ನಿಮ್ಮ ಮನಸ್ಸನ್ನು ತೀಕ್ಷ್ಣಗೊಳಿಸುತ್ತದೆ ಮತ್ತು ಏನನ್ನಾದರೂ ನೆನಪಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಕಿಡ್ನಿ ಕಲ್ಲುಗಳ ಸಮಸ್ಯೆಯನ್ನು…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತನ್ನ ವ್ಯಾಪ್ತಿಯಲ್ಲಿರುವ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ ಹಾಗೂ ಕಾಫಿ ಬಾರ್‌ಗಳಿಗೆ ಹೊಸ ನಿಯಮಗಳನ್ನ ಜಾರಿಗೊಳಿಸಿದೆ. ಬಿಬಿಎಂಪಿ ಹೊಸ ನಿಯಮ ಏನು? * 30 ಕೊಠಡಿಗಳಿಗಿಂತ ಮೇಲ್ಪಟ್ಟ ಹೋಟೆಲ್, ಬಾರ್ & ರೆಸ್ಟೋರೆಂಟ್, ಪಬ್ ಇದ್ರೆ 30 ಕುರ್ಚಿ ಇರುವ ಧೂಮಪಾನ ಪ್ರದೇಶ ನಿಗದಿ ಮಾಡಬೇಕು * ಧೂಮಪಾನ ವಲಯ ನಿರ್ಮಾಣ ಮಾಡಿ ಪೋಟೋ ಸಮೇತ ಸ್ಮೋಕಿಂಗ್ ಝೂನ್ ಗೆ ಪರವಾನಗಿಗೆ ಅರ್ಜಿ ಹಾಕಬೇಕು. * ಅಧಿಕಾರಿಗಳು ಸ್ಥಳಕ್ಕೆ ಭೇಟಿ ನಿಯಮಾನುಸಾರ ಸ್ಮೋಕಿಂಗ್ ಝೂನ್ ಇದೆಯೇ ಅಂತ ರಿಪೋರ್ಟ್ ಕೊಟ್ಟರೆ, ಆಮೇಲೆ ಎನ್‌ಒಸಿ ವಿತರಣೆಗೆ ಸೂಚನೆ ನೀಡಲಾಗುತ್ತದೆ. * ಸ್ಮೋಕಿಂಗ್ ಏರಿಯಾ ಕೊಠಡಿಗೆ ಎಂಟ್ರಿ ಆದಾಗ ಸ್ವಯಂಚಾಲಿತವಾಗಿ ಬಾಗಿಲು ಬಂದ್ ಆಗುವ ರೀತಿಯಲ್ಲಿ ಇರಬೇಕು * ಸ್ಮೋಕಿಂಗ್ ಏರಿಯಾ ಅಂತ ನಾಮಫಲಕ ದೊಡ್ಡದಾಗಿ ಇರಬೇಕು. 60–30ರ ನಿಯಮದಲ್ಲಿ ಅಕ್ಷರಗಳು ಇರಬೇಕು * ಸ್ಮೋಕಿಂಗ್ ಝೂನ್ ಗಳಲ್ಲಿ ಏರ್ ಫ್ಲೋ ಸಿಸ್ಟಂ ಇರಬೇಕು. ಪಕ್ಕದ ಮನೆ ಅಥವಾ…
ಬಿಜೆಪಿ ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲೆ ಕೇಂದ್ರ ಸಚಿವರಾದಂತಹ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮೂಗಿನಿಂದ ರಕ್ತಸ್ರಾವ ಆಯಿತು. ತಕ್ಷಣ ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ ವಿಚಾರವಾಗಿ ಮಗ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. ಕೆಲಸದ ಒತ್ತಡದಲ್ಲಿ ವಿಶ್ರಾಂತಿ ಪಡೆದುಕೊಳ್ಳಲು ಆಗಿಲ್ಲ. ಆತಂಕಪಡುವ ವಾತಾವರಣ ಇಲ್ಲ. ಕುಮಾರಣ್ಣ ಅವರು ಆರೋಗ್ಯವಾಗಿದ್ದಾರೆ.ತಂದೆ–ತಾಯಿ ಆಶೀರ್ವಾದ ಕುಮಾರಣ್ಣ ಮೇಲೆ ಇದೆ. ಅವರಿಗೆ ಏನೂ ಆಗಿಲ್ಲ, ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ. ಡಾಕ್ಟರ್ ಕೂಡ ಹೇಳಿದ್ದಾರೆ ಆತಂಕ ಬೇಡ ಅಂತ. ಯಾವ ರೀತಿ ಚಿಕಿತ್ಸೆ ಕೊಡಬೇಕು ಅಂತ ಪರೀಕ್ಷೆ ಮಾಡುತ್ತಿದ್ದಾರೆ. ಸಣ್ಣ ಪುಟ್ಟ ಏರುಪೇರು ಸಾಮಾನ್ಯ. ಆರೋಗ್ಯ ಲೆಕ್ಕಿಸದೆ ಸಂಸತ್ನಲ್ಲಿ ಮಾತಾಡಿದ್ದಾರೆ. ರಾತ್ರಿ ಪುಸ್ತಕಗಳನ್ನ ಓದುತ್ತಾರೆ. ರಾಜ್ಯದ ಜನರಿಗೆ ಏನಾದರೂ ಕೊಡಬೇಕು ಅಂತ ಕೆಲಸ ಮಾಡುತ್ತಿದ್ದಾರೆ. ಈಶ್ವರನ ನಂಬಿಕೊಂಡಿದ್ದೇವೆ, ಜನ, ರೈತರ ಆಶೀರ್ವಾದ ಇದೆ. ಇಂದು ರಾತ್ರಿಯೇ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದಿದ್ದಾರೆ. ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು,…
ಎಚ್.ಡಿ.ಕೋಟೆ: ರಾಜ್ಯದಲ್ಲಿಯೇ ಬಹುಬೇಗ ಭರ್ತಿಯಾಗುವ ಜಲಾಶಯ ಎಂಬ ಖ್ಯಾತಿ ಪಡೆದಿರುವ ಕಬಿನಿ ಜಲಾಶಯಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸಹದ್ಯೋಗಿಗಳು ನಾಳೆ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುವ ಹಿನ್ನೆಲೆಯಲ್ಲಿ ಜಲಾಶಯದ ಸುತ್ತಮುತ್ತ ಸ್ವಚ್ಛತಾ ಕಾರ್ಯ ಸೇರಿದಂತೆ ಸ್ವಾಗತ ಕಮಾನು ಗೇಟುಗಳು ಸೇರಿದಂತೆ ಕಟ್ಟಡಗಳಿಗೆ ಸುಣ್ಣಬಳಿಯುವ ಕಾರ್ಯ ಭರದಿಂದ ಸಾಗಿದೆ. 84 ಅಡಿ ಸಾಮರ್ಥ್ಯದ ಕಬಿನಿ ಜಲಾಶಯದ ಉಗಮ ಸ್ಥಾನ ಹಾಗೂ ಕೇರಳದ ವಯನಾಡು ಹಾಗೂ ಜಲಾನಯನ ಪ್ರದೇಶದಲ್ಲಿ ಈ ವರ್ಷ ಅಬ್ಬರದ ಮಳೆಯಾಗಿ ಜಲಾಶಯ ಬಹುಬೇಗ ಭರ್ತಿಯಾಗಿ ಪ್ರವಾಹದ ಭೀತಿ ಎದುರಾಗಿತ್ತು. ಈ ಹಿಂದೆ 2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದ ಸಿದ್ದರಾಮಯ್ಯ ಜಲಾಶಯದ ಅಭಿವೃದ್ಧಿಗೆ ಅನೇಕ ಭರವಸೆಗಳನ್ನು ನೀಡಿದ್ದರು. ಎರಡನೇ ಬಾರಿ ಸಿಎಂ ಆದ ನಂತರ ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ ಕ್ಷೇತ್ರದ ಜನತೆಯಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಜಲಾಶಯದ ಮುಂಭಾಗ ಕೆಆರ್ ಎಸ್ ಮಾದರಿಯಲ್ಲಿ ಬೃಂದಾವನ ನಿರ್ಮಾಣ ಮಾಡುವುದು, ಈ ಭಾಗದ…
ಆಲ್ಕೋಹಾಲ್ ಪ್ರಿಯರೇ, ನೀವು ಕುಡಿಯುವ ಮದ್ಯ ಸಸ್ಯಾಹಾರಿಯೇ? ಅಥ್ವಾ ಇದು ಮಾಂಸಾಹಾರಿಯೇ? ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಮದ್ಯ ಸೇವಿಸುವ ಮೊದಲು, ಅದು ಯಾವುದರಿಂದ ಮಾಡಲ್ಪಟ್ಟಿದೆ ಎಂಬುದನ್ನ ಮೊದಲು ಗಮನಿಸಬೇಕು. ವಾಸ್ತವವಾಗಿ, ಆಲ್ಕೋಹಾಲ್’ನ್ನ ಸಾಮಾನ್ಯವಾಗಿ ಸಂಪೂರ್ಣ ಸಸ್ಯಾಹಾರಿ ಆಹಾರವೆಂದು ಪರಿಗಣಿಸಲಾಗುತ್ತದೆ. ಆದಾಗ್ಯೂ, ವೈನ್ ಮತ್ತು ಬಿಯರ್’ನಂತಹ ಆಲ್ಕೋಹಾಲ್ ಮಾಂಸಾಹಾರಿ ಎಂದು ಕೆಲವು ವರದಿಗಳು ಹೇಳುತ್ತವೆ. ಮದ್ಯವನ್ನು ಸಾಮಾನ್ಯವಾಗಿ ಸಂಪೂರ್ಣ ಸಸ್ಯಾಹಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ ವೈನ್ ಮತ್ತು ಬಿಯರ್ ಅನ್ನು ಮಾಂಸಾಹಾರಿ ಎಂದು ಪರಿಗಣಿಸಲಾಗುತ್ತದೆ. ವೋಡ್ಕಾ, ಜಿನ್, ರಮ್, ಟಕಿಲಾ ಸಂಪೂರ್ಣ ಸಸ್ಯಾಹಾರಿ. ಯಾಕಂದ್ರೆ, ಅವುಗಳನ್ನು ಹಣ್ಣುಗಳು ಅಥವಾ ಧಾನ್ಯಗಳಿಂದ ತಯಾರಿಸಲಾಗುತ್ತದೆ. ಆದ್ರೆ, ವೈನ್ ಮತ್ತು ಬಿಯರ್ ಆಗಲ್ಲ. ವಾಸ್ತವವಾಗಿ, ಜೆಲ್ಟಿನ್, ಗಾಜು ಮತ್ತು ಮೊಟ್ಟೆಗಳನ್ನ ವೈನ್ ಮತ್ತು ಬಿಯರ್ ತಯಾರಿಕೆಯಲ್ಲಿ ಬಳಸಲಾಗುತ್ತದೆ, ಇದು ಮಾಂಸಾಹಾರಿ ವರ್ಗಕ್ಕೆ ಸೇರುತ್ತದೆ. ಆದಾಗ್ಯೂ, ಅವುಗಳನ್ನ ಎಲ್ಲಾ ರೀತಿಯ ಬಿಯರ್ ಮತ್ತು ವೈನ್’ನಲ್ಲಿ ಬಳಸಲಾಗುವುದಿಲ್ಲ. ಕೆಲವು ವೆಜ್ ಬಿಯರ್’ಗಳೂ ಇವೆ. ಜೆಲಾಟಿನ್, ಗಾಜು ಮತ್ತು ಮೊಟ್ಟೆಗಳನ್ನು…
ಪ್ರಮುಖ ಟೆಲಿಕಾಂ ಆಪರೇಟರ್‌ಗಳಾದ Jio, Airtel ಮತ್ತು Vi ತಮ್ಮ ರೀಚಾರ್ಜ್ ಯೋಜನೆಗಳ ಬೆಲೆಗಳನ್ನು ಸರಾಸರಿ 15 ಪ್ರತಿಶತದಷ್ಟು ಹೆಚ್ಚಿಸಿವೆ. ಹೊಸ ದರಗಳು ಜಾರಿಗೆ ಬಂದಿರುವುದಕ್ಕೆ ದೇಶದಲ್ಲಿ ಸರ್ಕಾರಿ ಸ್ವಾಮ್ಯದ BSNL (ಭಾರತ್ ಸಂಚಾರ್ ನಿಗಮ್ ಲಿಮಿಟೆಡ್) ಗೆ ಹಿಂತಿರುಗಲು ಅಭಿಯಾನ ಆರಂಭವಾಗಿದೆ. ಅಭಿಯಾನದ ಭಾಗವಾಗಿ ಒಂದೇ ದಿನಕ್ಕೆ ಲಕ್ಷಕ್ಕೂ ಹೆಚ್ಚು ಮಂದಿ ಬಿಎಸ್‌ಎನ್‌ಎಲ್‌ಗೆ ತಮ್ಮ ಸಿಮ್ ಅನ್ನು ಪೋರ್ಟ್ ಮಾಡಿಕೊಂಡಿದ್ದಾರೆ. ಕಡಿಮೆ ಬೆಲೆಗೆ BSNL ಸಂಸ್ಥೆ ತನ್ನ ಗ್ರಾಹಕರಿಗೆ ರೀಚಾರ್ಜ್ ಪ್ಲಾನ್ ಗಳನ್ನು ಕೂಡ ಪರಿಶೀಸುವಂತಹ ಕೆಲಸವನ್ನು ಮಾಡುತ್ತಿರುವುದರಿಂದಾಗಿ ಗ್ರಾಹಕರು ಈ ವಿಚಾರದಿಂದಲೂ ಕೂಡ ಇಂಪ್ರೆಸ್ ಆಗಿದ್ದು, ಅಂಥವರಿಗೆ ಮನೆಯಲ್ಲಿ ಕುಳಿತುಕೊಂಡು ಯಾವ ರೀತಿಯಲ್ಲಿ BSNL SIM ಗೆ ಪೋರ್ಟ್ ಆಗಬಹುದು ಎನ್ನುವುದನ್ನು ಇಲ್ಲಿದೆ ನೋಡಿ. ಮೊದಲಿಗೆ 1900 ನಂಬರ್ಗೆ ನೀವು ಪೋರ್ಟ್ ರಿಕ್ವೆಸ್ಟ್ ಮೆಸೇಜ್ ಅನ್ನು ಮೊದಲಿಗೆ ಕಳುಹಿಸಬೇಕಾಗುತ್ತದೆ. ಇದಕ್ಕಾಗಿ ನೀವು ಆ ನಂಬರ್ಗೆ PORT ಎಂಬುದಾಗಿ ಮೆಸೇಜ್ ಮಾಡಬೇಕಾಗಿರುತ್ತದೆ. ಎಲ್ಲಿ ನಿಮಗೆ ಯೂನಿಕ್ ಪೊರ್ಟಿಂಗ್ ಕೋಡ್ ಸಿಗುತ್ತದೆ. ಇದು…
ಬಿಜೆಪಿ ಜಿಪಂ ಸದಸ್ಯ ಯೋಗೇಶ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರೋ ವಿನಯ್ ಕುಲಕರ್ಣಿಗೆ ಸಿಬಿಐ ನ್ಯಾಯಾಲಯ ಧಾರವಾಡ ಕ್ಷೇತ್ರ ಪ್ರವೇಶಿಸದಂತೆ ನಿರ್ಬಂಧ ಹೇರಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕ್ಷೇತ್ರಕ್ಕೆ ಭೇಟಿ ನೀಡದೆಯೇ ಬಿಜೆಪಿ ಅಭ್ಯರ್ಥಿ ವಿರುದ್ಧ ಗೆದ್ದಿದ್ದರು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಕ್ಷೇತ್ರ ಪ್ರವೇಶಕ್ಕೆ ನಿರ್ಬಂಧ ಮುಂದುವರಿದಿದೆ. ಮುಂದಿನ ತಿಂಗಳು ಇದೇ ವಿಚಾರದಲ್ಲಿ ಕೋರ್ಟ್ ವಿಚಾರಣೆ ಇದ್ದು, ಈ ಎಲ್ಲಾ ಬೆಳವಣಿಗೆಗಳ ನಡುವೆ ಕೋಲ ಸೇವೆ ಕೊಟ್ಟಿದ್ದಾರೆ. ಕೋಲಸೇವೆ ಬಗ್ಗೆ ಶಾಸಕ ವಿನಯ್ ಕುಲಕರ್ಣಿ ಹೇಳಿಕೆ ನೀಡಿದ್ದು, ಚುನಾವಣಾ ಪೂರ್ವದಲ್ಲಿಯೇ ಕೋಲ ಸೇವೆಯ ಬಗ್ಗೆ ಕಾಂಗ್ರೆಸ್ ನಾಯಕರು ಹೇಳಿದ್ದರು. ಮಂಗಳೂರಿನ ನನ್ನ ಸ್ನೇಹಿತರು ಕೋಲ ಸೇವೆ ಕೊಡೋ ಬಗ್ಗೆ ಹೇಳಿದ್ದರು. ಈಗ ಘಳಿಗೆ ಕೂಡಿ ಬಂದ ಹಿನ್ನೆಲೆ ಕೋಲ ಸೇವೆ ಕೊಟ್ಟಿದ್ದೇನೆ. ಕುಟುಂಬ ಸಮೇತರಾಗಿ ಬಂದು ಕೋಲ ಸೇವೆಯಲ್ಲಿ ಭಾಗಿಯಾಗಿದ್ದೇನೆ ಎಂದಿದ್ದಾರೆ. ವಿಧಾನಸಭಾ ಚುನಾವಣೆಯ ಗೆಲುವಿನ ಹಿನ್ನೆಲೆಯಲ್ಲಿ ತುಳುನಾಡಿನ ಆರಾಧ್ಯದೈವ ಕೊರಗಜ್ಜನಿಗೆ ಹರಕೆಯ ಕೋಲ ಸೇವೆ ಸಲ್ಲಿಸಲು ಆಗಮಿಸಿದ್ದ…
ಮನೆ ಹಿತ್ತಲಿನಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ 13 ಅಡಿ ಉದ್ದದ ಹೆಬ್ಬಾವನ್ನು ಉರಗ ತಜ್ಞ ದಿಲೀಪ್ ಸೆರೆಹಿಡಿದು ದೇವರಾಯನದುರ್ಗ ಅರಣ್ಯಕ್ಕೆ ಬಿಟ್ಟಿದ್ದಾರೆ. ತುಮಕೂರು ತಾಲೂಕು ಅಯ್ಯನಪಾಳ್ಯ ಗ್ರಾಮದ ಪುಟ್ಟಯ್ಯ ಎಂಬುವರ ಮನೆ ಹಿತ್ತಲಿನಲ್ಲಿ ಹೆಬ್ಬಾವು ಪ್ರತ್ಯಕ್ಷವಾಗಿತ್ತು. ಹುಲ್ಲನ್ನು ಕುಯ್ಯಲು ಹೋದ ಪುಟ್ಟಯ್ಯ ಬೃಹತ್ ಗಾತ್ರದ ಹೆಬ್ಬಾವನ್ನು ಕಂಡು ಭಯಬೀತರಾಗಿದ್ದಾರೆ. ತಕ್ಷಣ ತುಮಕೂರಿನ ವಾರಂಗಲ್ ವಾನ್ಯಜೀವಿ ಜಾಗೃತ ಹಾಗೂ ಉರಗ ರಕ್ಷಣಾ ಸಂಸ್ಥೆಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಉರಗ ತಜ್ಞ ದಿಲೀಪ್ ಮತ್ತು ಹನುಮಯ್ಯ ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ 13 ಅಡಿ ಉದ್ದದ ಹೆಬ್ಬಾವನ್ನು ಸೆರೆಹಿಡಿದಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ವಾರಂಗಲ್ ವನ್ಯಜೀವಿ ಜಾಗೃತ ಹಾಗೂ ಉರಗ ರಕ್ಷಣಾ ಸಂಸ್ಥೆ ಯವರು ರಕ್ಷಣೆ ಮಾಡಿದ್ದ ಹೆಬ್ಬಾವ ಹಾವನ್ನು ದೇವರಾಯನದುರ್ಗ ಅರಣ್ಯಕ್ಕೆ ಬಿಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…
ಮಂಡ್ಯ: ಜಲಾಶಯಕ್ಕೆ ಒಳಹರಿವು ಏರಿಕೆ ಹಿನ್ನೆಲೆಯಲ್ಲಿ ಕೆಆರ್‍ಎಸ್ ಅಣೆಕಟ್ಟೆಯಿಂದ ಕಾವೇರಿ ನದಿಗೆ ಒಂದು ಲಕ್ಷದ ಮೂವತ್ತು ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹರಿಸುತ್ತಿದ್ದು, ನದಿಯಲ್ಲಿ ಪ್ರವಾಹ ಉಂಟಾಗಿದೆ. ಶ್ರೀರಂಗಪಟ್ಟಣದ ನದಿ ತೀರದ ದೇವಾಲಯ, ಐತಿಹಾಸಿಕ ಕಟ್ಟಡಗಳು, ರಸ್ತೆಗಳು ಜಲಾವೃತವಾಗಿವೆ. ಪಟ್ಟಣದ ಹೊರವಲಯದ ಗಂಜಾಂನಲ್ಲಿರುವ ಪ್ರಸಿದ್ಧ ನಿಮಿಷಾಂಬ ದೇವಾಲಯದ ಆವರಣ ಜಲಾವೃತವಾಗಿದೆ. ದೇವಾಲಯದ ಮೆಟ್ಟಿಲುಗಳು ಮುಳುಗಡೆಯಾಗಿವೆ. ದೇವಸ್ಥಾನದಲ್ಲಿ ತರಕಾರಿ, ಇತರೆ ಪದಾರ್ಥಗಳನ್ನು ನೆಲದ ಮೇಲೆ ಮಾರಾಟ ಮಾಡುತ್ತಿದ್ದ ವ್ಯಾಪಾರಗಾರರು ತೊಂದರೆಗೊಳಗಾಗಿದ್ದಾರೆ. 1991ರಲ್ಲೂ ದೇವಾಲಯದ ಆವರಣ ಜಲಾವೃತವಾಗಿತ್ತು. ಪ್ರಸಿದ್ಧ ರಂಗನತಿಟ್ಟು ಬಳಿ ಕಾವೇರಿ ತುಂಬಿ ಹರಿಯುತ್ತಿರುವುದರಿಂದ ಪಕ್ಷಿಧಾಮಕ್ಕೆ ನೀರು ನುಗ್ಗಿದೆ. ಮರಗಳು ಮರಳಗಳಲ್ಲಿರುವ ಪಕ್ಷಿಗಳು ತೊಂದರೆಯಲ್ಲಿವೆ. ಶ್ರೀರಂಗಪಟ್ಟಣದ ಬಳಿ ಇರುವ ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಮಟ್ಟದವರೆಗೆ ನದಿಯಲ್ಲಿ ನೀರು ಹರಿಯುತ್ತಿದ್ದು, ಮುಳುಗುವ ಹಂತ ತಲುಪಿದೆ. ಪಟ್ಟಣದಿಂದ ಪಾಲಹಳ್ಳಿ ಮಾರ್ಗವಾಗಿ ಮೈಸೂರು, ಕೆಆರ್‍ಎಸ್, ರಂಗನತಿಟ್ಟು ಪಕ್ಷಿಧಾಮಕ್ಕೆ ಸಂಪರ್ಕ ಕಲ್ಪಿಸುವ ಪಶ್ಚಿಮ ವಾಹಿನಿ ಬಳಿಯ ರೈಲ್ವೆ ಸೇತುವೆಯ ಕೆಳಗಿನ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮುಂಬೈನಲ್ಲಿ 20ರ ಹರೆಯದ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಇರಿದು ಕೊಂದು, ಆಕೆಯ ಶವವನ್ನು ರೈಲ್ವೆ ನಿಲ್ದಾಣದ ಬಳಿಯ ಪೊದೆಯಲ್ಲಿ ಎಸೆದಿರುವ ಘಟನೆ ನಡೆದಿದೆ. ಕೊಲೆಯಾದ ಯುವತಿಯನ್ನು ಯಶಶ್ರೀ ಶಿಂಧೆ ಎಂದು ಗುರುತಿಸಲಾಗಿದೆ ಅಂದಹಾಗೆ ಯಶಶ್ರೀಯು ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಾಗಿತ್ತು. ಈಕೆ ಊರನ್ ನಿವಾಸಿಯಾಗಿದ್ದು, ಸುಮಾರು 25 ಕಿ.ಮೀ ದೂರದ ಬೇಲಾಪುರದಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಘಟನೆಯ ಕುರಿತು ಉಪ ಪೊಲೀಸ್ ಆಯುಕ್ತ (ನವಿ ಮುಂಬೈ) ವಿವೇಕ್ ಪನ್ಸಾರೆ ಪ್ರತಿಕ್ರಿಯಿಸಿ, ಉರಾನ್ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ ಎಂದು ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಪೊಲೀಸರಿಗೆ ಕರೆ ಬಂದಿತ್ತು. ಆಕೆಯ ಮೃತದೇಹ ಅನೇಕ ಗಾಯದ ಗುರುತುಗಳು ಮತ್ತು ಇರಿತದ ಗಾಯಗಳನ್ನು ಒಳಗೊಂಡಿದೆ. ಇದು ಆಕೆಯನ್ನು ಅತ್ಯಂತ ಬರ್ಬರವಾಗಿ ಹತ್ಯೆಗೈಯಲಾಗಿದೆ ಎಂದು ಸೂಚಿಸುತ್ತದೆ ಅಲ್ಲದೆ ಪ್ರೀತಿ ವಿಚಾರವಾಗಿ ಕೊಲೆ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಘಟನೆಯ ಬಳಿಕ ಪ್ರಿಯಕರ ಕೂಡ ನಾಪತ್ತೆಯಾಗಿದ್ದಾನೆ. ಈ ಕುರಿತು…