Author: admin

ರಾಜ್ಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳುತ್ತಿವೆ. ಇದರಿಂದಾಗಿ ನಿರಂತರವಾಗಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.ಈ ಹಿನ್ನೆಲೆಯಲ್ಲಿ ಕೆಲವರು ಇದನ್ನೇ ಒಂದು ಬ್ಯುಸಿನೆಸ್‌ ಮಾಡಿಕೊಂಡಿದ್ದಾರೆ. ಭಾರೀ ಗಾಳಿಗೆ ವಿದ್ಯುತ್ ತಂತಿಯ ಮೇಲೆ ಮರಗಳು ಬಿದ್ದು ಮಲೆನಾಡಿನ ಕೆಲ ಗ್ರಾಮಗಳ ಜನರು ಕತ್ತಲಲ್ಲಿ ಕಳೆಯುವಂತಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮೊಬೈಲ್ ಚಾರ್ಜ್ ಇಲ್ಲದೆ ಸಾರ್ವಜನಿಕರು ಪರದಾಡುತ್ತಿದ್ದಾರೆ. ಇದನ್ನೇ ಬಂಡವಾಳವಾಗಿ ಇಟ್ಟುಕೂಂಡ ಅಂಗಡಿಯೊಂದರಲ್ಲಿ ಜನರೇಟರ್ ಆನ್ ಮಾಡಿ ಮೊಬೈಲ್ ಚಾರ್ಜ್ ಮಾಡಿಕೊಡುತ್ತಿದ್ದಾರೆ. ಒಂದು ಮೊಬೈಲ್ ಫುಲ್ ಚಾರ್ಜ್ ಮಾಡಲು 60 ರೂ. ಹಾಗೂ ಹಾಲ್ಫ್ ಚಾರ್ಜ್ ಮಾಡಲು 40 ರೂ. ಪಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಗ್ರಾಮದ ಶಾಮಿಯಾನ ಅಂಗಡಿಯಲ್ಲಿ ಜನರೇಟರ್ ಆನ್ ಮಾಡಿ ಮೊಬೈಲ್ ಚಾರ್ಜಿಂಗ್ ಮಾಡಿಕೊಡುವ ಕೆಲಸ ನಡೆಯುತ್ತಿದೆ.ಕೇಳಿದಷ್ಟು ಹಣ ಕೊಟ್ಟು ಮೊಬೈಲ್‌ ಚಾರ್ಜ್‌ ಮಾಡಿಸಿಕೊಳ್ಳಲು ಜನರು ಸಾಲುಗಟ್ಟಿ ನಿಂತಿದ್ದಾರೆ.ಸುಮಾರು 2,000 ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ ಎಂದು ತಿಳಿದುಬಂದಿದೆ. 120 ಕೋಟಿ ರೂಪಾಯಿಗೂ ಹೆಚ್ಚು ಹಾನಿಯಾಗಿದೆ ಎಂದು ತಿಳಿದುಬಂದಿದೆ. ಒಂದು…

Read More

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಆಪ್ತರ ಜೊತೆ ತೆರಳಿ ದರ್ಶನ್ ಬಿಡುಗಡೆಗಾಗಿ ಹರಕೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿಗೆ ರಾತ್ರಿ ಆಗಮಿಸಿದ ಅವರು, ದೇವಿಯ ದರ್ಶನ ಮಾಡಿದ್ದಾರೆ. ದೇವಸ್ಥಾನದಲ್ಲಿ  ಬೆಳಗ್ಗೆ ದರ್ಶನ್‌ ಬಿಡುಗಡೆ ಸಂಬಂಧ ನವ ಚಂಡಿಕಾ ಹೋಮ ನಡೆದಿದೆ. ಮುಂಜಾನೆ ದೇಗುಲದಲ್ಲಿ ದರ್ಶನ್ ಬಿಡುಗಡೆಗಾಗಿ ಈ ಹೋಮ ನಡೆದಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಪ್ರಸಿದ್ಧ ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ನೇಮಕಗೊಂಡಿರುವ ಅರ್ಚಕರಿಗೆ ನಿಯಮಾನುಸಾರ ಪರಿಶೀಲಿಸಿ ವೇತನ ನಿಗದಿಪಡಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಭರವಸೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಡಾ.ಸಿ.ಟಿ.ರವಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನ ಕಲಾಪದಲ್ಲಿ ನಡೆದ ಕಲಾಪದಲ್ಲಿ ಶೂನ್ಯ ವೇಳೆಯಲ್ಲಿ ತಾನು ಈ ವಿಷಯ ಪ್ರಸ್ತಾಪಿಸಿ ಗಮನ ಸೆಳೆದಾಗ, ಸಚಿವರು ಈ ಬಗ್ಗೆ ಲಿಖಿತ ಉತ್ತರ ನೀಡಿದ್ದಾರೆ ಎಂದು ಗುರುವಾರ ಮಾಹಿತಿ ನೀಡಿದ್ದಾರೆ. ಶ್ರೀ ಗುರುದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಸ್ಥೆಯು ಧಾರ್ಮಿಕ ದತ್ತಿ ಇಲಾಖೆಯ ‘ಎ’ ವರ್ಗದ ಸಂಯುಕ್ತ ಧಾರ್ಮಿಕ ಸಂಸ್ಥೆಯಾಗಿದ್ದು, ಹಲವು ಹೋರಾಟಗಳ ನಂತರ ನ್ಯಾಯಾಲಯದ ನಿರ್ದೇಶನದ ಮೇರೆಗೆ ಏಪ್ರಿಲ್ ೧, ೨೦೨೩ ರಂದು ದೇವಾಲಯಕ್ಕೆ ಅರ್ಚಕರ ನೇಮಕ ಆದಾಗಿನಿಂದ ಇಂದಿನವರೆಗೆ ಅರ್ಚಕರಿಗೆ ವೇತನ ನಿಗದಿಪಡಿಸಿರುವುದಿಲ್ಲ. ಈ ಬಗ್ಗೆ ಹಿಂದಿನ ಅಧಿವೇಶನದಲ್ಲಿ ಈ ವಿಷಯವನ್ನು ತಾನೇ ಪ್ರಸ್ತಾಪಿಸಿದ್ದಾಗ ಜಿಲ್ಲಾಧಿಕಾರಿಗಳಿಂದ ವರದಿ ಪಡೆದು ಅರ್ಚಕರಿಗೆ ವೇತನ ನಿಗಧಿಪಡಿಸಲು ಕ್ರಮಕೈಗೊಳ್ಳಲಾಗುವುದೆಂದು ಇಲಾಖೆ ಸಚಿವರು…

Read More

ಮಾಜಿ ಪ್ರಧಾನಿಯೂ ಆಗಿರುವ ರಾಜ್ಯಸಭಾ ಸದಸ್ಯ ಹೆಚ್‌.ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿದ್ದಾರೆ. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಯವರ ನಿವಾಸದಲ್ಲಿ ಭೇಟಿಯಾಗಿ, ಹಲವು ಮಹತ್ವದ ವಿಚಾರಗಳನ್ನ ಚರ್ಚಿಸಿದ್ದಾರೆ. ಈ ಮಾಹಿತಿಯನ್ನು ಸ್ವತಃ ಮೋದಿ ಅವರೇ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಜೀ ಅವರನ್ನು ಭೇಟಿಯಾಗಿರುವುದು ಗೌರವದ ಸಂಗತಿ. ವಿವಿಧ ವಿಚಾರಗಳ ಬಗ್ಗೆ ಅವರಿಗಿರುವ ಬುದ್ಧಿವಂತಿಕೆ ಹಾಗೂ ಅವರ ಆಳವಾದ ದೃಷ್ಟಿಕೋನ ಅತ್ಯಂತ ಮೌಲ್ಯಯುತವಾಗಿದೆ ಎಂದು ಬರೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಪೀಣ್ಯ ಫ್ಲೈಓವರ್ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ವಿಧಿಸಲಾಗಿದ್ದ ನಿರ್ಬಂಧ ತೆರವುಗೊಳಿಸಲಾಗಿದ್ದು, ಜುಲೈ 29ರಿಂದ ಎಲ್ಲಾ ವಾಹನಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಪೀಣ್ಯ ಫ್ಲೈಓವರ್‍ನ ಕೆನ್ನಮೆಟಲ್ ಅಪ್ಪರ್ ರ್ಯಾಂಪ್‍ನಿಂದ ಎಸ್.ಆರ್.ಎಸ್.ಡೌನ್ ರ್ಯಾಂಪ್‍ವರೆಗಿನ ಪ್ರೆಸ್ಟ್ರೆಸ್ಡ್ ಕೇಬಲ್‍ಗಳ ಬದಲಿ ಕಾಮಗಾರಿಯ ಕಾರಣದಿಂದ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ವಿಧಿಸಿ 2022ರ ಫೆಬ್ರವರಿಯಲ್ಲಿ ಆದೇಶಿಸಲಾಗಿತ್ತು. ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಎಲ್ಲಾ ವಾಹನಗಳ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗ್ರೀನ್ ಸಿಗ್ನಲ್ ನೀಡಿದೆ. ಅದರನ್ವಯ ಜುಲೈ 29ರಿಂದ ಸಂಚಾರಕ್ಕೆ ಮುಕ್ತಗೊಳಿಸಿ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆಯಿಂದ ಆದೇಶಿಸಲಾಗಿದೆ. ನೂತನವಾಗಿ ಪ್ರೆಸ್ಟ್ರೆಸ್ಡ್ ಕೇಬಲ್‍ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರಿಂದ ಬೇಡಿಕೆ ಬಂದ ಕಾರಣ ಬೃಹತ್ ವಾಹನಗಳ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ, ಗ್ರೌಟಿಂಗ್ ಕಾಮಗಾರಿಯ ಸಲುವಾಗಿ ಜು.29ರಿಂದ ಪ್ರತಿ ಶುಕ್ರವಾರ ಮುಂಜಾನೆ 6ರಿಂದ ಶನಿವಾರ ಮುಂಜಾನೆ 6 ಗಂಟೆಯವರೆಗೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಉಳಿದ ಎಲ್ಲ ದಿನಗಳಲ್ಲಿ ಭಾರೀ ವಾಹನ ಅವಕಾಶ ನೀಡಲಾಗಿದೆ.…

Read More

ಬುಡಕಟ್ಟು ಮಹಿಳೆಯರಿಗೆ ಸಿಂಧೂರ ಹಚ್ಚಬೇಡಿ ಮತ್ತು ಮಂಗಳಸೂತ್ರ ಧರಿಸಬೇಡಿ ಎಂದು ಹೇಳಿದ್ದಕ್ಕಾಗಿ ರಾಜಸ್ಥಾನದ ಶಿಕ್ಷಣ ಇಲಾಖೆ ಮಹಿಳಾ ಶಿಕ್ಷಕಿ ಮೇನಕಾ ದಾಮೋರ್ ಅವರನ್ನು ಅಮಾನತುಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಸ್ಥಾನ ನೀತಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ಶಿಕ್ಷಣ ಇಲಾಖೆಯ ವರ್ಚಸ್ಸಿಗೆ ಧಕ್ಕೆ ತಂದಿದ್ದಕ್ಕಾಗಿ ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಜುಲೈ 19 ರಂದು ಬನ್ಸ್ವಾರಾದ ಮಂಗರ್ ಧಾಮ್ನಲ್ಲಿ ನಡೆದ ಮೆಗಾ ರ್ಯಾಲಿಯಲ್ಲಿ, ಬುಡಕಟ್ಟು ಮಹಿಳೆಯರು ಪಂಡಿತರು ಹೇಳುವುದನ್ನು ಅನುಸರಿಸಬಾರದು ಎಂದು ದಾಮೋರ್ ಹೇಳಿದ್ದರು. “ಬುಡಕಟ್ಟು ಕುಟುಂಬಗಳು ಸಿಂಧೂರವನ್ನು ಅನ್ವಯಿಸುವುದಿಲ್ಲ, ಅವರು ಮಂಗಳಸೂತ್ರವನ್ನು ಧರಿಸುವುದಿಲ್ಲ. ಬುಡಕಟ್ಟು ಸಮಾಜದ ಮಹಿಳೆಯರು ಮತ್ತು ಹುಡುಗಿಯರು ಶಿಕ್ಷಣದತ್ತ ಗಮನ ಹರಿಸಬೇಕು. ಇಂದಿನಿಂದ, ಎಲ್ಲಾ ಉಪವಾಸಗಳನ್ನು ಆಚರಿಸುವುದನ್ನು ನಿಲ್ಲಿಸಿ. ನಾವು ಹಿಂದೂಗಳಲ್ಲ ಎಂದಿದ್ದರು.  ದಾಮೋರ್ ಅವರ ಹೇಳಿಕೆಗೆ ಬುಡಕಟ್ಟು ಸಮಾಜದ ಮಹಿಳೆಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಈ ಬಗ್ಗೆ ಕ್ರಮ ಕೈಗೊಂಡು ಶಿಕ್ಷಕಿಯನ್ನು ಅಮಾನತುಗೊಳಿಸಿದ್ದಾರೆ. ಮೇನಕಾ ದಾಮೋರ್ ಆದಿವಾಸಿ…

Read More

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ. ಸದನದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ ಅಂಗನವಾಡಿ ಕೇಂದ್ರಗಳ ಕಟ್ಟಡಗಳ ಬಾಡಿಗೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನ ಬಾಡಿಗೆ ಪಾವತಿಗೆ ಅನುದಾನದ ಕೊರತೆ ಇಲ್ಲ ಎಂದೂ ಅವರು ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದ ವೇಳೆ ಸುಳ್ಯದ ಬಿಜೆಪಿ ಸದಸ್ಯೆ ಭಾಗೀರಥಿ ಮುರಳ್ಯ ಅವರ ಪ್ರಶ್ನೆಗೆ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು. 2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳ…

Read More

ಕೇಂದ್ರದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವ ಸಂಬಂಧವಾಗಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದರು. ಈ ನಿರ್ಣಯಕ್ಕೆ ವಿಧಾನಸಭೆ ಮತ್ತು ವಿಧಾನ ಪರಿಷತ್ ಗಳಲ್ಲಿ ಅಂಗೀಕಾರ ದೊರೆತಿದೆ. ರಾಜ್ಯ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆ ನೀಟ್ ಪರೀಕ್ಷೆ ರದ್ದುಗೊಳಿಸುವ ಪ್ರಮುಖ ನಿರ್ಣಯವನ್ನು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಯಿತು. ನೀಟ್ ಪರೀಕ್ಷೆಯನ್ನು ರಾಜ್ಯದಲ್ಲಿ ರದ್ದುಗೊಳಿಸುವ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದರು. ಈ ನಿರ್ಣಯಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಆ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳು ಹೋರಾಟಕ್ಕೆ ಇಳಿದಿವೆ. ಇದೀಗ ಕೇಂದ್ರ ಮಾಡುತ್ತಿರುವ ನೀಟ್ ಪರೀಕ್ಷಾ ವ್ಯವಸ್ಥೆಯಿಂದ ಕರ್ನಾಟಕದ ಗ್ರಾಮೀಣ ಭಾಗದ ಬಡ ಮಕಳಿಗೆ ಹಿನ್ನಡೆಯಾಗುತ್ತಿದೆ. ಅವರ ವೈದ್ಯಕೀಯ ಶಿಕ್ಷಣಗಳ ಅವಕಾಶಗಳ ಮೇಲೆ ಭಾರಿ ಹೊಡೆತ ಬೀಳುತ್ತಿದೆ. ರಾಜ್ಯದ ವೈದ್ಯಕೀಯ ಕಾಲೇಜುಗಳ ಹಕ್ಕನ್ನು ಕೇಂದ್ರದ ನೀಟ್ ಪರೀಕ್ಷಾ ವ್ಯವಸ್ಥೆ ಕಸಿದುಕೊಳ್ಳುತ್ತಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ…

Read More

ಒಲಿಂಪಿಕ್ಸ್ 2024ಕ್ಕೆ ಕ್ಷಣಗಣನೆ ಶುರುವಾಗಿದೆ. ಪ್ಯಾರಿಸ್‌ ನಲ್ಲಂತೂ ಇದೀಗ ಒಲಿಂಪಿಕ್ಸ್‌ ಸಂಭ್ರಮ ಮನೆ ಮಾಡಿದೆ. ಅದ್ಧೂರಿ ಕ್ರೀಡೋತ್ಸವ ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾದು ಕುಳಿತಿದೆ. ದಾಖಲೆ ಸಂಖ್ಯೆಯ ಕ್ರೀಡಾಪಟುಗಳು ಅಖಾಡದಲ್ಲಿ ಸೆಣಸಲು ತೊಡೆ ತಟ್ಟಿ ನಿಂತಿದ್ದಾರೆ. ಒಲಿಂಪಿಕ್ಸ್‌ ವೇದಿಕೆಯಲ್ಲಿ ವಿಶ್ವದ ಅಗ್ರ ಕ್ರೀಡಾಪಟುಗಳು ಒಬ್ಬರನ್ನೊಬ್ಬರು ಸೆಣಸುವುದನ್ನು ಇಡೀ ವಿಶ್ವವೇ ಉಸಿರು ಬಿಗಿಹಿಡಿದು ನೋಡಲು ಕಾತರವಾಗಿದೆ. ಇದೊಂದು ವಿಶ್ವವೇ ಸಂಭ್ರಮಿಸೋ ಆಟಗಳ ಹಬ್ಬ ಎಂದರೆ ತಪ್ಪಾಗಲಾರದು. ಅಂದಹಾಗೆ ನಾಲ್ಕು ವರ್ಷಗಳಿಗೆ ಬರುವ ಈ ಒಲಂಪಿಕ್ಸ್ ಕ್ರೀಡಾಕೂಟವನ್ನು ಸಂಭ್ರಮಿಸುತ್ತೇವೆ. ಆದರೆ ಇದಕ್ಕೆ ಶತಶತಮಾನಗಳ ಇತಿಹಾಸ ಇದೆ ಎಂಬುದು ಗೊತ್ತಿದೆಯೇ? ಇದರ ಹುಟ್ಟಿನ ಹಿಂದೆ ಪ್ರೀತಿಯ ಗುಟ್ಟಿದೆ ಎಂಬುದನ್ನು ತಿಳಿದಿದ್ದೇವೆಯೇ? ಇಲ್ಲಾ ಅಲ್ವಾ? ಹಾಗಿದ್ರೆ ಬನ್ನಿ ತಿಳಿಯೋಣ ಒಲಂಪಿಕ್ ಹುಟ್ಟಿನ ಕುತೂಹಲದ ರಹಸ್ಯವನ್ನು. ಕ್ರಿಸ್ತಪೂರ್ವದಲ್ಲಿ ಹುಟ್ಟಿದ ಒಲಿಂಪಿಕ್ಸ್‌ : ಒಲಿಂಪಿಕ್‌ ಕ್ರೀಡಾಕೂಟದ ಮೂಲ ಗ್ರೀಸ್‌ ದೇಶದ್ದಾಗಿದೆ. ದಂತಕಥೆಗಳ ಪ್ರಕಾರ ಜೀಯಸ್‌ನ ಮಗ ಹರ್ಕ್ಯುಲಸ್‌ (ಹೆರಾಕ್ಲಿಸ್) ಈ ಕ್ರೀಡಾಕೂಟ ಆರಂಭಿಸಿದರು ಎಂದು ಹೇಳಲಾಗಿದೆ. ಸುಮಾರು ಕ್ರಿ.ಪೂ. 776ರಲ್ಲಿ…

Read More

ಯಕೃತ್‌ ಕ್ಯಾನ್ಸರ್‌ ಗೆ ಒಳಗಾಗಿದ್ದ 52 ವರ್ಷದ ತನ್ನ ತಾಯಿಗೆ ಸ್ವತಃ ಮಗನೇ ಯಕೃತ್‌ ಭಾಗವನ್ನು ದಾನ ಮಾಡುವ ಮೂಲಕ ಮಹಿಳೆಗೆ ಯಶಸ್ವಿಯಾಗಿ ಯಕೃತ್‌ ಕಸಿ ನಡೆಸಲಾಗಿದೆ. ಇಲ್ಲಿನ ಖಾಸಗಿ ಆಸ್ಪತ್ರೆಯ ಯಕೃತ್ತಿನ ಕಸಿ ಶಸ್ತ್ರಚಿಕಿತ್ಸಕ ಡಾ.ಕಿಶೋರ್ ಜಿ.ಎಸ್‌.ಬಿ. ಮತ್ತು ಡಾ ಪಿಯೂಷ್ ಸಿನ್ಹಾ ಹಾಗೂ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಬಿ.ಎಸ್. ರವೀಂದ್ರ ಅವರ ತಂಡ  ಯಶಸ್ವಿಯಾಗಿ ಈ ಸಂಕೀರ್ಣ  ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಲಿವರ್‌ ಟ್ರಾನ್ಸ್‌ ಪ್ಲಾಂಟ್‌ ಸರ್ಜನ್‌ ಡಾ.ಕಿಶೋರ್ ಜಿಎಸ್‌ ಬಿ, ಮತ್ತು ಡಾ.ಪಿಯೂಷ್ ಸಿನ್ಹಾ ಹೇಳಿದಿಷ್ಟು! 2021 ರಲ್ಲಿ 52 ವರ್ಷದ ಲೀಲಾ ಎಂಬುವವರು ಕಾಮಾಲೆ ಕಾಯಿಲೆಗೆ ತುತ್ತಾದರು. ಇದರ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಲಿವರ್ ಸಿರೋಸಿಸ್ ಇರುವುದು ಪತ್ತೆಯಾಯಿತು. ಬಳಿಕ ಅವರು ಆಸ್ಪತ್ರೆಗೆ ದಾಖಲಾದರು. ದೀರ್ಘಕಾಲದಿಂದ ಯಕೃತ್‌ ನ ಕಾಯಿಲೆ ಇರುವ ಕಾರಣ ಅವರ ಯಕೃತ್‌ ನಲ್ಲಿ ದ್ರವದ ಶೇಖರಣೆಯಾಗಿ ಯಕೃತ್‌ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಇದರಿಂದ ಅವರ ಜೀವನ…

Read More