Subscribe to Updates
Get the latest creative news from FooBar about art, design and business.
- ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
Author: admin
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮಂಡ್ಯದ ಆದಿಚುಂಚನಗಿರಿ ಮಠದ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದಾಗ, ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿವಿಯಲ್ಲಿ ಗುಟ್ಟಾಗಿ ಮಾತನಾಡಿದ್ದ ಫೋಟೋ ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿತ್ತು. ಇಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ. “ನಮ್ಮ ನಡುವೆ ಯಾವುದೇ ರಾಜಕೀಯ ಗುಪ್ತ ಆಲೋಚನೆಗಳು ನಡೆದಿಲ್ಲ. ಪ್ರಧಾನಿಯವರು ಮಹಿಳಾ ಮೀಸಲಾತಿ ಕುರಿತಾದ ನನ್ನ ವೈಯಕ್ತಿಕ ಅಭಿಪ್ರಾಯವನ್ನು ಕೇಳಿದರು. ಅದಕ್ಕೆ ನಾನು ‘ನಾವು ಮಹಿಳಾ ಮೀಸಲಾತಿಯ ಪರವಾಗಿದ್ದೇವೆ’ ಎಂದು ಸಕಾರಾತ್ಮಕವಾಗಿ ಉತ್ತರಿಸಿದೆ,” ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಹಿಳಾ ಮೀಸಲಾತಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಸಾಮಾಜಿಕ ನ್ಯಾಯದ ಮೇಲೆ ನಂಬಿಕೆಯಿದ್ದರೆ 2023ರಲ್ಲೇ ಇದನ್ನು ಜಾರಿಗೆ ತರಬೇಕಿತ್ತು ಎಂದರು. ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಲ್ಲಿ ಜನಸಂಖ್ಯೆಯನ್ನು ನಿಯಂತ್ರಿಸಿರುವ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಬಾರದು. ಹೊಸ ಜನಗಣತಿಯ ಆಧಾರದ ಮೇಲೆ ಸಮಾನ…
ಬೆಂಗಳೂರು: ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಮಹಿಳಾ ಅಧಿಕಾರಿಗಳನ್ನು ನಂಬಿಸಿ, ಅವರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಬಳಿಕ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಇಂದಿರಾನಗರದ ಉದ್ಯಮಿ ಎಂ. ಕೃಪಲಾನಿ ಎಂಬಾತನನ್ನು ಪುಲಕೇಶಿನಗರ ಪೊಲೀಸರು ಬಂಧಿಸಿದ್ದಾರೆ. ಈತ ಮುಖ್ಯವಾಗಿ ಜಿಎಸ್‌ಟಿ (GST) ಮತ್ತು ಕಸ್ಟಮ್ಸ್ (Customs) ಇಲಾಖೆಯ ಮಹಿಳಾ ಅಧಿಕಾರಿಗಳನ್ನೇ ಗುರಿಯಾಗಿಸಿಕೊಂಡಿದ್ದ. ಸುಮಾರು 50ಕ್ಕೂ ಹೆಚ್ಚು ಮಹಿಳಾ ಅಧಿಕಾರಿಗಳಿಗೆ ಈತ ವಂಚಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉದ್ಯಮದ ನೆಪದಲ್ಲಿ ಅಧಿಕಾರಿಗಳನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಈತ, ನಂತರ ಲಂಚ್ ಅಥವಾ ಡಿನ್ನರ್ ಗೆ ಆಹ್ವಾನಿಸಿ ಸ್ನೇಹ ಬೆಳೆಸುತ್ತಿದ್ದ. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ, ಆ ಕ್ಷಣಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಳ್ಳುತ್ತಿದ್ದ. ನಂತರ ತನ್ನ ಬೇಡಿಕೆ ಈಡೇರಿಸದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ. 45 ವರ್ಷದ ಕಸ್ಟಮ್ಸ್ ಮಹಿಳಾ ಅಧಿಕಾರಿಯೊಬ್ಬರು ನೀಡಿದ ದೂರಿನನ್ವಯ ಪೊಲೀಸರು ಕೃಪಾಲನಿಯನ್ನು ಬಂಧಿಸಿದ್ದಾರೆ. ಆತನ ಮೊಬೈಲ್ ಮತ್ತು ಡಿಜಿಟಲ್ ಪುರಾವೆಗಳನ್ನು ಪರಿಶೀಲಿಸಿದಾಗ ಈ ಬೃಹತ್ ವಂಚನೆಯ ಜಾಲ ಪತ್ತೆಯಾಗಿದೆ. ವೈದ್ಯಕೀಯ…
ರಾಣೆಬೆನ್ನೂರು: ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಗಳೆಂದು ಬಿಂಬಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ. ಬದಲಾಗಿ ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ,” ಎಂದು ಅವರು ಆರೋಪಿಸಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆಯನ್ನು ಕ್ಷೇತ್ರ ಮರುವಿಂಗಡನೆಯೊಂದಿಗೆ (Delimitation) ಬೆರೆಸಿರುವುದು ಸರಿಯಲ್ಲ. ಕ್ಷೇತ್ರ ಮರುವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಸೀಟುಗಳ ಸಂಖ್ಯೆ ಹೆಚ್ಚಾಗುವುದರಿಂದ ದಕ್ಷಿಣದ ಪ್ರಾತಿನಿಧ್ಯ ಕುಗ್ಗಲಿದೆ. ಈ ಅಸಮಾನತೆಯನ್ನು ನಾವು ವಿರೋಧಿಸುತ್ತಿದ್ದೇವೆಯೇ ಹೊರತು ಮಹಿಳಾ ಮೀಸಲಾತಿಯನ್ನಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ಸಂವಿಧಾನದ 73 ಮತ್ತು 74ನೇ ತಿದ್ದುಪಡಿ ತಂದಿದ್ದು ರಾಜೀವ್ ಗಾಂಧಿಯವರು. ಆಗ ಬಿಜೆಪಿ ಎಂದಿಗೂ ಮಹಿಳಾ ಮೀಸಲಾತಿಗಾಗಿ ಒತ್ತಾಯಿಸಿರಲಿಲ್ಲ ಎಂದು ಸಿಎಂ ನೆನಪಿಸಿದರು. “ಪ್ರಧಾನಿ ಮೋದಿ…
ಬೆಂಗಳೂರು: ಮಾಜಿ ಪ್ರಧಾನ ಮಂತ್ರಿಗಳು ಹಾಗೂ ಹಾಲಿ ರಾಜ್ಯಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ ಅವರಿಗೆ ರಾಜ್ಯ ಸರ್ಕಾರವು ಸುಮಾರು 1.25 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ ಕಾರನ್ನು ಖರೀದಿಸಲು ಅಧಿಕೃತವಾಗಿ ಅನುಮತಿ ನೀಡಿದೆ. ದೇವೇಗೌಡರಿಗಾಗಿ ‘ವೋಲ್ವೋ ಎಕ್ಸ್‌ಸಿ 90’ (Volvo XC 90) ಮಾದರಿಯ ಅತ್ಯಾಧುನಿಕ ಹಾಗೂ ಗರಿಷ್ಠ ಸುರಕ್ಷತೆಯ ಕಾರನ್ನು ಖರೀದಿಸಲಾಗುತ್ತಿದೆ. ಈ ಕಾರಿನ ಒಟ್ಟು ಅಂದಾಜು ವೆಚ್ಚ 1,25,65,388 ರೂಪಾಯಿಗಳು ಎಂದು ತಿಳಿದುಬಂದಿದೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ–1999ರ ಅಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ವಿಶೇಷ ವಿನಾಯಿತಿ ನೀಡಿ, ನೇರವಾಗಿ ಬೆಂಗಳೂರಿನ ‘ಮಾರ್ಷಲ್ ಮೋಟಾರ್ಸ್’ನಿಂದ ಕಾರು ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ಕಾರು 2.0 ಲೀಟರ್ ಟರ್ಬೋ ಎಂಜಿನ್ ಹೊಂದಿದ್ದು, ಮೈಲ್ಡ್ ಹೈಬ್ರಿಡ್ ಪವರ್‌ಟ್ರೇನ್ ತಂತ್ರಜ್ಞಾನವನ್ನು ಒಳಗೊಂಡಿದೆ. ಇದು 250 hp ಪವರ್ ಮತ್ತು 360 Nm ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ದೇವೇಗೌಡರ ವಯಸ್ಸು ಮತ್ತು ಆರೋಗ್ಯದ ದೃಷ್ಟಿಯಿಂದ, ಅವರಿಗೆ ಕಾರು ಹತ್ತಲು…
ತಿಪಟೂರು: ನಗರದ ಬಂಡಿಹಳ್ಳಿಯಲ್ಲಿ ಚಿನ್ನ ಕಳ್ಳತನ ಮಾಡಿ ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಘಟನೆ ನಡೆದ 24 ಗಂಟೆಯೊಳಗೆ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಏ.17 ರಂದು ರಾತ್ರಿ ಸುಮಾರು 11.30 ಗಂಟೆಗೆ ಸಂಜೆ ಸುಮಾರು 7.15 ಗಂಟೆಗೆ ಜಗದೀಶ್ ಎಂಬಾತ ಲಕ್ಷ್ಮಿ ಕೋಂ ಲೇ. ಚಂದ್ರಶೇಖರ್ ಎಂಬುವರ ಮನೆಗೆ ಬಂದು ನಿನ್ನ ತಂಗಿ ಎಲ್ಲಿದ್ದಾಳೆ ಎಂದು ಪ್ರಶ್ನಿಸಿದ್ದಾನೆ. ಆಗ ಆಕೆ ಇಲ್ಲ ಎಂದು ಹೇಳುತ್ತಿದ್ದಂತೆ ಬೆದರಿಕೆ ಹಾಕಿದ್ದಾನೆ. ಇದರಿಂದ ಭಯಗೊಂಡ ಲಕ್ಷ್ಮಿ ಮನೆಗೆ ಬೀಗ ಹಾಕಿ, ಹತ್ತಿರದ ಗಂಗಾಮಣಿ ಅವರ ಮನೆಗೆ ತೆರಳಿದ್ದಾರೆ. ಅಲ್ಲಿಗೂ ಬಂದ ಜಗದೀಶ್ ಬೆದರಿಕೆ ಮುಂದುವರಿಸಿದ್ದಾನೆ. ನಂತರ ಗಂಗಾಮಣಿ ಮತ್ತು ಅವರ ತಮ್ಮ ಅರುಣ್ ಲಕ್ಷ್ಮಿ ಅವರ ಮನೆ ಬಳಿ ಬಂದು ನೋಡುವಾಗ ಜಗದೀಶ್ ಮನೆಯ ಮೇಲ್ಛಾವಣಿಯಿಂದ ಇಳಿಯುತ್ತಿರುವುದು ಕಂಡಿದೆ. ಅಲ್ಲದೆ ಇದೇ ವೇಳೆ ಮನೆಯ ಕಿಟಕಿಯಿಂದ ಬೆಂಕಿಯ ಹೊಗೆ ಬರುತ್ತಿರುವುದು ಗಮನಕ್ಕೆ ಬಂದಿದೆ. ತಕ್ಷಣ ಲಕ್ಷ್ಮಿ ಮನೆಗೆ ತೆರಳಿ ನೋಡಿದಾಗ,…
ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಕರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆ ಹಾಗೂ ತಂಗುದಾಣ ನಿರ್ಮಿಸಬೇಕೆಂದು ಕರ್ನಾಟಕ ರಾಜ್ಯ ಕಾಡುಗೊಲ್ಲ ಸಂಘದ ತಾಲೂಕು ಅಧ್ಯಕ್ಷ ಬಾಲರಾಜು ಒತ್ತಾಯಿಸಿದರು. ಅವರು ನಗರದ ತಾಲೂಕು ಕಚೇರಿ ಆವರಣದಲ್ಲಿ ಗ್ರಾಮಸ್ಥರು ಮತ್ತು ಸಂಘಟನೆಯ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡು, ಉಪ ವಿಭಾಗಾಧಿಕಾರಿ ಬಿ.ಕೆ.ಸಪ್ತಶ್ರೀ ರವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ–206ರ ಚತುಷ್ಪಥ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದರಿಂದ ಗ್ರಾಮಸ್ಥರಿಗೆ, ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಹಾಗೂ ಜನ ಜಾನುವಾರುಗಳಿಗೆ ಓಡಾಡಲು ತುಂಬಾ ತೊಂದರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತರು ಪ್ರತಿದಿನ ಜಾನುವಾರು, ಮೇಕೆ, ಕುರಿಗಳೊಂದಿಗೆ ತಮ್ಮ ಹೊಲ, ತೋಟ, ಗದ್ದೆಗಳಿಗೆ ಹೋಗಲು 2-3 ಕಿಮೀ ದೂರ ಬಳಸಿಕೊಂಡು ಅಂಡರ್‌ಪಾಸ್ ಮೂಲಕ ಸಾಗಬೇಕು. ಇದರಿಂದ ರೈತಾಪಿ ವರ್ಗಕ್ಕೆ ತೀವ್ರ ಸಾಕಷ್ಟು ತೊಂದರೆಯಾಗುತ್ತಿದೆ. ಈ ವಿಚಾರವಾಗಿ ಹೆದ್ದಾರಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಉಡಾಫೆ ಉತ್ತರ ನೀಡುತ್ತಿದ್ದು, ನಿರ್ಲಕ್ಷಿಸುತ್ತಿದ್ದಾರೆ. ಈಗಾಗಲೇ ರಸ್ತೆ ದಾಟುವಾಗ…
ತುಮಕೂರು: ಜಿಲ್ಲೆಯ ಎಲ್ಲಾ ಹೋಬಳಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಮೇವು ಲಭ್ಯತೆಯನ್ನು ತಕ್ಷಣ ಪರಿಶೀಲಿಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಪಶುಪಾಲನಾ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮೇವು ಲಭ್ಯತೆ ಮತ್ತು ಬರ ಪರಿಸ್ಥಿತಿ ಹಾಗೂ ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚಿಸಿದ ಅವರು, ಪ್ರಸ್ತುತ ಜಿಲ್ಲೆಯಲ್ಲಿ ಬೇಸಿಗೆಯ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಹಾಗೂ ಮೇವಿನ ಬಗ್ಗೆ ಹೆಚ್ಚಿನ ನಿಗಾವಹಿಸುವ ಅನಿವಾರ್ಯತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಹೋಬಳಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಇಲಾಖೆಯ ಸಹಾಯಕ ನಿರ್ದೇಶಕರು ಮೇವಿನ ಲಭ್ಯತೆ ಕುರಿತು ಮಾಹಿತಿ ಸಂಗ್ರಹಿಸಿ ತಕ್ಷಣ ವರದಿ ಸಲ್ಲಿಸುವಂತೆ ಅವರು ಸಭೆಯಲ್ಲಿ ಸೂಚಿಸಿದರು. ಎಲ್ಲಾ ತಾಲ್ಲೂಕು ಸಹಾಯಕ ನಿರ್ದೇಶಕರು ಪ್ರತಿದಿನ ಕನಿಷ್ಠ 10 ಬ್ಲಾಕ್ ಗಳಿಗೆ ಭೇಟಿ ನೀಡಿ, ಜಿಪಿಎಸ್ ಫೋಟೋಗಳೊಂದಿಗೆ ದೈನಂದಿನ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲು ಸೂಚಿಸಿದರು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ…
ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿಯ ಮಾಟನಹಳ್ಳಿ ಗ್ರಾಮದಲ್ಲಿ ಭಾನುವಾರ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಎರಡು ಮನೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಮಾಟನಹಳ್ಳಿ ಗ್ರಾಮದ ವೆಂಕಟರಮಣಗೌಡ ಹಾಗೂ ಸಣ್ಣತಿಮ್ಮೇಗೌಡ ಎಂಬುವವರಿಗೆ ಸೇರಿದ ಮನೆಗಳಲ್ಲಿ ಭಾರತ್ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಬೆಂಕಿ ಆವರಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಮನೆಗಳು ಬೆಂಕಿಗಾಹುತಿಯಾಗಿವೆ. ಈ ದುರ್ಘಟನೆಯಲ್ಲಿ ಮನೆಯಲ್ಲಿದ್ದ ಸುಮಾರು 15 ಸಾವಿರ ಕೊಬ್ಬರಿ ಉಂಡೆಗಳು, ಲಕ್ಷಾಂತರ ರೂಪಾಯಿ ನಗದು, ಚಿನ್ನಾಭರಣ, ಧಾನ್ಯಗಳು ಹಾಗೂ ಗೃಹೋಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ರೈತರು ಕಷ್ಟಪಟ್ಟು ಸಂಪಾದಿಸಿದ್ದ ಆಸ್ತಿಪಾಸ್ತಿಗಳು ಕಣ್ಣೆದುರೇ ನಾಶವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಗ್ರಾಮಸ್ಥರು ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಈ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ರಾಜ್ಯದ ಅಬಕಾರಿ ತೆರಿಗೆ ನೀತಿಯಲ್ಲಿ ಮಹತ್ತರ ಬದಲಾವಣೆ ತರಲು ಸರ್ಕಾರ ಸಿದ್ಧತೆ ನಡೆಸುತ್ತಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಇದುವರೆಗೆ ಮದ್ಯದ ಪ್ರಮಾಣದ (Volume) ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಹೊಸ ಪ್ರಸ್ತಾವನೆಯ ಪ್ರಕಾರ, ಮದ್ಯದಲ್ಲಿರುವ ಆಲ್ಕೋಹಾಲ್ ಅಂಶದ (Alcohol by Volume – ABV) ಆಧಾರದ ಮೇಲೆ ತೆರಿಗೆಯನ್ನು ಲೆಕ್ಕ ಹಾಕಲು ಸರ್ಕಾರ ನಿರ್ಧರಿಸಿದೆ. ಈ ಹೊಸ ವ್ಯವಸ್ಥೆಯನ್ನು ‘ಆಲ್ಕೋಹಾಲ್ ಇನ್ ಬೆವರೇಜ್’ (AIB) ತೆರಿಗೆ ಮಾದರಿ ಎಂದು ಕರೆಯಲಾಗುತ್ತಿದೆ. ಈ ಪದ್ಧತಿಯನ್ನು ಜಾರಿಗೆ ತರುತ್ತಿರುವ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ. ವಿಸ್ಕಿ, ರಮ್, ಬ್ರಾಂಡಿ ಮತ್ತು ಜಿನ್ ನಂತಹ ಮದ್ಯಗಳ ಮೊದಲ ನಾಲ್ಕು ಸ್ಲ್ಯಾಬ್ ಗಳಲ್ಲಿ (ಅಗ್ಗದ ದರದ ಮದ್ಯ) ಬೆಲೆ ಗಣನೀಯವಾಗಿ ಏರಿಕೆಯಾಗಲಿದೆ. ಅಬಕಾರಿ ಮೂಲಗಳ ಪ್ರಕಾರ, ಕನಿಷ್ಠ…
ಕೊರಟಗೆರೆ: ಮನೆಯ ಮುಂದೆ ನಿಲ್ಲಿಸಿದ್ದ ಕಾರು ಮತ್ತು ಬೈಕ್ ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ವೈದ್ಯನನ್ನು ಕೊರಟಗೆರೆ ತಾಲೂಕಿನ ಕೋಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಡಾ.ಎಚ್.ಆರ್.ನಾಗಭೂಷಣ್ ಎಂದು ಗುರುತಿಸಲಾಗಿದೆ. ಈತ ತಾಲೂಕಿನ ಬುಕ್ಕಾಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ವೈದ್ಯನಾಗಿ ಕೆಲಸ ಮಾಡುತ್ತಿದ್ದನು. ಏಪ್ರಿಲ್ 11ರ ಶನಿವಾರ ತಡರಾತ್ರಿ, ಕೋಳಾಲ ಗ್ರಾಮದ ವಿರೂಪಾಕ್ಷಪ್ಪ ಎಂಬುವವರ ಮನೆಯ ಮುಂದೆ ನಿಲ್ಲಿಸಲಾಗಿದ್ದ ಒಂದು ಕಾರು, ಒಂದು ಬೈಕ್ ಹಾಗೂ ಎಲೆಕ್ಟ್ರಿಕ್ ಸ್ಕೂಟರ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದನು. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿರುವ ಆರೋಪಿ, ಯಾರಿಗೂ ಗುರುತು ಸಿಗದಂತೆ ಮುಖಕ್ಕೆ ಮುಸುಕು ಹಾಕಿಕೊಂಡು ಬಂದಿದ್ದನು. ಆದರೆ, ಘಟನೆಯ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಈ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ನಡೆಸಿದ ಕೋಳಾಲ ಪಿಎಸ್ಐ ಅಭಿಷೇಕ್ ನೇತೃತ್ವದ ತಂಡವು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಪ್ರಸ್ತುತ ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ…