Subscribe to Updates
Get the latest creative news from FooBar about art, design and business.
- ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
- ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
- ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
- ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ: ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
- ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ: ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
- ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ
- ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ
- ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
Author: admin
ಮಂಗಳವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ 2024-25 ರ ಯೂನಿಯನ್ ಬಜೆಟ್ ಘೋಷಣೆ ಬಳಿಕ ವಿಪಕ್ಷ ನಾಯಕ ರಾಹುಲ್ ಗಾಂಧಿ, 12.7K ಪೋಸ್ಟ್‌ಗಳೊಂದಿಗೆ ಟ್ವೀಟರ್ ನಲ್ಲಿ ಟ್ರೆಂಡ್ ಆಗಿದ್ದಾರೆ. ಬಜೆಟ್ ಮಂಡಣೆ ವೇಳೆ ಸಚಿವೆ ನಿರ್ಮಲಾ ಸೀತರಾಮನ್ ಅವರು ಭಾಷಣದಲ್ಲಿ, ಜಾಗತಿಕ ಅನಿಶ್ಚಿತತೆಯ ನಡುವೆ ಭಾರತದ ಆರ್ಥಿಕ ಸ್ಥಿತಿಸ್ಥಾಪಕತ್ವವನ್ನು ಎತ್ತಿ ತೋರಿಸಿದರು ಮತ್ತು ಹಣದುಬ್ಬರವು ಸ್ಥಿರವಾಗಿದೆ, 4 ಪ್ರತಿಶತದ ಕಡೆಗೆ ಪ್ರವೃತ್ತಿಯನ್ನು ಹೊಂದಿದೆ, ಪ್ರಮುಖ ಹಣದುಬ್ಬರವು ಶೇಕಡಾ 3.1 ರಷ್ಟಿದೆ ಎಂದು ವರದಿ ಮಾಡಿದೆ. ಆರ್ಥಿಕ ಸ್ಥಿರತೆ ಮತ್ತು ಬೆಳವಣಿಗೆಗೆ ಸರ್ಕಾರದ ನಿರಂತರ ಬದ್ಧತೆಯನ್ನು ಒತ್ತಿ ಹೇಳಿದರು. ವಿಪಕ್ಷ ನಾಯಕ ರಾಹುಲ್ ಗಾಂಧಿ, ಈ ಬಜೆಟ್ ಅನ್ನು “ಕುರ್ಸಿ ಬಚಾವೋ” ಬಜೆಟ್ ಎಂದು ಲೇವಡಿ ಮಾಡಿದರು. ಸರ್ಕಾರ ಇತರ ರಾಜ್ಯಗಳ ವೆಚ್ಚದಲ್ಲಿ ಮಿತ್ರಪಕ್ಷಗಳನ್ನು ಓಲೈಸಲು ಪೊಳ್ಳು ಭರವಸೆ ನೀಡುತ್ತಿದೆ ಮತ್ತು ಸಾಮಾನ್ಯ ಭಾರತೀಯರಿಗೆ ಪರಿಹಾರವನ್ನು ನೀಡದೆ ಕುತಂತ್ರಿಗಳಿಗೆ ಅನುಕೂಲ ನೀಡುತ್ತಿದೆ ಎಂದು ಆರೋಪಿಸಿದರು. ಜತೆಗೆ ಈ ಬಜೆಟ್ ಕಾಂಗ್ರೆಸ್ ಪ್ರಣಾಳಿಕೆ…
ಹುಬ್ಬಳ್ಳಿಯ ಈಶ್ವರನಗರದ ಶ್ರೀ ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೆಂದ್ರಪ್ಪ ಮಹಾದೇವಪ್ಪ ವನಹಳ್ಳಿ (63) ಕೊಲೆ ಮಾಡಿದ್ದ ಹಂತಕನನ್ನು ಪೊಲೀಸರು ಘಟನೆ ನಡೆದ 24 ಗಂಟೆಯೊಳಗೆ ಬಂಧಿಸಿದ್ದಾರೆ. ಹುಬ್ಬಳ್ಳಿಯ ಕಮರಿಪೇಟೆ ಜಿ. ಅಡ್ಡಾ ನಿವಾಸಿ, ಆಟೋ ರಿಕ್ಷಾ ಚಾಲಕ ಸಂತೋಷ ಬೋಜಗಾರ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ದೇವಪ್ಪಜ್ಜನ ಪೂಜಾ–ವಿಧಾನಗಳಿಂದಲೇ ನಾವು ಆರ್ಥಿಕವಾಗಿ ಹಾಳಾಗಲು, ಮಾನಸಿಕವಾಗಿ ತೊಂದರೆ ಅನುಭವಿಸಲು ಕಾರಣ ಎಂದು ಹೇಳಿ ಹತ್ಯೆ ಮಾಡಿರುವುದಾಗಿ ತನಿಖೆ ವೇಳೆ ಬಾಯಿಬಿಟ್ಟಿದ್ದಾನೆ. ಮಂದಿರದ ಹಿಂಬದಿ ಗೇಟ್ ನಲ್ಲಿ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಖಚಿತ ಮಾಹಿತಿ ಮೇರೆಗೆ ಸೋಮವಾರ ರಾತ್ರಿ ಬಂಧಿಸಲಾಗಿದೆ. ಈತ ಎರಡೂವರೆ ವರ್ಷಗಳಿಂದ ಹತ್ಯೆಗೆ ಸಂಚು ಹಾಕಿದ್ದ. ಆ ನಿಟ್ಟಿನಲ್ಲಿ ದೇವಪ್ಪಜ್ಜನನ್ನು ಹಿಂಬಾಳಿಸುತ್ತಿದ್ದ. ಈ ಹಿಂದೆ 2022ರ ಮಾರ್ಚ್‌ನಲ್ಲಿ ದೇವಪ್ಪಜ್ಜನ ವಿದ್ಯಾನಗರದ ನಿವಾಸದಲ್ಲೂ ಹತ್ಯೆಗೆ ಪ್ರಯತ್ನಿಸಿದ್ದ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ನಿಟ್ಟೂರು ಮತ್ತು ಸಂಪಿಗೆ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್–64ರ ರಸ್ತೆ ಕೆಳಸೇತುವೆಗೆ ತಾತ್ಕಾಲಿಕ ಗರ್ಡರ್ಗಳನ್ನು ಅಳವಡಿಸುವ ಮತ್ತು ತೆಗೆದುಹಾಕಲು ಅಗತ್ಯ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಸಲುವಾಗಿ, ರಾಜ್ಯದ ಹಲವು ರೈಲುಗಳನ್ನು, ಭಾಗಶಃ ರದ್ದು, ಮಾರ್ಗ ಬದಲಾವಣೆ,ನಿಯಂತ್ರಣ ಮತ್ತು ಸಮಯ ಮರುನಿಗದಿ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ. * 8 ರೈಲುಗಳ ಸಂಚಾರ ರದ್ದು ಈ ಕೆಳಗಿನ ರೈಲುಗಳ ಸಂಚಾರ ಆಗಸ್ಟ್ 8 ಮತ್ತು 15 ರಂದು ತಾತ್ಕಾಲಿಕವಾಗಿ 2 ದಿನ ಸ್ಥಗಿತವಾಗಲಿದೆ. * ರೈಲು ಸಂಖ್ಯೆ 07346 ತುಮಕೂರು-ಚಾಮರಾಜನಗರ ಡೈಲಿ ಪ್ಯಾಸೆಂಜರ್ ಸ್ಪೆಷಲ್. * ರೈಲು ಸಂಖ್ಯೆ 07328 ಚಾಮರಾಜನಗರ-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್. * ರೈಲು ಸಂಖ್ಯೆ 16239 ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್‌ಪ್ರೆಸ್. * ರೈಲು ಸಂಖ್ಯೆ 16240 ಯಶವಂತಪುರ-ಚಿಕ್ಕಮಗಳೂರು ಡೈಲಿ ಎಕ್ಸ್‌ಪ್ರೆಸ್. * ರೈಲು ಸಂಖ್ಯೆ, 06576 ತಮಕೂರು-ಕೆಎಸ್‌ಆರ್ ಬೆಂಗಳೂರು ಮೆಮು ಸ್ಪೆಷಲ್. * ರೈಲು ಸಂಖ್ಯೆ 06575 KSR ಬೆಂಗಳೂರು-ತುಮಕೂರು…
ಬೀದರ: ಜಿಲ್ಲಾ ಔರಾದ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ಅನೈರ್ಮಲ್ಯದ ಪರಿಣಾಮ ಸಾರ್ವಜನಿಕರು ಸಾಂಕ್ರಾಮಿಕ ರೋಗದ ಭೀತಿಯನ್ನು ಎದುರಿಸುತ್ತಿದ್ದಾರೆ. ಕಾಲಿಟ್ಟ ಕಡೆ ಗಲೀಜು, ಅಸ್ವಚ್ಛತೆ, ಎಲ್ಲೆಡೆ ಹರಿಯುತ್ತಿರುವ ದುರ್ವಾಸನೆಯುಕ್ತ ಮಲೀನ ನೀರಿನಿಂದಾಗಿ ಮಿತಿಮೀರಿದ ಸೊಳ್ಳೆಗಳ ಕಾಟ ಆರಂಭವಾಗಿದೆ. ನಿತ್ಯ ಅಪಾಯಕಾರಿ ಸ್ಥಿತಿಯಲ್ಲಿ ಇಲ್ಲಿನ ಸ್ಥಳೀಯರು ಓಡಾಟ ನಡೆಸುವಂತಾಗಿದೆ. ಇದೆಲ್ಲ ಗೊತ್ತಿದ್ದರೂ, ಅಧಿಕಾರಿಗಳು ಕಣ್ಣುಮುಚ್ಚಿಕುಳಿತಿದ್ದಾರೆ. ಎಕಲಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳ್ಳುರ ಗ್ರಾಮದ ಹಳ್ಳಿಯಲ್ಲಿ ಜನರು ಡೆಂಗ್ಯೂ, ಮಲೇರಿಯಾ, ಚಿಕೂನ್ ಗುನ್ಯಾ ಸೇರಿ ಸಾಂಕ್ರಾಮಿಕ ರೋಗದ ಭೀತಿ ಎದುರಿಸುತ್ತಿದ್ದಾರೆ. ಮನೆಗಳಿಂದ ಹೊರಬರುವ ಕೊಳಚೆ ನೀರು ರಸ್ತೆಗಳಲ್ಲಿ ಹರಿದು ದುರ್ವಾಸನೆ ಬೀರುತ್ತಿದೆ. ಇದರಿಂದ ಮಹಿಳೆಯರು, ಮಕ್ಕಳು ಸೇರಿದಂತೆ ಸಾರ್ವಜನಿಕರು ಸಂಕಷ್ಟಕ್ಕೀಡಾಗಿದ್ದಾರೆ. ಕೊಳ್ಳುರ ಗ್ರಾಮದಲ್ಲಿ ಸರಿಯಾದ ಚರಂಡಿ ಇಲ್ಲದ ಕಾರಣ ಮುಖ್ಯ ರಸ್ತೆಗೆ ಕೊಳಚೆ ನೀರು ಹರಿಯುತ್ತಿದೆ. ಈ ದೃಶ್ಯಗಳು ಈ ಹಳ್ಳಿ ಸಮಸ್ಯೆಗಳನ್ನು ಹೊತ್ತು ಮಲಗಿದಂತೆ ಕಂಡು ಬರುತ್ತಿದೆ. ಊರಿನ ಪ್ರತಿಯೊಂದು ಓಣಿಗಳ ಹಾಲತ್ ಖರಾಬ್ ಆಗಿದ್ದರೂ ಸಂಬಂಧಿತ ಅಧಿಕಾರಿಗಳು ಮಾತ್ರ ತಮಗೂ ಇದಕ್ಕೂ ಸಂಬಂಧ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಬಜೆಟ್ ಮಂಡಿಸುವಾಗ ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್ ಸುಂಕವನ್ನು ಗಣನೀಯವಾಗಿ ಕಡಿತಗೊಳಿಸುವುದಾಗಿ ಘೋಷಿಸಿದರು. ಈ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ ಎನ್ನುವಂತೆ ಚಿನ್ನ, ಬೆಳ್ಳಿಯ ಬೆಲೆಯಲ್ಲಿ 4000 ರೂವರೆಗೆ ಇಳಿಕೆಯನ್ನು ಕಂಡಿದೆ. ಹಣಕಾಸು ಸಚಿವರು ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇಕಡಾ 15 ರಿಂದ 6 ಕ್ಕೆ ಇಳಿಸಿದ್ದಾರೆ. ಇದರಲ್ಲಿ ಮೂಲ ಕಸ್ಟಮ್ಸ್ ಸುಂಕ (ಬಿಸಿಡಿ) ಶೇ.10ರಿಂದ ಶೇ.5ಕ್ಕೆ ಮತ್ತು ಕೃಷಿ ಮೂಲಸೌಕರ್ಯ ಅಭಿವೃದ್ಧಿ ಸೆಸ್ (ಎಐಡಿಸಿ) ಶೇ.5ರಿಂದ ಶೇ.1ಕ್ಕೆ ಇಳಿಕೆಯಾಗಿದೆ. ಜಿಯೋಜಿತ್ ಫೈನಾನ್ಷಿಯಲ್ ಸರ್ವೀಸಸ್ನ ಸರಕುಗಳ ಮುಖ್ಯಸ್ಥ ಹರೀಶ್ ವಿ ಮಾತನಾಡಿ, ಕಸ್ಟಮ್ಸ್ ಸುಂಕವನ್ನು ಶೇಕಡಾ 15 ರಿಂದ 6 ಕ್ಕೆ ಇಳಿಸುವುದರಿಂದ ದೇಶೀಯ ಬೆಲೆಗಳು ಕಡಿಮೆಯಾಗಬಹುದು ಮತ್ತು ಬೇಡಿಕೆಯನ್ನು ಹೆಚ್ಚಿಸಬಹುದು. ಈ ಹಿಂದೆ, ಸುಂಕವು 10% ಬಿಸಿಡಿ ಮತ್ತು 5% ಎಐಡಿಸಿಯನ್ನು ಒಳಗೊಂಡಿತ್ತು. ಮಲ್ಟಿ ಕಮೋಡಿಟಿ ಎಕ್ಸ್ಚೇಂಜ್ (ಎಂಸಿಎಕ್ಸ್) ನಲ್ಲಿ ಚಿನ್ನದ ಬೆಲೆ…
ಪಾಕಿಸ್ತಾನಿ ಗಾಯಕ ರಾಹತ್ ಪತೇಹಿ ಆಲಿಖಾನ್ ದುಬೈ ವಿಮಾನ ನಿಲ್ದಾಣದಲ್ಲಿ ಅರೆಸ್ಟ್ ಆಗಿದ್ದಾರೆ. ಅವರ ಮಾಜಿ ಮ್ಯಾನೇಜರ್ ನೀಡಿರುವ ದೂರಿನ ಅನ್ವಯ ಬಂಧಿಸಲಾಗಿದೆ. ಖ್ಯಾತ ಗಾಯಕ ರಾಹತ್ ಫತೇಹ್ ಅಲಿ ಖಾನ್ ಅವರನ್ನು ಅವರ ಮಾಜಿ ಮ್ಯಾನೇಜರ್ ಸಲ್ಮಾನ್ ಅಹ್ಮದ್ ಅವರು ಮಾನನಷ್ಟ ದೂರಿನ ಮೇಲೆ ದುಬೈನಲ್ಲಿ ಬಂಧಿಸಲಾಗಿದೆ ಎಂದು ದುಬೈ ಪೊಲೀಸ್ ಮೂಲಗಳು ತಿಳಿಸಿವೆ. ಗಾಯಕ ಸೋಮವಾರ ಸಂಗೀತ ಸಹಯೋಗ ಕಾರ್ಯಕ್ರಮಕ್ಕಾಗಿ ಲಾಹೋರ್ನಿಂದ ದುಬೈಗೆ ಆಗಮಿಸಿದ್ದರು. ಆದರೆ, ಅವರನ್ನು ವಲಸೆ ಕೇಂದ್ರದಲ್ಲಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು ಮತ್ತು ದೂರಿನ ಮೇಲೆ ವಿಚಾರಣೆ ಮತ್ತು ಔಪಚಾರಿಕ ಆರೋಪಗಳಿಗಾಗಿ ಬುರ್ಜ್ ದುಬೈ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಮೂಲಗಳ ಪ್ರಕಾರ, ರಾಹತ್ ಅವರ ಮಾಜಿ ಮ್ಯಾನೇಜರ್ ಅಹ್ಮದ್ ಅವರ ವಿರುದ್ಧ ದುಬೈ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ವಿವಾದದ ಹಿನ್ನೆಲೆಯಲ್ಲಿ ರಾಹತ್ ಕೆಲವು ತಿಂಗಳ ಹಿಂದೆ ಅಹ್ಮದ್ ಅವರನ್ನು ವಜಾಗೊಳಿಸಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿವಿಶೇಷ ಕಾರ್ಯಚರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್ಇಡಿ ಲೈಟ್ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ. ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಕುಮಾರ್ ಅವರು ಸುತ್ತೋಲೆ ಹೊರಡಿಸಿದ್ದು, ರಸ್ತೆ ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಚರಣೆ ನಡೆಸುವಂತೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ, ಫುಟ್ಬಾತ್ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಚರಣೆ ಮಾಡುವುದು, ಇದರ ಜೊತೆಗೆ ಡಿಫೆಕ್ಟಿವ್ ನಂಬರ್ ಪ್ಲೇಟ್ ಮೇಲೆ ಸಹ ಆಗಸ್ಟ್ 1ರಿಂದ ವಿಶೇಷ ಕಾರ್ಯಚರಣೆ ನಡೆಸಲು ಎಲ್ಲಾ ಘಟಕಗಳಲ್ಲಿ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವುದು ಜೀವಕ್ಕೆ ಅಪಾಯಕಾರಿಯಾಗಿದ್ದು, ಇಂತಹ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ…
ಕಾರಿನಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಸಾಕಷ್ಟಿದೆ. ಆದ್ರೆ ಕಾರಿನಲ್ಲಿ ಏನು ತೆಗೆದುಕೊಂಡು ಹೋಗ್ಬೇಕು, ಏನನ್ನು ತೆಗೆದುಕೊಂಡು ಹೋಗ್ಬಾರದು ಎಂಬ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಕಾರಿನಲ್ಲಿ ಈ ವಸ್ತುಗಳು ಇದ್ದರೆ ಪೋಲಿಸರು ಪ್ರಶ್ನಿಸುತ್ತಾರೆ. ದಂಡ ವಿಧಿಸುತ್ತಾರೆ! ಭಾರತದ ಬಹುತೇಕ ರಾಜ್ಯಗಳಲ್ಲಿ ಕಾರಿನಲ್ಲಿ ತೆರೆದ ಮದ್ಯದ ಬಾಟಲಿ ಸಾಗಿಸುವಂತಿಲ್ಲ. ಕುಡಿದು ವಾಹನ ಚಲಾಯಿಸುವುದನ್ನು ತಡೆಯುವುದು ಈ ಕಾನೂನುಗಳ ಉದ್ದೇಶವಾಗಿದೆ. ಚಾಲಕ ಮದ್ಯಪಾನ ಮಾಡದಿದ್ದರೂ, ತೆರೆದ ಮದ್ಯದ ಬಾಟಲಿಗಳನ್ನು ವಾಹನದಲ್ಲಿ ತೆಗೆದುಕೊಂಡು ಹೋಗಲು ಅನುಮತಿ ನೀಡುವುದಿಲ್ಲ. ಕಾರಿನಲ್ಲಿ ಗನ್ ಅಥವಾ ಇನ್ನಾವುದೇ ಆಯುಧವಿದ್ದರೆ ಟ್ರಾಫಿಕ್ ಪೋಲೀಸರು ನಿಮ್ಮನ್ನು ತಕ್ಷಣ ಪರಿಶೀಲಿಸಬಹುದು. ಶಸ್ತ್ರಾಸ್ತ್ರ ನಿಯಮಗಳು 2016 ರ ಪ್ರಕಾರ, ಅನುಮತಿ ಇದ್ದಲ್ಲಿ ಮಾತ್ರ ಬಂದೂಕನ್ನು ವಾಹನದಲ್ಲಿ ಸಾಗಿಸಬಹುದು. ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದರೆ 7 ರಿಂದ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಭಾರತದಲ್ಲಿ ಟಿಂಟೆಡ್ ಕಿಟಕಿಗಳನ್ನು ನಿಷೇಧಿಸಲಾಗಿದೆ. ಕಾರಿನ ಕಿಟಕಿಗಳು ಹಿಂದಿನ ಮತ್ತು ಮುಂಭಾಗದ ಕನ್ನಡಿಗಳಿಗೆ ಕನಿಷ್ಠ ಶೇಕಡಾ 70ರಷ್ಟು ಗೋಚರತೆಯನ್ನು ಹೊಂದಿರಬೇಕು. ಸೈಡ್ ಮಿರರ್ಗಳಿಗೆ…
ಕನ್ನಡದ ನೇತ್ರಾವತಿ ಧಾರಾವಾಹಿ ನಟ ಸನ್ನಿ ಮಹಿಪಾಲ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಗರ್ಭಿಣಿ ಪತ್ನಿ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಕೆಲ ತಿಂಗಳ ಹಿಂದೆ ಮದುವೆಯಾಗಿದ್ದ ಮಹಿಪಾಲ್ ಇದೀಗ ಮತ್ತೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಪತ್ನಿ ನಿನ್ನೆ ಮಹಿಪಾಲ್ ಮನೆಗೆ ಹೋದಾಗ ಎರಡು ತಿಂಗಳ ಗರ್ಭಿಣಿ ಪತ್ನಿ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಗಲಾಟೆ ಬಳಿಕ 112 ಗೆ ಕರೆ ಮಾಡಿದ ಮಹಿಪಾಲ್ ಬಳಿಕ ತಾನೇ ಕಾರು ಚಲಾಯಿಸಿಕೊಂಡು ಖಾಸಗಿ ಆಸ್ಪತ್ರೆಗೆ ಪತ್ನಿಯನ್ನು ಸೇರಿಸಿದ್ದು, ಸದ್ಯ ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಹೆಚ್ ಎಎಲ್ ಪೊಲೀಸ್ ಠಾಣೆಗೆ ನಟ ಮಹಿಪಾಳ್ ವಿರುದ್ಧ ದೂರು ದಾಖಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್…
ಕೇಂದ್ರ ಸರ್ಕಾರ ಇಡಿ ಸೇರಿದಂತೆ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ವಿಧಾನಸೌಧದ ಹೊರಭಾಗದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ವಿಧಾನಸೌಧದ ಹೊರಭಾಗದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಪ್ರಧಾನಿ ಮೋದಿ ವಿರುದ್ಧ ಧಿಕ್ಕಾರ ಕೂಗಿದರಲ್ಲದೇ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿದರು. ವಾಲ್ಮೀಕಿ ನಿಗಮ ಅಭಿವೃದ್ಧಿ ನಿಗಮ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಹೇಳುವಂತೆ ಅಧಿಕಾರಿಗಳನ್ನು ಒತ್ತಾಯಿಸಲಾಗುತ್ತಿದೆ ಎಂದು ಇಡಿ ವಿರುದ್ಧ ದೂರು ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳನ್ನು ಬಂಧಿಸಿ ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಕರ್ನಾಟಕದಲ್ಲಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರದ ಮೇಲೆ ಬಿಜೆಪಿ ಸರ್ಜಿಕಲ್ ಸ್ಟ್ರೈಕ್ ಮಾಡುತ್ತಿದೆ. ಇಡಿ ಅಧಿಕಾರಿಗಳು ತಾವು ಭಾಗಿಯಾಗದ ಹಗರಣಗಳಲ್ಲಿ ಸಿಎಂ ಮತ್ತು ಡಿಸಿಎಂ ಅವರನ್ನು ಹೆಸರಿಸುವಂತೆ ರಾಜ್ಯ ಸರ್ಕಾರಿ…