Subscribe to Updates
Get the latest creative news from FooBar about art, design and business.
- ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
- ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
- ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
- ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ: ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
- ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ: ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
- ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ
- ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ
- ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
Author: admin
ರಾಜ್ಯದಲ್ಲಿ ನಕಲಿ ಡಾಕ್ಟರ್ ಹಾವಳಿ ಹೆಚ್ಚಾಗಿದ್ದು, ನಕಲಿ ವೈದ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣ ಕಮಕನೂರು ಅವರು, ಕಲಬುರಗಿಯಲ್ಲಿ ನಕಲಿ ವೈದ್ಯರ ಹಾವಳಿ ಜಾಸ್ತಿಯಾಗಿದೆ. ನೂರಾರು ಜನ ನಕಲಿ ವೈದ್ಯರ ಚಿಕಿತ್ಸೆಯಿಂದ ಸತ್ತು ಹೋಗಿದ್ದಾರೆ. ಕಲಬುರಗಿ ಡಿಹೆಚ್ ಒ ಶಾಮೀಲಾಗಿದ್ದಾರೆ. ಹೀಗಾಗಿ ಕೂಡಲೇ ಸಮಿತಿ ರಚನೆ ಮಾಡಿ ನಕಲಿ ವೈದ್ಯರ ಪತ್ತೆ ಹಚ್ಚಿ ಶಿಕ್ಷೆ ಕೊಡಿ ಎಂದು ಒತ್ತಾಯಿಸಿದರು. ಈ ಪ್ರಶ್ನೆಗೆ ದಿನೇಶ್ ಗುಂಡೂರಾವ್ ಉತ್ತರ ನೀಡಿ, ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಜಾಸ್ತಿಯಿದೆ. ನಕಲಿ ವೈದ್ಯರನ್ನ ಹುಡುಕಿ ಅವರ ಕ್ಲಿನಿಕ್ ಬಂದ್ ಮಾಡಿಸುವ ಕೆಲಸ ಮತ್ತು ಅವರ ವಿರುದ್ದ ಕ್ರಮ ಕೈಗೊಳ್ಳುವ ಕೆಲಸ ಮಾಡಿದ್ದೇವೆ. ಇದಲ್ಲದೆ ಅಯುಷ್ ವೈದ್ಯರು ಕ್ಲಿನಿಕ್ ಮುಂದೆ ಗ್ರೀನ್ ಬೋರ್ಡ್ ಹಾಕೋದು ಕಡ್ಡಾಯ ಮಾಡಲಾಗಿದೆ ಎಂದರು. ಇಂಗ್ಲಿಷ್ ಔಷಧಿ ನೀಡುವ ಕ್ಲಿನಿಕ್…
ಮಾಲ್ ಸೇರಿದಂತೆ ಯಾವುದೇ ಸ್ಥಳಗಳಿಗೆ ಭೇಟಿ ನೀಡುವವರ ನಿರ್ದಿಷ್ಟ ವಸ್ತ್ರಗಳಿಗೆ ನಿರ್ಬಂಧ ಹೇರದಂತೆ ಮಾರ್ಗಸೂಚಿಯನ್ನು ಹೊರಡಿಸಲಾಗುವುದು. ಪಂಚೆ ನಮ್ಮ ಸಂಸ್ಕೃತಿ. ಇದಕ್ಕೆ ಪೂರಕವಾಗಿ ನಿಯಮ ತರಲಾಗುವುದು. ಇಡೀ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ನಡೆಯದಂತೆ ನಿಯಮಾವಳಿ ರೂಪಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, “ಮಾಲ್ ಗೆ ಪಂಚೆ ಧರಿಸಿ ಬಂದ ರೈತನನ್ನು ತಡೆದ ವಿಚಾರವಾಗಿ ವಿಧಾನಸಭೆಯಲ್ಲಿ ಪ್ರಸ್ತಾವನೆ ಮೇಲೆ ಚರ್ಚೆ ನಡೆಸಲಾಗಿತ್ತು. ಈ ವಿಚಾರವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಹೇಳಿಕೆ ನೀಡಿದ್ದರು. ನಾನು ಶುಕ್ರವಾರ ಗೈರಾಗಿದ್ದ ಕಾರಣ ಈಗ ನನ್ನ ಹೇಳಿಕೆ ನೀಡುತ್ತಿದ್ದೇನೆ” ಎಂದು ಹೇಳಿದರು. “ಜಿ.ಟಿ ಮಾಲ್ ಗೆ ಪಂಚೆ ಉಟ್ಟುಕೊಂಡು ಬಂದ ರೈತನಿಗೆ ಪ್ರವೇಶ ನೀಡದೆ ಇದ್ದ ಕಾರಣ ಮಾಲ್ ಮಾಲೀಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಯಿತು ಹಾಗೂ ತೆರಿಗೆ ಬಾಕಿ ಇದ್ದ ಕಾರಣ ಬೀಗ ಹಾಕಲಾಯಿತು. ಅವರು ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದಾರೆ. ಈಗ ಚೆಕ್…
ಸರ್ಕಾರಕ್ಕೆ ಏನೇ ಸವಾಲುಗಳು ಎದುರಾದರೂ ಸಹ ಮುಂದಿನ ಮೂರು ವರ್ಷದಲ್ಲಿ ಎಲ್ಲಾ 64 ಹೊಸ ತಾಲೂಕುಗಳಿಗೂ ಸ್ವಂತ ಆಡಳಿತ ಕಚೇರಿ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು. ವಿಧಾನಸಭೆಯಲ್ಲಿ ಸೋಮವಾರ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಅವರ ಗಮನ ಸೆಳೆಯುವ ಪ್ರಶ್ನೆಗೆ ಉತ್ತರಿಸಿದ ಅವರು, “ಹೊಸ ತಾಲೂಕುಗಳಲ್ಲಿ ಎಲ್ಲಾ ಇಲಾಖೆಗಳ ಕಚೇರಿಗಳನ್ನು ಆರಂಭಿಸುವ ಬಗ್ಗೆ ನಾನು ಉತ್ತರ ನೀಡುವುದು ಸಮಂಜವಲ್ಲ. ಮುಖ್ಯಮಂತ್ರಿಯವರ ಕಡೆಯಿಂದ ಉತ್ತರ ಕೊಡಿಸಲು ಪ್ರಯತ್ನಿಸುತ್ತೇನೆ. ಆದರೆ, ಹೊಸ ತಾಲೂಕುಗಳಿಗೆ ಸ್ವಂತ ಆಡಳಿತ ಕಚೇರಿ ನಿರ್ಮಾಣದ ಬಗ್ಗೆ ಸರ್ಕಾರ ಗಂಭೀರವಾಗಿದ್ದು, ಮುಂದಿನ ಮೂರು ವರ್ಷದಲ್ಲಿ ಪೂರೈಸಲಾಗುವುದು. ಹೊಸ ತಾಲೂಕುಗಳು ರಚನೆಯಾಗಿ 6 ವರ್ಷಗಳಾಗಿದ್ದರೂ 14 ತಾಲೂಕುಗಳಲ್ಲಿ ಮಾತ್ರ ಸ್ವಂತ ಕಟ್ಟಡ ನಿರ್ಮಿಸಲಾಗಿದೆ. ಉಳಿದ ತಾಲೂಕುಗಳಿಗೆ ಇನ್ನೂ ಸರ್ಕಾರಿ ಕಟ್ಟಡಗಳು ಮಂಜೂರೇ ಆಗಿಲ್ಲ. ಈ ಬಗ್ಗೆ ನಾನು ಹಿಂದಿನ ಅಧಿವೇಶನದಲ್ಲೇ ಹೇಳಿದ್ದೇನೆ. ಮುಂದಿನ ಮೂರು ವರ್ಷದಲ್ಲಿ ಎಲ್ಲಾ ಹೊಸ ತಾಲೂಕುಗಳಿಗೂ ತಾಲೂಕು ಆಡಳಿತ ಕಚೇರಿ…
ಪ್ರಮುಖ ಪ್ರವಾಸಿ ತಾಣವಾಗಿರುವ ಮುಳ್ಳಯ್ಯನಗಿರಿ ಹಾಗೂ ದತ್ತಪೀಠದ ಪ್ರವೇಶಕ್ಕೆ ಪ್ರವಾಸಿಗರಿಗೆ ಇನ್ನೊಂದು ವಾರ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು. ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮುಳ್ಳಯ್ಯನಗಿರಿ ಭಾಗದಲ್ಲಿ ಗುಡ್ಡ ಕುಸಿತ ಹೆಚ್ಚಾಗಿದೆ. ಜೊತೆಗೆ ಗಿರಿ ಪ್ರದೇಶಕ್ಕೆ ತೆರಳುವ ರಸ್ತೆಗಳಲ್ಲಿ ಕೊರಕಲುಗಳು ಬಿದ್ದಿವೆ. ಹೀಗಾಗಿ ಗುಡ್ಡ ಕುಸಿತವಾದ ಮಣ್ಣನ್ನು ತೆರವುಗೊಳಿಸಲು ಹಾಗೂ ರಸ್ತೆ ದುರಸ್ತಿ ಮಾಡಲು ಇನ್ನೊಂದು ವಾರ ಬೇಕು ಎಂದು ಪಿಡಬ್ಲ್ಯುಡಿ ಅಧಿಕಾರಿಗಳು ತಿಳಿಸಿರುವುದರಿಂದಾಗಿ ಗಿರಿ ಪ್ರದೇಶಕ್ಕೆ ಇನ್ನೊಂದು ವಾರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದರು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಪ್ರವಾಸಿಗರು ಸುರಿಯುತ್ತಿರುವ ಮಳೆಯಲ್ಲಿ ಜಿಲ್ಲೆಗೆ ಪ್ರವಾಸಕ್ಕೆ ಬರಬಾರದು ಎಂದು ಮನವಿ ಮಾಡುವುದಾಗಿ ತಿಳಿಸಿದರು. ಚಾರ್ಮಾಡಿ ಘಾಟಿಯಲ್ಲಿ ಸಂಚಾರ ನಿಯಂತ್ರಣ: ಸಂಪಾಜೆ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆಗಿರುವುದರಿಂದ ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಶಿರಡಿ ಘಾಟಿಯಲ್ಲಿ ಹಗಲು ಸಂಚಾರಕ್ಕೆ ಅವಕಾಶವಿರುವುದೆ. ಹೀಗಾಗಿ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ವೇಳೆ ವಾಹನಗಳ…
ಕಿರುತೆರೆ ನಟಿ, ಬಿಗ್ ಬಾಸ್ ಸ್ಪರ್ಧಿ, ನಟ ಆಲಿಗೋನಿಯ ಪ್ರಿಯತಮೆ ಜಾಸ್ಮಿನ್ ಭಾಸಿನ್ ಅವರ ಕಣ್ಣಿಗೆ ಹಾನಿ ಉಂಟಾಗಿದೆ. ಕಾಂಟ್ಯಾಕ್ಟ್ ಲೆನ್ಸ್ ಗಳಿಂದ ನಟಿಯ ಕಾರ್ನಿಯಾ ಹಾನಿಗೊಳಗಾಗಿದೆ, ಇದರಿಂದಾಗಿ ಅವರು ಏನನ್ನೂ ನೋಡಲು ಸಾಧ್ಯವಾಗುತ್ತಿಲ್ಲ ಎಂದು ವರದಿಯಾಗಿದೆ. ಕಿರುತೆರೆಯ ಖ್ಯಾತ ನಟಿ ಜಾಸ್ಮಿನ್ ಭಾಸಿನ್ ಬಗ್ಗೆ ದೊಡ್ಡ ಮಾಹಿತಿಯೊಂದು ಬೆಳಕಿಗೆ ಬಂದಿದೆ. ನಟಿಯ ಕಣ್ಣಿಗೆ ಗಾಯವಾಗಿದ್ದು, ಏನನ್ನೂ ನೋಡಲು ಸಾಧ್ಯವಾಗುತ್ತಿಲ್ಲ. ಮಾಧ್ಯಮ ವರದಿಗಳ ಪ್ರಕಾರ, ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಹೊರಡಲುನುವಾದಾಗ ಕಣ್ಣಿಗೆ ಹಾಕಿದ್ದ ಕಾಂಟ್ಯಾಕ್ಟ್ ಲೆನ್ಸ್‌ನಿಂದ ಕಾರ್ನಿಯಾ ಹಾನಿಯಾಗಿದೆ ಎಂದು ವರದಿಯಾಗಿದೆ. ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದು, ಎರಡೂ ಕಣ್ಣುಗಳಿಗೆ ಬ್ಯಾಂಡೇಜ್ ಹಾಕಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಕಾಂಟ್ಯಾಕ್ಟ್ ಲೆನ್ಸ್ ಧರಿಸಿ ನವದೆಹಲಿಗೆ ತೆರಳಿದ್ದರು. ಅಂದಿನಿಂದ ಅವರು ಕಣ್ಣಿನ ಸಮಸ್ಯೆ ಪ್ರಾರಂಭವಾಗಿದೆ. ವರದಿಗಳ ಪ್ರಕಾರ, ಆಕೆಗೆ ಒಂದು ಹಂತದಲ್ಲಿ ಕಣ್ಣಿನ ನೋವು ತುಂಬಾ ಹೆಚ್ಚಾಗಿದ್ದು, ನಂತರ ಏನೂ ಕಾಣದೇ, ಕತ್ತಲೆ ಆವರಿಸಿದ ಹಾಗೆ ಆಗಿತ್ತು ಎಂದು ಹೇಳಲಾಗಿದೆ. ಕಣ್ಣಿನ ತಜ್ಞ ಪರೀಕ್ಷೆಯ ನಂತರ…
ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಯಲ್ಲಿ ಭಾಗಿಯಾಗುವುದನ್ನು ನಿಷೇಧಿಸಿ ಜಾರಿಗೊಳಿಸಲಾಗಿದ್ದ ಕಾನೂನನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆರವುಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಬರೋಬ್ಬರಿ 58 ವರ್ಷಗಳ ಕಾನೂನು ರದ್ದಾದಂತೆ ಆಗಿದೆ. ಆದರೆ ಈ ಬಗ್ಗೆ ಪರ ವಿರೋಧಗಳು ಜೋರಾಗಿಯೇ ನಡೆಯುತ್ತಿದೆ. ಇದರ ನಡುವೆ ಅಂದು ಇಂದಿರಾಗಾಂಧಿ ಯಾಕೆ ಈ ಕಾನೂನನ್ನು ಜಾರಿಗೊಳಿಸಿದರು, ಇದರ ಉದ್ದೇಶ ಏನಾಗಿತ್ತು ಎಂಬ ಚರ್ಚೆಗಳು ನಡೆಯುತ್ತಿವೆ. ಸರ್ಕಾರಿ ನೌಕರರು ಆರೆಸ್ಸೆಸ್ ಚಟುವಟಿಕೆಗಳಲ್ಲಿ ಭಾಗವಹಿಸಬಾರದು ಮತ್ತು ಅದರ ಜೊತೆ ಸಂಪರ್ಕ ಇಟ್ಟುಕೊಳ್ಳಬಾರದು ಎಂಬುದು 1966ರಲ್ಲಿ ಇಂದಿರಾ ಗಾಂಧಿ ಆಡಳಿತಾವಧಿಯಲ್ಲಿ ಮಾಡಲಾಗಿದ್ದ ಆದೇಶ. ಇದರ ಉದ್ದೇಶ ಏನೆಂದು ನೋಡ ಹೊರಟಾಗ ನಮಗೆ ಕಾಣಸಿಗುವುದು ಆ ಒಂದು ಘಟನೆ. ಏನದು? 1966ರ ನ 7ರಂದು ಸಂಸತ್ ಮುಂಭಾಗದಲ್ಲಿ ಗೋಹತ್ಯೆ ವಿರುದ್ಧ ಭಾರೀ ದೊಡ್ಡ ಪ್ರತಿಭಟನೆ ನಡೆದಿತ್ತು. ಲಕ್ಷಾಂತರ ಜನರನ್ನು ಆರ್‌ಎಸ್‌ಎಸ್ – ಜನಸಂಘ ಸೇರಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ಆಯೋಜಿಸಿತ್ತು. ಈ ವೇಳೆ ನಡೆದ ಗೋಲಿಬಾರ್‌ನಲ್ಲಿ…
ಕನ್ನಡದ ಪ್ರಸಿದ್ಧ ಜಾನಪದ ಗಾಯಕ, ಲಾವಣಿ, ತತ್ವಪದಗಳ ಹರಿಹಾರ ಆಲೂರು ನಾಗಪ್ಪ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಗಿನಜಾವ ಆಲೂರು ನಾಗಪ್ಪ ನಿಧನರಾಗಿದ್ದಾರೆ. ಪ್ರಸಿದ್ದ ನಿರೂಪಕಿ ಕನ್ನಡತಿ ದಿವ್ಯ ಆಲೂರ್ ಅವರ ತಂದೆಯಾದ ನಾಗಪ್ಪನವರ ಅಂತ್ಯ ಕ್ರಿಯೆ ಇಂದು ನಡೆಯಲಿದೆ. ಸಾವಿರಾರು ಲಾವಣಿ, ತತ್ವಪದಗಳ ಹರಿಕಾರ .. ವಿಶಿಷ್ಟ ಧ್ವನಿಯ ಗಾಯಕ, ನಾಡಿನಾದ್ಯಂತ ಸಹಸ್ರಾರು ಧ್ವನಿ ಮುದ್ರಿಕೆಗಳನ್ನು ಹೊರತಂದಿದ್ದಾರೆ. ಇಂದು ಗವಿಪುರಂ ಗುಟ್ಟಳ್ಳಿಯ ಬನ್ನಿಮಹಾಂಕಾಳಮ್ಮ ದೇವಸ್ಥಾನದ ಹತ್ತಿರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅಳಬ್ಯಾಡ ತಂಗಿ ಅಳಬ್ಯಾಡ, ಕನ್ನಿಕೇರಿ ಹುಡುಗಿಯೊಬ್ಬಳು, ನೀನು ಮದುಕಿಯಂಗೆ ಮುಸುಕಾಕೊಂಡು, ಬೆಂಗಳೂರ್ ಹುಡ್ಗ ಬಂದವನಂತ ಬಗ್ಗಿ ಬಗ್ಗಿ ನೋಡ್ತೀಯಲ್ಲೇ, ಹೆತ್ತ ತಾಯಿ ಋಣವ ತೀರಿಸೋ, ಎಚ್ಚರಾಗು ಕನ್ನಡಿಗ, ತವರಿಂದ ಕಳಿಸಿ ನನ್ನ ಮರಿಬೇಡ ಅಣ್ಣಯ್ಯ, ಇವು ಆಲೂರು ನಾಗಪ್ಪ ಅವರ ಪ್ರಸಿದ್ಧ ಹಾಡುಗಳು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ನೋಡ ನೋಡುತ್ತಿದ್ದಂತೆಯೇ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದು ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ದೇವದಾನ ಎಸ್ಟೇಟ್ ಬಳಿ ಈ ಘಟನೆ ನಡೆದಿದೆ. ಘಟನೆಯಿಂದ ಕಾರಿನ ಮುಂಭಾಗ ಜಖಂ ಆಗಿದ್ದು, ವಿದ್ಯುತ್ ತಂತಿಗಳ ಮೇಲೆಯೇ ಬೃಹತ್ ಮರ ಬಿದ್ದ ಕಾರಣ ತಂತಿಗಳಿಗೂ ಹಾನಿಯಾಗಿವೆ. ಚಲಿಸುತ್ತಿದ್ದ ಕಾರಿನ ಬೋನೆಟ್ ಮೇಲೆ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅದೃಷ್ಟವಶಾತ್ ಒಂದೇ ಒಂದು ಅಡಿ ದೂರ ಬಿದ್ದ ಕಾರಣ ಇಬ್ಬರ ಪ್ರಾಣ ಉಳಿದಿದೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಹಲವಾರು ಸಾವು ನೋವುಗಳು ಸಂಭವಿಸಿವೆ. ಮಲೆನಾಡಿನಲ್ಲಿ ವರ್ಷಧಾರೆ ಮುಂದುವರಿದಿದ್ದು, ನದಿ, ಹಳ್ಳಗಳು ತುಂಬಿ ಹರಿಯುತ್ತಿವೆ. ಶಿವಮೊಗ್ಗದ ವಿಶ್ವ ಪ್ರಸಿದ್ಧ ಜೋಗ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ. ಜೋಗ ಜಲಪಾತ ವೀಕ್ಷಣೆಗೆಂದು ಆಗಮಿಸಿದ್ದ ಬೆಂಗಳೂರಿನಿಂದ ಯುವಕನೋರ್ವ ಜಲಪಾತದ ಬಳಿ ನಾಪತ್ತೆಯಾಗಿದ್ದಾನೆ. ಮೂಲತಃ ಗದಗದ ಸದ್ಯ ಬೆಂಗಳೂರಿನಲ್ಲಿ ಟೀ ಅಂಗಡಿ ನಡೆಸುತ್ತಿರುವ ಆನಂದ್ (24) ಎಂಬಾತ ನಾಪತ್ತೆಯಾಗಿದ್ದಾನೆ. ಈತ ಜೋಗ ಜಲಪಾತ ವೀಕ್ಷಣೆಗೆ ಜುಲೈ 15ರಂದು ಆಗಮಿಸಿದ್ದ . ಯಾತ್ರಿ ನಿವಾಸದ ಸೀತಾಕಟ್ಟೆ ಬ್ರಿಡ್ಜ್ ಬಳಿಯಿಂದ ಬೇಲಿ ದಾಟಿ, ಜಲಪಾತದ ಬಳಿಗೆ ತೆರಳಿದ್ದಾನೆ ಬಳಿಕ ಆನಂದ್ ನಾಪತ್ತೆಯಾಗಿದ್ದು, ಕಳೆದ 7 ದಿನಗಳಿಂದ ಆತಗಾಗಿ ಕಾರ್ಗಲ್ ಠಾಣೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್…
ಮೈಕ್ರೊಸಾಫ್ಟ್ ಟೆಕ್ಕಿಯೊಬ್ಬರು ತಮ್ಮ ಒಂಟಿತನ ನೀಗಿಕೊಳ್ಳಲು ವಾರಾಂತ್ಯದಲ್ಲಿ ಆಟೋ ಚಲಾಯಿಸುತ್ತಿದ್ದು, ತಂತ್ರಜ್ಞಾನ ಬೆಳೆದಷ್ಟೂ, ಮಾನಸಿಕ ಖಿನ್ನತೆ, ಒಂಟಿತನದ ಪ್ರಕರಣಗಳೂ ಏರಿಕೆಯಾಗುತ್ತಿರುವುದು ಶೋಚನೀಯ. ಜನರನ್ನು ಹತ್ತಿರ ಮಾಡಬೇಕಿದ್ದ ಸಂಪರ್ಕ ಸಾಧನಗಳೇ ಜನರನ್ನು ದೂರ ಮಾಡುತ್ತಿವೆ. ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ವೆಂಕಟೇಶ್ ಗುಪ್ತ ಎಂಬ ಟೆಕ್ಕಿಯೊಬ್ಬರು, “ವಾರಾಂತ್ಯದಲ್ಲಿ ತಮ್ಮ ಒಂಟಿತನವನ್ನು ನೀಗಿಕೊಳ್ಳಲು ಕೋರಮಂಗಲದ ಮೈಕ್ರೊಸಾಫ್ಟ್ ಸಂಸ್ಥೆಯಲ್ಲಿ ಎಂಜಿನಿಯರ್ ಆಗಿರುವ 35 ವರ್ಷದ ಸಾಫ್ಟ್‌ವೇರ್ ಸಿಬ್ಬಂದಿಯೊಬ್ಬರು ಆಟೋ ಚಲಾಯಿಸುತ್ತಿರುವುದನ್ನು ಕಂಡೆ” ಎಂದು ಬರೆದುಕೊಂಡಿದ್ದಾರೆ. ಹಲವರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ವಿದೇಶಗಳಲ್ಲಿ ವಾರಾಂತ್ಯದ ದಿನಗಳಲ್ಲಿ ವೃತ್ತಿಪರರು ಊಬರ್ ವಾಹನಗಳನ್ನು ಚಲಾಯಿಸುವುದು ಸಾಮಾನ್ಯ ಸಂಗತಿಯಾಗಿದೆ. ಇದು ಹಣದ ಗಳಿಕೆಯನ್ನು ಮೀರಿದ್ದು ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA