Subscribe to Updates
Get the latest creative news from FooBar about art, design and business.
- ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
- ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
- ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
- ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ: ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
- ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ: ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
- ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ
- ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ
- ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
Author: admin
ಮಹಾರಾಷ್ಟ್ರದ ಪಂಡರಾಪುರಕ್ಕೆ ತೆರಳಿದ್ದ ಬೆಳಗಾವಿಯ ವಿಠ್ಠಲ ಭಕ್ತರ ಮೇಲೆ ಕೀಡಿಗೇಡಿಗಳ ತಂಡವೊಂದು ಮಾರಣಾಂತಿಕವಾಗಿ ಹಲ್ಲೆಗೈದಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಿರಜ್ ತಾಲೂಕಿನ ಮಾಲಗಾಂವ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಸುರೇಶ್ ರಾಜುಕರ್, ಪರಶುರಾಮ ಜಾಧವ್, ಲಾರಿ ಚಾಲಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಷಾಢ ಏಕಾದಶಿ ನಿಮಿತ್ತ ತುರಮುರಿ ಗ್ರಾಮದ ಭಕ್ತರು ಬಾಡಿಗೆ ಲಾರಿ ಮಾಡಿಕೊಂಡು ಪಂಡರಾಪುರಕ್ಕೆ ತೆರಳಿದ್ದರು. ಪಂಡರಾಪುರ ವಿಠ್ಠಲನ ದರ್ಶನ ಪಡೆದು ಬೆಳಗಾವಿಗೆ ವಾಪಸ್ ಬರುತ್ತಿದ್ದ ವೇಳೆ ದಾರಿ ತಪ್ಪಿದ್ದಾರೆ. ಬೆಳಗಾವಿಗೆ ಬದಲು ಮಾಲಗಾಂವ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಲಾರಿಗೆ ಕಾರು ಅಡ್ಡ ಬಂದಿದ್ದು, ಪಾನಮತ್ತನಾಗಿದ್ದ ಕಾರಿನ ಚಾಲಕ ಭಕ್ತರೊಂದಿಗೆ ಕಿರಿಕ್ ಮಾಡಿದ್ದಾನೆ. ಬಳಿಕ ಮೊಬೈಲ್ ಕರೆ ಮಾಡಿ ಸ್ಥಳಕ್ಕೆ ಪುಂಡರನ್ನು ಕರೆಸಿಕೊಂಡು ಭಕ್ತರ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಮೂವರು ವಿಠ್ಠಲ ಭಕ್ತರು ಗಾಯಗೊಂಡಿದ್ದು, ಸದ್ಯ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಮಿರಜ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ…
ತುಮಕೂರು: ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಕೆಲಸ ಮಾಡುವ ಶಕ್ತಿ ಸಿಗಬೇಕು ಹಾಗೂ ಸೋಮವಾರದಿಂದ ಕೇಂದ್ರ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು ಯಾವುದೇ ಗೊಂದಲಗಳು ನಿರ್ಮಾಣವಾಗದಿರಲೆಂದು ಆಶಿಸಿ, ತುಮಕೂರಿನ ಸಿದ್ದಗಂಗಾ ಮಠಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ಬಳಿ ಪ್ರಾರ್ಥನೆ ಸಲ್ಲಿಸಿದರು. ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಶಿವಕುಮಾರ ಶ್ರೀಗಳು ಇದ್ದಾಗ ಮೋದಿ ಅವರು ಮಠಕ್ಕೆ ಬರ್ತಿದ್ರು, ಆಶೀರ್ವಾದ ಪಡೆಯುತ್ತಿದ್ರು. ಸ್ವಾಮೀಜಿಗಳು ಬಹಳ ಖುಷಿಪಡ್ತಿದ್ರು. ದೇಶಕ್ಕಾಗಿ ದುಡಿಯುವಂತಹ ಒಬ್ಬ ಪ್ರಧಾನಿ ನಮಗೆ ಸಿಕ್ಕಿದ್ದಾರೆ ಅಂತ. ಇವತ್ತು ಅವರು ನಮ್ಮ ಮುಂದೆ ಇಲ್ಲ, ಆದರೆ ಅವರ ಆಶೀರ್ವಾದ ಅವರ ಪ್ರೇರಣೆ ಎಂದರು. ಅವರ ಶಕ್ತಿ ನಮ್ಮೆಲ್ಲರಿಗೂ ದೇಶದ ಕೆಲಸ ಮಾಡೋದಿಕ್ಕೆ ಪ್ರೇರಣೆ ಕೊಡುತ್ತೆ, ಶಕ್ತಿ ಕೊಡುತ್ತೆ ಎಂಬ ವಿಶ್ವಾಸ ನನಗಿದೆ. ಆ ರೀತಿಯಾಗಿ ನಾನು ಸ್ವಾಮೀಜಿಗಳ ಗದ್ದುಗೆ ಮುಂದೆ ಪ್ರಾರ್ಥನೆ ಮಾಡಿದ್ದೇನೆ ಎಂದರು. ನಮ್ಮ ಸರ್ಕಾರದಲ್ಲಿ ಗುಡಿ ಕೈಗಾರಿಕೆ ,…
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. 2025ರ ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕಾರ್ಮಿಕರ ಮಾಸಿಕ ವೇತನ ರೂ.35,000/- ಗಿಂತ ಮೀರಿರಬಾರದು. ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು. ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾಥಿಗಳು ಆನ್ ಲೈನ್ ಮುಖಾಂತರ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್ ಸೈಟ್ ನಲ್ಲಿ www.klwbapps.karnataka.gov.in ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಶೇ.45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ,…
ಔರಾದ್: ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಉಸ್ತುವಾರಿ ಸಮಿತಿ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸವ೯ ಸದಸ್ಯರ ಸಹಾನುಮತದಿಂದ ಅಧ್ಯಕ್ಷರಾಗಿ ಮಹೇಶ ಚಾಂಬೋಳೆ ಹಾಗೂ ಉಪಾಧ್ಯಕ್ಷರಾಗಿ ಸಾವಿತ್ರಿ ರಾಜಕುಮಾರ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಪತರಾವ, ಗ್ರಾ.ಪಂ. ಸದಸ್ಯರ ಕರಬಸಪ್ಪಾ ಸೊರಾಳೆ, ನಜೀರ್ ಚಾಯುಸ್, ಮಾಜಿ ಗ್ರಾಪಂ ಅಧ್ಯಕ್ಷ ದೇವಿದಾಸ ಧೋಳೆ, ಗ್ರಾಮಸ್ಥರಾದ ಎಮ್ ಡಿ. ನಯೂಮ್, ಸಂಜುಕುಮಾರ ಮುಗಟೆ, ವಿನೋದ ರಡ್ಡಿ, ಪರಮೇಶ್ವರ್ ಮೇತ್ರೆ ಹಾಗೂ ಶಾಲೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಪಾಲಕರು ಸೇರಿದಂತೆ ಪೋಲಿಸ್ ಸಿಬ್ಬಂದಿಗಳು ಉಪಸ್ಥಿತಿಯಲ್ಲಿ ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಔರಾದ: ಸರಕಾರ ಮತ್ತು ಸಮಾಜದ ಕೊಂಡಿಯಾಗಿ ಪತ್ರಿ ಕೆಗಳು ಕೆಲಸ ಮಾಡುತ್ತಿವೆ ಅದೇ ಕಾರಣಕ್ಕೆ ಮಾಧ್ಯಮಗಳ ಪಾತ್ರ ಸಮಾಜದಲ್ಲಿ ಬಹುಮುಖ್ಯವಾಗಿದೆ ಎಂದು ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಹೇಳಿದರು. ಔರಾದ ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಕನಾ೯ಟಕ ಕಾಯ೯ನಿರತಪತ್ರ ಕತ೯ರ ಸಂಘದಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಜನರಲ್ಲಿ ಆತ್ಮವಿಶ್ವಾಸ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ಪತ್ರಿಕೆಗಳು ಸಮಾ ಜವನ್ನು ಕಾಡುತ್ತಿರುವ ಭ್ರಷ್ಟಾಚಾರ, ಮೂಢನಂಬಿಕೆಗಳ ವಿರುದ್ಧ ಜನಜಾಗೃತಿ ಉಂಟು ಮಾಡುವಲ್ಲಿ ಪ್ರಮುಖ ಪಾತ್ರವಹಿಸಿವೆ ಎಂದರು. ಔರಾದ ತಾಲೂಕಿನ ಪತ್ರಕರ್ತರು ಗಡಿ ಭಾಗದ ಸಮಸ್ಯೆಗಳ ಬಗ್ಗೆ ಸುದ್ದಿಗಳು ಮಾಡುವ ಮೂಲಕ ಜನರ ಸಮಸ್ಯೆಗೆ ಸ್ಪಂದಿಸುತ್ತಿದ್ದಾರೆ ಎಂದು ಪತ್ರಕತ೯ರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಸದ ಸಾಗರ ಖಂಡ್ರೆ ಮಾತನಾಡಿ. ಪತ್ರಕತ೯ರ ವರದಿ ಜನರ ಸಂವೇದನೆಗಳೊಂದಿಗೆ ಇರುವುದ ರಿಂದ ಸಮಾಜದಲ್ಲಿನ ಸೂಕ್ಷ್ಮ ತೆಗಳ ಬಗ್ಗೆ ಒಳ ನೋಟವಿರುತ್ತದೆ. ಪ್ರಶಸ್ತಿ ಪ್ರದಾನ ಈ ವೇಳೆ…
ಸರಗೂರು: ಸ್ವಾಧೀನನುಭವದಲ್ಲಿರುವ ಜಮೀನಿಗೆ ರೈತರು ಸರ್ಕಾರದ ಆದೇಶದಂತೆ ನಮೂನೆ 50, 53, 57 ನೇ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ಸಾಗುವಳಿ ಚೀಟಿ ವಿತರಿಸುವಂತೆ ಒತ್ತಾಯ ಮಾಡುತ್ತಾ ಬಂದಿದ್ದರೂ ಕಂದಾಯ ಇಲಾಖೆ ಅಧಿಕಾರಿಗಳು ಸಾಗುವಳಿ ಪತ್ರ ನೀಡುತ್ತಿಲ್ಲ ಎಂದು ಹಾದನೂರು ಗ್ರಾ.ಪಂ. ಸದಸ್ಯ ಹಾಗೂ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ಸದಸ್ಯ ಯಶವಂತಪುರ ಶಿವಲಿಂಗಯ್ಯ ಆಗ್ರಹಿಸಿದರು. ತಾಲ್ಲೂಕಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ದಂದು ಕರ್ನಾಟಕ ಭೂ ಹಕ್ಕುದಾರರ ವೇದಿಕೆ ವತಿಯಿಂದ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಂಘಟನೆಯು ಕಳೆದ 10 ವರ್ಷಗಳಿಂದ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸುವಂತೆ ಹೋರಾಟ ನಡೆಸುತ್ತಾ ಬಂದಿದೆ. ಕಳೆದ 50 ಮತ್ತು 60 ವರ್ಷಗಳಿಂದ ರೈತರು ಭೂಮಿಯನ್ನು ಉಳುಮೆ ಮಾಡಿಕೊಂಡು ಬಂದರು ಸಹ ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾಗುವಳಿ ಚೀಟಿ ವಿತರಣೆ ಮಾಡದೇ ಹಿಂದೇಟು ಹಾಕುತ್ತಿದ್ದಾರೆ ಎಂದರು. ಸಾಗುವಳಿ ಚೀಟಿ ಸಿಗದೆ ಇರುವುದರಿಂದ ಪ್ರಕೃತಿ ವಿಕೋಪದಿಂದ ಕಾಡುಪ್ರಾಣಿಗಳಿಂದ ಬೆಳೆ ನಷ್ಟವಾದಾಗ, ಪರಿಹಾರ ಪಡೆಯಲು ಸಾಧ್ಯವಾಗದೆ…
ಪಾವಗಡ: ಶುಕ್ರವಾರ ಪಾವಗಡ ತಾಲೂಕಿನ ಬಲ್ಲೇನಹಳ್ಳಿ ಗ್ರಾಮದಲ್ಲಿ ಸ್ವಚ್ಛತೆ ಕೊರತೆಯಿಂದ ಡೆಂಗ್ಯೂ ಹೊರಡುವ ಬೀದಿ ಹೆಚ್ಚಾಗಿರುವ ಬಗ್ಗೆ ನಮ್ಮ ತುಮಕೂರು ವಾಹಿನಿ ವರದಿಯ ಬೆನ್ನಲ್ಲೇ, ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತಕ್ಷಣದಲ್ಲಿ ಸಮಸ್ಯೆ ಪರಿಹಾರಕ್ಕೆ ಸೂಚನೆ ನೀಡಿದ್ದಾರೆ. ವರದಿಯ ಬೆನ್ನಲ್ಲೇ ಪಾವಗಡ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಾನಕಿ ರಾಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಮಸ್ಯೆ ಬಗೆಹರಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಗ್ರಾಮಸ್ಥರ ಕೆಲ ಸಮಸ್ಯೆಗಳನ್ನ ಆಲಿಸಿ ಬಗೆಹರಿಸುವುದಾಗಿ ಇದೇ ವೇಳೆ ಅವರು ಭರವಸೆ ನೀಡಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರ ಹೆಸರುಗಳ ಮುಂದೆ ಸೂಚಿಸಲಾದ ಹುದ್ದೆ ಮತ್ತು ಸ್ಥಳಗಳಿಗೆ ವರ್ಗಾಯಿಸಿ/ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ. 1.) ಶಾಮಸುಂದರ ಎಸ್ ಅಡಿಗ. ಹಿರಿಯ ಉಪನ್ಯಾಸಕರು, ಡಯಟ್, ಹಾವೇರಿ,ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ರಾಣೇಬೆನ್ನೂರು, ಹಾವೇರಿ ಜಿಲ್ಲೆ (ಶ್ರೀ ಎಂ.ಹೆಚ್. ಪಾಟೀಲ್ ಇವರ ಜಾಗಕ್ಕೆ). 2.) ರಾಜೇಗೌಡ, ಹಿರಿಯ ಸಹಾಯಕ ನಿರ್ದೇಶಕರು, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬೇಲೂರು ತಾಲ್ಲೂಕು, ಹಾಸನ ಜಿಲ್ಲೆ (ಶ್ರೀ ಕೆ.ಪಿ ನಾರಾಯಣ ಇವರ ವರ್ಗಾವಣೆಯಿಂದ ತೆರವಾದ ಹುದ್ದೆಗೆ). 3.) ರಮೇಶ್ ಕೆ.ಸಿ.ಕಾರ್ಯಕ್ರಮ ಅಧಿಕಾರಿ, ರಾಜ್ಯ ಯೋಜನಾ ನಿರ್ದೇಶಕರ ಕಛೇರಿ, ಸಮಗ್ರ ಶಿಕ್ಷಣ ಕರ್ನಾಟಕ ಬೆಂಗಳೂರು ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ (ಶ್ರೀ ತಿಮ್ಮಯ್ಯ ಇವರ ಜಾಗಕ್ಕೆ). 4.) ತಿಮ್ಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ.…
ಕೇಂದ್ರ ಸಚಿವ ವಿ.ಸೋಮಣ್ಣ ಅವರು ತಮ್ಮ 72ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಪತ್ನಿ ಶೈಲಜಾ ಮತ್ತು ಮಗಳು ದಿವ್ಯಾ ಜೊತೆಯಲ್ಲಿ ಪೂಜೆ ಸಲ್ಲಿಸಿದರು. ನಂತರ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ನನಗೆ ಟ್ವೀಟ್ ಮಾಡಿ ದೇಶದ ವ್ಯವಸ್ಥೆಗೆ ಭದ್ರಬುನಾದಿ ಹಾಕಲು ಸಂಕಲ್ಪ ತೊಡುವಂತೆ ಕರೆ ನೀಡಿದ್ದಾರೆ. ದೇಶದ ಅಭಿವೃದ್ಧಿಗೆ ನಿಮ್ಮ ಬುದ್ಧಿಶಕ್ತಿಯಿಂದ ಯಾವುದೇ ಸಮಸ್ಯೆಗಳು ಎದುರಾಗದಂತೆ ಸಮಸ್ಯೆಗಳನ್ನು ನಿವಾರಿಸುವಂತೆ ತಿಳಿಸಿದ್ದಾರೆ ಎಂದರು. ಅಲ್ಲದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇಂದು ಬೆಳಗ್ಗೆ ದೂರವಾಣಿ ಕರೆ ಮಾಡಿ ನಿಮಗೆ 73 ವರ್ಷವಾದರೂ ಕೂಡ ಜನಪರವಾಗಿ ಕೆಲಸ ಮಾಡುವಂತಹ ಶಕ್ತಿ ಹೊಂದಿದ್ದೀರಾ ಎಂದು ತಿಳಿಸಿ ಶುಭಾಶಯ ಕೋರಿದರು ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ…
ಗೋವಾದಿಂದ ನೈಋತ್ಯಕ್ಕೆ ಸುಮಾರು 102 ನಾಟಿಕಲ್ ಮೈಲಿ ದೂರದಲ್ಲಿರುವ ಕಂಟೈನರ್ ಸರಕು ವ್ಯಾಪಾರಿ ಹಡಗಿನಲ್ಲಿ ಶುಕ್ರವಾರ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಮುಂದ್ರಾದಿಂದ ಶ್ರೀಲಂಕಾದ ಕೊಲಂಬೋಗೆ ತೆರಳುತ್ತಿದ್ದ ಹಡಗಿನಲ್ಲಿ ಸ್ಫೋಟ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡಿದೆ. ಇತ್ತೀಚಿನ ವರದಿಗಳ ಪ್ರಕಾರ, ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ಹಡಗು ಸ್ಥಳಕ್ಕೆ ತಲುಪಿದ್ದು, ಸವಾಲಿನ ಸಮುದ್ರ ಪರಿಸ್ಥಿತಿಗಳು ಮತ್ತು ಕೆಟ್ಟ ಹವಾಮಾನದ ಹೊರತಾಗಿಯೂ ಅಗ್ನಿಶಾಮಕ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಬೆಂಕಿಯ ನಿಖರ ಕಾರಣ ಇನ್ನೂ ತಿಳಿದಿಲ್ಲ, ಆದರೆ ಪ್ರಾಥಮಿಕ ವರದಿಗಳು ಅನೇಕ ಸ್ಫೋಟಗಳು ಪರಿಸ್ಥಿತಿಯನ್ನು ಉಲ್ಬಣಗೊಳಿಸಿವೆ, ಹಡಗು ಮತ್ತು ಅದರ ಸಿಬ್ಬಂದಿಗೆ ತೀವ್ರ ಅಪಾಯವನ್ನುಂಟುಮಾಡಿದೆ ಎಂದು ಸೂಚಿಸುತ್ತವೆ. ಹಡಗು ಅಂತರರಾಷ್ಟ್ರೀಯ ಕಡಲ ಅಪಾಯಕಾರಿ (ಐಎಂಡಿಜಿ) ಸರಕುಗಳನ್ನು ಸಾಗಿಸುತ್ತಿದೆ ಎಂದು ವರದಿಯಾಗಿದೆ, ಹಡಗಿನ ಫಾರ್ವರ್ಡ್ ವಿಭಾಗದಲ್ಲಿ ಸ್ಫೋಟಗಳು ಸಂಭವಿಸಿವೆ. ವರದಿಗಳ ಪ್ರಕಾರ, ಐಸಿಜಿ ಹಡಗು ಭಯಭೀತರಾದ ಸಿಬ್ಬಂದಿಗೆ ಅವರ ಸುರಕ್ಷತೆಯ ಬಗ್ಗೆ ಭರವಸೆ ನೀಡಿತು. ಇದಲ್ಲದೆ, ಅಗ್ನಿಶಾಮಕ ಪ್ರಯತ್ನಗಳನ್ನು ಬೆಂಬಲಿಸಲು ಗೋವಾದಿಂದ ಇನ್ನೂ ಎರಡು ಐಸಿಜಿ ಹಡಗುಗಳನ್ನು ಕಳುಹಿಸಲಾಗಿದೆ. ಬೆಂಕಿಯನ್ನು…