Subscribe to Updates
Get the latest creative news from FooBar about art, design and business.
- ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
- ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
- ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ: ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
- ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ: ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
- ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ
- ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ
- ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
- ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
Author: admin
ಆನೆಗಳ ವಿದ್ಯುದಾಘಾತಕ್ಕೆ ಸಂಬಂಧಿಸಿದಂತೆ ವಿದ್ಯುತ್ ಸರಬರಾಜು ಕಂಪನಿಗಳಿಗೆ ನೋಟಿಸ್ ನೀಡುವಂತೆ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಆಗಸ್ಟ್ 12 ರೊಳಗೆ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ಈ ಕಂಪನಿಗಳಿಗೆ ನಿರ್ದೇಶನ ನೀಡಿತು. ಅಶ್ವತ್ಥಾಮ ಎಂಬ ಆನೆಯ ಸಾವಿನ ಬಗ್ಗೆ ಮಾಧ್ಯಮ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಜೂನ್ 14, 2024 ರಂದು ದಾಖಲಾದ ಸ್ವಯಂಪ್ರೇರಿತ ಪಿಐಎಲ್ ಅನ್ನು ನ್ಯಾಯಪೀಠ ವಿಚಾರಣೆ ನಡೆಸಿತು. ಮೈಸೂರಿನಲ್ಲಿ ಅಶ್ವತ್ಥಾಮ ಆನೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದು ಆನೆ ಹಾಗೂ ಕೊಡಗು ಜಿಲ್ಲೆಯಲ್ಲಿ ಎರಡು ಆನೆಗಳು ಮೃತಪಟ್ಟಿವೆ. ಈ ಎಲ್ಲಾ ಸಾವುಗಳು ವಿದ್ಯುದಾಘಾತದಿಂದ ಸಂಭವಿಸಿವೆ. ವಿಚಾರಣೆಯ ಸಮಯದಲ್ಲಿ, ರಾಜ್ಯ ಸರ್ಕಾರವು ರೈಲ್ವೆ ಬ್ಯಾರಿಕೇಡ್ ಗಳು, ಸೌರ ಬೇಲಿ ಮತ್ತು ಆನೆ ನಿರೋಧಕ ಕಂದಕಗಳಂತಹ ಕ್ರಮಗಳನ್ನು ಅರಣ್ಯ ಇಲಾಖೆ ಜಾರಿಗೆ ತಂದಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿತು. ಅರಣ್ಯ ಪ್ರದೇಶದ ಮೂಲಕ ಹಾದುಹೋಗುವ ವಿದ್ಯುತ್ ಮಾರ್ಗಗಳು ಕುಗ್ಗಿರುವುದರಿಂದ ಮತ್ತು ಈ ವಿದ್ಯುತ್ ಮಾರ್ಗಗಳಿಂದ…
ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಅವರು ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು ₹ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ₹87 ಕೋಟಿ. ಎಪಿಎಂಸಿಯ ₹47 ಕೋಟಿ, 2019 ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ ₹22 ಕೋಟಿ, ಅಂಬೇಡ್ಕರ್ ನಿಗಮದ ಕೆನರಾ ಬ್ಯಾಂಕ್ ಅಲ್ಲಿನ ಹಣ ಜೂನ್ 2018 ರಲ್ಲಿ ₹5 ಕೋಟಿ, ದೇವರಾಜ್ ಅರಸು ನಿಗಮದ ₹47 ಕೋಟಿ, ಮಾಲಿನ್ಯ ನಿಯಂತ್ರಣ ಮಂಡಲಿಯ ₹10 ಕೋಟಿ ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ” ಎಂದು ತಿಳಿಸಿದರು. ಬಿಜೆಪಿಯ ಅಕ್ರಮಗಳನ್ನು ತನಿಖೆ ನಡೆಸುವಿರಾ ಎಂದು ಪ್ರಶ್ನಿಸಿದಾಗ “ಖಂಡಿತವಾಗಿಯೂ ತನಿಖೆ ನಡೆಸುತ್ತೇವೆ. ಆದರೆ ಎಲ್ಲವೂ ದಾಖಲೆಯಲ್ಲಿ ಇರಬೇಕು ಎನ್ನುವ ಕಾರಣಕ್ಕೆ ಸದನದಲ್ಲಿ ಎಲ್ಲಾ ದಾಖಲೆಗಳನ್ನು ಬಯಲು…
ಮಲೆನಾಡಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಶಾರದಾ ಪೀಠಕ್ಕೆ ಆಗಮಿಸುವ ಭಕ್ತರು ಶ್ರೀಮಠದ ಗುರುಗಳ ದರ್ಶನಕ್ಕೆ ವಸ್ತ್ರ ಸಂಹಿತೆ ಇನ್ನು ಮುಂದೆ ಅನುಸರಿಸಬೇಕಿದೆ. ಶ್ರೀಗಳ ದರ್ಶನ ಹಾಗೂ ಪಾದಪೂಜೆಗೆ ತೆರಳುವ ಭಕ್ತರು ಆಗಸ್ಟ್ 15 ರಿಂದ ಭಾರತೀಯ ಸಂಪ್ರದಾಯದಂತೆ ವಸ್ತ್ರ ಧರಿಸಿ ಶ್ರೀಗಳ ದರ್ಶನ ಪಡೆಯಬೇಕು. ಪುರುಷರು ಧೋತಿ ಮತ್ತು ಶಲ್ಯ ಹಾಗೂ ಉತ್ತರೀಯವನ್ನು ಧರಿಸಬೇಕು. ಮಹಿಳೆಯರು ಸೀರೆ, ರವಿಕೆ, ಸಲ್ವಾರ್ ಜತೆಗೆ ದುಪ್ಪಟ ಅಥವಾ ಲಂಗ ದಾವಣಿ ಧರಿಸಿ ಶ್ರೀಗಳ ದರ್ಶನ ಪಡೆಯಬಹುದು ಎಂದು ಮಠದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಭಾರತೀಯ ಸಂಪ್ರದಾಯದ ಉಡುಗೆಗಳನ್ನು ಹೊರತುಪಡಿಸಿ ಇತರೆ ಉಡುಗೆ ತೊಟ್ಟು ಬಂದಲ್ಲಿ ಗುರುನಿವಾಸದ ಒಳಗೆ ಪ್ರವೇಶವನ್ನು ನಿರ್ಬಂಧಿಸಲು ಶ್ರೀಮಠದ ಆಡಳಿತ ಮಂಡಳಿ ಮಹತ್ವದ ತೀರ್ಮಾನ ಕೈಗೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ:…
ಪ್ರಸ್ತುತ ತಮಿಳುನಾಡಿನಲ್ಲಿ ಶಾಲಾ ಪ್ರವೇಶಕ್ಕೆ ಯಾವುದೇ ರೀತಿಯ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ. ಯಾಕೆಂದರೆ ಶಾಲಾ ವರ್ಗಾವಣೆ ಪ್ರಕ್ರಿಯೆಯನ್ನು ಸರಳಗೊಳಿಸುವಂತೆಹೊಸ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಹಿಂದಿನ ಶಿಕ್ಷಣ ಸಂಸ್ಥೆಗಳಿಂದ ವರ್ಗಾವಣೆ ಪ್ರಮಾಣಪತ್ರಗಳನ್ನು ತಯಾರಿಸಲು ಒತ್ತಾಯಿಸದಂತೆ ಸೂಚನೆ ನೀಡಿ ರಾಜ್ಯಾದ್ಯಂತ ಶಾಲಾ ಆಡಳಿತ ಮಂಡಳಿಗಳಿಗೆ ಸುತ್ತೋಲೆ ಹೊರಡಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ ನೀಡಿದೆ. ಹೈಕೋರ್ಟ್ ಬಾರ್ ಮತ್ತು ಬೆಂಚ್ ವರದಿ ಮಾಡಿದಂತೆ, ವರ್ಗಾವಣೆ ಪ್ರಮಾಣ ಪತ್ರಗಳಲ್ಲಿ ಶಾಲಾ ಶುಲ್ಕವನ್ನು ಪಾವತಿಸದಿರುವ ಅಥವಾ ವಿಳಂಬವಾದ ಪಾವತಿಗೆ ಸಂಬಂಧಿಸಿದ ಅನಗತ್ಯ ನಮೂದುಗಳನ್ನು ಶಾಲೆಗಳು ಮಾಡುವುದಕ್ಕೆ ನ್ಯಾಯಾಲಯವು ನಿಷೇಧ ವಿಧಿಸಿದೆ. ಶುಲ್ಕ ಬಾಕಿಗಳನ್ನು ತೆರವುಗೊಳಿಸುವವರೆಗೆ ಶಾಲೆಗಳು ಟಿಸಿಗಳನ್ನು ಹಿಡಿದಿಟ್ಟುಕೊಳ್ಳುವುದನ್ನು, ಟಿಸಿಯಲ್ಲಿ ಬಾಕಿ ಇರುವ ಅಥವಾ ಶುಲ್ಕವನ್ನು ಪಾವತಿಸದಿರುವ ನಮೂದುಗಳನ್ನು ಮಾಡುವುದನ್ನು ಇದು ತಡೆಯುತ್ತದೆ. ಯಾಕೆಂದರೆ ಇದು ಶಿಕ್ಷಣ ಹಕ್ಕು (RTE) ಕಾಯಿದೆಯ ಉಲ್ಲಂಘನೆಯಾಗಿದೆ ಮತ್ತು ಮಾನಸಿಕ ಕಿರುಕುಳವನ್ನು ಉಂಟು ಮಾಡುತ್ತದೆ ಎಂದು ಆರ್ಟಿಇ ಕಾಯಿದೆಯ ಸೆಕ್ಷನ್ 17ರ ಅಡಿಯಲ್ಲಿ ವ್ಯಾಖ್ಯಾನಿಸಲಾಗಿದೆ. ಈ ಕುರಿತು ನ್ಯಾಯಮೂರ್ತಿಗಳಾದ ಎಸ್.ಎಂ.…
ರಾಜ್ಯದಲ್ಲಿ ಮುಡಾ ಹಗರಣ ಹಾಗೂ ವಾಲ್ಮಿಕಿ ನಿಗಮದಲ್ಲಾದ ಹಗರಣಗಳು ಭಾರೀ ಸದ್ದು ಮಾಡುತ್ತಿವೆ. ವಿಧಾನಸಭಾ ಅಧಿವೇಶನದಲ್ಲಂತೂ ಈ ಹಗರಣಗಳದ್ದೇ ಕಾರುಬಾರು. ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಈ ವಿಚಾರಗಳನ್ನು ಇಟ್ಟುಕೊಂಡೇ ಹರಿಹಾಯುತ್ತಿವೆ. ಇದಕ್ಕೆ ಎದಿರೇಟು ನೀಡಿರುವ ಸಿದ್ದರಾಮಯ್ಯ ಅವರು ಬಿಜೆಪಿ ಅವಧಿಯಲ್ಲಾಗಿದ್ದ ಬರೋಬ್ಬರಿ 21 ಹಗರಣಗಳ ಪಟ್ಟಿಯನ್ನು ಬಯಲುಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸದನದಲ್ಲಿ ಹೇಳಿದಂತೆ ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ 21 ಹಗರಣಗಳ ಪಟ್ಟಿಯನ್ನು ಮುಂದಿಟ್ಟು ವಿಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದು, ಈ ಮೂಲಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಬಗ್ಗೆ ಬಿಜೆಪಿ ಆರೋಪಕ್ಕೆ ಅವರು ತಿರುಗೇಟು ನೀಡಿದ್ದಾರೆ. ಸಿಎಂ ಬಿಡುಗಡೆ ಮಾಡಿದ ಹಗರಣಗಳ ಪಟ್ಟಿ: * ಎಪಿಎಂಸಿ ಹಗರಣ – 2020-21 – 47.16 ಕೋಟಿ ರೂ. * ಭೋವಿ ಅಭಿವೃದ್ಧಿ ನಿಗಮ – 2021-22 – 87.00 ಕೋಟಿ ರೂ.ಗಿಂತಲೂ ಹೆಚ್ಚು * ದೇವರಾಜ ಅರಸು ಟ್ರಕ್ ಟರ್ಮಿನಲ್ – 2022-23 – ಶ್ರೀರಾಮುಲು 50.00 ಕೋಟಿ ರೂ.ಗಿಂತ ಅಧಿಕ…
ಕಳೆದ ಎರಡು ದಿನಗಳ ಹಿಂದೆಯಷ್ಟೇ ಹಾವೇರಿ ಮೂಲದ ರೈತ ಫಕೀರಪ್ಪ ಅವರು ಪಂಚೆ ಉಟ್ಟಿ ಬಂದರೆಂದು ಜಿ.ಟಿ.ಮಾಲ್ ಒಳಗೆ ಬಿಡದೆ ಅಪಮಾನ ಮಾಡಿದ ಘಟನೆ ಬೆಳಕಿಗೆ ಬಂದಿತ್ತು. ಈ ಪ್ರಕರಣ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ವಿಧಾನಸಭಾ ಅಧಿವೇಶನದಲ್ಲೂ ಪ್ರತಿಧ್ವನಿಸಿತ್ತು. ಇದರಿಂದ ಮಾಲೀಕರು ಸ್ವಯಂಪ್ರೇರಿತವಾಗಿ ಮಾಲ್ ಬಂದ್ ಮಾಡುವ ನಿರ್ಧಾರ ಕೈಗೊಂಡಿದ್ದರು. ಇಷ್ಟೇ ಅಲ್ಲದೆ ಇದೀಗ ಮಾಲ್ ಓನರ್ ಕೂಡ ತಾನೂ ಪಂಚೆ ಉಟ್ಟುಕೊಂಡು ಪರೀಕಪ್ಪನವರಿಗೆ ಕ್ಷಮೆ ಕೇಳಿದ್ದಾರೆ. ಪವರ್ ಪುಲ್ ಪಂಚೆಗೆ ಮಾಡಿದ ಅಪಮಾನದಿಂದ ರಾಜ್ಯದಲ್ಲಿ ಕೆಲವು ದಿನಗಳಿಂದ ಆದ ಬೆಳವಣಿಗೆ ಬಗ್ಗೆ ಎಲ್ಲರಿಗೂ ತಿಳಿದಿದೆ. ಹೀಗಾಗಿ ಇದರಿಂದ ತೀವ್ರ ಮುಜುಗರಕ್ಕೀಡಾದ ಜಿ ಟಿ ಮಾಲ್ ಮಾಲೀಕ ಆನಂದ್ ಪುತ್ರ ಮಾಧ್ಯಮಗಳ ಮುಂದೆ ಪಕೀರಪ್ಪನಿಗೆ ಕ್ಷಮೆ ಕೇಳಿದ್ದರು. ಆದರೀಗ ಆನಂದ್ ಅವರು ಸ್ವತಃ ಪಕೀರಪ್ಪ ಹಾಗೂ ಅವರ ಮಗನನ್ನು ಮನೆಗೆ ಕರೆಸಿ, ತಿಂಡಿ ತಿನ್ನಿಸಿ, ಕೈ ಮುಗಿದು ಕ್ಷಮೆ ಕೋರಿದ್ದಾರೆ. ವಿಶೇಷ ಅಂದ್ರೆ ಆನಂದ್ ಅವರು ಪಕೀರಪ್ಪನಿಗೆ ಕ್ಷಮೆ ಕೇಳುವಾಗ ತಾನೂ…
ಜೈನ ಸಮುದಾಯದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆ ಕೇಳಿದ್ದಾರೆ. ಈ ಕುರಿತು ಲಿಖಿತ ಹಾಗೂ ವೀಡಿಯೋ ಮೂಲಕ ತಮ್ಮ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಗೌರಿ ಚಿತ್ರದ ಸಾಂಗ್ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ ಹಂಸಲೇಖ ಅವರು, ಜೈನರ ಫಿಲಾಸಫಿಯಲ್ಲಿ 24 ಜನ್ಮಗಳಿಗೆ ಅಂತಾರೆ, ಅದೆಲ್ಲ ಬುಲ್‌ಶಿಟ್ ಎಂಬ ಪದವನ್ನು ಬಳಕೆ ಮಾಡಿದ್ದರು. ಈ ಹೇಳಿಕೆಗೆ ಜೈನ ಸಮುದಾಯದ ಜನತೆ ಆಕ್ರೋಶಗೊಂಡಿದ್ದರು. ಇದರಿಂದ ಎಚ್ಚತ್ತ ಹಂಸಲೇಖ ಜೈನ ಸಮುದಾಯದ ಜನತೆ ಬಳಿಕ ತಮ್ಮ ಕ್ಷಮೆ ಕೇಳಿದ್ದಾರೆ. ನನ್ನ ಪಂಪನಾಣೆ, ನನ್ನ ಪದ ಬಳಕೆ ಉದ್ದೇಶ ಪೂರಿತವಲ್ಲ. ಗಲಾಟೆ, ಒತ್ತಡದ ಆ ಕ್ಯಾಮೆರಾಗಳ ಗುಂಪಿನಲ್ಲಿ ಆ ಮಾತು ತೂರಿ ಬಂದಿದೆ. ತ್ಯಾಗ, ಸಹನೆಯ ಸಂಸ್ಕೃತಿಯನ್ನು ಜಗತ್ತಿಗೆ ನೀಡಿದ ಜೈನ ಸುಮುದಾಯಕ್ಕೆ ಶಿರವಾಗಿ ಕ್ಷಮೆ ಕೋರುತ್ತೇನೆ ಎಂದು ಹಂಸಲೇಖ ಹೇಳಿದ್ದಾರೆ. ಲಿಖಿತರೂಪದಲ್ಲಿ ಬರೆದ ಕ್ಷಮಾಪಣೆ ಪತ್ರದಲ್ಲಿ ಈ ರೀತಿ ಬರೆದುಕೊಂಡಿದ್ದಾರೆ ಹಂಸಲೇಖ: ಪ್ರಿಯ ಮಾಧ್ಯಮಗಳೇ, ದಯಮಾಡಿ, ನಾನು ದುಡುಕಿ ಮಾತಾಡಿದ…
ಮೈಸೂರು: ದಟ್ಟಗಳ್ಳಿ ರಿಂಗ್ ರಸ್ತೆಯ ಮೈಸೂರು ವಿಶ್ವವವಿದ್ಯಾನಿಲಯ ಬಡಾವಣೆ ಬಳಿಕ ಸಿಗುವ ಮಾರಮ್ಮನ ದೇವಾಲಯದ ಕೂಗಳತೆ ದೂರದಲ್ಲಿ ಈ ಬಾವಿ ಪತ್ತೆಯಾಗಿದೆ. ಕಳೆದ ಕೆಲ ದಿನಗಳಿಂದ ಮೈಸೂರು ನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣಕ್ಕೋ ಏನೋ ರಿಂಗ್ ರಸ್ತೆಯಲ್ಲಿ ಈ ಬೃಹತ್ ಹೊಂಡ ಪತ್ತೆಯಾಗಿದೆ. ಶುಕ್ರವಾರ ತಡ ರಾತ್ರಿ ಈ ಬಗ್ಗೆ ಮಾಹಿತಿ ಪಡೆದ ಸಂಬಂಧಿಸಿದ ಅಧಿಕಾರಿಗಳು ಪೊಲೀಸರ ನೆರವಿನಿಂದ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ ಸಂಚಾರ ನಿರ್ಬಂಧಿಸಿದ್ದಾರೆ. ಆ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಹದಿನೈದು ವರ್ಷಗಳ ಹಿಂದೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಎಡಿಬಿ ಸಹಾಯದಿಂದ ಈ ವರ್ತುಲ ರಸ್ತೆಯನ್ನು ನಿರ್ಮಾಣ ಮಾಡಿತ್ತು. ಅಂದಿನ ಮುಡಾ ಅಧ್ಯಕ್ಷರಾಗಿದ್ದ ಸಂದೇಶ್ ನಾಗರಾಜ್ ಅವರ ಅವಧಿಯಲ್ಲಿ ಈ ಯೋಜನೆ ಕಾರ್ಯರೂಪಕ್ಕೆ ಬಂದಿತ್ತು. ನೂರಾರು ಕೋಟಿ ರೂ. ವೆಚ್ಚದಲ್ಲಿ ಈ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲಾಗಿತ್ತು. ಇತ್ತೀಚೆಗೆ ವರ್ಷದ ಹಿಂದೆಯಷ್ಟೆ ರಿಂಗ್ ರಸ್ತೆ ಹಾಗೂ ಸರ್ವಿಸ್ ರಸ್ತೆಗೆ ಒಪ್ಪಂದ್ದದಂತೆ ಬಾಕಿ ಉಳಿದಿದ್ದ ಡಾಂಬರು ಹಾಕಲಾಗಿತ್ತು. ನಮ್ಮತುಮಕೂರಿನ…
ಈ ಬಾರಿ ಮುಂಗಾರು ಮಳೆ ಉತ್ತಮವಾಗಿದ್ದು ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕೆಆರ್ ಎಸ್ ಜಲಾಶಯ ಭರ್ತಿಯಾಗಲು ಇನ್ನು 4 ಅಡಿ ಮಾತ್ರ ಬಾಕಿ ಇದೆ. ಜಲಾಶಯಕ್ಕೆ 51,375 ಕ್ಯೂಸೆಕ್ ಒಳ ಹರಿವು ಇದ್ದು ಮುಂಜಾಗ್ರತಾ ಕ್ರಮವಾಗಿ ಕಾವೇರಿ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು 124.80 ಅಡಿ ಸಾಮರ್ಥ್ಯವಿರುವ ಕೆಆರ್ ಎಸ್ ಜಲಾಶಯ ಸದ್ಯ 119.90 ಅಡಿ ತುಂಬಿದ್ದು ಸಂಪೂರ್ಣ ಭರ್ತಿಯಾಗಲು ಇನ್ನು ನಾಲ್ಕು ಅಡಿ ಮಾತ್ರ ಬಾಕಿ ಇದೆ. ಎರಡು ವರ್ಷದ ಬಳಿಕ ಕೆಆರ್ ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್…
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು ಒಂದೇ ದಿನ ನಗರದಲ್ಲಿ 524 ಪ್ರಕರಣಗಳು ವರದಿಯಾಗಿವೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಬಂಪರ್ ಬಹುಮಾನ ಘೋಷಿಸಿರುವ ಬಿಬಿಎಂಪಿ, ಆ ಮೂಲಕ ಜಾಗೃತಿ ಮೂಡಿಸಲು ಹೊರಟಿದೆ ಎನ್ನಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತ ರೀಲ್ಸ್ಗಳನ್ನು ಆಹ್ವಾನಿಸಿರುವ ಪಾಲಿಕೆ, ಮೊದಲ ಐದು ಉತ್ತಮ ರೀಲ್ಸ್ಗಳಿಗೆ ತಲಾ 25 ಸಾವಿರ ರೂಪಾಯಿ ಬಹುಮಾನ ಘೋಷಿಸಿದೆ. ಇನ್ನು ದ್ವೀತಿಯ ಬಹುಮಾನದಲ್ಲಿ ಐದು ಜನರಿಗೆ ತಲಾ 10 ಸಾವಿರ ರೂಪಾಯಿ ನಿಗದಿ ಮಾಡಿದ್ದು, ಯಾವ ಶಾಲೆ ಹೆಚ್ಚು ವಿದ್ಯಾರ್ಥಿಗಳ ಬಳಿ ರೀಲ್ಸ್ ಮಾಡಿಸುತ್ತದೆಯೋ ಆ ಶಾಲೆಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಅಲ್ಲದೇ ಮಕ್ಕಳಿಗೆ ಜಾಗೃತಿ ಮೂಡಿಸುವ ವಿಡಿಯೋ ಮಾಡಲು ಉತ್ತೇಜಿಸೋ ಶಿಕ್ಷಕಿಯರಿಗೂ 35 ಸಾವಿರ ರೂಪಾಯಿ ಬಹುಮಾನದ ಆಫರ್ ಘೋಷಿಸಿದೆ. ಇತ್ತ ಬಿಬಿಎಂಪಿಯ ಈ ರೀಲ್ಸ್ ಕಾಂಪಿಟೇಷನ್ಗೆ ಸಾರ್ವಜನಿಕರಿಂದ ವಿರೋಧ ಕೂಡ ವ್ಯಕ್ತವಾಗುತ್ತಿದ್ದು, ಪಾಲಿಕೆ ಡೆಂಗ್ಯೂ ಬಗ್ಗೆ ಅರಿವು ಮೂಡಿಸಲು ಹೊರಟಿರೋದೇನೋ ಸರಿ.…