Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ತುಮಕೂರು: ಹೇಮಾವತಿ ಲಿಂಕ್ ಕೇನಾಲ್ ಕಾಮಗಾರಿ ವಿರೋಧಿಸಿ ಇಂದು ನಡೆದ ತುಮಕೂರು ಬಂದು ಬಹುತೇಕ ಯಶಸ್ವಿಯಾಗಿದೆ. ಬೆಳಗ್ಗೆಯಿಂದಲೂ ತುಮಕೂರು ನಗರದಲ್ಲಿ ವಾಹನ ಸಂಚಾರ ವಿರಳವಾಗಿತ್ತು. ನಂತರ ತುಮಕೂರು ಬಂದು ಬೆಂಬಲಿಸಿ ಬಹುತೇಕ ಎಲ್ಲಾ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಇನ್ನುಳಿದಂತೆ ಬ್ಯಾಂಕ್ ಗಳು ಹಾಗೂ ಆಸ್ಪತ್ರೆಗಳು ತೆರೆದಿದ್ದವು. ಬೆಳಗ್ಗೆ ಸುಮಾರು 10 ಗಂಟೆ ಬೆಳಗ್ಗೆ ತುಮಕೂರಿನ ಟೌನ್ ಹಾಲ್ ಬಳಿ ಜಮಾಯಿಸಿದ ಹೋರಾಟಗಾರರು ರಸ್ತೆ ತಡೆ ನಡೆಸಿದರು. ಹೇಮಾವತಿ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ ವತಿಯಿಂದ ಕರೆ ನೀಡಲಾಗಿದ್ದ ಬಂದ್ಗೆ ರೈತ ಸಂಘ ಹಾಗೂ ವಿವಿಧ ಮಠಗಳ ಮಠಾಧೀಶರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಮುಂಜಾಗ್ರತ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಹೋರಾಟಕ್ಕೆವಕೀಲರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದವು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…
ಸೌದಿ ಅರೇಬಿಯಾದಲ್ಲಿ ಹಜ್ ಯಾತ್ರಿಕರ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಬಿಸಿಲಿನ ಬೇಗೆಯಿಂದ ಈ ವರ್ಷ 1,301 ಹಜ್ ಯಾತ್ರಿಕರು ಸಾವನ್ನಪ್ಪಿದ್ದಾರೆ. ಭಾನುವಾರ, ಸೌದಿ ಆರೋಗ್ಯ ಸಚಿವ ಫಹದ್ ಬಿನ್ ಅಬ್ದುರ್ರಹ್ಮಾನ್ ಅಲ್-ಜಲಾಜೆಲ್ ಅವರು 1,301 ಸತ್ತವರಲ್ಲಿ 83 ಪ್ರತಿಶತದಷ್ಟು ಅನಧಿಕೃತ ಯಾತ್ರಿಕರು ಎಂದು ಹೇಳಿದ್ದಾರೆ. ರಾಜ್ಯ ಟಿವಿ ಅಲ್ ಅಖ್ಬರಿಯಾ ಅವರೊಂದಿಗೆ ಮಾತನಾಡಿದ ಸಚಿವರು, 95 ಯಾತ್ರಿಕರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಲ್ಲಿ ಕೆಲವರನ್ನು ರಾಜಧಾನಿ ರಿಯಾದ್‌ನಲ್ಲಿ ಚಿಕಿತ್ಸೆಗಾಗಿ ವಿಮಾನದಲ್ಲಿ ಕಳುಹಿಸಲಾಗಿದೆ ಎಂದು ಹೇಳಿದರು. ಸೌದಿಯಲ್ಲಿ ಹಜ್ ಯಾತ್ರಿಕರ ಮರಣವನ್ನು ಗುರುತಿಸುವುದು ಅತ್ಯಂತ ಕಷ್ಟಕರವಾದ ಕೆಲಸವಾಗಿದೆ ಎಂದು ಅವರು ಹೇಳಿದರು, ಏಕೆಂದರೆ ಸತ್ತ ಯಾತ್ರಿಕರಲ್ಲಿ ಯಾವುದೇ ಗುರುತಿನ ದಾಖಲೆಗಳಿಲ್ಲ. ಗುರುತಿಸಲಾಗದ ಯಾತ್ರಾರ್ಥಿಗಳನ್ನು ಮೆಕ್ಕಾದಲ್ಲಿ ಸಮಾಧಿ ಮಾಡಲಾಗಿದೆ ಎಂದು ಸಚಿವರು ಹೇಳಿದರು. ಸತ್ತವರಲ್ಲಿ 660 ಕ್ಕೂ ಹೆಚ್ಚು ಈಜಿಪ್ಟ್ ನಾಗರಿಕರು ಸೇರಿದ್ದಾರೆ ಎಂದು ಕೈರೋದಲ್ಲಿ ಇಬ್ಬರು ಸೌದಿ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಇವರಲ್ಲಿ 31 ಮಂದಿಯನ್ನು ಹೊರತುಪಡಿಸಿ ಎಲ್ಲರೂ ಅನಧಿಕೃತ ಯಾತ್ರಿಗಳು. ಸೌದಿ…
ಉಡುಪಿ: ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ಸಂತ್ರಸ್ತರು ನ್ಯಾಯ ವಂಚಿತರಾಗಲಿದ್ದಾರೆ. ಇದು ಸಂವಿಧಾನ ನಮಗೆ ನೀಡಿರುವ ನ್ಯಾಯ ಪಡೆಯುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಉಡುಪಿಯ ಹಿರಿಯ ನ್ಯಾಯವಾದಿ ಎಂ.ಶಾಂತಾರಾಮ್ ಶೆಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ವಕೀಲರ ಸಂಘ, ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಜೂ.24ರಂದು ಸೋಮವಾರ ಹಮ್ಮಿಕೊಳ್ಳಲಾದ ಸಂವಾದ ಕಾರ್ಯಕ್ರಮದಲ್ಲಿ ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಇತರ ಎರಡು ಕಾನೂನುಗಳ ಕುರಿತು ಅವರು ಮಾತನಾಡುತಿದ್ದರು. ಬ್ರಿಟೀಷರ ಕಾಲದಲ್ಲಿ ಜಾರಿಗೆ ಬಂದ ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೋಸಿಜರ್ ಕೋಡ್(ಸಿಆರ್‌ಪಿಸಿ), ಭಾರತ ಸಾಕ್ಷ ಅಧಿನಿಯಮ(ಇಂಡಿಯನ್ ಎವಿಡೆನ್ಸ್ ಆ್ಯಕ್ಟ್) ತುಂಬಾ ಪ್ರಮುಖವಾದ ಕಾನೂನುಗಳು. ಇದುವೇ ನಿಜವಾದ ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್.…
ಇನ್ನೇನು ಕೆಲವು ದಿನಗಳಲ್ಲಿ ಜೂನ್ ತಿಂಗಳು ಮುಗಿದು ಜುಲೈ ತಿಂಗಳು ಆರಂಭವಾಗಲಿದೆ. ಸದ್ಯ ಪ್ರತಿ ತಿಂಗಳಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಂದಿನ ತಿಂಗಳು ಜುಲೈ ನಲ್ಲಿ ಬ್ಯಾಂಕ್ ರಜೆ ಘೋಷಿಸಿದೆ. ಮುಂದಿನ ತಿಂಗಳು, ಅಂದರೆ 2024ರ ಜುಲೈನಲ್ಲಿ 12 ದಿನಗಳು ಬ್ಯಾಂಕ್ ಗಳು ಬಂದ್ ಆಗಲಿವೆ. ಒಟ್ಟು ರಾಷ್ಟ್ರೀಯ ಮತ್ತು ಪ್ರಾದೇಶಿಕ ರಜಾದಿನಗಳ ಕಾರಣ ಜುಲೈ ತಿಂಗಳಲ್ಲಿ ಒಟ್ಟು 12 ದಿನಗಳ ಕಾಲ ಬ್ಯಾಂಕ್‌ಗಳು ಬಂದ್ ಇರಲಿದೆ. ಇವುಗಳಲ್ಲಿ ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರಗಳು ಮತ್ತು ಇತರ ಕೆಲವು ದಿನಗಳನ್ನು ಆರ್ ಬಿಐ ಬ್ಯಾಂಕ್ ರಜೆ ಎಂದು ಘೋಷಿಸುತ್ತದೆ. ಈ ರಜಾದಿನಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಕೆಲವು ರಾಷ್ಟ್ರೀಯ ರಜಾದಿನಗಳಲ್ಲಿ ಎಲ್ಲಾ ಬ್ಯಾಂಕುಗಳು ಕ್ಲೋಸ್ ಆಗಿರುತ್ತೆ. ಕೆಲವು ರಾಜ್ಯಗಳಲ್ಲಿ ಸ್ಥಳೀಯ ಹಬ್ಬಗಳ ಆಧಾರದ ಮೇಲೆ ಬ್ಯಾಂಕ್ ರಜಾದಿನಗಳನ್ನು ಹೊಂದಿವೆ. ಜುಲೈ ತಿಂಗಳ ಬ್ಯಾಂಕ್ ರಜಾ ಪಟ್ಟಿ ಇಂತಿವೆ : ಜುಲೈ 3: ಬೆಹ್ ದೈನ್ ಖ್ಲಾಮ್ ಸಂದರ್ಭದಲ್ಲಿ ಶಿಲ್ಲಾಂಗ್…
ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನೂತನವಾಗಿ ಆಯ್ಕೆಯಾದ 17 ಮಂದಿ ವಿಧಾನ ಪರಿಷತ್ ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದಿಂದ ಆಯ್ಕೆಯಾದ 17 ಜನ ಪರಿಷತ್ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ, ನೂತನ ಪರಿಷತ್ ಸದಸ್ಯರನ್ನ ಮಾತನಾಡಿಸಿ ಕುಶಲೋಪರಿ ವಿಚಾರಿಸಿದರು.ಈ ವೇಳೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ನಂತರ ನಡೆದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಹೆಚ್.ಕೆ ಪಾಟೀಲ್ ವೇದಿಕೆಯಲ್ಲಿದ್ದರು. ನೂತನ ಪರಿಷತ್ ಸದಸ್ಯರಾದ ಬೋಸರಾಜು, ಗೋವಿಂದರಾಜ್ (ಕಾಂಗ್ರೆಸ್), ಐವಾನ್ ಡಿಸೋಜ (ಕಾಂಗ್ರೆಸ್), ಜವರಾಯಿಗೌಡ (ಜೆಡಿಎಸ್), ಎಂ.ಜಿ. ಮೂಳೆ (ಬಿಜೆಪಿ), ಯತೀಂದ್ರ ಸಿದ್ದರಾಮಯ್ಯ (ಕಾಂಗ್ರೆಸ್), ಸಿ.ಟಿ ರವಿ (ಬಿಜೆಪಿ), ರವಿಕುಮಾರ್ (ಬಿಜೆಪಿ), ವಸಂತ್ ಕುಮಾರ್ (ಕಾಂಗ್ರೆಸ್), ಡಾ.ಚಂದ್ರಶೇಖರ ಪಾಟೀಲ್ (ಕಾಂಗ್ರೆಸ್ ಪದವೀಧರ…
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಕುರಿತು ನಿರ್ಮಾಪಕ ಮತ್ತು ನಿರ್ದೇಶಕ ಓಂ ಪ್ರಕಾಶ್ ರಾವ್ ಪ್ರತಿಕ್ರಿಯಿಸಿದ್ದಾರೆ. ಸಣ್ಣ ವಿಷಯಕ್ಕೆ ಹೀಗೆಲ್ಲ ಮಾಡಿಕೊಂಡದ್ದು ಬೇಸರದ ಸಂಗತಿ. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು, ಅಂಬರೀಶ್ ಇರುತ್ತಿದ್ದರೆ ದರ್ಶನ್ ಕಪಾಳಕ್ಕೆ ಬಾರಿಸಿ ಕೇಳುತ್ತಿದ್ದರು ಎಂದಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಸ್ಯಾಂಡಲ್ ವುಡ್ ನಲ್ಲಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇಷ್ಟು ಸಣ್ಣ ವಿಷಯಕ್ಕೆ ಅವರು ಕೊಲೆ ಮಾಡುವ ನಿರ್ಧಾರ ಮಾಡಬಾರದಿತ್ತು. ಈಗ ಆರೋಪಿ ಸ್ಥಾನದಲ್ಲಿ ನಿಂತಿದ್ದಾರೆ. ಅವರಿಗೆ ಇದೆಲ್ಲ ಬೇಕಿರಲಿಲ್ಲ ಎಂದು ಹೇಳಿದ್ದಾರೆ. ನಟ ದಿ.ಅಂಬರೀಶ್ ಅವರಿಗೆ ನಟ ದರ್ಶನ್ ತುಂಬಾ ಗೌರವ ಕೊಡುತ್ತಿದ್ದರು. ಅವರ ಈ ವೇಳೆ ಇದ್ದಿದ್ದರೆ ದರ್ಶನ್ ಕರೆದು ಕಪಾಳಕ್ಕೆ ಹೊಡೆಯುತ್ತಿದ್ದರು. ಇದು ತಪ್ಪು, ಹೀಗೆ ಮಾಡುವುದು ಸರಿಯಲ್ಲ ಎಂದು ಬುದ್ಧಿ ಹೇಳುತ್ತಿದ್ದರು. ಸುಮಲತಾ ಅವರು ಸಹ ದರ್ಶನ್ ಪ್ರಕರಣದಿಂದ ನೊಂದಿರುತ್ತಾರೆ ಎಂದು ಅವರು ಅಭಿಪ್ರಾಯಪಟ್ಟರು. ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ನಡೆದ ಹಿಂಸಾ ಪ್ರಯೋಗ ತುಂಬಾ…
ತನ್ನ ವೃತ್ತಿಯ ವಿಡಿಯೋ ವೈರಲ್ ಆದ ಕಾರಣಕ್ಕೆ ಮನನೊಂದು ಹಿರಿಯ ತ್ಯಾಜ್ಯ ಸಂಗ್ರಾಹಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೈಪುರದಲ್ಲಿ ನಡೆದಿದೆ. ಪ್ಲಾಸ್ಟಿಕ್ ಬಾಟಲಿಗಳು ಹಾಗೂ ಇನ್ನಿತರ ತ್ಯಾಜ್ಯಗಳನ್ನು ತನ್ನ ಕೈಗಾಡಿಯಲ್ಲಿ ಸಂಗ್ರಹಿಸುತ್ತಿದ್ದ ಆ ಹಿರಿಯ ತ್ಯಾಜ್ಯ ಸಂಗ್ರಾಹಕ, ತನ್ನ ಜೀವನೋಪಾಯಕ್ಕಾಗಿ ಆ ತ್ಯಾಜ್ಯಗಳನ್ನು ಮಾರಾಟ ಮಾಡಿಕೊಂಡಿದ್ದರು ಎನ್ನಲಾಗಿದೆ. ಲೌಹಾತ್ ಗ್ರಾಮದ ಕೆಲವು ಯುವಕರು ಆತನ ವೃತ್ತಿಯನ್ನು ಅಣಕವಾಡಿ, ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದರು ಎನ್ನಲಾಗಿದೆ. ಈ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು. ಇದರಿಂದ ಆ ಹಿರಿಯ ವ್ಯಕ್ತಿಯನ್ನು ಅನೇಕರು ಗುರುತಿಸಲು ಪ್ರಾರಂಭಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು, “ತ್ಯಾಜ್ಯ ಸಂಗ್ರಾಹಕನ ಮೃತದೇಹ ಹೆದ್ದಾರಿ ಬಳಿಯ ಮರವೊಂದರಲ್ಲಿ ನೇತಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ” ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಕನ್ನಡದ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿದ್ದಾರೆ. ಇಡೀ ವಿಶ್ವವನ್ನೇ ಎದುರಿಸಿ ನಿಲ್ತೇನೆ ಕೇವಲ ಡಿ ಬಾಸ್ ಗಾಗಿ ಎಂದಿದ್ದ ವಿನೋದ್ ಪ್ರಭಾಕರ್ ಈಗ ಎಲ್ಲಿದ್ದಾರೆ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಇದೀಗ ಅವರನ್ನು ನಟ ವಿನೋದ್ ಪ್ರಭಾಕರ್ ಭೇಟಿಯಾಗಿ ಮಾತನಾಡಿಸಿ ಬಂದಿದ್ದಾರೆ. ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಕಾನೂನಿಗಿಂತ ಯಾರು ದೊಡ್ಡವರಿಲ್ಲ, ನ್ಯಾಯ ಸಿಗಬೇಕು ಎಂದು ವಿನೋದ್ ಹೇಳಿದ್ದಾರೆ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಬೇಕು. ಅವರ ಕುಟುಂಬಕ್ಕೆ ಭಗವಂತ ಧೈರ್ಯ ಕೊಡಲಿ ಅಂತ ಕೇಳಿಕೊಳ್ಳುತ್ತೇನೆ. ಹೀಗೆಲ್ಲಾ ಆಗಬಾರದಿತ್ತು. ನಿಮಗೆಲ್ಲಾ ಎಷ್ಟು ತಿಳಿದಿದೆಯೋ ನನಗೂ ಅಷ್ಟೇ ತಿಳಿದಿರೋದು. ನಾನು ದರ್ಶನ್ ಸರ್ ಅವರನ್ನು ಮೀಟ್ ಮಾಡದೇ 4 ತಿಂಗಳು ಆಗಿತ್ತು. ಅವರ ಹುಟ್ಟುಹಬ್ಬಕ್ಕೆ ಮೀಟ್ ಆಗಿದ್ದು ಆ ನಂತರ ಸುದ್ದಿ ನೋಡಿ ತಿಳಿಯಿತು ಎಂದು ದರ್ಶನ್ ಆಪ್ತ ನಟ ವಿನೋದ್ ಪ್ರಭಾಕರ್ ಮಾತನಾಡಿದ್ದಾರೆ. ಅನ್ನಪೂರ್ಣೇಶ್ವರಿ ಠಾಣೆಯಲ್ಲಿದ್ದಾಗ ಭೇಟಿ ಮಾಡಲು ಪ್ರಯತ್ನಿಸಿದೆ ಆದರೆ ಅಂದು…
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಡಿ ಬಾಸ್ ಗ್ಯಾಂಗ್ ನ 17 ಸದಸ್ಯರ ಪೈಕಿ ನಾಲ್ವರನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ವರ್ಗಾಯಿಸಲು ಕೋರ್ಟ್ ಅನುಮತಿ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ಒಂದೇ ಕಡೆ ಇಡುವುದು ಸುರಕ್ಷಿತವಲ್ಲ. ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಆರೋಪಿಗಳ ಜೈಲು ಬದಲಾವಣೆಗೆ ಪೊಲೀಸರು ನ್ಯಾಯಾಲಯದಲ್ಲಿ ಕೇಳಿದ್ದರು. ಈ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಇದಕ್ಕೆ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಯಾಕೆ ಆರೋಪಿಗಳ ವರ್ಗಾವಣೆ ಅಗತ್ಯ ಎನ್ನುವುದರ ಕುರಿತು ವಿವರಣೆ ನೀಡಿದ್ದು, ಎ8 ರವಿ, ಎ15 ಕಾರ್ತಿಕ್, ಎ16 ಕೇಶವ ಮೂರ್ತಿ, ಎ17 ನಿಖಿಲ್ ನಾಯಕ್ ನನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಅನುಮತಿ ನೀಡಿದೆ. ರೇಣುಕಾಸ್ವಾಮಿ ಮೃತದೇಹ ಸುಮ್ಮನಹಳ್ಳಿ ಬಳಿಯ ಕಾಲುವೆ ಬಳಿ ಪತ್ತೆಯಾಗಿದ್ದು, ಆ ಸಂದರ್ಭದಲ್ಲಿ ನಟ ದರ್ಶನ್‌ನಿಂದ 30 ಲಕ್ಷ ರೂ ಹಣ ಪಡೆದು ತಾವೇ ಕೊಲೆ ಮಾಡಿದ್ದೆಂದು ನಾಲ್ವರು ಆರೋಪಿಗಳು ಸರೆಂಡರ್ ಆಗಿದ್ದು, ಈ ಕುರಿತು ಪೊಲೀಸರು ವಿಚಾರಣೆ ನಡೆಸಿದಾಗ…
ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್ ನಲ್ಲಿ ಕೃತಕ ಬಣ್ಣ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಆಯುಕ್ತರು ರಾಜ್ಯಾದ್ಯಂತ ಕೃತಕ ಬಣ್ಣ ಬಳಕೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ರಾಜ್ಯದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡು ಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA