Subscribe to Updates
Get the latest creative news from FooBar about art, design and business.
- ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
- ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
- ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
- ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
- ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
- ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
- ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
- ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
Author: admin
ಕೇದಾರನಾಥ ದೇಗುಲದ ಕೇದಾರನಾಥ ಧಾಮದಲ್ಲಿ ಚಿನ್ನ ಕಣ್ಮರೆಯಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದರ ಹೇಳಿಕೆ ನೀಡಿದ್ದು, ಇದು ಎಲ್ಲೆಡೆ ಸಂಚಲನ ಮೂಡಿಸಿದೆ. ಕೇದಾರನಾಥ ದೇಗುಲದಿಂದ 228 ಕಿಲೋಗ್ರಾಂ ಚಿನ್ನ ಕಳ್ಳತನವಾಗಿದೆ ಎಂದು ಸ್ವಾಮಿಜಿಯವರು ಆರೋಪ ಮಾಡಿದ್ದಾರೆ. ಅವರು ಮಾಡಿರುವ ಆರೋಪಕ್ಕೆ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಅಧ್ಯಕ್ಷ ಅಜೇಂದ್ರ ಅಜಯ್ ಉತ್ತರ ನೀಡಿದ್ದಾರೆ. ಸ್ವಾಮಿ ಅವಿಮುಕ್ತೇಶ್ವರಾನಂದರು ಹೇಳಿಕೆಗಳನ್ನು ನೀಡುವ ಬದಲು ಪ್ರಾಧಿಕಾರವನ್ನು ಸಂಪರ್ಕಿಸಿ ತನಿಖೆಗೆ ಒತ್ತಾಯಿಸಬೇಕು ಅಥವಾ ಸಾಕ್ಷ್ಯಾಧಾರಗಳಿದ್ದರೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್‌ಗೆ ಹೋಗಿ ಅರ್ಜಿ ಸಲ್ಲಿಸಬಹುದು ಎಂದು ಅಜೇಂದ್ರ ತಿಳಿಸಿದ್ದಾರೆ. ಜುಲೈ 15 ಸೋಮವಾರ ಸ್ವಾಮಿ ಅವಿಮುಕ್ತೇಶ್ವರಾನಂದರು ಕೇದಾರನಾಥದಲ್ಲಿ 228 ಕೆಜಿ ಚಿನ್ನ ನಾಪತ್ತೆಯಾಗಿದೆ ಎಂದು ಆರೋಪಿಸಿದ್ದರು. “ಕೇದಾರನಾಥದಲ್ಲಿ ಚಿನ್ನದ ಹಗರಣ ನಡೆದಿದೆ. ಆ ವಿಚಾರದ ಬಗ್ಗೆ ಇವರು ಏಕೆ ಚಕಾರ ಎತ್ತುತ್ತಿಲ್ಲ? ಅಲ್ಲಿ ಹಗರಣ ಮಾಡಿ ಈಗ ದೆಹಲಿಯಲ್ಲಿ ಕೇದಾರನಾಥ ನಿರ್ಮಾಣ ಮಾಡಲು ಹೊರಟಿದ್ದಾರೆ. ಅಲ್ಲಿಯೂ ಮತ್ತೊಂದು ಹಗರಣ ನಡೆಯಲಿದೆ. ಕೇದಾರನಾಥದಲ್ಲಿ 228 ಕೆಜಿ ಚಿನ್ನ ನಾಪತ್ತೆಯಾಗಿದೆ;…
ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡು ಬಳಿಕ ಡಿಲೀಟ್ ಮಾಡಿದ್ದಾರೆ. ಈ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಿಎಂ ಕನ್ನಡಿಗರಿಗೆ ಉದ್ಯೋಗದಲ್ಲಿ ಆಧ್ಯತೆ ನೀಡುವ ನಿರ್ಧಾರಕ್ಕೆ ಉದ್ಯಮಿಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪರ–ವಿರೋಧ ಚರ್ಚೆಯಾಗುತ್ತಿದ್ದಂತೆಯೇ ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂದೇಶವನ್ನು ಡಿಲೀಟ್ ಮಾಡಿಕೊಂಡಿದ್ದಾರೆ. ಇದಕ್ಕೆ ನಾನಾ ಪ್ರಶ್ನೆಗಳು ಹುಟ್ಟಿಕೊಂಡಿವೆ. ಉದ್ಯಮಿಗಳ ಒತ್ತಡಕ್ಕೆ ಮಣಿದು ಸಿಎಂ ಸಂದೇಶ ಡಿಲೀಟ್ ಮಾಡಿದ್ರಾ? ಅಥವಾ ಮಸೂದೆಯಲ್ಲಿರುವುದು ತಾವು ಸಾಮಾಜಿಕ ಜಾಲತಾಣದಲ್ಲಿ ಹೇಳಿರುವ ಮಾಹಿತಿ ಬೇರೆ ಬೇರೆ ಆಗಿದ್ಯಾ? ಹೀಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಸಾಮಾಜಿಕ…
ಕ್ರೈಸ್ತ ಪ್ರಾರ್ಥನಾ ಸಭೆಯೊಂದು ನಡೆಯುತ್ತಿದ್ದ ಮನೆಯೊಂದಕ್ಕೆ ದಾಳಿ ನಡೆಸಿದ ಸಂಘ ಪರಿವಾರದ ಕಾರ್ಯಕರ್ತರು ಮನೆಯಲ್ಲಿದ್ದ ಕನಿಷ್ಠ ಏಳು ಮಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಡೆಹ್ರಾಡೂನ್ ನಲ್ಲಿ ನಡೆದಿದೆ. ಅಲ್ಲಿದ್ದವರ ವಿರುದ್ಧ ಸಂಘ ಪರಿವಾರದ ಸದಸ್ಯರು ಮತಾಂತರದ ಆರೋಪ ಮಾಡಿದ್ದಾರೆ ಎನ್ನಲಾಗಿದೆ. ಈ ಪ್ರಾರ್ಥನಾ ಸಭೆ ದೀಕ್ಷಾ ಪೌಲ್ ಎಂಬವರ ಮನೆಯಲ್ಲಿ ನಡೆಯುತ್ತಿತ್ತು. ದೀಕ್ಷಾ ಅವರ ಪತಿ ರಾಜೀಶ್ ಹರಿದ್ವಾರ್ ನಲ್ಲಿ ಹೋಟೆಲ್ ನಡೆಸುತ್ತಿದ್ದಾರೆ. ಘಟನೆ ಸಂಬಂಧ ನೆಹ್ರೂ ಕಾಲನಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಸಂಘ ಪರಿವಾರದ 11 ಮಂದಿ ವಿರುದ್ಧ ಕೇಸ್ ದಾಖಲಾಗಿದೆ. ತಮ್ಮ ಮನೆ ಮೇಲೆ ದಾಳಿ ನಡೆಸಿದ ಗುಂಪಿನ ನೇತೃತ್ವವನ್ನು ದೇವೇಂದ್ರ ದೋಭಲ್ ಎಂಬವರು ವಹಿಸಿದ್ದರು ಎಂದು ದೀಕ್ಷಾ ಆರೋಪಿಸಿದ್ದಾರೆ. ಈ ವ್ಯಕ್ತಿಯ ಫೇಸ್ಬುಕ್ ಪ್ರೊಫೈಲ್ ಪ್ರಕಾರ ಈತ ಮಾಜಿ ಸೈನಿಕ ಹಾಗೂ ಆರೆಸ್ಸೆಸ್ ಸದಸ್ಯ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಇತ್ತೀಚೆಗೆ ಪ್ರತಿಷ್ಠಿತ ಕುಟುಂಬಗಳ ಮಕ್ಕಳು ಐಷಾರಾಮಿ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿ ಅಮಾಯಕರ ಸಾವಿಗೆ ಕಾರಣವಾದ ಘಟನೆಗಳು ವ್ಯಾಪಕ ಚರ್ಚೆಗೆ ಗ್ರಾಸವಾಗುತ್ತಿವೆ. ಈ ನಡುವೆ, 2016ರಲ್ಲಿ ನಡೆದಿದ್ದ ಇದೇ ರೀತಿಯ ಪ್ರಕರಣದಲ್ಲಿ, ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದ ಕಾರಿಗೆ ಬಲಿಯಾಗಿದ್ದ 32 ವರ್ಷದ ವ್ಯಕ್ತಿಯ ಪೋಷಕರಿಗೆ 1.98 ಕೋಟಿ ರೂ. ಪರಿಹಾರ ಕಾರು ಮಾಲಕನ ಕಡೆಯಿಂದ ನೀಡುವಂತೆ ವಿಮಾ ಕಂಪೆನಿಗೆ ಕೋರ್ಟ್ ಆದೇಶಿಸಲಾಗಿದೆ. ದಿಲ್ಲಿಯ ಮೋಟಾರು ಅಪಘಾತ ಪರಿಹಾರ ನ್ಯಾಯಮಂಡಳಿ (ಎಂಎಸಿಟಿ) ಈ ಆದೇಶ ಪ್ರಕಟಿಸಿದೆ. ಅಪಘಾತದಲ್ಲಿ ಬಲಿಯಾದ ಸಿದ್ಧಾರ್ಥ್ ಶರ್ಮಾ ಪೋಷಕರಿಗೆ 30 ದಿನಗಳ ಒಳಗೆ 1.21 ಕೋಟಿ ರೂ ಪರಿಹಾರ ಹಾಗೂ ಸುಮಾರು 77.61 ಲಕ್ಷ ರೂ ಸೇರಿದಂತೆ 1.98 ಕೋಟಿ ರೂ ಹಣ ಪಾವತಿಸುವಂತೆ ನ್ಯಾಯಮಂಡಳಿ ನಿರ್ದೇಶಿಸಿದೆ. 2016ರ ಏಪ್ರಿಲ್ 4ರಂದು ದಿಲ್ಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಅಪ್ರಾಪ್ತ ವಯಸ್ಕ ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು ಡಿಕ್ಕಿ ಹೊಡೆದು 32 ವರ್ಷದ ಸಿದ್ಧಾರ್ಥ್ ಶರ್ಮಾ ಜೀವ ಕಳೆದುಕೊಂಡಿದ್ದರು. ಈ ಭಯಾನಕ ಅಪಘಾತದ ದೃಶ್ಯವು…
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಿಂದಲೇ ವಶಕ್ಕೆ ಪಡೆದು ವಿಚಾರಣೆಗೆ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ದಿದ್ದಾರೆ. ಆರೋಪಿಗಳ ಹೇಳಿಕೆ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. ವಾಲ್ಮೀಕಿ ನಿಗಮದಿಂದ ಹಲವಾರು ಕೋಟಿ ರೂಪಾಯಿ ಅಕ್ರಮ ವ್ಯವಹಾರಲ್ಲಿ ಹಲವಾರು ಬ್ಯಾಂಕ್ ಖಾತೆಗಳಿಗೆ ಬೇನಾಮಿಯಾಗಿ ಹಣ ವರ್ಗಾವಣೆಯಾಗಿದೆ. ಈಗಾಗಲೇ ಬಂಧನಕ್ಕೆ ಒಳಗಾಗಿರುವ ನಾಗೇಂದ್ರರ ಬ್ಯಾಂಕ್ ಖಾತೆ ಜೊತೆ ಕುಟುಂಬಸ್ಥರ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಪತ್ನಿಯ ಖಾತೆಯಿಂದ ಹೆಚ್ಚು ಹಣ ವರ್ಗಾವಣೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕಾರಣಕ್ಕೆ ಇಡಿ ಅಧಿಕಾರಿಗಳು ಮಂಜುಳಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಇಡಿ ಅಧಿಕಾರಿಗಳು ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರರ ಮನೆ…
ಕೇಂದ್ರ ಸರ್ಕಾರದಿಂದ ಕ್ರೀಡೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಹಿಂದಿನ ದಿನದಂದು ಪ್ರಕಟಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಗೃಹ ಮಂತ್ರಾಲಯ ಭಾರತ ಸರ್ಕಾರದ ಅಧಿಸೂಚನೆಯಂತೆ ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳನ್ನು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಇತ್ಯಾದಿಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2024-25ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಿಗೆ ಪ್ರಸ್ತಾವನೆ / ಮನವಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಪದ್ಮ ಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ, ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವ ದಿನದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ. 2025ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಿಗೆ ಅನ್ವಯಿಸುವ ನಿಯಮಾವಳಿಗಳು https://padmaawards.gov.in ರಲ್ಲಿ ಲಭ್ಯವಿರುತ್ತದೆ. ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಸಂಬಂಧಿಸಿದ ಶಿಫಾರಸ್ಸಿನ ಪ್ರಸ್ತಾವನೆಗಳನ್ನು ಸಲ್ಲಿಸುವ ಪ್ರಕ್ರಿಯೆಯು 2024ರ ಆಗಸ್ಟ್ 23ರೊಳಗಾಗಿ…
ಕರ್ನಾಟಕ ಸರ್ಕಾರ ಕನ್ನಡಿಗರಿಗೆ ಒಂದು ಸುವಾರ್ತೆಯನ್ನು ತಂದಿದೆ. ಇನ್ನು ಮುಂದೆ ರಾಜ್ಯದ ಖಾಸಗಿ ಕಂಪನಿಗಳಲ್ಲಿ ಶೇ. 50–75ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಮೀಸಲು ಮಾಡುವ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ. ಈ ಹೊಸ ನಿಯಮವನ್ನು ಕೇಂದ್ರವಾಗಿಟ್ಟುಕೊಂಡು, ಸರ್ಕಾರ ಸ್ಥಳೀಯ ಜನರಿಗೆ ಹೆಚ್ಚು ಉದ್ಯೋಗಾವಕಾಶಗಳನ್ನು ಒದಗಿಸಲು ಬದ್ಧವಾಗಿದೆ. ಅಗತ್ಯವಿರುವ ನೀತಿ: ಇತ್ತೀಚೆಗೆ, ಸ್ಥಳೀಯ ಕನ್ನಡಿಗರು ತಮ್ಮ ಸ್ವಂತ ರಾಜ್ಯದಲ್ಲಿ ಕೆಲಸದ ಅವಕಾಶಗಳು ಕಡಿಮೆಯಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಅನೇಕ ಕಂಪನಿಗಳು ರಾಜ್ಯದ ಹೊರಗಿನ ಪ್ರತಿಭೆಯನ್ನು ಪ್ರಾಧಿಕಾರಕ್ಕೆ ತರಿಸಿಕೊಂಡು, ಕನ್ನಡಿಗರನ್ನು ತಳ್ಳಿಹಾಕುತ್ತಿದ್ದವು. ಈ ಹಿನ್ನಲೆಯಲ್ಲಿ, ಈ ಹೊಸ ಮೀಸಲಾತಿ ನೀತಿ ಕನ್ನಡಿಗರಿಗೆ ಹೆಚ್ಚು ಕೆಲಸದ ಭರವಸೆ ನೀಡಲು ಸಹಾಯಕವಾಗಲಿದೆ. ಪ್ರಯೋಜನಗಳು: ಸ್ಥಳೀಯ ಉದ್ಯೋಗಾವಕಾಶಗಳು: ಈ ಮೀಸಲಾತಿ ನೀತಿಯು ಕನ್ನಡಿಗರು ತಮ್ಮ ರಾಜ್ಯದಲ್ಲಿಯೇ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯಲು ನೆರವಾಗಲಿದೆ. ಆರ್ಥಿಕ ಪ್ರಗತಿ: ಕನ್ನಡಿಗರು ಹೆಚ್ಚು ಉದ್ಯೋಗಕ್ಕೆ ಸೇರಿದರೆ, ರಾಜ್ಯದ ಆರ್ಥಿಕ ಪರಿಸ್ಥಿತಿಯು ಉತ್ತಮವಾಗಲಿದೆ. ಸಾಮಾಜಿಕ ಸುಧಾರಣೆ: ಸ್ಥಳೀಯ ಜನರ ಜೀವನಮಟ್ಟ ಹೆಚ್ಚಾಗುವುದು, ಹಾಗೆಯೇ ಸಾಮಾಜಿಕ ಸಮಾನತೆ ಸ್ಥಾಪನೆಯಾಗುವುದು. ಪ್ರತಿಕ್ರಿಯೆಗಳು: ರಾಜ್ಯದ…
ಜುಲೈ 17 ಅನ್ನು ಪ್ರಪಂಚದಾದ್ಯಂತ ಅಂತರರಾಷ್ಟ್ರೀಯ ನ್ಯಾಯ ದಿನವನ್ನಾಗಿ ಆಚರಿಸಲಾಗುತ್ತದೆ. 1998ರಲ್ಲಿ ರೂಮ್ ಸಂಸ್ಥೆಯ ಅಂಗಸಂಸ್ಥೆಯಾದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯದ (ICC) ಸ್ಥಾಪನೆಗೊಂಡ ದಿನವಾಗಿದ್ದು, ಈ ದಿನದ ಆಚರಣೆ ಮಾನವೀಯತೆ, ನ್ಯಾಯ ಮತ್ತು ಮಾನವ ಹಕ್ಕುಗಳ ಪರ ಹೋರಾಟದ ಸಂಕೇತವಾಗಿದೆ. ಈ ವಿಶೇಷ ದಿನವು ನ್ಯಾಯದ ಮಹತ್ವವನ್ನು ನೆನಪಿಸುತ್ತದೆ ಮತ್ತು ಕಾನೂನು ವ್ಯವಸ್ಥೆಯ ಪ್ರಾಮುಖ್ಯತೆಯನ್ನು ಹಾಸಿಲು ಮಾಡುತ್ತದೆ. ಮಾನವೀಯ ಹಕ್ಕುಗಳ ಉಲ್ಲಂಘನೆ, ಗಂಭೀರ ಅಪರಾಧಗಳು, ಮತ್ತು ಅತಿರೇಕದ ಘಟನೆಗಳನ್ನು ತಡೆಹಿಡಿಯಲು ಮತ್ತು ನ್ಯಾಯ ಒದಗಿಸಲು ಬದ್ಧತೆ ನೀಡಿದೆಯೆಂದು ಪ್ರತಿಬಿಂಬಿಸುತ್ತದೆ. ವಕೀಲನಾಗಿ, ನಾನು ಭಾರತೀಯ ಸಂವಿಧಾನದ ಸಿದ್ಧಾಂತಗಳಿಗೆ ತಲೆಬಾಗುತ್ತೇನೆ ಮತ್ತು ನನ್ನ ಕೊನೆಯ ಉಸಿರು ಇರುವವರೆಗೂ ಕಷ್ಟದಲ್ಲಿರುವ ಸಾಮಾನ್ಯ ಜನರಿಗೆ ನ್ಯಾಯ ಒದಗಿಸುವ ಪ್ರತಿಜ್ಞೆ ಮಾಡುತ್ತೇನೆ. ನಮ್ಮ ದೇಶದ ನ್ಯಾಯ ವ್ಯವಸ್ಥೆಯ ಆಧಾರ ಸತ್ಯ ಮತ್ತು ಧರ್ಮದ ಮೇಲೆ ನಿಂತಿದೆ. ಸಂವಿಧಾನವು ನಮಗೆ ಹಕ್ಕುಗಳನ್ನು ಮಾತ್ರವಲ್ಲ, ಕರ್ತವ್ಯಗಳನ್ನೂ ನೀಡುತ್ತದೆ. ಈ ಕರ್ತವ್ಯಗಳನ್ನು ನಿಷ್ಠೆಯಿಂದ ಪಾಲಿಸುವ ಮೂಲಕ ಮಾತ್ರ ನಿಜವಾದ ನ್ಯಾಯವನ್ನು ಪ್ರಜಾಪ್ರಭುತ್ವದಲ್ಲಿ ಸಾಧಿಸಲು…
ಪ್ರತಿ ವರ್ಷ ವಿಭಿನ್ನ ಥೀಮ್ನಲ್ಲಿ ಫ್ಲವರ್ ಶೋ ಆಯೋಜಿಸುವ ಮೂಲಕ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಜನರು ಕಾತರದಿಂದ ಇರುತ್ತಾರೆ. ಇದು 214ನೇ ಫಲಪುಷ್ಪ ಪ್ರದರ್ಶನವಾಗಿರಲಿದೆ. ಈ ವರ್ಷ ಕೂಡ ಸ್ವಾತಂತ್ರ್ಯ ದಿನಾಚರಣೆಯ ಸಲುವಾಗಿ ಲಾಲ್ ಬಾಗ್ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಜೀವನ ಗಾಥೆಯನ್ನು ಬಿಂಬಿಸುವ ಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತಿದ್ದು, ಆಗಸ್ಟ್ 8 ರಿಂದ 19 ರವರೆಗೆ ಫಲಪುಷ್ಪ ಪ್ರದರ್ಶನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಫ್ಲವರ್ ಶೋನಲ್ಲಿ 60ಕ್ಕೂ ಹೆಚ್ಚು ಬಗೆಯ ಹೂಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದು, ಒಟ್ಟು 15 ಲಕ್ಷದಷ್ಟು ಹೂಗಳನ್ನು ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಸದ್ಯ ಲಾಲ್ ಬಾಗ್ ಗಾರ್ಡನ್ನಲ್ಲಿ 4 ಸಾವಿರಕ್ಕೂ ಹೆಚ್ಚು ವಿವಿಧ ಬಗೆಯ ಹೂಗಳನ್ನು ಸಿದ್ಧಮಾಡಿಕೊಳ್ಳಲಾಗುತ್ತಿದೆ. ಫ್ಲವರ್ ಶೋನಲ್ಲಿ ಆಂಥೋರಿಯಂ ಹೂಗಳು, ಗುಲಾಬಿ, ಜರ್ಬೆರಾ, ಆರ್ಕಿಡ್, ನಂದಿ ಗಿರಿಧಾಮದ ಇಂಪೇಷನ್ಸ್ ಹೂಗಳು, ರೆಡ್‌ಹಾಟ್ ಪೋಕರ್, ಆಲ್‌ಸ್ಟೋಮೇರಿಯನ್ ಲಿಲ್ಲಿ, ಪೂಷಿಯಾ, ಅಗಪಾಂಥಸ್, ಸೈಕ್ಲೋಮನ್, ಕ್ಯಾಲಾಲಿಲ್ಲಿ, ಸುಗಂಧ ರಾಜ, ಕುಂಡಗಳಲ್ಲಿ…
ಲೇಖನ: ಹಾಶಿಂ ಬನ್ನೂರು ಮುಹರಮ್ ತಿಂಗಳು ಮುಸ್ಲಿಮರ ಹೊಸ ವರ್ಷದ ಪ್ರಾರಂಭ ತಿಂಗಳು, ಈ ತಿಂಗಳಲ್ಲಿ ವಿಶೇಷವಾದ ಹಬ್ಬಗಳನ್ನು ಬಹಳ ವಿಜ್ರಂಬಣೆ ಭಯ ಭಕ್ತಿಯಿಂದ ಆಚರಿಸುತ್ತಾರೆ. ಮುಹರ್ರಮ್ ತಿಂಗಳ ಮೊದಲ ಹತ್ತು ದಿನಗಳು ವಿಶೇಷತೆಯ ದಿನಗಳಾಗಿವೆ. ಶಿಯಾ ಮುಸ್ಲಿಮರು ಆಚರಿಸುವ ಪ್ರಮುಖ ಹಬ್ಬ ಮುಹರ್ರಮ್ ಆಗಿದೆ. ಅಲ್ಲದೇ ಹಿಂದೂ ಮುಸ್ಲಿಮರು ಭಾವೈಕ್ಯತೆಯಿಂದಲೂ ಈ ಹಬ್ಬದಲ್ಲಿ ಪಾಲ್ಗೊಂಡು ಸೌಹಾರ್ದತೆಯಿಂದ ಆಚರಿಸಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಮುಹರಮ್ ಹಬ್ಬವನ್ನು ಬಾಬಯ್ಯ ಹಬ್ಬ ಎಂದು ಕರೆಯುತ್ತಾರೆ. ಮುಹರಮ್ ಒಂದು ತಿಂಗಳ ಹೆಸರಾಗಿದ್ದು ಇಸ್ಲಾಮಿಕ್ ಮುಸಲ್ಮಾನರ ಹಿಜರಿ ಕ್ಯಾಲೆಂಡರ್ ಪ್ರಕಾರ ಮೊದಲನೇ ತಿಂಗಳು. ಮುಸ್ಲಿಮರಿಗೆ ಇದು ಹೊಸ ವರ್ಷ ದುಖಃದಿಂದ ಗೌರವದಿಂದ ಮುಹರಮ್ ಹಬ್ಬವನ್ನು ಆಚರಿಸುತ್ತಾರೆ . ಮುಹರಮ್ ಎಂಬುವುದು ಅರೇಬಿಕ್ ಪದವಾಗಿದ್ದು “ನಿಷಿದ್ದ” ಎಂಬ ಅರ್ಥವನ್ನು ಸೂಚಿಸುತ್ತದೆ. ಈ ತಿಂಗಳಲ್ಲಿ ಯಾವುದೇ ರೀತಿಯ ಶುಭ ಕಾರ್ಯಗಳು ಮಾಡಲು ಸೂಕ್ತವಾಗಿರೂದಿಲ್ಲ. ಮುಹರಂ 9 ತಾಸೂಆ ಮತ್ತು 10 ನೇ ಆಶುರಾ ದಿನದಂದು ಉಪವಾಸವಿರೂದು ಮತ್ತು ಸತ್ಕರ್ಮಗಳನ್ನು ವೃದ್ಧಿ…