Author: admin

ತುಮಕೂರು:  ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಬಡತನ ನಿರ್ಮೂಲನಾ ಸಮಿತಿಯ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ನೂರುನ್ನೀಸ ಅವರು ಜಿಲ್ಲೆಯ ಹಲವಾರು ಅಂಗನವಾಡಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎನ್.ಆರ್.ಕಾಲೋನಿ, ವಡ್ಡರಹಳ್ಳಿ, ಬೆಳಗುಂಬ, ಬೆಳಗುಂಬ ಲಂಬಾಣಿ ತಾಂಡ್ಯ ಮೊದಲಾದ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ, ಅವಧಿ, ತೂಕ, ದಾಸ್ತಾನನ್ನು ಪರಿಶೀಲಿಸಿದರು. ಕಟ್ಟಡಗಳ ದುರಸ್ತಿ, ಅಂಗನವಾಡಿ ಕೇಂದ್ರಗಳ ಹೊರಾಂಗಣ ಹಾಗೂ ಒಳಾಂಗಣದ ಸ್ವಚ್ಛತೆ ಹಾಗೂ  ಅಗತ್ಯ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು,.  ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಬರುವ ಮಾರ್ಗ ಮಧ್ಯೆ ಬೆಳಗುಂಬ ರಸ್ತೆ ಮಾರ್ಗದ ಬದಿಯಲ್ಲಿ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಹಗ್ಗದ ಮೇಲೆ ನಡೆಯುತ್ತಾ ದೊಂಬರಾಟ ಆಡುತ್ತಿದ್ದು, ಅವರ ಪೋಷಕರು ಅವರಿಂದ ಭಿಕ್ಷಾಟನೆ ಮಾಡಿಸುತ್ತಿರುವುದನ್ನು ಗಮನಿಸಿದ ಅವರು ತಕ್ಷಣ ಮಕ್ಕಳು ಹಾಗೂ ಪೋಷಕರನ್ನು ವಿಚಾರಿಸಿದಾಗ ಪೋಷಕರು ಮಾತನಾಡುತ್ತಾ  ನಾವು ಚಂಡಿಗಡ ಮೂಲದವರಾಗಿದ್ದು, ಇಡೀ…

Read More

ಕನ್ನಡದ ಖ್ಯಾತ ಹಿರಿಯ ರಂಗಕರ್ಮಿ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಸದಾನಂದ ಸುವರ್ಣ ಅವರು ಇಂದು ವಿಧಿವಶರಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ನಾಳೆ ಪುರಭವನದಲ್ಲಿ ಮಧ್ಯಾಹ್ನ 1 ರಿಂದ 3 ಗಂಟೆ ತನಕ ಮೃತರ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಬಳಿಕ ಅವರಿಚ್ಛೆಯಂತೆ ದೇಹದಾನ ಮಾಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. ಸದಾನಂದ ಸುವರ್ಣರು ನಿರ್ಮಿಸಿದ್ದ ”ಘಟಶ್ರಾದ್ಧ” ಚಿತ್ರ ಮತ್ತು ನಿರ್ದೇಶಿಸಿದ್ದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ”ಕುಬಿ ಮತ್ತು ಇಯಾಲ” ಕತೆಯನ್ನಾಧರಿಸಿದ ಚಿತ್ರಗಳೆರಡೂ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳಿಗೆ ಭಾಜನವಾಗಿವೆ.ನೂರಾರು ಕನ್ನಡ ಮತ್ತು ತುಳು ನಾಟಕಗಳನ್ನು ನಿರ್ದೇಶಿಸಿದ್ದ ಸುವರ್ಣರ ರಂಗಗರಡಿಯಿಂದ ಬಂದಿರುವ ಹಲವಾರು ಪ್ರತಿಭಾವಂತ ನಟ-ನಟಿಯರು ಕಲಾಜಗತ್ತಿನಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ಸಾಹಿತ್ಯದಲ್ಲೂ ಆಸಕ್ತಿ ಹೊಂದಿದ್ದ ಅವರು ಸಣ್ಣ ಕತೆ, ಕಾದಂಬರಿಗಳನ್ನು ಕೂಡ ಬರೆದಿದ್ದಾರೆ. ತಬರನ ಕತೆ, ಮನೆ, ಕ್ರೌರ್ಯ ಚಿತ್ರಗಳ ನಿರ್ವಾಹಕ ನಿರ್ಮಾಪಕರು. ಈ ಸಿನೆಮಾಗಳಿಗೆ ರಾಷ್ಟ್ರ ಪ್ರಶಸ್ತಿ ಬಂದಿದೆ. 1989ರಲ್ಲಿ ತೇಜಸ್ವಿ ಅವರ ಸಣ್ಣ ಕತೆ ಆಧರಿತ ಕುಬಿ…

Read More

ಸಿಎಂ ಜೊತೆ ಚರ್ಚಿಸಿ ಪರಿಹಾರ ಕಲ್ಪಿಸಲು ಕ್ರಮ ವಿಧಾನ ಪರಿಷತ್‌ ನಲ್ಲಿ ಗೃಹ ಸಚಿವ ಪರಮೇಶ್ವರ ಹೇಳಿಕೆ ವಿಧಾನಪರಿಷತ್: ಹುಬ್ಬಳ್ಳಿಯಲ್ಲಿ ನಡೆದ ಯುವತಿ ಅಂಜಲಿ ಅಂಬಿಗೇರ ಹತ್ಯೆ‌ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಕುಟುಂಬಸ್ಥರಿಗೆ ಸರ್ಕಾರದಿಂದ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ವಿಧಾನ ಪರಿಷತ್‌ ನಲ್ಲಿ ಸದಸ್ಯ ತಿಪ್ಪಣ್ಣ ಕಮಕನೂರು ಅವರು ಕೇಳಿದ, ‘ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಕುಟುಂಬಕ್ಕೆ ಪರಿಹಾರ ಕಲ್ಪಿಸುವಲ್ಲಿ ವಿಳಂಬ ಮತ್ತು ಪ್ರಕರಣದ ವಿಚಾರಣಗೆ ಫಾಸ್ಟ್ರ್ಯಾಕ್ ಕೋರ್ಟ್’ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು. ಸಾಮಾನ್ಯವಾಗಿ ಕೊಲೆ ಪ್ರಕರಣಗಳಿಗೆ ಸರ್ಕಾರ ಪರಿಹಾರ ನೀಡುವುದಿಲ್ಲ. ಯುವತಿಯ ಕುಟುಂಬದ ಬಡತನವನ್ನು ನೋಡಿದಾಗ ಎಂಥವರಿಗಾದರೂ ಕನಿಕರ, ಅನುಕಂಪ ಬರುತ್ತದೆ. ಹೀಗಾಗಿ ಈ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮುಖ್ಯಮಂತ್ರಿ ಅವರೊಂದಿಗೆ ಮಾತನಾಡಿ ಪರಿಹಾರ ಕಲ್ಪಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು‌. ಘಟನೆ ನಡೆದ ಬಳಿಕ ಅವರ ನಿವಾಸಕ್ಕೆ ಭೇಟಿ ನೀಡಿ, ಯುವತಿಯ…

Read More

ವಿಧಾನಸೌಧ: ಬೆಂಗಳೂರು ನಗರದಲ್ಲಿನ ಪಾರ್ಕಿಂಗ್  ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಬಿಬಿಎಂಪಿ ಮತ್ತು ಸಾರಿಗೆ ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು‌. ವಿಧಾನಸೌಧದಲ್ಲಿ ಪ್ರಶ್ನಾವಳಿ ಅವಧಿ ವೇಳೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಪಾರ್ಕಿಂಗ್ ಸಮಸ್ಯೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ನಗರದಲ್ಲಿ ಇನ್ಫ್ರಾಸ್ಟ್ರಕ್ಚರ್‌ ಗಳಿಗೆ ನಿಯಮಗಳನ್ನು ರೂಪಿಸದಿರುವ ಹಿನ್ನೆಲೆಯಲ್ಲಿ ರಸ್ತೆ ಬದಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದಾರೆ‌‌.‌ ಇದನ್ನು ತಡೆಗಟ್ಟಲು ಬಿಬಿಎಂಪಿ, ಸಾರಿಗೆ ಇಲಾಖೆಯವರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಮನೆಕಟ್ಟುವಾಗ ವಾಹನಗಳ ಪಾರ್ಕಿಂಗ್‌ಗೆ ಸ್ಥಳ ಇದ್ದರೆ ಮಾತ್ರ ಅನುಮತಿ ನೀಡಬೇಕು. ಇಂತಹ ನಿಯಮಗಳನ್ನು ತರಲು ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಬೆಂಗಳೂರು ನಗರದಲ್ಲಿ 1194 ನೋ ಪಾರ್ಕಿಂಗ್ ರಸ್ತೆಗಳೆಂದು ಗುರುತಿಸಲಾಗಿದೆ. 2022ರಲ್ಲಿ 12,07,651 ಪ್ರಕರಣಗಳಲ್ಲಿ 20,84,56,000 ರೂ. ದಂಡ, 2023ರಲ್ಲಿ 11,30,855 ಪ್ರಕರಣಗಳಿಗೆ ರೂ 37,30,22,000, 2024 (ಜೂನ್ 3ರವರೆಗೆ) 5,21,326 ಪ್ರಕರಣಗಳನ್ನು ದಾಖಲಿಸಿ…

Read More

ಕೆಲವು ಸಂದರ್ಭಗಳಲ್ಲಿ ಸಿಗ್ನಲ್ ಜಂಪ್ ಮಾಡಿ ಅದಕ್ಕೆ ದಂಡ ಪಾವತಿಸುವಂತೆ ಚಲನ್ ಬಂದರೆ ಏನು ಮಾಡಬೇಕು ಎಂದೂ ಬೆಂಗಳೂರು ಸಂಚಾರಿ ಪೊಲೀಸರೇ ಸಲಹೆ ನೀಡಿದ್ದಾರೆ. ಆಂಬ್ಯುಲೆನ್ಸ್‌ ಗೆ ದಾರಿ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರು ಟ್ರಾಫಿಕ್ ಪೊಲೀಸರು ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ. ಆಂಬ್ಯುಲೆನ್ಸ್‌ ಗೆ ದಾರಿ ಮಾಡಿಕೊಡಲು ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿದ್ದಕ್ಕಾಗಿ ಹೊರಡಿಸಿದ ಚಲನ್‌ಗಳನ್ನು ಈಗ ರದ್ದುಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ. ಈ ವಿಚಾರವಾಗಿ ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಎಂಎನ್ ಅನುಚೇತ್ ಮಾಹಿತಿ ನೀಡಿದ್ದಾರೆ. ಆಂಬ್ಯುಲೆನ್ಸ್‌ಗೆ ದಾರಿ ಮಾಡುವಾಗ ಸಿಗ್ನಲ್‌ ಜಂಪ್ ಮಾಡಿದ್ದಕ್ಕಾಗಿ ಕ್ಯಾಮರಾಗಳ ದೃಶ್ಯ ಆಧರಿಸಿ ದಂಡ ವಿಧಿಸಿದ ಉದಾಹರಣೆಗಳಿವೆ. ಇದಕ್ಕೆ ಭಯಪಡಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ. ಏನು ಮಾಡಬೇಕು ಎಂದೂ ತಿಳಿಸಿದ್ದಾರೆ. ಸಿಗ್ನಲ್ ಜಂಪ್​ಗಾಗಿ ಚಲನ್‌ಗಳನ್ನು ಪಡೆದ ಪ್ರಯಾಣಿಕರು ಇನ್‌ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರದ ಕಚೇರಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯ ಗಮನಕ್ಕೆ ತರಬಹುದು ಎಂದು ಎಂಎನ್ ಅನುಚೇತ್ ತಿಳಿಸಿದ್ದಾರೆ. ಅಥವಾ ಕರ್ನಾಟಕ ರಾಜ್ಯ ಪೊಲೀಸ್…

Read More

ಪಾವಗಡ: ತಾಲ್ಲೂಕಿನ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ  ರೈತರು ಪ್ರತಿಭಟಿಸಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಿರತ ರೈತರು ಟೋಲ್ ಗೇಟ್, ಅಂಬೇಡ್ಕರ್ ವೃತ್ತದ ಬಳಿ ಘೋಷಣೆ ಕೂಗುತ್ತಾ ಗಮನಸೆಳೆದರು. ಈ ವೇಳೆ ರಾಜ್ಯಾಧ್ಯಕ್ಷ ಬಸವರಾಜಪ್ಪ ಮಾತನಾಡಿ,  ತಾಲ್ಲೂಕಿನ ರೈತರಿಗೆ ಆಗುತ್ತಿರುವ ಕೊರತೆಗಳನ್ನು ನೀಗಿಸಬೇಕು…ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಿರುವ ರೈತರಿಗೆ ಶೀಘ್ರ ಸಾಗುವಳಿ ಚೀಟಿ ನೀಡಬೇಕು ಪಹಣಿ ಮಾಡಿಸಿಕೊಡಬೇಕು  ಎಂದು ಆಗ್ರಹಪಡಿಸಿದರು. ಕಂದಾಯ ಇಲಾಖೆಯಿಂದ ಪಹಣಿ ಮಾಡಿಸಿಕೊಂಡ ಜಾಗದಲ್ಲಿ ಅರಣ್ಯ ಇಲಾಖೆಯವರು ಸಸಿಗಳನ್ನು ನೆಟ್ಟು ಅನ್ಯಾಯ ಮಾಡುತ್ತಿದ್ದಾರೆ ಎಂದು ಇದೇ ವೇಳೆ ಅವರು ಆರೋಪಿಸಿದರು. ನೂತನವಾಗಿ ಆಯ್ಕೆಯಾದ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ  ಪೂಜಾರಪ್ಪ ಮಾತನಾಡಿ,  ಈ ಹಿಂದೆ ಹಿಂದೆ 25 ಸಾವಿರ ಕೊಟ್ಟರೆ ವಿದ್ಯುತ್ ಸಂಪರ್ಕ ಕಲ್ಪಿಸಿ ಅನುಕೂಲ ಮಾಡುತ್ತಿದ್ದರು. ಆದರೆ ಈಗ 2 ರಿಂದ 6 ಲಕ್ಷದವರೆಗೂ ಹಣ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ.…

Read More

ಹೆಚ್.ಡಿ.ಕೋಟೆ:  ತಾಲೂಕಿನ ಹೆಚ್. ಮಟಕೆರೆ ಗ್ರಾಮದ ನಿವಾಸಿಗಳಾದ ಜಯಮ್ಮ ಕೋಂ ಸೋಮನಾಯಕ ಎಂಬುವವರ ಮನೆಯು ತುಂಬಾ ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಕುಸಿದು ಬಿದ್ದಿದ್ದು,  ಪರಿಣಾಮವಾಗಿ ಮನೆಯಲ್ಲಿದ್ದ  ಸೋಮನಾಯಕ ರವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯಿಂದಾಗಿ  ಮನೆಯ ಹೆಂಚು, ಮನೆಯ ಸಾಮಗ್ರಿಗಳಿಗೆ  ಹಾನಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಗ್ರಾಮಲೆಕ್ಕಾಧಿಕಾರಿ ಸರ್ಕಾರದಿಂದ ಬರುವ ಸಹಾಯಧನವನ್ನು ಬಿಡುಗಡೆ ಮಾಡಿಸಿ ಕೊಡುತ್ತೇವೆ ಎಂದಿದ್ದಾರೆ. ಇದೇ ವೇಳೆ ಸೋಮನಾಯಕ ಅವರು,  ನಾನು  ತುಂಬಾ ಬಡವನಾಗಿದ್ದು, ನನಗೆ ವಾಸಿಸಲು ಮನೆ ಇಲ್ಲ, ಗ್ರಾಮ ಪಂಚಾಯತಿ ವತಿಯಿಂದನೂ ನನಗೆ ಮನೆ ಆಗಿಲ್ಲ, ಸರ್ಕಾರದ ಸಹಾಯಧನದ ಬದಲು ನನಗೆ ಮನೆ ನಿರ್ಮಿಸಿ ಕೊಡಬೇಕು ಮನವಿ ಮಾಡಿಕೊಂಡರು. ವರದಿ: ಹಾದನೂರು ಚಂದ್ರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಅಂಬಾನಿ ಕುಟುಂಬದ ಪುತ್ರ ಅನಂತ್ ಅಂಬಾನಿಯವರ ವಿವಾಹ ಸಮಾರಂಭದ ಪ್ರಯುಕ್ತ ಇಡೀ ಕುಟುಂಬ ವಿವಾಹ ಆಚರಣೆಯಲ್ಲಿ ಮುಳುಗಿತ್ತು. ಈ ನಡುವೆ ಈ ಸಮಾರಂಭದ ವೇಳೆ ಅನಂತ್ -ರಾಧಿಕಾ ಆರತಕ್ಷತೆಗೆ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಪ್ರವೇಶಿಸಿ ಅಡ್ಡಿಯನ್ನುಂಟುಮಾಡಿದ್ದಾರೆ. ಜುಲೈ 14ರಂದು ನಡೆದ ಅಂಬಾನಿ ಕುಟುಂಬದ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದೆ ಪ್ರವೇಶಿಸಲು ಯತ್ನಸಿದ ಯೂಟ್ಯೂಬರ್ ಹಾಗೂ ಇನ್ನೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಯಕ್ರಮಕ್ಕೆ ಯೂಟ್ಯೂಬರ್ ವೆಂಕಟೇಶ್ ನರಸಯ್ಯ (26) ಮತ್ತು ಇನ್ನೊಬ್ಬ ವ್ಯಕ್ತಿ ಉದ್ಯಮಿ ಎಂದು ಹೇಳಿಕೊಂಡ ಲುಕಾಮ್ ಮೊಹಮ್ಮದ್ ಶಫಿ ಶೇಖ್ (28) ಆಂಧ್ರಪ್ರದೇಶದಿಂದ ಮುಂಬೈಗೆ ಬಂದಿದ್ದರು. ಇವರಿಗೆ ವಿವಾಹಕ್ಕೆ ಆಹ್ವಾನ ನೀಡದಿದ್ದರೂ ಕೂಡ ಗೇಟ್ ಕ್ರಾಸಿಂಗ್ ಮಾಡಿದ್ದಕ್ಕಾಗಿ ಪೊಲೀಸರು ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಇಬ್ಬರನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ವೆಂಕಟೇಶ್ ಮತ್ತು ಲುಕಮ್ ಇಬ್ಬರೂ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ ಗೆ ಆಗಮಿಸಿದ್ದರು. ಅನುಮಾನಗೊಂಡ ಭದ್ರತಾ ಅಧಿಕಾರಿಗಳು ಅವರನ್ನು…

Read More

ಪೇರಳೆ ಅಥವಾ ಸೀಬೆ ಕಾಯಿ ಮತ್ತು ಹಣ್ಣುಗಳನ್ನ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು ನಮಗೆಲ್ಲರಿಗೂ ತಿಳಿದಿದೆ. ಆದ್ರೆ, ಸೀಬೆ ಎಲೆಗಳ ಆರೋಗ್ಯ ಪ್ರಯೋಜನಗಳ ಬಗ್ಗೆ ಕೆಲವೇ ಜನರಿಗೆ ತಿಳಿದಿದೆ. ಸೀಬೆ ಎಲೆಯಲ್ಲಿ ಹಲವಾರು ಔಷಧೀಯ ಗುಣಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಸೀಬೆ ಎಲೆಗಳು ನೈಸರ್ಗಿಕ ಔಷಧವಾಗಿ ಕಾರ್ಯನಿರ್ವಹಿಸುತ್ತವೆ. ಇದರಿಂದ ದೇಹವು ಯಾವುದೇ ಹಾನಿಯಾಗದಂತೆ ಆರೋಗ್ಯಕರವಾಗಿರುತ್ತದೆ. ಹೊಟ್ಟೆಯ ಸಮಸ್ಯೆಯಿಂದ ಬಳಲುತ್ತಿರುವವರು ಪೇರಲ ಎಲೆಗಳನ್ನ ತಿಂದರೆ ಆ ಸಮಸ್ಯೆಯಿಂದ ಪರಿಹಾರ ಸಿಗುತ್ತದೆ. ಇದು ಉತ್ಕರ್ಷಣ ನಿರೋಧಕ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನ ಹೊಂದಿದೆ. ಇದಲ್ಲದೆ, ಈ ಎಲೆಗಳು ಅನೇಕ ರಾಸಾಯನಿಕಗಳನ್ನ ಹೊಂದಿರುತ್ತವೆ. ಇದು ವಿವಿಧ ರೋಗಗಳ ಚಿಕಿತ್ಸೆಯಲ್ಲಿ ಬಹಳ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. ಕ್ಯಾನ್ಸರ್ ತಡೆಗಟ್ಟುವಿಕೆ : ಪೇರಳೆ ಎಲೆಗಳು ಕ್ಯಾನ್ಸರ್’ಗೆ ಕಾರಣವಾಗುವ ಜೀವಕೋಶಗಳನ್ನ ನಾಶಮಾಡುತ್ತವೆ. ಕ್ಯಾನ್ಸರ್ ಕೋಶ ರೂಪಾಂತರಗಳ ಅಪಾಯವನ್ನ ಕಡಿಮೆ ಮಾಡುತ್ತದೆ. ಸೀಬೆ ಎಲೆಗಳನ್ನ ನಿಯಮಿತವಾಗಿ ಸೇವಿಸುವುದರಿಂದ ಕೆಲವು ರೀತಿಯ ಕ್ಯಾನ್ಸರ್ ಬರದಂತೆ ತಡೆಯಬಹುದು ಎನ್ನುತ್ತಾರೆ ತಜ್ಞರು. ಮಧುಮೇಹಕ್ಕೆ ಉತ್ತಮ ಔಷಧ…

Read More

ಹುರಿದ ಕಡಲೆಯು ಪೋಷಕಾಂಶಗಳ ಶಕ್ತಿಕೇಂದ್ರವಾಗಿದೆ ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಹುರಿದ ಕಡಲೆಯು ವಿಟಮಿನ್, ಕ್ಯಾಲ್ಸಿಯಂ, ಕಬ್ಬಿಣ, ಕಾರ್ಬೋಹೈಡ್ರೇಟ್ ಗಳು ಇತ್ಯಾದಿಗಳಲ್ಲಿ ಸಮೃದ್ಧವಾಗಿದೆ. ಅವು ದೇಹಕ್ಕೆ ಪೋಷಕಾಂಶಗಳನ್ನ ಒದಗಿಸುತ್ತವೆ. ಹುರಿದ ಕಡಲೆಯಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದೆ. ಇದು ಮೂಳೆಗಳು ಮತ್ತು ಹಲ್ಲುಗಳನ್ನ ಬಲಪಡಿಸಲು ಸಹಾಯ ಮಾಡುತ್ತದೆ. ನೀವು ಪ್ರತಿದಿನ ಹುರಿದ ಕಡಲೆಯನ್ನ ಸೇವಿಸಿದರೆ, ನಿಮ್ಮ ದೇಹಕ್ಕೆ ಸಾಕಷ್ಟು ಕ್ಯಾಲ್ಸಿಯಂ ಸಿಗುತ್ತದೆ. ಆಸ್ಟಿಯೊಪೊರೋಸಿಸ್ ಅಪಾಯವನ್ನ ಕಡಿಮೆ ಮಾಡುತ್ತದೆ. ಆರೋಗ್ಯಕರ ದೇಹಕ್ಕೆ ಸಮತೋಲಿತ ಆಹಾರ ಅತ್ಯಗತ್ಯ. ಹುರಿದ ಕಡಲೆಯು ಸಮತೋಲಿತ ಆಹಾರದ ಭಾಗವಾಗಿದೆ ಎಂದು ತಜ್ಞರು ಹೇಳುತ್ತಾರೆ. ಸಮತೋಲಿತ ಆಹಾರದಲ್ಲಿ ನೀವು ದಿನಕ್ಕೆ 100 ಗ್ರಾಂ ಹುರಿದ ಕಡಲೆಯನ್ನ ತೆಗೆದುಕೊಳ್ಳಬಹುದು ಎಂದು ಹೇಳಲಾಗುತ್ತದೆ. ಹುರಿದ ಕಡಲೆಯ ಬಗ್ಗೆ ಮತ್ತೊಂದು ಲಾಭವೆಂದ್ರೆ ಅವುಗಳನ್ನ ತಿನ್ನುವುದು ಮಾನಸಿಕ ಆರೋಗ್ಯ ಮತ್ತು ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ. ಬೀನ್ಸ್‌ನಲ್ಲಿರುವ ಪೋಷಕಾಂಶಗಳು ಮೆದುಳಿನ ಕಾರ್ಯವನ್ನು ಉತ್ತೇಜಿಸುತ್ತದೆ. ಹುರಿದ ಕಡಲೆಯಲ್ಲಿ ತಾಮ್ರ ಮತ್ತು ರಂಜಕ ಸಮೃದ್ಧವಾಗಿದೆ. ಈ ಪೋಷಕಾಂಶಗಳು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಹುರಿದ ಕಡಲೆಯಲ್ಲಿ…

Read More