Subscribe to Updates
Get the latest creative news from FooBar about art, design and business.
- ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
- ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
- ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
- ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
- ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
- ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
- ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
- ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
Author: admin
ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಚಾಕೊಲೇಟ್ ಅಚ್ಚುಮೆಚ್ಚು. ಇದೀಗ ಬಾಯಿ ಚಪ್ಪರಿಸಿ ಡೈರಿ ಮಿಲ್ಕ್ ಚಾಕಲೇಟ್ ತಿನ್ನೋರಿಗೆ ಇಲ್ಲೊಂದು ಶಾಕ್ ಕಾದಿದೆ. ಹೌದು, ನೀವು ಮಕ್ಕಳಿಗೆ ಪ್ರೀತಿಯಿಂದ ನೀಡುವ ಚಾಕೋಲೇಟ್ ಗಳೇ ಅವರ ಜೀವಕ್ಕೆ ಅಪಾಯ ತರಬಹುದು. ಇತ್ತೀಚಿನ ದಿನಗಳಲ್ಲಿ ಕ್ಯಾಡ್ಬರಿ ಡೈರಿ ಮಿಲ್ಕ್ ಚಾಕೋಲೇಟ್ ಗಳಲ್ಲಿ ಹುಳುಗಳು ಪತ್ತೆಯಾಗುತ್ತಿರುವ ಸುದ್ದಿಗಳು ಆಗ್ಗಾಗ್ಗೆ ಕೇಳಿ ಬರುತ್ತಿದೆ. ಇದೀಗ ಮಡಿಕೇರಿಯ ಸುಲ್ತಾನ್ ಎಂಬವರು ಖರೀದಿಸಿದ ಡೈರಿ ಮಿಲ್ಕ್ ಸಿಲ್ಕ್ (ಹ್ಯಾಝಲ್ನೆಟ್) ಚಾಕೋಲೇಟ್ ನಲ್ಲಿ ಹುಳುಗಳು ಕಂಡು ಬಂದಿವೆ. ಸುಲ್ತಾನ್ ಎಂಬವರು ಮಕ್ಕಳಿಗೆಂದು ಖರೀದಿಸಿದ ಈ ಚಾಕೋಲೇಟ್ ಅನ್ನು ಓಪನ್ ಮಾಡಿದಾಗ ಅದರಲ್ಲಿನ ಹ್ಯಾಝೆಲ್ ನೆಟ್ ಗಳಿಂದ ಹುಳುಗಳು ಹೊರಬರುತ್ತಿರುವುದು ಕಂಡು ಬಂದಿದೆ. ಚಾಕೋಲೇಟ್ನ ಎಕ್ಸ್ ಪೈರಿ ಡೇಟ್ 22–1–2025 ಇದ್ದು, ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಪೋಷಕರು ಈ ಬಗ್ಗೆ ಎಚ್ಚರವಹಿಸುವಂತೆ ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಕೃಷಿ ಹೊಂಡಕ್ಕೆ ಬಿದ್ದು ಮಾಜಿ ಪ್ರಿಯಕರನೊಂದಿಗೆ ವಿವಾಹಿತ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ದೊಡ್ಡಪಲ್ಲಿ ಗ್ರಾಮದಲ್ಲಿ ನಡೆದಿದೆ. ಅನುಷಾ (19), ವೇಣು (21) ಮೃತರು ಎಂದು ಗುರುತಿಸಲಾಗಿದೆ. ಈ ಜೋಡಿಗಳು 2 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಗೆ ಮನೆಯಲ್ಲಿ ಒಪ್ಪದ ಕಾರಣ ಚೌಡರೆಡ್ಡಿ ಎಂಬ ವ್ಯಕ್ತಿ ಜೊತೆಯಲ್ಲಿ ಯುವತಿಗೆ ಮನೆಯವರು ಮದುವೆ ಮಾಡಿದ್ದರು. ಆಷಾಡಕ್ಕೆ ಎಂದು ಮನೆಗೆ ಬಂದಾಗ ಯುವತಿ ಮತ್ತೆ ಹಳೆ ಪ್ರೇಮಿಯ ಜೊತೆ ಸಂಪರ್ಕ ಬೆಳೆಸಿದ್ದಳು. ಮೊದಲೇ ಪ್ರೀತಿಗೆ ನಿರಾಕರಿಸಿದ್ದ ಕುಟುಂಬ. ಹಾಗಾಗಿ ಮತ್ತೆ ಇಬ್ಬರು ಒಟ್ಟಿಗೆ ಬಾಳಲು ಬಿಡುವುದಿಲ್ಲ ಎಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಆಷಾಡಕ್ಕೆ ತವರು ಮನೆಗೆ ಬಂದ ವೇಳೆ ಸೊಂಟಕ್ಕೆ ವೇಲ್ ಬಿಗಿದುಕೊಂಡು ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
‘ಮುಂಗಾರು ಮಳೆ’ ನಟಿ ಪೂಜಾ ಗಾಂಧಿ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದು, ಮತ್ತೆ ತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ‘ನಿನಗಾಗಿ’ ಎಂಬ ಸಿರಿಯಲ್ ನಲ್ಲಿ ಪೂಜಾ ಗಾಂಧಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಸಿನಿಮಾ ನಟಿಯೊಬ್ಬರ ಕಥೆ ಹೊಂದಿರುವ ‘ನಿನಗಾಗಿ’ ಸೀರಿಯಲ್ ನಲ್ಲಿ ಸೂಪರ್ ಸ್ಟಾರ್ ರಚನಾ ಎಂಬ ಪಾತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ ನಟಿಸುತ್ತಿದ್ದಾರೆ. ಈ ಸೀರಿಯಲ್ ಗೆ ಪೂಜಾ ಗಾಂಧಿ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ಪೂಜಾ ಗಾಂಧಿ ಜೊತೆಗಿನ ಫೋಟೋಗಳನ್ನು ದಿವ್ಯಾ ಉರುಡುಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಧಾರಾವಾಹಿಯಲ್ಲಿ ನಟಿಸುತ್ತಿರುವ ಸಹಕಲಾವಿದರು ಕೂಡ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಮುಂಗಾರು ಮಳೆ, ಮಿಲನಾ, ಕೃಷ್ಣ, ಅನು, ತಾಜ್ ಮಹಲ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೂಜಾ ಗಾಂಧಿ ನಟಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಸುತ್ತಮುತ್ತ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡಿನ ದಾವಣಗೆರೆ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಸೇರಿದಂತೆ ವಿಜಯನಗರದಲ್ಲಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಬೀದರ್‌ನಲ್ಲಿ ವ್ಯಾಪಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯ ಸಿಂಚನವಾಗಲಿದೆ. ಕಲಬುರಗಿ, ಹಾವೇರಿ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲೂ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯು…
ನೇಪಾಳವು ಗಣರಾಜ್ಯವಾದಾಗಿನಿಂದ 2008 ರಿಂದ ನೇಪಾಳದ 14 ನೇ ಸರ್ಕಾರದ ಮುಖ್ಯಸ್ಥರಾಗಿ ಕೆಪಿ ಶರ್ಮಾ ಒಲಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಳೆದ ವಾರ, ಒಲಿ ಅವರ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ (ಯುಎಂಎಲ್) ಪುಷ್ಪ ಕಮಲ್ ದಹಲ್ “ಪ್ರಚಂಡ” ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡಿತು, ಹಿಮಾಲಯನ್ ರಾಷ್ಟ್ರದ ಎಡಪಂಥೀಯ ಶಕ್ತಿಗಳ ನಡುವಿನ ಮೈತ್ರಿಯ ಇತ್ತೀಚಿನ ಪ್ರಯತ್ನವನ್ನು ಕೊನೆಗೊಳಿಸಿತು. ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ (ಮಾವೋವಾದಿ ಸೆಂಟರ್) ಮುಖ್ಯಸ್ಥ ಪ್ರಚಂಡ ಅವರು 2022 ರ ಡಿಸೆಂಬರ್ನಿಂದ ನಾಲ್ಕು ವಿಶ್ವಾಸ ಮತಗಳಿಂದ ಬದುಕುಳಿದ ನಂತರ ಶುಕ್ರವಾರ ವಿಶ್ವಾಸ ಮತದಲ್ಲಿ ವಿಫಲರಾಗಿದ್ದಾರೆ. ಪ್ರಧಾನಿಯಾಗಿ ತಮ್ಮ 19 ತಿಂಗಳ ಅಧಿಕಾರಾವಧಿಯಲ್ಲಿ, ಮಾವೋವಾದಿ ನಾಯಕ ಮೂರು ಬಾರಿ ಸಮ್ಮಿಶ್ರ ಪಾಲುದಾರರನ್ನು ಬದಲಾಯಿಸಿದರು. ನೇಪಾಳದ 275 ಸದಸ್ಯರ ಕೆಳಮನೆಯಾದ ಪ್ರತಿನಿಧಿ ಸಭಾದಲ್ಲಿ ಮಾವೋವಾದಿ ಕೇಂದ್ರವು ಮೂರನೇ ಅತಿದೊಡ್ಡ ಪಕ್ಷವಾಗಿದೆ. ಶೇರ್ ಬಹದ್ದೂರ್ ದೇವುಬಾ ನೇತೃತ್ವದ ನೇಪಾಳಿ ಕಾಂಗ್ರೆಸ್ ಮತ್ತು ಸಿಪಿಎನ್-ಯುಎಂಎಲ್ನೊಂದಿಗೆ ಚೌಕಾಸಿ ಮಾಡುವ ಮೂಲಕ ಪ್ರಚಂಡ ನೇಪಾಳದ…
ವೀಕೆಂಡ್ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದು, ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದ್ದು, ಪ್ರವಾಸಿಗರನ್ನು ನಿಭಾಯಿಸಲು ಹರಸಾಹಸ ಪಡುವಂತಾದರು. ನಂದಿಬೆಟ್ಟ ನೋಡಲು ಸಾವಿರಾರು ಮಂದಿ ಪ್ರವಾಸಿಗರು ಕಾರು ಹಾಗೂ ಬೈಕ್‌ಗಳಲ್ಲಿ ಆಗಮಿಸಿದ್ದು, ನಂದಿಬೆಟ್ಟದ ರಸ್ತೆಯಲ್ಲಿ ವಾಹನಗಳು ಕಿಕ್ಕಿರಿದು ತುಂಬಿವೆ. ಮುಂಜಾನೆ 5 ಗಂಟೆಯಿಂದ ನಂದಿಬೆಟ್ಟದ ರಸ್ತೆ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದ್ದು, ನಂದಿಗಿರಿಧಾಮ ಪೊಲೀಸರು ವಾಹನ ಸಂಚಾರ ದಟ್ಟಣೆ ನಿಭಾಯಿಸಲು ಹೈರಾಣಾದರು. ರಸ್ತೆಯ ಎರಡು ಬದಿ ವಿರುದ್ಧ ದಿಕ್ಕಿನಲ್ಲೂ ವಾಹನಗಳು ನಿಂತಿದ್ದು ನಂದಿಬೆಟ್ಟದಿಂದ ವಾಪಾಸ್ ಬರುವವರು ಕೆಳಗೆ ಬರಲು ಪರದಾಡಬೇಕಾಯಿತು. ನಂದಿಬೆಟ್ಟಕ್ಕೆ ಬಂದ ಪ್ರವಾಸಿಗರು ಅತ್ತ ಮೇಲೂ ಹೋಗಲಾಗದೆ ಇತ್ತ ಕೆಳಗೆ ವಾಪಸ್ ಸಹ ಬರಲಾಗದೆ ಪರದಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಕೆಲ ದಿನಗಳಿಂದ ಬೆಂಗಳೂರಿನ ಜನರ ಮೊಬೈಲ್ ಗಳಿಗೆ ವಿದೇಶಿ ನಂಬರ್ ಗಳಿಂದ ಅಪರಿಚಿತ ಕರೆಗಳು ಬರುತ್ತಿದ್ದು, ವಾಟ್ಸಾಪ್ ಕರೆ ಮಾಡುತ್ತಿರುವ ಅಪರಿಚಿತ ವ್ಯಕ್ತಿಗಳು, ಪೊಲೀಸ್ ಠಾಣೆಯಿಂದ ಮಾತನಾಡ್ತಿದ್ದೇವೆ. ನಿಮ್ಮ ಮಗ ಅಥವಾ ಮಗಳನ್ನ ಡ್ರಗ್ಸ್ ಕೇಸ್‌ನಲ್ಲಿ ಅರೆಸ್ಟ್ ಮಾಡಿದ್ದೇವೆ. ಕೂಡಲೇ ನಮ್ಮ ಅಕೌಂಟ್ ಗೆ ಹಣ ಹಾಕಿ ಇಲ್ಲದಿದ್ರೆ, FIR ಮಾಡ್ತೀವಿ ಅಂತಾ ಧಮ್ಕಿ ಹಾಕುತ್ತಿದ್ದಾರೆ ಎನ್ನಲಾಗಿದೆ. ಇದೇ ರೀತಿ ಬೆಂಗಳೂರಿನ ಸೈಯದ್ ಸಮೀನ್ ಎಂಬವರಿಗೂ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಗಳು ನಿಮ್ಮ ಮಗಳನ್ನ ಬಂಧಿಸಿದ್ದೇವೆ. ಹಣ ಹಾಕಿ ಅಂತಾ ಬೆದರಿಸಿದ್ದಾರೆ. ಸದ್ಯ ಸೈಯದ್ ಸಮೀನ್ ಈ ಬಗ್ಗೆ ಸೈಬರ್ ಕ್ರೈಂಗೆ ದೂರು ಸಲ್ಲಿಸಿದ ಬಳಿಕ ಇಂತಹ ಹಲವು ಪ್ರಕರಣಗಳು ಕೆಲದಿನಗಳಿಂದೀಚೆಗೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಮುಂಬೈಯಲ್ಲಿ ಇಂತಹದ್ದೇ ಪ್ರಕರಣ ನಡೆದು ಒಬ್ಬರು ಮಹಿಳೆ ಸುಮಾರು 8೦ಲಕ್ಷ ರೂಪಾಯಿ ಕಳೆದುಕೊಂಡಿದ್ದರು. ಇಂತಹ ಪ್ರಕರಣಗಳು ಬೆಳಕಿಗೆ ಬಂದ ತಕ್ಷಣ ಸೈಬರ್ ಪೊಲೀಸರಿಗೆ ತಿಳಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…
12ನೇ ಶತಮಾನದ ಪುರಿಯ ಜಗನ್ನಾಥ ದೇವಾಲಯದ ಖಜಾನೆಯಾದ ರತ್ನ ಭಂಡಾರವನ್ನು 46 ವರ್ಷಗಳ ನಂತರ ಬೆಲೆಬಾಳುವ ವಸ್ತುಗಳ ದಾಸ್ತಾನು ಮತ್ತು ಅದರ ರಚನೆಯ ದುರಸ್ತಿಗಾಗಿ ಮತ್ತೆ ತೆರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಉದ್ದೇಶಕ್ಕಾಗಿ ರಾಜ್ಯ ಸರ್ಕಾರ ರಚಿಸಿದ್ದ ಸಮಿತಿಯ ಸದಸ್ಯರು ನೆನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ದೇವಸ್ಥಾನಕ್ಕೆ ಪ್ರವೇಶಿಸಿ, ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ, ಭಂಡಾರವನ್ನು ಪುನಃ ತೆರೆಯಲಾಯಿತು. “ನಿಮ್ಮ ಇಚ್ಛೆಯ ಮೇರೆಗೆ ಜಗನ್ನಾಥ ದೇಗುಲಗಳ ನಾಲ್ಕು ದ್ವಾರಗಳನ್ನು ತೆರೆಯಲಾಗಿತ್ತು. ನಿಮ್ಮ ಇಚ್ಛೆಯ ಮೇರೆಗೆ 46 ವರ್ಷಗಳ ನಂತರ ರತ್ನ ಭಂಡಾರವನ್ನು ಮಹತ್ತರ ಉದ್ದೇಶಕ್ಕಾಗಿ ತೆರೆಯಲಾಗಿದೆ” ಎಂದು ಸಿಎಂ ಪೋಸ್ಟ್‌ನಲ್ಲಿ ಹೇಳಲಾಗಿದೆ. ಮಧ್ಯಾಹ್ನ 1:28ರ ಶುಭ ಮುಹೂರ್ತದಲ್ಲಿ ಖಜಾನೆಯನ್ನು ಪುನಃ ತೆರೆಯಲು ನಿರ್ಧರಿಸಲಾಗಿತ್ತು ಎಂದು ಬರೆಯಲಾಗಿದೆ. ಖಜಾನೆ ತೆರೆದಾಗ11 ಜನರು ಹಾಜರಿದ್ದು, ಒರಿಸ್ಸಾದ ಮಾಜಿ ಹೈಕೋರ್ಟ್ ನ್ಯಾಯಾಧೀಶ ಬಿಸ್ವನಾಥ್ ರಾತ್, ಶ್ರೀ ಜಗನ್ನಾಥ ದೇವಸ್ಥಾನದ ಆಡಳಿತ (ಎಸ್ಜೆಟಿಎ) ಮುಖ್ಯ ಆಡಳಿತಾಧಿಕಾರಿ ಅರಬಿಂದ ಪಾಧಿ, ಎಎಸ್ಐ ಸೂಪರಿಂಟೆಂಡೆಂಟ್ ಡಿಬಿ ಗಡನಾಯಕ್ ಮತ್ತು…
ಗುಜರಾತ್ ನ ಭಾವ್ ನಗರ ಜಿಲ್ಲೆಯ ಪಾಲಿತಾನಾ ಪಟ್ಟಣದಲ್ಲಿ ಮಾಂಸಾಹಾರವನ್ನು ನಿಷೇಧಿಸಲಾಗಿದೆ. ಮಾಂಸ ಮಾರಾಟ, ಮಾಂಸ ಮಾರಾಟ ಕುರಿತು ಬೋರ್ಡ್ ಅಳವಡಿಸುವುದು, ಮಾಂಸ ಸೇವಿಸುವುದನ್ನು ಈ ಪಟ್ಟಣದಲ್ಲಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಜಗತ್ತಿನಲ್ಲೇ ಮಾಂಸಾಹಾರವನ್ನು ನಿಷೇಧಿಸಿದ ಮೊದಲ ಪಟ್ಟಣ ಅಥವಾ ನಗರ ಎಂಬ ಖ್ಯಾತಿಗೆ ಪಾಲಿತಾನಾ ಪಾತ್ರವಾಗಿದೆ. ಗುಜರಾತ್‌ನ ಪಾಲಿತಾನಾ ಪಟ್ಟಣವು ಜೈನ ದೇವಾಲಯಗಳಿಗೆ ಹೆಸರಾಗಿದೆ. ಶತ್ರುಂಜಯ ಗುಡ್ಡಗಾಡು ಪ್ರದೇಶಗಳಲ್ಲಿರುವ ನಗರವು ಜೈನ ದೇವಾಲಯಗಳ ನಗರ ಎಂದೇ ಖ್ಯಾತಿಯಾಗಿದೆ. ಈ ಪಟ್ಟಣದಲ್ಲಿ ಸುಮಾರು 800 ದೇವಾಲಯಗಳಿವೆ. ತುಂಬ ಖ್ಯಾತಿ ಪಡೆದಿರುವ ಆದಿನಾಥ ದೇವಾಲಯವೂ ಇದೆ. ಜೈನರು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಜೈನರು ಹಾಗೂ ಜೈನ ಸನ್ಯಾಸಿಗಳಿಗೆ ಹೆಸರುವಾಸಿಯಾಗಿರುವ ಪಟ್ಟಣದಲ್ಲಿ ಸುಮಾರು 250 ಮಾಂಸದಂಗಡಿಗಳಿವೆ ಎಂಬುದಾಗಿ 200 ಜೈನ ಸನ್ಯಾಸಿಗಳು ಪ್ರತಿಭಟನೆ ನಡೆಸಿದ್ದರು. ಪವಿತ್ರ ಯಾತ್ರಾ ಸ್ಥಳಗಳಲ್ಲಿ ಮಾಂಸ ಮಾರಾಟ ನಿಷೇಧಿಸಬೇಕು ಎಂಬುದಾಗಿ ಅವರು ಪಟ್ಟು ಹಿಡಿದಿದ್ದರು. ಹಾಗಾಗಿ, ಪಟ್ಟಣದಲ್ಲಿ ಮಾಂಸ ಮಾರಾಟ, ಸೇವನೆಯನ್ನು ಕಾನೂನುಬಾಹಿರ ಎಂಬುದಾಗಿ ಘೋಷಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ನಟ ಶಿವರಾಜ್ ಕುಮಾರ್ ಮತ್ತು ಡ್ಯಾನ್ಸಿಂಗ್ ಸ್ಟಾರ್ ಪ್ರಭುದೇವ ಅಭಿನಯದ ಸಿನಿಮಾ ‘ಕರಟಕ ದಮನಕ’, ಸದ್ದಿಲ್ಲದೆ ಒಟಿಟಿಗೆ ಕಾಲಿಟ್ಟಿದೆ. ಚಿತ್ರತಂಡ, ‘ಕರಟಕ ದಮನಕ’ ಸಿನಿಮಾವನ್ನು ಒಟಿಟಿ ಸ್ಟ್ರೀಮಿಂಗ್ ಮಾಡಲು ಮುಂದಾಗಿದೆ. ಶಿವಣ್ಣನ ಹುಟ್ಟುಹಬ್ಬದ ಸಂದರ್ಭದಲ್ಲಿ ಅಮೆಜಾನ್ ಪ್ರೈಮ್ ವೀಡಿಯೊದಲ್ಲಿ ಜುಲೈ 12 ರಂದು ಸಿನಿಮಾ ಬಿಡುಗಡೆಯಾಗಿದೆ. ಥಿಯೇಟರ್ ರೀಲಿಸ್ ಆಗಿ ನಾಲ್ಕು ತಿಂಗಳ ಬಳಿಕ ಒಟಿಟಿಗೆ ಸಿನಿಮಾ ಲಗ್ಗೆಯಿಟ್ಟಿದೆ. ಕರಟಕ ದಮನಕ ಸಿನಿಮಾ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಈ ವಿಷಯವನ್ನ ಸ್ವತಃ ಸಿನಿಮಾ ತಂಡವೇ ಹೇಳಿಕೊಂಡಿದೆ. ಪ್ರೈಮ್ ವಿಡಿಯೋದಲ್ಲೂ ಈ ಸಿನಿಮಾ ನೋಡಿದವ್ರು, ಈ ಬಗ್ಗೆ ಮೆಚ್ಚುಗೆ ಕೂಡ ವ್ಯಕ್ತಪಡಿಸುತ್ತಿದ್ದಾರೆ. ಕರಟಕ ದಮನಕ ಸಿನಿಮಾದ ವಿಚಾರಕ್ಕೆ ಬಂದ್ರೆ, ಯೋಗರಾಜ್ ಭಟ್ರು ಈ ಚಿತ್ರವನ್ನ ಡೈರೆಕ್ಷನ್ ಮಾಡಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಪ್ರಭುದೇವ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಿಶ್ವಿಕಾ ನಾಯ್ಡು ಹಾಗೂ ಪ್ರಭುದೇವ ಜೋಡಿಯ ಹಾಡು ಸಿಕ್ಕಾಪಟ್ಟೆ ಮೋಡಿ ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…