Author: admin

ಮಳೆಗಾಲದ ಸಮಯದಲ್ಲಿ ಪ್ರಕೃತಿ ಸೌಂದರ್ಯವನ್ನು ಕಣ್ಣು ತುಂಬಿಕೊಳ್ಳಲು ಜನ ಸಹ ಪ್ಲ್ಯಾನ್‌ ಮಾಡಿಕೊಂಡಿರುತ್ತಾರೆ. ಇವರಿಗೆ ವಾಯುವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಈ ನಿಟ್ಟಿನಲ್ಲಿ ವಿಶೇಷ ಬಸ್‌ ಗಳ ವ್ಯವಸ್ಥೆ ಮಾಡಿದೆ. ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣದಲ್ಲಿ ಜೋಗ ಫಾಲ್ಸ್ ಪ್ಯಾಕೇಜ್ ಟೂರ್ ಬಸ್ ಗಳಿಗೆ ಚಾಲನೆ ನೀಡಿ, ಅವರು ಮಾತನಾಡಿದರು. ಭಾನುವಾರ ಮತ್ತು ರಜಾ ದಿನಗಳಂದು ವಿಶೇಷ ಪ್ಯಾಕೇಜ ಟೂರ್ ಸಾರಿಗೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ವಿಶೇಷ ಸಾರಿಗೆಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ. ಸಾರ್ವಜನಿಕರು ಹುಬ್ಬಳ್ಳಿಯಿಂದ ಜೋಗ್ ಫಾಲ್ಸ್ ಗೆ ವಿಶೇಷ ಬಸ್ ಗಳನ್ನು ಆರಂಭಿಸಲಾಗಿದೆ. 3 ರಾಜಹಂಸ ಹಾಗೂ 2 ಐರಾವತ ಬಸ್ ಗಳು ಜೋಗ್ ಫಾಲ್ಸ್ ಗೆ ಹೊರಟಿವೆ. ರಿಯಾಯಿತಿ ದರದಲ್ಲಿ ಪ್ರಯಾಣಿಸಲು ಅನುಕೂಲ ಮಾಡಿಕೊಡಲಾಗುವುದು. ಜೋಗ್ ಫಾಲ್ಸ್ ಜೊತೆಗೆ ಶಿರಸಿಯ ಮಾರಿಕಾಂಬಾ ದೇವಿಯ ದರ್ಶನವನ್ನು ಪ್ಯಾಕೇಜ್ ಟೂರ್ ಒಳಗೊಂಡಿದೆ. ಮಳೆಗಾಲವಿರುವುದರಿಂದ ಸಾರ್ವಜನಿಕರು ಪ್ಯಾಕೇಜ್ ಟೂರ್ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳಬೇಕು. ಈ ಕುರಿತು…

Read More

ಕೊರಟಗೆರೆ: ಸಿದ್ದರಬೆಟ್ಟ ರೋಟರಿ ಕ್ಲಬ್ ಹಾಗೂ  ಫ್ಯೂಚರ್ ಫೌಂಡೇಶನ್ ಇಂಡಿಯಾ ವತಿಯಿಂದ  ಸರ್ಕಾರಿ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲಕ್ಕಾಗಿ ಕೊರಟಗೆರೆ ತಾಲೂಕಿನ ಬೋಡ ಬಂಡೇನಹಳ್ಳಿ, ಪಾತಗನಹಳ್ಳಿ, ಅಂಚಿಹಳ್ಳಿ,ಅಕ್ಕಿರಾಂಪುರ ಸರ್ಕಾರಿ ಶಾಲೆಯ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ  ಉಚಿತ ನೋಟ್ ಬುಕ್ಸ್, ಲೇಖನಿ, ಇನ್ನಿತರ ವಸ್ತುಗಳ ವಿತರಣೆ ಮಾಡಲಾಯಿತು. ಇದೇ ವೇಳೆ ಮಾತನಾಡಿದ ರೋಟರಿ ಕ್ಲಬ್ ಸದಸ್ಯ ಬಾಲಾಜಿ ಟೆಕ್ಸ್ಟೈಲ್ ದರ್ಶನ್, ಸಿದ್ದರಬೆಟ್ಟ  ರೋಟರಿ ಸಂಸ್ಥೆ ಹಾಗೂ ಫ್ಯೂಚರ್ ಫೌಂಡೇಶನ್ ಇಂಡಿಯಾದ ಮುಖ್ಯ ಉದ್ದೇಶ ಗ್ರಾಮೀಣ ಭಾಗದ  ಪ್ರತಿಭೆಗಳು ಉತ್ತಮ ಭವಿಷ್ಯವನ್ನು ಹೊಂದಬೇಕು ಎನ್ನುವುದಷ್ಟೇ ನಮ್ಮ ಉದ್ದೇಶ ಎಂದು ತಿಳಿಸಿದರು. ಪ್ರತಿ ಸರ್ಕಾರಿ ಶಾಲೆಯ ಎಲ್ಲಾ ಮಕ್ಕಳಿಗೂ ನೋಟ್ ಬುಕ್ಸ್, ಪೆನ್ಸಿಲ್, ಪೆನ್, ಜಾಮಿಟರಿ ಸೇರಿದಂತೆ ಕೆಲವು ಶಾಲೆಗಳಿಗೆ ಲ್ಯಾಬ್ ಟಾಪ್, ಟ್ಯಾಬ್, ಆಟದ ಸಾಮಗ್ರಿಗಳನ್ನು ವಿತರಣೆ  ಮಾಡಲಾಯಿತು. ಸಿದ್ದರಬೆಟ್ಟ ರೋಟರಿ ಕ್ಲಬ್ ಹಾಗೂ ಫ್ಯೂಚರ್ ಫೌಂಡೇಶನ್ ಇಂಡಿಯಾ  ಸದಸ್ಯರಾದ ರಾಮು, ರಮೇಶ್, ಮಂಜುನಾಥ್, ಬಾಬು, ಬದ್ರಿ ಸಚಿನ್, ಮಧು, ರಾಜು, ಬಾಲಾಜಿ…

Read More

ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ಯುವಕರು ರೀಲ್ಸ್ ಮಾಡಿದ ವೈರಲ್ ವಿಡಿಯೋ​​​ಗೆ ಸಂಬಂಧಿಸಿದಂತೆ ಆರು ಮಂದಿ ಯುವಕರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪೊಲೀಸರು ಕ್ರಮ ಐವರು ಹುಡುಗರು ಸಾರ್ವಜನಿಕ ಸ್ಥಳದಲ್ಲಿ ನಿಂತು ಕೈಯಲ್ಲಿ ಲಾಂಗ್ ಮಚ್ಚು ಹಿಡಿದು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸಾರ್ವಜನಿಕ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ಉಂಟು ಮಾಡುವಂತೆ ವರ್ತಿಸಿದ ಕಾರಣ, ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡು ಶಾಕ್ ನೀಡಿದ್ದಾರೆ. ದರ್ಶನ್, ರಾಕೇಶ್, ರಾಹುಲ್, ಸತೀಶ್, ಚೇತನ್ ಮತ್ತು ಇನ್ನೊಬ್ಬನ ಮೇಲೆ ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ತುಂಗಾ ನಗರ ಪೊಲೀಸರು ಸುಮೊಟೊ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಮೈಸೂರಿನ ಮುಡಾದಿಂದ ಮುಖ್ಯಮಂತ್ರಿಗಳ ಧರ್ಮಪತ್ನಿ ಪರಿಹಾರ ಪಡೆದಿರುವ ಜಮೀನು ಮುಡಾಗೆ ಸೇರಿದ ಸ್ವತ್ತು. ಡಿನೋಟಿಫಿಕೇಷನ್ ಬಳಿಕ ನಾಲ್ಕು ವರ್ಷ ಏನೂ ಬೆಳವಣಿಗೆಯೇ ಆಗಿಲ್ಲ. ಸತ್ತವರ ಹೆಸರಿನಲ್ಲಿ ಜಮೀನು ಡಿ ನೋಟಿಫಿಕೇಷನ್ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಭಾಮೈದ ಖರೀದಿ ಮಾಡಿರುವ ಮೈಸೂರಿನ ಕೆಸರೆ ಬಳಿಯ ಜಮೀನಿಗೆ ಮುಡಾ ಭೂಸ್ವಾಧೀನ ಮಾಡಿ ಪರಿಹಾರ ನೀಡಲಾಗಿದೆ. ಈಗಿರುವಾಗ ಇದು ಖಂಡಿತವಾಗಿಯೂ ಮುಡಾಗೆ ಸೇರಿದ ಜಮೀನು ಆಗುತ್ತದೆ. ಈ ಜಮೀನನ್ನು ಡಿ ನೋಟಿಫಿಕೇಷನ್ ಮಾಡಿ ಖರೀದಿಸಲಾಗಿದೆ. ಇದು ಕಾನೂನುಬಾಹಿರ ಎಂದು ಕೇಂದ್ರ ಸಚಿವರು ದೂರಿದರು. ಇದೇ ವೇಳೆ ಕೇಂದ್ರ ಸಚಿವರು ಮಾಧ್ಯಮಗಳ ಮುಂದೆ ಹಗರಣಕ್ಕೆ ಸಂಬಂಧಿಸಿದ ಕೆಲ ಮಹತ್ವದ ದಾಖಲೆಗಳನ್ನು ಪ್ರದರ್ಶಿಸಿದರು. ಸಿಎಂ ಸಿದ್ಧರಾಮಯ್ಯ ಅವರ ಧರ್ಮಪತ್ನಿಗೆ ದಾನ ಮಾಡಿದಾಗ ಕೃಷಿ ಭೂಮಿ ಎಂದು ತೋರಿಸುತ್ತಾರೆ. ಆದರೆ, ಆ ಜಾಗ ಭೂ ಪರಿವರ್ತನೆ…

Read More

ಪತಿ ಮೇಕೆ ಮೇಯಿಸುತ್ತಾ ರೈಲ್ವೇ ಹಳಿ ಮೇಲೆ ನಿಂತಿದ್ದ ವೇಳೆ ಏಕಾಏಕಿ ರೈಲು ಬಂದಿದ್ದು, ಈ ವೇಳೆ ಪತಿಯನ್ನು ರಕ್ಷಿಸಲು  ಬಂದ ಪತ್ನಿಯೂ ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಇಲ್ಲಿನ ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಚಂದ್ರನಾಯಕ್(56) ಮತ್ತು ಜಯಬಾಯಿ(45) ಮೃತಪಟ್ಟ ದಂಪತಿ ಎಂದು ಗುರುತಿಸಲಾಗಿದೆ. ದೊಡ್ಡಬಳ್ಳಾಪುರದ ಮೂಲದ ನಿವಾಸಿಗಳಾದ ದಂಪತಿ ಶುಕ್ರವಾರ ಸಂಜೆ 3:40ರ ಸುಮಾರಿನಲ್ಲಿ ವಡ್ಡರಹಳ್ಳಿ–ಮಾಕಳಿ ದುರ್ಗ ರೈಲ್ವೆ ನಿಲ್ದಾಣಗಳ ಮಧ್ಯೆ ಇರುವ ತಮ್ಮ ಜಮೀನಿನ ಬಳಿಯ ರೈಲ್ವೆ ಹಳಿ ಬಳಿ ಮೇಕೆಗಳನ್ನು ಮೇಯಿಸುತ್ತಿದ್ದರು ಎನ್ನಲಾಗಿದೆ. ಆ ವೇಳೆ ಚಂದ್ರನಾಯಕ್ ರೈಲ್ವೆ ಹಳಿ ಮೇಲೆ ನಿಂತಿದ್ದರು. ರೈಲು ಬರುತ್ತಿರುವುದನ್ನು ಗಮನಿಸಿದ ಪತ್ನಿ ಜಯಬಾಯಿ ರಕ್ಷಣೆಗೆ ಹೋದಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಯಶವಂತಪುರ ರೈಲ್ವೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಇದೀಗ ಮತ್ತೊಂದು ಶಾಕ್ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಶೀಘ್ರವೇ ಕೆಎಸ್‌ ಆರ್‌ ಟಿಸಿ ಬಸ್‌ ಟಿಕೆಟ್‌ ದರ ಹೆಚ್ಚಳ ಮಾಡುವುದಾಗಿ ಶಾಸಕ ರಾಜು ಕಾಗೆ ಸುಳಿವು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದಾಗಿ ಕರ್ನಾಟಕ ಸಾರಿಗೆ ನಿಗಮ ನಷ್ಟದಲ್ಲಿದೆ. ಡೀಸೆಲ್,‌ ಬಸ್‌ ಗಳ ಬಿಡಿಭಾಗಗಳ ಬೆಲೆಯೂ ಹೆಚ್ಚಳವಾಗಿದೆ. ಕಳೆದ ಹತ್ತು ವರ್ಷಗಳಿಂದ ಬಸ್‌ ಟಿಕೆಟ್‌ ದರ ಹೆಚ್ಚಳ ಮಾಡಿಲ್ಲ. ಹೀಗಾಗಿ ಬಸ್‌ ಟಿಕೆಟ್‌ ದರ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು 2020ರಲ್ಲಿ ಹೆಚ್ಚಳ ಮಾಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ KSRTC ಬಸ್ ಟಿಕೆಟ್ ದರವನ್ನು ಹೆಚ್ಚಳ ಮಾಡಲಾಗಿಲ್ಲ. ನಿಗಮಕ್ಕೆ ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರದಿಂದ 1100 ಕೋಟಿ ಬರಬೇಕಿದೆ. ಸಾರಿಗೆ ನಿಗಮಗಳಿಂದ ದರ ಪರಿಷ್ಕರಣೆ ಪ್ರಸ್ತಾವನೆ ಬಂದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ರಾಜ್ಯದಲ್ಲಿರುವುದು 100 ಪರ್ಸೆಂಟ್‌ ಭ್ರಷ್ಟ ಸರ್ಕಾರ, ಕರ್ನಾಟಕದಿಂದ ತೆಲಂಗಾಣಕ್ಕೆ 1000 ಕೋಟಿ ರೂ. ಸಂಗ್ರಹಿಸಿ ಕೊಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಿಸಿದ್ದಾರೆ. ಕಳೆದೊಂದು ವರ್ಷದಿಂದ ಕಾಂಗ್ರೆಸ್‌ ಸರ್ಕಾರದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ. ಸರಿ ಸುಮಾರು 1000 ಕೋಟಿ ರೂ. ಸಂಗ್ರಹಿಸಿ ತೆಲಂಗಾಣಕ್ಕೆ ಕೊಡಲಾಗಿದೆ. ಇದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಗೆ ಗೊತ್ತಿದ್ದೇ ಆದ ಹಗರಣ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ನಾಯಕ ಎನ್ನುತ್ತಲೇ ಎಸ್‌ ಸಿ–ಎಸ್‌ ಟಿ ಸಮುದಾಯದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದು, ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತದಲ್ಲಿ ಭ್ರಷ್ಟಾಚಾರದ ಮೇಲೆ ಭ್ರಷ್ಟಾಚಾರ ನಡೆಸಿದೆ. ವಾಲ್ಮೀಕಿ ನಿಗಮದಲ್ಲಿ ಹಗರಣ, ಮುಡಾದಲ್ಲಿ ಅಕ್ರಮ ನಡೆದಿದೆ. ಸಾವಿರಾರು ಕೋಟಿ ಸಂಗ್ರಹ ಮಾಡಿ ಆಗಾಗ ತೆಂಗಾಣಕ್ಕೆ ಕೊಟ್ಟಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ನೂರಾರು ಜನರಿಗೆ ವರ್ಗಾವಣೆ…

Read More

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಚುನಾವಣಾ ರ್ಯಾಲಿಯಲ್ಲಿ ಗುಂಡು ಹಾರಿಸಿದ್ದಾರೆ. ಸ್ಥಳೀಯ ಕಾಲಮಾನ 6:15ರ ಸುಮಾರಿಗೆ ಈ ಘಟನೆ ನಡೆದಿದೆ. ಅವರು ಪೆನ್ಸಿಲ್ವೇನಿಯಾದ ಬಟ್ಲರ್‌ ನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು, ಇದ್ದಕ್ಕಿದ್ದಂತೆ ಗುಂಡಿನ ಸದ್ದಿನಿಂದ ಎಲ್ಲರೂ ಬೆಚ್ಚಿಬಿದ್ದರು. ಕೆಳಗೆ ಬಿದ್ದ ಟ್ರಂಪ್ ಅವರು ಗಂಭೀರ ಗಾಯದಿಂದ ಪಾರಾಗಿದ್ದಾರೆ, ಆದರೆ ಅವರ ಕಿವಿಗೆ ಗಾಯವಾಗಿದೆ. ದಾಳಿಕೋರರಲ್ಲಿ ಒಬ್ಬನನ್ನು ಭದ್ರತಾ ಸಿಬ್ಬಂದಿ ಹತ್ಯೆ ಮಾಡಿದ್ದಾರೆ. ಟ್ರಂಪ್ ಮೇಲಿನ ದಾಳಿಯನ್ನು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಖಂಡಿಸಿದ್ದಾರೆ ಘಟನೆಯ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಲಾಗಿದೆ. ತುಣುಕಿನಲ್ಲಿ ಟ್ರಂಪ್ ಅವರ ಬಲ ಕಿವಿ ಮತ್ತು ಮುಖದಲ್ಲಿ ರಕ್ತಸ್ರಾವವನ್ನು ಕಾಣಬಹುದು. ಸದ್ಯ ಟ್ರಂಪ್ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ ಎಂಬ ವರದಿಗಳು ಬರುತ್ತಿವೆ. ರಹಸ್ಯ ಸೇವೆ, ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಮತ್ತು ಇತರ ಏಜೆನ್ಸಿಗಳು ತನಿಖೆಯನ್ನು ಪ್ರಾರಂಭಿಸಿವೆ. ಆರೋಪಿಗೆ ಕೊಲೆ ಮಾಡುವ ಉದ್ದೇಶವಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ತುಮಕೂರು:  ಸದ್ಯದಲ್ಲೇ  ಕೆ ಎಸ್ ಆರ್ ಟಿ ಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು ಎಂದು ಕೆ ಎಸ್ ಆರ್ ಟಿ ಸಿ ಅಧ್ಯಕ್ಷ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಪ್ರತಿಕ್ರಿಯಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊನ್ನೆ ತಾನೆ ಬೋರ್ಡ್ ಮೀಟಿಂಗ್ ಮುಗಿದಿದ್ದು 15–20% ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಿಎಂ ಮುಂದೆ ಇಟ್ಟಿದ್ದೇವೆ ಎಂದು ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ. ತೈಲ ಬೆಲೆ ಏರಿಕೆ, ಹೊಸ ಬಸ್‌ ಗಳ ಖರಿದಿಯಿಂದ ಸಂಸ್ಥೆಗೆ ಹೊರೆಯಾಗಿದೆ. ಅಲ್ಲದೇ ಈ ಬಾರಿ ಸಾರಿಗೆ ಸಂಸ್ಥೆ ನೌಕರರ ವೇತನ ಪರಿಷ್ಕರಣೆ ಮಾಡಲಿದ್ದೇವೆ. ಈ ಎಲ್ಲಾ  ಕಾರಣಗಳಿಂದ ಟಿಕೆಟ್ ದರ ಹೆಚ್ಚಳ ಅನಿವಾರ್ಯ ಎಂದು ಎಸ್.ಆರ್.ಶ್ರೀನಿವಾಸ್ ಸಮರ್ಥನೆ ಕೊಟ್ಟಿದ್ದಾರೆ. ಕಳೆದ ತ್ರೈಮಾಸಿಕದಲ್ಲಿ ನಿಗಮಕ್ಕೆ ಬರೊಬ್ಬರಿ 295 ಕೋಟಿ ರೂ ನಷ್ಟವಾಗಿದೆ. ಇವೆಲ್ಲಾ ಸರಿದೂಗಿಸಲು ಹಾಗೂ ಸಂಸ್ಥೆಯನ್ನು ಉಳಿಸಬೇಕಾದರೆ ಟಿಕೆಟ್ ದರ ಹೆಚ್ಚಿಗೆ ಮಾಡಲೇಬೇಕು ಎಂದು ಸಮಜಾಯಿಷಿ ಕೊಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಇದೀಗ ಮುಂದಿನ ದಿನದಲ್ಲಿ ಸತ್ತವರನ್ನು ಸಹ ಮತ್ತೆ ಬದುಕಿಸಬಹುದು ಎಂದು ಕಂಪನಿಯೊಂದು ಆಶ್ವಾಸನೆ ಕೊಟ್ಟಿದೆ ನೋಡಿ. ಅಮೇರಿಕನ್ ಕಂಪನಿ “Alcor Life Extension Foundation” ವಿಶ್ವದ ಅಗ್ರ ಕ್ರಯೋನಿಕ್ಸ್ ಕಂಪನಿ ಇದನ್ನು ಹೇಳಿದ್ದು, ಸತ್ತವರನ್ನು ಬದುಕಿಸುವ ಉದ್ದೇಶದಿಂದ ಈ ಸಂಸ್ಥೆ ಶವಗಳನ್ನು ಸಂರಕ್ಷಿಸಿ ಇಟ್ಟುಕೊಂಡಿದೆ. ಅಲ್ಕೋರ್ ಕಂಪನಿ ಈಗಾಗಲೇ 233 ದೇಹಗಳನ್ನು ಪಡೆದುಕೊಂಡಿದೆ. ವೈದ್ಯಕೀಯ ವಿಜ್ಞಾನವು ಅಭಿವೃದ್ಧಿ ಹೊಂದಿದ ದಿನದಲ್ಲಿ ಈಗಾಗಲೇ ಸಂರಕ್ಷಿಟ್ಟಿರು ಶವಗಳನ್ನು ಮತ್ತೆ ಜೀವಕ್ಕೆ ತರುವ ಭರವಸೆಯಲ್ಲಿ ಕೆಲಸ ನಡೆಸುತ್ತಿದೆ. ಅಲ್ಕೋರ್ ಬಳಸುವ ವಿಜ್ಞಾನವನ್ನು “ಕ್ರಯೋನಿಕ್ಸ್” ಎಂದು ಕರೆಯಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ, ಮಾನವ ದೇಹಗಳನ್ನು ಫ್ರೀಜರ್​​ನಲ್ಲಿ ಕಡಿಮೆ ತಾಪಮಾನದಲ್ಲಿ ಸಂರಕ್ಷಿಸಿಡಲಾಗುತ್ತದೆ. ನಂತರ, ಚಿಕಿತ್ಸೆ ಮೂಲಕ ಈ ಶವಗಳಿಗೆ ಜೀವ ತುಂಬುವ ಕೆಲಸ ಮಾಡಲಿದೆ ಎಂದು ಕಂಪನಿ ಹೇಳಿಕೊಂಡಿದೆ. ಈ ಮೂಲಕ ಮನುಷ್ಯರ ಜೀವಿತಾವಧಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More