Subscribe to Updates
Get the latest creative news from FooBar about art, design and business.
- ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ
- ಸರಗೂರು: SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ
- ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು
- ಅಟಲ್ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ
- ನಮ್ಮೂರ ಶಾಲೆ ಉಳಿಸಿ: ಎಐಡಿಎಸ್ ಓ, ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ
- “ಕರಿಕಾಡ” ಚಿತ್ರದ “ಕಬ್ಬಿನ ಜಲ್ಲೆ” ಹಾಡಿಗೆ ವೀಕ್ಷಕ ಫಿದಾ, 2026 ಫೆಬ್ರವರಿ 6ಕ್ಕೆ ವಿಶ್ವಾದ್ಯಂತ ರಿಲೀಸ್
- ವಿದ್ಯಾರ್ಥಿಗಳ ಕಡೆ ಕುವೆಂಪು ಭಾವಗೀತೆಗಳ ನಡೆ: ಕುವೆಂಪು ಗೀತೆಗಳಲ್ಲಿ ಮಾನವೀಯತೆ ಸ್ಪರ್ಶ
- ಕುಣಿಗಲ್ ನಲ್ಲಿ ಕಸಾಪ ಭವನದ ಗ್ರಂಥಾಲಯ ಲೋಕಾರ್ಪಣೆ: “ರಾಜಕೀಯ ಸ್ವಾರ್ಥಕ್ಕೆ ಧರ್ಮ, ಜಾತಿಗಳ ಕಂದಕ ಸೃಷ್ಟಿ”
Author: admin
ಬೆಂಗಳೂರು: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ನಿಗದಿತ ಕಾಲಮಿತಿಯಲ್ಲಿ ಸಮೀಕ್ಷೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ತಮ್ಮ ಗೃಹ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲಿ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಇಲ್ಲ. ಒಂದು ತಿಂಗಳ ಮುಂಚಿತವಾಗಿಯೇ ಸಮೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಿದ್ದೇವೆ. ಈಗಾಗಲೇ ಇದಕ್ಕೆ ಬೇಕಾದ ಸಿದ್ಧತೆಗಳು ನಡೆದಿವೆ. ಅಕ್ಟೋಬರ್ನಲ್ಲಿ ಸಮೀಕ್ಷೆ ಪೂರ್ಣಗೊಂಡು ಡಿಸೆಂಬರ್ನಲ್ಲಿ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಸರ್ಕಾರವು ವರದಿ ಜಾರಿ ಮಾಡಲಿದೆ ಎಂದು ಹೇಳಿದರು. ದೊಡ್ಡ ಕಾರ್ಯಕ್ಕೆ ಸರ್ಕಾರ ಕೈ ಹಾಕಿದ್ದು, ಇದು ನಮಗೆ ಸವಾಲಿನ ಕೆಲಸ ಕೂಡ. ಇದರಲ್ಲಿ ಯಶಸ್ವಿಯೂ ಕೂಡ ಆಗುತ್ತೇವೆ. ಯಾವುದೇ ಸವಾಲಿನ ಕೆಲಸಕ್ಕೆ ಕೈ ಹಾಕಿದರೆ ಸಣ್ಣ- – ಪುಟ್ಟ ಲೋಪಗಳು ಸಹಜ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಮೈಸೂರು: 600 ಕೆ.ಜಿ ತೂಕದ ಮರದ ಅಂಬಾರಿಯನ್ನು ಸುಗ್ರೀವಾ ಆನೆ ಅರಮನೆಯಿಂದ ಬನ್ನಿಮಂಟಪದವರೆಗೆ ಸರಾಗವಾಗಿ ಹೊತ್ತು ಸಾಗಿದ್ದಾನೆ. ಶುಕ್ರವಾರ ನಡೆದ ದಸರಾಗೆ ಜಂಬೂಸವಾರಿ ತಾಲೀಮು ವೇಳೆ ಸುಗ್ರೀವಾ ಆನೆ 600 ಕೆ.ಜಿ. ತೂಕದ ಮರದ ಅಂಬಾರಿ ಹೊರುವ ಮೂಲಕ ಚಿನ್ನದ ಅಂಬಾರಿ ಹೊರಲು ತಾನೂ ಅರ್ಹ ಅಂತ ನಿರೂಪಿಸಿದ್ದಾನೆ. ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಮೂರನೇ ಬಾರಿ ಆಗಮಿಸಿರುವ 43 ವರ್ಷದ ಸುಗ್ರೀವನಿಗೆ 280 ಕೆ.ಜಿ ಮರದ ಅಂಬಾರಿ ಸೇರಿ ಒಟ್ಟು ಸುಮಾರು 600 ಕೆ.ಜಿ ಭಾರ ಹೊರಿಸಿ ಶುಕ್ರವಾರ ತಾಲೀಮು ನಡೆಸಲಾಯಿತು. ಮೊದಲ ಬಾರಿಗೆ ಇಷ್ಟು ಭಾರವನ್ನು ಬೆನ್ನಿಗೇರಿಸಿದರೂ ಕೊಂಚವೂ ವಿಚಲಿತಗೊಳ್ಳದೆ ಅನುಭವಿಯಂತೆ ಸುಗ್ರೀವಾ ತಾಲೀಮು ಪೂರ್ಣಗೊಳಿಸಿ, ಭರವಸೆ ಮೂಡಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ಜಿಲ್ಲೆಯ ಹಳ್ಳಿಖೇಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾತು ಬಾರದ ಹಾಗೂ ಮಾನಸಿಕ ಅಸ್ವಸ್ಥ ಮಹಿಳೆಯೋರ್ವಳ ಮೇಲೆ ಅನುಚಿತ ವರ್ತನೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನಲ್ಲಿ, ತಮ್ಮ ಗಂಡ ಕೆಲಸಕ್ಕೆ ತೆರಳಿದ್ದಾಗ ಮಗಳು ಮನೆಯಲ್ಲಿ ಒಬ್ಬಳೇ ಇದ್ದಳು. ಇದೇ ವೇಳೆ ಅಬು ಎಂಬಾತ ಮನೆಗೆ ನುಗ್ಗಿ, ಆಕೆಯ ಬಾಯಿಗೆ ಬಟ್ಟೆ ಹಾಕಿ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ನಾನು ಈ ವೇಳೆ ಮನೆಗೆ ಬಂದು ಮಗಳನ್ನು ಕೂಗಿದಾಗ, ಆರೋಪಿ ಓಡಿ ಹೋಗಿದ್ದಾನೆ. ಬಳಿಕ ಮಗಳು ಸನ್ನೆಗಳ ಮೂಲಕ ಘಟನೆ ವಿವರಿಸಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಹಳ್ಳಿಖೇಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆ ಮುಂದುವರಿದಿದೆ ವರದಿ: ಅರವಿಂದ್ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ನವದೆಹಲಿ: ದೆಹಲಿಯಲ್ಲಿ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿದೆ. ನಗರದ ಡಿಪಿಎಸ್ ದ್ವಾರಕಾ, ಕೃಷ್ಣ ಮಾಡೆಲ್ ಪಬ್ಲಿಕ್ ಸ್ಕೂಲ್ ಮತ್ತು ಸರ್ವೋದಯ ವಿದ್ಯಾಲಯ ಸೇರಿದಂತೆ ಹಲವು ಶಾಲೆಗಳಿಗೆ ಇಂದು ಬೆದರಿಕೆ ಹಾಕಲಾಗಿದೆ. ಬೆದರಿಕೆ ಬಂದ ತಕ್ಷಣಕ್ಕೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮುನ್ನೆಚ್ಚರಿಕೆಯಾಗಿ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಸುರಕ್ಷತಾ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಾಂಬ್ ಸಂದೇಶ ಪಡೆದ ಡಿಪಿಎಸ್ ದ್ವಾರಕಾ ಶಾಲೆಯನ್ನು ಬಂದ್ ಮಾಡಲಾಗಿದ್ದು, ಇಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಬೆದರಿಕೆ ಸ್ವೀಕರಿಸಿದ ಶಾಲೆಗಳಿಗೆ ಪೊಲೀಸ್ ತಂಡಗಳು ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಆಗಮಿಸಿ ಪರಿಶೀಲನೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಡ್ರಗ್ ಮಾಫಿಯಾ ಸೇರಿದಂತೆ ಇನ್ನಿತರ ಅಕ್ರಮ ದಂಧೆಯ ಜೊತೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ, ಇನ್ನು ಮುಂದೆ ಎಚ್ಚರಿಕೆ ಕೊಡುವುದಿಲ್ಲ, ಕ್ರಮ ತೆಗೆದುಕೊಳ್ಳುತ್ತೇವೆ. ಎಚ್ಚರಿಕೆ ಕೊಡುವುದೆಲ್ಲ ಒಂದು ಹಂತದಲ್ಲಿ ಮುಗಿದಿದೆ. ಈಗ ಏನಿದ್ದರು ಕ್ರಮ ಆಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಖಡಕ್ ಸೂಚನೆ ಕೊಟ್ಟರು. ವಿಧಾನಸೌಧಲ್ಲಿ ಕಾನೂನು ಸುವ್ಯವಸ್ಥೆ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ರೌಡಿಗಳು ಪುಂಡಾಟ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ, ಬ್ಯಾಂಕ್ ದರೋಡೆ ಪ್ರಕರಣಗಳ ತನಿಖೆಯ ಬಗ್ಗೆ ಅಧಿಕಾರಿಗಳೊಂದಿಗೆ ಕೂಲಂಕಷವಾಗಿ ಚರ್ಚೆ ಮಾಡಲಾಗಿದೆ. ಪರಿಶಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ಪರಿಶೀಲನೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ ಶಿಕ್ಷೆ ಪ್ರಮಾಣ ಶೇ.10ರಷ್ಟಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನೆ ಮಾಡಲಾಗಿದೆ. ಪೊಲೀಸ್ ನೇಮಕಾತಿ, ಕಾರಾಗೃಹ ಸಿಬ್ಬಂದಿಗಳ ನೇಮಕಾತಿ ಬಗ್ಗೆ ಚರ್ಚಿಸಲಾಗಿದೆ. ನೇಮಕಾತಿ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ ಎಂದರು. ಈಗಾಗಲೇ…
ಬೀದರ್: ಜಿಲ್ಲೆಯ ಸಂತಪೂರ ನಾಡ ಕಚೇರಿಯಲ್ಲಿ ಕಳೆದ 6 ತಿಂಗಳುಗಳಿಂದ ಆಧಾರ್ ಆಪರೇಟರ್ ಇಲ್ಲದೇ ಇಲ್ಲಿನ ಸಾರ್ವಜನಿಕರು ತೊಂದರೆಗೀಡಾಗುತ್ತಿದ್ದಾರೆ. ತಕ್ಷಣವೇ ಆಧಾರ್ ಆಪರೇಟರ್ ನ್ನು ನೇಮಕ ಮಾಡುವಂತೆ ದಲಿತ ಸಂಘಟನೆ ಮುಖಂಡರು ಔರಾದ್ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ತುಕಾರಾಮ ಹಸನ್ಮುಖಿ ಈ ಸಂಬಂಧ ನೀಡಿರುವ ಮನವಿಯಲ್ಲಿ, ಸಂತಪೂರ ಹೋಬಳಿಯ ಸಂತಪೂರ ನಾಡ ಕಚೇರಿಗೆ ಸುಮಾರು 30 ಕ್ಕಿಂತಲು ಹೆಚ್ಚಿನ ಹಳ್ಳಿಯ ಜನರು ದಿನಾಲೂ ಆಧಾರ್ ಸಂಬಂಧಿಸಿದ ಕೆಲಸಗಳಿಗಾಗಿ ಅಲೆದಾಡುತ್ತಿದ್ದಾರೆ. ಆದರೆ 6 ತಿಂಗಳುಗಳಿಂದ ಸಂತಪೂರ ನಾಡ ಕಚೇರಿಯಲ್ಲಿ ಆಧಾರ್ ಕಾರ್ಡ್ ಆಪರೇಟರ್ ಇರುವುದಿಲ್ಲ. ಮತ್ತು ಸಂತಪೂರ ಹೋಬಳಿಯ ಜನರು ಬೇರೆ ಆಧಾರ್ ಕೇಂದ್ರಕ್ಕೆ ಭೇಟಿ ನೀಡಿದಾಗ, ಅಲ್ಲಿನ ಆಧಾರ್ ಕೇಂದ್ರದ ಆಪರೇಟರ್ ಸಂತಪೂರ ಹೋಬಳಿಯವರ ಕೆಲಸ ಮಾಡಿಕೊಡುತ್ತಿಲ್ಲ, ಹೀಗಾಗಿ ಕೂಡಲೇ ಸಂತಪೂರ ನಾಡ ಕಚೇರಿಗೆ ಶಾಶ್ವತ ಆಧಾರ್ ಕಾರ್ಡ್ ಆಪರೇಟರ್ ನೇಮಕ ಮಾಡುವಂತೆ ವಿನಂತಿಸಲಾಗಿದೆ. ಗಣಪತಿ, ಶೆಂಬೆಳ್ಳಿ ದಲಿತ ದಲಿತ ಹಿರಿಯ ಮುಖಂಡರು, ಮಲ್ಲಿಕಾರ್ಜುನ ಜೊನ್ನಿಕೆರಿ ಸಂಘಟನಾ…
ಬೆಂಗಳೂರು: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ರೋಬೋ ಶಂಕರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಶೂಟಿಂಗ್ ವೊಂದರ ವೇಳೆಯೇ ಈ ಘಟನೆ ನಡೆದಿದೆ. 46 ವರ್ಷ ವಯಸ್ಸಿನ ರೋಬೋ ಶಂಕರ್ ಅವರು ಕುಸಿದು ಬಿದ್ದು ನಿತ್ರಾಣಗೊಂಡಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಈ ಹಿಂದೆ ರೋಬೋ ಶಂಕರ್ ಅವರು ಜಾಂಡೀಸ್‌ನಿಂದ ಬಳಲಿದ್ದರು. ಆನಂತರ ಅವರು ಹಲವು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದರು. ಆದರೆ ಈಗ ಮತ್ತೆ ಚೇತರಿಸಿಕೊಂಡಿದ್ದ ಅವರು ಎಂದಿನಂತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ರೋಬೋ ಶಂಕರ್ ಅವರ ನಿಧನಕ್ಕೆ ಕಾಲಿವುಡ್ ನ ಖ್ಯಾತ ಕಲಾವಿದರಾದ ಕಮಲಹಾಸನ್, ರಜನಿಕಾಂತ್, ವಿಜಯ್, ಅಜಿತ್, ಕಾರ್ತಿ, ಸಿಂಬು ಖುಷ್ಬೂ, ಸಿಮ್ರಾನ್ ಸೇರಿದಂತೆ ಹಲವು ಕಲಾವಿದರು ಹಾಗೂ ತಂತ್ರಜ್ಞರು ಕಂಬನಿ ಮಿಡಿದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ನವದೆಹಲಿ: ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿತ್ತು. ಇದನ್ನು ಪ್ರಶ್ನಿಸಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಅನುಮೋದಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಅರ್ಜಿಗಳನ್ನು ವಜಾ ಮಾಡಿದೆ. ಅರ್ಜಿದಾರರ ಪರ ಹಿರಿಯ ವಕೀಲ ಪಿ.ಬಿ. ಸುರೇಶ್, ಹಿಂದೂಯೇತರ ವ್ಯಕ್ತಿಗೆ ಪೂಜೆಗಳನ್ನು ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದು ವಾದಿಸಿದರು. ದೇವಸ್ಥಾನದ ಒಳಗೆ ಪೂಜೆ ಮಾಡುವುದನ್ನು ಜಾತ್ಯತೀತ ಕ್ರಿಯೆ ಎಂದು ಪರಿಗಣಿಸಲಾಗುವುದಿಲ್ಲ. ಇದು ಸಂಪೂರ್ಣವಾಗಿ ರಾಜಕೀಯ. ಧಾರ್ಮಿಕ ಚಟುವಟಿಕೆಗಾಗಿ ಅವರನ್ನು ದೇವಸ್ಥಾನದ ಒಳಗೆ ಕರೆತರಲು ಯಾವುದೇ ಕಾರಣವಿಲ್ಲ ಎಂದು ವಾದ ಮಂಡಿಸಿದರು. ದಸರಾ ಉದ್ಘಾಟನೆಗೆ ಆಹ್ವಾನಿತರಾದವರು ಹಿಂದೆ ಕೆಲವು ಆಕ್ಷೇಪಾರ್ಹ…
ಕುಣಿಗಲ್: ದಲಿತರ ಸಮಸ್ಯೆಗಳಿಗೆ ತಹಶೀಲ್ದಾರ್ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ತಾಲ್ಲೂಕಿನ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಬುಧವಾರ ಮಧ್ಯಾಹ್ನದಿಂದ ತಾಲ್ಲೂಕು ಕಚೇರಿ ಮುಂದೆ ನಡೆಸುತ್ತಿರುವ ಧರಣಿ ಗುರುವಾರವು ಮುಂದುವರೆಯಿತು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ದಲಿತ ಮುಖಂಡರು, ತಹಶೀಲ್ದಾರ್ ಕಳೆದ ಎರಡು ವರ್ಷದಿಂದ ಪರಿಶಿಷ್ಟ ಜಾತಿ ಮತ್ತೆ ಪಂಗಡಗಳ ಕುಂದುಕೊರತೆ ಸಭೆಯನ್ನು ಸಕಾಲಕ್ಕೆ ನಡೆಸದ ಕಾರಣ ದಲಿತರ ಸಮಸ್ಯೆಗಳು ಹೆಚ್ಚಾಗಿದೆ. ಹತ್ತು ಹಲವು ಬಾರಿ ಮನವಿ ಮಾಡಿದ ಪರಿಣಾಮ ಕಳೆದ 23 ರಂದು ಸಭೆ ಕರೆದಿದ್ದರೂ, ಸಮಸ್ಯೆಗಳು ಬಗೆಹರಿಸದೆ ಕೇವಲ ಚರ್ಚೆಗಳು ಮಾತ್ರ ನಡೆದು, ಸಭೆಯನ್ನು ಮತ್ತೆ ಇದೇ 12ರಂದು ಕರೆಯಲಾಗಿತ್ತು. ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರೂ, ಗಮನಹರಿಸದೆ ಗುಂಪುಗಾರಿಕೆ ಮಾಡಿ ಮತ್ತೊಂದು ಗುಂಪಿನೊಂದಿಗೆ ಸೇರಿ ಸಭೆ ನಡೆಸಿದ್ದಾರೆ. ದಲಿತರ ಜಮೀನು ಮತ್ತು ರಸ್ತೆ ಸಮಸ್ಯೆಗಳನ್ನು ಬಗೆಹರಿಸಲು ತಹಶೀಲ್ದಾರ್ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ದೂರಿದರು. ತಾಲ್ಲೂಕಿನ ಬೆಣಚುಕಲ್ಲು, ತೆರದಕುಪ್ಪೆ, ಗುನ್ನಾಗರೆ, ಕೊಡವತ್ತಿ, ಮಲ್ಲಾಪುರ, ಗೋವಿಂದಯ್ಯನಪಾಳ್ಯ ವಾಣಿಗೆರೆ, ನಾಗಲಾಪುರ ಗ್ರಾಮಗಳಲ್ಲಿ ದಲಿತರ ಜಮೀನಿಗೆ ಹೋಗುವ…
ತಿಪಟೂರು: ನಗರದ ಕಲ್ಪತರು ಸಭಾಂಗಣದಲ್ಲಿ ಗುರುವಾರ ಜಾತಿ ಗಣತಿ ನಡೆಸುವ ಕುರಿತು ತಾಲ್ಲೂಕು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ನಡೆಯಿತು. ತಾಲ್ಲೂಕಿನಲ್ಲಿ 64,398 ಕುಟುಂಬಗಳಿದ್ದು, 640 ಶಿಕ್ಷಕರಿಗೆ ಸಮೀಕ್ಷೆಯ ತರಬೇತಿ ನೀಡಲಾಯಿತು. ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ಷಡಕ್ಷರಿ, ಎಲ್ಲ ಸಮೀಕ್ಷಾದಾರರು ತಾಳ್ಮೆಯಿಂದ ಪ್ರತಿ ಮನೆಗೆ ತೆರಳಿ ಈಗಾಗಲೇ ಅಡಕವಾಗಿರುವ ಪ್ರಶ್ನಾವಳಿಗಳ ಮೂಲಕ ಮಾಹಿತಿ ಪಡೆಯಬೇಕು. ಸಮೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಶಿಕ್ಷಣ, ಉದ್ಯೋಗ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಾಧ್ಯ ಎಂದು ತಿಳಿಸಿದರು. ಉಪವಿಭಾಗಾಧಿಕಾರಿ ಸಪ್ತಶ್ರೀ ಮಾತನಾಡಿ, ಶಿಕ್ಷಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಕೇಳಿರುವ ಪ್ರಶ್ನಾವಳಿಯಲ್ಲಿ ಕುಟುಂಬದ ಮುಖ್ಯಸ್ಥನಿಂದ ಸಮಗ್ರ ಮಾಹಿತಿ ಪಡೆಯಬೇಕು. ಸಮೀಕ್ಷೆಯಿಂದ ಯಾವುದೇ ಕುಟುಂಬ ಹೊರಗುಳಿಯಬಾರದು ಎಂದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎಚ್.ಎಂ. ಸುದರ್ಶನ್, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಮಣಿ, ಪೌರಯುಕ್ತ ವಿಶ್ವೇಶ್ವರ ಬದರಗಡೆ, ಹಿಂದುಳಿದ ವರ್ಗಗಳ ಇಲಾಖೆ ಕಲ್ಯಾಣಾಧಿಕಾರಿ ಜಲಜಾಕ್ಷಮ್ಮ, ಗ್ರೇಡ್-2 ತಹಶೀಲ್ದಾರ್ ಜಗನ್ನಾಥ್, ಬಿಆರ್‌ಪಿ ಉಮೇಶ್‌ಗೌಡ, ಬಿಆರ್ ಸಿ ಕಚೇರಿ ಕ್ಷೇತ್ರ ಸಂಪನ್ಮೂಲ…