Subscribe to Updates
Get the latest creative news from FooBar about art, design and business.
- ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
- ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
- ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
- ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
- ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
- ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
- ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
- ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
Author: admin
ಸಿಯಾಚಿನ್ ನಲ್ಲಿ ಕಳೆದ ವರ್ಷ ಜುಲೈನಲ್ಲಿ ಸಂಭವಿಸಿದ ದೊಡ್ಡ ಬೆಂಕಿಯಿಂದ ಜನರನ್ನು ರಕ್ಷಿಸುವ ವೇಳೆ ಸೇನಾ ವೈದ್ಯಕೀಯ ದಳದ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಸಾವನ್ನಪ್ಪಿದ್ದರು. ಈ ಹಿನ್ನೆಲೆ ಜುಲೈ 5ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಭಾರತದ ಎರಡನೇ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯನ್ನು ಅಂಶುಮಾನ್ ಸಿಂಗ್ ಪತ್ನಿ ಸ್ಮೃತಿ ಸ್ವೀಕರಿಸಿದ್ದರು. ಆದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರಿಗೆ ಮರಣೋತ್ತರವಾಗಿ ನೀಡಿದ ಕೀರ್ತಿ ಚಕ್ರವನ್ನು ತಮ್ಮ ಸೊಸೆ ಸ್ಮೃತಿ ಶೌರ್ಯ ಪದಕ ಮತ್ತು ಇತರ ನೆನಪುಗಳನ್ನು ತನ್ನ ತವರುಮನೆಗೆ ತೆಗೆದುಕೊಂಡು ಹೋಗಿದ್ದಾಳೆ ಎಂದು ಅಂಶುಮಾನ್ ಸಿಂಗ್ ಪೋಷಕರು ಆರೋಪಿಸಿದ್ದಾರೆ. ಮರಣೋತ್ತರವಾಗಿ ಕೀರ್ತಿ ಚಕ್ರ ಪಡೆದ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರ ಪೋಷಕರು, ನಮ್ಮ ಸೊಸೆ ಸ್ಮೃತಿ ಈಗ ತವರುಮನೆಯಲ್ಲಿದ್ದಾಳೆ. ನಮ್ಮ ಮಗ ಸಾವನ್ನಪ್ಪಿದ ನಂತರ ಆಕೆ ತನ್ನ ಬಟ್ಟೆಯ ಜೊತೆಗೆ ನಮ್ಮ ಮಗನ ಬಟ್ಟೆ, ಆತನ ವಸ್ತುಗಳನ್ನೆಲ್ಲ ತೆಗೆದುಕೊಂಡು ತವರುಮನೆಯಲ್ಲಿ ವಾಸವಾಗಿದ್ದಾಳೆ. ಈಗ ಸರ್ಕಾರ ಕೊಟ್ಟಿರುವ ಕೀರ್ತಿ…
ಈ ಎರಡು ಬ್ಯಾಂಕ್ ತಮ್ಮ ಆನ್ಲೈನ್ ಸೇವೆಗಳನ್ನು ಉನ್ನತೀಕರಣ ಮಾಡುತ್ತಿರುವ ಕಾರಣ ಇಂದು (ಶನಿವಾರ) ಇವುಗಳ ಸರ್ವರ್ ಹಾಗೂ ಆನ್ಲೈನ್ ವಹಿವಾಟುಗಳು 13 ತಾಸು ಸ್ಥಗಿತಗೊಳ್ಳಲಿದೆ. Axis Bank, HDFC Bank ಸರ್ವಿಸ್ ಅಪ್ ಗ್ರೆಡೇಷನ್ ಹಾಗೂ ಕೋರ್ ಬ್ಯಾಂಕಿಂಗ್ ಸಿಸ್ಟಂ ವರ್ಗಾವಣೆ ಮಾಡಿಕೊಳ್ಳುತ್ತಿರುವ ಕಾರಣ ನಸುಕಿನ 3 ರಿಂದ ಸಂಜೆ 4:30 ರವರೆಗೆ ಚಟುವಟಿಕೆ ಸ್ಥಗಿತಗೊಳ್ಳಲಿದೆ. ಎಚ್ ಡಿಎಫ್ ಸಿ ಬ್ಯಾಂಕ್ ಮತ್ತು ಆಕ್ಸಿಸ್ ಬ್ಯಾಂಕ್, ಈ ಎರಡೂ ಬ್ಯಾಂಕ್ ಗಳು ತಮ್ಮ ವ್ಯವಸ್ಥೆಯನ್ನು ನವೀಕರಿಸುತ್ತಿವೆ. ಇದಲ್ಲದೆ, ಆಕ್ಸಿಸ್ ಬ್ಯಾಂಕ್ ಸಿಟಿ ಇಂಡಿಯಾದ ವ್ಯವಹಾರವನ್ನು ಸಹ ಬದಲಾಯಿಸುತ್ತಿದೆ. ಎರಡೂ ಬ್ಯಾಂಕ್ ಗಳು ತಮ್ಮ ಗ್ರಾಹಕರಿಗೆ ಸೇವೆಯಲ್ಲಿನ ಅಡಚಣೆಯ ಬಗ್ಗೆ ತಿಳಿಸಿವೆ. HDFC ಬ್ಯಾಂಕ್ ತನ್ನ ಕೋರ್ ಬ್ಯಾಂಕಿಂಗ್ ವ್ಯವಸ್ಥೆಯನ್ನು (CBS) ಹೊಸ ಎಂಜಿನಿಯರಿಂಗ್ ಪ್ಲಾಟ್‌ಫಾರ್ಮ್‌ಗೆ ಸ್ಥಳಾಂತರಿಸಲು ಜುಲೈ 13 ರಂದು ಸಿಸ್ಟಮ್ ಅಪ್‌ಗ್ರೇಡ್ ಅನ್ನು ಕೈಗೊಳ್ಳುವುದಾಗಿ ಬ್ಯಾಂಕ್ ಘೋಷಿಸಿತ್ತು. ಜುಲೈ 13, 2024 ರಂದು ಬೆಳಿಗ್ಗೆ 3 ರಿಂದ 3.45…
ಭಾರತ ಸರ್ಕಾರವು ಜನಸಂಖ್ಯೆಯನ್ನು ನಿಯಂತ್ರಿಸಲು ನಿರಂತರವಾಗಿ ಪ್ರಯತ್ನಗಳನ್ನು ಮಾಡುತ್ತಿದೆ, ಇದರ ಹೊರತಾಗಿಯೂ ಭಾರತದ ಜನಸಂಖ್ಯೆಯು ಹೆಚ್ಚುತ್ತಿದೆ. ಇದೀಗ ವಿಶ್ವಸಂಸ್ಥೆಯ ‘ವರ್ಲ್ಡ್ ಪಾಪ್ಯುಲೇಶನ್ ಪ್ರಾಸ್ಪೆಕ್ಟ್ಸ್ 2024’ ವರದಿಯಲ್ಲಿ ಮುಂಬರುವ ದಿನಗಳಲ್ಲಿ ಭಾರತದ ಜನಸಂಖ್ಯೆ ಇನ್ನಷ್ಟು ಹೆಚ್ಚಾಗಲಿದೆ ಎಂಬ ಅಂಶ ಬಹಿರಂಗವಾಗಿದೆ. 2060ರ ಆರಂಭದ ವೇಳೆಗೆ ಭಾರತದ ಜನಸಂಖ್ಯೆ 1.7 ಬಿಲಿಯನ್ ಆಗಬಹುದು ಎಂದು ವಿಶ್ವಸಂಸ್ಥೆ ಹೇಳಿದೆ. ಇದು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಉಳಿಯುತ್ತದೆ ಎಂದು ಹೇಳಿದೆ. ವರದಿಯ ಪ್ರಕಾರ, ಕಳೆದ ವರ್ಷ ಭಾರತವು ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಯಿತು. ಈಗ ಈ ಇಡೀ ಶತಮಾನದಲ್ಲಿ ಅಂದರೆ 2100ನೇ ಇಸವಿಯವರೆಗೂ ಭಾರತ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಉಳಿಯುತ್ತದೆ. 2100 ರ ವೇಳೆಗೆ ಭಾರತದ ಜನಸಂಖ್ಯೆಯು 1.5 ಶತಕೋಟಿಗೆ ಕುಸಿಯುವ ನಿರೀಕ್ಷೆಯಿದೆ. 2054 ರ ವೇಳೆಗೆ ವಿಶ್ವದ 126 ದೇಶಗಳು ಮತ್ತು ಪ್ರದೇಶಗಳ ಜನಸಂಖ್ಯೆಯು ಹೆಚ್ಚಾಗಲಿದೆ ಎಂದು ವರದಿ ಹೇಳುತ್ತದೆ. ಶತಮಾನದ…
ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಲ್ಲಿ ತಮ್ಮ ಭೇಟಿಗೆ ಬರುವ ಜನ ಆಧಾರ್ ಕಾರ್ಡ್ ತರುವಂತೆ ಹೇಳಿರುವ ಬಾಲಿವುಡ್ ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಾಣಾವತ್ ವಿವಾದ ಸೃಷ್ಟಿಸಿದ್ದಾರೆ. ತಮ್ಮ ಭೇಟಿಗೆ ಕಾದು ನಿಂತಿದ್ದ ಜನರಿಗೆ ಭೇಟಿಯ ಬದಲು ಬಂದ ಕಾರಣವನ್ನು ಲಿಖಿತವಾಗಿ ನೀಡುವಂತೆಯೂ ನಟಿ ತಿಳಿಸಿದ್ದಾರೆ. ದೊಡ್ಡ ಸಂಖ್ಯೆಯ ಪ್ರವಾಸಿಗಳು ಮತ್ತು ಹೊರಗಿನವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ನಿಯಮವನ್ನು ಜಾರಿಗೊಳಿಸುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಮಂಡಿಯಲ್ಲಿ ಇರುವಾಗಲೆಲ್ಲ ನಿಯೋಜಿತ ಸಂವಾದ ಕೇಂದ್ರಗಳಲ್ಲಿ ಸಂದರ್ಶಕರನ್ನು ಭೇಟಿ ಮಾಡಲು ಲಭ್ಯವಿರುವುದಾಗಿ ತಿಳಿಸಿದ್ದಾರೆ. “ಹಿಮಾಚಲ ಪ್ರದೇಶದ ದೊಡ್ಡ ಸಂಖ್ಯೆಯ ಪ್ರವಾಸಿಗಳನ್ನು ಆಕರ್ಷಿಸುತ್ತಿದೆ. ಆದ್ದರಿಂದ ಮಂಡಿ ಪ್ರದೇಶದ ಒಂದು ಆಧಾರ್ ಕಾರ್ಡ್ ತರುವುದು ಅಗತ್ಯ. ಕ್ಷೇತ್ರದಲ್ಲಿ ನಿಮ್ಮ ಕೆಲಸದ ಸಂಬಂಧದ ವಿವರವನ್ನು ಒಂದು ಪತ್ರದಲ್ಲಿ ಲಿಖಿತವಾಗಿ ನೀಡಬೇಕು. ಆದ್ದರಿಂದ ಯಾವುದೇ ಅನಾನುಕೂಲವಾಗದಂತೆ ಎಚ್ಚರ ವಹಿಸಬೇಕು” ಎಂದು ತಿಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಮಧುಗಿರಿ: ಏಕಶಿಲಾ ಬೆಟ್ಟಕ್ಕೆ ಕೇಬಲ್ ಕಾರ್ ಅಳವಡಿಸುವ ಮಹತ್ವಾಕಾಂಕ್ಷಿ ಯೋಜನೆಯ 2ನೇ ಸುತ್ತಿನ ಸ್ಥಳ ಪರಿಶೀಲನೆ ಶುಕ್ರವಾರ ನಡೆಯಿತು. ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಮಹತ್ವದ ಹೆಜ್ಜೆ, ಮಧುಗಿರಿಯನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಿ ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗೂಟೂರು ಶಿವಪ್ಪ, ತಹಶೀಲ್ದಾರ್ ಸಿಗ್ಬತ್ ಉಲ್ಲಾ, ಅರಣ್ಯ ಇಲಾಖೆಯ ಸುರೇಶ್ ಸೇರಿದಂತೆ ಅನೇಕ ಅಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಪ್ರವಾಸೋದ್ಯಮದ ಮಹತ್ವ ಮತ್ತು ಯಶಸ್ಸಿಗೆ ಮಾರ್ಗದರ್ಶನ: ಮಧುಗಿರಿ ಏಕಶಿಲಾ ಬೆಟ್ಟ, ಪ್ರವಾಸಿಗರನ್ನು ಆಕರ್ಷಿಸಲು ಬಹಳ ಆಕರ್ಷಕವಾಗಿದ್ದು, ಕೇಬಲ್ ಕಾರ್ ವ್ಯವಸ್ಥೆ, ಪ್ರವಾಸಿಗರಿಗೆ ಸುಗಮ ಪ್ರವೇಶವನ್ನು ಒದಗಿಸುತ್ತದೆ. ಇದು ಸ್ಥಳೀಯ ಆರ್ಥಿಕತೆಯನ್ನು ಉತ್ತೇಜಿಸಲು ಸಹಕಾರಿ ಆಗುತ್ತದೆ. ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರ ಮಹತ್ವದ ಭೂಮಿಕೆ: ರಾಜೇಂದ್ರ ರಾಜಣ್ಣ, ವಿಧಾನ ಪರಿಷತ್ ಸದಸ್ಯರು, ಈ ಯೋಜನೆಗೆ ಪ್ರೇರಕ ಶಕ್ತಿ. ಅವರ ಮುಂಚೂಣಿಯಲ್ಲಿ, ಅಧಿಕಾರಿಗಳು ಮತ್ತು ಮುಖಂಡರು, ಪ್ರವಾಸೋದ್ಯಮ ಅಭಿವೃದ್ಧಿಯತ್ತ ಗಮನ ಹರಿಸುವ ಮೂಲಕ, ಮಧುಗಿರಿ ಪ್ರದೇಶದ ಸಾಂಸ್ಕೃತಿಕ…
ತುಮಕೂರು: ಬಾಲಕಿಯೊಬ್ಬಳನ್ನು 15,000 ರೂ ಗೆ ಜೀತಕ್ಕೆ ಇರಿಸಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತುಮಕೂರಿನ ಕುಮಾರ್ ಮತ್ತು ಚೌಡಮ್ಮ ದಂಪತಿಗೆ ಸೇರಿದ ಹೆಣ್ಣುಮಗುವನ್ನು ಚೌಡಮ್ಮರ ತಂಗಿಯ ಅತ್ತೆ ಮತ್ತು ಮಾವ ತಮ್ಮ ಸಾಲವನ್ನು ತೀರಿಸಲಾಗದೆ ಮಗುವನ್ನು ಆಂಧ್ರದ ಹಿಂದೂಪುರದಲ್ಲಿ 15 ಸಾವಿರ ರೂಪಾಯಿಗಳಿಗೆ ಕೆಲಸಕ್ಕೆಂದು ಅಡವಿಟ್ಟಿದ್ದ ಪ್ರಕರಣ ತಡವಾಗಿ ಬೆಳಕಿದೆ. ತುಮಕೂರಿನ ದಿಬ್ಬೂರಿನ ದೇವರಾಜ ಅರಸ್ ಹೌಸಿಂಗ್ ನಲ್ಲಿ ವಾಸವಾಗಿರುವ ಕುಮಾರ್ ಮತ್ತು ಚೌಡಮ್ಮ ದಂಪತಿಯ ಮಗುವನ್ನು ಆಂಧ್ರದ ಹಿಂದೂಪುರದಲ್ಲಿ ವಾಸವಿರುವ ತಂಗಿಯು ತನಗೆ ಹೆರಿಗೆಯಾಗಿದೆ ಸ್ವಲ್ಪ ದಿನಗಳ ಕಾಲ ಮಗುವನ್ನು ನನ್ನ ಬಳಿ ಕಳುಹಿಸಿಕೊಡು ಎಂದು ಕೇಳಿಕೊಂಡಿದ್ದಾರೆ. ತಂಗಿಯ ಕಾರಣಕ್ಕೆ ಚೌಡಮ್ಮ ಮಗುವನ್ನು ಕಳುಹಿಸಿಕೊಟ್ಟಿದ್ದಾರೆ. ಆದರೆ ಅಲ್ಲಿಗೆ ಹೋದನಂತರ ಚೌಡಮ್ಮರ ತಂಗಿಯ ಅತ್ತೆ ಮತ್ತು ಮಾವ ತಾವು ಮಾಡಿದ ಸಾಲಕ್ಕಾಗಿ ಆಂಧ್ರದ ವ್ಯಕ್ತಿಯೊಬ್ಬರಿಗೆ 15 ಸಾವಿರ ರೂ.ಗಳಿಗೆ ಬಾತುಕೋಳಿ ಕಾಯಲು, ಮನೆಕೆಲಸ ಮಾಡಲು ಅಡವಿಟ್ಟಿದ್ದಾರೆ. ಕೆಲವು ದಿನಗಳ ನಂತರ ಚೌಡಮ್ಮ ತಮ್ಮ ತಂಗಿಗೆ ಕರೆ ಮಾಡಿ ಮಗುವನ್ನು ವಾಪಾಸ್…
ಮಧುಗಿರಿ: ಹೊಸಕೆರೆ ಗ್ರಾಮದಿಂದ ನೇರಳೇಕೆರೆ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಲಕ್ಷ್ಮಿದೇವಿಪುರ ಹಳ್ಳಿ ಪಕ್ಕದಲ್ಲಿ ಹಲವು ತಿರುವುಗಳು ಇರುವುದರಿಂದ ಈ ಭಾಗದಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಸಾವುಗಳು ಹಾಗೂ ಅಂಗವಿಕಲತೆಗಳು ಸಂಭವಿಸುತ್ತಿವೆ. ಈ ರಸ್ತೆಯನ್ನು ನೇರವಾಗಿ ಸಲೀಸು ಮಾಡಲು ಸಂಬಂಧಪಟ್ಟ ಇಲಾಖೆಯು ತಕ್ಷಣವೇ ಕ್ರಮಕೈಗೊಳ್ಳಬೇಕಾಗಿ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ಅವಶ್ಯಕತೆ: ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿರುವುದರಿಂದ, ರಸ್ತೆ ಸುಧಾರಣೆ ಮಾಡುವುದು ಅತ್ಯವಶ್ಯಕವಾಗಿದೆ. ತಾತ್ಕಾಲಿಕವಾಗಿ, ಗ್ರಾಮ ಪಂಚಾಯತಿ ಪಕ್ಕದಲ್ಲಿರುವ ಸಣ್ಣ ಕಟ್ಟೆ ಯನ್ನು ತೆರವುಗೊಳಿಸಿ, ನೇರವಾಗಿ ಮಣ್ಣಿನ ರಸ್ತೆಯಾಗಿ ಸುಧಾರಣೆ ಮಾಡುವ ಅವಶ್ಯಕತೆ ಇದೆ. ಗ್ರಾಮಸ್ಥರ ಅಭಿಪ್ರಾಯ: ಗ್ರಾಮಸ್ಥರು ಈ ಸಂಬಂಧ ಪರಿಶೀಲನೆ ನಡೆಸಿ, ತಕ್ಷಣವೇ ತಿರುವುಗಳನ್ನು ಸರಿಪಡಿಸುವ ಮೂಲಕ ನೇರ ರಸ್ತೆಯನ್ನು ನಿರ್ಮಿಸುವಂತೆ ಸ್ಥಳೀಯ ಆಡಳಿತವನ್ನು ವಿನಂತಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ, ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರವು ಇ–ಶ್ರಮ್ ಯೋಜನೆ ಜಾರಿಗೊಳಿಸಿದೆ. ಇ-ಶ್ರಮ ಕಾರ್ಡ್‌ನೊಂದಿಗೆ, ಅಸಂಘಟಿತ ವಲಯದ ಕಾರ್ಮಿಕರು ಆರೋಗ್ಯ ಮತ್ತು ಜೀವ ವಿಮೆ, ವೃದ್ಧಾಪ್ಯ ಪಿಂಚಣಿ, ಅಂಗವೈಕಲ್ಯ ಪಿಂಚಣಿ, ಮಾತೃತ್ವ ಪ್ರಯೋಜನ ಮುಂತಾದ ಸರ್ಕಾರದಿಂದ ಪ್ರಾರಂಭಿಸಲಾದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ನೀಡಲಾಗುತ್ತದೆ. ಇ-ಶ್ರಮ ಕಾರ್ಡ್ ಅಸಂಘಟಿತ ಕಾರ್ಮಿಕರಿಗೆ ಬ್ಯಾಂಕ್ ಖಾತೆಗಳನ್ನು ತೆರೆಯಲು ಮತ್ತು ವಿವಿಧ ಹಣಕಾಸು ಸೇವೆಗಳನ್ನು ಪಡೆಯಲು ಅನುವು ಮಾಡಿಕೊಡುವ ಮೂಲಕ ಆರ್ಥಿಕ ಸೇರ್ಪಡೆಗೆ ಅನುಕೂಲ ಮಾಡಿ ಕೊಡಲಾಗುತ್ತದೆ. ಇ-ಶ್ರಮ್ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ನೋಂದಣಿ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನವೆಂಬರ್ ಅಂತ್ಯದವರೆಗೆ ನೋಂದಣಿ ಮಾಡಿಸಿಕೊಳ್ಳಬಹುದು. ಇ-ಶ್ರಮ್ ಪೋರ್ಟಲ್‍ನಲ್ಲಿ ನೋಂದಣಿಯು ಉಚಿತವಾಗಿದ್ದು, ಯಶಸ್ವಿ ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು ಪಡೆಯಬಹುದಾಗಿದೆ. ಇ–ಶ್ರಮ ಪೋರ್ಟಲ್ ನಲ್ಲಿ ಕಾರ್ಮಿಕ ವರ್ಗಗಳಲ್ಲಿ ಅತ್ಯಂತ…
ಉತ್ತರ ಕನ್ನಡ ಜಿಲ್ಲೆಯ 12 ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರತಿದಿನ ಸಂಗ್ರಹವಾಗುವ ಘನ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ನಗರಪ್ರದೇಶಗಳಲ್ಲಿ ನೈರ್ಮಲ್ಯ ಮತ್ತು ಸಾರ್ವಜನಿರ ಆರೋಗ್ಯ ಕಾಪಾಡುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 1368.81 ಲಕ್ಷ ರೂ ಗಳ ವೆಚ್ಚದಲ್ಲಿ 12 ಎಂ.ಆರ್.ಎಫ್.(Materials Recovery Facility ) ಕೇಂದ್ರಗಳನ್ನು ಆರಂಭಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಜಿಲ್ಲೆಯಲ್ಲಿನ ನಗರ ಸ್ಥಳೀಯ ಸಂಸ್ಥೆಗಳಾದ, ಕಾರವಾರದಲ್ಲಿನ 31 ವಾರ್ಡ್, ದಾಂಡೇಲಿಯ 31, ಶಿರಸಿಯ 31, ಭಟ್ಕಳದ 23, ಕುಮಟಾದ 23, ಅಂಕೋಲದ 23, ಹಳಿಯಾಳದ 23, ಹೊನ್ನಾವರದ 20, ಸಿದ್ದಾಪುರದ 15, ಯಲ್ಲಾಪುರದ 19, ಮುಂಡಗೋಡ 19 ಮತ್ತು ಜಾಲಿಯ 20 ಸೇರಿದಂತೆ ಒಟ್ಟು 298 ವಾರ್ಡ್ಗಳಿಂದ ಪ್ರತಿ ದಿನ 125.6 ಟನ್ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತಿದ್ದು, ಇದರಲ್ಲಿ 43.96 ಟನ್ ಘನ ತ್ಯಾಜ್ಯವನ್ನು ಸಂಗ್ರಹವಾಗಿದೆ. ಈ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿ, ಪರಿಸರದಲ್ಲಿ ನೈರ್ಮಲ್ಯ ಕಾಪಾಡುವುದು…
ಕಾರವಾರ: ಡೆಂಗ್ಯೂ ರೋಗ ನಿಯಂತ್ರಣ ಕುರಿತಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸುವ ಎಲ್ಲಾ ನಿಯಂತ್ರಣ ಕ್ರಮಗಳನ್ನು ಸಾರ್ವಜನಿಕರು ತಮ್ಮ ಮನೆಯ ಒಳಗೆ ಮತ್ತು ಮನೆಯ ಸುತಮುತ್ತಲಿನ ಅವರಣದಲ್ಲಿ ತಪ್ಪದೇ ಅಳವಡಿಸಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಡೆಂಗ್ಯೂ ಉಲ್ಬಣಗೊಳ್ಳದಂತೆ ತಡೆಯುವ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಿಗೆ ಹೆಚ್ಚಿನ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದರು. ಅವರು ಶುಕ್ರವಾರ, ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಚಟುವಟಿಕೆಯ ಅಂಗವಾಗಿ, ಕಾರವಾರದ ಅರ್ಜುನ್ ಟಾಕೀಸ್ ಬಳಿಯಲ್ಲಿನ ಮನೆಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಗೆ ಡೆಂಗ್ಯೂ ನಿಯಂತ್ರಣ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಿ, ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಮನೆಯಲ್ಲಿನ ಅಲಂಕಾರಿಕ ಕುಂಡಗಳಲ್ಲಿ ನೀರು ನಿಲ್ಲದಂತೆ ಮತ್ತು ಮನೆಯ ಒಳಗೆ ಫ್ರಿಡ್ಸ್ ಗಳ ಕೆಳಗೆ ಸಹ ನೀರು ಶೇಖರವಾಗದಂತೆ ಎಚ್ಚರವಹಿಸಬೇಕು. ಡ್ರಮ್, ಬ್ಯಾರಲ್ ಗಳಲ್ಲಿ ತುಂಬಿರುವ ನೀರನ್ನು ಆಗಾಗ್ಗೆ ಬದಲಾಯಿಸುವ ಮೂಲಕ ಸೊಳ್ಳೆಗಳು ಮೊಟ್ಟೆಗಳನ್ನು ಇಡದಂತೆ ಮತ್ತು ಈಗಾಗಲೇ ಇಟ್ಟಿರುವ ಮೊಟ್ಟೆಗಳನ್ನು ನಾಶ…