Author: admin

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ವ್ಯಾಪ್ತಿಯ 205 ಕೆರೆಗಳ ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸುವ ಸಂಬಂಧ ನೀತಿ ರೂಪಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ಮಂಗಳವಾರ ಹೈಕೋರ್ಟ್‌ಗೆ ತಿಳಿಸಿದೆ. ನಗರದಲ್ಲಿನ ಕೆರೆಗಳ ನಿರ್ವಹಣೆಯಲ್ಲಿ ಬಿಡಿಎ, ಬಿಬಿಎಂಪಿ ಜಲಮಂಡಳಿ ಸಂಸ್ಥೆಗಳು ವಿಫಲವಾದ ಹಿನ್ನಲೆಯಲ್ಲಿ ಇಂತಹದ್ದೊಂದು ನಿರ್ಧಾರ ತೆಗೆದುಕೊಂಡಿರುವುದು ಗಮನಾರ್ಹ ಅಂಶವಾಗಿದೆ. ಸಿಟಿಜನ್‌ ಆ್ಯಕ್ಷನ್‌ ಗ್ರೂಪ್‌ ಇನ್ನಿತರರು ನಗರದಲ್ಲಿಒತ್ತುವರಿಯಾಗಿರುವ ರಾಜಕಾಲುವೆ, ಕೆರೆ ಜಾಗಗಳ ಒತ್ತುವರಿ ತೆರವುಗೊಳಿಸಲು ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಿಜೆ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ.ಅರವಿಂದ್‌ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿದ್ದವು. ರಾಜಕಾಲುವೆ ಒತ್ತುವರಿ ತೆರವಿಗೆ ಸಂಬಂಧಿಸಿದ ವಿಚಾರಣೆ ವೇಳೆ ಕೆರೆಗಳ ನಿರ್ವಹಣೆಯನ್ನು ಖಾಸಗಿ ಸಂಘ, ಸಂಸ್ಥೆಗಳಿಗೆ ವಹಿಸುವ ವಿಚಾರ ಸರಕಾರ ಬಹಿರಂಗಪಡಿಸಿದೆ. ಆ ಮೂಲಕ ಖಾಸಗಿ ಸಂಘ ಸಂಸ್ಥೆಗಳು ಇನ್ಮುಂದೆ ಬೆಂಗಳೂರಿನ ಕೆರೆಗಳ ನಿರ್ವಹಣಾ ಪಾಲುದಾರರಾಗಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ರಾಜ್ಯದಲ್ಲಿ ಈಗಾಗಲೇ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಕರಾವಳಿ ಭಾಗದಲ್ಲಿ ಮಳೆ ಇಳಿಕೆಯಾದರೂ ಪ್ರವಾಹ ಸ್ಥಿತಿ, ನದಿಗಳ ನೀರಿನ ಮಟ್ಟ ಕಡಿಮೆಯಾಗಿಲ್ಲ. ಈ ನಡುವೆ ಹವಾಮಾನ ಇಲಾಖೆ ಮತ್ತೆ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಆದ್ದರಿಂದ ಜುಲೈ 13 ರವರೆಗೆ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಜುಲೈ 12 ಮತ್ತು 13 ರಂದು ಕರಾವಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಜುಲೈ 10 ಮತ್ತು 11 ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಸಾಧಾರಣದಿಂದ ಉತ್ತಮ ಮಳೆ ಸುರಿಯುವ ಸಾಧ್ಯತೆ ಹೆಚ್ಚಾಗಿದೆ. ಅದಿಲ್ಲದೇ ಹೋದರೂ ಬೆಂಗಳೂರಿನಲ್ಲಿ 3-4 ದಿನ ಕಾಲ ಮೋಡ ಕವಿದ ವಾತವರಣ ಮುಂದುವರಿಯಲಿದೆ. ರಾಜಧಾನಿಯಲ್ಲಿ ಗಾಳಿ ಜೊತೆಗೆ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 11, 12 ಹಾಗೂ 13 ರಂದು…

Read More

ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿರುವುದು ನಟನಿಗೆ ಅಪಾಯ ತರುವುದು ಆಗಿರಲಿಲ್ಲ ಅಲ್ಲ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ನ ಉದ್ದೇಶ ಬಾಲಿವುಡ್‌ ನಲ್ಲಿ ಭಯವನ್ನು ಹರಡುವುದಾಗಿತ್ತು ಎಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಮಹತ್ವದ ಮಾಹಿತಿ ಇದೆ. ಒಂದು ಕಾಲದಲ್ಲಿ ಬಾಲಿವುಡ್‌ ನಲ್ಲಿ ಭಯವನ್ನು ಬಿತ್ತಿದ್ದ ಡಿ ಕಂಪನಿಯಂತಹ ಮಾಫಿಯಾ ಗ್ಯಾಂಗ್‌ ಗಳು ಈಗಿಲ್ಲ. ಮುಂಬೈ ಪೊಲೀಸರ ಅಪರಾಧ ವಿಭಾಗವು ಬಿಷ್ಣೋಯ್ ಗ್ಯಾಂಗ್ ಈ ಅಂತರವನ್ನು ಒಂದು ಅವಕಾಶವಾಗಿ ನೋಡುತ್ತಿದೆ ಎಂದು ಕಂಡುಹಿಡಿದಿದೆ. ಸಲ್ಮಾನ್ ಮೇಲೆ ಗುಂಡು ಹಾರಿಸಿ ಬಾಲಿವುಡ್ ನಲ್ಲಿ ಭಯ ಹುಟ್ಟಿಸಿ ಮತ್ತಷ್ಟು ಜನರನ್ನು ಬೆದರಿಸಿ ಹಣ ವಸೂಲಿ ಮಾಡಬಹುದು ಎಂಬುದು ಬಿಷ್ಣೋಯ್ ಗ್ಯಾಂಗ್ ಲೆಕ್ಕಾಚಾರ.  ಚಾರ್ಜ್ ಶೀಟ್‌ ನಲ್ಲಿ ಕುಖ್ಯಾತ ಗ್ಯಾಂಗ್‌ ಸ್ಟರ್ ಲಾರೆನ್ಸ್ ಬಿಷ್ಣೋಯ್ ಸೇರಿದಂತೆ 9 ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಆರೋಪಿಗಳಲ್ಲಿ ಒಬ್ಬನಾದ ಅನುಜ್ ಥಾಪನ್ ಪೊಲೀಸ್ ಕಸ್ಟಡಿಯಲ್ಲಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೂ…

Read More

ಲೋಕಸಭೆ ಚುನಾವಣೆ ನಂತರ ಭಾರತ ಮೈತ್ರಿಕೂಟ ಮತ್ತು ಎನ್‌ ಡಿಎ ಫ್ರಂಟ್ ನಡುವೆ ರಾಜ್ಯಗಳಲ್ಲಿ ಇಂದು ಮೊದಲ ಘರ್ಷಣೆಯಾಗಿದೆ. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಉತ್ತರಾಖಂಡ, ಪಂಜಾಬ್ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಏಳು ರಾಜ್ಯಗಳ 13 ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದೆ. ಹಿಮಾಚಲ ಪ್ರದೇಶದ ಡೆಹ್ರಾ, ಹಮೀರ್‌ ಪುರ ಮತ್ತು ನಲಗಢದ ಮೂರು ಸ್ಥಾನಗಳ ಮೇಲೆ ದೇಶವು ಬಿಜೆಪಿಗೆ ಸೇರ್ಪಡೆಗೊಂಡ ಸ್ವತಂತ್ರ ಶಾಸಕರ ಮೇಲೆ ಕಣ್ಣಿಟ್ಟಿದೆ. ಡೆಹ್ರಾದಲ್ಲಿ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖುಮ್ ಅವರ ಪತ್ನಿ ಕಮಲೇಶ್ ಠಾಕೂರ್ ಅವರು ಬಿಜೆಪಿಯ ಹೋಶಿಯಾರ್ ಸಿಂಗ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಲೋಕಸಭೆ ಚುನಾವಣೆ ಜತೆಗೆ ಉಪಚುನಾವಣೆ ನಡೆದ ಆರು ಕ್ಷೇತ್ರಗಳ ಪೈಕಿ ಕಾಂಗ್ರೆಸ್ ನಾಲ್ಕು ಸ್ಥಾನಗಳನ್ನು ಗೆದ್ದು ಸಂಪೂರ್ಣ ಬಹುಮತದ 35 ಸ್ಥಾನಗಳನ್ನು ದಾಟಿದೆ. ಬಂಗಾಳದ ಮಾಣಿಕ್ತಾಲಾ, ರಣಘಾಟ್ ದಕ್ಷಿಣ್, ಬಾಗ್ಡಾ ಮತ್ತು ರಾಯ್‌ ಗಂಜ್‌ ನ 4 ಸ್ಥಾನಗಳಿಗೆ ಇಂದು ಉಪಚುನಾವಣೆ ನಡೆಯಲಿದೆ. ಉತ್ತರಾಖಂಡದ ಬದರಿನಾಥ್ ಮತ್ತು ಮಂಗಳೂರು ಕ್ಷೇತ್ರಗಳಿಗೆ…

Read More

ಇತಿಹಾಸದಲ್ಲಿ ಮೊದಲ ಬಾರಿಗೆ ಕೇಂದ್ರ ಸರ್ಕಾರ ಪೌರಕಾರ್ಮಿಕರ ಲಿಂಗ ಬದಲಾವಣೆಗೆ ಅನುಮೋದನೆ ನೀಡಿದೆ. ಹಿರಿಯ ಭಾರತೀಯ ಕಂದಾಯ ಸೇವೆ (IRS) ಅಧಿಕಾರಿಯ ಅಧಿಕೃತ ದಾಖಲೆಗಳಲ್ಲಿ ಹೆಸರು ಮತ್ತು ಲಿಂಗ ಬದಲಾವಣೆಗಾಗಿ ಅರ್ಜಿಯನ್ನು ಸ್ವೀಕರಿಸಲಾಗಿದೆ. ಹಣಕಾಸು ಸಚಿವಾಲಯ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಹೈದರಾಬಾದ್ ಕಸ್ಟಮ್ಸ್ ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯ (ಸೆಸ್ಟಾಟ್) ಮುಖ್ಯ ಆಯುಕ್ತರ ಕಚೇರಿಯಲ್ಲಿ ಜಂಟಿ ಆಯುಕ್ತ ಎಂ. ಅನುಸೂಯಾ ಅವರಿಗೆ ಅನುಮೋದನೆ ನೀಡಲಾಯಿತು. ಎಂ.ಅನುಕತಿರ್ ಸೂರ್ಯ ಎಂದು ಹೆಸರು ಮತ್ತು ಲಿಂಗವು ಹೆಣ್ಣಿನಿಂದ ಪುರುಷ ಎಂದು ಬದಲಾಗಿದೆ. ಈ ಕ್ರಮವು ವಿಭಿನ್ನ ಲಿಂಗ ಗುಂಪುಗಳಿಗೆ ಅವಕಾಶ ಕಲ್ಪಿಸಲು ಹಿಂಜರಿಯುವವರ ಮನೋಭಾವದಲ್ಲಿ ದೊಡ್ಡ ಬದಲಾವಣೆಯನ್ನು ತರುತ್ತದೆ ಎಂದು ಸರ್ಕಾರದ ಮೂಲಗಳು ಭರವಸೆ ನೀಡಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕೇರಳ : ಎರ್ನಾಕುಲಂನ ಕುಂದನೂರಿನಲ್ಲಿ ಶಾಲಾ ಬಸ್‌ ಗೆ ಬೆಂಕಿ ಹೊತ್ತಿಕೊಂಡಿದೆ. ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ. ತೇವರ ಎಸ್‌ಎಚ್ ಶಾಲೆಯ ಬಸ್‌ ಗೆ ಬೆಂಕಿ ಹೊತ್ತಿಕೊಂಡಿದೆ. ಬೆಳಗ್ಗೆ 8:30ರ ಸುಮಾರಿಗೆ ಕುಂದನೂರು ಸೇತುವೆ ಕೆಳಗೆ ಬಂದಾಗ ಬೆಂಕಿ ಕಾಣಿಸಿಕೊಂಡಿದೆ. ಬಸ್ಸಿನಲ್ಲಿ ಮಕ್ಕಳಿದ್ದರು ಆದರೆ ಹೊಗೆ ಕಂಡ ಚಾಲಕ ಮಕ್ಕಳನ್ನು ಸುರಕ್ಷಿತವಾಗಿ ಹೊರಕ್ಕೆ ಕರೆದೊಯ್ದಿದ್ದಾರೆ. ಬಳಿಕ ಬಸ್‌ ಗೆ ಬೆಂಕಿ ಹತ್ತಿಕೊಂಡಿದ್ದು, ಮಾಹಿತಿ ತಿಳಿದು ಅಗ್ನಿಶಾಮಕ ದಳದವರು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಉಡುಪಿ: ಪೇಜಾವರಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್‌ ಅಂಗಡಿಮಾರು ರಾಮಚಂದ್ರ ಭಟ್‌ (72) ಅವರು ನಿಧನ ಹೊಂದಿದ್ದಾರೆ. ಇವರು ಅನಾರೋಗ್ಯದಿಂದ ಬಳಲುತ್ತಿದ್ದರೆನ್ನಲಾಗಿದೆ. ಉಡುಪಿ ಪೇಜಾವರ ಮಠದ ಅತಿಥಿಗೃಹದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಇವರು ಓರ್ವ ಪುತ್ರ, ಸಹೋದರ, ಪತ್ನಿ, ಸಹೋದರಿಯರನ್ನು ಹಾಗೂ ಅಪಾರ ಶಿಷ್ಯ ಬಳಗವನ್ನು ಅಗಲಿದ್ದಾರೆ. ಇವರು ಮುಂಬಯಿಯ ಅದಮಾರು ಮಠದ ವ್ಯವಸ್ಥಾಪಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಇವರು ಜ್ಯೋತಿಷ್ಯ, ವೇದಾಂತ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದರು. ವಿದ್ವಾನ್‌ ರಾಮಚಂದ್ರ ಭಟ್ಟರ ಅಪೇಕ್ಷೆಯ ಮೇರೆಗೆ ಪಾರ್ಥಿವ ಶರೀರವನ್ನು ಮಣಿಪಾಲದ ಕೆಎಂಪಿ ಕಾಲೇಜಿನ ವಿದ್ಯಾರ್ಥಿಗಳ ಅಧ್ಯಯನಕ್ಕೆ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಮುಂಬರುವ ಬಜೆಟ್ ಅಧಿವೇಶನದಲ್ಲಿ ಬಡ ಸಮುದಾಯಗಳ ಕಲ್ಯಾಣಕ್ಕಾಗಿ ಹಲವಾರು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದ್ದು, ಅದರಲ್ಲಿ ಜಾರಿಗೊಳಿಸುವ ಯೋಜನೆಯೊಂದು ಇದು ಪ್ರತಿ ಕುಟುಂಬಕ್ಕೆ 10 ಲಕ್ಷ ರೂ.ಗಳವರೆಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಈ ಬೆನ್ನಲ್ಲೇ ರೈತಗೂ ಸಿಹಿ ಸುದ್ದಿ ಸಿಗಲಿದೆ ಎನ್ನಲಾಗಿದೆ. ಕೇಂದ್ರ ಬಜೆಟ್ ನಲ್ಲಿ ಪಿಎಂ ಕಿಸಾನ್ ಯೋಜನಾ ನಿಧಿಯನ್ನು 6,000 ರೂ.ಗಳಿಂದ 8,000 ರೂ.ಗೆ ಹೆಚ್ಚಿಸಲಾಗುವುದು ಎಂದು ಈಗಾಗಲೇ ವರದಿಗಳು ಬಂದಿವೆ. ಇದು ನಿಜವಾದರೆ ರೈತರಿಗೆ ಕೇಂದ್ರ ಕೊಡುವ ಬಂಪರ್ ಗುಡ್ ನ್ಯೂಸ್ ಇದಾಗಿದೆ. ಅಂದಹಾಗೆ ಕಳೆದು ತಿಂಗಳು 3ನೇ ಸಲ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಕಚೇರಿಗೆ ಆಗಮಿಸುತ್ತಿದ್ದಂತೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ರೈತರ ಖಾತೆಗೆ ಬರೋಬ್ಬರಿ 20,000 ಕೋಟಿ ರೂಪಾಯಿ ಜಮೆ ಮಾಡಿಸಿದ್ದರು. ಈ ಮೂಲಕ ಕಿಸಾನ ಸಮ್ಮಾನ್ ನಿಧಿಯ 17ನೇ ಕಂತನ್ನು ಮೋದಿ ಬಿಡುಗಡೆ ಮಾಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ. ಈ ಘಟನೆ ಬೆಂಗಳೂರಿನ ಎಂಜಿ ರಸ್ತೆಯಲ್ಲಿ ನಡೆದಿದೆ. ಬಸ್​ ನಲ್ಲಿ 30 ಜನ ಪ್ರಯಾಣಿಸುತ್ತಿದ್ದರೂ ಯಾರಿಗೂ ಪ್ರಾಣಾಪಾಯವಾಗಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಿಎಂಟಿಸಿ ಬಸ್​ ರೋಸ್​ ಗಾರ್ಡನ್​ನಿಂದ ಶಿವಾಜಿನಗರಕ್ಕೆ ಬರುತ್ತಿತ್ತು. ಮಾರ್ಗ ಮಧ್ಯೆ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸಿಗ್ನಲ್ ​ನಲ್ಲಿ ಚಾಲಕ ಬಸ್ ಬಂದ್​ ಮಾಡಿದ್ದರು. ಮತ್ತೆ ಸ್ಟಾರ್ಟ್ ಆಗಿಲ್ಲ. 2-3 ಸಲ ಸ್ಟಾರ್ಟ್ ಮಾಡಲು ಯತ್ನಿಸಿದ್ದಾರೆ. ಆದರೆ, ಸ್ಟಾರ್ಟ್​ ಆಗಲಿಲ್ಲ. ಈ ವೇಳೆ ಇಂಜಿನ್​ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೆಲವೇ ಕ್ಷಣದಲ್ಲಿ ಬಸ್ ಸುಟ್ಟು ಭಸ್ಮವಾಗಿದೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ:…

Read More

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಜೂನ್ 11 ರ ಮಂಗಳವಾರ ದರ್ಶನ್ ಬಂಧಿಸಲಾಗಿತ್ತು. ಪೊಲೀಸರ ವಿಚಾರಣೆ ಬಳಿಕ ನ್ಯಾಯಾಲಯ ಅವರನ್ನು ವಿಚಾರಣಾಧೀನ ಕೈದಿಯಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆ ಬಳಿಕ ಜುಲೈ 18 ರ ತನಕ ಆರೋಪಿ ದರ್ಶನ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿತ್ತು. ಮಂಗಳವಾರ ದರ್ಶನ್ ಪರ ವಕೀಲರು ಕರ್ನಾಟಕ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಕೆ ಮಾಡಿದ್ದು, ಜೈಲು ಅಧಿಕಾರಿಗಳಿಗೆ ವಿವಿಧ ನಿರ್ದೇಶನಗಳನ್ನು ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ನಟ ದರ್ಶನ್ ಪರ ವಕೀಲರು ಜೈಲಿನಲ್ಲಿ ಮನೆ ಊಟ ಮಾಡಲು ಅನುಮತಿ ನೀಡಬೇಕು, ಹಾಸಿಗೆ ನೀಡಬೇಕು, ಪುಸ್ತಕ ಓದಲು ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ರಿಟ್ ಅರ್ಜಿ ಮಂಗಳವಾರ ಸಲ್ಲಿಕೆಯಾಗಿದ್ದು, ವಿಚಾರಣೆ ಇನ್ನೂ ನಡೆಯಬೇಕಿದೆ. ‘ಜೈಲಿನ ಊಟ ನಟ ದರ್ಶನ್‌ ಗೆ ಜೀರ್ಣವಾಗುತ್ತಿಲ್ಲ. ಜೈಲಿನ ಊಟ ಮಾಡುತ್ತಿರುವುದರಿಂದ ಅವರಿಗೆ ವಾಂತಿ, ಭೇದಿ ಆಗುತ್ತಿದೆ ಎಂದು ವೈದ್ಯರು…

Read More