Subscribe to Updates
Get the latest creative news from FooBar about art, design and business.
- ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ
- ಸರಗೂರು: SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ
- ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು
- ಅಟಲ್ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ
- ನಮ್ಮೂರ ಶಾಲೆ ಉಳಿಸಿ: ಎಐಡಿಎಸ್ ಓ, ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ
- “ಕರಿಕಾಡ” ಚಿತ್ರದ “ಕಬ್ಬಿನ ಜಲ್ಲೆ” ಹಾಡಿಗೆ ವೀಕ್ಷಕ ಫಿದಾ, 2026 ಫೆಬ್ರವರಿ 6ಕ್ಕೆ ವಿಶ್ವಾದ್ಯಂತ ರಿಲೀಸ್
- ವಿದ್ಯಾರ್ಥಿಗಳ ಕಡೆ ಕುವೆಂಪು ಭಾವಗೀತೆಗಳ ನಡೆ: ಕುವೆಂಪು ಗೀತೆಗಳಲ್ಲಿ ಮಾನವೀಯತೆ ಸ್ಪರ್ಶ
- ಕುಣಿಗಲ್ ನಲ್ಲಿ ಕಸಾಪ ಭವನದ ಗ್ರಂಥಾಲಯ ಲೋಕಾರ್ಪಣೆ: “ರಾಜಕೀಯ ಸ್ವಾರ್ಥಕ್ಕೆ ಧರ್ಮ, ಜಾತಿಗಳ ಕಂದಕ ಸೃಷ್ಟಿ”
Author: admin
ತುಮಕೂರು: ಕೇಂದ್ರ ಸರ್ಕಾರ ಸರಕು ಹಾಗೂ ಸೇವಾ ತೆರಿಗೆ (ಜಿಎಸ್ ಟಿ) ದರ ಪರಿಷ್ಕರಣೆ ಮಾಡುವ ಮೂಲಕ ಜನಸಾಮಾನ್ಯರ ಮೇಲಿನ ತೆರಿಗೆ ಭಾರ ಇಳಿಸಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿ ಬುಧವಾರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಏರ್ಪಡಿಸಿದ್ದ ‘ಜಿಎಸ್ ಟಿ–2.0 ಸುಧಾರಣೆಗಳು–2025’ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹೊಸ ತೆರಿಗೆ ಪದ್ಧತಿ ಸೆ.22ರಿಂದ ದೇಶದಾದ್ಯಂತ ಜಾರಿಗೆ ಬರಲಿದೆ. ಇದರಿಂದ ಜನಸಾಮಾನ್ಯರ ಬದುಕಿನ ಹೊರೆ ತಗ್ಗಲಿದೆ. ಜನರು ಪ್ರತಿನಿತ್ಯ ಬಳಸುವ ಎಲ್ಲ ಉತ್ಪನ್ನಗಳ ಮೇಲೆ ಜಿಎಸ್ ಟಿ ಸುಧಾರಣೆಗಳ ಪರಿಣಾಮ ಕಾಣಬಹುದಾಗಿದೆ. ಅದೇ ರೀತಿ ವ್ಯಾಪಾರಸ್ಥರ ಕಾರ್ಯವಿಧಾನವನ್ನು ಸರಳಗೊಳಿಸಲಾಗಿದೆ ಎಂದು ಹೇಳಿದರು. ಜಿಎಸ್ ಟಿ ಮಂಡಳಿಯು 350ಕ್ಕೂ ಹೆಚ್ಚು ಉತ್ಪನ್ನಗಳ ತೆರಿಗೆ ದರಗಳನ್ನು ಪರಿಷ್ಕರಣೆ ಮಾಡಿದೆ. ಪ್ರಸ್ತುತ ಶೇ 5 ಹಾಗೂ ಶೇ 18ರ ಪ್ರಮಾಣದ ಎರಡು ಹಂತದ ಜಿಎಸ್ ಟಿ ವ್ಯವಸ್ಥೆ ಜಾರಿಗೊಳಿಸಿದೆ ಎಂದರು. ಶಾಸಕ…
ತುಮಕೂರು: ನಗರ ಹೊರವಲಯದ ಕುಣಿಗಲ್ ರಿಂಗ್ ರಸ್ತೆ ಬಳಿಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ನಲ್ಲಿ ಗುರುವಾರ ರಾತ್ರಿ ಊಟ ಸೇವಿಸಿದ ನಂತರ 12 ಮಂದಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಹಾಸ್ಟೆಲ್ ನಲ್ಲಿ ಒಟ್ಟು 165 ಮಕ್ಕಳು ದಾಖಲಾಗಿದ್ದಾರೆ. ಮೂರು ದಿನಗಳ ಹಿಂದೆ ಹಾಸ್ಟೆಲ್ನ ಸಂಪ್ ಸ್ವಚ್ಛಗೊಳಿಸಿದ್ದರು. ಅದರಿಂದಲೇ ನೀರು ಪೂರೈಸಲಾಗಿತ್ತು. ಆ ನೀರು ಸೇವಿಸಿ ಅಸ್ವಸ್ಥರಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸಿದ್ದರಾಜು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು. ನಂತರ ಹಾಸ್ಟೆಲ್ ಗೆ ತೆರಳಿ ಪರಿಶೀಲನೆ ನಡೆಸಿದರು. 12 ವಿದ್ಯಾರ್ಥಿನಿಯರಿಗೆ ಹೊಟ್ಟೆ ನೋವು, ವಾಂತಿಯಾಗಿದೆ. ನೀರಿನ ಸಂಪ್ ಸ್ವಚ್ಛಗೊಳಿಸಿದ ನಂತರವೇ ಸಮಸ್ಯೆಯಾಗಿದೆ. ಇನ್ನೂ ಎರಡು ದಿನ ನೀರಿನ ಕ್ಯಾನ್ ಬಳಸುವಂತೆ ಸೂಚಿಸಲಾಗಿದೆ. ಕೂಡಲೇ ನೀರು ಪರೀಕ್ಷಿಸುವಂತೆ ತಿಳಿಸಲಾಗಿದೆ. ವಿದ್ಯಾರ್ಥಿನಿಯರು ಚಿಕಿತ್ಸೆ ನಂತರ ಚೇತರಿಸಿಕೊಂಡಿದ್ದಾರೆ.…
ಮಂಗಳೂರು: ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಎಸ್ ಐಟಿ ಶೋಧ ವೇಳೆ 5 ತಲೆ ಬುರುಡೆ ಸಹಿತ ನೂರಾರು ಮೂಳೆ ಸಿಕ್ಕಿದೆ ಎನ್ನಲಾಗಿರುವ ಘಟನೆಗೆ ಸಂಬಂಧಿಸಿದಂತೆ ಮೃತರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೊಡಗು ಮೂಲದ ಯು.ಬಿ ಅಯ್ಯಪ್ಪ ಎಂಬ ವ್ಯಕ್ತಿ ಮೃತಪಟ್ಟ ವ್ಯಕ್ತಿಗಳಲ್ಲಿ ಒಬ್ಬರು ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಪತ್ತೆಯಾದ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಯು.ಬಿ ಅಯ್ಯಪ್ಪ ಎಂಬುವವರಿಗೆ ಐಡಿ ಕಾರ್ಡ್ ಹಾಗೂ ತ್ರಿಲೆಗ್ ಬ್ಯಾಲೆನ್ಸ್ ಸ್ಟಿಕ್ (ವಾಕಿಂಗ್ ಸ್ಟಿಕ್) ಬಂಗ್ಲೆಗುಡ್ಡದಲ್ಲಿ ಪತ್ತೆಯಾಗಿದೆ. 7 ವರ್ಷಗಳ ಹಿಂದೆ ಮೈಸೂರಿಗೆ ಚಿಕಿತ್ಸೆಗೆಂದು ತೆರಳಿದ್ದ ಅಯ್ಯಪ್ಪ ಅವರು ಬಳಿಕ ನಾಪತ್ತೆಯಾಗಿದ್ದಾರೆ ಎಂದು ಕುಟುಂಬಸ್ಥರು ಕುಟ್ಟ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇದೀಗ ಬಂಗ್ಲೆಗುಡ್ಡದಲ್ಲಿ ಎಸ್ ಐಟಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅಯ್ಯಪ್ಪ ಅವರ ಐಡಿ ಕಾರ್ಡ್ ಹಾಗೂ ವಾಕಿಂಗ್ ಸ್ಟಿಕ್ ಗಳು ಸಿಕ್ಕಿದ್ದು, ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಕುಟುಂಬಸ್ಥರು ದಾಖಲಿಸಿದ್ದ ಮಿಸ್ಸಿಂಗ್ ಕಂಪ್ಲೆಂಟ್ ನಲ್ಲಿ…
ಬಳ್ಳಾರಿ: ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮನೆಗೆ ಸುಂದರವಾದ ಬಾಗಿಲು ನಿರ್ಮಿಸಿದ ಮಹಿಳೆಯೊಬ್ಬರು ಸಿಎಂ ಸಿದ್ದರಾಮಯ್ಯನವರ ಚಿತ್ರವನ್ನು ಕೆತ್ತಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಪಾರ್ವತಿ ತಮ್ಮ 15 ತಿಂಗಳ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಮನೆ ಬಾಗಿಲು ಅಳವಡಿಕೆ ಮಾಡಿಕೊಂಡಿದ್ದಾರೆ. ಬಾಗಿಲಿನಲ್ಲಿ ಸಿದ್ದರಾಮಯ್ಯ ಅವರು ನಿಂತಿರುವ ಭಾವಚಿತ್ರ ಕೆತ್ತಿಸಿರುವ ಪಾರ್ವತಿ ಅವರು, ಚಿತ್ರದ ಮೇಲೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಲಕ್ಷ್ಮಿ ಯೋಜನೆ ಎಂದು ಬರೆಯಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಿಂದ ಬರುವ ಹಣದಿಂದ ಸಾಕಷ್ಟು ಮಹಿಳೆಯರು ಸ್ವಾವಲಂಬನೆ ಬದುಕು ಕಟ್ಟಿಕೊಂಡಿರೋ ನಿದರ್ಶನಗಳಿವೆ. ಈಗ ಅದೇ ರೀತಿ ಗೃಹಲಕ್ಷ್ಮಿ ಹಣದಿಂದಲೇ ಸಿಎಂಗೆ ವಿನೂತನ ರೀತಿಯಲ್ಲಿ ಈ ಬಡ ಕುಟುಂಬ ಅಭಿನಂದನೆ ಸಲ್ಲಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ವಿಜಯಪುರ: ಒಂದೇ ದಿನದಲ್ಲಿ 4 ಬಾರಿ ಭೂಮಿ ಕಂಪಿಸಿದ ಅನುಭವವಾದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಸಿಂದಗಿ ಪಟ್ಟಣದ ಸುತ್ತಮುತ್ತು ಕಂಪನದ ಅನುಭವ ಆಗಿದ್ದು, ಮಧ್ಯಾಹ್ನ 3 ಗಂಟೆ, ರಾತ್ರಿ 10:11, ಮತ್ತೆ ರಾತ್ರಿ 10:25, ಮತ್ತೊಮ್ಮೆ ರಾತ್ರಿ 10:47 ಒಟ್ಟು 4 ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ ಅಂತ ಇಲ್ಲಿನ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಜೋರಾದ ಶಬ್ಧದೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಸಿಂದಗಿ ಜನರಲ್ಲಿ ಆತಂಕ ಮೂಡಿದ್ದು, ಮನೆ ಬಿಟ್ಟು ಅನೇಕರು ಹೊರಬಂದಿದ್ದಾರೆ. ಕಳೆದ 2 ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಈ ರೀತಿ ಸರಣಿ ರೂಪದಲ್ಲಿ ಭೂಕಂಪನದ ಅನುಭವ ಆಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ರಾಹುಲ್ ಗಾಂಧಿ ಅವರಿಗೆ ಕಾಮನ್ ಸೆನ್ಸ್ ಇಲ್ಲ. ತಮ್ಮ ಮಾತಿನಿಂದಲೇ ಅವರು ಇಡೀ ದೇಶದಲ್ಲಿ ಹೆಚ್ಚು ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ’ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವೈಯಕ್ತಿಕ ದಾಳಿ ನಡೆಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್ ನಾಯಕರು ಮಾಧ್ಯಮಗಳ ಮುಂದೆ ಮಾತಾಡುತ್ತಾರೆಯೇ ಹೊರತು ದಾಖಲೆಗಳನ್ನು ನೀಡಲ್ಲ. ಮಾಲೂರು ಕ್ಷೇತ್ರದಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಮೊದಲು ಮಾತಾಡಲಿ ಎಂದರು. ಮಹದೇವಪುರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪ ಮಾಡಿ ಅದು ಸುಳ್ಳು ಎಂದು ಸಾಬೀತಾಗಿದೆ. ಈಗ ಅಳಂದ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಮಾಲೂರು ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿದೆ ಎಂದು ಸಾಬೀತಾಗಿದ್ದು, ಕಾಂಗ್ರೆಸ್ ಶಾಸಕರ ಸದಸ್ಯತ್ವವೇ ರದ್ದಾಗಿದೆ. ಇಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿ ಅಫಿಡವಿಟ್ ನೀಡಿದ್ದರು. ಜಿಲ್ಲಾಧಿಕಾರಿ ತಪ್ಪು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದರ ಬಗ್ಗೆ ಯಾಕೆ ಮಾತಾಡುತ್ತಿಲ್ಲ? ಎಂದು ಪ್ರಶ್ನಿಸಿದರು. ಬಿಹಾರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಕಾಂಗ್ರೆಸ್ ನಾಯಕರಿಗೆ…
ಬೆಂಗಳೂರು: ಯೋಗ ಸೆಂಟರ್ ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸ ಬಂಧಿಸಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ. ನಿಮಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಹೆಸರು ಬರುವಂತೆ ಮಾಡುತ್ತೇನೆ. ನಿಮಗೆ ಆದರಿಂದ ಸರ್ಕಾರಿ ಕೆಲಸವು ಸಿಗಬಹುದು ಎಂದು ನಂಬಿಸಿ, ಯೋಗ ಸೆಂಟರ್ ಗೆ ಬರುತ್ತಿದ್ದ ಯುವತಿಯರು ಸೇರಿದಂತೆ ಸುಮಾರು ಏಳೆಂಟು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ ಹದಿನೇಳು ವರ್ಷದ ಬಾಲಕಿ ಮೇಲೆ ಕೂಡ ಆರೋಪಿ ಅತ್ಯಾಚಾರವೆಸಗಿದ್ದ. ಬಾಲಕಿ ದೂರಿನ ಅನ್ವಯ ರಾಜರಾಜೇಶ್ವರಿ ನಗರ ಪೊಲೀಸರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದರು. ಅತ್ತ ಕೇಸ್ ದಾಖಲಾಗುತ್ತಿದ್ದಂತೆ ಇತ್ತ ಆರೋಪಿ ತಲೆಮರಿಸಿಕೊಂಡಿದ್ದ. ಸದ್ಯ ಪೊಲೀಸರು ಹುಡುಕಿ ಆತನನ್ನು ಬಂಧಿಸಿದ್ದಾರೆ. ಇನ್ನು ತನಿಖೆ ವೇಳೆ ಅತ್ಯಾಚಾರ ಎಸಗಿರುವುದು ಬಯಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಮೈಸೂರು: ದಸರಾ ಮಹೋತ್ಸವದಲ್ಲಿ ಉದ್ಘಾಟಕರ ವಿಚಾರದಲ್ಲಿ ರಾಜಕೀಯ ಹೈಡ್ರಾಮ ಹಿನ್ನೆಲೆ ದಸರಾ ಸಮಾರಂಭದಲ್ಲಿ ಯಾವುದೇ ಪ್ರತಿಭಟನೆ ಮತ್ತು ಗೊಂದಲ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಸೂಚನೆ ನೀಡಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣ ದಲ್ಲಿ ದಸರಾ ಭದ್ರತೆ ಸಂಬಂಧ ನಡೆದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು. ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಬೇಕು. ಹಂತ ಹಂತವಾಗಿ ಭದ್ರತಾ ಕಾರ್ಯ ಕೈಗೊಳ್ಳಬೇಕು. ದಸರಾ ಉದ್ಘಾಟಕರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಗಣ್ಯರು ಬಂದು ಕಾರ್ಯಕ್ರಮ ಮುಗಿಸಿ ಸುರಕ್ಷಿತವಾಗಿ ತೆರಳುವವರೆಗೆ ಎಚ್ಚರದಿಂದ ಇರಬೇಕು ಎಂದು ಸಲಹೆ ನೀಡಿದರು. ಸೆ. 22ರಿಂದ ಅ. 2ರವರೆಗೆ ನಡೆಯಲಿರುವ ದಸರಾ ಉತ್ಸವಕ್ಕೆ ಸ್ಥಳೀಯರು ಸೇರಿದಂತೆ ಲಕ್ಷಾಂತರ ಪ್ರವಾಸಿಗರು ಆಗಮಿಸಲಿದ್ದು, ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಬೇಕು ಎಂದು ಸೂಚಿಸಿದರು. ಅರಮನೆ ಸೇರಿದಂತೆ ಪಂಜಿನ ಕವಾಯತು ಮೈದಾನ, ಆಹಾರ…
ಬೀದರ್: ಜಿಲ್ಲೆಯ ಕಮಲನಗರ ಹಾಗೂ ತೋರಣ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವಂತಹ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಅಧಿಕಾರಿಗಳು ದುರಸ್ತಿಗೆ ಮುಂದಾಗಬೇಕು ಎಂದು ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಹರಿದೇವ ಸಂಗನಾಳ ಒತ್ತಾಯಿಸಿದ್ದಾರೆ ಕಳೆದ ಒಂದು ತಿಂಗಳಿಂದ ತಾಲೂಕಿನ ಸುರಿಯುತ್ತಿರುವ ಧಾರಾಕಾರವಾದ ಮಳೆ ಹಿನ್ನೆಲೆ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಶಾಸಕಕರು ಇತ್ತ ಕಡೆ ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವಾರದಲ್ಲಿ ಸಮಸ್ಯೆ ಬಗೆಹರಿದಿದ್ದರೆ ಹೋರಾಟ ಮಾಡುವುದಾಗಿ ಇದೇ ವೇಳೆ ಅವರು ಎಚ್ಚರಿಕೆಯನ್ನು ನೀಡಿದ್ದಾರೆ ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ಹೈದರಾಬಾದ್ ಕರ್ನಾಟಕ (ಕಲ್ಯಾಣ ಕರ್ನಾಟಕ) ವಿಮೋಚನಾ ದಿನದ ಅಂಗವಾಗಿ ಹಾರಿಸಲಾಗುತ್ತಿದ್ದ ರಾಷ್ಟ್ರಧ್ವಜವು ತಲೆ ಕೆಳಗಾಗಿ ಹಾರಿರುವ ಘಟನೆ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ. ನಗರದ ಅಂಬೇಡ್ಕರ್ ವೃತ್ತದ ಸಮೀಪದ ಸವಿತಾ ಸಮುದಾಯ ಭವನದಲ್ಲಿ, ಜಿಲ್ಲಾ ಸವಿತಾ ಸಮಾಜ ಸಂಘದ ವತಿಯಿಂದ ವಿಮೋಚನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ರಾಷ್ಟ್ರ ಧ್ವಜವನ್ನು ತಲೆ ಕೆಳಗಾಗಿ ಹಾರಿಸಿರುವುದು ವರದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ವೈರಲ್ ಆಗಿದೆ ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC