Author: admin

ವಿಡಿಯೋಗೆ ಪೋಸ್‌ ನೀಡುತ್ತಾ ಬೈಕ್‌ ಚಾಲನೆ ಮಾಡಿದ ಹಿನ್ನೆಲೆ ಡಿವೈಡರ್‌ ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಧುಲೆ–ಸೋಲಾಪುರ ಹೆದ್ದಾರಿಯಲ್ಲಿ ನಡೆದಿದೆ. ಹಿಂಬದಿ ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯ ಸಂಪೂರ್ಣ ವಿಡಿಯೋ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಿಂಬದಿ ಸವಾರ ವಿಡಿಯೋ ಮಾಡಲು ಪ್ರಾರಂಭಿಸಿದಾಗ ಚಲನೆ ಮಾಡುತ್ತಿದ್ದಾತ ವಿಡಿಯೋಗೆ ಪೋಸ್‌ ನೀಡಲು ಮುಂದಾಗಿದ್ದಾನೆ. ಈ ವೇಳೆ ಬೈಕ್‌ ನಿಯಂತ್ರಣ ತಪ್ಪಿ ಡಿವೈಡರ್‌ ಗೆ ಡಿಕ್ಕಿ ಹೊಡೆದಿದೆ. ಇಬ್ಬರು ಬೈಕ್‌ ಸವಾರರು ಕೂಡಾ ಹೆಲ್ಮೆಟ್‌ ಧರಿಸದೇ ಇರುವುದು ವಿಡಿಯೋದಲ್ಲಿ ಕಂಡುಬಂದಿದೆ. ವರದಿಗಳ ಪ್ರಕಾರ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಹಾರಿ ರಸ್ತೆಗೆ ಬಿದ್ದಿದ್ದಾರೆ. ಬೈಕ್‌ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದರೆ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪೆಯುತ್ತಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಅಭಿವೃದ್ಧಿ ಹೆಸರಲ್ಲಿ ಸಿಲಿಕಾನ್‌ ಸಿಟಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಎಲ್ಲಿ‌ ನೋಡಿದರಲ್ಲಿ ಕಟ್ಟಡಗಳು, ವಾಹನಗಳ ಸಂಖ್ಯೆ ಏರುತ್ತಿದೆ. ಇದರಿಂದ ಬೆಂಗಳೂರಿಗರು ಶುದ್ಧಗಾಳಿ ಕೊರತೆ ಉಲ್ಭಣವಾಗಿದೆ. ವಾಯುಮಾಲಿನ್ಯದಿಂದಾಗಿ ರಾಜಧಾನಿಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ. ಭಾರತದ 10 ಮಹಾನಗರಗಳಲ್ಲಿ ವಾಯುಮಾಲಿನ್ಯದ ಪ್ರಮಾಣದ ಬಗ್ಗೆ ಅಧ್ಯಯನ ಮಾಡಲಾಗಿತ್ತು. ಅದರಲ್ಲಿ ದೆಹಲಿ ಸೇರಿದಂತೆ ಬೆಂಗಳೂರು, ಅಹಮದಾಬಾದ್, ಚೆನ್ನೈ, ದಿಲ್ಲಿ, ಹೈದರಾಬಾದ್, ಕೋಲ್ಕತಾ, ಮುಂಬೈ, ಪುಣೆ, ಶಿಮ್ಲಾ ಮತ್ತು ವಾರಾಣಸಿ ಮಹಾನಗರಗಳ ಹೆಸರು ಕೇಳಿ ಬಂದಿದೆ. ಇವಿಷ್ಟು ನಗರಗಳಲ್ಲಿ ಪ್ರತಿವರ್ಷ 33 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿರುವುದು ದಾಖಲಾಗಿದೆ. ಆಶ್ಚರ್ಯದ ಸಂಗತಿ ಏನಂದರೆ ಉತ್ತಮ ವಾತಾವರಣ ಹೊಂದಿದ್ದ ಬೆಂಗಳೂರಿನಲ್ಲಿ ವಾಯುಮಾಲಿನ್ಯದಿಂದ ವರ್ಷಕ್ಕೆ 2100 ಮಂದಿ ಸಾವನ್ನಪ್ಪುತ್ತಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ವಾಯುಮಾಲಿನ್ಯ ಗುಣಮಟ್ಟದ‌ ಮಾರ್ಗಸೂಚಿಗಿಂತಲೂ ಈ ಮಹಾನಗರಗಳು ಕೆಳಮಟ್ಟದಲ್ಲಿಯೇ ಗುಣಮಟ್ಟ ಮುಂದುವರಿದಿದೆ. ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ವಾಯುಮಾಲಿನ್ಯ ಸುಧಾರಣೆಯಾಗದಿದ್ರೆ‌,‌ ದೆಹಲಿಯನ್ನೇ ಮೀರಿಸುವ ಸಾಧ್ಯತೆ ಇದೆ. ನಗರದಲ್ಲಿ ವಾಯುಮಾಲಿನ್ಯ, ಶಬ್ದ ಮಾಲಿನ್ಯ, ಜಲ ಮಾಲಿನ್ಯದಿಂದ…

Read More

ಬಿಹಾರದಲ್ಲಿ 24 ಗಂಟೆಗಳಲ್ಲಿ ಸಿಡಿಲು ಬಡಿದು 19 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ರಾಜ್ಯದ ವಿವಿಧೆಡೆ ಸಿಡಿಲು ಬಡಿದು ಏಳು ಮಂದಿ ಗಾಯಗೊಂಡಿದ್ದಾರೆ. ಸಿಡಿಲು ಬಡಿದು ಸಾವಿಗೀಡಾದವರಲ್ಲಿ ಹೆಚ್ಚಿನವರು ಹೊಲಗಳಲ್ಲಿ ಕೆಲಸ ಮಾಡುತ್ತಿದ್ದವರು. ರಾಜ್ಯದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಆರು ಜಿಲ್ಲೆಗಳಾದ ಜೆಹಾನಾಬಾದ್, ಮಾಧೇಪುರ, ಪೂರ್ವ ಚಂಪಾರಣ್, ರೋಹ್ತಾಸ್, ಸರನ್ ಮತ್ತು ಸುಪೌಲ್‌ ನಲ್ಲಿ 19 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಜುಲೈ 8 ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ. ವಿರೋಧ ಪಕ್ಷದ ನಾಯಕರಾದ ನಂತರ ರಾಹುಲ್ ಮೊದಲ ಬಾರಿಗೆ ಮಣಿಪುರಕ್ಕೆ ಬರುತ್ತಿದ್ದಾರೆ. ಗಲಭೆ ಪೀಡಿತ ಪ್ರದೇಶಗಳ ಶಿಬಿರಗಳಿಗೆ ರಾಹುಲ್ ಭೇಟಿ ನೀಡಲಿದ್ದಾರೆ. ರಾಹುಲ್ ಗಾಂಧಿ ಮಣಿಪುರಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಮಣಿಪುರದ ಗಲಭೆ ಪೀಡಿತ ಪ್ರದೇಶಗಳಿಗೆ ರಾಹುಲ್ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ಟೀಕಿಸಿದ್ದರು. ಮಣಿಪುರದಲ್ಲಿ ನಡೆದ ಗಲಭೆಗಳು, ದಾಳಿಗಳು ಮೋದಿಯವರಿಗೆ ಕಾಣದಂತೆ ನಡೆಯುತ್ತಿವೆ ಎಂಬುದೂ ಪುನರಾವರ್ತನೆಯಾಯಿತು. ವಿರೋಧ ಪಕ್ಷದ ನಾಯಕರಾದ ನಂತರ ತಮ್ಮ ಮೊದಲ ಲೋಕಸಭೆ ಭಾಷಣದಲ್ಲಿ ರಾಹುಲ್ ಅವರು ಮಣಿಪುರ ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದರು. ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಮೋದಿ ಸಂಸತ್ತಿನಲ್ಲಿಯೂ ಉತ್ತರಿಸಿದರು. ರಾಜ್ಯದಲ್ಲಿ ಸಂಘರ್ಷ ಕಡಿಮೆಯಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ನಿರಂತರವಾಗಿ ಮಧ್ಯಪ್ರವೇಶಿಸುತ್ತಿದ್ದಾರೆ. ಮಣಿಪುರ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದೂ ಅವರು ಹೇಳಿದ್ದರು. ನಮ್ಮತುಮಕೂರಿನ…

Read More

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೂರನೇ ಮೋದಿ ಸರ್ಕಾರದ ಮೊದಲ ಸಾಮಾನ್ಯ ಬಜೆಟ್ ಅನ್ನು ಜುಲೈ 23 ರಂದು ಮಂಡಿಸಲಿದ್ದಾರೆ. ಜುಲೈ 22 ರಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದೆ. ಆಗಸ್ಟ್ 12ರವರೆಗೆ ಸಮ್ಮೇಳನ ನಡೆಯಲಿದೆ. ಜುಲೈ 23 ರಂದು ಕೇಂದ್ರ ಬಜೆಟ್ ಮಂಡನೆ ನಂತರ, ಮುಂದಿನ ದಿನಗಳಲ್ಲಿ ಚರ್ಚೆ ನಡೆಯಲಿದೆ. ನೀತಿ ಘೋಷಣೆಯ ಸಂದರ್ಭದಲ್ಲಿ ಅಧ್ಯಕ್ಷೆ ದ್ರೌಪದಿ ಮುರ್ಮು ಸಂಸತ್ತಿನಲ್ಲಿ ಈ ವರ್ಷದ ಬಜೆಟ್ ಐತಿಹಾಸಿಕವಾಗಲಿದೆ ಎಂದು ಹೇಳಿದ್ದರು. ಬಜೆಟ್ ನಲ್ಲಿ ಹಲವು ಸಾಮಾಜಿಕ ಮತ್ತು ಆರ್ಥಿಕ ಘೋಷಣೆಗಳಿರುವ ಸುಳಿವು ಸಿಕ್ಕಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್ ಮಂಡಿಸಿತ್ತು. ಮೋದಿ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ಜುಲೈ 23 ಮೊದಲ ಬಜೆಟ್ ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…

Read More

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಸೇನಾ ಕಾರ್ಯಾಚರಣೆಯಲ್ಲಿ ಇಬ್ಬರು ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಭಯೋತ್ಪಾದಕರೊಂದಿಗಿನ ಎನ್‌ ಕೌಂಟರ್‌ ನಲ್ಲಿ ಸೈನಿಕರು ಸಾವನ್ನಪ್ಪಿದ್ದಾರೆ. ಕುಲ್ಗಾಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೊದರ್ಗಾಂ ಗ್ರಾಮದಲ್ಲಿ ಸೇನೆ ತಪಾಸಣೆ ನಡೆಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಮೂವರು ಉಗ್ರರು ಅಡಗಿ ಕುಳಿತಿದ್ದಾರೆ ಎಂದು ವರದಿಯಾಗಿದೆ. ಶೋಧ ನಡೆಸಿದ ಜಂಟಿ ಪಡೆಗಳ ಸೇನಾ ಯೋಧ ವೀರ ಮರಣವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಫ್ರಿಸಲ್ ಪ್ರದೇಶದಲ್ಲಿ ನಡೆದ ಎನ್‌ ಕೌಂಟರ್‌ ನಲ್ಲಿ ಸೇನಾ ಯೋಧ ಹುತಾತ್ಮರಾಗಿದ್ದಾರೆ. ಇಲ್ಲಿ ನಾಲ್ವರು ಭಯೋತ್ಪಾದಕರನ್ನು ಸೇನೆ ಹತ್ಯೆ ಮಾಡಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಗಾಗಿ ಶೋಧ ನಡೆಸುತ್ತಿದ್ದ ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಘಟನೆಗಳ ನಂತರ ಜಿಲ್ಲೆಯ ವಿವಿಧೆಡೆ ಶೋಧ ಕಾರ್ಯ ನಡೆಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…

Read More

ಗುಜರಾತ್‌ ನ ಸೂರತ್‌ ನಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದ ಘಟನೆ ನಡೆದಿದ್ದು, ಏಳು ಜನರ ಶವಗಳು ಪತ್ತೆಯಾಗಿವೆ. ಎನ್‌ ಡಿಆರ್‌ ಎಫ್ ಸೇರಿದಂತೆ ತಂಡ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ. ಅಪಘಾತದಲ್ಲಿ ಒಬ್ಬ ವ್ಯಕ್ತಿಯನ್ನು ಗಾಯಗಳೊಂದಿಗೆ ರಕ್ಷಿಸಲಾಗಿದೆ. ಅಪಘಾತಕ್ಕೆ ಕಾರಣ ಸ್ಪಷ್ಟವಾಗಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಗಾರ್ಮೆಂಟ್ಸ್ ಕಾರ್ಮಿಕರು ಕುಟುಂಬ ಸಮೇತ ಬಾಡಿಗೆಗೆ ವಾಸವಿದ್ದ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಪ್ರತಿ ಮಹಡಿಯಲ್ಲಿ ಐದಾರು ಫ್ಲಾಟ್ ಗಳು ಇದ್ದವು ಎಂದು ವರದಿಯಾಗಿದೆ. ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಘಟನಾ ಸ್ಥಳಕ್ಕೆ ರಾಜಕೀಯ ಮುಖಂಡರು ಹಾಗೂ ಸರ್ಕಾರದ ಪ್ರತಿನಿಧಿಗಳು ಆಗಮಿಸಿದರು. ಅವಶೇಷಗಳನ್ನು ತೆಗೆಯಲು ಜೆಸಿಬಿ ಮತ್ತು ಡ್ರಿಲ್ಲಿಂಗ್ ಯಂತ್ರಗಳನ್ನು ಬಳಸಿ ಶೋಧ ನಡೆಸಲಾಗುತ್ತಿದೆ. ಎಷ್ಟು ಮಂದಿ ಸಿಲುಕಿಕೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಶಾಸಕ ಮತ್ತು ಜಿಲ್ಲಾಧಿಕಾರಿ ಹೇಳಿದರು. ರಾತ್ರಿಯೂ ಫ್ಲಡ್ ಲೈಟ್ ಅಳವಡಿಸಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ನಮ್ಮತುಮಕೂರಿನ…

Read More

ರಾಜ್ಯ ಸರ್ಕಾರದಿಂದ ಈಗಾಗಲೇ ಗೋಬಿ ಮಂಚೂರಿಗೆ ಬಳಿಸುವಂತ ಬಣ್ಣ, ಆ ಬಳಿಕ ಕಬಾಬ್ ಗೆ ಬಳಸುವಂತ ಕೃತಕ ಬಣ್ಣವನ್ನು ನಿಷೇಧ ಮಾಡಲಾಗಿತ್ತು. ಈಗ ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನಲೆಯಲ್ಲಿ, ಟೀ ಪುಡಿಯನ್ನೇ ಬ್ಯಾನ್ ಮಾಡಲಿದೆ ಅಂತ ತಿಳಿದು ಬಂದಿದೆ. ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನೆಲೆ ಕೃತಕ ಬಣ್ಣ, ರಾಸಾಯನಿಕ ಇರುವುದು ಪ್ರಾಯೋಗಿಕ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಚಹಾ ಪುಡಿಯಲ್ಲಿಯೂ ಕೃತಕ ಬಣ್ಣ, ಕೆಮಿಕಲ್ ಬಳಸಲಾಗುತ್ತಿದ್ದು, ಇಂತಹ ಟೀ ಪುಡಿಯನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಆಯುಕ್ತ ಶ್ರೀನಿವಾಸ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಚಾರ ತಿಳಿಸಿದ್ದು, ಬೆಂಗಳೂರಿನ ಹಲವೆಡೆಗಳಲ್ಲಿ ಟೀ ಪುಡಿಯಲ್ಲಿ ಕೃತಕ ಬಣ್ಣ, ಕೆಮಿಕಲ್ ಅಷ್ಟೇ ಅಲ್ಲ ಮರದ ಪುಡಿಗಳನ್ನು ಬೆರೆಸಲಾಗುತ್ತಿದೆ. ರುಚಿ ಹೆಚ್ಚಿಸಲು ರಾಸಾಯನಿಕ ಬಳಕೆ ಮಾಡಲಾಗುತ್ತಿದೆ. ಇಂಥಹ ಅನೇಕ ಪ್ರಕರಣಗಳು ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ.…

Read More

7 ರಾಜ್ಯಗಳ 13 ಸ್ಥಾನಗಳಿಗೆ ಜುಲೈ 10ರಂದು ಉಪ ಚುನಾವಣೆ ನಿಗದಿಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದರಿಂದ ಹಾಗೂ ಶಾಸಕರಾಗಿದ್ದವರ ಸಾವು ಸೇರಿದಂತೆ ನಾನಾ ಕಾರಣಗಳಿಗೆ ತೆರವಾಗಿರುವ 13 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಿಸಿದ್ದು, ಜುಲೈ 13ರಂದು ಮತ ಎಣಿಕೆ ನಡೆಯಲಿದೆ. ಪಶ್ಚಿಮ ಬಂಗಾಳದ ರಾಯ್ ಗಂಜ್, ರಾಣಾಘಟ್, ದಕ್ಷಿಣ್, ಭಾಗ್ದಾಹ್, ಮಣಿಕಟ್ಲಾ, ಬಿಹಾರದ ರುಪೌಲಿ, ತಮಿಳುನಾಡಿನ ವಿಕ್ರವಾಂದಿ, ಮಧ್ಯಪ್ರದೇಶದ ಅಮ್ರಾವರ, ಉತ್ತರಾಖಂಡ್ ನ ಬದರೀನಾಥ್ ಮತ್ತು ಮಂಗಲೂರ್, ಪಂಜಾಬ್ ನ ಜಲಂಧರ್ ವೆಸ್ಟ್, ಹಿಮಾಚಲ ಪ್ರದೇಶದ ದೆಹ್ರಾ, ಹಮಿರ್ಪುರ್, ನಲಘಡ್, ಕರ್ನಾಟಕದ ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಡೆಯಲಿದೆ. ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ವಿಧಾನಸಭೆ ಹಾಗೂ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆಗೆ ಬಿಜೆಪಿಯಿಂದ ಉಸ್ತುವಾರಿಗಳ ನೇಮಕ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ವಿಜಯಪುರ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ ಘಟನೆ  ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದಲ್ಲಿ ನಡೆಯಿತು. ನೂರಾರು ವಿದ್ಯಾರ್ಥಿಗಳು  ಇಂಡಿ –ವಿಜಯಪೂರ ರಾಜ್ಯ ಹೆದ್ದಾರಿಯ ಜೋಡಗುಡಿಯ ಬಳಿ ಬಸ್ಸು ತಡೆದು ಪ್ರತಿಭಟನೆ ಮಾಡಿದರು, ಇಂಡಿಯಿಂದ ವಿಜಯಪುರಕ್ಕೆ ಹಾಗೂ ವಿಜಯಪುರದಿಂದ ಇಂಡಿಗೆ  ಹೋಗುವ ಎಲ್ಲಾ ಬಸ್ಸುಗಳು ತಡವಲಗಾ ಮಾರ್ಗವಾಗಿ ಚಲಾಯಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಜಿಲ್ಲಾ ಅಧಿಕಾರಿಗಳ ಆದೇಶ ಇದ್ದರೂ ಕೂಡಾ ಬಸ್ ಚಾಲಕರು ಹಾಗೂ ನಿರ್ವಾಹಕರು ಆದೇಶಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ, ಕಾನೂನು ಉಲ್ಲಂಘಿಸಿ, ತಡವಲಗಾ ಗ್ರಾಮಕ್ಕೆ ಬರದೆ ಜೋಡಿಗುಡಿಯ ಮೂಲಕ ಇಂಡಿ ಹಾಗೂ ವಿಜಯಪೂರಕ್ಕೆ ಹೋಗುತ್ತಾರೆ, ಇದರಿಂದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗಲು ಅನಾನುಕೂಲವಾಗುತ್ತದೆ , ಇದನ್ನು ಸಹಿಸದ ನೂರಾರು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ದಿಢೀರನೆ ರಸ್ತೆಗಿಳಿದು ಕೆಲವು ಬಸ್ಸುಗಳನ್ನು ತಡೆದು ಪ್ರತಿಭಟನೆ ಮಾಡಿದರು. ನಂತರ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ  ಕಲ್ಯಾಣ…

Read More