Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ತುಮಕೂರು: ಇಂದು ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ಸ್ವಾಗತಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಪ್ರಭು ಅವರು ಸೇರಿದಂತೆ ಯಾವೊಬ್ಬ ಹಿರಿಯ ಅಧಿಕಾರಿಗಳು ಬಾರದೆ ಇರುವುದಕ್ಕೆ, ಸಚಿವ ಸೋಮಣ್ಣ ದೂರವಾಣಿ ಮೂಲಕ ಏರು ಧ್ವನಿಯಲ್ಲಿ ಮಾತನಾಡಿದ ಘಟನೆ ನಡೆದಿದೆ. ಕೇಂದ್ರ ಸಚಿವ ಸೋಮಣ್ಣ ಇಂದು ಮೊದಲಿಗೆ ಸಿದ್ದಗಂಗಾ ಮಠಕ್ಕೆ ಆಗಮಿಸಿದ ಸಂದರ್ಭದಲ್ಲಿ ಯಾವೊಬ್ಬ ಅಧಿಕಾರಿಗಳು ಕೂಡ ಹಾಜರಿರಲಿಲ್ಲ ನಂತರ ಅಲ್ಲಿಂದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಬಂದಿದ್ದ ಸೋಮಣ್ಣ ಅವರಿಗೆ ಮಾಹಿತಿ ನೀಡಲು ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಶಾಸ್ತ್ರ ಚಿಕಿತ್ಸಕರು ಕೂಡ ಹಾಜರಿರಲಿಲ್ಲ. ಇತ್ತೀಚಿಗೆ ಪಾವಗಡ ತಾಲೂಕಿನಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟಿದ್ದರು. ಅಲ್ಲದೆ, ಇನ್ನೂ 10 ಮಂದಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರುಗಳ ಆರೋಗ್ಯವನ್ನು ವಿಚಾರಿಸಲು ಕೇಂದ್ರ ಸಚಿವ ಸೋಮಣ್ಣ ಆಗಮಿಸಿದ್ದರು. ಆದರೆ ಅಲ್ಲಿಯೂ ಕೂಡ ಅಧಿಕಾರಿಗಳು ಇಲ್ಲದಿದ್ದನ್ನು ಕಂಡು ಕೆಂಡಮಂಡಲರಾದ ಸಚಿವ ಸೋಮಣ್ಣ…
ತುಮಕೂರು: “ನನಗೆ ಕೊಟ್ಟ ಖಾತೆಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ. ಪ್ರಧಾನಿ ಮೋದಿ ಅವರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ” ಎಂದು ಕೇಂದ್ರದ ರಾಜ್ಯ ರೈಲ್ವೆ ಖಾತೆ ಹಾಗೂ ಜಗಶಕ್ತಿ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. “ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಶಿಕುಮಾರ್ ಸ್ವಾಮೀಜಿ ಅವರ ಗದ್ದಿಗೆ ದರ್ಶನ ಪಡೆದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಎನ್ ಡಿ ಎ ಒಕ್ಕೂಟದ ಮಂತ್ರಿ ಮಾಡಿದ್ದಾರೆ. ಪ್ರಧಾನಿ ಹಾಗೂ ಗೃಹ ಸಚಿವರಿಗೆ, ದೇವೇಗೌಡರಿಗೆ ಧನ್ಯವಾದ ಹೇಳುತ್ತೇನೆ” ಎಂದರು. “ಇಂದು ತುಮಕೂರು ಜಿಲ್ಲೆಯ ಸ್ವಾಮೀಜಿಗಳ ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇವೆ” ಎಂದರು. “ಮಧುಗಿರಿಯಲ್ಲಿ ಕಹಿ ಘಟನೆ ನಡೆದಿದೆ. ಕಲುಷಿತ ನೀರು ಕುಡಿದು ಸಾವನಪ್ಪಿದ್ದಾರೆ. ಇದು ನಡೆಯಬಾರದಿತ್ತು” ಎಂದರು. “ಈ ಕುರಿತು ಉಸ್ತುವಾರಿ ಸಚಿವರ ಜೊತೆ ಮಾತನಾಡಿದ್ದೇನೆ. ನಾನೂ ಜಿಲ್ಲಾಸ್ಪತ್ರೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸುತ್ತೇನೆ” ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಕೆ ಸುಧಾಕರ್ ಒಂದು ಮತ ಹೆಚ್ಚಿಗೆ ಲೀಡ್ ಪಡೆದರೆ ನಾನು ರಾಜೀನಾಮೆ ನೀಡುತ್ತೇನೆಂದು ಪ್ರದೀಪ್ ಈಶ್ವರ್ ಹೇಳಿಕೆ ಕೊಟ್ಟಿದ್ದರು.ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರದೀಪ್ ಈಶ್ವರ್ ಪ್ರತಿಕ್ರಿಯಿಸಿದ್ದಾರೆ. ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ ಪಕ್ಷದವರಿಗೆ ಧನ್ಯವಾದ. ಸುಧಾಕರ್ ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ. ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ. ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಒಂದು ವೇಳೆ ದರ್ಶನ್ ವಿರುದ್ಧದ ಆರೋಪ ಸಾಬೀತಾದರೆ ಶಿಕ್ಷೆ ಆಗಲಿ ಎಂದು ಆರ್. ಅಶೋಕ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಹಾಗೆಯೇ ಪೊಲೀಸರು ಸೂಕ್ತವಾಗಿ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದರು. ರಾಜ್ಯದಲ್ಲಿ ಅಪರಾಧ ಚಟುವಟಿಕೆ ಹೆಚ್ಚಿದೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲಾಗಿದೆ. ಪೊಲೀಸರಿಗೆ ಕಪಾಳ ಮೋಕ್ಷವಾಗಿದೆ. ಕಾನೂನು ಪೊಲೀಸರ ಹಿಡಿತದಲ್ಲೇ ಇಲ್ಲ. ಆದ್ದರಿಂದ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿ ಮುಚ್ಚುಮರೆ ಮಾಡುತ್ತಿದ್ದಾರೆ. ನಾವು ಕರ್ನಾಟಕದಲ್ಲಿದ್ದೇವೆಯೇ ಹೊರತು ಜಮ್ಮು ಮತ್ತು ಕಾಶ್ಮೀರದಲ್ಲಿಲ್ಲ. ಇದನ್ನು ಟಿವಿ ಮಾಧ್ಯಮಗಳು ಚಿತ್ರೀಕರಣ ಮಾಡದಂತೆ ಕ್ರಮ ವಹಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿಯವರು ಕೂಡ ಈ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು. ತನಿಖೆ ಸರಿಯಾಗಿ ನಡೆದು ಸತ್ಯಾಂಶ ಹೊರಬರಲಿ. ಈ ಪ್ರಕರಣದಲ್ಲಿ ಮೃತನಾದ ವ್ಯಕ್ತಿ ಯಾವುದೇ ಅಪರಾಧಿ ಹಿನ್ನೆಲೆ ಹೊಂದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಎಷ್ಟೋ ಸಂದೇಶಗಳು ಬರುತ್ತವೆ. ಅದಕ್ಕಾಗಿ ಕೊಲೆ ಮಾಡಲು ಹೋಗಬಾರದು. ಇಂತಹ…
ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 98 ಜನರು ಅಸ್ವಸ್ತರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಧುಗಿರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಹಾಗೂ ನೀರು ಸರಬರಾಜು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅಧಿಕಾರಿಗಳು, ನೀರಿನ ಸೇವನೆ ಮತ್ತು ಸೇವಿಸಿರುವ ಆಹಾರದಿಂದಾಗಿ ಒಟ್ಟು 98 ಜನರು ಅಸ್ವಸ್ತರಾಗಿದ್ದು, ಅದರಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ 39 ಜನರು ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಸ್ಥಳದಲ್ಲಿಯೇ ಚಿಕಿತ್ಸೆ ಪಡೆದು, ಗುಣಮುಖರಾಗಿ ಮನೆಗಳಿಗೆ ತೆರಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ವಿದೇಶ ಪ್ರವಾಸದಲ್ಲಿರುವ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಚಿನ್ನೇನಹಳ್ಳಿ ಗ್ರಾಮದ ಸಾರ್ವಜನಿಕರ ಆರೋಗ್ಯದ ಬಗ್ಗೆ ತೀವ್ರ ನಿಗಾ…
ಕೊಲೆ ಪ್ರಕರಣ ಸಂಬಂಧ ರೇಣುಕಾಸ್ವಾಮಿ ಅವರ ಮರಣೋತ್ತರ ಪರೀಕ್ಷಾ ವರದಿಯು ಪೊಲೀಸರಿಗೆ ತಲುಪಿದ್ದು, ಆತನ ಮರ್ಮಾಂಗ ಸೇರಿ ದೇಹದ 15 ಭಾಗಗಳಲ್ಲಿ ಗಾಯವಾಗಿರುವುದು ದೃಢಪಟ್ಟಿದೆ ಎಂಬುದು ವರದಿಯಲ್ಲಿ ನಮೂದಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬೌರಿಂಗ್ ಆಸ್ಪತ್ರೆಯ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿ ವರದಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ನೀಡಿದ್ದಾರೆ. ವರದಿಯಲ್ಲಿ ರೇಣುಕಾಸ್ವಾಮಿ ದೇಹದ ಯಾವ ಭಾಗದಲ್ಲಿ ರಕ್ತ ಬಂದಿತ್ತು?. ಎಲ್ಲೆಲ್ಲಿ ಗಾಯಗಳಾಗಿತ್ತು ಎಂಬುದನ್ನು ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿಯ ಮರ್ಮಾಂಗದ ಮೇಲೆ ಹಲ್ಲೆ ಮಾಡಿರುವುದು ಗೊತ್ತಾಗಿದ್ದು, ಆ ಭಾಗದಲ್ಲಿ ರಕ್ತಸ್ರಾವವಾಗಿದೆ. ಮರ್ಮಾಂಗಕ್ಕೆ ಹೊಡೆದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಅಲ್ಲದೇ, ಹೊಟ್ಟೆ ಭಾಗದಲ್ಲಿಯೂ ರಕ್ತ ಸೋರಿಕೆಯಾಗಿದೆ. ತಲೆಗೂ ಬಲವಾದ ಪೆಟ್ಟು ಬಿದ್ದಿದೆ. ಆದರೆ, ರಕ್ತ ಸೋರಿಕೆಯಾಗಿಲ್ಲ ಎಂದು ಮೂಲಗಳು ಮಾಹಿತಿ ನೀಡಿವೆ. ಕೈ ಮತ್ತು ಕಾಲುಗಳಲ್ಲಿ, ಬೆನ್ನು ಹಾಗೂ ಎದೆ ಭಾಗದಲ್ಲೂ ರಕ್ತ ಬಂದಿದೆ. ತೀವ್ರ ಹಲ್ಲೆಯಿಂದ ದೇಹದಲ್ಲಿ ರಕ್ತ ಹೆಪ್ಪುಗಟ್ಟಿ ಸಾವಾಗಿದೆ. ಮರದ ಪೀಸ್, ಬೆಲ್ಟ್ ಬಳಸಿ ಹಲ್ಲೆ ಮಾಡಲಾಗಿದ್ದು,…
ನಟ ದರ್ಶನ್ ಸೇರಿದಂತೆ 13 ಆರೋಪಿಗಳ ತನಿಖೆ ನಡೆಸುತ್ತಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ನಟ ಕಾಣದಂತೆ ಶಾಮಿಯಾನದ ಪರದೆ ಹಾಕಲಾಗಿದೆ. ಠಾಣೆಯ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿರುವುದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಗುರುವಾರ ಈ ಸಂಬಂಧ ನಗರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಪೊಲೀಸ್ ಠಾಣೆಗೆ 144 ಸೆಕ್ಷನ್ ಹಾಕುವುದು ಎಂದರೆಪೊಲೀಸ್ ಠಾಣೆ ರಕ್ಷಿಸಲು ಇನ್ನೊಬ್ಬ ಖಾಸಗಿಯವರಿಗೆ ಕೊಟ್ಟಂತೆ. ಅಂದರೆ, ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಹೋಗಿದೆ ಎಂಬುದಕ್ಕೆ ನಿದರ್ಶನ ಎಂದು ಆಕ್ಷೇಪಿಸಿದರು. ಮಾಧ್ಯಮದವರನ್ನು ದೂರ ಇಡುವ ಉದ್ದೇಶ, ಇನ್ನೊಬ್ಬರನ್ನು ದೂರವಿಡಲು ಮತ್ತು ಠಾಣೆಯಲ್ಲಿ ತಮ್ಮ ವೈಯಕ್ತಿಕ ಹಿತಾಸಕ್ತಿಯ ಚಟುವಟಿಕೆ ಮಾಡುವುದಕ್ಕಾಗಿ ಅಥವಾ ಯಾರನ್ನೋ ಓಲೈಕೆಗೆ 144ನೇ ಸೆಕ್ಷನ್ ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಟೀಕಿಸಿದರು. ಕಾನೂನು ಎಲ್ಲರಿಗೂ ಸಮಾನ. ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡುವುದೇ ಕಾನೂನು. ನಮ್ಮ ಸಂವಿಧಾನದಂತೆ ಕಾನೂನಿನಡಿ ಎಲ್ಲರೂ ಸಮಾನರು. ಆದರೆ, ವಿಐಪಿಯನ್ನು ಕರೆದುಕೊಂಡು…
ಯಡಿಯೂರಪ್ಪನವರನ್ನು ಕೆಣಕಲು ಹೋದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮವಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಬಿಜೆಪಿ ಹೇಳಿದೆ. ಈ ಕುರಿತು ಸಾಮಾಜಿಕ ಜಾಲತಾಣದ ‘ಎಕ್ಸ್ ‘ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ, “ಲೋಕಸಭಾ ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ @INCIndia ನಾಯಕರು ಬಿಜೆಪಿ ವಿರುದ್ಧ ಒಂದಿಲ್ಲೊಂದು ಷಡ್ಯಂತ್ರ ರೂಪಿಸುವಲ್ಲಿ ತಲ್ಲೀನರಾಗಿದ್ದಾರೆ.” “@BJP4Karnataka ವಿರುದ್ಧ ಅಪಪ್ರಚಾರ ಮಾಡಿದ್ದ @RahulGandhi ಅವರನ್ನು ಕೋರ್ಟ್ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಮಾನಸಿಕ ಅಸ್ವಸ್ಥೆ ನೀಡಿದ್ದ ದೂರನ್ನು ಆಧರಿಸಿ ರೈತ ನಾಯಕ ಮಾನ್ಯ ಶ್ರೀ @BSYBJP ಅವರನ್ನು ಬಂಧಿಸಲು ಹವಣಿಸುತ್ತಿದೆ.” ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ತಲೆದಂಡ ಹಾಗೂ ಸ್ವತಃ ಸರ್ಕಾರದ ಮೇಲೆ ಆರೋಪ ಬಂದಿರುವ ಬೆನ್ನಲ್ಲೇ ಭ್ರಷ್ಟಾಚಾರ ಪ್ರಕರಣದ ದಿಕ್ಕು ತಪ್ಪಿಸುವ ಉದ್ದೇಶದಿಂದ ಯಡಿಯೂರಪ್ಪನವರ ಮೇಲೆ ಅಪಪ್ರಚಾರದ ಷಡ್ಯಂತರ ರೂಪಿಸಿದ್ದಾರೆ.” “ಈ ಹಿಂದೆ ಸ್ವತಃ ಗೃಹ ಸಚಿವ @DrParameshwara ಅವರೇ ಮಾನಸಿಕ ಅಸ್ವಸ್ಥೆ ದುರುದ್ದೇಶಪೂರಿತವಾಗಿ ದೂರು…
ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಮೇಲೆ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಜೆಡಿಎಸ್ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದು, ಆ ಸಂಭ್ರಮದಲ್ಲಿ ನಾನು ಭಾಗಿಯಾಗುತ್ತೇನೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಗುರುವಾರ ನಗರದಲ್ಲಿರುವ ಜೆಡಿಎಸ್ ಕಚೇರಿ(ಜೆ.ಪಿ.ಭವನ)ಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ಬೆಳಗ್ಗೆ 11.50ಕ್ಕೆ ದಿಲ್ಲಿಯಿಂದ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕುಮಾರಸ್ವಾಮಿ ಆಗಮಿಸಲಿದ್ದಾರೆ. ಅವರ ಸ್ವಾಗತಕ್ಕೆ ಎಲ್ಲ ಸಿದ್ಧತೆಗಳನ್ನು ಕಾರ್ಯಕರ್ತರು ಮಾಡಿಕೊಳ್ಳುತ್ತಿದ್ದಾರೆ. ವಿಮಾನ ನಿಲ್ದಾಣದಿಂದ ಪಕ್ಷದ ರಾಜ್ಯ ಕಚೇರಿ ಜೆಪಿ ಭವನಕ್ಕೆ ಬರಲಿರುವ ಅವರು ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಿದರು. ಅನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಸೌಹಾರ್ದ ಭೇಟಿ ಮಾಡಲಿದ್ದಾರೆ. ಬಳಿಕ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮನೆಗೆ ತೆರಳಿ ತಂದೆ, ತಾಯಿಯ ಆಶೀರ್ವಾದ ಪಡೆಯಲಿದ್ದಾರೆ. ನಂತರ ತಿರುಪತಿಗೆ ತೆರಳಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದರು. ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಸ್ಪರ್ಧೆ ಕುರಿತು…
ಬೆಂಗಳೂರು: ಹಾಸನ ಲೋಕಸಭೆ ಫಲಿತಾಂಶ ಅನಿರೀಕ್ಷಿತ ಬೆಳವಣಿಗೆ. ಹಾಸನದಲ್ಲಿ ಮತ್ತೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನ ಸೋಲಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಸನದ ಬೆಳವಣಿಗೆ ಅನಿರೀಕ್ಷಿತ. ಇಂತಹ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ, ಚುನಾವಣೆಯಲ್ಲಿ ಗೆಲುವು, ಸೋಲು ಸಾಮಾನ್ಯ. ದೇವೇಗೌಡರು ಸೋತಿರೋ ಇತಿಹಾಸ ಇದೆ. ಸೋತಿದ್ದಾರೆ ಅಂತ ಬೇಸರ ಮಾಡಿಕೊಂಡು ಮನೆಯಲ್ಲಿ ಕೂರೋದಿಲ್ಲ. ಸಾವಿರಾರು ಕಾರ್ಯಕರ್ತರು ಹಾಸನದಲ್ಲಿ ಇದ್ದಾರೆ. ಅವರಿಗಾಗಿ ನಾವು ಅವರ ಜೊತೆ ಇದ್ದೇವೆ. ಮತ್ತೆ ಪಕ್ಷ ಕಟ್ಟುವ ಕೆಲಸ ಹಾಸನದಲ್ಲಿ ಮಾಡುತ್ತೇವೆ ಎಂದರು. ಹಾಸನ ಸೋಲಿಗೆ ಕಾರಣ ಪಕ್ಷದ ಚೌಕಟ್ಟಿನಲ್ಲಿ ಮಾತನಾಡುತ್ತೇವೆ. ಆತ್ಮ ವಿಮರ್ಶೆ ಮಾಡಿಕೊಳುತ್ತೇವೆ. ಪ್ರಜ್ವಲ್ ರಿಂದ ಸೋಲಾಯಿತು ಎಂದು ನಾನು ಮಾತಾಡಲ್ಲ. ಟಿಕೆಟ್ ಕೊಟ್ಟಿದ್ರು. ಚುನಾವಣೆ ಆಗಿದೆ, ಸೋಲಾಯ್ತು. ಅದರ ಬಗ್ಗೆ ನಾನೇನು ಮಾತಾಡಲ್ಲ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…