Author: admin

ಪಾವಗಡ: ತಾಲ್ಲೂಕಿನ ಹೆಸರಾಂತ ಶಾಲೆಯಾದ ಜ್ಞಾನಭೋದಿನಿ ಆಂಗ್ಲ ಪ್ರೌಢಶಾಲೆಯಲ್ಲಿ ಜುಲೈ 6ರಂದು ಅಣಕು ಚುನಾವಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಶಾಲಾ ಸಂಸತ್ ಚುನಾವಣೆಯಲ್ಲಿ ಪ್ರಾಥಮಿಕ , ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಿಂದ ಒಟ್ಟು 25 ವಿದ್ಯಾರ್ಥಿಗಳು ಚುನಾವಣಾ ಕಣದಲ್ಲಿ ಪ್ರತಿನಿಧಿಗಳಾಗಿ ಸ್ಪರ್ಧಿಸಿದ್ದರು. ಇದರಲ್ಲಿ ಹದಿನೈದು ಜನ ಹೆಣ್ಣು ಮಕ್ಕಳು ಮತ್ತು 10 ಗಂಡು ಮಕ್ಕಳು ಚುನಾವಣಾ ಕಣದಲ್ಲಿದ್ದರು. ಈ ಶಾಲಾ ಸಂಸತ್ ಚುನಾವಣೆ ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷರಾದ ಅನಿಲ್ ಕುಮಾರ್ ಜಿ, ಉಪಾಧ್ಯಕ್ಷರಾದ ಸುಬ್ಬ ನರಸಿಂಹ, ಕಾರ್ಯದರ್ಶಿಗಳಾದ ಕೆ.ಎಸ್ ಅನಿಲ್ ಕುಮಾರ್ ಸರ್, ಖಜಾಂಚಿಗಳಾದ ಮಹಾವೀರ ಜೈನ್, ಶಾಲಾ ಮುಖ್ಯೋಪಾಧ್ಯಾಯರಾದ ಮೈಲಾರರೆಡ್ಡಿ ಟಿ.ಕೆ. ಹಾಗೂ ಉಪಮುಖ್ಯೋಪಾಧ್ಯಾಯಿನಿ ಸಂಧ್ಯಾರಾಣಿ ಎ. ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಶಾಲಾ ಸಂಸತ್ ಚುನಾವಣೆಯ ಫಲಿತಾಂಶವು ಸಹ ಈ ದಿನವೇ ಪ್ರಕಟಿಸಲಾಯಿತು. ಪ್ರೌಢಶಾಲಾ ವಿಭಾಗದಿಂದ ಹೆಡ್ ಬಾಯ್ (ಶಾಲಾ ಮುಖ್ಯ ವಿದ್ಯಾರ್ಥಿ) ಆಗಿ ಮಹಿಧರ್ (ಒಂಬತ್ತನೇ ತರಗತಿ) ಮತ್ತು ಹೆಡ್ ಗರ್ಲ್ (ಶಾಲಾ ಮುಖ್ಯ…

Read More

ಸರಗೂರು: ತಾಲ್ಲೂಕಿನ ಬಿ ಮಟಕೆರೆ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಇದೆ. ಅದರೆ ಅಲ್ಲಿ ಗ್ರಾಹಕರಿಗೆ ಬ್ಯಾಂಕ್ ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ಹಣವನ್ನು ನೀಡುತ್ತಿಲ್ಲ. ಅವರ ಉಡಾಫೆ ಮಾತುಗಳಿಂದ ಮನಸ್ಸಿಗೆ ನೋವುಂಟು ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದರು. ಬಿ ಮಟಕೆರೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಎಂಬುವುದು ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲಿ ಎಂದು ನಿರ್ಮಾಣ ಮಾಡಿದ್ದರು. ಇಲ್ಲಿನ ಬ್ಯಾಂಕ್ ಮ್ಯಾನೇಜರ್ ರಜಿನಿಕಾಂತ್ ಹಾಗೂ ಸಿಬ್ಬಂದಿಗಳಾದ ಪ್ರಸಾದ್ ಮತ್ತು ವೆಂಕಟೇಶ್ ಎಂಬುವರು ಬ್ಯಾಂಕ್ ಗೆ ಬರುವ ಗ್ರಾಹಕರ ಮೇಲೆ ಉಡಾಫೆ ಉತ್ತರ ನೀಡುತ್ತಾರೆ ಎಂದು ಆರೋಪಿಸಲಾಗಿದೆ. ಈ ಬ್ಯಾಂಕ್ ಗೆ ಸುಮಾರು 35 ಗ್ರಾಮಗಳು ಒಳಪಡುತ್ತದೆ. ಶ್ರೀನಿವಾಸ ಎಂಬುವರು ಬ್ಯಾಂಕ್ ನಲ್ಲಿ ಖಾತೆ ತೆರೆದಿದ್ದು ಅವರ ಖಾತೆಯಿಂದ ಹಣವನ್ನು ತೆಗೆದುಕೊಳ್ಳಲು ಬಂದಿದ್ದ ಸಮಯದಲ್ಲಿ ಬ್ಯಾಂಕ್ ಸಿಬ್ಬಂದಿ ಪ್ರಸಾದ್, ನಾವು 10ರಿಂದ 15 ಸಾವಿರ ಹಣ ಮಾತ್ರವೇ ನೀಡುತ್ತೇವೆ. ನಿಮಗೆ ಸರಿಯಾಗಿಲ್ಲವಾದರೆ ನಿಮ್ಮ ಖಾತೆಯನ್ನು ಲಾಕ್ ಮಾಡಿಸಿಕೊಂಡು ಹೋಗಿ. ಇಲ್ಲಂದರೆ ಬೇರೆ…

Read More

ನ್ಯಾಯ, ಸಾಕ್ಷಿ, ತಂತ್ರಜ್ಞಾನ, ಶಿಕ್ಷೆ, ಆಧಾರಿತ ಹೊಸ ಅಪರಾಧ ಕಾನೂನು ಜಾರಿಗೆ ಬಂದಿದೆ. ಹಿಂದಿನ ಐಪಿಸಿ ಎಂಬ ಕ್ರಿಮಿನಲ್ ಕಾನೂನುಗಳನ್ನು ರದ್ದು ಮಾಡಲಾಗಿದೆ. ಕರ್ನಾಟಕದಲ್ಲಿ ಈ ಕಾನೂನಿಗೆ ರಾಜ್ಯ ಸರ್ಕಾರ ತನ್ನ ಸಾಂವಿಧಾನಿಕ ಅಧಿಕಾರ ಬಳಸಿಕೊಂಡು ಇನ್ನೊಂದಿಷ್ಟು ಸಣ್ಣ ತಿದ್ದುಪಡಿ ಮಾಡಲು ಯೋಚಿಸುತ್ತಿದೆ….. ಒಟ್ಟಿನಲ್ಲಿ ನಿರಪರಾಧಿಗಳನ್ನು ರಕ್ಷಿಸಲು, ಅಪರಾಧಿಗಳನ್ನು ಶಿಕ್ಷಿಸಲು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಕೆಲವು ಬದಲಾವಣೆಗಳೊಂದಿಗೆ ಹೊಸ ಕಾನೂನು ತರಲಾಗಿದೆ. ಇದಕ್ಕೆ ಸಂಸತ್ತಿನಲ್ಲಿ ಮತ್ತು ಕಾನೂನು ವಲಯದಲ್ಲಿ ಇನ್ನಷ್ಟು ದೀರ್ಘ ಚರ್ಚೆಯ ಅವಶ್ಯಕತೆ ಇತ್ತು. ಆದರೂ ಈಗ ಇನ್ನು ಮುಂದೆ ಅದೇ ಕಾನೂನಿನ ವ್ಯಾಪ್ತಿಗಳಲ್ಲಿ ನಾವೆಲ್ಲರೂ ಸೇರುತ್ತೇವೆ….. ಇರಲಿ, ನಾವೇನು ಅಂತಹ ಹುಟ್ಟಾ ಅಪರಾಧಿಗಳಲ್ಲ. ಸಾಮಾನ್ಯ ಜನರು. ಕೆಲವು ಸಣ್ಣಪುಟ್ಟ ತಪ್ಪುಗಳಲ್ಲಿ ಭಾಗಿಯಾಗಬಹುದು ಅಥವಾ ಕೆಲವರು ನಮ್ಮನ್ನು ಶೋಷಿಸಬಹುದು. ಆದ್ದರಿಂದ ಸಾಮಾನ್ಯರು ಈ ಬಗ್ಗೆ ಹೆಚ್ಚಿನ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಮೇಲ್ನೋಟಕ್ಕೆ ಅನಿಸಬಹುದು‌. ಆದರೆ ನಿಜಕ್ಕೂ ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ದಿನದಿಂದ ದಿನಕ್ಕೆ ಜನಸಂಖ್ಯೆ ಏರಿದಂತೆ ಕ್ರಿಮಿನಲ್…

Read More

ಕನ್ನಡದ ಸುದ್ದಿ ವಾಹಿನಿಯೊಂದರಲ್ಲಿ ನಿರೂಪಕಿಯಾಗಿ, ಚಿತ್ರ ವಿಚಿತ್ರ ಹಾವಭಾವಗಳಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿದ್ದ ದಿವ್ಯಾ ವಸಂತ ಅವರೀಗ ಹನಿ ಟ್ರಾಪ್ ರೀತಿ ಮಾಡಿ, ಸುಲಿಗೆಗೆ ಯತ್ನಿಸಿದ್ದರು ಎಂಬ ಆರೋಪ ಎದುರಿಸುತ್ತಿದ್ದಾರೆ. ದಿವ್ಯಾ ವಸಂತ ಇದೀಗ ಸುಲಿಗೆ ಪ್ರಕರಣಣವೊಂದರಲ್ಲಿ ಸಿಕ್ಕಿ ಬಿದ್ದಿದ್ದು, ಹನಿ ಟ್ರ್ಯಾಪ್ ರೀತಿ ಮಾಡಿ ದುಡ್ಡು ವಸೂಲಿ ಮಾಡಲು ಟ್ರೈ ಮಾಡುತ್ತಿದ್ದರೆನ್ನಲಾಗುತ್ತಿದೆ. 6 ತಿಂಗಳ ಹಿಂದೆ ದಿವ್ಯಾ ಸವಂತ್ ಖಾಸಗಿ ಸುದ್ದಿ ವಾಹಿನಿಯಲ್ಲಿ ನಿರೂಪಕಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ ನಂತರ ಯೂಟ್ಯೂಬ್ ಚಾನೆಲ್ ಸಹ ಆರಂಭಿಸಿದ್ದರು. ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಹಾಗೂ ಬೇರೆ ಬೇರೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಪಾದನೆ ಶುರು ಮಾಡಿಕೊಂಡಿದ್ದರು. ದಿವ್ಯಾ ವಸಂತ್ ಸುಲಭವಾಗಿ ಹಣ ಸಂಪಾದಿಸಲು ಅಡ್ಡ ದಾರಿ ತುಳಿದು ಸಂಕಷ್ಟಕ್ಕೆ ತುತ್ತಾಗಿದ್ದಾಳೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಕೆಲವು ಸ್ನೇಹಿತರ ಜೊತೆಗೂಡಿ ಸ್ಪಾ ಹಾಗೂ ಪ್ರತಿಷ್ಠಿತ ವೈದ್ಯರನ್ನು ವಂಚಿಸಿ, ಸುಲಿಗೆ ಮಾಡಲು ಯತ್ನಿಸುತ್ತಿದ್ದ ಆರೋಪ ಇವರ ಮೇಲಿದೆ. ಶ್ರೀಮಂತರು, ಮಸಾಜ್ ಪಾರ್ಲರ್‌ಗಳು…

Read More

ಫೆಬ್ರವರಿಯಲ್ಲಿ ಪಾಕಿಸ್ತಾನ ಎಕ್ಸ್ ಅನ್ನು ನಿಷೇಧಿಸಿತ್ತು. ಇದೀಗ ಯೂಟ್ಯೂಬ್, ವಾಟ್ಸಾಪ್, ಫೇಸ್ ಬುಕ್, ಇನ್ ಸ್ಟಾಗ್ರಾಂ ಹಾಗೂ ಟಿಕ್ ಟಾಕ್ ನಿಷೇಧಕ್ಕೆ ಮುಂದಾಗಿದೆ. ಜುಲೈ 13ರಿಂದ 18ರವರೆಗೆ ಆರು ದಿನಗಳ ಕಾಲ ಇವುಗಳಿಗೆ ನಿಷೇಧ ಹೇರಲಾಗಿದೆ ಎಂದು ವರದಿ ತಿಳಿಸಿದೆ. ಮೊಹರಂ ತಿಂಗಳಿನಲ್ಲಿ ದ್ವೇಷಪೂರಿತ ಭಾಷಣವಾಗಲಿ, ತಪ್ಪು ಮಾಹಿತಿಯಾಗಲಿ ರವಾನೆಯಾಗದಂತೆ ನೋಡಿಕೊಳ್ಳಲು ಪಂಜಾಬ್ ಮುಖ್ಯಮಂತ್ರಿ ಮರ್ಯಮ್ ನವಾಜ್ ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಪಾಕಿಸ್ತಾನ ಸರ್ಕಾರವು ಇದಕ್ಕಾಗಿ ಸಂಪೂರ್ಣವಾಗಿ ಸಿದ್ಧವಾಗಿದೆ. ಮರ್ಯಮ್ ನವಾಜ್ ಅವರ ಕಾನೂನು ಮತ್ತು ಸುವ್ಯವಸ್ಥೆಯ ಸಂಪುಟ ಸಮಿತಿಯು ಈ ಪ್ರಸ್ತಾಪವನ್ನು ಮಂಡಿಸಿದೆ. ಈ ಮೂಲಕ ಸಂಸ್ಕೃತಿಯ ಬಗ್ಗೆ ದ್ವೇಷ ಹರಡುವುದನ್ನು ಮತ್ತು ಯಾವುದೇ ಅಪಪ್ರಚಾರವನ್ನು ಪ್ರಚಾರ ಮಾಡುವುದನ್ನು ಹೆಚ್ಚಿನ ಪ್ರಮಾಣದಲ್ಲಿ ನಿಲ್ಲಿಸಬಹುದು ಎಂಬುದು ಅವರ ಅಭಿಪ್ರಾಯ ವ್ಯಕ್ತವಾಗಿದೆ. ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವಂತೆ ಮರ್ಯಮ್ ನವಾಜ್ ದೇಶದ ಪ್ರಧಾನಿ ಬಳಿ ಮನವಿ ಮಾಡಿದ್ದಾರೆ. ಪಾಕಿಸ್ತಾನದ ಹಲವು ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳ ವಿರುದ್ಧ ಮಾತನಾಡುತ್ತಿದ್ದಾರೆ, ಅದರಲ್ಲಿ ಪಾಕಿಸ್ತಾನದ…

Read More

ಬಿಹಾರ: ತನಗೆ ಕಚ್ಚಿದ ಹಾವನ್ನು ಹಿಡಿದ ವ್ಯಕ್ತಿಯೊಬ್ಬ ಹಾವಿಗೆ ಎರಡು ಬಾರಿ ತಾನೂ ಕಚ್ಚಿ ಸೇಡು ತೀರಿಸಿಕೊಂಡ ಘಟನೆ ಬಿಹಾರದ ನವಾಡ ಪ್ರದೇಶದಲ್ಲಿ ನಡೆದಿದೆ. ನವಾಡ ಅರಣ್ಯ ಪ್ರದೇಶದಲ್ಲಿ ರೈಲ್ವೆ ಕಾಮಗಾರಿ ನಡೆಯುತ್ತಿದ್ದ ವೇಳೆ ರೈಲ್ವೇ ಉದ್ಯೋಗಿಯಾಗಿರುವ ಸಂತೋಷ್ ಲೋಹರ್ ಕಾರ್ಮಿಕರ ಜೊತೆ ಉಳಿದುಕೊಂಡಿದ್ದರು. ಕಳೆದ ಮಂಗಳವಾರ ರಾತ್ರಿ ಊಟ ಮಾಡಿ ಮಲಗಿದ್ದರು. ಈ ವೇಳೆ ಹಾವು ಕಚ್ಚಿದೆ. ಇದರಿಂದ ಗಾಬರಿಗೊಂಡ ಸಂತೋಷ್ ಗೆ ಆತನ ಗೆಳೆಯರು ಕಚ್ಚಿದ ಹಾವಿಗೆ ತಿರುಗಿ ಕಚ್ಚಿದರೆ ಮೈಯಲ್ಲಿದ್ದ ವಿಷ ವಾಪಸ್ಸು ಹಾವಿಗೆ ಹೋಗುತ್ತದೆ ಎಂದು ಅಲ್ಲಿನ ಜನರ ನಂಬಿಕೆ ಎಂದು ಹೇಳಿದ್ದು, ಅದರಂತೆ ಸಂತೋಷ್ ತನಗೆ ಕಚ್ಚಿದ ಹಾವಿಗೆ ಹಿಡಿದು ಎರಡು ಬಾರಿ ಕಚ್ಚಿದ್ದಾರೆ. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸಂತೋಷ್ ಲೋಹಾರ್ ವೈದ್ಯರ ಚಿಕಿತ್ಸೆಯಿಂದ ಬದುಕುಳಿದಿದ್ದಾರೆ. ಆದರೆ ಸಂತೋಷ್ ಲೋಹಾರ್ ಕಚ್ಚಿದ ಪರಿಣಾಮ ಹಾವು ಸಾವನ್ನಪ್ಪಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ಬೆಂಗಳೂರು: 3 ವರ್ಷದ ಬಾಲಕಿ ಮೇಲೆ ಶಿಕ್ಷಕಿಯೇ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದ್ದು, ವೆಂಕಟೇಶ್ವರಪುರದ ಅನ್ವರ್ ಲೇಔಟ್ ನ ಶಾಲೆಯೊಂದರ ಬಾಲಕಿಯ ಮೇಲೆ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಲೈಂಗಿಕ ದೌರ್ಜನ್ಯದ ಪರಿಣಾಮ ಮಗುವಿನ ಖಾಸಗಿ ಭಾಗದಲ್ಲಿ ರಕ್ತಸ್ರಾವವಾಗಿ ಮಗು ನಡೆಯಲು ಆಗದೆ ಕಷ್ಟ ಪಡುತ್ತಿತ್ತು. ಅಷ್ಟೇ ಅಲ್ಲದೇ ಶಾಲೆಗೆ ಹೋಗುವುದಿಲ್ಲ ಎಂದು ರಚ್ಚೆ ಹಿಡಿತಿತ್ತು. ಇದನ್ನು ಗಮನಿಸಿದ ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಗಮನಕ್ಕೆ ಬಂದಿದೆ ಎಂದು ವರದಿಯಾಗಿದೆ. ಇದೀಗ ಪೋಷಕರು ಕೆ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ಆರೋಪಿ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ರಾಜ್ಯ ಕಾಂಗ್ರೆಸ್ ಸರ್ಕಾರ ರಸ್ತೆಗಳ ಅಭಿವೃದ್ಧಿ ಭೂಮಿ ಸ್ವಾಧೀನ ಮಾಡಿಕೊಟ್ಟರೆ ಒಂದು ತಿಂಗಳೊಳಗೆ 2 ಲಕ್ಷ ಕೋಟಿ ರೂಪಾಯಿ ಅನುದಾನವನ್ನು ಕರ್ನಾಟಕಕ್ಕೆ ನೀಡುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ರಸ್ತೆ ಕಾಮಗಾರಿಗೆ ನಾವು ಒಂದು ತಿಂಗಳೊಳಗೆ 2 ಲಕ್ಷ ಕೋಟಿ ರೂಪಾಯಿ ಮಂಜೂರು ಮಾಡಲು ನಾವು ಸಿದ್ಧರಿದ್ದೇವೆ. ಆದರೆ ರಾಜ್ಯ ಸರ್ಕಾರಕ್ಕೆ ನನ್ನದೊಂದು ಷರತ್ತೇನೆಂದರೆ ಈ ಕಾಮಗಾರಿಗಳಿಗೆ ಭೂಸ್ವಾಧೀನ ಮಾಡಿಕೊಡಬೇಕು ಎಂದಿದ್ದಾರೆ. ಅರಣ್ಯ ಇಲಾಖೆ ಮತ್ತಿತರ ಸಂಬಂಧಪಟ್ಟ ವಿಭಾಗಗಳಿಂದ ಅನುಮತಿ ಕೊಡಿಸಬೇಕು. ಯಾಕೆಂದರೆ ನಾವು ಗಾಳಿಯಲ್ಲಿ ರಸ್ತೆಗಳನ್ನು ನಿರ್ಮಾಣ ಮಾಡೋದಕ್ಕೆ ಆಗೋದಿಲ್ಲ ಎಂದು ಅವರು ಹೇಳಿದ್ದಾರೆ. ಕರ್ನಾಟಕದಲ್ಲಿ ರಸ್ತೆ ಯೋಜನೆಗಳಿಗಾಗಿ ಅನೇಕ ಸಂಸದರು ನನ್ನನ್ನು ಭೇಟಿಯಾಗಿದ್ದಾರೆ. ಅವರಿಗಾಗಿ 3.5 ಲಕ್ಷ ಕೋಟಿ ರೂ.ಗಳ ಕಾಮಗಾರಿಯನ್ನು ಮಂಜೂರು ಮಾಡಿದ್ದೇನೆ. ಕೇಂದ್ರ ಸರ್ಕಾರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ಇಲ್ಲ ಎಂದೂ ಗಡ್ಕರಿ ಅವರು ಸ್ಪಷ್ಟಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಪ್ರೀತಿಸಿ ಮದುವೆಯಾಗಿದ್ದರಿಂದ ಆಕ್ರೋಶಗೊಂಡ ಮನೆಯವರು 24 ವರ್ಷ ವಯಸ್ಸಿನ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಸುಟ್ಟು ಭಸ್ಮ ಮಾಡಿರುವ ಘಟನೆ ರಾಜಸ್ಥಾನದ ಝಲವರ್ ನಲ್ಲಿ ನಡೆದಿದೆ. ರವಿ ಭೀಲ್ ಎಂಬ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದ ಯುವತಿ, ಕುಟುಂಬಸ್ಥರನ್ನು ಎದುರಿಸಿ ಮನೆಯಿಂದ ಓಡಿಹೋಗಿ ಮದುವೆಯಾಗಿದ್ದರು. ಇಬ್ಬರೂ ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ವಾಸ ಮಾಡುತ್ತಿದ್ದರು. ಇದನ್ನು ತಿಳಿದ ಮಹಿಳೆಯ ಮನೆಯವರು ಅಲ್ಲಿಗೆ ಹೋಗಿ ಇಬ್ಬರನ್ನೂ ಅಪರಿಸಿಕೊಂಡು ಬಂದಿದ್ದಾರೆ. ಅನಂತರ ವರನ ಎದುರೇ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅನಂತರ ಆಕೆಯ ದೇಹವನ್ನು ಸುಟ್ಟು ಹಾಕಿದ್ದಾರೆ. ಈ ಬಗ್ಗೆ ಮಹಿಳೆ ಪತಿ ದೂರು ನೀಡಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಲಕ್ನೋ: ಮದುವೆ ಕಾರ್ಯಕ್ರಮಗಳು ಮುಗಿದು ಮೆರವಣಿಗೆ ಕೂಡಾ ಅದ್ದೂರಿಯಾಗಿ ನಡೆದಿತ್ತು. ಆದರೆ ವರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಇಟಾವಾ ಬಳಿಯ ಶಿವರಾ ಗ್ರಾಮದಲ್ಲಿ ನಡೆದಿದೆ. ದೆಹಲಿಯಲ್ಲಿ ರಕ್ಷಣಾ ಇಲಾಖೆಯಲ್ಲಿ ನೌಕರ ಜ್ಞಾನ್ ಸಿಂಗ್ ಯಾದವ್ ಅವರ ಕಿರಿಯ ಮಗ ಸತ್ಯೇಂದ್ರ ಯಾದವ್ ಸಾವಿಗೆ ಶರಣಾಗಿರುವ ಯುವಕನಾಗಿದ್ದಾನೆ. ರತನ್ ಪುರ ಗ್ರಾಮದ ಯುವತಿಯನ್ನು ಸತ್ಯೇಂದ್ ಯಾದವ್ ಮದುವೆಯಾಗಿದ್ದು, ವಧು-ವರವನ್ನು ಮನೆಯವರು ಅದ್ದೂರಿ ಸ್ವಾಗತಿಸಲಾಗಿತ್ತು. ಮದುವೆ ಸಮಾರಂಭದಲ್ಲಿ ಓಡಾಡಿ ಓಡಾಡಿ ಸುಸ್ತಾಗಿದ್ದ ಎಲ್ಲರೂ ಮಧ್ಯಾಹ್ನ ಮಲಗಿದ್ದರು. ವರ ಕೂಡಾ ಸಂಜೆ ವೇಳೆ 2ನೇ ಮಹಡಿಯ ಕೊಠಡಿಗೆ ಹೋಗಿದ್ದ. ಆದರೆ ಎಷ್ಟು ಹೊತ್ತಾದರೂ ವರ ಬರದಿದ್ದಾಗ ಮನೆಯವರು ಬಾಗಿಲು ಬಡಿದಿದ್ದಾರೆ. ಆದ್ರೆ ಆತ ಬಾಗಿಲು ತೆಗೆದಿರಲಿಲ್ಲ. ಇದರಿಂದ ಆತಂಕಗೊಂಡು ಬಾಗಿಲು ಮುರಿದು ನೋಡಿದರೆ, ಸತ್ಯೇಂದ್ರ ಯಾದವ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ನೂರಾರು ಕನಸುಗಳೊಂದಿಗೆ ಮದುವೆಯಾಗಿದ್ದ ವಧು, ವರನ ಸಾವನ್ನು ಕಂಡು ಮೂರ್ಛೆ ಹೋಗಿದ್ದು, ಆಕೆಯ…

Read More