Author: admin

ಬೆಂಗಳೂರು : ಮೀಟರ್ ಗಿಂತ ಅಧಿಕ ಬಾಡಿಗೆ ಕೇಳಿದ, ನೋ ಪಾರ್ಕಿಂಗ್, ಸಮವಸ್ತ್ರ ಧರಿಸದ ಕಾರಣ ನಿಯಮ ಉಲ್ಲಂಘಿಸಿದ್ದ ವಿವಿಧ ಆಟೋ ಚಾಲಕರಿಗೆ ಸಂಚಾರ ಪೂರ್ವ ವಿಭಾಗದ ಪೊಲೀಸರು ದಂಡ ಹಾಕಿದ್ದಾರೆ. ಮೀಟರ್ ಗಿಂತ ಹೆಚ್ಚು ಬಾಡಿಗೆ ಕೇಳಿದ ಆರೋಪದಡಿ 50 ಪ್ರಕರಣಗಳು, ಸಮವಸ್ತ್ರ ಧರಿಸದಿದ್ದಕ್ಕೆ 165, ನೋ ಪಾರ್ಕಿಂಗ್ ಮಾಡಿದ್ದಕ್ಕೆ 35 ಹಾಗೂ ಕರೆದಲ್ಲಿಗೆ ಬಾರದಿರುವ ಕಾರಣಕ್ಕೆ ಆಟೋ ಚಾಲಕರ ವಿರುದ್ಧ 55 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸಂಚಾರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಾಲತಾಣಗಳ ಮೂಲಕ ಸಾರ್ವಜನಿಕರಿಂದ ದೂರು ಬಂದ ನಿಮಿತ್ತ ಜು.4ರಂದು ಸಂಚಾರಿ ಪೊಲೀಸರು ವಿಶೇಷ ಕಾರ್ಯಚರಣೆ ನಡೆಸಿದ್ದಾರೆ. ಅಂದು 300ಕ್ಕೂ ಹೆಚ್ಚು ಪ್ರಕರಣ ದಾಖಲಿಸಿ 1,52,000 ರೂಪಾಯಿ ದಂಡವನ್ನು ವಿಧಿಸಿ ಈ ಕ್ರಮಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ…

Read More

ಪಂಜಾಬ್ ನ ಶಿವಸೇನೆ ಮುಖಂಡನ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಲುಧಿಯಾನದಲ್ಲಿ ನಡೆದ್ದು, ಗಾಯಗೊಂಡಿರುವ ಶಿವಸೇನಾ ಮುಖಂಡರನ್ನು ಸಂದೀಪ್ ಥಾಪರ್ ಎಂದು ಗುರುತಿಸಲಾಗಿದೆ. ಸಂದೀಪ್ ಥಾಪರ್ ಅವರು ಟ್ರಸ್ಟ್ ನ ಸಂಸ್ಥಾಪಕ–ಅಧ್ಯಕ್ಷ ರವೀಂದರ್ ಅರೋರಾ ಅವರ ನಾಲ್ಕನೇ ಪುಣ್ಯಸ್ಮರಣೆಯ ಸಮಾರಂಭದಲ್ಲಿ ಭಾಗವಹಿಸಿ ವಾಪಸ್ ಆಗುತ್ತಿದ್ದ ವೇಳೆ ನಡುರಸ್ತೆಯಲ್ಲಿಯೇ ನಾಲ್ವರು ಅಪರಿಚಿತ ವ್ಯಕ್ತಿಗಳು ಕತ್ತಿಗಳಿಂದ ಹಲ್ಲೆ ನಡೆಸಿದ್ದಾರೆ. ಥಾಪರ್ ಆಸ್ಪತ್ರೆಯಿಂದ ಹೊರ ಬಂದ ಸಂದೀಪ್ ಥಾಪರ್‌ನನ್ನು ರನ್ನು ದುಷ್ಕರ್ಮಿಗಳು ಹಿಂಬಾಲಿಸಿದ್ದು, ಅದಾದ ಬಳಿಕ ಒಬ್ಬ ಕತ್ತಿಯಿಂದ ಥಾಪರ್ ತಲೆಯ ಮೇಲೆ ಬಿಡದೇ ಹೊಡೆದಿದ್ದಾನೆ. ಥಾಪರ್ ಕೈ ಜೋಡಿಸಿ ಬಿಟ್ಟು ಬಿಡಿ ಎಂದು ಅಂಗಾಲಾಚುತ್ತಿದ್ದರೂ ಅದನ್ನು ಲೆಕ್ಕಿಸದೇ ಆತನ ಮೇಲೆ ನಿರಂತರ ದಾಳಿ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಮತ್ತೊಬ್ಬ ಕತ್ತಿಯಿಂದ ದಾಳಿ ಮುಂದುವರಿಸಿದಾಗ ಶಿವಸೇನಾ ಪಂಜಾಬ್ ನಾಯಕ ಬ್ಯಾಲೆನ್ಸ್ ಕಳೆದುಕೊಂಡು ಸ್ಕೂಟರ್ ಸಮೇತ ರಸ್ತೆಯಲ್ಲಿ ಬಿದ್ದಿದ್ದಾರೆ. ಅದಾದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಾರಾಣಾಂತಿಕ ಹಲ್ಲೆಯಿಂದಾಗಿ ಥಾಪರ್ ಅವರ ತಲೆಗೆ ಗಂಭೀರ…

Read More

ತಮಿಳುನಾಡು : ಬೈಕ್ ಮೇಲೆ ಬಂದ 6 ಜನ ದುಷ್ಕರ್ಮಿಗಳ ಗ್ಯಾಂಗ್ ಒಂದು ಬಿಎಸ್ಪಿಯ ರಾಜ್ಯಾಧ್ಯಕ್ಷ ಕೆ.ಆರ್ಮ್ ಸ್ಟ್ರಾಂಗ್ ಅವರನ್ನು ಬರ್ಬರವಾಗಿ ಹತ್ಯೆಗೈದಿದ್ದು, ರಾಜ್ಯದ ಜನ ಬೆಚ್ಚಿ ಬಿದ್ದಿದ್ದಾರೆ. ನೆನ್ನೆ ಸಂಜೆ 7-30ರ ಸುಮಾರಿಗೆ ಕೆ.ಆರ್ಮ್ ಸ್ಟ್ರಾಂಗ್ ತಮ್ಮ ಮನೆಯ ಒಳೆಗೆ ಪ್ರವೇಶಿಸುತ್ತಿರುವ ವೇಳೆ ಪಾತಕಿಗಳು ದಾಳಿ ನಡೆಸಿದ್ದಾರೆ. ಚೆನ್ನೈನ ಪೆರಂಬುರ್ ನಲ್ಲಿರುವ ಅವರ ನಿವಾಸದ ಸದಾಯಪ್ಪನ್ ರಸ್ತೆಯ ಬಳಿ ಭೀಕರವಾಗಿ ಕೊಲೆ ಮಾಡಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲೇ ಕೊನೆಯುಸಿರು ಚೆಲ್ಲಿದ್ದರು. ಚೆನ್ನೈ ಕಾರ್ಪೊರೇಷನ್ ನ ಕೌನ್ಸಿಲರ್ ಕೂಡ ಆಗಿದ್ದ ಆರ್ಮ್ ಸ್ಟ್ರಾಂಗ್ , ಶೋಷಿತರ ಧ್ವನಿಯಾಗಿ ಗುರುತಿಸಿಕೊಂಡಿದ್ದರು. ಇನ್ನು ದಾಳಿ ಏಕೆ ನಡೆಯಿತು ಎಂಬುದನ್ನು ಕುರಿತು ಕೊಳತ್ತೂರ್ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್…

Read More

ಮೆಟ್ರೋ ರೈಲು ಪ್ರಯಾಣಿಕರಿಗೆ ಬಿಎಮ್‌ಆರ್‌ಸಿಎಲ್ ಸಿಹಿ ಸುದ್ದಿ ನೀಡಿದೆ. ಇಂದಿನಿಂದಲೇ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ ರೈಲು ಸೇವೆ ಆರಂಭಿಸಲಾಗುವುದು.ಇಂದಿನಿಂದಲೇ ಜಾರಿಗೆ ಬರುವಂತೆ ಆರು ಹೆಚ್ಚುವರಿ ರೈಲುಗಳ ಸೇರ್ಪಡೆ ಮಾಡಲಾಗುತ್ತದೆ. ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ನಡೆಸುತ್ತಿದ್ದವು. ಇಂದಿನಿಂದ ಒಟ್ಟು 15 ರೈಲುಗಳು ನೇರಳೆ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸಲಿವೆ. ಈ 15 ರೈಲುಗಳಲ್ಲಿ 10 ರೈಲುಗಳು ಪಟ್ಟಂದೂರು ಅಗ್ರಹಾರದ ವರೆಗೆ, 4 ರೈಲುಗಳು ವೈಟ್‌ಫೀಲ್ಡ್‌ ಹಾಗೂ 1 ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಚಲಿಸುತ್ತದೆ. ಪ್ರಸ್ತುತ ಗರುಡಾಚಾರ್‌ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14 ರೈಲುಗಳಲ್ಲಿ 6 ರೈಲುಗಳನ್ನು ಪಟ್ಟಂದೂರು ಅಗ್ರಹಾರ/ ವೈಟ್‌ಫೀಲ್ಡ್‌ ವರೆಗೆ ವಿಸ್ತರಿಸಲಾಗಿದೆ. ಹಸಿರು ಮಾರ್ಗದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ. ಮೆಜೆಸ್ಟಿಕ್ ನಿಲ್ದಾಣದಿಂದ ಎಲ್ಲಾ ಹೆಚ್ಚುವರಿ ಮೆಟ್ರೋ ರೈಲುಗಳು ಸಂಚರಿಸಲಿವೆ. ಇಂದಿನಿಂದ ನೇರಳೆ ಮಾರ್ಗದಲ್ಲಿ ಪ್ರತಿ 3.5 ನಿಮಿಷಕ್ಕೊಂದು ರೈಲುಗಳು ಸಂಚಾರ ಇರುತ್ತದೆ. ಇನ್ನುಳಿದಂತೆ ಮೆಟ್ರೋ ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ…

Read More

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಕರ್ನಾಟಕಕ್ಕೂ ಆತಂಕ ಶುರುವಾಗಿದೆ. ಕೇರಳದ ಕೊಟ್ಟಾಯಂ ಜಿಲ್ಲೆಯ ಮಡಕತ್ತಾರ ಪಂಚಾಯತ್‌ನ ಖಾಸಗಿ ಫಾರ್ಮ್‌ನಲ್ಲಿ ಆಫ್ರಿಕನ್‌ ಹಂದಿ ಜ್ವರ ಪ್ರಕರಣ ಬೆಳಕಿಗೆ ಬಂದಿದೆ. ಹಂದಿ ಜ್ವರ ಪ್ರಕರಣಗಳು ದೃಢಪಟ್ಟ ನಂತರ ಜಿಲ್ಲಾಧಿಕಾರಿ ಖಾಸಗಿ ಜಮೀನಿನಲ್ಲಿ 310 ಹಂದಿಗಳನ್ನು ಕೊಲ್ಲಲು ಆದೇಶಿಸಿದ್ದಾರೆ. ಜೊತೆಗೆ ಸೋಂಕು ಪತ್ತೆಯಾದ ಜಮೀನಿನ ಒಂದು ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ರೋಗ ಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. 10 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ರೋಗ ಕಣ್ಗಾವಲು ಪ್ರದೇಶವೆಂದು ಘೋಷಿಸಲಾಗಿದೆ. ಸೋಂಕಿತ ವಲಯದಿಂದ ಹಂದಿಗಳನ್ನು ಸಾಗಿಸದಂತೆ ಕ್ರಮ ಕೈಗೊಳ್ಳಲಾಗಿದೆ. ಹಂದಿಗಳನ್ನು ಅಕ್ರಮವಾಗಿ ಸಾಗಿಸುವುದನ್ನು ತಡೆಯಲು ಇಲಾಖೆ ಜಿಲ್ಲೆಯ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದೆ. ರೋಗ ದೃಢಪಟ್ಟಿರುವ ಜಮೀನಿನಲ್ಲಿ ಹಂದಿಗಳನ್ನು ಕೊಂದು ಹೂಳುವಂತೆ ಪಶುಸಂಗೋಪನಾ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆಫ್ರಿಕನ್‌ ಹಂದಿ ಜ್ವರ ಒಂದು ಹಂದಿಯಿಂದ ಇನ್ನೊಂದು ಹಂದಿಗೆ ನೇರ ಸಂಪರ್ಕದ ಮೂಲಕ ಹರಡುತ್ತದೆ. ಸೋಂಕಿತ ಹಂದಿ ತಿಂದು ಬಿಟ್ಟ ಆಹಾರವನ್ನು ಆರೋಗ್ಯವಂತ ಹಂದಿ ಸೇವಿಸಿದರೆ ರೋಗ…

Read More

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡೆಂಘಿ ಪ್ರಕರಣಗಳು ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲೂ ಹೆಚ್ಚುತ್ತಿರುವ ಡೆಂಘಿ ಪ್ರಕರಣಗಳ ನಿಯಂತ್ರಣ & ಅರಿವು ಮೂಡಿಸುವ ನಿಟ್ಟಿನಲ್ಲಿ ಬಿಬಿಎಂಪಿಯು “ಡೆಂಘಿ ವಾರಿಯರ್” ಎಂಬ ವಿನೂತನ ಸ್ಪರ್ಧೆಯನ್ನು ಆಯೋಜಿಸಿದೆ. ಈ ಸ್ಪರ್ಧೆಯಲ್ಲಿ ನಾಗರೀಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಡೆಂಘಿ ನಿಯಂತ್ರಣಕ್ಕಾಗಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುವುದರ ಕುರಿತು ಇತರರಿಗೆ ಅರಿವು ಮೂಡಿಸಬೇಕು. ಅದಕ್ಕಾಗಿ ಕಿರುಚಿತ್ರಗಳನ್ನು ಮಾಡಿ ಆ ವಿಡಿಯೋವನ್ನು ಪಾಲಿಕೆಯ Facebook & Twitter @BBMPSplHealth ಗೆ ಟ್ಯಾಗ್ ಮಾಡಬೇಕು. ಜು.25ರೊಳಗೆ ವಿಡಿಯೋ ಅಪ್ಲೋಡ್ ಮಾಡಲು ಅವಕಾಶವಿದ್ದು, ಹೆಚ್ಚು ಲೈಕ್ಸ್ ಪಡೆಯುವ 5 ವಿಡಿಯೋಗಳಿಗೆ ಪಾಲಿಕೆಯು ಡೆಂಘಿ ವಾರಿಯರ್ ಎಂದು ಗುರುತಿಸಿ ಬಹುಮಾನ ನೀಡಲಿದೆ. ಮಾಹಿತಿ ಕಡ್ಡಾಯ: ಸಾಮಾಜಿಕ ಜಾಲತಾಣ ಹಾಗೂ ಲಿಂಕ್/ಕ್ಯೂ.ಆರ್. ಕೋಡ್ನಲ್ಲಿ ವಿಡಿಯೋ ಅಪ್ಲೋಡ್ ಮಾಡುವ ಸಮಯದಲ್ಲಿ ನಾಗರೀಕರಾದರೆ ಹೆಸರು, ದೂರವಾಣಿ ಸಂಖ್ಯೆ, ವಾರ್ಡ್, ಸ್ಥಳವನ್ನು ನಮೂದಿಸಬೇಕು. ವಿದ್ಯಾರ್ಥಿಗಳಾದರೆ ಹೆಸರು,…

Read More

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಗಸ್ಟ್ ವೇಳೆಗೆ ಪತನವಾಗಬಹುದು. ಅವಧಿಗೂ ಮುನ್ನ ಚುನಾವಣೆಗೆ ಸಿದ್ಧರಾಗುವಂತೆ ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಎಲ್ಲಾ ಪಕ್ಷದ ಕಾರ್ಯಕರ್ತರು ಚುನಾವಣೆಗೆ ಸಿದ್ಧರಾಗಿರಲು ನಾನು ಮನವಿ ಮಾಡುತ್ತೇನೆ. ದೆಹಲಿಯಲ್ಲಿ ಮೋದಿ ಸರ್ಕಾರವು ತುಂಬಾ ದುರ್ಬಲವಾಗಿದೆ. ಆಗಸ್ಟ್ ವೇಳೆಗೆ ಈಗಿನ ಸರ್ಕಾರ ಪತನವಾಗಬಹುದು, ಯಾವುದಕ್ಕೂ ಚುನಾವಣೆಗೆ ಸಿದ್ಧ ಇರಿ ಎಂದು ಲಾಲೂ ಯಾದವ್  ಹೇಳಿದ್ದು, ಇದೀಗ ಅವರ  ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ತಂದೆಯ ಮಾತಿನ ಬೆನಲ್ಲೇ ಲಾಲೂ ಯಾದವ್ ಮಗ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಕೂಡ ಬಿಹಾರದಲ್ಲಿ ಶೀಘ್ರ ವಿಧಾನಸಭಾ ಚುನಾವಣೆಯ ಸಾಧ್ಯತೆಯನ್ನು ಸೂಚಿಸಿದ್ದಾರೆ. ಡಿಸೆಂಬರ್ 2024 ಅಥವಾ 2025ರ ಆರಂಭದಲ್ಲಿ ಚುನಾವಣೆ ನಡೆದರೂ ಬಿಹಾರದಲ್ಲಿ ಇಂಡಿಯಾ ಮೈತ್ರಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣರನ್ನು ಎಸ್ ಐಟಿ ಅಧಿಕಾರಿಗಳು ಪುರುಷತ್ವ ಪರೀಕ್ಷೆಗೊಳಪಡಿಸಿದ್ದರು. ಅದರ ಫಲಿತಾಂಶ ಈಗ ಬಂದಿದೆ. ಸದ್ಯಕ್ಕೆ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೇ 31 ರಂದು ಅವರನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದರು. ಪುರುಷತ್ವ ಪರೀಕ್ಷಾ ವರದಿ ಈಗ ಎಸ್ ಐಟಿ ಅಧಿಕಾರಿಗಳ ಕೈ ಸೇರಿದೆ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್ ಪರೀಕ್ಷೆ ನಡೆಸಲಾಗಿತ್ತು. ಪ್ರಜ್ವಲ್ ರೇವಣ್ಣ ವಿರುದ್ಧವಾಗಿ ಈ ಪುರುಷತ್ವ ಪರೀಕ್ಷೆ ಸಾಕ್ಷಿಯಾಗಿ ಬಳಕೆಯಾಗಲಿದೆ. ಇದಲ್ಲದೆ ಧ್ವನಿ ಪರೀಕ್ಷೆ ಕೂಡಾ ಮಾಡಲಾಗಿದ್ದು, ಅದರ ಫಲಿತಾಂಶ ಇನ್ನಷ್ಟೇ ಬರಬೇಕಿದೆ. ಕಿರುಕುಳ ನೀಡಿದ್ದ ಮಹಿಳೆ ತನಗೆ ಪರಿಚಯವೇ ಇಲ್ಲ ಎಂದು ಪ್ರಜ್ವಲ್ ಹೇಳಿಕೊಂಡಿದ್ದರು. ಆದರೆ ಇದೀಗ ಈ ಪರೀಕ್ಷೆ ಫಲಿತಾಂಶಗಳು ಪ್ರಜ್ವಲ್ ಗೆ ಮುಳುವಾಗಲಿದೆ. ಇದೀಗ ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆಯಲ್ಲಿ ಪಾಸಾಗಿದ್ದು ದೈಹಿಕ ಸಂಪರ್ಕರ ನಡೆಸಲು ಸಮರ್ಥ…

Read More

ಮೂಗುತಿ ಹಿಂದೂ ಧರ್ಮೀಯ ಸ್ತ್ರೀಯರಿಗೆ ಮಹತ್ವದ್ದು ಹಾಗೂ ಪವಿತ್ರ. ಕೆಲವು ಕಡೆ ಮುಸ್ಲಿಮರು ಮತ್ತು ಕೆಲವು ಆಫ್ರಿಕನ್ ಸಂಸ್ಕೃತಿಗಳಲ್ಲಿಯೂ ಇದು ಇದೆ. ಭಾರತದಲ್ಲಿ ಮೂಗುತಿ ಧರಿಸುವುದಕ್ಕೆ ವಿಶೇಷ ಮಹತ್ವ ನೀಡಲಾಗಿದೆ. ಇಲ್ಲಿ ಮಹಿಳೆಯರು ಮೂಗು ಚುಚ್ಚಿಸಿಕೊಳ್ಳುವುದು ಸಂಸ್ಕಾರವೇ ಆಗಿದೆ. ಮೂಗುತಿ ಧಾರಣೆಯು ಸುಮಾರು 6000 ಕ್ಕೂ ಹೆಚ್ಚು ವರ್ಷಗಳ ಇತಿಹಾಸವನ್ನು ಒಳಗೊಂಡಿದೆ. ರಿಂಗ್ ಮೂಗುತಿ ವಿದೇಶದಿಂದ ಬಂದದ್ದು. ಹಿಪ್ಪಿಗಳು ಭಾರತಕ್ಕೆ ವಲಸೆ ಬಂದ ನಂತರ ಅವರ ಈ ಸಂಪ್ರದಾಯವನ್ನು ಕಂಡು ಭಾರತೀಯರು ಆಕರ್ಷಿತರಾದರು ಹಾಗೂ ಭಾರತದಲ್ಲೂ ಅದು ರೂಢಿಗೆ ಬರಲು ಆರಂಭವಾಯಿತು. ಹಿಂದೂ ಧರ್ಮದಲ್ಲಿ ಕಿವಿ ಚುಚ್ಚುವಿಕೆಗೆ ಎಷ್ಟು ಪ್ರಾಮುಖ್ಯತೆಯನ್ನು ನೀಡಲಾಗಿತ್ತೋ ಅಷ್ಟೇ ಪ್ರಾಮುಖ್ಯತೆಯನ್ನು ಮೂಗು ಚುಚ್ಚಿಸುವಿಕೆಗೂ ಕೂಡ ನೀಡಲಾಗಿತ್ತು. ತಜ್ಞರು ಮೂಗುತಿ ಧರಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ಕೂಡ ಎಂದು ಹೇಳುತ್ತಾರೆ. ಆಯುರ್ವೇದ ಪದ್ಧತಿಯಲ್ಲಿ ಮೂಗುತಿಯು ವಿವಿಧ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆಯೆಂದು ಹೇಳಲಾಗಿದೆ. ಆದರೆ ಎಡಹೊಳ್ಳೆಗೇ ಮೂಗುತಿ ಧರಿಸುವುದಕ್ಕೂ ವೈದ್ಯಕೀಯ ಕಾರಣಗಳಿವೆ. ಎಡಹೊಳ್ಳೆಯ ಬಳಿ ಮೂಗುತಿ ಧರಿಸುವುದರಿಂದ ಮಹಿಳೆಯರಲ್ಲಿ ಕಂಡುಬರುವ…

Read More

ತುರುವೇಕೆರೆ: ತುಮಕೂರು ಜಿಲ್ಲೆಗೆ ಹೇಮಾವತಿ ನೀರಿನ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂದು ಮಾಜಿ ಶಾಸಕ ಮಸಾಲಾ ಜಯರಾಮ್ ಅಭಿಪ್ರಾಯ ವ್ಯಕ್ತಪಡಿಸಿದರು. ತುರುವೇಕೆರೆ ಪಟ್ಟಣದ ಸಮೀಪ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹೇಮಾವತಿ ನೀರನ್ನು ಕುಣಿಗಲ್ ಮೂಲಕ ರಾಮನಗರ, ಚನ್ನಪಟ್ಟಣಕ್ಕೆ ತೆಗೆದುಕೊಂಡು ಹೋಗುವುದನ್ನು ವಿರೋಧ ವ್ಯಕ್ತಪಡಿಸಿ, ಜಿಲ್ಲೆಯ ಕೆಲವು ನಾಯಕರನ್ನು ಹೊರತುಪಡಿಸಿ ಎಲ್ಲರೂ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಸರ್ಕಾರವು ಕದ್ದು ಮುಚ್ಚಿ ಕಾಮಗಾರಿಯನ್ನು ನಡೆಸುತ್ತಿದ್ದು, ಹೇಮಾವತಿ ಇಲಾಖೆಯಿಂದ ಗೃಹ ಇಲಾಖೆಗೆ ಪತ್ರ ಬಂದಿದ್ದು, ಕಾಮಗಾರಿ ಸುಗಮವಾಗಿ ನಡೆಯಲು ಅನುವು ಮಾಡಿಕೊಡಿ ಎಂದು ಪತ್ರ ಬರೆದಿದ್ದಾರೆ ಎಂದರು. ಜಿಲ್ಲೆಯಲ್ಲಿ ಈ ಹೋರಾಟಕ್ಕೆ ಭಾಗಿಯಾದ ನಾಯಕರನ್ನು ಹೊಂದಿಸಿ ಎಂದು ಸರ್ಕಾರ ತಿಳಿಸಿದ್ದು ಇದು ನಾಚಿಕೆಗೇಡಿನ ಸಂಗತಿ ಆಗಿದೆ. ನೀರು ಕೊಡಲು ನಮ್ಮ ಯಾವುದೇ ಅಭ್ಯಂತರ ಇಲ್ಲ, ಆದರೆ ನಮ್ಮ ಪಾಲಿನ ನೀರನ್ನು ತೆಗೆದುಕೊಂಡು ಹೋಗಲು ನಮ್ಮ ವಿರೋಧವಿದೆ, ಇದರ ಬಗ್ಗೆ ಗೃಹ ಸಚಿವರ ಮೂಲಕ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕಾಮಗಾರಿಯನ್ನು ನಿಲ್ಲಿಸುವಂತೆ ಮನವಿ ಮಾಡಲಾಗುವುದು…

Read More