Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ಸ್ಪ್ರೈಟ್( Sprite) ಕೂಲ್ ಡ್ರಿಂಕ್ ನಲ್ಲಿ ಜೇಡ ರೂಪದ ಹುಳ ಪತ್ತೆಯಾಗಿರುವ ಘಟನೆ ನಡೆದಿದ್ದು, ಹುಳವನ್ನು ಕಂಡು ಕೂಲ್ ಡ್ರಿಂಕ್ಸ್ ಪ್ರಿಯರು ಬೆಚ್ಚಿಬಿದ್ದಿದ್ದಾರೆ. ತುಮಕೂರು ನಗರದ ಭಾರತಿ ಟೀ ಶಾಪ್ ನಲ್ಲಿ ಈ ಘಟನೆ. ಕೋಕಾ ಕೋಲಾ ಕಂಪನಿಯ ಪ್ರಾಡಕ್ಟ್ ಸ್ಪ್ರೈಟ್ ಕೂಲ್ ಡ್ರಿಂಕ್ ನಲ್ಲಿ ಹುಳ ಪತ್ತೆಯಾಗಿದೆ. ಗ್ರಾಹಕ ರಕ್ಷಿತ್ ಖರೀದಿ ಸಿದ ಸ್ಪ್ರೈಟ್ ನಲ್ಲಿ ಹುಳ ಪತ್ತೆಯಾಗಿದೆ. ಹುಳ ಪತ್ತೆಯಾದ ಹಿನ್ನೆಲೆ ರಕ್ಷಿತ್ ಆಹಾರ ಸುರಕ್ಷತಾ ಇಲಾಖೆಗೆ ದೂರು ನೀಡಿದ್ದಾರೆ. ಆಹಾರ ಸುರಕ್ಷತಾ ಅಧಿಕಾರಿಗಳು ಟೀ ಶಾಪ್ ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಸ್ಪ್ರೈಟ್ ಬಾಟಲ್ ಗಳನ್ನ ವಶಕ್ಕೆ ಪಡೆದು ಪರೀಕ್ಷೆಗೆ ಕಳುಹಿಸಿದ್ದಾರೆ. ಸದ್ಯ ಅಂಗಡಿ ಮಾಲೀಕರು, ವಿತರಕ ಹಾಗೂ ಕಂಪನಿ ವಿರುದ್ದ ದೂರು ದಾಖಲಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ:…
ಡೆಂಗ್ಯೂಗೆ ಮತ್ತೋರ್ವ ಪುಟ್ಟ ಬಾಲಕಿ ಬಲಿಯಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದ್ದು, ಈ ಮೂಲಕ ಹಾಸನದಲ್ಲಿ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮೃತ ಬಾಲಕಿಯನ್ನು ಹೊಳೆನರಸೀಪುರ ತಾಲ್ಲೂಕಿನ, ದೊಡ್ಡಳ್ಳಿ ಗ್ರಾಮದ ಸಮೃದ್ಧಿ (8) ಎಂದು ಗುರುತಿಸಲಾಗಿದೆ. ಬಾಲಕಿ ಗ್ರಾಮದ ರಮೇಶ್–ಅಶ್ವಿನಿ ದಂಪತಿಯ ಪುತ್ರಿಯಾಗಿದ್ದು, ಕಳೆದ 4 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಬಾಲಕಿಯನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಮೈಸೂರಿನ ಅಪೋಲೊ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಇದೀಗ ಸಾವನ್ನಪ್ಪಿದ್ದಾಳೆ. ಕಳೆದ ಒಂದು ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ನಾಲ್ವರು ಬಾಲಕಿಯರು ಬಲಿಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮಠಕ್ಕೆ ಭಕ್ತರ ವೇಷದಲ್ಲಿ ಬಂದಿದ್ದ ಅಪರಿಚಿತರಿಬ್ಬರು ₹40 ಲಕ್ಷ ಮೌಲ್ಯದ ನಗನಾಣ್ಯ ಲೂಟಿ ಮಾಡಿ ಪರಾರಿಯಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಇಳಕಲ್ಲ ವಿಜಯ ಮಹಾಂತೇಶ್ವರ ಮಠದಲ್ಲಿ ನಡೆದಿದೆ. ಗುರುವಾರ ಮಧ್ಯರಾತ್ರಿ ಮಠಕ್ಕೆ ಭಕ್ತರ ವೇಷದಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿಗಳು ಮಠದೊಳಗೆ ಬಂದಾಗ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕೈಯಲ್ಲಿ ಪಿಸ್ತೂಲ್ ಹಿಡಿದು ಜೀವ ಬೆದರಿಕೆ ಹಾಕಿ ಕಪಾಟು ಹಾಗೂ ಟ್ರಂಕ್ ಗಳಲ್ಲಿದ್ದ 7 ತೊಲ ಚಿನ್ನ, 10 ಕೆ.ಜಿ ಬೆಳ್ಳಿ, ಅಂದಾಜು ₹20 ಲಕ್ಷ ನಗದು ದೋಚಿಕೊಂಡು ಹೋಗಿದ್ದಾರೆ. ಪಾದ ಮತ್ತು ಇಷ್ಟಲಿಂಗ ಪೂಜೆಗೆ ಬಳಸುವ ಬೆಳ್ಳಿ ಸಾಮಗ್ರಿಗಳು, ಚಿನ್ನದ ಕರಡಿಗೆ ಮತ್ತು ಸುತ್ತುಂಗುರಗಳನ್ನು ಲೂಟಿ ಮಾಡಿಕೊಂಡು ಹೋಗಿದ್ದಾರೆ ಎಂದು ಶಾಖಾ ಮಠದ ಸಿದ್ಧಲಿಂಗ ಸ್ವಾಮೀಜಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರೀಶಬಾಬು , ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್ ಸ್ಥಳಕ್ಕೇ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು: ನಗರದ 11 ಆರ್.ಟಿ.ಒ. ಕಚೇರಿಗಳ ವ್ಯಾಪ್ತಿಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳು ಒಳಗೊಂಡಂತೆ ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಬೇಕು ಎಂಬುದು ಖಾಸಗಿ ಸಾರಿಗೆ ಚಾಲಕ ಸಂಘಟನೆಗಳ ಬೇಡಿಕೆಗಳಲ್ಲಿ ಒಂದಾದ್ದು, ಚಾಲಕರು ಪ್ರತಿಭಟನೆಯನ್ನು ನಡೆಸಿದ್ದರು. ಪ್ರತಿಭಟನೆಗೆ ಮಣಿದಿರುವ ಸಾರಿಗೆ ಇಲಾಖೆ ಇಂದಿನಿಂದ(ಜು.5) ಕಾನೂನು ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಕಳೆದ 2021 ರಲ್ಲಿಯೇ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ಸರಕಾರ ವಾಪಸ್ ಪಡೆದಿದೆ. ಆದರೆ ನಗರದಲ್ಲಿ ಅನಧಿಕೃತವಾಗಿ ಬೈಕ್ ಟ್ಯಾಕ್ಸಿಗಳು ಸಂಚರಿಸುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇಂತಹ ಕಾನೂನು ಬಾಹಿರ ಸಂಚಾರಿ ವ್ಯವಸ್ಥೆಗೆ ಕಡಿವಾಣ ಹಾಕಬೇಕು ಎಂದು ಪ್ರತಿಭಟನಾಕಾರರು ಮಾಡಿದ ಮನವಿಗೆ ಸ್ಪಂದಿಸಿ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ. ತಕ್ಷಣವೇ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಮತ್ತು ಗೃಹ ರಕ್ಷಕ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ನಮ್ಮತುಮಕೂರಿನ ಕ್ಷಣ…
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ರಾಜ್ಯದ ನೂತನ ಉಪ ಲೋಕಾಯುಕ್ತರನ್ನಾಗಿ ನೇಮಿಸಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಗುರುವಾರ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಉಪ ಲೋಕಾಯುಕ್ತರ ಎರಡು ಹುದ್ದೆಗಳಿವೆ. ಅದರಲ್ಲಿ ಒಂದು ಹುದ್ದೆ ಖಾಲಿ ಇತ್ತು. ಎರಡನೇ ಉಪ ಲೋಕಾಯುಕ್ತರ ಹುದ್ದೆಗೆ ಬಿ.ವೀರಪ್ಪ ಅವರನ್ನು ಐದು ವರ್ಷಗಳ ವರೆಗೆ ನೇಮಿಸಿ ರಾಜ್ಯಪಾಲರು ಆದೇಶದಲ್ಲಿ ತಿಳಿಸಿದ್ದಾರೆ. ಎರಡನೇ ಉಪ ಲೋಕಾಯುಕ್ತರ ಹುದ್ದೆಯ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ವಿಪಕ್ಷ ನಾಯಕ ಆರ್.ಅಶೋಕ್ ಅವರೊಂದಿಗೆ ಸಮಾಲೋಚನೆ ನಡೆಸಿ ನ್ಯಾ.ಬಿ.ವೀರಪ್ಪ ಅವರನ್ನು ನೇಮಿಸುವಂತೆ ಜೂ.24ರಂದು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಕಲಬುರಗಿ ಜಿಲ್ಲೆಯ ವ್ಯಕ್ತಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ದೇಬಲ ಗಾಣಗಾಪುರದಲ್ಲಿ ನಡೆದಿದೆ. ಮಹೇಶ್ ಕೋಲತೆ (29) ಎಂಬಾತ ಹತ್ಯೆಗೀಡಾದ ಯುವಕನಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮೂಲದ ಆರೋಪಿ ನವನಾತ್ ಮಹಾಪೂರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 25ರಂದು ಈ ಕೊಲೆ ನಡೆದಿದೆ, ಆರೋಪಿಯನ್ನು ಈಗ ಬಂಧಿಸಲಾಗಿದೆ. ಆರೋಪಿ ನವನಾತ್ ಮಹಾಪೂರೆಗೆ ಕುಡಿತದ ಚಟ ಹೊಂದಿದ್ದು, ಕುಡಿತಕ್ಕೆ ಹಣ ಇಲ್ಲದಿದ್ದರಿಂದ ಕೊಲೆ ಮಾಡಿ ಕೊಲೆಯಾದವನ ಬಳಿ ಇದ್ದ 3,600 ರೂಪಾಯಿ ದೋಚಿ ಪರಾರಿಯಾಗಿದ್ದ ಎನ್ನಲಾಗಿದೆ. ಪೊಲೀಸರು ಮಹಾರಾಷ್ಟ್ರದ ದುದನಿ ಬಳಿ ಆರೋಪಿ ನವನಾತ್ ಮಹಾಪೂರೆನನ್ನು ಬಂಧಿಸಿದ್ದಾರೆ. ದೇವಲ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಫಿಜಿಯೋ ಥೆರಪಿಗೆ ಬಂದಿದ್ದ ಯುವತಿ ಮೇಲೆ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಅತ್ಯಾಚಾರ ಎಸಗಿದ್ದಾನೆಂಬ ಆರೋಪ ಕೇಳಿಬಂದಿದೆ.. ಕೇರಳದ ಪಯ್ಯನೂರಿನಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ 42 ವರ್ಷದ ಶರತ್ ನಂಬಿಯಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಬಸ್ ನಿಲ್ದಾಣದ ಬಳಿ ಫಿಸಿಯೋ ಥೆರಪಿ ಸೆಂಟರ್ ಇದೆ. ಇದಕ್ಕೆ ಫಿಸಿಯೋ ಥೆರಪಿ ಮಾಡಿಸಿಕೊಳ್ಳಲು ಯುವತಿಯೊಬ್ಬಳು ಬಂದಿದ್ದಾಳೆ. ಈ ವೇಳೆ ಕ್ಷೇಮ ಕೇಂದ್ರ ಮತ್ತು ಜಿಮ್ ನ ಮಾಲೀಕ ಶರತ್ ಕೊಠಡಿಯನ್ನು ಒಳಗಿನಿಂದ ಲಾಕ್ ಮಾಡಿ, ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪ ಮಾಡಲಾಗಿದೆ. ಆತ ಫಿಸಿಯೋಥೆರಪಿಸ್ಟ್ ಅಲ್ಲದಿದ್ದರೂ ಕೂಡಾ ಮಹಿಳೆಯರಿಗೆ ತಾನೇ ಥೆರಪಿ ಮಾಡುತ್ತೇನೆ ಎಂದು ಹೇಳಿ ಬಲವಂತದಿಂದ ಅತ್ಯಾಚಾರ ಎಸಗುತ್ತಾನೆ ಎಂದು ಗಂಭೀರ ಆರೋಪ ಮಾಡಲಾಗಿದೆ. ಯುವತಿಯೊಬ್ಬಳು ಈ ಬಗ್ಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಇದೇ ವೇಳೆ ಕೆಲ ವ್ಯಕ್ತಿಗಳು ಫಿಸಿಯೋಥೆರಪಿ ಸೆಂಟರ್ ಮೇಲೆ…
ಇನ್ನು ಮುಂದೆ KSRTC ಯಲ್ಲೂ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿಸಲು ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ. ಖಾಸಗಿ ಕಂಪೆನಿಯಿಂದ ಒಂದು ಮಷಿನ್ ಗೆ ಪ್ರತಿ ತಿಂಗಳು 645 ರೂಪಾಯಿ ಬಾಡಿಗೆ ಆಧಾರದಲ್ಲಿ 10,245 ಸಾವಿರ ಇಟಿಎಂ ಟಿಕೆಟ್ ಮಷಿನ್ ಗಳ ಖರೀದಿಗೆ ಕೆಎಸ್ ಆರ್ ಟಿಸಿ ಮುಂದಾಗಿದೆ. ಇದರಿಂದ ಇನ್ಮುಂದೆ ಕೆಎಸ್ ಆರ್ ಟಿಸಿ ಬಸ್ನಲ್ಲಿ ಗೂಗಲ್ ಪೇ, ಫೋನ್ ಪೇ. ಪೇಟಿಎಂ ಮೂಲಕ ಹಣ ಪಾವತಿ ಮಾಡಿ ಟಿಕೆಟ್ ಪಡೆದು ಪ್ರಯಾಣಿಸಬಹುದಾಗಿದೆ. ಈ ನೂತನ ಮಷಿನ್ ಗಳಲ್ಲಿ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ಗಳನ್ನು ಬಳಸಿಯೂ ಹಣ ಪಾವತಿ ಮಾಡಬಹುದು ಎನ್ನಲಾಗಿದೆ. ಸದ್ಯ ಈಗ ಇರುವ ಮಷಿನ್ಗಳು ರೋಡ್ ಮಧ್ಯೆ ಕೈಕೊಟ್ಟು ಪ್ರಯಾಣಿಕರು ಮತ್ತು ಕಂಡಕ್ಟರ್ ಜೊತೆಗೆ ಜಗಳವಾಗುತ್ತಿದೆ. ಹೊಸ ಮಷಿನ್ನಿಂದ ಇದು ತಪ್ಪಲಿದೆ ಎಂದು ನಿಗಮ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಟೀಂ ಇಂಡಿಯಾ ತಂಡ ಕೋಟ್ಯಾಂತರ ಭಾರತೀಯರ ಕನಸನ್ನು ನನಸುಮಾಡುವ ಮೂಲಕ, ತನ್ನ ಕನಸಾದ ಐಸಿಸಿ ಟಿ20 ವಿಶ್ವಕಪ್ ಗೆಲ್ಲೋದನ್ನು ನನಸಾಗಿಸಿಕೊಂಡಿದೆ. ಹೌದು, ಬಾರ್ಬಡೊಸ್ ನ ಬ್ರಿಡ್ಜ್’ಟೌನ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡ 7 ರನ್‌ಗಳಿಂದ ಗೆದ್ದು ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ. ಹೀಗಾಗಿ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಇದೀಗ BCCI ಭರ್ಜರಿ ಗಿಫ್ಟ್ ನೀಡಿದೆ. ಟಿ20 ವಿಶ್ವಕಪ್ ಗೆದ್ದು ತವರಿಗೆ ಆಗಮಿಸಿದ ಟೀಮ್ ಇಂಡಿಯಾಗೆ ಬಿಸಿಸಿಐ ಭರ್ಜರಿಯಾದ ಸ್ವಾಗತ ನೀಡಿದೆ. ಭಾರತಕ್ಕೆ ಆಗಮಿಸುತ್ತಿದ್ದಂತೆ ತಂಡವು ಪ್ರಧಾನಿ ಮೋದಿಯನ್ನು ಭೇಟಿಯಾಗಿ ಸಂಭ್ರಮವನ್ನು ಹಂಚಿಕೊಂಡಿದೆ. ಬಳಿಕ ಗೆಲುವಿನ ಪರೇಡ್ ಹಾಗೂ ವಾಂಖೆಡೆ ಸ್ಟೇಡಿಯಂನಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಭೂತಪೂರ್ವ ಸಾಧನೆ ಗೈದ ಇಂಡಿಯಾದ ಆಟಗಾರರಿಗೆ BCCI 125 ಕೋಟಿಯ ಚೆಕ್ ಅನ್ನು ವಿತರಿಸಿದೆ. ಬಿಸಿಸಿಐ ತಾನು ಘೋಷಣೆ ಮಾಡಿದ್ದ 125 ಕೋಟಿ ರೂಪಾಯಿಯ ಬಹುಮಾನ ಮೊತ್ತದ ಚೆಕ್‌ಅನ್ನು ವಿಶ್ವಕಪ್ ವಿಜೇತ ತಂಡಕ್ಕೆ ಹಸ್ತಾಂತರ…
ಬೀದರ್: ನೂತನ ಜಿಲ್ಲಾಧಿಕಾರಿಯಾಗಿ ಶಿಲ್ಪಾ ಶಮಾ೯ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದಿನ ಡಿಸಿ ಗೋವಿಂದ ರೆಡ್ಡಿ ಅವರನ್ನು ಬೀದರ ಜಿಲ್ಲೆಯಿಂದ ಗದಗ ಜಿಲ್ಲಾಧಿಕಾರಿ ಯನ್ನಾಗಿ ವಗಾ೯ವಣೆಗೊಳಿಸಿದೆ. ಬೀದರ ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡಿರುವ ಶಿಲ್ಪಾ ಶರ್ಮಾ ಅವರು ಕನಾ೯ಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್ ವ್ಯವಸ್ಥಾಪಕ ನಿದೇ೯ಶಕಿಯಾಗಿದ್ದರು. ಎರಡು ದಿನಗಳ ಹಿಂದೆ ಬೀದರ ಎಸ್ಪಿ ಚೆನ್ನಬಸವಣ್ಣ ಎಸ್.ಎಲ್. ಅವರನ್ನು ವರ್ಗಾವಣೆಗೊಳಿಸಿ ಅವರ ಜಾಗಕ್ಕೆ ಪ್ರದೀಪ್ ಗುಂಟಿ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರನ್ನು ಎತ್ತಂಗಡಿ ಮಾಡಿದ್ದು ಅವರ ಜಾಗಕ್ಕೆ ಶಿಲ್ಪಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ವಾರದೊಳಗೆ ಡಿಸಿ. ಎಸ್ಪಿ ಇಬ್ಬರನ್ನು ವರ್ಗಾವಣೆಗೊಳಿಸಿ ಹೊಸಬರನ್ನು ನೇಮಕ ಮಾಡಿದಂತಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA