Author: admin

ಬೆಂಗಳೂರಿನಲ್ಲಿ ಓಲಾ, ಉಬರ್‌ ಗೆ ಸೆಡ್ಡುಹೊಡೆಯಲು ಹಾಗು ಆಟೋ ಚಾಲಕರೇ ಸೇರಿ ಕಟ್ಟಿದ ನಮ್ಮ ಯಾತ್ರಿ ಆಪ್‌ ಗೆ ಪ್ರತಿಸ್ಪರ್ಧಿಯಾಗಿ ಈಗ ಮತ್ತೊಂದು ಆಪ್‌ ಚಾಲನೆಗೊಂಡಿದೆ. ಬೆಂಗಳೂರಿನ ಮತ್ತೊಂದು ಸಾರಿಗೆ ಒಕ್ಕೂಟವು ಆಟೋ–ರಿಕ್ಷಾ ಅಪ್ಲಿಕೇಶನ್ ಅನ್ನು ಪ್ರಾರಂಭಿಸುತ್ತಿದೆ. ಕರ್ನಾಟಕ ರಾಜ್ಯ ಚಾಲಕ ಪರಿಷತ್ತು (ಕರ್ನಾಟಕ ರಾಜ್ಯ ಚಾಲಕರ ಪರಿಷತ್ತು) ಅಗ್ನಿಭು ಟೆಕ್ನಾಲಜೀಸ್ ಜೊತೆಗೆ ಜೂನ್ 10 ರಂದು ಮಧ್ಯಾಹ್ನ ‘ನಗರ ಮೀಟರ್ಡ್ ಆಟೋ’ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಿದೆ ಮತ್ತು ಅದು ಗೂಗಲ್ ಪ್ಲೇ ಸ್ಟೋರ್‌ ನಲ್ಲಿ ಲಭ್ಯವಿರುತ್ತದೆ. ಒಕ್ಕೂಟದ ಪ್ರಕಾರ, ಬಳಕೆದಾರರು ಅಪ್ಲಿಕೇಶನ್ ಮೂಲಕ ರೈಡ್‌ ಗಳನ್ನು ಬುಕ್ ಮಾಡಬಹುದು ಆದರೆ ಮೀಟರ್‌ ನಲ್ಲಿ ಪ್ರದರ್ಶಿಸಿದಂತೆ ಮೊದಲ ಎರಡು ಕಿಮೀಗೆ ರೂ 30 ಮತ್ತು ನಂತರದ ಪ್ರತಿ ಕಿಮೀಗೆ ರೂ 15 ಮಾತ್ರ ಸರ್ಕಾರಿ–ನಿಗದಿತ ದರಗಳನ್ನು ಪಾವತಿಸಬಹುದು ಎಂದು ತಿಳಿಸಲಾಗಿದೆ. ಯಾವುದೇ ಏರಿಕೆ ಬೆಲೆ ಅಥವಾ ಕಮಿಷನ್ ಇರುವುದಿಲ್ಲ ಆದರೆ ಚಾಲಕರು ಸಣ್ಣ ಚಂದಾದಾರಿಕೆ ಶುಲ್ಕವನ್ನು ಪಾವತಿಸಬೇಕಾಗಬಹುದು. ಅವರು ಮೊದಲ…

Read More

ತುಮಕೂರು: ಬಸ್ ಚಾಲಕನಿಗೆ ಹೃದಯಾಘಾತವಾಗಿ ಬಸ್ ಅಡ್ಡ-ದಿಡ್ಡಿ ಓಡಿಸುತ್ತಿದ್ದನ್ನು  ತಪ್ಪಿಸಿ ಚಾಲಕ ಮತ್ತು ಪ್ರಯಾಣಿಕರ ಜೀವ ಉಳಿಸಿದ ಪೊಲೀಸ್ ಪೇದೆಯೊಬ್ಬರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ . ಮೇ 4 ರಂದು ತುಮಕೂರು ಜಿಲ್ಲೆಯಿಂದ ಗದಗ ಜಿಲ್ಲೆಗೆ ಲೋಕಸಭಾ ಚುನಾವಣಾ ಬಂದೋಬಸ್ತ್ ಕರ್ತವ್ಯಕ್ಕೆಂದು ತುಮಕೂರು ನಗರದ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್‍ ಟೇಬಲ್ ರಾಘವೇಂದ್ರ ಕ್ಷತ್ರಿ ಮತ್ತು ಸಿಬ್ಬಂದಿಯವರು ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಮಧ್ಯರಾತ್ರಿಯ ಸಮಯದಲ್ಲಿ ಚಿತ್ರದುರ್ಗ ಸಮೀಪ ಬಸ್ಸಿನ ಚಾಲಕರಿಗೆ ಹೃದಯಾಘಾತವಾಗಿ ಬಸ್ಸನ್ನು ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದರು. ಇದನ್ನು ಗಮನಿಸಿದ ಸಂಚಾರಿ ಪೊಲೀಸ್ ಪೇದೆ ರಾಘವೇಂದ್ರ ಕ್ಷತ್ರಿ ಅವರು ತಕ್ಷಣ ಬಸ್ಸನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿ, ಚಾಲಕನನ್ನು 112 ಅಂಬುಲೆನ್ಸ್ ಮೂಲಕ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದರು. ಬಸ್ಸಿನ ಚಾಲಕನ ಪ್ರಾಣ ಮತ್ತು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸರನ್ನು ರಕ್ಷಿಸಿದ ರಾಘವೇಂದ್ರ ಕ್ಷತ್ರಿರವರಿಗೆ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. ರವರು ತಮ್ಮ ಸಮಯ ಪ್ರಜ್ಞೆಯನ್ನು ಅಭಿನಂದಿಸಿ,…

Read More

ಉತ್ತರ ಪ್ರದೇಶ: ವೇಗವಾಗಿ ಬರುತ್ತಿದ್ದ ಮರಳು ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಗುಡಿಸಲಿನ ಮೇಲೆ ಏಕಾಏಕಿ ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಎಂಟು ಮಂದಿ ಮೃತಪಟ್ಟಿರುವ ಘಟನೆ ಹರ್ದೋಯ್ ಜಿಲ್ಲೆಯ ಮಲ್ಲವನ್ ಕೊಟ್ವಾಲಿ ಪ್ರದೇಶದ ಉನ್ನಾವೋ ಸಮೀಪ ಮಂಗಳವಾರ ರಾತ್ರಿ ನಡೆದಿದೆ. ಮಲ್ಲವನ್ ಪಟ್ಟಣದ ಉನ್ನಾವ್ ರಸ್ತೆಯಲ್ಲಿರುವ ಚುಂಗಿ ನಂಬರ್ 2 ಬಳಿ ನಾಟ್ ಸಮುದಾಯದ ಜನರು ರಸ್ತೆಬದಿಯ ಗುಡಿಸಲುಗಳಲ್ಲಿ ವಾಸ ಮಾಡುತ್ತಿದ್ದರು. ಮಂಗಳವಾರ ಮಧ್ಯರಾತ್ರಿ ಕಾನ್ಪುರದಿಂದ ಹರ್ದೋಯ್‌ ಗೆ ಹೋಗುತ್ತಿದ್ದ ಮರಳು ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಗುಡಿಸಲು ಮೇಲೆ ಪಲ್ಟಿಯಾಗಿದೆ. ಗುಡಿಸಲಿನಲ್ಲಿ ಮಲಗಿದ್ದ ಒಂದೇ ಕುಟುಂಬದ ಎಂಟು ಮಂದಿ ಮೃತಪಟ್ಟಿದ್ದಾರೆ. ಈ ಸಂಬಂಧ ಲಾರಿ ಚಾಲಕ ಅವಧೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಸ್ಥಳೀಯರ ನೆರವಿನಿಂದ ಜೆಸಿಬಿ ಮೂಲಕ ಲಾರಿಯನ್ನು ತೆರವುಗೊಳಿಸಿದ್ದಾರೆ. ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.…

Read More

ಬೆಳಗಾವಿ: ಬೆಳಗಾವಿಯ ಜಿಲ್ಲಾ ಕೋರ್ಟ್ ನಲ್ಲಿ ವ್ಯಕ್ತಿಯೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ. ಪಾಕಿಸ್ತಾನ ಪರ ಘೋಷಣೆ ಕೂಗುತ್ತಿದ್ದಂತೆ ಅಲ್ಲಿದ್ದ ವಕೀಲರು ಹಾಗೂ ಸಾರ್ವಜನಿಕರು ಆರೋಪಿ ಜಯೇಶ್ ಪೂಜಾರಿಗೆ ಧರ್ಮದೇಟು ನೀಡಿದ್ದಾರೆ. ಕೂಡಲೆ ಆರೋಪಿ ಜಯೇಶ್ ನನ್ನು ರಕ್ಷಿಸಿ ಪೊಲೀಸರು ಆತನನ್ನು ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಆರೋಪಿ ಜಯೇಶ್ ಪೂಜಾರಿ ಪೂಜಾರಿ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಕುಮಾರ ಹಾಗೂ ಕೇಂದ್ರ ಸಚಿವ ನಿತೀನ್ ಗಡ್ಕರಿಗೂ ಜೀವ ಬೆದರಿಕೆ ಮಾಡಿದ್ದ ಎನ್ನಲಾಗುತ್ತಿದ್ದು, ಹಿಂಡಲಗಾ ಜೈಲಿನಿಂದಲೇ ಗಡ್ಕರಿಗೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗುತ್ತಿದೆ. ಅಲೋಕ್ ಕುಮಾರ್ ಅವರಿಗೆ ಜೈಲಿನಿಂದಲೇ ಕರೆಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಾಣೆಗಾಗಿ ಪೊಲೀಸರು ನ್ಯಾಯಾಲಯಕ್ಕೆ ಕರೆ ತಂದಾಗ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ನಾಯಕರು ಮೋದಿಯವರ ಕುಟುಂಬ ಎಂಬ ಪದ ಬಳಸಿ ಪ್ರಚಾರವನ್ನು ನಡೆಸಿದರು.  ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಹೆಸರಿನ ಮುಂದೆ ‘ಮೋದಿ ಕಾ ಪರಿವಾರ್’ ಎಂದು ಬರೆದುಕೊಂಡಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ‘ಮೋದಿ ಕಾ ಪರಿವಾರ್’ ಪದವನ್ನು ತೆಗೆದುಹಾಕುವಂತೆ ಮನವಿ ಮಾಡಿದ್ದಾರೆ. “ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ, ಭಾರತದಾದ್ಯಂತ ಜನರು ನನ್ನ ಮೇಲಿನ ಪ್ರೀತಿಯ ಸಂಕೇತವಾಗಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ‘ಮೋದಿ ಕಾ ಫ್ಯಾಮಿಲಿ’ ಎಂದು ಬರೆದಿದ್ದರು. ಇದು ನನಗೆ ಸಾಕಷ್ಟು ಶಕ್ತಿಯನ್ನು ನೀಡಿತು. ಭಾರತದ ಜನರು ಎನ್ಡಿಎಗೆ ಸತತ ಮೂರನೇ ಅವಧಿಗೆ ಬಹುಮತ ನೀಡಿದ್ದಾರೆ, ಇದು ಒಂದು ರೀತಿಯ ದಾಖಲೆಯಾಗಿದೆ ಮತ್ತು ನಮ್ಮ ದೇಶದ ಸುಧಾರಣೆಗಾಗಿ ಕೆಲಸ ಮಾಡುವುದನ್ನು ಮುಂದುವರಿಸಲು ನಮಗೆ ಜನಾದೇಶವನ್ನು ನೀಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬೆಂಬಲಿಗರಿಗೆ…

Read More

ಕುವೈತ್: ಕುವೈತ್ ನ ಮಂಗಾಫ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಐವರು ಭಾರತೀಯರು ಸೇರಿದಂತೆ ಕನಿಷ್ಠ 53 ಮಂದಿ ಸಜೀವ ದಹನವಾಗಿದ್ದಾರೆ. ಕುವೈತ್ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 53 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಸಂತಾಪ ಸೂಚಿಸಿದೆ. “ಈ ದುರಂತದಿಂದ ನಾವು ತೀವ್ರ ಆಘಾತಕ್ಕೊಳಗಾಗಿದ್ದೇವೆ” ಎಂದು ಇಎಎಂ ಡಾ.ಎಸ್.ಜೈಶಂಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕುವೈತ್‌ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಅಲ್ಲದೇ ಅಗ್ನಿ ಅವಘಡದಲ್ಲಿ ಕೆಲವು ಭಾರತೀಯ ಕಾರ್ಮಿಕರು ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಯಭಾರ ಕಚೇರಿಯು ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡಲಿದೆ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ನನ್ನ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಮಾಡುವಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ನಾನು ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸವಾಗಿತ್ತು. ಎಫ್‌ಐಆರ್ ದಾಖಲಾದ ನಂತರ ವಿಚಾರಣೆಗೆ ಹಾಜರಾಗಿದ್ದೆ. ಏ.12ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ನನ್ನ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಮಾಡುವಂತೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇರೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ…

Read More

ಪಾಪ್ ಕಾರ್ನ್‌ ಮಂಕಿ ಟೈಗರ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಸಪ್ತಮಿ ಗೌಡ. ಕಾಂತಾರ ಚಿತ್ರದ ಮೂಲಕ ಪ್ಯಾನ್‌ ಇಂಡಿಯಾ ನಟಿಯಾಗಿಬಿಟ್ಟರು. ನಟ ಯುವ ರಾಜ್‌ ಕುಮಾರ್ ಮತ್ತು ಶ್ರೀದೇವಿ ಬೈರಪ್ಪ ದಾಂಪತ್ಯದಲ್ಲಿ ಬಿರುಕು ಮೂಡಲು ನಟಿ ಸಪ್ತಮಿ ಗೌಡ ಕಾರಣ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗುತ್ತಿದೆ. ಯುವ ಪತ್ನಿ ಶ್ರೀದೇವಿ ಭೈರಪ್ಪ ಉತ್ತರಿಸಿದ ಲೀಗಲ್ ನೋಟಿಸ್‌ ನಲ್ಲಿ ನಟಿ ಸಪ್ತಮಿ ಹೆಸರು ಉಲ್ಲೇಖಿಸಿದ್ದರು. ಯುವ ಹಾಗೂ ಸಪ್ತಮಿ ನಡುವೆ ಸಂಬಂಧವಿದೆ ಎಂದು ಆರೋಪಿಸಿದ್ದಾರೆ. ಇದು ಸಪ್ತಮಿ ಗೌಡ ಕೆರಳಿಸಿದೆ. ಇದೀಗ ಶ್ರೀದೇವಿ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಸಜ್ಜಾಗಿದ್ದಾರೆ. ಶ್ರೀದೇವಿ ಭೈರಪ್ಪ ಆರೋಪಗಳಿಂದ ನಟಿ ಸಪ್ತಮಿ ಗೌಡ ಹಾಗೂ ಸಪ್ತಮಿ ಕುಟುಂಬಸ್ಥರು ಆಕ್ರೋಶಗೊಂಡಿದ್ದಾರೆ. ಯುವ ರಾಜ್‌ ಕುಮಾರ್ ಹಾಗೂ ಶ್ರೀದೇವಿ ನಡುವಿನ ವಿಚ್ಚೇದನದಲ್ಲಿ ನಮ್ಮ ಪುತ್ರಿಯನ್ನು ಎಳೆದು ತಂದಿದ್ದೇಕೆ? ಯಾವ ಆಧಾರದಲ್ಲಿ ಸಪ್ತಮಿ ಗೌಡ ಹೆಸರು ಉಲ್ಲೇಖಿಸಿದ್ದಾರೆ ಎಂದು ಸಪ್ತಮಿ ಪೋಷಕರು ಆಕ್ರೋಶಗೊಂಡಿದ್ದಾರೆ. ಸಪ್ತಮಿ ಗೌಡ ಜೊತೆ ಸಮಾಲೋಚಿಸಿ…

Read More

ಯಾವುದೇ ಅನಗತ್ಯ ಹೇಳಿಕೆಗಳನ್ನು ನೀಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕ್ಯಾಬಿನೆಟ್‌ ಸಭೆಯಲ್ಲಿ ಸಚಿವರಿಗೆ ಸೂಚಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಮೋದಿ ಅವರು ತನ್ನ ಸಂಪುಟದ ಸದಸ್ಯರ ಮೊದಲ ಸಭೆ ನಡೆಸಿದರು. ಈ ವೇಳೆ, ಯಾವುದೇ ಅನಗತ್ಯ ಸಾರ್ವಜನಿಕ ಹೇಳಿಕೆಗಳನ್ನು ನೀಡಬೇಡಿ. ಅಗತ್ಯವಿರುವಾಗ ಆಯಾ ಸಚಿವಾಲಯಗಳಿಗೆ ನೇರವಾಗಿ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತ್ರ ಮಾತನಾಡಿ ಎಂದು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಂತ್ರಿಗಳು ಸರಿಯಾಗಿ ಸಮಯಪಾಲನೆ ಮಾಡಬೇಕು. ಇದರಿಂದ ಸಚಿವಾಲಯದ ಸಿಬ್ಬಂದಿಗೆ ಸಕಾರಾತ್ಮಕ ಸಂದೇಶವನ್ನು ರವಾನಿಸಿದಂತಾಗುತ್ತದೆ. ಸಚಿವಾಲಯದ ನಿರ್ಧಾರಗಳನ್ನು, ಸಂಬಂಧಿಸಿದ ಕಡತಗಳನ್ನು ರಾಜ್ಯ ಮಂತ್ರಿ ಜೊತೆ ಹಂಚಿಕೊಳ್ಳಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ. ಸಚಿವ ಸಂಪುಟ ಸಭೆ ಮುಗಿದ ಕೂಡಲೇ ಖಾತೆಗಳನ್ನು ಪ್ರಕಟಿಸಲಾಗಿದೆ. ಪ್ರಮುಖ 5 ಸಚಿವಾಲಯಗಳನ್ನು ಬಿಜೆಪಿ ತನ್ನ ಬಳಿಯೇ ಇಟ್ಟುಕೊಂಡಿದೆ ಮತ್ತು ಈ ಹಿಂದೆ ನಿರ್ವಹಣೆ ಮಾಡಿದವರಿಗೆ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ತುಮಕೂರು: ಜಿಲ್ಲೆಯ ತಿಪಟೂರು ತಾಲ್ಲೂಕಿನ ಸಿಂಗ್ರಿ ಸಂಜಪ್ಪ ಕಲ್ಯಾಣ ಮಂಟಪದಲ್ಲಿ ಇಂದು 1800ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ ನೀಡಲಾಯಿತು. ರಂಗಾಪುರ ಮಠದ ಶ್ರೀ ಗುರುಪರದೇಶಿ ಸ್ವಾಮಿಗಳ ಸಮ್ಮುಖದಲ್ಲಿ ಶಿಬಿರದ ಉದ್ಘಾಟನೆ ನಡೆಯಿತು. ಸ್ವಾಮೀಜಿಗಳು ಮದ್ಯವ್ಯಸನಿಗಳಿಗೆ ಮಾರ್ಗದರ್ಶನ ನೀಡುತ್ತಾ, “ಸಪ್ತ ವ್ಯಸನಗಳಲ್ಲಿ ಮದ್ಯವ್ಯಸನವೆಂಬುದು ಅತ್ಯಂತ ಅಪಾಯಕಾರಿ ಹಾಗೂ ಕೆಟ್ಟ ವ್ಯಸನವಾಗಿದ್ದು, ಈ ಸಮಾಜವನ್ನು ವ್ಯಸನಮುಕ್ತಗೊಳಿಸಲು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಇಂದಿಗೆ 1800 ನೇ ಹಜ್ಜೆಯನ್ನು ಯಶಸ್ವಿಯಾಗಿಟ್ಟು, ವ್ಯಸನಮುಕ್ತ ಸಮಾಜವನ್ನು ನಿರ್ಮಿಸುವ ಕಠಿಣ ಪ್ರಯತ್ನಕ್ಕೆ ಸಾಕ್ಷಿಯಾಗಿದೆ” ಎಂದು ಶುಭ ಹಾರೈಸಿದರು. ಶಿಬಿರದ ಅದ್ಯಕ್ಷರಾಗಿರುವ ಟಿ.ಸಿ. ತರಕಾರಿ ಗಂಗಾಧರ್ ರವರು ಮಾತನಾಡಿ, “ಯೋಜನೆಯ ವತಿಯಿಂದ ನಡೆಯುತ್ತಿರುವ ಈ ಮಹತ್ವದ ಸೇವೆಗೆ ನನ್ನನ್ನು ಅದ್ಯಕ್ಷರನ್ನಾಗಿ ನೇಮಿಸಿ, ಮಂಜುನಾಥಸ್ವಾಮಿಯ ಹೆಸರಿನಲ್ಲಿ ಬಡಜನರಿಗೆ ಸೇವೆ ಸಲ್ಲಿಸಲು ಒಂದು ಅವಕಾಶವನ್ನು ಕೊಟ್ಟಿರುವುದು, ನನ್ನ ಪುಣ್ಯವೇ ಸರಿ. ಈ ತರಹದ ಯೋಜನೆಯ ಯಾವುದೇ ಕಾರ್ಯಕ್ರಮವಿರಲಿ ನನ್ನ ಬೆಂಬಲ ಸದಾ ಇರುತ್ತದೆ. ಜೊತೆಗೆ ಇಲ್ಲಿರುವ ಎಲ್ಲಾ ಮದ್ಯವಸನಿಗಳು ಪಾನಮುಕ್ತರಾದಾಗ ನಮ್ಮೆಲ್ಲರ ಸೇವೆಗೆ ನಿಜವಾದ ಅರ್ಥ…

Read More