Author: admin

ಸರಗೂರು:  ವಿಶ್ವಕರ್ಮ ಸಮಾಜವು ಸಂಘಟಿತರಾಗಿ ಒಗ್ಗೂಡಿದಾಗ ಮಾತ್ರ ಸರಕಾರದ ವಿವಿಧ ಯೋಜನೆಗಳ ಸದ್ಬಳಕೆಗೆ ಸಹಕಾರಿಯಾಗಲಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ಸಲಹೆ ನೀಡಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ವಿಶ್ವಕರ್ಮ ಸಮಾಜದಿಂದ ಬುಧವಾರ ನಡೆದ ವಿಶ್ವಕರ್ಮ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಶ್ವಕರ್ಮ ಸಮುದಾಯ ಶಿಕ್ಷಣ ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಎಂಜಿನಿಯರ್‌ ಗಳಂತೆ ಕೆಲಸ ಮಾಡುತ್ತಾ ಬಂದಿದ್ದಾರೆ. ಸಮುದಾಯದವರಿಗೆ ಕಲೆ ರಕ್ತಗತವಾಗಿ ಬಂದಿದೆ. ಇಂಥ ಸಮುದಾಯದ ಅಭಿವೃದ್ಧಿಗಾಗಿ ಸರಕಾರ ವಿವಿಧ ಯೋಜನೆ ಸೌಲಭ್ಯಗಳನ್ನು ರೂಪಿಸಿದೆ. ಅದರ ಬಗ್ಗೆ ಸಮುದಾಯದವರಲ್ಲಿ ಮಾಹಿತಿಯ ಕೊರತೆಯಿದೆ. ಹೀಗಾಗಿ ಎಲ್ಲರೂ ಸಂಘಟಿತರಾಗಬೇಕು. ಅಧಿಕಾರಿಗಳೂ ಮಾಹಿತಿ ನೀಡಬೇಕು ಎಂದು ಅವರು ಸಲಹೆ ನೀಡಿದರು. ಸರಗೂರು ವಿಶ್ವಕರ್ಮ ಸಮಾಜದ ಅಧ್ಯಕ್ಷ ನಟರಾಜು ಮಾತನಾಡಿ, ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದೆ. ಸಮುದಾಯ ಇಲ್ಲದೆ ಸಮಾಜ ಕಟ್ಟಲು ಸಾಧ್ಯವಿಲ್ಲ. ವಿಗ್ರಹಗಳ ಕೆತ್ತನೆ, ಮರಗೆಲಸ,  ವ್ಯವಸಾಯಕ್ಕೆ ಅಗತ್ಯ ನೇಗಿಲು, ಮದುವೆ ಸಂದರ್ಭದಲ್ಲಿ ಅಗತ್ಯ ಮಾಂಗಲ್ಯ. ಹೀಗೆ…

Read More

ಸರಗೂರು:  ಪಟ್ಟಣದ ನಾಮಧಾರಿಗೌಡ ಸಮುದಾಯಭವನದಲ್ಲಿ ಬುಧವಾರ ನಾಮಧಾರಿಗೌಡ ಸಮಾಜದ ಪ್ರಭಾರ ಅಧ್ಯಕ್ಷ ವಿನೋದ್‌ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮಾಜದ ಅಧ್ಯಕ್ಷರಾಗಿ ನಿಧನರಾದ ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಪಂ ಮಾಜಿ ಅಧ್ಯಕ್ಷ ಪಿ.ರವಿ ಮಾತನಾಡಿ, “ಭೀಮರಾಜ್ ಅವರು ಸಮಾಜದ ಅಧ್ಯಕ್ಷರಾಗಿ ಮೂರು ವರ್ಷ ಉತ್ತಮ ಸೇವೆ ಸಲ್ಲಿಸಿದ್ದಾರೆ. ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾಗಿ ಸಾಕಷ್ಟು ವಿದ್ಯಾರ್ಥಿಗಳಿಗೆ ವಿದ್ಯೆದಾನ ಮಾಡಿದ್ಧಾರೆ. ಇದಲ್ಲದೆ ಸಮಾಜದ ಅಭಿವೃದ್ಧಿಗೂ ಶ್ರಮಿಸಿದ್ದು, ರಾಜಕೀಯವಾಗಿಯೂ ಗುರುತಿಸಿಕೊಂಡಿದ್ದರು. ಸದಾ ಹಸನ್ಮುಖಿಯಾಗಿದ್ದುಕೊಂಡು ಸಮಾಜದ ಬಂಧುಗಳಿಗೆ ದಾರಿದೀಪವಾಗಿದ್ದರು. ಇಂಥವರ ನಿಧನದಿಂದ ಸಮಾಜಕ್ಕೆ ತುಂಬಾಲಾರದ ನಷ್ಟವಾಗಿದೆ” ಎಂದು ಗುಣಗಾನ ಮಾಡಿದರು. ಸಮಾಜದ ಪ್ರಭಾರ ಅಧ್ಯಕ್ಷ ವಿನೋದ್‌ ಕುಮಾರ್ ಮಾತನಾಡಿ, “ಸರಗೂರು ತಾಲೂಕು ಹೋರಾಟ ಸಮಿತಿಯಲ್ಲಿ ಮುಂಚೂಣಿಯಲ್ಲಿದ್ದ ಭೀಮರಾಜ್ ಅವರ ಹೋರಾಟದ ಫಲವಾಗಿ ಸರಗೂರು ನೂತನ ತಾಲೂಕಾಗಿ ಘೋಷಣೆಯಾಯಿತು. ಬಿ.ಮಟಕೆರೆ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿದ್ದು, ಶಾಲೆಯ ಅಭಿವೃದ್ಧಿ ಸಾಕಷ್ಟು ಪರಿಶ್ರಮವಹಿಸಿದ್ದರು. ಸಮಾಜದಲ್ಲಿ ಉತ್ತಮವಾದ ಸೇವೆ ಮಾಡಿದ್ದಾರೆ” ಎಂದು ತಿಳಿಸಿದರು. ಇದೇ…

Read More

ಕಾರವಾರ: ಭಟ್ಕಳದ ಮುಗ್ಗುಮ್ ಕಾಲೋನಿಯಲ್ಲಿ ದನಗಳನ್ನು ಕೊಂದು, ಅವಶೇಷಗಳನ್ನು ಸಮೀಪದ ಅರಣ್ಯ ಭೂಮಿಯಲ್ಲಿ ಎಸೆದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಭಟ್ಕಳದ ಉಪ ವಲಯ ಅರಣ್ಯಾಧಿಕಾರಿ ಮಾರುತಿ ಅವರ ದೂರಿನ ಮೇಲೆ ಸೆಪ್ಟೆಂಬರ್ 11 ರಂದು ಪ್ರಕರಣ ದಾಖಲಿಸಲಾಗಿದೆ.  ಬೇರೆಡೆ ದನಗಳನ್ನು ಕೊಂದಿರುವ ಅಪರಿಚಿತ ವ್ಯಕ್ತಿಗಳು, ಚರ್ಮ, ಮೂಳೆಗಳು ಮತ್ತು ಇತರ ಅವಶೇಷಗಳನ್ನು ಅರಣ್ಯ ಭೂಮಿಗೆ ಅತಿಕ್ರಮಣ ಮಾಡಿ ಆ ಪ್ರದೇಶದಲ್ಲಿ ಎಸೆದಿದ್ದಾರೆ ಎಂದು ಅವರು ಆರೋಪಿಸಿದರು. ಕರ್ನಾಟಕ ವಧೆ ತಡೆ ಮತ್ತು ದನಗಳ ಸಂರಕ್ಷಣಾ ಕಾಯ್ದೆ, 2020ರ ಸೆಕ್ಷನ್ 4 ಮತ್ತು 12 ಮತ್ತು ಭಾರತೀಯ ನ್ಯಾಯ ಸಂಹಿತೆಯ 329(3) ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಶೇಷ ತಂಡಗಳನ್ನು ರಚಿಸಿ, ತನಿಖೆಯ ನಂತರ ಆರೋಪಿಗಳನ್ನು ಬುಧವಾರ ಬಂಧಿಸಲಾಯಿತು. ಅಪರಾಧಕ್ಕೆ ಬಳಸಲಾಗಿದೆ ಎನ್ನಲಾದ ವಾಹನವನ್ನು ವಶಪಡಿಸಿಕೊಂಡು, ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಬೆಳಗಾವಿ: ಡಿಸೆಂಬರ್ 31 ರ ಮೊದಲು ಸರ್ಕಾರವು ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಹೊಸ ಚಿಕ್ಕೋಡಿ ಜಿಲ್ಲೆಯನ್ನು ರಚಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ಭರವಸೆ ನೀಡಿದ್ದಾರೆ. ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಸದಸ್ಯರು ನಗರದಲ್ಲಿ ಹೆಬ್ಬಾಳ್ಕರ್ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸರ್ಕಾರದ ಯೋಜನೆಗಳ ಪ್ರಯೋಜನಗಳು ಜನರಿಗೆ ತಪ್ಪದೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಬೆಳಗಾವಿ ಜಿಲ್ಲೆಯನ್ನು ವಿಭಜಿಸುವುದು ಅತ್ಯಗತ್ಯ ಎಂದು ಹೇಳಿದರು. ಸರ್ಕಾರವು ಈಗಾಗಲೇ ಬೆಳಗಾವಿಯನ್ನು ವಿಭಜಿಸಲು ನಿರ್ಧರಿಸಿದ್ದು, ಈ ಕ್ರಮಕ್ಕೆ ತಮ್ಮ ಬೆಂಬಲವಿದೆ ಎಂದರು. ಸಮಿತಿ ಸದಸ್ಯರು MLC ಚನ್ನರಾಜ್ ಹಟ್ಟಿಹೋಳಿ ಮತ್ತು ಮಾಜಿ MLC ಮಹಾಂತೇಶ್ ಕವಟಗಿಮಠ ಅವರಿಗೂ ಪ್ರಾತಿನಿಧ್ಯಗಳನ್ನು ಸಲ್ಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ (ಜನ ಜಾತಿ ಗಣತಿ) ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ. ನಗರದಲ್ಲಿ ಮಂಗಳವಾರ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಎಐಯುಟಿಯುಸಿ ವತಿಯಿಂದ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಮೋಹನ್ ಅವರಿಗೆ ಮನವಿ ಸಲ್ಲಿಸಿ, ಸಮೀಕ್ಷೆಯಿಂದ ಕೈ ಬಿಡುವಂತೆ ಒತ್ತಾಯಿಸಲಾಯಿತು. ‘ಆಶಾ ಕಾರ್ಯಕರ್ತೆಯರು ಸಮೀಕ್ಷೆಗೆ ಪೂರ್ವಭಾವಿಯಾಗಿ ಪ್ರತಿ ಮನೆಗೆ ತೆರಳಿ ನಮೂನೆ ವಿತರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಹಿಂದೆ ಸಮೀಕ್ಷೆ ನಡೆಸಿದ್ದಕ್ಕೆ ನಿಗದಿಪಡಿಸಿದ ಗೌರವ ಧನದಲ್ಲಿ ಒಂದು ಪೈಸೆಯನ್ನೂ ನೀಡಿಲ್ಲ. ಈ ವರ್ಷ ಗೌರವ ಧನವೂ ಹೆಚ್ಚಿಸಿಲ್ಲ. ಸಮೀಕ್ಷೆಗೆ ಸ್ವಂತ ಹಣ ಖರ್ಚು ಮಾಡಿ, ಬರಿಗೈನಲ್ಲಿ ಮನೆಗೆ ಬರುವಂತಾಗಿದೆ’ ಎಂದು ಕಾರ್ಯಕರ್ತೆಯರು ಅಳಲು ತೋಡಿಕೊಂಡರು. ಸಮೀಕ್ಷೆಯಲ್ಲಿ ಭಾಗವಹಿಸುವ ಆಶಾ ಕಾರ್ಯಕರ್ತೆಯರಿಗೆ ಗ್ರಾಮೀಣ ಭಾಗದಲ್ಲಿ 5 ಸಾವಿರ, ನಗರದಲ್ಲಿ 10 ಸಾವಿರ ಗೌರವಧನ ನಿಗದಿ ಮಾಡಬೇಕು. ಇಲ್ಲವೇ ಸಮೀಕ್ಷೆ ಕಾರ್ಯದಿಂದ ಕೈಬಿಡಬೇಕು. ಈ ಹಿಂದೆ ನಡೆಸಿದ್ದ ಗ್ಯಾರಂಟಿ ಸಮೀಕ್ಷೆಯ ಬಾಕಿ…

Read More

ಬೆಂಗಳೂರು: ರಾಜ್ಯದಲ್ಲಿ ಈಗಿರುವುದು ಜನಾದೇಶದಿಂದ ಚುನಾಯಿತ  ಸರ್ಕಾರ ಅಲ್ಲ, ಮತಗಳ್ಳತನದ ಮೂಲಕ ಅಧಿಕಾರ ಕಬಳಿಸಿರುವ ಮಾಫಿಯಾ ಸರ್ಕಾರ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿದ್ದರಾಮಯ್ಯನವರನ್ನು 1999ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷ ಹೇಗೆ ಸೋಲಿಸಿತು? 2018ರಲ್ಲಿ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಹೇಗೆ ಗೆದ್ದರು? ಎನ್ನುವುದಕ್ಕೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಚುನಾವಣಾ ಅಕ್ರಮವೇ ಉದಾಹರಣೆಯಾಗಿದೆ 7 ಎಂದು ವಾಗ್ದಾಳಿ ನಡೆಸಿದ್ದಾರೆ. ಇವಿಎಂಗಳಂತಹ ಆಧುನಿಕ ತಂತ್ರಜ್ಞಾನ ಬಂದಮೇಲೂ ಕಾಂಗ್ರೆಸ್‌‍ ಪಕ್ಷ ಇಂಥ ಚುನಾವಣಾ ಅಕ್ರಮ ಮಾಡುತ್ತದೆ ಎಂದರೆ, ಮತಪೆಟ್ಟಿಗೆ ಇದ್ದ ಕಾಲದಲ್ಲಿ ಕಾಂಗ್ರೆಸ್‌‍ ಪಕ್ಷ ಹೇಗೆ ಚುನಾವಣೆಗಳನ್ನು ಗೆಲ್ಲುತ್ತಿತ್ತು ಎನ್ನುವುದನ್ನು ನೀವೇ ಊಹಿಸಿಕೊಳ್ಳಿ! ಕಾಂಗ್ರೆಸ್‌‍ ಪಕ್ಷ ಮತಗಳ್ಳತನದ ಮಾಫಿಯಾ ಎಂದು ಅವರು ಟೀಕಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಬಹಳ ದಿನಗಳ ಬಳಿಕ ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ವಿಶೇಷ ತನಿಖಾ ದಳ(ಎಸ್ ಐಟಿ) ಪರಿಶೀಲನೆಗೆ ನಡೆಸಿದ್ದು, ಸೌಜನ್ಯ ಅವರ ಮಾವ ವಿಠಲ್‌ ಗೌಡ ಬಂಗ್ಲಗುಡ್ಡ ಪ್ರದೇಶದಲ್ಲಿ ಮೂಳೆಗಳು ಪತ್ತೆಯಾಗಿರುವ ಬಗ್ಗೆ ನೀಡಿರುವ ಹೇಳಿಕೆಯ ಬೆನ್ನಲ್ಲೇ ಈ ಕಾರ್ಯಾಚರಣೆ ಆರಂಭವಾಗಿದೆ. ಸುಮಾರು 50 ರಿಂದ 60 ಮಂದಿಯ ತಂಡ ಬಂಗ್ಲೆಗುಡ್ಡ ದಟ್ಟ ಅರಣ್ಯ ಪ್ರದೇಶವನ್ನು ಪ್ರವೇಶಿಸಿ ಶೋಧ ನಡೆಸುತ್ತಿದೆ. ಎಸ್‌ ‍ಐಟಿಯ ತನಿಖಾಧಿಕಾರಿ ಜಿತೇಂದ್ರಕುಮಾರ ದಯಾಮ ಹಾಗೂ ಎಸ್‌‍ಪಿ ಸೈಮನ್‌ ಅವರ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ಹಾಗೂ ಪಂಚನಾಮೆ ಮಾಡಲಾಗಿದೆ. ತಂಡದಲ್ಲಿ ಅರಣ್ಯ ಇಲಾಖೆಯ 13ಕ್ಕೂ ಹೆಚ್ಚು ಅಧಿಕಾರಿ ಹಾಗೂ ಸಿಬ್ಬಂದಿಗಳಿದ್ದರು. ಕ್ರೈಂ ಸೀನ್‌ನ 9ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಬಾಂಬ್‌ ಪತ್ತೆಗಾಗಿ ಬಳಸುವ ಮೆಟಲ್‌ ಡಿಟೆಕ್ಟರ್‌ ಯಂತ್ರಗಳನ್ನು ಉಪಯೋಗಿಸಲಾಗಿದೆ. ವೈದ್ಯರು, ಕಂದಾಯ ಇಲಾಖೆಯ ಕೆಲ ಹಂತದ ಅಧಿಕಾರಿಗಳು, ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರು, ಗ್ರಾಮ ಪಂಚಾಯಿತಿ ಜನ ಪ್ರತಿನಿಧಿಗಳು ಈ ತಂಡದಲ್ಲಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಕಲಬುರಗಿ: ಭಾರೀ ಮಳೆಯಿಂದಾಗಿ ಬೆಳೆ ನಷ್ಟ ಸಂಭವಿಸಿದ್ದು ರೈತರ ಅನುಕೂಲಕ್ಕಾಗಿ ಬೆಳೆ ಸಾಲ ಮನ್ನಾ ಮಾಡಬೇಕೆಂಬ ಬೇಡಿಕೆಯನ್ನು ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಸಂಭವಿಸಿರುವ ಬೆಳೆಹಾನಿಯನ್ನು ಕಂದಾಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ನಡೆಸಲು ಆದೇಶಿಸಲಾಗಿದೆ. ವಾರದಲ್ಲಿ ಈ ಸಮೀಕ್ಷೆ ಪೂರ್ಣಗೊಂಡು ವರದಿ ಸಲ್ಲಿಕೆಯಾಗಲಿದೆ. ಆ ಬಳಿಕ ಬೆಳೆನಷ್ಟ ಪರಿಹಾರ ಪಾವತಿಸುವುದಾಗಿ ಹೇಳಿದರು. ಈ ಬಾರಿ ಅದೃಷ್ಟವಶಾತ್‌ ರಾಜ್ಯದ ಹಲವು ಕಡೆ ವಾಡಿಕೆಗಿಂತ ಶೇ. 4ರಷ್ಟು ಹೆಚ್ಚು ಮಳೆಯಾಗಿದೆ. ಬೀದರ್‌, ಕಲಬುರಗಿ, ಯಾದಗಿರಿ ಸೇರಿ ಹಲವಾರು ಜಿಲ್ಲೆಗಳಲ್ಲಿ ಬೆಳೆನಷ್ಟ ಹೆಚ್ಚಾಗಿದೆ. ಕೂಡಲೇ ಪರಿಹಾರ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಳೆ ನಷ್ಟದ ಬಗ್ಗೆ ಮಧ್ಯಂತರ ವರದಿ ಪಡೆದಿಲ್ಲ. ಜಂಟಿ ಸಮೀಕ್ಷೆಯ ಅಂತಿಮ ವರದಿ ಪಡೆದು, ಬಳಿಕ ಕ್ರಮ ಕೈಗೊಳ್ಳಲಾಗುವುದು. 2024-25ನೇ ಸಾಲಿಗೆ ಬೆಳೆವಿಮೆ ಯೋಜನೆಯಡಿ 656 ಕೋಟಿ ರೂ. ಪರಿಹಾರ ಪಾವತಿಸಲಾಗಿದೆ. ಇದು ಎಲ್ಲಾ ರಾಜ್ಯಗಳಿಗಿಂತಲೂ ಹೆಚ್ಚಿನ ಮೊತ್ತವಾಗಿದೆ. ಬೆಳೆ…

Read More

ಬೀದರ್: ಮನೆಯ ಮೂರನೇ ಮಹಡಿಯಿಂದ ತಳ್ಳಿ 6 ವರ್ಷದ ಬಾಲಕಿ ಶಾನವಿಯನ್ನು ಕೊಂದ ಆರೋಪದಲ್ಲಿ ಮಲತಾಯಿಯನ್ನು ಬಂಧಿಸಲಾಗಿದ್ದು, ಆಕೆ ತನಿಖೆಯಲ್ಲಿ ತಪ್ಪೊಪ್ಪಿಕೊಂಡಿದ್ದಾಳೆ ಎಂದು  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ. ಆ.22 ರಂದು ಶಾನವಿ ಮೃತಪಟ್ಟ ಘಟನೆ ಮೊದಲು ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾಳೆ ಎಂದು ಪ್ರಕರಣ ದಾಖಲಾಗಿತ್ತು. ಆದರೆ, ಸೆ.13ರಂದು ಸಾರ್ವಜನಿಕರು ಒದಗಿಸಿದ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದಾಗ, ಮಲತಾಯಿ ಉದ್ದೇಶಪೂರ್ವಕವಾಗಿ ತಳ್ಳಿರುವುದು ಬಹಿರಂಗವಾಗಿದೆ. ನಂತರ ಶಾನವಿಯ ಅಜ್ಜಿ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಾಲಾಗಿತ್ತು ಆರೋಪಿಯನ್ನು ಅದೇ ದಿನ ಬಂಧಿಸಿ ವಿಚಾರಣೆ ನಡೆಸಿದಾಗ, ಶಾನವಿಯನ್ನು ತಳ್ಳಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ತನಿಖೆಯಲ್ಲಿ ತಿಳಿದುಬಂದಂತೆ, ಆರೋಪಿಣಿ ಮೃತ ಶಾನವಿಯ ತಂದೆಯ ಎರಡನೇ ಹೆಂಡತಿ. ಶಾನವಿ ಮೊದಲ ಹೆಂಡತಿಯ ಮಗಳು. ಆರೋಪಿಗೆ ಈಗಾಗಲೇ ಎರಡು ಅವಳಿ ಮಕ್ಕಳು ಇದ್ದು, ಮುಂದಿನ ದಿನಗಳಲ್ಲಿ ಆಸ್ತಿ ಹಂಚಿಕೆಯಲ್ಲಿ ಶಾನವಿಗೂ ಪಾಲು ಸಿಗಬಹುದೆಂಬ ಭಯದಿಂದಲೇ ಈಕೆಯು ಮಗುವನ್ನು ಕೊಂದಿರುವುದು ಸ್ಪಷ್ಟವಾಗಿದೆ ಎಂದು…

Read More

ಚಾಮರಾಜನಗರ: ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಕೊಳ್ಳೇಗಾಲದ ಯಳಂದೂರು ಮಾರ್ಗಮಧ್ಯದ ಎಳೆ ಪಿಳ್ಳಾರಿ ದೇವಸ್ಥಾನದ ಬಳಿ ಘಟನೆ ನಡೆದಿದೆ. ಸುಮಂತ್ (22), ನಿತಿನ್ ಕುಮಾರ್ (16) ಸಾವನ್ನಪ್ಪಿದ ದುರ್ದೈವಿಗಳು.  ಲಾರಿಗೆ ಟೊಮ್ಯಾಟೊ ತುಂಬಿಕೊಂಡು ಹೋಗುತ್ತಿದ್ದ ಆಟೋ ಡಿಕ್ಕಿ ಹೊಡೆದಿದೆ. ಅಪಘಾತವಾಗುತ್ತಿದ್ದಂತೆ ರಸ್ತೆಗೆ ಟೊಮ್ಯಾಟೊ ಬಾಕ್ಸ್‌ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಳೆಪಿಳ್ಳಾರಿ ಸಮೀಪದ ಜಮೀನಿನಿಂದ ಕಬ್ಬು ತುಂಬಿಸಿಕೊಂಡ ಲಾರಿ ಕಾರ್ಖಾನೆಗೆ ತೆರಳಲು ರಸ್ತೆಯ ಬಳಿ ನಿಂತಿತ್ತು. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ ಹಿಂಬದಿಂದ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More