Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ನಟ ದರ್ಶನ್ ಅವರ ಪತ್ನಿ ನಾನು, ಪವಿತ್ರಾ ಗೌಡ ಅಲ್ಲ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ. 2003ರಲ್ಲಿ ದರ್ಶನ್ ಮತ್ತು ನಾನು ಮದುವೆ ಆಗಿದ್ದೀವಿ. ಆ ವರ್ಷದ ಮೇ 19 ರಂದು ದರ್ಶನ್ ಅವರ ಧರ್ಮ ಪತ್ನಿಯಾಗಿದ್ದೀನಿ. ನಮ್ಮಿಬ್ಬರಿಗೆ ಒಬ್ಬ ಮಗ ಇದ್ದಾನೆ. ಪವಿತ್ರಗೌಡ, ಸಂಜಯ್ ಸಿಂಗ್ ಎಂಬವರನ್ನು ಮದುವೆ ಆಗಿದ್ದಾರೆ. ಅವರಿಬ್ಬರಿಗೂ ಒಬ್ಬಳು ಹೆಣ್ಣು ಮಗಳಿದ್ದಾಳೆ ಎಂದು ವಿಜಯಲಕ್ಷ್ಮಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನೀವು ಮಾಧ್ಯಮ ಗೋಷ್ಠಿಯಲ್ಲಿ ದರ್ಶನ್ ಅವರ ಪತ್ನಿ ಪವಿತ್ರಗೌಡ ಅಂತಾ ಹೇಳಿದ್ದೀರಿ. ಗೃಹ ಸಚಿವರೂ ಕೂಡ ಒಮ್ಮೆ ಅದನ್ನೇ ಉಚ್ಛಾರಣೆ ಮಾಡಿದ್ದಾರೆ. ಹೀಗಾಗಿ ಪೊಲೀಸ್ ರೆಕಾರ್ಡ್ ಅಲ್ಲಿ ಪವಿತ್ರಗೌಡ ದರ್ಶನ್ ಅವರ ಪತ್ನಿ, ದರ್ಶನ್ ಅವರನ್ನು ಮದುವೆಯಾಗಿದ್ದಾರೆ ಎಂದು ಉಲ್ಲೇಖಿಸಬೇಡಿ. ದಾಖಲೆಗಳಲ್ಲಿ ದರ್ಶನ್ ಅವರ ಪತ್ನಿ ಎಂದು ಬರೆಯಬೇಡಿ ಎಂದು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ಈಗಾಗಲೇ ಪ್ರಾರಂಭವಾಗಿರುವ ಮನೆಗಳ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಕೃಷ್ಣಾದಲ್ಲಿ ಬುಧವಾರ ವಸತಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಕೊಳಚೆ ನಿರ್ಮೂಲನೆ ಮಂಡಳಿ ಅಡಿಯಲ್ಲಿ 82 ಸಾವಿರ ಮನೆಗಳು, ರಾಜೀವ್ ಗಾಂಧಿ ವಸತಿ ನಿಗಮ ಅಡಿಯಲ್ಲಿ47800 ಮನೆಗಳು ಒಟ್ಟು 1.30 ಲಕ್ಷ ಮನೆಗಳು ನಿರ್ಮಾಣದ ವಿವಿಧ ಹಂತಗಳಲ್ಲಿದ್ದು, ಅವುಗಳ ನಿರ್ಮಾಣ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ತಿಳಿಸಿದರು. ಪ್ರತಿ ಮನೆಯ ನಿರ್ಮಾಣದ ಘಟಕ ವೆಚ್ಚ 6 ರಿಂದ 7.5 ಲಕ್ಷಗಳಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯಧನವನ್ನು ಹೊರತುಪಡಿಸಿ, ಬಾಕಿ ಸುಮಾರು 4 ರಿಂದ 5 ಲಕ್ಷ ರೂಪಾಯಿಗಳ ವಂತಿಕೆ ಮೊತ್ತವನ್ನು ಫಲಾನುಭವಿಗಳೇ ಭರಿಸಬೇಕಾಗಿತ್ತು. ಈ ಮೊತ್ತವನ್ನು ಆರ್ಥಿಕವಾಗಿ ಆಶಕ್ತರಾಗಿರುವ ಕೊಳಗೇರಿ ನಿವಾಸಿಗಳು ಪಾವತಿಸಲು ಕಷ್ಟಕರವಾಗಿ ಮನೆಗಳ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದವು. ಆದುದರಿಂದ, ಫಲಾನುಭವಿಗಳ ಮೇಲಿನ ವಂತಿಕೆ ಹೊರೆಯನ್ನು ಕಡಿಮೆ…
ಬೆಂಗಳೂರು : ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜಿನ ಸೆಕ್ಯುರಿಟಿ ಗಾರ್ಡ್ ಗೆ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಅಮೃತಹಳ್ಳಿಯ ಖಾಸಗಿ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಅಸ್ಸಾಂ ಮೂಲದ ಜೈಕಿಶೋರ್ ರಾಯ್ (52) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಿಹಾರ ಮೂಲದ 22 ವರ್ಷದ ಆರೋಪಿ ಭಾರ್ಗವ್ ಎಂಬಾತನನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ. ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಎ. ವ್ಯಾಸಂಗ ಮಾಡುತ್ತಿದ್ದ ಭಾರ್ಗವ್, ಜು.3ರ ಬುಧವಾರ ಮಧ್ಯಾಹ್ನ 3.30ರ ಸುಮಾರಿಗೆ ಪಾನಮತ್ತನಾಗಿ ಕಾಲೇಜು ಬಳಿ ಬಂದಿದ್ದ. ಕಾಲೇಜಿನಲ್ಲಿ ಕಾರ್ಯಕ್ರಮ ಸಹ ಇತ್ತು. ಪಾನಮತ್ತನಾಗಿದ್ದ ಭಾರ್ಗವ್‍ನನ್ನು ಕಾಲೇಜು ಆವರಣದೊಳಗೆ ಬಿಡಲು ಜೈಕಿಶೋರ್ ರಾಯ್ ನಿರಾಕರಿಸಿದ್ದರು ಎನ್ನಲಾಗಿದೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿತ್ತು. ಬಳಿಕ ಸ್ಥಳದಿಂದ ತೆರಳಿದ್ದ ಭಾರ್ಗವ್, ಅಂಗಡಿಯೊಂದರಲ್ಲಿ ಚಾಕು ಖರೀದಿಸಿ ಕೆಲ ಸಮಯದ ಬಳಿಕ ಪುನಃ ಕಾಲೇಜು ಬಳಿ ಬಂದಿದ್ದ. ಕಾಲೇಜು ಪ್ರವೇಶಿಸಲು ನಿರಾಕರಿಸಿದ್ದ ಜೈಕಿಶೋರ್ ರಾಯ್ ಅವರ ಎದೆಗೆ…
ಬೆಂಗಳೂರು: ನಮ್ಮ ಸರಕಾರದ ಆಡಳಿತಾವಧಿಯಲ್ಲಿ ಯಾವುದೇ ಹಗರಣಗಳು ನಡೆದಿಲ್ಲ. ಎಲ್ಲ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ. ಅವರ ಎಲ್ಲ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಮುಡಾದಲ್ಲಿ ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ ನಡೆಸಿದ ಕುರಿತು ಬುಧವಾರ ಚನ್ನಪಟ್ಟಣದಲ್ಲಿ ಅವರು ಸುದ್ದಿಗಾರರಿಗೆ ಈ ಮೇಲಿನಂತೆ ಪ್ರತಿಕ್ರಿಯಿಸಿದರು. ಬೇಬಿ ಬೆಟ್ಟದಲ್ಲಿ ಪ್ರಯೋಗಾತ್ಮಕ ಸ್ಫೋಟದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೆಆರ್ ಎಸ್ ಅಣೆಕಟ್ಟಿನಲ್ಲಿ ಸ್ಫೋಟ ಮಾಡುವುದಿಲ್ಲ. ಅಗತ್ಯವಿರುವ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಸ್ಫೋಟ ಮಾಡಲಾಗುತ್ತದೆ. ಅಣೆಕಟ್ಟೆಗಿಂತ ಇಂತಿಷ್ಟು ದೂರ ಎಂಬುದು ಇರುತ್ತದೆ ಎಂದು ಸ್ಪಷ್ಟಪಡಿಸಿದರು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಂಡ್ಯದಲ್ಲಿ ಜನಸಂಪರ್ಕ ಸಭೆ ನಡೆಸುತ್ತಿದ್ದಾರೆ. ನಿಮನ್ನು ನೋಡಿ ನಕಲು ಮಾಡುತ್ತಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜನ ಸಂಪರ್ಕ ಮಾಡಲಿ, ಒಳ್ಳೆಯ ಕೆಲಸ ಯಾರು ಮಾಡಿದರೆ ಏನಂತೆ. ಜನಸೇವೆ ಮಾಡುವುದನ್ನು ನಾನು…
ಬೆಂಗಳೂರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ 6 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಬೆಳಗ್ಗೆ ಮೆಜೆಸ್ಟಿಕ್ ರೈಲು ನಿಲ್ದಾಣ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಮೃತ ಬಾಲಕಿ ಕೂಲಿ ಕೆಲಸ ಮಾಡುವ ದಂಪತಿಯ 6 ವರ್ಷದ ಮಗಳು ಎಂದು ಗೊತ್ತಾಗಿದೆ. ಬಾಲಕಿಯ ಮೈ ಮೇಲೆ ಪರಚಿದ ಗಾಯಗಳು ಹಾಗೂ ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದೆ. ಹೀಗಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ರೈಲ್ವೆ ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಿದ್ದು, ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ರೈಲ್ವೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬಡ್ಡಿ ಹಣಕ್ಕಾಗಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆಗೈದ ಘಟನೆ ಬೆಂಗಳೂರಿನ ಕಾಕ್ಸ್ ಟೌನ್ ದೊಡ್ಡಗುಂಟೆ ಬಳಿ ನಡೆದಿದೆ. ಅಜಿತ್ (35) ಕೊಲೆಯಾದ ವ್ಯಕ್ತಿ. ಅಜಿತ್ ಐಟಿಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ಸಂದರ್ಭ ಮನೆ ಮುಂಭಾಗದಲ್ಲೇ ಕೊಲೆ ಮಾಡಲಾಗಿದೆ. ಬಡ್ಡಿ ಹಣಕ್ಕಾಗಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಅಜಿತ್ ವ್ಯಕ್ತಿಯೊಬ್ಬರಿಂದ ಅಧಿಕ ಬಡ್ಡಿಗೆ ಹಣ ಪಡೆದಿದ್ದರು. ಬಡ್ಡಿ ಹಣ ಮತ್ತು ಅಸಲು ಹಣ ವಾಪಸ್ ವಿಚಾರಕ್ಕೆ ಆರೋಪಿ ಮತ್ತು ಅಜಿತ್ ನಡುವೆ ಗಲಾಟೆ ಆಗುತ್ತಿತ್ತು. ಅಜಿತ್ ಮನೆಗೆ ಬರೋದನ್ನೇ ಕಾದು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿ ಆರೋಪಿ ಎಸ್ಕೇಪ್ ಆಗಿದ್ದಾನೆ. ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದಿಂದ ಬಂದು ಆರೋಪಿ ಕೃತ್ಯವೆಸಗಿದ್ದು, ಆರೋಪಿ ಪತ್ತೆಗಾಗಿ ಪುಲಿಕೇಶಿ ನಗರ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್…
ಬೆಂಗಳೂರು: ರಾಜ್ಯ ಸರ್ಕಾರ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ. ಹುಬ್ಬಳ್ಳಿ ಧಾರವಾಡ ನೂತನ ಪೊಲೀಸ್ ಆಯುಕ್ತರನ್ನಾಗಿ 2007 ರ ಐಪಿಎಸ್ ಬ್ಯಾಚಿನ ಎನ್.ಶಶಿಕುಮಾರ್ ಅವರನ್ನು ನೇಮಕ ಮಾಡಿದೆ. ಪ್ರಸ್ತುತ ಹುದ್ದೆಯಲ್ಲಿದ್ದ ರೇಣುಕಾ ಸುಕುಮಾರ್ ಅವರನ್ನು ಬೆಂಗಳೂರಿನ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸಿ.ಬಿ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಿ, ಮುಂದಿನ ಆದೇಶದವರೆಗೆ ಬೆಂಗಳೂರು ವೈರ್ ಲೆಸ್ ವಿಭಾಗದ ಸೂಪರಿಂಟೆಂಡೆಂಟ್ ಆಗಿ ನೇಮಿಸಲಾಗಿದೆ. ವರ್ಗಾವಣೆಗೊಂಡ ಐಪಿಎಸ್ ಅಧಿಕಾರಿಗಳು 1. ಲಾಭುರಾಮ್ – ಐಜಿಪಿ-ಕೇಂದ್ರ ವಲಯ, ಬೆಂಗಳೂರು 2. ಡಾ. ಬಿ.ಆರ್. ರವಿಕಾಂತೇಗೌಡ – ಐಜಿಪಿ, ಹೆಡ್ ಕ್ವಾಟರ್ಸ್ -01 3. ಡಾ. ಕೆ. ತ್ಯಾಗರಾಜನ್ – ಐಜಿಪಿ, ಆಂತರಿಕ ಭದ್ರತಾ ವಿಭಾಗ (ಐಎಸ್ಡಿ) 4. ಎನ್. ಶಶಿಕುಮಾರ್ – ಕಮಿಷನರ್, ಹುಬ್ಬಳ್ಳಿ ಧಾರವಾಢ 5. ಬಿ. ರಮೇಶ್ – ಡಿಐಜಿ-ಪೂರ್ವ ವಲಯ, ದಾವಣಗೆರೆ 6. ಸೀಮಾ ಲಾಟ್ಕರ್ -ಕಮಿಷನರ್, ಮೈಸೂರು…
ವಿವಾಹಿತನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಕಾಲೇಜು ಯುವತಿ ತನ್ನ ಪ್ರಿಯತಮನ ಜೊತೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೈಸ್ ರಸ್ತೆ ಸಮೀಪದ ಕೆರೆಯೊಂದರಲ್ಲಿ ಇಬ್ಬರು ಮೃತದೇಹಗಳು ಪತ್ತೆಯಾಗಿವೆ. ತಲಘಟ್ಟಪುರದ ಅಂಜನಾಪುರದಲ್ಲಿ ವಾಸವಿದ್ದ ಕಾಲೇಜು ವಿದ್ಯಾರ್ಥಿನಿ ಅಂಜನಾ (20) ಹಾಗೂ ಕೋಣನಕುಂಟೆಯ ಶ್ರೀಕಾಂತ್ (25) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಇವರಿಬ್ಬರೂ ಜುಲೈ 1 ರಂದು ನಾಪತ್ತೆಯಾಗಿದ್ದರು. ಇದೀಗ ಇವರಿಬ್ಬರ ಮೃತದೇಹಗಳು ಕೆರೆಯಲ್ಲಿ ಪತ್ತೆಯಾಗಿವೆ. ಶ್ರೀಕಾಂತ್ ಗೆ ಈಗಾಗಲೇ ಮದುವೆಯಾಗಿತ್ತು. ಆದರೂ ಅಂಜನಾಳನ್ನು ಪ್ರೀತಿಸುತ್ತಿದ್ದ. ಇಬ್ಬರು ಮದುವೆಯಾಗೋದಕ್ಕೆ ಆಗೋದಿಲ್ಲ ಎಂದು ಅರಿತ ಇಬ್ಬರೂ ಕೆರೆಗೆ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರೂ ಜುಲೈ 1 ರಂದು ನಾಪತ್ತೆಯಾಗಿದ್ದರು. ಹೀಗಾಗಿ ಇಬ್ಬರ ಪೋಷಕರು, ಕೋಣನಕುಂಟೆ ಮತ್ತು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಿಸಿದ್ದರು. ಮೃತರ ಮೊಬೈಲ್ ಗಳಲ್ಲಿ ವಿಡಿಯೋ ಮಾಡಲಾಗಿದ್ದು, ಆ ಮೂಲಕ ಇಬ್ಬರೂ ಪ್ರೀತಿಸುತ್ತಿದ್ದ ಅನ್ನೋದು ಗೊತ್ತಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಜಿಮ್ ಒಂದರ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘ ಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಲ್ಡನ್ ಜಿಮ್ ನಲ್ಲಿ ಈ ಘಟನೆ ನಡೆದಿದ್ದು, 22 ವರ್ಷದ ಶ್ರಾವಣಿ ಸಾವನ್ನಪ್ಪಿದ್ದಾಳೆ. ಎಂಟನೇ ಮೈಲಿಯಲ್ಲಿರುವ ಗೋಲ್ಡನ್ ಜಿಮ್ ನಲ್ಲಿ ಶ್ರಾವಣಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕೆಲಸಕ್ಕೆ ಬಂದಾಗ ಆಕೆ ಜಿಮ್ ನಲ್ಲಿ ವಾಂತಿ ಮಾಡಿಕೊಂಡಿದ್ದಾಳೆ. ಕೂಡಲೇ ಜಿಮ್ ನಲ್ಲಿದ್ದವರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದ್ರೆ ಕೆಲ ಹೊತ್ತಿನ ನಂತರ ಆಕೆ ಮೃತಪಟ್ಟಿದ್ದಾಳೆ. ಪೊಲೀಸರು ತನಿಖೆ ನಡೆಸಿದಾಗ ಆಕೆ ವಿಷ ಸೇವಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಮೃತ ಶ್ರಾವಣಿ ದಾವಣಗೆರೆ ಮೂಲದವಳಾಗಿದ್ದು, ದಾಸರಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಪೋಷಕರು ಮದುವೆ ಮಾಡಲು ತೀರ್ಮಾನ ಮಾಡಿದ್ದರು. ಆದ್ರೆ ಪೋಷಕರು ನೋಡಿದ ಹುಡುಗನನ್ನು ಮದುವೆಯಾಗಲು ಆಕೆ ನಿರಾಕರಿಸಿದ್ದರು . ಆದರೆ ಮಗಳ ಮನವೊಲಿಸಲು ಪೋಷಕರು ಬೆಂಗಳೂರಿಗೆ ಬಮದಿದ್ದರು. ಇದರಿಂದ ನೊಂದು ಸಾವಿಗೆ ಶರಣಾಗಿದ್ದಾಳೆ ಎಂದು ಶಂಕಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ಪತಿ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಪೊಲೀಸ್ ಕಾನ್ ಸ್ಟೇಬಲ್ ನ ಪತ್ನಿಯು ಆತನ ಪ್ರಿಯತಮೆ ಮನೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. 2003ರಲ್ಲಿ ಹರಪನಹಳ್ಳಿ ತಾಲೂಕಿನ ಎರಡತ್ತೇನಹಳ್ಳಿ ಗ್ರಾಮದ ಪೊಲೀಸ್ ಕಾನ್ ಸ್ಟೇಬಲ್ ಗೋಣಪ್ಪ ಎಂಬುವವನೊಂದಿಗೆ ಸೌಮ್ಯಳ ಮದುವೆಯಾಗಿತ್ತು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದರೆ ಇದೀಗ ಗೋಣಪ್ಪ ಗೀತಾ ಎಂಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ ಎಂದು ಆರೋಪಿಸಿ ದಾವಣಗೆರೆಯ ರಾಮನಗರದಲ್ಲಿರುವ ಗೀತಾ ಎಂಬವರ ಮನೆಯ ಮುಂದೆ ಪೊಲೀಸ್ ಪೇದೆಯ ಪತ್ನಿ ಸೌಮ್ಯ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಗೋಣಪ್ಪ ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ, ಮನೆಗೆ ಬರುತ್ತಿಲ್ಲ ಎಂದು ಸೌಮ್ಯ ಆರೋಪಿಸಿದ್ದಾರೆ. ಗೋಣಪ್ಪ ಪ್ರಸ್ತುತ ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಪೇದೆಯಾಗಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ಅಸ್ತಮದಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಹಣ ಇಲ್ಲದಂತಾಗಿದೆ ಎಂದು ಸೌಮ್ಯ ಹೇಳಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…