Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ಪ್ರಪಂಚದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ದಂಪತಿ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಕ್ಕೆ ದಿನ ಗಣನೆ ಆರಂಭವಾಗಿದೆ. ವಿವಾಹದ ತಯಾರಿಯಂತೂ ಭರ್ಜರಿಯಾಗೇ ನಡೆಯುತ್ತಿದೆ. ಈ ನಡುವೆ ಅಂಬಾನಿ ಕುಟುಂಬ ಮಹತ್ತರವಾದ ಕಾರ್ಯವೊಂದನ್ನು ಮಾಡಿದೆ. ಜುಲೈ 12ರಂದು ಮುಂಬೈಯಲ್ಲಿ ಅನಂತ್ ಅಂಬಾನಿ ಮದುವೆ ನಡೆಯಲಿದ್ದು ಅದ್ಧೂರಿ ಸಮಾರಂಭ ಆಯೋಜಿಸಲಾಗಿದೆ. ಅದಕ್ಕೆ ಮುನ್ನುಡಿಯಾಗಿ ಜುಲೈ 2ರಂದು ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಸುಮಾರು 50 ಬಡ ಜೋಡಿಗಳ ಸಾಮೂಹಿಕ ವಿವಾಹ ನೆರವೇರಿಸಿ ಮಾದರಿಯಾಗಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್ ಪ್ರದೇಶದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಐವತ್ತಕ್ಕೂ ಹೆಚ್ಚು ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಈ ಸಾಮೂಹಿಕ ವಿವಾಹವಾದ ಬಳಿಕ ನವ ವಧು-ವರರಿಗೆ ಅಂಬಾನಿ ಕುಟುಂಬ ಏನೆಲ್ಲಾ ಉಡುಗೊರೆ ನೀಡಿತು, ಕೊಟ್ಟ ಚಿನ್ನ-ಬೆಳ್ಳಿ ಎಷ್ಟು, ಹಣವೆಷ್ಟು ಎಂದು ಕೇಳಿದರೆ ನೀವೇ ಶಾಕ್ ಆಗುತ್ತೀರಾ!! ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್. ಈ…
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲ ಮುಗಿಯುವವರೆಗೆ ಯಾವುದೇ ಕಟ್ಟಡ ಕಾಮಗಾರಿ ನಡೆಸದಂತೆ ಮಂಗಳೂರು ಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಆದೇಶ ನೀಡಿದ್ದಾರೆ. ನಗರದ ಬಲ್ಮಠ ರೋಡ್ ಸಮೀಪ ನಿರ್ಮಾಣ ಹಂತದ ಕಟ್ಟಡದ ಬಳಿ ಮಣ್ಣು ಕುಸಿದು ಓರ್ವ ಕಾಮಿಕ ಮೃತ್ಯು ಹೊಂದಿದ್ದ. ಈ ಕಾರಣಕ್ಕೆ ಈ ಆದೇಶ ಹೊರಡಿಸಲಾಗಿದೆ. ಹಾಗೂ ಈ ಮೂಲಕ ಕಟ್ಟಡ ನಿರ್ಮಾಣ ಸಂಸ್ಥೆಗಳಿಗೆ ಪಾಲಿಕೆ ಆಯುಕ್ತರಿಂದ ಎಚ್ಚರಿಕೆ ನೀಡಿದ್ದಾರೆ. ಭೂ ಅಗೆತವನ್ನು ಅವೈಜ್ಞಾನಿಕ ರೀತಿಯಲ್ಲಿ ಮಾಡುವುದು, ಇದರಿಂದ ಜೀವ ಹಾನಿ, ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಈ ಕಾರಣದಿಂದ ಮಳೆಗಾಲ ಮುಗಿಯುವವರೆಗೆ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿ ಮಾಡಬಾರದು. ಕಟ್ಟಡ ನಿರ್ಮಾಣ ಕಾಮಗಾರಿಯನ್ನು ನಿಲ್ಲಿಸಬೇಕು. ಇದನ್ನು ಉಲ್ಲಂಘನೆ ಮಾಡಿದ್ದಲ್ಲಿ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಹವಾಮಾನ ಇಲಾಖೆ ರೆಡ್, ಆರೆಂಜ್, ಎಲ್ಲೋ ಅಲರ್ಟ್ ಬಗ್ಗೆ ನಿರಂತರವಾಗಿ ಮುನ್ಸೂಚನೆ ನೀಡುತ್ತಿದ್ದರೂ ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಕಟ್ಟಡದ ಕಾಮಗಾರಿಯನ್ನು ಮಳೆಗಾಲ ಮುಗಿಯುವವರೆಗೆ…
ಮಂಗಳೂರು: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಉಂಟಾಗಿದ್ದು, ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30) ಎಂದು ಗುರುತಿಸಲಾಗಿದೆ. ಈ ಘಟನೆ ಬಲ್ಮಠ ಬಳಿ ಬುಧವಾರ ಸಂಭವಿಸಿದೆ. ಕಟ್ಟಡದ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಭುಕುಸಿತ ಉಂಟಾಗಿದ್ದು, ಮಣ್ಣಿನಡಿ ಇಬ್ಬರು ಕಾರ್ಮಿಕರು ಸಿಲುಕಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳ, ಎಸ್ ಡಿಆರ್ ಎಫ್, ಎನ್ ಡಿಆರ್ ಎಫ್ ತಂಡ ಬಂದಿದ್ದು, ರಕ್ಷಣಾ ಕಾರ್ಯಾಚರಣೆ ಮಾಡಿ ಓರ್ವ ಕಾರ್ಮಿಕನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಮಣ್ಣಿನಡಿ ಸಿಲುಕಿದ್ದ ಇನ್ನೋರ್ವ ಕಾರ್ಮಿಕ ಚಂದನ್ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿತ್ತು. ಕಾರ್ಮಿಕನ ರಕ್ಷಣೆಗೆ ರಾತ್ರಿವರೆಗೂ ಕಾರ್ಯಾಚರಣೆ ನಡೆಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಏಳು ಗಂಟೆಯ ಸುಮೃಿ ಎನ್‌ಡಿಆರ್‌ಎಫ್ ತಂಡ ಮೃತದೇಹವನ್ನು ಹೊರತೆಗೆದಿದೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಈ ಹಿಂದೆ ಟ್ವಿಟ್ಟರ್ ‘ಎಕ್ಸ್’ ಪರ್ಯಾಯವಾಗಿ ಆರಂಭಗೊಂಡಿದ್ದ ಕೂ (Koo) ಆ್ಯಪ್ ಅಧಿಕೃತವಾಗಿ ಕಾರ್ಯಾಚರಣೆ ನಿಲ್ಲಿಸಿದೆ ಎಂದು ವರದಿ ತಿಳಿಸಿದೆ. ದೇಶೀಯ ಸಾಮಾಜಿಕ ಜಾಲತಾಣ ವೇದಿಕೆಯಾಗಿದ್ದ ಈ ಸಂಸ್ಥೆ ಹೆಚ್ಚಿನ ತಂತ್ರಜ್ಞಾನದ ವೆಚ್ಚಗಳಿಂದ ಕೂ ವೇದಿಕೆಯನ್ನು ಮುಚ್ಚುವುದಾಗಿ ಸ್ಥಾಪಕರಾದ ಅಪ್ರಮೇಯ ರಾಧಾಕೃಷ್ಣ ಮತ್ತು ಮಯಾಂಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಇದರ ಜೊತೆಗೆ ಎಲನ್ ಮಸ್ಕ್ ತನ್ನ ‘ಎಕ್ಸ್’ ಸಾಮಾಜಿಕ ಜಾಲತಾಣದ ನಿಯಮಗಳನ್ನು ಸಡಿಲಿಕೆ ಮಾಡಿ ತೀವ್ರ ಪೈಪೋಟಿ ನೀಡಲು ಶುರುಮಾಡಿದ್ದರು. ಕೂ ಉತ್ತುಂಗದಲ್ಲಿದ್ದಾಗ ಸುಮಾರು 20 ಲಕ್ಷ ದೈನಂದಿನ ಸಕ್ರಿಯ ಬಳಕೆದಾರರನ್ನು ಮತ್ತು 9,000 ವಿಐಪಿಗಳನ್ನು ಒಳಗೊಂಡಂತೆ 1 ಕೋಟಿ ಮಾಸಿಕ ಬಳಕೆದಾರರನ್ನು ಹೊಂದಿತ್ತು. ಕನ್ನಡ ಸೇರಿದಂತೆ ಸ್ಥಳೀಯ ಭಾಷೆಗಳಲ್ಲಿ ಬಳಕೆದಾರರರನ್ನು ಪ್ರೋತ್ಸಾಹಿಸಲು ಮುಂದಾಗಿದ್ದರೂ ಕೂ ಬಳಕೆದಾರರನ್ನು ತಲುಪಲು ವಿಫಲವಾಗಿತ್ತು. ಭವಿಷ್ಯದ ಉದ್ಯಮಗಳ ಬಗ್ಗೆ ನಾವು ಆಶಾವಾದಿಯಾಗಿದ್ದೇವೆ. ಇಲ್ಲಿಯವರೆಗೆ ಸಹಕಾರ ನೀಡಿದ ಬೆಂಬಲಿಗರು, ಹೂಡಿಕೆದಾರರು ಮತ್ತು ಬಳಕೆದಾರರಿಗೆ ಸಂಸ್ಥಾಪಕರು ಕೃತಜ್ಞತೆ ಸಲ್ಲಿಸುತ್ತೇವೆ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ವಿಜಯಪುರ: ತೆರಬಂಡಿ ಓಟದ ಸ್ಪರ್ಧೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದ ಎತ್ತೊಂದು ಬರೋಬ್ಬರಿ 18 ಲಕ್ಷ ರೂಪಾಯಿಗೆ ಮಾರಾಟವಾಗಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬಬಲಾದಿ ಗ್ರಾಮದ ರಾಮನಗೌಡ ಪಾಟೀಲ್ ಎಂಬುವವರಿಗೆ ಸೇರಿದ ಎತ್ತು ಇದಾಗಿದ್ದು, ಉತ್ತರ ಕರ್ನಾಟಕದ ಭಾಗದಲ್ಲಿ ಈ ಎತ್ತು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಹಲವು ಸ್ಪರ್ಧೆಗಳಲ್ಲಿ ಜಯಶಾಲಿಯಾಗಿದ್ದ ಎತ್ತನ್ನು ಅಧಿಕ ಬೆಲೆಗೆ ಮಾರಾಟ ಮಾಡಲಾಗಿದೆ. ಈ ಎತ್ತು ತೆರಬಂಡಿ ಎಳೆಯುವುದರಲ್ಲಿ ನಿಸ್ಸೀಮನಾಗಿತ್ತು. ಉತ್ತರ ಕರ್ನಾಟಕ ಭಾಗದಲ್ಲಿ ಎಲ್ಲಿಯೇ ಸ್ಪರ್ಧೆ ನಡೆದರೂ ಈ ಭಾಗವಹಿಸುತ್ತಿದ್ದ ಎತ್ತು ಹತ್ತಾರು ಪ್ರಶಸ್ತಿಗಳನ್ನು ಗಳಿಸಿಕೊಂಡು ಬಂದಿದೆ. ಇದುವರೆಗೂ ಈ ಎತ್ತು ಬಹುಮಾನದ ರೂಪದಲ್ಲೇ ಸುಮಾರು 15 ಲಕ್ಷ ರೂಪಾಯಿ ನಗದು ಬಹುಮಾನ ಪಡೆದಿದೆ. ಇದರ ಜೊತೆ ಎರಡು ಬೆಳ್ಳಿಯ ಗದೆಗಳು, 4 ಬೈಕ್‌ಗಳು ಹಾಗೂ 40 ಗ್ರಾಂ ಚಿನ್ನವನ್ನು ಕೂಡಾ ಗೆದ್ದಿದೆ. ಇದಕ್ಕೆ ಮಾಲೀಕರು ಹಿಂದೂಸ್ತಾನ್ ಎಚ್ ಪಿ ಎಂದು ನಾಮಕರಣ ಮಾಡಿದ್ದರು. ಹಾಲು, ಮೊಟ್ಟೆ, ಧವಸ ಧಾನ್ಯ ಕೊಟ್ಟು ದಷ್ಟಪುಷ್ಟವಾಗಿ ಬೆಳೆಸಿದ್ದ…
ತುಮಕೂರು: ದಶಕಗೂ ಹೆಚ್ಚು ದಿನಗಳಿಂದ ತಲೆ ಮರೆಸಿಕೊಂಡಿದ್ದ ಮಾಜಿ ನಕ್ಸಲ್ ಚಂದ್ರ ಎಂಬಾತನನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಚಂದ್ರ, 2005ರಲ್ಲಿ ವೆಂಕಟಮ್ಮನಹಳ್ಳಿಯ ಕೆಎಸ್ ಆರ್ಪಿ ಕ್ಯಾಂಪ್ ಮೇಲೆ ದಾಳಿ ನಡೆಸಿದ ಆರೋಪಿಯಾಗಿದ್ದಾನೆ. ಓರ್ವ ಸಾರ್ವಜನಿಕ ಸೇರಿ 7 ಜನ ಪೊಲೀಸರನ್ನ ಹತ್ಯೆ ಮಾಡಲಾಗಿತ್ತು, ಹತ್ಯೆ ಮಾಡಿ ಶಸ್ತ್ರಾಸ್ತ್ರಗಳ ದೋಚಲಾಗಿತ್ತು. ಈ ಸಂಬಂಧ ತಿರುಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತ ಚಂದ್ರ, ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಕೇಶಾವಾಪುರಂ ಗ್ರಾಮದ ನಿವಾಸಿಯಾಗಿದ್ದಾನೆ. ಈತನ ವಿರುದ್ಧ ಪಾವಗಡ ಜೆಎಂಎಫ್ಸಿ ನ್ಯಾಯಲಯವು ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು. ಎಸ್ಪಿ ಕೆ.ವಿ ಅಶೋಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಾಜಿ ನಕ್ಸಲ್ ಚಂದ್ರನ ಬಂಧನ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಭಾರತೀಯ ಕ್ರಿಕೆಟ್ ಪ್ರೇಮಿಗಳು ಮುಂಬರುವ ಐಪಿಎಲ್ ಮೆಗಾ ಹರಾಜಿನ ಮೇಲೆ ಗಮನಹರಿಸಿದ್ದಾರೆ. ಹಾಗಾದರೆ, ಐಪಿಎಲ್ 2025ರ ಆವೃತ್ತಿಗಾಗಿ ಮೆಗಾ ಹರಾಜು ದಿನಾಂಕ ಯಾವುದು ಮತ್ತು ಎಲ್ಲಿ ನಡೆಯಬಹುದು? ಎಂಬುದರ ಕುರಿತು ನೀವು ತಿಳಿದುಕೊಳ್ಳಬೇಕಾದದ್ದು ಮಾಹಿತಿ ಇಲ್ಲಿದೆ. ಮುಂದಿನ ಐಪಿಎಲ್ ಮೆಗಾ ಹರಾಜು 2022ರಂತೆ ಎರಡು ದಿನಗಳ ಪ್ರಕ್ರಿಯೆಯಾಗುವ ಸಾಧ್ಯತೆಯಿದೆ. 2022ರ ಫೆಬ್ರವರಿಯಲ್ಲಿ ಮೆಗಾ ಹರಾಜು ನಡೆಸಲಾಗಿತ್ತು. ಆ ನಂತರ 2023 ಮತ್ತು 2024ರ ಆವೃತ್ತಿಗಾಗಿ ಮಿನಿ ಹರಾಜುಗಳನ್ನು ಆಯಾ ವರ್ಷಗಳ ಡಿಸೆಂಬರ್‌ನಲ್ಲಿ ನಡೆಸಲಾಯಿತು.ಹೀಗಾಗಿ, ಇದೀಗ 2025ರ ಐಪಿಎಲ್‌ಗಾಗಿ ಮೆಗಾ ಹರಾಜು ದಿನಾಂಕವು ಬಹುಶಃ 2024ರ ಡಿಸೆಂಬರ್ ಮತ್ತು 2025ರ ಫೆಬ್ರವರಿ ನಡುವೆ ಅದೇ ಸಮಯದಲ್ಲಿ ನಡೆಯಬಹುದು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅಧ್ಯಕ್ಷ ಅರುಣ್ ಧುಮಾಲ್ ಅವರು ಐಪಿಎಲ್ 2025ರ ಮೊದಲು ಮೆಗಾ ಹರಾಜು ನಡೆಯಲಿದೆ ಎಂದು ಖಚಿತಪಡಿಸಿದ್ದಾರೆ. 2025ರ ಐಪಿಎಲ್ ಮೆಗಾ ಹರಾಜು ನಡೆಯುವ ಸ್ಥಳವನ್ನು ಬಿಸಿಸಿಐ ಶೀಘ್ರದಲ್ಲೇ ಪ್ರಕಟಿಸಲಿದೆ. ಐಪಿಎಲ್ 2025ರ ಮೆಗಾ ಹರಾಜಿಗಾಗಿ ಪ್ರತಿ ಫ್ರಾಂಚೈಸಿ ಪರ್ಸ್…
ತುಮಕೂರು: ಮಹಾನಗರ ಪಾಲಿಕೆಯಲ್ಲಿ ಬಹುಪಾಲು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದ ಆಯುಕ್ತರಾದ ಬಿ.ವಿ.ಅಶ್ವಿಜ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮಧ್ಯವರ್ತಿಗಳ ಹಾವಳಿಗೆ ಬ್ರೇಕ್ ಹಾಕಿದ್ದ ಅಶ್ವಿಜರನ್ನು ವರ್ಷ ತುಂಬುವುದರಲ್ಲೇ ವರ್ಗಾವಣೆ ಮಾಡಲಾಗಿದೆ. ಅಶ್ವಿಜ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ಕೆಎಎಸ್ ಅಧಿಕಾರಿ ಡಾ.ಜಗದೀಶ್ ಕೆ.ನಾಯಕ್‌ರನ್ನು ನೇಮಿಸಿ ಮಂಗಳವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಶ್ವಿಜ ಅವರಿಗೆ ಯಾವುದೇ ಸ್ಥಳವನ್ನು ತೋರಿಸಿಲ್ಲ. ಜು.25, 2023ರಂದು ಪಾಲಿಕೆ ಆಯುಕ್ತರನ್ನಾಗಿ 2019ನೇ ಬ್ಯಾಚ್ ಐಎಎಸ್ ಅಧಿಕಾರಿ ಬಿ.ವಿ.ಅಶ್ವಿಜರನ್ನು ನೇಮಿಸಿ ಸರ್ಕಾರ ಆದೇಶಿಸಿತ್ತು. ಪುಟ್ ಪಾತ್ ಅಭಿಯಾನಕ್ಕೆ ಚಾಲನೆ ನೀಡಿದ್ದ ಅಶ್ವಿಜ ಅಕ್ರಮವಾಗಿ ಪುಟ್ ಪಾತ್ ಒತ್ತುವರಿದಾರರಿಗೆ ಸಿಂಹಸ್ವಪ್ನರಾಗಿದ್ದರು ಎಂದೇ ಹೇಳಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ರಾಜ್ಯಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿರುವ ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರು ಮೊದಲ ಬಾರಿ ಸದನದಲ್ಲಿ ಮಾತನಾಡಿದ್ದಾರೆ. ಚೊಚ್ಚಲ ಭಾಷಣದಲ್ಲಿ, “ಒಂಬತ್ತರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ನೀಡಲಾಗುವ ಲಸಿಕೆ ಇದೆ. ಇದನ್ನು ಗರ್ಭಕಂಠದ ಲಸಿಕೆ ಎಂದು ಕರೆಯಲಾಗುತ್ತದೆ. ಹುಡುಗಿಯರು ಅದನ್ನು ತೆಗೆದುಕೊಂಡರೆ ಕ್ಯಾನ್ಸರ್ ತಪ್ಪಿಸಬಹುದು. ನಮ್ಮ ಹುಡುಗಿಯರ ಅನುಕೂಲಕ್ಕಾಗಿ ನಾವು ವ್ಯಾಕ್ಸಿನೇಷನ್ ಅನ್ನು ಉತ್ತೇಜಿಸಬೇಕು. ಏಕೆಂದರೆ ಚಿಕಿತ್ಸೆಗಿಂತ ತಡೆಗಟ್ಟುವಿಕೆ ಉತ್ತಮವಾಗಿದೆ ಎಂದು ಹೇಳಿದರು. ಗರ್ಭಕಂಠದ ಕ್ಯಾನ್ಸರ್‌ಗೆ ಲಸಿಕೆಯನ್ನು ಪಶ್ಚಿಮದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದನ್ನು ಕಳೆದ 20 ವರ್ಷಗಳಿಂದ ಬಳಸಲಾಗುತ್ತಿದೆ. ತುಂಬಾ ಚೆನ್ನಾಗಿ ಕೆಲಸ ಮಾಡಿದೆ. ಇವತ್ತು ನನ್ನಂತಹ ಕ್ಷೇತ್ರದಲ್ಲಿರುವವರಿಗೆ ₹ 1,400 ಆಗಿದೆ. ಸರ್ಕಾರ ಮಧ್ಯಸ್ಥಿಕೆ ವಹಿಸಿ ಮಾತುಕತೆ ನಡೆಸಿದರೆ ನೀವು ಅದನ್ನು ₹ 700-800 ಗೆ ತರಬಹುದು. ಜನಸಂಖ್ಯೆಯು ಭವಿಷ್ಯದಲ್ಲಿ ನಮ್ಮ ಹೆಣ್ಣುಮಕ್ಕಳಿಗೆ ಪ್ರಯೋಜನಕಾರಿಯಾಗಿದೆ” ಎಂದು ಅವರು ಹೇಳಿದರು. ಮಹಿಳೆಯರ ಆರೋಗ್ಯದ ಹೊರತಾಗಿ, ಸುಧಾ ಮೂರ್ತಿ ದೇಶೀಯ ಪ್ರವಾಸೋದ್ಯಮವನ್ನು ಉತ್ತೇಸಬೇಕು. ಅವರು 57 ದೇಶೀಯ ಪ್ರವಾಸಿ ತಾಣಗಳನ್ನು ವಿಶ್ವ…
ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಪಟ್ಟಣದ ಪೆಟ್ರೋಲ್ ಬಂಕ್ ಒಂದರಲ್ಲಿ ನಿಗದಿತ ಲೀಟರ್ ಗಿಂತ ಕಡಿಮೆ ಪ್ರಮಾಣದಲ್ಲಿ ಪೆಟ್ರೋಲ್ ನೀಡುವ ಮೂಲಕ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ . ಹುಳಿಯಾರು ಪಟ್ಟಣದ ಕನಕ ವೃತ್ತದ ಬಳಿ ಇರುವ ಪೆಟ್ರೋಲ್ ಬಂಕ್ ನಲ್ಲಿ 510 ಗೆ ಕೇವಲ ಒಂದು ಲೀಟರ್ ಪೆಟ್ರೋಲ್ ನೀಡಿ ವಂಚನೆ ಮಾಡಲಾಗುತ್ತಿದೆ ಎಂದು ಗ್ರಾಹಕರು ದೂರಿದ್ದಾರೆ. ಇನ್ನು ಈ ಬಗ್ಗೆ ಪೆಟ್ರೋಲ್ ಬಂಕ್ ಮ್ಯಾನೇಜರ್ ಸ್ಪಷ್ಟನೆ ನೀಡಿದ್ದು ಪೆಟ್ರೋಲ್ ಹಾಕುವ ಆಪರೇಟರ ಈ ರೀತಿ ಮೋಸ ಮಾಡಿದ್ದಾನೆ ಹೀಗಾಗಿ ಆತನನ್ನು ಕೆಲಸದಿಂದ ತೆಗೆದು ಹಾಕಿದ್ದೇವೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA