Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ಬೆಂಗಳೂರು: ನಗರದ ಪ್ರತಿಷ್ಠಿತ ʼ ಪ್ರೆಸ್ ಕ್ಲಬ್ ಆಫ್ ಬೆಂಗಳೂರುʼ ಚುನಾವಣೆ ದಿನಾಂಕ ಪ್ರಕಟಗೊಂಡಿದ್ದು, ಅಧ್ಯಕ್ಷ ಸ್ಥಾನಕ್ಕೆ ಅಂತಿಮವಾಗಿ ಮೂವರು ಪತ್ರಕರ್ತರು ಕಣದಲ್ಲಿದ್ದಾರೆ. ಸುದೀರ್ಘ ಇತಿಹಾಸ ಹೊಂದಿರುವ, ಬೆಂಗಳೂರು ಕಬ್ಬನ್ ಪಾರ್ಕ್ ಆವರಣದಲ್ಲಿರುವ ʼಪ್ರೆಸ್ ಕ್ಲಬ್ ʼ ಗೆ ಈಗ ಚುನಾವಣೆ ಬಿಸಿ. ಸದಾ ರಾಜಕಾರಣಿಗಳ ಚಲನವಲನ, ರಾಜಕೀಯ ತಂತ್ರಗಾರಿಕೆ ಬಗ್ಗೆ ವರದಿ ಮಾಡುತ್ತಿದ್ದ ಪತ್ರಕರ್ತರಿಗೆ ಈಗ ಖುದ್ದು ಚುನಾವಣೆ ಎದುರಿಸುವ ಸಮಯ. ಇದೇ ಜುಲೈ7 ರ ಭಾನುವಾರ ಬೆಳಗ್ಗೆ 8 ರಿಂದ ಮಧ್ಯಾಹ್ನ 2ರವರೆಗೆ ಸಂಘದ ಆವರಣದಲ್ಲಿ ಚುನಾವಣೆ ನಡೆಯಲಿದೆ. ಕ್ಲಬ್ ನ ಅಧ್ಯಕ್ಷ ಸ್ಥಾನಕ್ಕಾಗಿ ಮೂವರು ಪತ್ರಕರ್ತರ ನಡುವೆ ಪೈಪೋಟಿ. ಧ್ಯಾನ್ ಪೂಣಚ್ಚ, ಆರ್. ಶ್ರೀಧರ ಹಾಗೂ ಸುಭಾಷ್ ಹೂಗಾರ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದು ಅಂತಿಮವಾಗಿ ಕಣದಲ್ಲಿ ಸ್ಪರ್ಧಿಸುತ್ತಿದ್ದಾರೆ. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ದೊಡ್ಡ ಬೊಮ್ಮಯ್ಯ, ಟಿ. ಮಂಜುನಾಥ್ , ಎಂ.ಡಿ ಶಿವಕುಮಾರ್ ಬೆಳ್ಳಿತಟ್ಟೆ, ಹಾಗೂ ವೈ.ಎಸ್.ಎಲ್. ಸ್ವಾಮಿ ನಡುವೆ ಪೈಪೋಟಿ. ಉಪಾಧ್ಯಕ್ಷ ಸ್ಥಾನಕ್ಕೆ ಮಹಾಂತೇಶ್ ಹೀರೇಮಠ್, ಬಿ.ಎನ್.ಮೋಹನ್…
ದರ್ಶನ್ ಗೆ ನೀಡಲಾಗಿರುವ ಕೈದಿ ನಂಬರ್ 6106 ಅನ್ನು ಇತ್ತೀಚೆಗೆ ವಾಹನಗಳಲ್ಲಿ ಸ್ಟಿಕ್ಕರ್ ಮಾಡಿಸಿ ಹಾಕಿಕೊಂಡು ಅದು ಟ್ರೆಂಡ್ ಆಗಿತ್ತು ಮತ್ತು ಪೊಲೀಸರು ಈ ಬಗ್ಗೆ ಎಚ್ಚರಿಕೆಯನ್ನೂ ನೀಡಿದ್ದರು. ಈಗ ಏನೂ ಅರಿಯದ ಮುಗ್ಧ ಮಗುವೊಂದಕ್ಕೆ ಅಪರಾಧಿಯಂತೆ ಬಿಳಿ ಡ್ರೆಸ್ ಹಾಕಿಸಿ, ಅದರ ಮೇಲೆ ಕೈದಿ ನಂ.6106 ಎಂದು ಬರೆಯಲಾಗಿದೆ. ಇತ್ತೀಚೆಗೆ ದರ್ಶನ್ ತಾಯಿ ಪರಪ್ಪನ ಅಗ್ರಹಾರಕ್ಕೆ ಬಂದು ಮಗನನ್ನು ಭೇಟಿಯಾಗಿದ್ದರು, ಇದರ ಜೊತೆಗೆ ಜೈಲು ಸೇರಿದಾಗಿನಿಂದ ವಿಕಲಚೇತನರೂ ಸೇರಿದಂತೆ ಹಲವು ಅಭಿಮಾನಿಗಳು ದರ್ಶನ್ ನನ್ನು ನೋಡಲು ಜೈಲಿಗೆ ಬರುತ್ತಿದ್ದು, ಅನುಮತಿ ಸಿಗದೆ ನಿರಾಶರಾಗುತ್ತಿದ್ದಾರೆ. ಇದರ ಜೊತೆಗೆ ಅತಿಯಾದ ಅಭಿಮಾನದಿಂದ ಅತಿರೇಕದ ಕೆಲಸಗಳನ್ನು ಮಾಡುತ್ತಾ ದರ್ಶನ್ ಫ್ಯಾನ್ಸ್ ಮತ್ತೆ ಸುದ್ದಿಯಾಗುತ್ತಿದ್ದಾರೆ. Brand of sandalhood dboss fans Mysore’ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಮೂಲಕ ಕೈದಿ ಸಂಖ್ಯೆಯ ಬಟ್ಟೆ ಹಾಕಿರುವ ಮಗುವಿನ ಫೋಟೋ ಹಂಚಿಕೊಳ್ಳಲಾಗಿದೆ. ಒಂದು ವರ್ಷದ ಮಗವಿಗೆ ಕೈದಿ ರೀತಿಯ ಬಟ್ಟೆ ಹಾಕಿ ಪೋಟೋಶೂಟ್ ಮಾಡಿಸಲಾಗಿದೆ. ದರ್ಶನ್ ಗೆ ನೀಡಿರೋ…
ಹಾಸನ: ಡೆಂಗ್ಯೂ ಜ್ವರ ಮಳೆಗಾಲ ಆರಂಭದಿಂದಲೂ ತೀವ್ರವಾಗಿ ಹರಡುತ್ತಿದ್ದು, ಹಾಸನದಲ್ಲಿ ಬಾಲಕಿಯೊಬ್ಬಳನ್ನು ಬಲಿ ಪಡೆದುಕೊಂಡಿದೆ. 13 ವರ್ಷದ ಬಾಲಕಿ ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ಹಾಸನ ತಾಲೂಕಿನ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಅಕ್ಷತಾ (13) ಮೃತ ಬಾಲಕಿ ಎಂದು ಗುರುತಿಸಲಾಗಿದ್ದು, ಕೂಲಿ ಕೆಲಸ ಮಾಡುತ್ತಿದ್ದ ಅಪ್ಪಣ್ಣ ಶೆಟ್ಟಿ ಹಾಗೂ ಪದ್ಮಾ ದಂಪತಿ ಪುತ್ರಿ ಅಕ್ಷತಾ, ಹಾಸನದ ಖಾಸಗಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದರು. ಕಳೆದ ಬುಧವಾರ ಜ್ವರಕ್ಕೆ ತುತ್ತಾಗಿದ್ದ ಈಕೆಗೆ ಬೊಮ್ಮನಾಯಕಹಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಆದಾಗ್ಯೂ ಬಾಲಕಿ ಗುಣಮುಖಳಾಗದೇ ಇದ್ದ ಕಾರಣ ಪೋಷಕರು ಆಕೆಯನ್ನ ಹಾಸನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಅಕ್ಷತಾ ಆರೋಗ್ಯದಲ್ಲಿ ಚೇತರಿಕೆ ಕಾಣದೇ ಮತ್ತೊಂದು ಆಸ್ಪತ್ರೆಗೆ ದಾಖಲಿಸಿದ್ದರು ಎನ್ನಲಾಗಿದೆ. ಬಾಲಕಿ ಸ್ಥಿತಿ ಗಂಭೀರವಾಗುತ್ತಿದ್ದಂತೆ ಜಿಲ್ಲಾಸ್ಪತ್ರೆ ಕರೆದುಕೊಂಡು ಹೋಗುವಂತೆ ಖಾಸಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ನಂತರ ಪೋಷಕರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರತಿವರ್ಷದಂತೆ ಈ ವರ್ಷದಂತೆ ಈ ಬಾರಿಯೂ ರಾಷ್ಟ್ರೀಯ ವೈದ್ಯರ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಗೋರಕನಾಥ್, ಭಾರತ ರತ್ನ ಪುರಸ್ಕೃತ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿಗಳಾದ ಡಾ. ಬಿಧನ ಚಂದ್ರ ರಾಯ್ ಗೌರವಾರ್ಥಕವಾಗಿ ರಾಷ್ಟ್ರೀಯ ವೈದ್ಯರ ದಿನ ಎಂದು ಆಚರಿಸಲಾಗುತ್ತಿದೆ ಎಂದರು. ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನ ದೇಶಾದ್ಯಂತ ಆಚರಿಸಲಾಗಿದೆ. ಈ ದಿನವನ್ನು ವೈದ್ಯರು ಹಾಗೂ ಆರೋಗ್ಯ ವೃತ್ತಿಪರರಿಗೆ ಗೌರವ ಸೂಚಕವಾಗಿ ಆಚರಿಸಲಾಗುತ್ತಿದೆ. ಕೋವಿಡ್ 19 ಸಾಂಕ್ರಾಮಿಕ ರೋಗ ಬಂದಾಗ ಹಗಲು ರಾತ್ರಿ ಎನ್ನದೆ ತನ್ನ ಪ್ರಾಣ ಒತ್ತೆಯಿಟ್ಟು ಜಾತಿ ಧರ್ಮ ಎನ್ನದೆ ರೋಗಿಗಳ ಸೇವೆಗೆ ಸೇವೆ ಸಲ್ಲಿಸಿದ ವೈದ್ಯರು ನಮಗೆ ನೆನಪಿಗೆ ಬರುತ್ತಾರೆ ಎಂದರು ವೈದ್ಯರೆಂದರೆ ದೇವರೆನ್ನುವ ಕಾಲವಿದು. ಕೋವಿಡ್ 19 ಬಂದಾಗ ದೇವರು ನೆನಪಿಗೆ ಬಂದರೋ ಇಲ್ಲವೋ ಗೊತ್ತಿಲ್ಲ ಆದರೆ ವೈದ್ಯರು ದಿನಾಲು ನೆನಪಿಗೆ ಬರುವಂತಹ ಕಾಲವಾಗಿತ್ತು ಎಂದರು. ಆರೋಗ್ಯ ಕೇಂದ್ರದ ಎಲ್ಲಾ ವೈದ್ಯರಿಗೆ…
ಕೊರಟಗೆರೆ : ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದ ಸಾರ್ವಜನಿಕರ ಜೊತೆಗೆ ಉದ್ಧಟತನದಿಂದ ವರ್ತಿಸಿದ್ದ ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆ ಡಾ.ನವೀನ್ ಅವರನ್ನು ತುಮಕೂರಿಗೆ ಎತ್ತಂಗಡಿ ಮಾಡಲಾಗಿದೆ. ಕಳೆದ ವಾರ ಗೃಹ ಸಚಿವರ ಆಪ್ತ ಮತ್ತು ದಲಿತ ಹೋರಾಟಗಾರ ಚಿಕ್ಕರಂಗಯ್ಯ ತನ್ನ ಸ್ನೇಹಿತನ ತಾಯಿಗೆ ಚಿಕಿತ್ಸೆ ಕೊಡಿಸಲು ಹೋದಾಗ, ಆಸ್ಪತ್ರೆಗೆ ತಡವಾಗಿ ಬಂದಿದ್ದಲ್ಲದೇ ರೌಡಿಯಂತೆ ವರ್ತಿಸಿದ್ದರು. ಇದೆಲ್ಲ ಗಮನಿಸಿದ ಗೃಹ ಸಚಿವ ಡಾ ಜಿ ಪರಮೇಶ್ವರ್ ಇವರನ್ನು ತುಮಕೂರಿಗೆ ಎತ್ತಂಗಡಿ ಮಾಡಲು ಸೂಚನೆ ನೀಡಿದ್ದಾರೆ. ಅದರಂತೆ ತುಮಕೂರು ಡಿ ಎಚ್ ಒ ಮಂಜುನಾಥ್ ತುಮಕೂರಿಗೆ ವರ್ಗಾವಣೆ ಆದೇಶ ಮಾಡಿದ್ದಾರೆ. ಆಸ್ಪತ್ರೆಗಳಲ್ಲಿ ರೋಗಿಗಳ ಜೊತೆಗೆ ಸೌಜನ್ಯ ಮರೆತು ರೌಡಿಸಂ ಮಾಡಿದ್ದ ಡಾ.ನವೀನ್ ಅವರ ವರ್ತನೆಯ ಬಗ್ಗೆ ನಮ್ಮತುಮಕೂರು ವಾಹಿನಿ ಸವಿವರವಾದ ವರದಿ ಪ್ರಕಟಿಸಿತ್ತು. ಈ ವರದಿಯ ಬೆನ್ನಲ್ಲೇ ಇದೀಗ ನವೀನ್ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಈ ಹಿಂದೆಯೂ ಆಸ್ಪತ್ರೆಗೆ ಸುದ್ದಿ ಮಾಡಲು ತೆರಳಿದ್ದ ಪತ್ರಕರ್ತರಿಗೆ ಧಮ್ಕಿ ಹಾಕಿ, ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪತ್ರಕರ್ತರ ವಿರುದ್ಧ ಸುಳ್ಳು ದೂರು ನೀಡಿದ್ದ…
ಇಂದು ಲೋಕಸಭೆಯಲ್ಲಿ ಸ್ಪೀಕರ್ ರಾಹುಲ್ ಗಾಂಧಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಯಾಕೆ ಗೊತ್ತೆ ? ಇಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಆರಂಭಿಸುತ್ತಿದ್ದಂತೆ ವಿಪಕ್ಷಗಳ ನಾಯಕರು ಎದ್ದು ನಿಂತು ಗಲಾಟೆ ಮಾಡಿದ್ದಾರೆ. ಪ್ರಧಾನಿ ಮೋದಿ ಭಾಷಣಕ್ಕೆ ಅಡ್ಡಿ ಪಡಿಸುವ ಯತ್ನ ನೀಡಿದ್ದಾರೆ. ಮೋದಿ ಭಾಷಣ ಆರಂಭವಾಗ್ತಿದ್ದಂತೆ ಮೋದಿ ವಿರುದ್ಧ ವಿಪಕ್ಷಗಳ ನಾಯಕರು ಘೋಷಣೆ ಕೂಗಿದ್ರು. ಅದರಲ್ಲೂ ರಾಹುಲ್ ಗಾಂಧಿ ಎದ್ದು ನಿಂತು ಕಿರುಚುತ್ತಿದ್ದನ್ನು ಕಂಡ ಸ್ಪೀಕರ್ ಓಂ ಬಿರ್ಲಾ ರಾಹುಲ್ ಗಾಂಧಿಗೆ ಖಡಕ್ ವಾರ್ನಿಂಗ್ ನೀಡಿದರು. ಶಾಂತವಾಗಿ ಮೊದಲು ಭಾಷಣ ಕೇಳಿ, ಏನು ಹೇಳ್ತಾರೆ ಅಂತ ಕೇಳಿಸಿಕೊಳ್ಳಿ. ಹೀಗೆ ಮಾಡಿದ್ರೆ ಸಹಿಸೋಕೆ ಆಗಿಲ್ಲ ಎಂದು ವಾರ್ನಿಂಗ್ ಕೊಟ್ರು. ಇನ್ನೂ ಸ್ಪೀಕರ್ ಹೀಗೆ ಹೇಳುತ್ತಿದ್ದಂತೆ ರಾಹುಲ್ ಗಾಂಧಿ ಸೈಲೆಂಟ್ ಆದರು. ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾತಿನ ಮೂಲಕವೇ ಇಂದು ಸಖತ್ ಕೌಂಟರ್ ಕೊಟ್ಟಿದ್ದಾರೆ.ಹಿಂದೂಗಳ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ…
ಜುಲೈ 4 ರಂದು ದೇಶಾದ್ಯಂತ ಶಾಲಾ–ಕಾಲೇಜು ಎಂಟು ಬೇಡಿಕೆಗಳ ಈಡೇರಿಕೆ ಸಲುವಾಗಿ ಬಂದ್ ಗೆ ಕರೆ ನೀಡಿವೆ. ಕೇಂದ್ರ ಕಾರ್ಯಕಾರಿ ಸಮಿತಿಯು ಜುಲೈ 4 ರಂದು ರಾಷ್ಟ್ರವ್ಯಾಪಿ ಬಂದ್ ಗೆ ಕರೆ ನೀಡಿದೆ. ದೇಶದಲ್ಲಿ ಶಿಕ್ಷಣ ವ್ಯವಸ್ಥೆಯ ಮೇಲಿನ ದಾಳಿಯನ್ನು ವಿರೋಧಿಸಿ ಎಸ್ ಎಫ್ ಐ ಕೇಂದ್ರ ಕಾರ್ಯಕಾರಿ ಸಮಿತಿಯು ಜುಲೈ 4 ರಂದು ರಾಷ್ಟ್ರವ್ಯಾಪಿ ಬಂದ್ ಗೆ ಕರೆ ನೀಡಿದೆ. ವಿದ್ಯಾರ್ಥಿ ಸಂಘಟನೆಗಳ ಮುಖಂಡರು ವಿದ್ಯಾರ್ಥಿ ಲೋಕಂ ಬಂದ್ ನಲ್ಲಿ ಭಾಗವಹಿಸಿ, ತರಗತಿ ಬಹಿಷ್ಕರಿಸಿ, ರ್ಯಾಲಿ ಮತ್ತು ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ. ಎಂಟು ಬೇಡಿಕೆಗಳ ಮೇಲೆ ಈ ಬಂದ್ ನಡೆಯಲಿದ್ದು, ಎನ್ ಟಿಎ ಪದ್ಧತಿಯನ್ನು ರದ್ದುಪಡಿಸಬೇಕು ಮತ್ತು ನೀಟ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದೂ ಆಗ್ರಹಿಸಿದ್ದಾರೆ. ಇದಲ್ಲದೆ, ವಿಶ್ವವಿದ್ಯಾನಿಲಯಗಳು, ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಸಂಶೋಧನಾ ಸಂಸ್ಥೆಗಳಲ್ಲಿ ಪಿಎಚ್ ಡಿ ಪ್ರವೇಶಕ್ಕಾಗಿ ಇತ್ತೀಚೆಗೆ ಅನುಮೋದಿಸಲಾದ ಕಡ್ಡಾಯ…
IRCTC ಪ್ರವಾಸೋದ್ಯಮವು ವಿವಿಧ ನಗರಗಳಿಂದ ತಿರುಪತಿಗೆ ವಿಶೇಷ ಪ್ರವಾಸ ಪ್ಯಾಕೇಜ್‌ಗಳನ್ನು ನೀಡಿದೆ. IRCTC ತಿರುಪತಿ ಪ್ರವಾಸದ ಪ್ಯಾಕೇಜ್ ಮೂರು ವಿಭಾಗಗಳಲ್ಲಿ ಲಭ್ಯವಿದೆ. ಟ್ರಿಪಲ್ ಆಕ್ಯುಪೆನ್ಸಿ ಬೆಲೆ ರೂ.18,960 ಆಗಿದ್ದರೆ ಡಬಲ್ ಆಕ್ಯುಪೆನ್ಸಿ ಬೆಲೆ ರೂ.19,155 ಆಗಿದೆ. ಒಂದೇ ಆಕ್ಯುಪೆನ್ಸಿ ಬೆಲೆ ರೂ.22,525 ಆಗಿದೆ. ಪ್ರವಾಸದ ಪ್ಯಾಕೇಜ್ ವಿಮಾನ ಟಿಕೆಟ್‌ಗಳು, ಹೋಟೆಲ್ ವಸತಿ, ಉಪಹಾರ, ರಾತ್ರಿಯ ಊಟ, ಎಸಿ ವಾಹನದಲ್ಲಿ ದೃಶ್ಯವೀಕ್ಷಣೆ, ತಿರುಮಲಕ್ಕೆ ವಿಶೇಷ ಪ್ರವೇಶ ಭೇಟಿ, ಪ್ರಯಾಣ ವಿಮೆಯನ್ನು ಒಳಗೊಂಡಿದೆ. ವಿಶಾಖಪಟ್ಟಣಂನಿಂದ ತಿರುಪತಿಗೆ ವಿಮಾನ ಪ್ರವಾಸ ಪ್ಯಾಕೇಜ್ ಅನ್ನು ಘೋಷಿಸಲಾಗಿದೆ. ಜುಲೈ 6ರಿಂದ ಈ ಪ್ರವಾಸ ಆರಂಭವಾಗಲಿದೆ. ಇದು 2 ರಾತ್ರಿ, 3 ದಿನಗಳ ಪ್ರವಾಸ ಪ್ಯಾಕೇಜ್ ಇದಾಗಿದೆ. ಈ ಟೂರ್ ಪ್ಯಾಕೇಜ್ ಬುಕ್ ಮಾಡಿದ ಭಕ್ತರು ವಿಶೇಷ ಪ್ರವೇಶ ದರ್ಶನದ ಮೂಲಕ ತಿರುಮಲದಲ್ಲಿರುವ ಶ್ರೀವರಿ ದರ್ಶನ ಪಡೆಯಬಹುದು. ತಿರುಚನೂರು, ಶ್ರೀನಿವಾಸ ಮಂಗಪುರಂ, ಶ್ರೀಕಾಳಹಸ್ತಿ ಮತ್ತು ಕಾಣಿಪಾಕಂ ದೇವಸ್ಥಾನಗಳಿಗೂ ಭೇಟಿ ನೀಡಬಹುದು. IRCTC ತಿರುಪತಿ ಪ್ರವಾಸದ ಮೊದಲ ದಿನ ವಿಶಾಖಪಟ್ಟಣಂನಿಂದ ಪ್ರಾರಂಭವಾಗುತ್ತದೆ.…
ತುಮಕೂರು: ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗುವ ಬಿಪಿಎಲ್ ಹೊಂದಿರುವಂತಹ ರೋಗಿಗಳಿಂದ ಯಾವುದೇ ರೀತಿಯ ಹಣ ಪಡೆಯದೆ ಉಚಿತ ಚಿಕಿತ್ಸೆ ನೀಡಬೇಕು ಎನ್ನುವ ಸ್ಪಷ್ಟ ಆದೇಶವಿದ್ದರೂ, ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಯೊಬ್ಬರಿಂದ ಚಿಕಿತ್ಸೆಗಾಗಿ ಹಣ ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಹಂದ್ರಾಳ್ ನಾಗಭೂಷಣ್ ಮಾಹಿತಿ ನೀಡಿದ್ದಾರೆ. ಇತ್ತೀಚಿಗೆ ತುಮಕೂರು ಜಿಲ್ಲಾಸ್ಪತ್ರೆಗೆ ಕೊರಟಗೆರೆ ತಾಲ್ಲೂಕು ಹೊಳವನಹಳ್ಳಿ ಹೋಬಳಿ, ಹೊಳವನಹಳ್ಳಿ ಗ್ರಾಮದ ಓಬಳನರಸಯ್ಯ ಎಂಬುವರು ಸುಮಾರು ಇಪ್ಪತ್ತು ದಿನಗಳ ಹಿಂದೆ ಮೂಳೆ ಮುರಿತ ಚಿಕಿತ್ಸೆಗೆ ದಾಖಲಾಗುತ್ತಾರೆ. ಮೂಳೆ ಮುರಿತದ ಆಪರೇಷನ್ ಮಾಡಿಸಲು ಮೂಳೆ ವೈದ್ಯರಾದ ಡಾ.ಚಂದನ್ ಎಂಬುವರು ನಿಯಮಬಾಹಿರವಾಗಿ ಖಾಸಗಿ ವ್ಯಕ್ತಿಯೊಬ್ಬನಿಂದ ಸಾಮಗ್ರಿ ತರಿಸಿ ಬಡ ರೋಗಿಗೆ 10,500/ ಸಾವಿರ ಹಣ ನೀಡಲು ಒತ್ತಾಯಿಸಿದ್ದು, ಈಗಾಗಲೇ ಎರಡು ಸಾವಿರ ರೂಪಾಯಿಗಳನ್ನು ಫೋನ್ ಪೇ ಮೂಲಕ ಪಡೆದಿದ್ದಾರೆ. ಇದು ಆರೋಗ್ಯ ಇಲಾಖೆ,ಆರೋಗ್ಯ ಸಚಿವರ ಆದೇಶಗಳನ್ನು ಉಲ್ಲಂಘಿಸಿದಂತಾಗಿದೆ ಎಂದು ಅವರು ಹೇಳಿದ್ದಾರೆ. ಈ ವಿಷಯದಲ್ಲಿ ಖಾಸಗಿ ವ್ಯಕ್ತಿಯಿಂದ ಉಪಕರಣ ಸಾಮಗ್ರಿ ತರಿಸಿಕೊಂಡಿರುವುದನ್ನು ತುಮಕೂರಿನ ಜಿಲ್ಲಾಸ್ಪತ್ರೆಯ…
ಗಣೇಶ್ ಮತ್ತು ರಮೇಶ್ ಅರವಿಂದ್ ಮೊದಲ ಬಾರಿ ಒಟ್ಟಿಗೆ ಸಿನಿಮಾ ಒಂದರಲ್ಲಿ ನಟಿಸಲಿದ್ದಾರೆ. ಈ ಇಬ್ಬರು ನಾಯಕರನ್ನು ಒಟ್ಟಿಗೆ ಸೇರಿಸಿದ್ದು ನಿರ್ದೇಶಕ ವಿಖ್ಯಾತ್ ಎ.ಆರ್., ಸಿನಿಮಾವನ್ನು ಸತ್ಯ ರಾಯಲ ನಿರ್ಮಾಣ ಮಾಡಲಿದ್ದಾರೆ. ನಿರ್ದೇಶಕ ವಿಖ್ಯಾತ್ ಎ.ಆರ್., ಮೊದಲ ಬಾರಿಗೆ ಗಣೇಶ್ ಹಾಗೂ ರಮೇಶ್ ಅವರನ್ನು ಒಟ್ಟಿಗೆ ತೆರೆಗೆ ತರುತ್ತಿದ್ದಾರೆ. ಇಬ್ಬರ ಇಮೇಜಿಗೂ ಒಪ್ಪಿಗೆ ಆಗುವ ಕತೆಯೊಂದನ್ನು ನಿರ್ದೇಶಕ ವಿಖ್ಯಾತ್ ತಯಾರಿಸಿಕೊಂಡಿದ್ದು, ಸಿನಿಮಾ ಮಾಡುತ್ತಿದ್ದಾರೆ. ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ. ಸಿನಿಮಾದ ಹೆಸರು ಮೊದಲ ಲುಕ್ ಆಗಸ್ಟ್ 16ಕ್ಕೆ ತೆರೆಗೆ ಬರಲಿದೆ. ಸಿನಿಮಾದ ಘೋಷಣೆಗಾಗಿ ಪೋಸ್ಟರ್ ಒಂದನ್ನು ಇದೀಗ ಬಿಡುಗಡೆ ಮಾಡಿದ್ದು, ಪೋಸ್ಟರ್ನಲ್ಲಿ ರಮೇಶ್ ಹಾಗೂ ಗಣೇಶ್ರ ಹಳೆಯ ಚಿತ್ರಗಳನ್ನು ಬಳಸಿಕೊಳ್ಳಲಾಗಿದೆ. ಕಾಗದ ಪತ್ರದ ಮೇಲೆ ಸಿನಿಮಾದ ಘೋಷಣೆ ಮಾಡಲಾಗಿದೆ. ಕಾಗದಕ್ಕೆ 19 ಫೆಬ್ರವರಿ 46ರ ವರ್ಷದ ಸೀಲ್ ಇದೆ. ಶಾಂಘಾಯ್ ದೇಶದ ಹೆಸರು ಸಹ ಸೀಲ್ ಮೇಲಿದೆ. ಸೀಲ್ ನಲ್ಲಿ ವಿಮಾನದ ಚಿತ್ರವೂ ಇದೆ. ಇದೆಲ್ಲವೂ ಈ ಸಿನಿಮಾ 40ರ ದಶಕದಲ್ಲಿ ನಡೆಯುವ…